Subscribe to Updates
Get the latest creative news from FooBar about art, design and business.
Author: kannadanewsnow05
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಕಂಟೆನರ್ ಬಿದ್ದು 4 ವರ್ಷದ ಬಾಲಕಿ ಹಾಗು ಆಕೆಯ ತಂದೆ ಸ್ಥಳದಲ್ಲೇ ಸಾವನ್ನಪ್ಪಿರುವ ಘೋರವಾದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮರಸನಹಳ್ಳಿ ಬಳಿ ಈ ಒಂದು ಘಟನೆ ನಡೆದಿದೆ. ಹೌದು ಬೈಕ್ ಮೇಲೆ ಕಂಟೇನರ್ ಬಿದ್ದು ತಂದೆ ಮಗಳು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಮರಸನಹಳ್ಳಿ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್ನಲ್ಲಿದ್ದ ತಂದೆ ವೆಂಕಟೇಶ ಹಾಗೂ ಮಗಳು ದೀಕ್ಷಿತ (4) ಸಾವನ್ನಪ್ಪಿದ್ದಾರೆ. ಮೃತ ವೆಂಕಟೇಶ್ ಪತ್ನಿ ರೂಪ ಅವರ ಸ್ಥಿತಿ ಚಿಂತಾ ಜನಕವಾಗಿದೆ. ಮೃತರು ಚಿಕ್ಕಬಳ್ಳಾಪುರ ತಾಲೂಕಿನ ಬಂಡಹಳ್ಳಿ ನಿವಾಸಿಗಳು ಎಂದು ತಿಳಿದುಬಂದಿದೆ. ಮಂಡಳಿಯಿಂದ ನಾಯನ ಹಳ್ಳಿಗೆ ಹೊರಟಿದಾಗ ಈ ದುರ್ಘಟನೆ ಸಂಭವಿಸಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಅಲ್ಲದೇ ಕಂಟೆನರ್ ಕೆಳಗಡೆ ಮತ್ತಿಬ್ಬರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಇಶಾ ಫೌಂಡೇಶನ್ ಗೆ ಹೋಗಿ ವಾಪಸ್ ಬರುವಾಗ ಈ ಘೋರವಾದ ದುರಂತ ಸಂಭವಿಸಿದೆ.
ಹಾವೇರಿ : ಶಿಕ್ಷಕರೊಬ್ಬರ ಅಮಾನತು ಆದೇಶವನ್ನು ಹಿಂಪಡೆಯಲು ಕ್ಷೇತ್ರ ಶಿಕ್ಷಣಾಧಿಕಾರಿ (BEO) ಒಬ್ಬರು 50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದು, 15 ಸಾವಿರ ಪಡೆದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಗಿ ಬಿದ್ದಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ್ ಬಡಿಗೇರ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅಮಾನತುಕೊಂಡಿದ್ದ ನೊಂದ ಶಿಕ್ಷಕರೊಬ್ಬರ ದೂರಿನ ಮೇರೆಗೆ ಇಂದು ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ರೆಡ್ ಹ್ಯಾಂಡ್ ಆಗಿ ಬಲೆಗೆ ಬೀಳಿಸಿದ್ದಾರೆ. ಸದ್ಯ ಮೌನೇಶ್ ಬಡಿಗೇರ್ ಅವರನ್ನು ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು ಅವರ ವಿರುದ್ಧ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ಮೌನೇಶ್, ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಶಿಕ್ಷಕರೊಬ್ಬರ ಅಮಾನತು ಆಗಿತ್ತು. ಅಮಾನತು ಆದೇಶ ಹಿಂಪಡೆಯುವಂತೆ ಶಿಕ್ಷಕರು ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ್ದ ಮೌನೇಶ್, ₹ 50 ಸಾವಿರ ಕೊಟ್ಟರೆ ಆದೇಶ ಹಿಂಪಡೆಯುವುದಾಗಿ ಹೇಳಿದ್ದರು ಎಂದು ಲೋಕಾಯುಕ್ತ ಪೊಲೀಸ್…
ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಏ.23ರಿಂದ ಪ್ರಕರಣದ ಸಾಕ್ಷಿ ವಿಚಾರಣೆ ಹಿನ್ನೆಲೆಯಲ್ಲಿ ಎಸ್ಐಟಿ ಸಂಗ್ರಹಿಸಿದ ಡಿಜಿಟಲ್ ಸಾಕ್ಷಿ ವೀಕ್ಷಣೆಗೆ ಬೆಂಗಳೂರಿನ ಜನಪ್ರತಿನಿದಿಗಳ ನ್ಯಾಯಾಲಯ ಅವಕಾಶ ನೀಡಿತು. ಪ್ರಕರಣ ಸಂಬಂಧ ಇಂದು ಜನಪ್ರತಿನಿದಿಗಳ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಐಟಿ ತಜ್ಞ ಶುಭಂಗೆ ವಿಡಿಯೋ ನೋಡಲು ಇದೀಗ ಕೋರ್ಟ್ ಅವಕಾಶ ನೀಡಿದ್ದು, ಈ ಕುರಿತು ಪ್ರಜ್ವಲ್ ರೇವಣ್ಣ ಪರ ವಕೀಲರು ವಿಡಿಯೋ ವೀಕ್ಷಣೆಗೆ ಅವಕಾಶ ಕೋರಿ ಮನವಿ ಮಾಡಿದ್ದರು. ಪ್ರಜ್ವಲ್ ಅವರ ಇಬ್ಬರು ವಕೀಲರು, ಎಸ್ಪಿಪಿ ಅಥವಾ ಸಹಾಯಕರು, ಪ್ರಜ್ವಲ್ ರೇವಣ್ಣ ಪರ ಐಟಿ ತಜ್ಞ, ತನಿಖಾಧಿಕಾರಿ ಹಾಗೂ ಸಹಾಯಕರು ವಿಡಿಯೋ ವೀಕ್ಷಣೆಗೆ ಹಾಜರಿರಬೇಕು. ಇಂದು, ಏಪ್ರಿಲ್ 21 ರಂದು ವಿಡಿಯೋ ಕಾನ್ಫರೆನ್ಸ್ ರೂಮ್ನಲ್ಲಿ ವಿಡಿಯೋ ವೀಕ್ಷಣೆ ನಡೆಯಲಿದೆ. ಖಾಸಗಿ ವಿಡಿಯೋವಾಗಿದ್ದರಿಂದ ಕಾಪಿ ಮಾಡಲು ಅವಕಾಶವಿಲ್ಲ ಎಂದು ಜನಪ್ರತಿನಿಧಿಗಳ ವಿಶೇಷ ಜಡ್ಜ್ ಸಂತೋಷ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ.ಈ ಹಿನ್ನೆಲೆಯಲ್ಲಿ ತನ್ನದೇ…
ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಮೂರು ಪ್ರಕರಣಗಳಲ್ಲಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದು, ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಒಂದು ಪ್ರಕರಣದ ಜಾಮೀನು ಅರ್ಜಿ ವಜಾಗೊಳಿಸಿದೆ. ಹೌದು ಈಗಾಗಲೇ ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷಿ ವೀಕ್ಷಣೆಗೆ ಕೋರ್ಟ್ ಅವಕಾಶ ನೀಡಿದ್ದು, ಅದರ ಬೆನ್ನಲ್ಲೇ, ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮತ್ತೊಂದು ಪ್ರಕರಣದಲ್ಲೂ ಜಾಮೀನು ಅರ್ಜಿ ವಜಾಗೊಂಡಿದೆ. ಕ್ರೈಂ ನಂಬರ್ 20/2024 ಪ್ರಕರಣದಲ್ಲಿ ಜಾಮೀನು ಅರ್ಜಿ ವಜಾ ಗೊಳಿಸಲಾಗಿದೆ. ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ ಗಜಾನನ ಭಟ್ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಬೈಕ್ ಮೇಲೆ ತೆರಳುತ್ತಿದ್ದಾಗ ಕಂಟೆನರ್ ಬಿದ್ದು 4 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘೋರವಾದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನರಸನಹಳ್ಳಿ ಬಳಿ ಈ ಒಂದು ಘಟನೆ ನಡೆದಿದೆ. ಘಟನೆ ವೇಳೆ 4 ವರ್ಷದ ಬಾಲಕಿ ಬೈಕ್ ಮೇಲೆ ತೆರಳುತ್ತಿದ್ದಾಗ ಕಂಟೆನರ್ ಬಿದ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅಲ್ಲದೇ ಕಂಟೆನರ್ ಕೆಳಗಡೆ ಮತ್ತಿಬ್ಬರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಇಶಾ ಫೌಂಡೇಶನ್ ಗೆ ಹೋಗಿ ವಾಪಸ್ ಬರುವಾಗ ಈ ಘೋರವಾದ ದುರಂತ ಸಂಭವಿಸಿದೆ.
ಮಂಗಳೂರು : ವಕ್ಫ್ ತಿದ್ದುಪಡಿ ವಿರೋಧಿ ಸೇನೆನೆ ಮಂಗಳೂರಿನ ಅಡ್ಯಾರ್ ಮೈದಾನದಲ್ಲಿ ಪ್ರತಿಭಟನೆ ಆಯೋಜನೆ ಮಾಡಲಾಗಿತ್ತು. ಈ ವೇಳೆ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿದ್ದ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಹೌದು ಪ್ರತಿಭಟನೆ ವೇಳೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ ವಿಚಾರವಾಗಿ ಪ್ರತಿಭಟನಾಕಾರರ ವಿರುದ್ಧ ಇದೀಗ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ನಿನ್ನೆ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಕೃಷ್ಣಾಪುರ ನಿವಾಸಿ ಜಲೀಲ್, ಹೊಳಚ್ಚಿಲ್ ನಿವಾಸಿ ಫಾಜಿಲ್ ಹಾಗು ಮೊಹಮ್ಮದ್ ಹನೀಫ್ ನೌಫಾಲ್ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. BNS ಕಾಯ್ದೆ 189(2), 126(2), 270, 324, 132, 185, 190ರಡಿ ಪ್ರಕರಣ ದಾಖಲಾಗಿದೆ ನೆನ್ನೆ ಮಂಗಳೂರಿನ ಆಡಾರಿನಲ್ಲಿ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆಗೂ ಮುನ್ನ ಹೈಕೋರ್ಟ್ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡದಂತೆ ಪ್ರತಿಭಟನೆ ಮಾಡಿ ಎಂದು ಸೂಚನೆ ನೀಡಿತ್ತು. ಆದರೆ ಹೈಕೋರ್ಟ್ ಆದೇಶವನ್ನು ಮೀರಿಭಟ್ಟನಾಕಾರರು ರಾಷ್ಟ್ರೀಯ…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ಮೆಡಿಕಲ್ ಶಾಪ್ ಮತ್ತು ಜನರಲ್ ಸ್ಟೋರ್ ಆಕಸ್ಮಿಕ ಬೆಂಕಿಯಿಂದಾಗಿ ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ಗಾಯತ್ರಿನಗರದ ಮುಖ್ಯ ರಸ್ತೆಯಲ್ಲಿ ಈ ಅಗ್ನಿ ದುರಂತ ಸಂಭವಿಸಿದೆ. ಬೆಂಗಳೂರಿನಲ್ಲಿ ಮೆಡಿಕಲ್ ಶಾಪ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಹೆಲ್ತ್ ಕೇರ್ ಫಾರ್ಮ ಮತ್ತು ಜನರಲ್ ಸ್ಟೋರ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಗಾಯತ್ರಿನಗರದ ಮುಖ್ಯ ರಸ್ತೆಯಲ್ಲಿರುವ ಮೆಡಿಕಲ್ ಶಾಪ್ ನಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಸದ್ಯ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಗೌಡ ಬೇಲೂರು ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರವೀಣ್ ಆತ್ಮಹತ್ಯೆ ಮಾಡಿಕೊಳ್ಳೋಕು ಮುನ್ನ ಡೆತ್ ನೋಟ್ ಅಲ್ಲಿ ಉಲ್ಲೇಖಿಸಿದ ಇಬ್ಬರು ಆರೋಪಿಗಳನ್ನು ಆನೇಕಲ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರಕರಣದ A1 ಆರೋಪಿ ಕಿರಣಗೌಡ ಮತ್ತು A3 ಹರೀಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಪ್ರವೀಣ್ ಗೌಡನ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ಪ್ರಕರಣದ ಪ್ರಮುಖ ಆರೋಪಿಗಳಿಂದ ಪ್ರವೀಣ್ ವಿಡಿಯೋ ವೈರಲ್ ಆಗಿದೆ. ಆನೇಕಲ್ ಮಂಡಲ ಬಿಜೆಪಿ ಅಧ್ಯಕ್ಷ ಮುನಿರಾಜುಗೌಡ ಆನೇಕಲ್ ಪುರಸಭೆ ಸದಸ್ಯೆ ಭಾಗ್ಯಲಕ್ಷ್ಮಿ ಮತ್ತು ಪತಿ ಶ್ರೀನಿವಾಸ್ ಅವರಿಂದ ವಿಡಿಯೋ ವೈರಲ್ ಆಗಿದೆ. ಪ್ರಕರಣ ಹಿನ್ನೆಲೆ? ನಿನ್ನೆ ಆನೇಕಲ್ ನ ಎಸ್.ವಿ.ಎಂ ಸ್ಕೂಲ್ ಬಳಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಗೌಡ ಬೇಲೂರು (35) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫೇಸ್ಬುಕ್ ವಿಡಿಯೋ ಮಾಡಿ ಹಲವರ ಹೆಸರುಗಳನ್ನು ಪ್ರಸ್ತಾಪಿಸಿರುವ ಪ್ರವೀಣ್, ಮರಕ್ಕೆ ನೇಣು…
BREAKING : ಏನು ಮಾಡೋಕ್ ಆಗಲ್ಲ ಕನ್ನಡ ಕಲಿ : ಹಿಂದಿ ಮಾತನಾಡು ಎಂದವನಿಗೆ ಕನ್ನಡಿಗನ ಖಡಕ್ ವಾರ್ನಿಂಗ್ | Video Viral
