Author: kannadanewsnow05

ಬೆಂಗಳೂರು : ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿಗೊಳಿಸುವಂತ ನಿರ್ಧಾರವನ್ನು ಸರ್ಕಾರ ಪ್ರಕಟಿಸಿತ್ತು. ಅದರಂತೆ ಸಚಿವ ಸಂಪುಟ ಸಭೆಯಲ್ಲೂ ಅನುಮೋದಿಸಿ, ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಕಿತ ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಸರ್ಕಾರವು ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ತಡೆಯ ಗೆಜೆಟ್ ಅಧಿಸೂಚನೆಯನ್ನು ಪ್ರಕಟಿಸಿದೆ. ಇಂದು ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯ ಪತ್ರದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಯನ್ನು ಪ್ರಕಟಿಸಲಾಗಿದೆ. ಅದರಲ್ಲಿ ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ, 2025ರ ಫೆಬ್ರವರಿ ತಿಂಗಳ 12ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025ರ ಕರ್ನಾಟಕ ಅಧ್ಯಾದೇಶ ಸಂಖ್ಯೆ : 02 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ IV-A) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ ಎಂದು ಹೇಳಿದೆ. ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ…

Read More

ಮೈಸೂರು : ಮೈಸೂರಿನ ಉದಯಗಿರಿ ಠಾಣೆಯ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, ಪೊಲೀಸರು, 12 ಜನ ಆರೋಪಿಗಳು ಹಾಗೂ ಓರ್ವ ಬಾಲಕನನ್ನು ಅರೆಸ್ಟ್ ಮಾಡಿದ್ದರು. ಆರೋಪಿಗಳನ್ನು ಜಡ್ಜ್ ಮುಂದೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದರು. 12 ಮಂದಿ ಯುವಕರು ಓರ್ವ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಇನ್ನು ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿದಿದ್ದಾರೆ 13 ಜನರಿಗೆ ಮೈಸೂರಿನ ಕೆಆರ್ ಪುತ್ರಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಬಳಿಕ ಆರೋಪಿಗಳನ್ನು ಪೊಲೀಸರು ಜಡ್ಜ್ ಮುಂದೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಧೀಶರು 12 ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದ್ದು ಓರ್ವ ಬಾಲಕನನ್ನು ಪೊಲೀಸರು ಬಾಲ ಮಂದಿರಕ್ಕೆ ಕಳುಹಿಸಿದ್ದಾರೆ. ಇನ್ನು ಉಳಿದ ಆರೋಪಿಗಳಿಗೆ ಶೋಧ ಕಾರ್ಯ ಮುಂದುವರೆದಿದೆ.

Read More

ಮೈಸೂರು : ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿದ್ದ ಮುಸ್ಲಿಂ ಮುಖಂಡ ಮುಸ್ತಾಕ್ ಪರಾರಿಯಾಗಿದ್ದು ಇದೀಗ ಆತನ ಪತ್ತೆಗೆ ಸಿಸಿಬಿ ಅಧಿಕಾರಿಗಳು ಬಲೆ ಬೀಸಿದ್ದಾರೆ. ಈಗಾಗಲೇ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 8 ಜನರನ್ನು ಅರೆಸ್ಟ್ ಮಾಡಿದ್ದಾರೆ. ಠಾಣೆ ಮೇಲೆ ದಾಳಿಗೂ ಮುನ್ನ ಆತ ಪ್ರಚೋದನಕಾರಿ ಭಾಷಣ ಮಾಡಿದ್ದ. ಆತನ ಭಾಷಣದಿಂದಲೇ ಠಾಣೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಪ್ರಚೋದನಕಾರಿ ಭಾಷಣ ಮಾಡಿದ ಮುಸ್ಲಿಂ ಮುಖಂಡ ಪರಾರಿಯಾಗಿದ್ದು ಠಾಣೆ ಮುಂದೆ ಮುಸ್ಲಿಂ ಮುಖಂಡ ಮುಷ್ಟಾಕ್ ಪ್ರಚೋದನಕಾರಿ ಭಾಷಣ ಮಾಡಿ ಇದೀಗ ಎಸ್ಕೇಪ್ ಆಗಿದ್ದಾನೆ. ಸದ್ಯ ಮುಸ್ಲಿಂ ಮುಖಂಡ ಮುಸ್ತಾಕ್ ಗಾಗಿ ಸಿಸಿಬಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕಲ್ಲೇಸೆದ ಬಹುತೇಕರು ಉದಯಗಿರಿ ಠಾಣೆಯ ಅಕ್ಕಪಕ್ಕದ ನಿವಾಸಿಗಳೇ ಎಂದು ಹೇಳಲಾಗುತ್ತಿದೆ. ಸಿಸಿಟಿವಿ ದೃಶ್ಯ ಮೊಬೈಲ್ ದೃಶ್ಯಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆದಿದೆ. ಮುಸ್ತಾಕ್ ಸೇರಿ…

