Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚಿಗೆ ಮಹಿಳೆಯರಿಗೆ ಹಾಗೂ ಯುವತಿಯರಿಗೆ ಸುರಕ್ಷತೆ ಇಲ್ಲದಂತಹ ಆಗಿದೆ. ಎಲ್ಲೆಂದರಲ್ಲಿ ಮಹಿಳೆಯರ ಮೇಲೆ ಯುವತಿರ ಮೇಲೆ ದೌರ್ಜನ್ಯ ಕಿರುಕುಳ ನಡೆಯುತ್ತಲೇ ಇವೆ. ಇದೀಗ ಬೆಂಗಳೂರಿನಲ್ಲಿ ಉತ್ತರ ಭಾರತದ ಇವತಿಗೆ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಹೌದು ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿ ಈ ಒಂದು ಘಟನೆ ನಡೆದಿದ್ದು, ಬಿಟಿಎಂ ಲೇಔಟ್ ನಲ್ಲಿ ವಾಸವಾಗಿರುವ ಹಿಂದಿ ಭಾಷಿಕ ಯುವತಿ ರಸ್ತೆಯಲ್ಲಿ ಹೋಗುವಾಗ ವಿಡಿಯೋ ಮಾಡುವುದನ್ನು ನೋಡಿದ ಸೈಕಲ್ ಸವಾರ ಹುಡುಗನೊಬ್ಬ ಈ ಯುವತಿಯ ಎದೆಭಾಗವನ್ನು ಮುಟ್ಟಿ ಪರಾರಿ ಆಗಿದ್ದು, ಯುವತಿ ಕಣ್ಣೀರು ಹಾಕಿದ್ದಾಳೆ. ಯುವಕನಿಂದ ಕಿರುಕುಳಕ್ಕೆ ಒಳಗಾದ ಯುವತಿ ನೇಹಾ ಬಿಸ್ವಾಲ್. ಉತ್ತರ ಭಾರತದಿಂದ ಬಂದು ಬೆಂಗಳೂರಿನಲ್ಲಿ ವಾಸವಿದ್ದ ಈ ಯುವತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಾ, ತನಗೆ ಇಷ್ಟವಾದಂತಹ ಒಳ್ಳೆ ವಿಡಿಯೋಗಳನ್ನು ವ್ಲಾಗ್ ಮಾಡುತ್ತಾ, ಚೆನ್ನಾಗಿರುವ ವಿಡಿಯೋ ಹಂಚಿಕೊಳ್ಳುತ್ತಿದ್ದಳು. ಅಲ್ಲದೆ ಇವತ್ತಿಗೆ ಇನ್ಸ್ಟಾಗ್ರಾಮ್ ನಲ್ಲಿ ಲಕ್ಷಾಂತರ ಜನ ಫಾಲೋವರ್ಸ್ ಕೂಡ ಇದ್ದಾರೆ. ಘಟನೆ ಕುರಿತು…

Read More

ರಾಮನಗರ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ 2 ಗಂಟೆ ವಿಚಾರಣೆ ಎದುರಿಸಿದ ಬಳಿಕ ಇದೀಗ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬೇವೂರಿನಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಾವು ಇನ್ನೂ ಮೂರುವರೆ ವರ್ಷ ಅಧಿಕಾರದಲ್ಲಿ ಇರುತ್ತೇವೆ ಎಂದು ತಿಳಿಸಿದರು. ಇದು ಹೊಸ ಸರ್ಕಾರ ರಚನೆ ಮಾಡುವ ಚುನಾವಣೆ ಅಲ್ಲ. ಯೋಗೇಶ್ವರ್ ಗೆದ್ದರೆ 136 ರಿಂದ 137 ಆಗುತ್ತೇವೆ. ನಾವು ಜನಪರ ಕಾರ್ಯಕ್ರಮ ಕೊಟ್ಟಿದ್ದೇವೆ. ನಮ್ಮನ್ನು ಗೆಲ್ಲಿಸಿದರೆ ನಮ್ಮ ಸರ್ಕಾರಕ್ಕೆ ಶಕ್ತಿ ಕೊಟ್ಟ ಹಾಗೆ ಆಗುತ್ತದೆ. ನಾವು ಇನ್ನೂ ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿ ಇರುತ್ತೇವೆ ಎಂದು ತಿಳಿಸಿದರು. ಬಿಜೆಪಿ ಜೆಡಿಎಸ್ ನವರು ಏನೆಲ್ಲಾ ನನ್ನ ಮೇಲೆ ಸುಳ್ಳು ಆರೋಪ ಮಾಡಿ ನನ್ನ ಮೇಲೆ ಮಸಿ ಬಳಿದು ನನ್ನನ್ನು ಅಧಿಕಾರದಿಂದ ತೆಗೆದುಹಾಕಿ ಮತ್ತೆ ಅವರು ಅಧಿಕಾರಕ್ಕೆ ಬರಬೇಕು ಎಂದು ಹವಣಿಸಿದರೆ ಅದು ಅವರ ಈ ದೃಷ್ಟ ಪ್ರಯತ್ನದಲ್ಲಿ ಯಶಸ್ಸು ಕಾಣಲು ಸಾಧ್ಯವಿಲ್ಲ. ಬಿಜೆಪಿಯವರು…

