Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಗಣಿ ಹಗರಣ ಪ್ರಕರಣದ ತನಿಖೆ ವಿಚಾರವಾಗಿ ನನಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಎಡಿಜಿಪಿ ಚಂದ್ರಶೇಖರ್ ಅವರು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನಿನ್ನೆ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್‍ಡಿ ಕುಮಾರಸ್ವಾಮಿ, ನಿಖಿಲ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ಹೊರಡಿಸಿದೆ. ಈ ಕುರಿತು ಕುಮಾರಸ್ವಾಮಿ ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ಈ ಕುರಿತಂತೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಯ ವೇಳೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ ನೀಡಿದೆ. ಪೊಲೀಸರನ್ನು ಕಳಿಸಿ ಬಂಧಿಸಲು ಯತ್ನಿಸುತ್ತಿದ್ದಾರೆ. 10 ವರ್ಷದ ಹಿಂದಿನ ನಿರೀಕ್ಷಣಾ ಜಾಮೀನು ರದ್ದು ಪಡಿಸಲು ಯತ್ನಿಸುತ್ತಿದ್ದಾರೆ ಎಂದು ಎಚ್ ಡಿ ಕುಮಾರಸ್ವಾಮಿ ಪರ ಹಿರಿಯ ವಕೀಲ ಹಶ್ಮತ್ ಪಾಷಾ ವಾದ ಮಂಡಿಸಿದರು. ಎಫ್ಐಆರ್…
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಮೈಸೂರಿನಲ್ಲಿರುವ ಲೋಕಾಯುಕ್ತ ಕಚೇರಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಸತತ 2 ಗಂಟೆಗಳ ಕಾಲ ಲೋಕಾಯುಕ್ತ ವಿಚಾರಣೆಯನ್ನು ಎದುರಿಸಿದರು. ಇದೀಗ ಲೋಕಾಯುಕ್ತ ಎಸ್ಪಿ ಆಗಿರುವ ಉದೇಶ್ಶ್ ವಿರುದ್ಧವೇ ಸ್ನೇಹಮಯಿ ಕೃಷ್ಣ ಅವರು ದೂರು ಸಲ್ಲಿಸಿದ್ದಾರೆ. ಹೌದು ಸ್ನೇಹಮಯಿ ಕೃಷ್ಣ ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ್ ಕರ್ತವ್ಯಲೋಪ ಎಸಗಿದ್ದಾರೆ ಎಚ್ಚರಿಕೆ ನೀಡಿ ಎಂದು ಲೋಕಾಯುಕ್ತ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಿಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ದೂರಿನಲ್ಲಿ ಪ್ರಕರಣದ A1 ಆರೋಪಿಯ ವಿಚಾರಣೆ ನಡೆಸಬೇಕಿತ್ತು. ಆದರೆ ಅವರನ್ನು ಬಿಟ್ಟು A2, A3 ಹಾಗೂ A4 ವಿಚಾರಣೆ ನಡೆಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಅಲ್ಲದೇ ಮಹಜರಿನಲ್ಲಿ ಲೋಪ, ದಾಖಲೆ ಅವರ ಬಳಿಯೇ ಇಟ್ಟುಕೊಳ್ಳಬೇಕಿತ್ತು. ಆದರೆ ಅವರ ಬಳಿ ಇಟ್ಟುಕೊಳ್ಳದೇ ಕರ್ತವ್ಯಲೋಪವೆಸಗಿದ್ದಾರೆ. ದಾಖಲೆ ಪತ್ರಕ್ಕೆ ವೈಟ್ನರ್ ಹಾಕಿದ ಸಂಬಂಧ ವಿಚಾರಣೆ ನಡೆಸಿಲ್ಲ. ಲೈಟ್ ಬಿಟ್ಟವರನ್ನು ವಿಚಾರಣೆ ಮಾಡಿಲ್ಲ, ಈ ಬಗ್ಗೆ ತನಿಖೆ ನಡೆಸಿಲ್ಲ ಎಂದಿದ್ದಾರೆ. ಸಿಬಿಐಗೆ…