Read More

ಬೆಂಗಳೂರು : ಬೆಂಗಳೂರಿನ ಯಲಹಂಕದ ವಾಯು ನೆಲೆಯಲ್ಲಿ ಏರ್ ಶೋ 2025 ನಡೆಯುತ್ತಿದ್ದು, ಈ ಒಂದು ಏರ್ ಶೋ ವೀಕ್ಷಣೆಗೆ ಸಾರ್ವಜನಿಕರಿಗೆ ಇಂದು ಮತ್ತು ನಾಳೆ ಅವಕಾಶ ಕಲ್ಪಿಸಲಾಗಿದೆ. ಹೌದು ಯಲಹಂಕದ ಬಳಿ ಇರುವ ವಾಯು ನೆಲೆಯಲ್ಲಿ ನಡೆಯುತ್ತಿರುವ ಏರ್ ಶೋ ವೀಕ್ಷಣೆಗೆ ಸಾರ್ವಜನಿಕರಿಗೆ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಅವಕಾಶ ಕಲ್ಪಿಸಲಾಗಿದೆ. ಈ ಒಂದು ಏರ್ ಶೋಗೆ ಟಿಕೆಟ್ ಪಡೆದುಕೊಂಡವರಿಗೆ ಮಾತ್ರ ಏರ್ ಶೋ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಕಳೆದ ಹೆಬ್ರಿ ಹತ್ತರಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು 15ನೇ ಏರ್ ಶೋ ಗೆ ಚಾಲನೆ ನೀಡಿದ್ದರು. ಸುಮಾರು 30 ರಾಷ್ಟ್ರಗಳ ರಕ್ಷಣಾ ಸಚಿವರು ಈ ಒಂದು ಏರ್ ಶೋದಲ್ಲಿ ಭಾಗಿಯಾಗಿದ್ದರು. ಇದೀಗ ಸಾರ್ವಜನಿಕರಿಗೆ ಕೂಡ ಏರ್ ಶೋ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

Read More

ಬೆಂಗಳೂರು : ಚಾಮರಾಜನಗರ ಜಿಲ್ಲಿಯ ಮಲೈಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ರದ್ದಾಗಿದ್ದು, ಚಾಮರಾಜನಗರದ ಬದಲಾಗಿ ಬೆಂಗಳೂರಿನಲ್ಲಿಯೇ ಇದೆ ಫೆಬ್ರವರಿ 20 ರಂದು ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಹೌದು ಕಳೆದ ಹಲವು ದಿನಗಳಿಂದ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ದಿನಾಂಕಗಳನ್ನು ಮುಂದೂಡತ್ತಲೇ ಬಂದಿತ್ತು. ಈಗ ಸಿಎಂ ಸಿದ್ದರಾಮಯ್ಯ ಅವರ ಮಂಡಿ ನೋವು ಹಿನ್ನಲೆಯಲ್ಲಿ ಇದೀಗ ಫೆಬ್ರವರಿ 20ರಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ರದ್ದುಗೊಳಿಸಿ ಬೆಂಗಳೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ.