Read More

ಹುಬ್ಬಳ್ಳಿ : ಜೈಲಿನಲ್ಲಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿಯ ಸಹೋದರ ಎಂದು ಹೇಳಿಕೊಂಡ ವ್ಯಕ್ತಿಯಿಂದ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಕರೆ ಮತ್ತು 5 ಕೋಟಿ ರೂಪಾಯಿ ನೀಡುವಂತೆ ಒತ್ತಡ ಬಂದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಇದೀಗ ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿರುವ ಆರೋಪಿ ಕರ್ನಾಟಕದ ಹುಬ್ಬಳ್ಳಿಯಲ್ಲಿ ಇದ್ದಾನೆ ಎಂಬ ಮಾಹಿತಿ ಮೊಬೈಲ್ ಪೊಲೀಸರಿಗೆ ದೊರಕಿದೆ. ಹೌದು ಕರ್ನಾಟಕದ ಹುಬ್ಬಳ್ಳಿಯಲ್ಲಿ ಶಂಕಿತ ಆರೋಪಿಯ ಜಾಡು ಪತ್ತೆಯಾಗಿದೆ. ತಕ್ಷಣಕ್ಕೆ ಆತನನ್ನು ಬಂಧಿಸಿಲ್ಲವಾದರೂ, ಪೊಲೀಸ್ ತಂಡ ಹುಬ್ಬಳ್ಳಿಗೆ ತಲುಪಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಕಟಿಸಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಸಹೋದರ ಎಂದು ವ್ಯಕ್ತಿಯೋರ್ವ ಸಲ್ಮಾನ್​​ಗೆ ಬೆದರಿಕೆ ಹಾಕಿದ್ದ. ಮುಂಬೈ ಟ್ರಾಫಿಕ್ ಪೊಲೀಸ್ ಕಂಟ್ರೋಲ್ ರೂಂನ ಸಹಾಯವಾಣಿ ವಾಟ್ಸ್ಆ್ಯಪ್​ ಸಂಖ್ಯೆಗೆ ಸಂದೇಶ ಕಳುಹಿಸಲಾಗಿತ್ತು. 1998ರ ಕೃಷ್ಣಮೃಗ ಕಳ್ಳಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಮೆ ಯಾಚಿಸಬೇಕು ಎಂಬ ವಾಟ್ಸಪ್ ಸಂದೇಶ ಸಲ್ಮಾನ್ ಖಾನ್ ಅವರಿಗೆ ಬಂದಿತ್ತು. ವರ್ಲಿಯಲ್ಲಿರುವ ಮುಂಬೈ ಸಂಚಾರ…

Read More

ಬೆಳಗಾವಿ : ಕೊಳೆತ ಸ್ಥಿತಿಯಲ್ಲಿ ದಂಪತಿಗಳ ಶವ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ರಸ್ತೆಗೆ ಹೊಂದಿಕೊಂಡಿರುವ ತೋಟವೊಂದರಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಅಥಣಿ ಹೊರವಲಯದಲ್ಲಿರುವ ಮದಭಾವಿ ರಸ್ತೆ ಹೊಂದಿಕೊಂಡಂತಹ ಚೌವ್ಹಾಣ ಎನ್ನುವವರ ತೋಟದಲ್ಲಿ ನಾನಾ ಸಾಹೇಬ್ ಬಾಬು ಚೌವ್ಹಾಣ್ (58) ಮತ್ತು ಜಯಶ್ರೀ ನಾನಾ ಸಾಹೇಬ್ ಚೌವ್ಹಾಣ್ (50) ಮೃತಪಟ್ಟ ದಂಪತಿ ಎಂದು ತಿಳಿದುಬಂದಿದೆ. ಸುಮಾರು ಐದಾರು ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮನೆಯ ಸುತ್ತಲೂ ದುರ್ವಾಸನೆ ಬರುತ್ತಿದ್ದಂತೆ ಪಕ್ಕದ ಮನೆಯವರು ಅಥಣಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಂಪತಿಗಳನ್ನು ಕೊಲೆ ಮಾಡಿ ಬಿಸಾಕಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

