Subscribe to Updates
Get the latest creative news from FooBar about art, design and business.
Author: kannadanewsnow05
ಪಾಟ್ನಾ : ಪಾಟ್ನಾದಲ್ಲಿ ಭಾರಿ ವಿಮಾನ ದುರಂತ ಒಂದು ತಪ್ಪಿದ್ದು, ವಿಮಾನ ಲ್ಯಾಂಡಿಂಗ್ ವೇಳೆ ಅಪರಿಚಿತ ಲೇಸರ್ ಲೈಟ್ ಎಂದು ಪೈಲೆಟ್ ಗೊಂದಲಕ್ಕೆ ಒಳಗಾಗಿದ್ದಾರೆ. ಲ್ಯಾಂಡಿಂಗ್ ವೇಳೆ ವಿಮಾನವು ಬ್ಯಾಲೆನ್ಸ್ ಕಳೆದುಕೊಂಡಿದೆ. ಆದರೆ ಅದೃಷ್ಟವಶಾತ್ ಪೈಲೆಟ್ ಸಮಯ ಪ್ರಜ್ಞೆಯಿಂದ ಸರಿಯಾದ ಸಮಯಕ್ಕೆ ಹಾಗೂ ಸುರಕ್ಷಿತವಾಗಿ ವಿಮಾನ ಲ್ಯಾಂಡ್ ಆಗಿದ್ದು ಭಾರಿ ದುರಂತ ಒಂದು ತಪ್ಪಿದೆ. ಹೌದು ಇಂದು ಪಾಟ್ನಾದಲ್ಲಿ ಈ ಒಂದು ವಿಮಾನ ದುರಂತ ತಪ್ಪಿದೆ. ಫ್ಲೈಟ್ ಲ್ಯಾಡಿಂಗ್ ವೇಳೆ ಲೇಸರ್ ಲೈಟ್ ನಿಂದ ತೊಂದರೆ ಉಂಟಾಗಿದ್ದು, ಲೇಸರ್ ಲೈಟ್ ನಿಂದ ಪೈಲೆಟ್ ಗೊಂದಲಕ್ಕೆ ಒಳಗಾಗಿದ್ದಾರೆ. ಲ್ಯಾಂಡಿಂಗ್ ವೇಳೆ ವಿಮಾನ ಬ್ಯಾಲೆನ್ಸ್ ಕಳೆದುಕೊಂಡಿದೆ ಸಮಸ್ಯೆಯ ನಡುವೆಯೂ ಕೂಡ ಸುರಕ್ಷಿತವಾಗಿ ವಿಮಾನ ಲ್ಯಾಂಡ್ ಆಗಿದೆ. ಘಟನೆಯನ್ನು ಡಿಜಿಸಿಎ ತನಿಖೆಗೆ ಆದೇಶಿಸಿದ್ದಾರೆ.ಬಿಹಾರದ ಪಾಟ್ನಾ ಪೊಲೀಸರಿಂದ ಅಪರಿಚಿತ ವ್ಯಕ್ತಿಗಾಗಿ ಶೋಧ ಕೈಗೊಂಡಿದ್ದಾರೆ.