Read More

ಬೆಳಗಾವಿ : ಪರಸ್ತ್ರೀ ಜೊತೆಗೆ ಓಡಿ ಹೋಗಿದ್ದ ಪತಿಯು ಕೊನೆಗೂ ಸಿಗಿ ಬಿದ್ದಿದ್ದಾನೆ ಈ ವೇಳೆ ಪತ್ನಿಯಾಗು ಪರಸ್ತ್ರೀ ನಡುವೆ ಗಲಾಟೆ ನಡೆದು ರಸ್ತೆಯಲ್ಲಿಯೇ ಪರಸ್ಪರ ಜೊತೆ ಹಿಡಿದುಕೊಂಡು ಹೊಡೆದಾಡಿಕೊಂಡಿರುವ ಘಟನೆ ಬೆಳಗಾವಿಯ ಕೊಲ್ಲಾಪುರ ಸರ್ಕಲ್ ಬಳಿ ಈ ಒಂದು ಘಟನೆ ನಡೆದಿದೆ. ಬೆಳಗಾವಿಯಲ್ಲಿ ರಸ್ತೆಯಲ್ಲಿ ಹೊಡೆದಾಡಿಕೊಂಡ ಮಹಿಳೆಯರು. ಬೆಳಗಾವಿ ನಗರದ ಕೊಲ್ಲಾಪುರ ಸರ್ಕಲ್ ನಲ್ಲಿ ಈ ಒಂದು ಘಟನೆ ನಡೆದಿದೆ.ಕೆಲವು ದಿನಗಳ ಹಿಂದೆ ಪರಸ್ತ್ರೀ ಜೊತೆಗೆ ಗ್ರಾಮ ಪಂಚಾಯಿತಿಯ ಸದಸ್ಯೆಯ ಪತಿ ಓಡಿ ಹೋಗಿದ್ದ. ಎರಡು ಮಕ್ಕಳನ್ನು ಬಿಟ್ಟು ಮಹಿಳೆಯ ಜೊತೆಗೆ ಬಸವರಾಜ ಸೀತಾಮಣಿ ಎನ್ನುವ ವ್ಯಕ್ತಿ ಓಡಿ ಹೋಗಿದ್ದ. ಮಾರಿಹಾಳದ ಮಾಸಾಬಿ ಸೈಯದ್ ಜೊತೆಗೆ ಬಸವರಾಜ್ ಓಡಿ ಹೋಗಿದ್ದ. ಗಂಡ ಹೊಡಿ ಹೋದ ಬಳಿಕ ವಾಣಿಶ್ರೀ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು. ಮಕ್ಕಳನ್ನು ಕಟ್ಟಿಕೊಂಡು ಜೀವನ ಮಾಡಲು ವಾಣಿಶ್ರೀ ಹರಸಾಹಸ ಪಡುತ್ತಿದ್ದರು ಎರಡು ತಿಂಗಳು ಬಳಿಕ ಬೆಳಗಾವಿಗೆ ಬಂದು ಮಾಸಾಬಿ ಹಾಗೂ ಬಸವರಾಜ್ ವಾಸಿಸುತ್ತಿದ್ದರು. ನಿನ್ನೆ ರಾತ್ರಿ ವಾಣಿಶ್ರೀ ಕೈಗೆ…