Read More

ಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿಖಾಸಗಿ ಬಸ್ ಪಲ್ಟಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಇಬ್ಬರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಗಾಗಿ ಭಾರೀ ಅನಾಹುತ ಒಂದು ತಪ್ಪಿದೆ. ಈ ಒಂದು ಘಟನೆ ಬೆಂಗಳೂರಿನ ನೆಲಮಂಗಲದ ಬಳಿ ನಡೆದಿದೆ. ಇಂದು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಯಾಗಿದದೆ. ಅಪಘಾತ ಬಳಿಕ ಖಾಸಗಿ ಬಸ್ ನಲ್ಲಿದ್ದ ಇಬ್ಬರೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನೆಲಮಂಗಲದಿಂದ ಬಸ್ ತುಮಕೂರಿಗೆ ತೆರಳುತ್ತಿತ್ತು. ಈ ವೇಳೆ ಚಾಲಕರ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಈ ವೇಳೆ ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ.

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಗೆ ಬೆನ್ನು ನೋವಿನ ಸಮಸ್ಯೆ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಕಳೆದ 6 ದಿನಗಳ ಹಿಂದೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆ ಅವರಿಗೆ ಫಿಸಿಯೋಥೆರಫಿ ಮಾಡಬೇಕು ಎಂದು ವೈದ್ಯರು ತಿಳಿಸಿದ್ದರು. ಇದೀಗ ಈ ಒಂದು ವಿಷಯದಲ್ಲಿ ಬದಲಾಗಿದ್ದು, ಅವರಿಗೆ ಫಿಜಿಯೋಥೆರಫಿ ಬದಲು ಸರ್ಜರಿಯೆ ಬಹುತೇಕ ಫಿಕ್ಸ್ ಆಗಿದೆ ಹೌದು ಈಗಾಗಲೇ ದರ್ಶನ್ ಗೆ ಹಲವು ರೀತಿಯ ತಪಾಸಣೆ ಮಾಡಲಾಗಿದೆ. ಎಂಆರ್‌ಐ ಸ್ಕ್ಯಾನಿಂಗ್, ಸಿಟಿ ಸ್ಕ್ಯಾನಿಂಗ್ ಬ್ಲಡ್ ಟೆಸ್ಟ್ ಸೇರಿದಂತೆ ಅನೇಕ ಪರೀಕ್ಷೆಗಳಿಗೆ ನಟ ದರ್ಶನ್ ಒಳಪಟ್ಟಿದ್ದಾರೆ. ಪರೀಕ್ಷೆಯ ವೇಳೆ ದರ್ಶನ್ ಗೆ ಭಾರಿ ಸಮಸ್ಯೆ ಪತ್ತೆಯಾಗಿತ್ತು. ಆರೋಗ್ಯದ ದೃಷ್ಟಿಯಿಂದ ಇದೀಗ ಸರ್ಜರಿ ಮಾಡಲು ನಿರ್ಧಾರ ಮಾಡಲಾಗಿದೆ. ನಟ ದರ್ಶನ್ ಗೆ ಸರ್ಜಿರಿ ಬಹುತೇಕ ಫಿಕ್ಸ್ ಆದಂತೆ ಆಗಿದೆ. ಆಸ್ಪತ್ರೆಯಲ್ಲಿ ದರ್ಶನ್ ಚಿಕಿತ್ಸೆ ಪ್ಲ್ಯಾನ್ ಚೇಂಜ್ ಆಗಿದೆ. ಫಿಜಿಯೋಥೆರಪಿ ಬದಲಿಗೆ ಸರ್ಜರಿಗೆ ದರ್ಶನ್ ಮನಸ್ಸು ಮಾಡಿದ್ದಾರೆ. ಎರಡು ದಿನದಲ್ಲಿ…

