Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ : ನಮ್ಮಲ್ಲಿ ಸಾಕಷ್ಟು ಪೆಟ್ರೋಲ್ ಡೀಸೆಲ್ ಇದೆ. ಸೋಶಿಯಲ್ ಮೀಡಿಯಾದಲ್ಲಿರುವ ಯಾವುದೇ ವದಂತಿಗಳನ್ನು ನಂಬಬೇಡಿ ಆತಂಕ ಬೇಡ ಚಿಲ್ಲರೆ ಮಾರಾಟ ಮಳಿಗೆಗಳಿಗೆ ತೊಂದರೆ ಆಗಿಲ್ಲ ಎಂದುಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ (MOPNG) ಜಂಟಿ ಕಾರ್ಯದರ್ಶಿ ಸುಜಾತ ಶರ್ಮ ಈ ಒಂದು ಹೇಳಿಕೆ ನೀಡಿದ್ದಾರೆ. ದೇಶಾದ್ಯಂತದ ಇರುವ ಸಂಸ್ಕರಣಾಗಾರಗಳು ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ತಮ್ಮ ಅತ್ಯುನ್ನತ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ. ಹಾಗಾಗಿ ನಮ್ಮಲ್ಲಿ ಸಾಕಷ್ಟು ಪೆಟ್ರೋಲ್ ಡೀಸೆಲ್ ಇದೆ. ಸೋಶಿಯಲ್ ಮೀಡಿಯಾದಲ್ಲಿರುವ ಯಾವುದೇ ವದಂತಿಗಳನ್ನು ನಂಬಬೇಡಿ ಆತಂಕ ಬೇಡ ಚಿಲ್ಲರೆ ಮಾರಾಟ ಮಳಿಗೆಗಳಿಗೆ ತೊಂದರೆ ಆಗಿಲ್ಲ ಎಂದು ತಿಳಿಸಿದರು. ಈ ಕುರಿತ ಪ್ರಮುಖ ಅಂಶಗಳು ಇಲ್ಲಿವೆ: ಸಂಪೂರ್ಣ ಲಭ್ಯತೆ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿದೆ. ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ. ವದಂತಿಗಳಿಗೆ ಬ್ರೇಕ್: ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಇತರ ಮೂಲಗಳ ಮೂಲಕ ಹರಡುವ “ಇಂಧನ ಖಾಲಿಯಾಗುತ್ತಿದೆ” ಎಂಬ ತಪ್ಪು ಮಾಹಿತಿಯನ್ನು ಜನರು ನಂಬಬಾರದು. ಗಾಬರಿ ಬೇಡ: ತೈಲ…
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿದ್ದ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಎರಡು ದಿನಗಳಿಂದ ಅಂಗನವಾಡಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗೌರವಧನ ಹೆಚ್ಚಳ, ಎಲ್‌ಕೆಜಿ, ಯುಕೆಜಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಬಗ್ಗೆ ಸಚಿವರು ಪದಾಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿದರು. ಅಂಗನವಾಡಿ ಕೇಂದ್ರಗಳು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಬಗ್ಗೆ ಸರ್ಕಾರ ಸಾಕಷ್ಟು ಕಾಳಜಿ ವಹಿಸಿದೆ. ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು. ನಾನು ಎಲ್ಲರ ಹಿತರಕ್ಷಣೆಗೆ ಬದ್ಧಳಾಗಿದ್ದೇನೆ ಎಂದು ಸಚಿವರು ತಿಳಿಸಿದರು. ಈ ವೇಳೆ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ನಿರ್ದೇಶಕರಾದ ಮಹೇಶ್ ಬಾಬು,…