Read More

ಬೀದರ್ : ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ಬೀದರ್‌ ಮೂಲದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಜಿಲ್ಲೆಯ ಕಮಲನಗರ ತಾಲೂಕಿನ ಠಾಣಾಕುಶನೂರ ಗ್ರಾಮದ ಕಂಟೆಪ್ಪ ಜಿರ್ಗೆ (65) ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಕಂಟೆಪ್ಪಾ ಅವರು ಸಂಬಂಧಿಕರೊಂದಿಗೆ ಭಾನುವಾರ ಕುಂಭಮೇಳಕ್ಕೆ ತೆರಳಿದ್ದರು.ಸೋಮವಾರ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದರು. ನಂತರ ಮರಳಿ ಉತ್ತರ ಪ್ರದೇಶದ ಕಾಶಿ ದೇವಸ್ಥಾನಕ್ಕೆ ತೆರಳಿದ್ದರು. ಆದರೆ ಬುಧವಾರ ಬೆಳಗ್ಗೆ 11 ಗಂಟೆಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರ ಅಂತ್ಯಕ್ರಿಯೆ ಗುರುವಾರ ಸ್ವಗ್ರಾಮ ಠಾಣಾಕುಶನೂರದಲ್ಲಿ ನಡೆಯಲಿದೆ.ನಿನ್ನೆ ಸಹ ತುಮಕೂರು ಜಿಲ್ಲೆಯ ಶಿರಾ ಮೂಲದ ವ್ಯಕ್ತಿ ಸಾವನ್ನಪ್ಪಿದ್ದರು. ಇತ್ತೀಚೆಗೆ ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳ ದಲ್ಲಿ ಭಾಗವಹಿಸಿ ವಾಪಸ್ ಬರುವ ವೇಳೆ ರೈಲಿನಲ್ಲಿ ಹೃದಯಾಘಾತದಿಂದ ಬೆಳಗಾವಿಯ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿತ್ತು. ಅದೇ ರೀತಿ ಕಾಶಿಯಲ್ಲಿ ಸ್ನಾನ ಮಾಡುವ ವೇಳೆ ನದಿಯಲ್ಲಿ ಮುಳುಗಿ ಬಾಗಲಕೋಟೆ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು.ಇದೀಗ ಬೀದರ್…

Read More

ಬೆಂಗಳೂರು : ಮೊಬೈಲ್ ಜಾಸ್ತಿ ಬಳಸಬೇಡ ಓದಿನ ಕಡೆ ಗಮನಕೊಡು ಎಂದಿದ್ದಕ್ಕೆ ನೊಂದ SSLC ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿಯೊಬ್ಬಳು ಅಪಾರ್ಮೆಟ್ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಕಾಡಗೋಡಿಯಲ್ಲಿ ನಡೆದಿದೆ. ಬೆಂಗಳೂರಿನ ಕಾಡಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಅಸೆಟ್ಸ್ ಮಾರ್ಕ್ ಅಪಾರ್ಮೆಟ್ ನಲ್ಲಿ ನಿನ್ನೆ ಈ ಒಂದು ಘಟನೆ ನಡೆದಿತ್ತು. ಈ ಒಂದು ಅಪಾರ್ಟ್ಮೆಂಟ್ ನಲ್ಲಿ ಉತ್ತರ ಪ್ರದೇಶ ಮೂಲದ ಕುಟುಂಬವೊಂದು ವಾಸವಾಗಿತ್ತು. ಅವರ 15 ವರ್ಷದ ಬಾಲಕಿ ಅವಂತಿಕಾ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದಳು. ಅವಂತಿಕಾ ಹೆಚ್ಚು ಮೊಬೈಲ್ ಬಳಸುತ್ತಿದ್ದಳು, ಇದನ್ನು ಗಮನಿಸಿದ ತಾಯಿ ಜಾಸ್ತಿ ಮೊಬೈಲ್ ಬಳಸಬೇಡ ಓದಿನ ಕಡೆಗೆ ಗಮನ ಕೊಡು ಎಂದಿದ್ದರು ಅಷ್ಟೆ. ಅವಂತಿಕಾ ಅಪಾರ್ಮೆಂಟ್ ನ 20ನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ವಿಷಯ ತಿಳಿದು ಸ್ಥಳಕ್ಕೆ ಕಾಡುಗೋಡಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಕೇಸ್ ದಾಖಲಿಸಿಕೊಂಡಿದ್ದಾರೆ.