ಗದಗ : ತಂದೆಯೊಬ್ಬ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬೇಸತ್ತು ತನ್ನ ಮೂರು ಮಕ್ಕಳೊಂಡಿಗೆ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿ ನಡೆದಿತ್ತು. ಈ ಒಂದು ಘಟನೆಗೆ ಸಂಬಂಧಿಸಿದಂತೆ ಇದೀಗ ಅಗ್ನಿಶಾಮಕದಳ ಸಿಬ್ಬಂದಿಗಳು ಓರ್ವ ಗಂಡು ಮಗುವಿನ ಶವವನ್ನು ಹೊರ ತೆಗೆದಿದ್ದಾರೆ. ಹೌದು ಮುಂಡರಗಿ ತಾಲೂಕಿನ ಮಕ್ತುಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ ಮೊದಲು ಮೂವರು ಮಕ್ಕಳನ್ನು ನದಿಗೆ ಎಸೆದು ಬಳಿಕ ತಾನೂ ಸಹ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವೇದಾಂತ (3) ಪವನ (4) ಹಾಗೂ ಧನ್ಯಾ (6) ನದಿ ಪಾಲಾದ ಮಕ್ಕಳು ಎಂದು ಗುರುತಿಸಲಾಗಿದೆ. ಇದೀಗ ಓರ್ವ ಗಂಡು ಮಗುವಿನ ಶವ ಪತ್ತೆ ಹಚ್ಚಿ ಸಿಬ್ಬಂದಿ ಹೊರಗಡೆ ತೆಗೆದಿದ್ದಾರೆ. ಮಗುವಿನ ಶವ ಪತ್ತೆ ಹಚ್ಚಿರುವ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಮೀನುಗಾರರು, ಮತ್ತೆ ಇಬ್ಬರು ಮಕ್ಕಳು ಹಾಗೂ ತಂದೆಯ ಶವಕ್ಕಾಗಿ ಶೋಧ ಕಾರ್ಯ ಇದೀಗ ಮುಂದುವರೆದಿದೆ. ನಿನ್ನೆ ಮೂವರು ಮಕ್ಕಳ…
BREAKING : ಬೆಂಗಳೂರಲ್ಲಿ ‘ಆನ್ಲೈನ್ ರಮ್ಮಿ’ ಆಡಿ 5 ಲಕ್ಷ್ಮ ಹಣ ಕಳೆದುಕೊಂಡ ವ್ಯಕ್ತಿ : ಮನನೊಂದು ಆತ್ಮಹತ್ಯೆಗೆ ಶರಣು!
ಬೆಂಗಳೂರು : ಇತ್ತೀಚಿಗೆ ಜನರು ಕಷ್ಟಪಟ್ಟು ದುಡಿಯದೆ, ಅಡ್ಡ ದಾರಿಯಲ್ಲಿ ಬಹಳ ಬೇಗ ಶ್ರೀಮಂತರಾಗಲು ಬಯಸುತ್ತಿದ್ದಾರೆ. ಹಾಗಾಗಿ ಬಹಳಷ್ಟು ಜನರು ಆನ್ಲೈನ್ ಗೇಮ್ ಗೀಳಿಗೆ ಒಳಗಾಗಿ ಬೀದಿಗೆ ಬಂದದ್ದು ಅಲ್ಲದೆ, ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇದೀಗ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬರು ಆನ್ಲೈನ್ ರಮ್ಮಿ ಗೇಮ್ ಆಡಿ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅಡೆಪೇಟೆಯಲ್ಲಿ ಲಾರಿ ಮಾಲೀಕ ಚಂದ್ರಶೇಖರ್ (45) ನೇಣಿಗೆ ಶರಣಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅಡೆಪೇಟೆಯಲ್ಲಿ ಈ ಘಟನೆ ನಡೆದಿದೆ.ಮನೆಯಲ್ಲಿ ಪತ್ನಿ ಸೀರೆ ಬಳಸಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಚಂದ್ರಶೇಖರ್ ಅವರು ಆನ್ಲೈನ್ ಗೇಮ್ ಅಲ್ಲಿ 5 ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡಿದ್ದರು.