ಬೆಂಗಳೂರು : ಕಾಂತರಾ ಚಾಪ್ಟರ್ 1 ಪಾತ್ರದ ಬಗ್ಗೆ ಬಾಲಿವುಡ್ ರಣವೀರ್ ಸಿಂಗ್ ವಿರುದ್ಧ ದಾಖಲಾಗಿರುವ FIR ರದ್ದು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇಂದು ಹೈಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ದೂರುದಾರ ವಕೀಲ ಪ್ರಶಾಂತ್ ಮೆತಲ್ ರಣವೀರ್ ಸಿಂಗ್ ಚಾವುಂಡಿ ಬೆಟ್ಟಕ್ಕೆ ಭೇಟಿ ನೀಡಿ ಕ್ಷಮೆ ಕೇಳಬೇಕು ಎಂದು ವಾದಿಸಿದರು. ವಿಚಾರಣೆ ಸಂದರ್ಭದಲ್ಲಿ ತಮ್ಮ ಹೇಳಿಕೆಗೆ ಕ್ಷಮೆ ಕೋರಿ ರಣವೀರ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಎಂದು ಹೇಳಿದ್ದಾರೆ. ಅಲ್ಲದೆ ತಾವು ಕ್ಷಮೆ ಕೇಳಿದ ಕ್ಷಮಾಪಣಾ ಪ್ರಮಾಣ ಪತ್ರವನ್ನು ಕೋರ್ಟಿಗೆ ಸಲ್ಲಿಸುತ್ತೇನೆ ಎಂದಿದ್ದಾರೆ. ಚಾವುಂಡಿ ದೇವಾಲಯಕ್ಕೂ ಭೇಟಿ ನೀಡಿ ರಣವೀರ್ ಸಿಂಗ್ ಕ್ಷಮೆ ಕೇಳಬೇಕು. ನೈಜ ಪಶ್ಚಾತಾಪ ಇರಬೇಕು ಎಂದು ದೂರುದಾರ ಪ್ರಶಾಂತ ಮೆತಲ್ ವಾದ ಮಂಡಿಸಿದರು. ಈ ವೇಳೆ ಬಾಲಿವುಡ್ ನಟ ರಣವೀರ ಸಿಂಗ್ ಪರ ವಕೀಲರು, ದೇವಾಲಯಕ್ಕೆ ರಣವೀರ್ ಸಿಂಗ್ ಭೇಟಿ ನೀಡುತ್ತಾರೆ ಕ್ಷಮೆ ಕೇಳುತ್ತಾರೆ ಸಲ್ಲಿಸುವುದಾಗಿ ನಟ ರಣವೀರ್ ಸಿಂಗ್ ಪರ ವಕೀಲರು ಇದೇ…
ಬೆಂಗಳೂರು : ರಾಜ್ಯದ 5,950 ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲು ಪಟ್ಟಿ ಅಂತಿಮಗೊಳಿಸಲು ಕನಿಷ್ಠ ಮೂರು ತಿಂಗಳು ಕಾಲಾವಕಾಶ ಬೇಕೆಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮೌಖಿಕವಾಗಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಚುನಾವಣೆ ನಡೆಯುವುದು ಅನುಮಾನ ಎಂದು ಹೇಳಲಾಗಿದೆ. ನ್ಯಾಯಾಲಯವು ಸರ್ಕಾರದ ವಸ್ತುಸ್ಥಿತಿ ವರದಿಯನ್ನು ದಾಖಲಿಸಿಕೊಂಡು ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಿದೆ. ಹೌದು ವಾರ್ಡ್‌ಗಳ ವಿಂಗಡಣೆ ಮತ್ತು ಮೀಸಲಾತಿ ಪಟ್ಟಿ ಅಂತಿಮಗೊಳಿಸಲು ಸರ್ಕಾರಕ್ಕೆ ಹೆಚ್ಚಿನ ಸಮಯದ ಅಗತ್ಯವಿದೆ. ಚುನಾವಣೆ ವಿಳಂಬವಾಗುವುದರಿಂದ ಹಾಲಿ ಸದಸ್ಯರ ಅವಧಿ ಮುಕ್ತಾಯಗೊಂಡರೆ ಆಡಳಿತಾಧಿಕಾರಿಗಳ ನೇಮಕ ಅಥವಾ ಸದಸ್ಯರ ಮುಂದುವರಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಹೈಕೋರ್ಟ್ ವಿಭಾಗೀಯ ಪೀಠವು ಸರ್ಕಾರದ ವಾದವನ್ನು ಆಲಿಸಿ, ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಿದೆ. ಅವಧಿ ಮುಗಿದ ರಾಜ್ಯದ 5,950 ಗ್ರಾಮ ಪಂಚಾಯಿತಿ ಹಾಗೂ 187 ನಗರ ಸ್ಥಳೀಯ ಸಂಸ್ಥೆಗಳಿಗೆ ಸಕಾಲದಲ್ಲಿಸಾರ್ವತ್ರಿಕ ಚುನಾವಣೆ ನಡೆಸಲು ಆಯೋಗಕ್ಕೆ ಅನುಕೂಲವಾಗಲು ಅಂತಿಮ ಮೀಸಲು ಅಧಿಸೂಚನೆ ಹೊರಡಿಸಲು ತಕ್ಷಣ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಬೇಕು ಎಂದು ಕೋರಿ ರಾಜ್ಯ…