Read More

ರಾಮನಗರ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ 2 ಗಂಟೆ ವಿಚಾರಣೆ ಎದುರಿಸಿದ್ದರು.ಈ ವೇಳೆ ನಗುಮುಖದಿಂದಲೇ ಸಿಎಂ ಸಿದ್ದರಾಮಯ್ಯ ಕಚೇರಿಯಿಂದ ಹೊರ ಬಂದಿದ್ದಾರೆ. ಬೆಳಿಗ್ಗೆ 10 ಲೋಕಾಯುಕ್ತ ಕಚೇರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ. ಸತತ 2 ಗಂಟೆಗಳ ಕಾಲ ವಿಚಾರಣೆ ಎದುರಿಸಿ ಮಧ್ಯಾಹ್ನ 12 ಗಂಟೆಗೆ ಲೋಕಾಯುಕ್ತ ಕಚೇರಿಯಿಂದ ವಾಪಸ್ ತೆರಳಿದ್ದಾರೆ. ಲೋಕಾಯುಕ್ತ ವಿಚಾರಣೆ ಎದುರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ನೇರವಾಗಿ ಚನ್ನಪಟ್ಟಣ ಕ್ಷೇತ್ರಕ್ಕೆ ತೆರಳಿದ್ದಾರೆ, ಚನ್ನಪಟ್ಟಣದ ಬೇಗೂರಿಗೆ ಆಗಮಿಸಿದಮದ್ದು, ಸಿಪಿ ಯೋಗೇಶ್ವರ್ ಪರ ಮತಯಾಚಿಸಲಿರುವ ಸಿಎಂ ಸಿದ್ದರಾಮಯ್ಯ, ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಿಪಿ ಯೋಗೇಶ್ವರ್ ಪರವಾಗಿ ಅವರು ಮತಯಾಚನೆ ಮಾಡಲಿದ್ದಾರೆ. ಲೋಕಾಯುಕ್ತ ಕಚೇರಿಯಲ್ಲಿ ಸತತವಾಗಿ 2 ಗಂಟೆಗಳ ಕಾಲ ಲೋಕಾಯುಕ್ತ ಅಧಿಕಾರಿಗಳು ಕೇಳಿದ ಪ್ರತಿಯೊಂದು ಪ್ರಶ್ನೆಗೂ ಸಿಎಂ ಸಿದ್ದರಾಮಯ್ಯ ಯಾವುದೇ ಭಯವಿಲ್ಲದೆ ಉತ್ತರಿಸಿದ್ದಾರೆ. ವಿಚಾರಣೆ ಅಂತ್ಯವಾದ ಬಳಿಕ ನಗುಮುಖದಿಂದಲೇ ಅವರು ಕಚೇರಿಯಿಂದ ಹೊರಗಡೆ ಆಗಮಿಸಿದ್ದಾರೆ. ನಂತರ ಅಲ್ಲಿಂದ ನೇರವಾಗಿ ರಾಮನಗರ ಜಿಲ್ಲೆಯ ಚನ್ನಪಟ್ಟಣಕ್ಕೆ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ 2 ಗಂಟೆ ವಿಚಾರಣೆ ಎದುರಿಸಿದ್ದರು.ಈ ವೇಳೆ ನಗುಮುಖದಿಂದಲೇ ಸಿಎಂ ಸಿದ್ದರಾಮಯ್ಯ ಕಚೇರಿಯಿಂದ ಹೊರ ಬಂದಿದ್ದಾರೆ. ಬೆಳಿಗ್ಗೆ 10 ಲೋಕಾಯುಕ್ತ ಕಚೇರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ. ಸತತ 2 ಗಂಟೆಗಳ ಕಾಲ ವಿಚಾರಣೆ ಎದುರಿಸಿ ಮಧ್ಯಾಹ್ನ 12 ಗಂಟೆಗೆ ಲೋಕಾಯುಕ್ತ ಕಚೇರಿಯಿಂದ ವಾಪಸ್ ತೆರಳಿದ್ದಾರೆ. ವಿಚಾರಣೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮತ್ತೆ ವಿಚಾರಣೆಗೆ ಬರಲು ಲೋಕಾಯುಕ್ತ ಅಧಿಕಾರಿಗಳು ಹೇಳಿಲ್ಲ.ಕಾನೂನು ಪ್ರಕಾರವೇ ನಿವೇಶನ ಪಡೆದಿದ್ದೇನೆ. ಬಿಜೆಪಿ, ಜೆಡಿಎಸ್​ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿವೆ. ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗೆ ಉತ್ತರಿಸಿದ್ದೇನೆ ಎಂದು ಇದೆ ವೇಳೆ ತಿಳಿಸಿದರು. ಇನ್ನು, ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಬಿಜೆಪಿಯವರು ಆಗ್ರಹಿಸುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯವರು ಯಾವುದಾದರೂ ಕೇಸ್​ ಸಿಬಿಐಗೆ ಕೊಟ್ಟಿದ್ದಾರಾ? ಲೋಕಾಯುಕ್ತ ಸ್ವತಂತ್ರವಾಗಿ ತನಿಖೆ ಮಾಡುತ್ತಿರುವ ಸಂಸ್ಥೆ. ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಲೋಕಾಯುಕ್ತ ಕಚೇರಿಗೆ ಹಾಜರಾಗಿ ಲೋಕಾಯುಕ್ತ ಅಧಿಕಾರಿಗಳ ವಿಚಾರಣೆ ಎದುರಿಸಿದ್ದರು. ಈ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಗಳು ಕಾನೂನಿಗೆ ಗೌರವ ನೀಡಿ ಲೋಕಾಯುಕ್ತ ವಿಚಾರಣೆ ಎದುರಿಸಿದ್ದಾರೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿಮಾಧ್ಯಮಗಳೊಂದಿಗೆ ಈ ವಿಚಾರವಾಗಿ ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ಕಾನೂನಿಗೆ ಗೌರವ ಕೊಟ್ಟಿದ್ದಾರೆ.ಕಾನೂನಿಗೆ ಗೌರವ ಕೊಟ್ಟು ವಿಚಾರಣೆ ಎದುರಿಸಿದ್ದಾರೆ. ನಾವು ಒಂದು ವಾರ ವಿನಾಯಿತಿ ಕೇಳಬಹುದಿತ್ತು ಆದರೆ ಅಧಿಕಾರದಲ್ಲಿ ಇದ್ದುಕೊಂಡು ಕಾನೂನು ಗೌರವಿಸಿದ್ದಾರೆ ಎಂದು ತಿಳಿಸಿದರು. ಸಚಿವ ಆರ್ ಬಿ ತಿಮ್ಮಾಪುರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ವಿಚಾರವಾಗಿ, ಅಧಿಕಾರದಲ್ಲಿ ಇದ್ದಾಗ ಏನು ಬೇಕಾದರೂ ದೂರು ಕೊಡಬಹುದು. ಈ ಹಿಂದೆ ಇದೇ ರೀತಿ ನೂರಾರು ದೂರುಗಳು ಬಂದಿತ್ತು. ಈಗ ಸ್ಪೆಷಲ್ ಆಗಿ ಹೊರಟಿದ್ದಾರೆ. ರಾಜಕೀಯದ ಬಣ್ಣ ಬಳಿಯುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಿಡಿ ಕಾರಿದರು.