ಘಟನೆ ಕುರಿತಂತೆ ಇದೀಗ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬಳ್ಳಾರಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು. ಈ ವಿಚಾರವಾಗಿ ಬಳ್ಳಾರಿಯಲ್ಲಿ ವಿಪಕ್ಷ ನಾಯಕ ಆರ್ ಅಶೋಕ್, ಸಿದ್ದರಾಮಯ್ಯ ಅವರಿಗೆ 14 ಸೈಟ್ ಅಷ್ಟೇ ಅಲ್ಲ 3000 ಕೋಟಿ ಕೂಡ ಲೆಕ್ಕಕ್ಕೆ ಇಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸರಣಿ ಆತ್ಮಹತ್ಯೆ ಭಾಗ್ಯ ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಒಂದುವರೆ ವರ್ಷದಿಂದ ಕಾಂಗ್ರೆಸ್ ಸರ್ಕಾರ ಹಗರಣದಲ್ಲಿ ಮುಳುಗಿದೆ. ಸಿಎಂ ಸಿದ್ದರಾಮಯ್ಯ ನಾನು ತೆರೆದ ಪುಸ್ತಕ ಅಂತ ಹೇಳುತ್ತಾರೆ. ಆದರೆ ತೆರೆದು ನೋಡಿದರೆ ಎಲ್ಲಾ ಕಪ್ಪು ಇದೆ. ಸಿಎಂ ಸಿದ್ದರಾಮಯ್ಯಗೆ 14 ಸೈಟ್ಗಳು ಯಾವ ಲೆಕ್ಕನೂ ಇಲ್ಲ. 3,000 ಕೋಟಿ ಹಣ ಅಂದರೆ ಸಿಎಂ ಸಿದ್ದರಾಮಯ್ಯಗೆ ಲೆಕ್ಕಾನೆ ಇಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣ ಲೂಟಿ ಮಾಡಿದ್ದಾರೆ. ಎಸ್ ಟಿ ಸಮುದಾಯದ ಅಭಿವೃದ್ಧಿಗೆ ಇದ್ದಂತಹ ಹಣವನ್ನು ಲೂಟಿ ಮಾಡಿದ್ದಾರೆ 187 ಕೋಟಿ ಅಧಿಕ ಹಣ ಲೂಟಿಯಾಗಿದೆ ಅಂದರೆ 87 ಕೋಟಿ ಅಂತ ಹೇಳಿದರು…
ರಾಮನಗರ : ಚನ್ನಪಟ್ಟಣ ಚುನಾವಣೆಯ ತೀವ್ರ ರಂಗೇರಿದ್ದು ಇದೀಗ ಪರಸ್ಪರ ನಾಯಕರುಗಳ ವಾಕ್ಸಮರ ತಾರಕಕ್ಕೆ ಏರಿದೆ. ಇಂದು ಮಾಜಿ ಸಂಸದ ಡಿಕೆ ಸುರೇಶ್ ಅವರು ಈ ಹಿಂದೆ ಎಚ್ ಡಿ ಕುಮಾರಸ್ವಾಮಿ ಅವರು ಮಾತನಾಡಿರುವಂತಹ ಆಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾರೆ. ಈ ಕುರಿತಾಗಿ ಎಚ್ ಡಿ ಕುಮಾರಸ್ವಾಮಿ ಇದು ನಾನು ವಿಧಾನಸೌಧದಲ್ಲಿ ಮಾತನಾಡಿರುವ ಹಳೆಯ ವಿಡಿಯೋ ಎಂದು ಸ್ಪಷ್ಟನೆ ನೀಡಿದ್ದಾರೆ. ನಾನು ವಿಧಾನಸಭೆಯಲ್ಲಿ ಮಾತನಾಡಿದ್ದು, ಒಂದು ವಾರದಿಂದ ಅದನ್ನು ಕಟಿಂಗ್ ಮಾಡಿ ಹಂಚುತ್ತಿದ್ದಾರೆ. ಅದು ನನ್ನ ಹೇಳಿಕೆಯಲ್ಲ. ವಾಸ್ತವ ಪರಿಸ್ಥಿತಿ ಬಗ್ಗೆ ಮಾತನಾಡಿದ್ದೆ. ಪಕ್ಕದ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಚಾರವಾಗಿ ಹೇಳಿದ್ದೆ. ಇಸ್ಪೀಟ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುವವರು 5 ವರ್ಷ ಅವರು ಕೆಲಸ ಮಾಡಲಿ. ನಾನು ಎರಡು ದಿನದಲ್ಲಿ ಬದಲಾವಣೆ ಮಾಡುತ್ತೇನೆ ಅಂದ ವಿಚಾರದ ಬಗ್ಗೆ ಹೇಳಿದ್ದೆ. ಅದನ್ನು ಮದ್ದೂರು ವಿಷಯಕ್ಕೆ ಹೇಳಿದ್ದು ಎಂದು ಸ್ಪಷ್ಟಪಡಿಸಿದರು. ಹಾಸನದಲ್ಲೂ ಇದಕ್ಕಿಂತ ಕೆಟ್ಟದಾಗಿ ಮಾಡಿದರು. ನನ್ನ ಮೇಲೆ ಹೇಳಲು ಏನು ಇಲ್ಲವಲ್ಲ…