Read More

ನವದೆಹಲಿ : ಒಂದುವೇಳೆ ಸದ್ಯಕ್ಕೆ ಏನಾದರು ಲೋಕಸಭೆಗೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿ ಕೂಟ 343 ಸ್ಥಾನಗಳನ್ನು ಗೆಲ್ಲಲಿದೆ. ಹಾಗೂ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ 188 ಸ್ಥಾನ ಪಡೆಯಲಿದೆ ಎಂದು ಇಂಡಿಯಾ ಟುಡೇ-ಸಿ ವೋಟರ್ ನಡೆಸಿದ ಮೂಡ್ ಆಫ್ ದ ನೇಷನ್ ಸಮೀಕ್ಷೆ ಹೇಳಿದೆ. ಹೌದು 2024ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 292 ಸ್ಥಾನ ಗೆದ್ದಿತ್ತು. ಆದರೆ ಅಸಕ್ತ ದಿನದಲ್ಲಿ ಲೋಕಸಭೆ ಚುನಾವಣೆ ಏನಾದರೂ ನಡೆಸಿದರೆ 343 ಸ್ಥಾನಗಳನ್ನು ಎಂಡಿಎ ಮೈತ್ರಿಕೂಟ ಗೆಲ್ಲಲಿದೆ ಅಲ್ಲದೆ ಕಾಂಗ್ರೆಸ್ 188 ಸ್ಥಾನಕ್ಕೆ ಕುಸಿಯಲಿದೆ ಎಂದುಇಂಡಿಯಾ ಟುಡೇ ಮೂಡ್ ಆಫ್ ದ ನೇಷನ್ ಸಮೀಕ್ಷೆ ತಿಳಿಸಿದೆ. ಈಗ ಚುನಾವಣೆ ನಡೆದರೆ ಭರ್ಜರಿ 343 ಸ್ಥಾನ ಗೆಲ್ಲಲಿದೆ. ಅಂದರೆ ಅದರ ಸ್ಥಾನಬಲ 51 ಸ್ಥಾನ ಹೆಚ್ಚಾಗಲಿದೆ. ಬಿಜೆಪಿ ಬಲ 240ರಿಂದ 281ಕ್ಕೆ ಏರಲಿದೆ. ಇನ್ನು ಲೋಕಸಭಾ ಚುನಾವಣೆಯಲ್ಲಿ 232 ಸ್ಥಾನ ಗೆದ್ದಿದ್ದ ಇಂಡಿಯಾ ಕೂಟದ ಬಲ 188ಕ್ಕೆ ಇಳಿಯಲಿದೆ. ಅದೇ ರಿತಿ…

Read More

ವಿಜಯಪುರ : ರಾಜ್ಯ ಬಿಜೆಪಿಯಲ್ಲಿ ಒಳಜಗಳ ಹಾಗೂ ಭಿನ್ನಾಭಿಪ್ರಾಯ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಶಿಸ್ತು ಸಮಿತಿಯು ಶಾಸಕ ಯತ್ನಾಳ್ ಅವರಿಗೆ 72 ಗಂಟೆಗಳಲ್ಲಿ ಉತ್ತರಿಸುವಂತೆ ಶೋಕಾಸ್ ನೋಟಿಸ್ ನೀಡಿತ್ತು. ಈ ಒಂದು ನೋಟಿಸ್ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ವರಿಷ್ಠರು ನನಗೆ ಯಾವುದೇ ನೋಟಿಸ್ ನೀಡಿಲ್ಲ. ಒಂದು ವೇಳೆ ನೋಟಿಸ್‌ ಬಂದರೂ ನಾನು ಅದಕ್ಕೆ ಉತ್ತರ ನೀಡುವುದಿಲ್ಲ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು, ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯಿಂದ ನೋಟಿಸ್ ಬಂದಿರುವ ಕುರಿತಾಗಿ ಬಿಜೆಪಿ ವರಿಷ್ಠರು ನನಗೆ ಯಾವುದೇ ನೋಟಿಸ್‌ ನೀಡಿಲ್ಲ. ಅಷ್ಟಕ್ಕೂ, ಇಂತಹ ನೂರಾರು ನೋಟಿಸ್‌ಗಳು ನನಗೆ ಬರುತ್ತವೆ. ಅವುಗಳಿಗೆಲ್ಲ ಉತ್ತರ ಕೊಡಲು ಆಗುವುದಿಲ್ಲ. ಇದಕ್ಕೆಲ್ಲ ಹೆದರುವ ಮಗ ನಾನಲ್ಲ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಿರುವ ಸಂಬಂಧ ಶಾಸಕ ಯತ್ನಾಳರಿಗೆ ಬಿಜೆಪಿ ಕೇಂದ್ರ ಶಿಸ್ತು…

Read More