Read More

ಬೆಂಗಳೂರು : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅವರ ವಿಚಾರಣೆಗೆ ಹಾಜರಾಗಬೇಕಿತ್ತು. ಚೆನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ಅವರು ಚುನಾವಣೆಯಲ್ಲಿ ಭಾಗಿಯಾಗಿದ್ದರಿಂದ ವಿಚಾರಣೆಗೆ ಗೈರಾಗಿದ್ದಾರೆ. ಇದರಿಂದಾಗಿ ಕೋರ್ಟ್ ಜಡ್ಜ್ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಹೌದು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ವಿರುದ್ಧದ ಡಿ ನೋಟಿಫಿಕೇಶನ್ ಪ್ರಕರಣದ ಕುರಿತು ವಿಚಾರಣೆ ನಡೆಯಿತು.ಈ ವೇಳೆ ಪದೇ ಪದೇ ನೀವು ಟೈಮ್ ಕೇಳುತ್ತಿದ್ದೀರಿ. ಮುಂದಿನ ವಿಚಾರಣೆ ವೇಳೆ ಬರುತ್ತಾರೆ ಎಂದು ಹೇಳುತ್ತೀರಿ ಎಂದು ಜಡ್ಜ್ ಅಸಮಾಧಾನ ಹೊರಹಾಕಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆದಿತ್ತು. ಚುನಾವಣೆ ಹಿನ್ನೆಲೆಯಲ್ಲಿ ವಿಚಾರಣೆಗೆ ಗೈರಾಗಿದ್ದಾರೆ. ವಿನಾಯಿತಿ ನೀಡುವಂತೆ ಹೆಚ್ ಡಿ ಕುಮಾರಸ್ವಾಮಿ ಅವರ ಪರ ವಕೀಲರು ಕೋರ್ಟಿಗೆ ಮನವಿ ಮಾಡಿದ್ದಾರೆ. ಎಷ್ಟು ಸಲ ನಿಮಗೆ ಟೈಮ್ ಕೊಡುವುದು? ಪದೇಪದೇ ನೀವು ಟೈಮ್…

Read More