ಹುಬ್ಬಳ್ಳಿ : ಇದೇ ನವೆಂಬರ್ 13ರಂದು ರಾಜ್ಯದ ಮೂರು ಕ್ಷೇತ್ರಗಳಾದ ಚನ್ನಪಟ್ಟಣ ಸಂಡೂರು ಹಾಗೂ ಶಿಗ್ಗಾವಿಯಲ್ಲಿ ಉಪಚುನಾವಣೆ ನಡೆಯಲಿದ್ದು, ಈ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಉಪಚುನಾವಣೆ ನಡೆಯುವ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲುತ್ತದೆ. ಈಗಾಗಲೇ ಸಂಡೂರು ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದೇನೆ. ಮೂರೂ ಕ್ಷೇತ್ರಗಳಲ್ಲೂ ಒಳ್ಳೆಯ ವಾತಾವರಣ ಇದೆ.ಶಿಗ್ಗಾವಿಯಲ್ಲಿ ಕಾರ್ಯಕರ್ತರ ಜೊತೆಗೆ ನಾನು ಚರ್ಚೆ ಮಾಡಿದ್ದೇನೆ.ಬಸವರಾಜ್ ಬೊಮ್ಮಾಯಿ ವಿರುದ್ಧ ಜನಾಕ್ರೋಶ ಇದೆ ಅಂತೆ ಕಾರ್ಯಕರ್ತರಿಗೆ ಟಿಕೆಟ್ ಕೊಡುತ್ತೇನೆ ಎಂದು ಕೊಟ್ಟಿಲ್ಲವಂತೆ ಹೀಗಾಗಿ ನಾವೇ ಶಿಗ್ಗಾವಿ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಹಲೋ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಎಸ್ ಡಿ ಎ ನೌಕರ ಸೂಸೈಡ್ ಮಾಡಿಕೊಂಡಿರುವ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಚಿವರ ಆಪ್ತರಾಗಲಿ ಯಾರೇ ಆಗಲಿ ನಿರ್ದಾಕ್ಷಿಣ್ಯ ಕ್ರಮವಾಗುತ್ತದೆ. ಚುನಾವಣಾ ಸಮಯದಲ್ಲಿ ಈ ರೀತಿಯ ಆರೋಪ ಇರುವುದೇ. ಕೆಲವರು ಚುನಾವಣಾ ಸಂದರ್ಭದಲ್ಲಿ ಇಂತಹದನ್ನು…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹೈಕೋರ್ಟಿಗೆ ನಟ ದರ್ಶನ್ ಗೆ ನೀಡಬೇಕಾದಂತಹ ಚಿಕಿತ್ಸೆ ವರದಿ ಸಲ್ಲಿಕೆಯಾಗಿದೆ. ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟಿಗೆ ನಟ ದರ್ಶನ್ ಚಿಕಿತ್ಸೆ ಸಂಪೂರ್ಣ ವರದಿ ಇಂದು ಸಲ್ಲಿಸಲಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಇದ್ದರು. ಅವರಿಗೆ ತೀವ್ರ ಬೆನ್ನು ನೋವಿನ ಸಮಸ್ಯೆ ಹಿನ್ನೆಲೆಯಲ್ಲಿ ಇದೇ ಕಾರಣದಿಂದ ಹೈಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ನೀಡಿತ್ತು. ಇದೀಗ ಜೈಲಿನಿಂದ ಬಿಡುಗಡೆಯಾದ ಬಳಿಕ ಒಂದು ವಾರದ ಒಳಗೆ ವೈದ್ಯಕೀಯ ವರದಿ ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿತ್ತು.ಇದೀಗ ಇಂದು ನಟ ದರ್ಶನ್ ಅವರ ವೈದ್ಯಕೀಯ ವರದಿ ಸಲ್ಲಿಕೆಯಾಗಿದೆ. ಬೆಂಗಳೂರು ನಗರದ ಕೆಂಗೇರಿ ಬಳಿ ಇರುವ ಬಿಜಿಎಸ್ ಆಸ್ಪತ್ರೆಗೆ ನಟ ದರ್ಶನ್ ಕಳೆದ ಆರು ದಿನಗಳ ಹಿಂದೆ ದಾಖಲಾಗಿದ್ದಾರೆ. ಈ ವೇಳೆ ನಟ ದರ್ಶನ್ ಅವರಿಗೆ ಎಂ ಆರ್ ಐ ಸ್ಕ್ಯಾನ್, ಸಿಟಿ ಸ್ಕ್ಯಾನ್ ಹಾಗೂ ಬ್ಲಡ್ ಟೆಸ್ಟ್ ಸೇರಿದಂತೆ ಹಲವು ಪರೀಕ್ಷೆಗಳನ್ನು ವೈದ್ಯರು…