ಬೆಂಗಳೂರು : ಬೆಂಗಳೂರು ರಾಯಲ್ ಚಾಲೆಂಜರ್ಸ್ (RCB) ತಂಡದ ಈ ಬಾರಿಯ ಕ್ರೀಡಾ ಋತುವಿಗೆ ಕರ್ನಾಟಕ ಹಾಲು ಮಹಾಮಂಡಳಿ (KMF) ಅಧಿಕೃತ ಪಾಲುದಾರನಾಗಿ (Official Partner) ಒಪ್ಪಂದ ಮಾಡಿಕೊಂಡಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಅವರು ಅಧಿಕೃತವಾಗಿ ತಿಳಿಸಿದ್ದಾರೆ. ಈ ಮೂಲಕ ಸ್ಥಳೀಯ ಬ್ರ್ಯಾಂಡ್ ‘ನಂದಿನಿ’ಯನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಗುರುತಿಸುವಂತೆ ಮಾಡುವುದು ಮಂಡಳಿಯ ಉದ್ದೇಶವಾಗಿದೆ. 2026 ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದೆ ಈ ಮೂಲಕ ನಂದಿನಿ ಉತ್ಪನ್ನಗಳು ದೇಶಕ್ಕೆ ಪರಿಚಯವಾಗಲಿದೆ. ಆರ್‌ಸಿಬಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡವಾಗಿದೆ. ಹಾಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಂದಿನಿ ಉತ್ಪನ್ನ ಪರಿಚಯಿಸಲಾಗುತ್ತದೆ ಕೆಎಂಎಫ್ ಉತ್ಪನ್ನ ಪ್ರಚಾರಕ್ಕೆ ವಿರಾಟ್, ಕೊಹ್ಲಿ ರಜತ್ ಪಾಟೀದಾರ್, ದೇವದತ್ತ ಪಡಿಕಲ್ 4 ಕೋಟಿ ವೆಚ್ಚದಲ್ಲಿ ಕೆಎಂಎಫ್ ಒಂದು ವರ್ಷದ ಟೆಂಡರ್ ಪಡೆದಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಶಿವ ಸ್ವಾಮಿ ಹೇಳಿಕೆ ನೀಡಿದರು.
ಬೆಂಗಳೂರು : ರಾಜ್ಯದಲ್ಲಿ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಇಂದು ಕಂದಾಯ ಸಚಿವ ಕೃಷ್ಣಭೇರೇಗೌಡ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಯಿತು. * ಪೂರ್ವ ಮುಂಗಾರಿನಲ್ಲಿ 17 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ, 5 ಜಿಲ್ಲೆಗಳಲ್ಲಿ ಅಧಿಕ ಮಳೆ, 6 ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾಗಿದ್ದರೆ, 3 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದೆ. * ಪ್ರಸ್ತುತ ವರ್ಷ ಜೂನ್ ಜುಲೈ ತಿಂಗಳಲ್ಲಿ ವಾಡಿಕೆ ಮಳೆ ಆಗಲಿದೆ. * ತದನಂತರ ಮಳೆ ಕೊರತೆ ಎದುರಾಗುವ ಸಾಧ್ಯತೆ ಇದೆ. * ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಮಳೆ ಕೊರತೆಯಾಗಲಿದೆ. * ಈ ಬೇಸಿಗೆಯಲ್ಲಿ ಕರಾವಳಿ ಭಾಗದಲ್ಲಿ ವಾಡಿಕೆಗಿಂತ ತಾಪಮಾನ ಹೆಚ್ಚಾಗಲಿದೆ. * ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿಯ ತೀವ್ರತೆ ಹೆಚ್ಚಲಿದೆ. * ಮುಂಬರುವ ತಿಂಗಳು ಲಾ ನಿನಾ ಪರಿಸ್ಥಿತಿ ತಟಸ್ಥವಾಗುವ ನಿರೀಕ್ಷೆ ಇದೆ. * 2026ರ ಮೇ-ಜುಲೈ ವರೆಗೆ ಲಾ ನಿನಾ ತಟಸ್ಥವಾಗಿ ಮುಂದುವರೆಯುವ ಸಾಧ್ಯತೆ. *…