ಬೆಂಗಳೂರು : ಇತ್ತೀಚಿಗೆ ಉತ್ತರ ಭಾರತದಿಂದ ಕರ್ನಾಟಕಕ್ಕೆ ವಲಸೆ ಬಂದಿರುವವರಿಂದ ಕನ್ನಡದವರ ಮೇಲೆನೆ ದೌರ್ಜನ್ಯ ನಡೆಸಿರುವ ಪ್ರಕರಣಗಳು ನಡೆದಿದ್ದು, ಅದರಲ್ಲೂ ಉತ್ತರ ಪ್ರದೇಶ, ಬಿಹಾರ, ಗುಜರಾತ್ ಇತರೆ ರಾಜ್ಯಗಳಿಂದ ಬಂದಂತಹ ಉತ್ತರ ಭಾರತದ ಜನ ಕನ್ನಡಿಗರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಘಟನೆ ನಡೆದಿದ್ದು, ಕನ್ನಡಿಗ ಆಟೋ ಚಾಲಕನಿಗೆ ಹಿಂದಿ ಕಲಿ ಎಂದು ಧಮ್ಕಿ ಹಾಕಿರುವ ಘಟನೆ ನಡೆದಿದೆ. ಹೌದು ಬೆಂಗಳೂರಿನ ಎಸ್‌ಎಂಎಸ್ ಆರ್ಕೇಡ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಓರ್ವ ಆಟೋ ಚಾಲಕನಿಗೆ ಧಮ್ಕಿ ಹಾಕಿದ್ದಾನೆ. ಕನ್ನಡಿಗ ಆಟೋ ಚಾಲಕನಿಗೆ ಹಿಂದಿಯಲ್ಲಿ ಮಾತನಾಡು ಎಂದು ಹಿಂದಿ ಭಾಷಿಕ ಧಮ್ಕಿ ಹಾಕಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಿಂದಿಯಲ್ಲಿ ಮಾತನಾಡು ಎಂದು ಯುವಕ ಧಮ್ಕಿ ಹಾಕಿದ್ದಕ್ಕೆ ಆಟೋ ಚಾಲಕ ಏನೂ ಮಾಡಕ್ಕಾಗಲ್ಲ. ಕನ್ನಡ ಮಾತನಾಡು ಕಲಿ ನೀನು. ನೀನು ಬೆಂಗಳೂರಿಗೆ ಬಂದಿರುವುದು ಆಯ್ತಾ ಎಂದು ತಿರುಗೇಟು ಕೊಡುತ್ತಾನೆ. ಇದನ್ನು ಒಬ್ಬಾತ ವಿಡಿಯೋ ಮಾಡುತ್ತಿದ್ದರೆ, ಮತ್ತೊಬ್ಬ ಮಹಿಳೆ ಹಿಂದಿ…
ಶಿವಮೊಗ್ಗ : ಶಿವಮೊಗ್ಗದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ವರದಕ್ಷಿಣೆಗಾಗಿ ಪತಿಯ ಕುಟುಂಬಸ್ಥರಿಂದ ಕೊಲೆ ಆರೋಪ ಕೇಳಿಬರುತ್ತಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಚ್. ಜಂಕ್ಷನ್ ಗ್ರಾಮದಲ್ಲಿ ಗೃಹಿಣಿ ತೇಜಸ್ವಿನಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪತಿ ಹಾಗೂ ಆತನ ಕುಟುಂಬಸ್ಥರಿಂದ ತೇಜಸ್ವಿನಿ ಕೊಲೆ ಆರೋಪ ಕೇಳಿಬರುತ್ತಿದೆ. ಭದ್ರಾವತಿ ಗ್ರಾಮಾಂತರ ಠಾಣೆಗೆ ಮೃತ ತೇಜಸ್ವಿನಿಯ ಪತಿ, ಅತ್ತೆ ಹಾಗು ಮಾವನ ವಿರುದ್ಧ ಇದೀಗ ಮೃತಳ ಕುಟುಂಬಸ್ಥರ ದೂರು ನೀಡಿದ್ದಾರೆ. ಪೊಲೀಸರು ದೂರು ನೀಡಿದರು ಕೂಡ ಕ್ರಮ ಕೈಗೊಂಡಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ಹೊರ ಹಾಕುತ್ತಿದ್ದಾರೆ ಈ ಹಿನ್ನೆಲೆಯಲ್ಲಿ ಇದೀಗ ಎಚ್. ಜಂಕ್ಷನ್ ನಲ್ಲಿ ತೇಜಸ್ವಿನಿ ಮೃತ ದೇಹವನ್ನು ಇಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಭದ್ರಾವತಿ ಲಕ್ಕವಳ್ಳಿ ರಸ್ತೆ ತಡೆದು ಕುಟುಂಬಸ್ಥರು ಪ್ರತಿಭಟನೆ ಮಾಡುತ್ತಿದ್ದಾರೆ. ವರದಕ್ಷಿಣೆಗಾಗಿ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ.