ಬೆಂಗಳೂರು : ಅಪಾರ್ಟ್ಮೆಂಟಿನ ನಾಲ್ಕನೇ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕನೊಬ್ಬ ಆಯತಪ್ಪಿ ಬಿದ್ದು ಧಾರವಾಡವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಯಲಹಂಕದ ಬಳಿ ಇರುವ ಅಪಾರ್ಟ್ಮೆಂಟ್ ನಲ್ಲಿ ಈ ಒಂದು ಘಟನೆ ನಡೆದಿದೆ. ನಿನ್ನೆ ಅಪಾರ್ಟ್ಮೆಂಟ್ನ 4ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಯಲಹಂಕದ ಅಪಾರ್ಟ್ಮೆಂಟ್ ನಲ್ಲಿ ನಿನ್ನೆ ಈ ಒಂದು ದುರ್ಘಟನೆ ಸಂಭವಿಸಿದೆ. ಆಯತಪ್ಪಿ ಬಿದ್ದು ಬಿಹಾರ ಮೂಲದ ಕಾರ್ಮಿಕ ಅಬಿದುಲ್ಲಾ ಎಂದು ಹೇಳಲಾಗುತ್ತಿದೆ. ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕಟ್ಟಡದ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಶಂಕಿಸಲಾಗಿದೆ. ಕಾರ್ಮಿಕನ ಕುಟುಂಬಸ್ಥರಿಗೆ ಯಲಹಂಕ ಪೊಲೀಸರು ಇದೀಗ ಮಾಹಿತಿ ನೀಡಿದ್ದಾರೆ.
BREAKING : ನಾಪತ್ತೆಯಾಗಿದ್ದ ‘ಮುಡಾ’ದ ಮಾಜಿ ಆಯುಕ್ತ ದಿನೇಶ್ ಕುಮಾರ್ ದಿಢೀರ್ ಪ್ರತ್ಯಕ್ಷ : ‘ED’ ವಿಚಾರಣೆಗೆ ಹಾಜರು!
ಬೆಂಗಳೂರು : ಮುಡಾದಲ್ಲಿ ನಡೆದಂತಹ ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಾಪತ್ತೆಯಾಗಿದ್ದ, ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಎಂದು ಬೆಂಗಳೂರಿನಲ್ಲಿ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಕಳೆದ ಅಕ್ಟೋಬರ್ 28ರಂದು ಇಡಿ ಅಧಿಕಾರಿಗಳು ಮುಡಾ ಮಾರಿ ಅಧ್ಯಕ್ಷ ದಿನೇಶ್ ಕುಮಾರ್ ನಿವಾಸದ ಮೇಲೆ ದಾಳಿ ಮಾಡಿದರು. ವಿಡಿಯೋ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎನ್ನುವ ವಿಚಾರ ತೆಳೆಯದು ದಿನೇಶ್ ಕುಮಾರ್ ವಾಕಿಂಗ್ ಹೋಗುವ ಸ್ಥಳದಿಂದಲೇ ನಾಪತ್ತೆಯಾಗಿದ್ದರು. ದಿನೇಶ್ ಕುಮಾರ್ ನಾಪತ್ತೆ ಆಗಿರುವ ವಿಚಾರ ತಿಳಿದು ಇಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗದೆ ಹೋದರೆ ವಾರಂಟ್ ಜಾರಿ ಮಾಡಿ ವಶಕ್ಕೆ ಪಡೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೋಟಿಸ್ ನೀಡಿದ್ದರು. ಇದೀಗ ದಿನೇಶ್ ಕುಮಾರ್ ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.