ಬೆಂಗಳೂರು: ಇರಾನ್ ಇಸ್ರೇಲ್ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ ಚಿನ್ನದ ಬೆಲೆ ಈಗ ಪಾತಾಳಕ್ಕೆ ಕುಸಿಯುತ್ತಿದ್ದು, 1 ಲಕ್ಷ ರೂ. ಸನಿಹಕ್ಕೆ ಬರುವಹಾಗಿದೆ. ಹೌದು. ವಾರ್ ಎಫೆಕ್ಟ್ (War Effect) ಗಗನಕ್ಕೇರಿದ ಚಿನ್ನ ಈಗ ಪಾತಾಳಕ್ಕೆ ಕುಸಿದಿದೆ. ಚಿನ್ನದ ದರ ಕುಸಿತವು ಹೆಂಗಳೆಯರ ಮುಖದಲ್ಲಿ ಮಂದಹಾಸ ಮೂಡಿಸುತ್ತಿದೆ. 10 ಗ್ರಾಂ ಗೆ ಯುದ್ಧದ ಪರಿಣಾಮದಿಂದ 30 ಸಾವಿರ ರೂ. ವರೆಗೆ ಇದ್ದ 24 ಕ್ಯಾರೆಟ್ ಚಿನ್ನದ ದರ ಕೊಂಚ ಇಳಿಕೆ ಕಂಡಿದ್ದರೆ, 22 ಕ್ಯಾರೆಟ್ ಚಿನ್ನವೂ 25 ಸಾವಿರದಷ್ಟು ಇಳಿಕೆಯಾಗಿದೆ. ನಗರ 22 ಕ್ಯಾರೆಟ್ (ಆಭರಣ ಚಿನ್ನ) 24 ಕ್ಯಾರೆಟ್ (ಶುದ್ಧ ಚಿನ್ನ) ಬೆಂಗಳೂರು ₹ 1,28,650 ₹ 1,40,350 ಮೈಸೂರು ₹ 1,28,650 ₹ 1,40,350 ಮಂಗಳೂರು ₹ 1,28,700 ₹ 1,40,400 ಕಲಬುರಗಿ ₹ 1,27,850 ₹ 1,39,570 ಬೆಲೆ ಇಳಿಕೆಗೆ ಪ್ರಮುಖ ಕಾರಣಗಳು: ಯುದ್ಧದ ಆತಂಕವಿದ್ದರೂ ಬೆಲೆ…
ಧಾರವಾಡ : ಮಾಜಿ ಶಾಸಕ ಬಾಬುರಾವ್ ಬೋಳ ಶೆಟ್ಟಿ ಪುತ್ರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಕಾರಿನಲ್ಲಿಯೇ ಸುಟ್ಟ ಸ್ಥಿತಿಯಲ್ಲಿ ರಾಜು ಬೋಳಶೆಟ್ಟಿ (53) ಶವ ಪತ್ತೆಯಾಗಿದೆ. ಧಾರವಾಡ ತಾಲೂಕಿನ ರಾಮಾಪುರ ಬಳಿಯ ಅರಣ್ಯದಲ್ಲಿ ಈ ಒಂದು ಘಟನೆ ನಡೆದಿದೆ. ರಾಜು ಬೋಳಶೆಟ್ಟಿ ಕೊಲೆ ಮಾಡಿ ದುಷ್ಕರ್ಮಿಗಳು ಕಾರಿನಲ್ಲಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಉಡಗೇರಿ ನಿವಾಸಿ ಆಗಿರುವ ರಾಜು ಬೋಳಶೆಟ್ಟಿ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಪುತ್ರ ಆಗಿದ್ದಾರೆ. ನಿರ್ಜನ ಪ್ರದೇಶದಲ್ಲಿ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗುತ್ತಿದ್ದು, ಸ್ಥಳಕ್ಕೆ ಧಾರವಾಡ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಪರಿಷತ್ ನಲ್ಲಿ ಇವ ನಮ್ಮ ಇವ ನಮ್ಮ ವಿಧೇಯಕ ಮೇಲೆ ಇಂದು ಚರ್ಚೆ ನಡೆಯಿತು ಕರ್ನಾಟಕ ವಿವಾಹದಲ್ಲಿ ಆಯ್ಕೆ ಸ್ವಾತಂತ್ರ ಹಾಗೂ ಮರ್ಯಾದೆ ಮತ್ತು ಸಂಪ್ರದಾಯ ಹೆಸರಿನಲ್ಲಿನ ಅಪರಾಧಗಳ ಪ್ರತಿಬಂಧಕ ಮತ್ತು ನಿಷೇಧ ಬಿಲ್ ಮೇಲೆ ಚರ್ಚೆ ನಡೆಯಿತು. ಈ ವೇಳೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಬ್ರಾಹ್ಮಣರನ್ನೇ ನಾವು ಜಾತಿವಾದಿ ಅಂತ ಹೇಳುವುದು ಎಂದು ಮಾತು ಆರಂಭಿಸಿದರು. ಯಲ್ಲಾಪುರದಲ್ಲಿ ಪ್ರೀತಿಸುವಂತೆ ಮಹಿಳೆಯನ್ನು ಓರ್ವ ಪೀಡಿಸುತ್ತಿದ್ದ. ಆಕೆ ನನಗೆ ಇಷ್ಟ ಇಲ್ಲ ಅಂತ ಹೇಳಿದ್ದಕ್ಕೆ ಕೊಂದುಬಿಟ್ಟ. ಸ್ವಾಮೀಜಿಗಳನ್ನು ನಾವು ದ್ವೇಷ ಮಾಡುವುದಿಲ್ಲ ನಾನು ಹುಟ್ಟಿದ ಮೇಲೆ ಜಾತಿ ವ್ಯವಸ್ಥೆ ಇದೆ ಅಂತ ಗೊತ್ತಾಯ್ತು. ನಮ್ಮೂರಿನ ದೇವಸ್ಥಾನವನ್ನೇ ನಾನು ನೋಡಿಲ್ಲ. ಶೇವಿಂಗ್ ಮಾಡಿಸಲು ಕಟಿಂಗ್ ಶಾಪ್ ಗೆ ಹೋದರೆ ಬೈದು ಕಳುಹಿಸಿದರು. ಯಾರ ಬಳಿಯು ಶೇವಿಂಗ್ ಮಾಡಿಸಲ್ಲ ನಾನೇ ಮಾಡಿಕೊಳ್ಳುತ್ತೇನೆ ಎಂದು ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಹೇಳಿಕೆ ನೀಡಿದರು.
ಬೆಂಗಳೂರು : ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕ ಸರ್ಕಾರ ಕೇರಳ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲೇ 10 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡಿದ್ದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.ಈ ವಿಚಾರವಾಗಿ ಬಿಜೆಪಿ ಮತ್ತು ಜೆಡಿಎಸ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಟ್ವೀಟ್ ನಲ್ಲಿ ಆಕ್ರೋಶ ಹೊರಹಾಕಿದೆ. ಅತಿಥಿ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನೀರಗಂಟಿಗಳಿಗೆ ಸಂಬಳ ಕೊಡಲು ಯೋಗ್ಯತೆ ಇಲ್ಲದ ಲೂಟಿಕೋರ ಕಾಂಗ್ರೆಸ್ ಸರ್ಕಾರ, ವಯನಾಡು ಭೂಕುಸಿತ ಸಂತ್ರಸ್ತರಿಗೆ 10 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡುವ ಮೂಲಕ ಕನ್ನಡಿಗರಿಗೆ ದ್ರೋಹ ಬಗೆದಿದೆ ಎಂದು ಬಿಜೆಪಿ ಸಿಟ್ಟು ಹೊರಹಾಕಿದೆ. ಅತಿಥಿ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನೀರಗಂಟಿಗಳಿಗೆ ಸಂಬಳ ಕೊಡಲು ಯೋಗ್ಯತೆ ಇಲ್ಲದ ಲೂಟಿಕೋರ @INCKarnataka ಸರ್ಕಾರ, ವಯನಾಡು ಭೂಕುಸಿತ ಸಂತ್ರಸ್ತರಿಗೆ ₹10 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡುವ ಮೂಲಕ ಕನ್ನಡಿಗರಿಗೆ ದ್ರೋಹ ಬಗೆದಿದೆ. ಕುರ್ಚಿ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿರುವ @siddaramaiah ನವರು ಹೈಕಮಾಂಡ್ ಮೆಚ್ಚಿಸಲು ಕನ್ನಡಿಗರ ತೆರಿಗೆ ದುಡ್ಡನ್ನು,…