ಬೆಂಗಳೂರು : ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರವನ್ನು ಅಧಿಕಾರಿಗಳು ತೆಗೆಸಿದ ಪ್ರಕರಣ ಕರ್ನಾಟಕದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇದೆ ವಿಚಾರವಾಗಿ ಉನ್ನತ ಶಿಕ್ಷಣ ಸಚಿವ ಡಾ. ಎಂಸಿ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ನಿಜವೇ ಆದರೆ ಅದು ಅತಿರೇಕದ ವರ್ತನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಕ್ಯಾಬಿನೆಟ್ ಮೀಟಿಂಗ್ ನಲಿದ್ದೆ. ಹಾಗಾಗಿ ಈ ಘಟನೆ ಕುರಿತು ಇಂದು ಬೆಳಿಗ್ಗೆ ನನಗೆ ಮಾಹಿತಿ ಬಂದಿದೆ.ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ನಿಜವೇ ಆದರೆ ಅದು ಅತಿರೇಕದ ವರ್ತನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಯಾವುದೇ ಕೇಂದ್ರದಲ್ಲಿ ಆ ರೀತಿ ಆಗಿದ್ದರೆ ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಎಲ್ಲಾ ಜಾತಿ, ಧರ್ಮಗಳ ಆಚರಣೆ ಸಂಪ್ರದಾಯಕ್ಕೆ ಗೌರವ ಕೊಡಬೇಕು. ನಾನು ಈ ರೀತಿಯ ಘಟನೆಗಳಿಗೆಲ್ಲ ಪ್ರೋತ್ಸಾಹ ಕೊಡುವುದಿಲ್ಲ.…
ಬೆಂಗಳೂರು : ಬೆಂಗಳೂರು ನಗರದ ಕ್ವೀನ್ಸ್ ರಸ್ತೆಯ ರಾಜೀವ್ ಗಾಂಧಿ ಕಾಲೋನಿಯಲ್ಲಿ ಮಹಿಳೆಗೆ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದಿದ್ದ ಆರೋಪಿ ಕಾರ್ತಿಕ್‌ನನ್ನು ಶಿವಾಜಿನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಳೆದ ಏಪ್ರಿಲ್ 13 ರಂದು ಊಟ ಮುಗಿಸಿ ಎರಡನೇ ಮಹಡಿಗೆ ಮಲಗಲು ಓರ್ವ ಮಹಿಳೆ ತೆರಳುತ್ತಿದ್ದರು. ಈ ವೇಳೆ ಎದುರು ಮನೆಯಲ್ಲಿ ವಾಸವಾಗಿರುವ ಆರೋಪಿ ಕಾರ್ತಿಕ್ ಪ್ಯಾಂಟ್ ಬಿಚ್ಚಿ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದಿದ್ದ. ಇದನ್ನು ಪ್ರಶ್ನೆ ಮಾಡಿದ ಮಹಿಳೆ ಪತಿ ಮೇಲೆ ಮತ್ತು ಜಗಳ ಬಿಡಿಸಲು ಬಂದವರ ಮೇಲೂ ಆರೋಪಿ ಅಟ್ಯಾಕ್ ಮಾಡಿದ್ದ. ಎರಡನೇ ಮಹಡಿಯಿಂದ ಹಾಲೋ ಬ್ಲಾಕ್, ಹೂವಿನ ಪಾಟ್ ಕೆಳ ಮಹಡಿಯಲ್ಲಿದ್ದವರ ಮೇಲೆ ಎಸೆದಿದ್ದ. ಘಟನೆಯಲ್ಲಿ ಏಳು ಜನರಿಗೆ ಗಾಯವಾಗಿತ್ತು.ಇದೀಗ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಪ್ರಕರಣ ದಾಖಲಿಸಿಕೊಂಡ ಶಿವಾಜಿ ನಗರ ಪೊಲೀಸರು ಆರೋಪಿ ಕಾರ್ತಿಕ್‌ನನ್ನು ಬಂಧಿಸಿ, ಜೈಲಿಗಟ್ಟಿದ್ದಾರೆ. ವಿಚಾರಣೆ ವೇಳೆ ನಾನು ಮೂತ್ರವಿಸರ್ಜನೆ ಮಾಡುತ್ತಿದೆ. ಆ ಸಮಯದಲ್ಲಿ ಮಹಿಳೆ ಬಂದಿದ್ದಾಳೆ. ಈ ವೇಳೆ ಗಲಾಟೆಯಾಗಿದೆ ಎಂದು…
ಬೆಂಗಳೂರು : ಬೆಂಗಳೂರಿನಲ್ಲಿ ಅಮಾನವೀಯವಾದ ಘಟನೆ ಒಂದು ನಡೆದಿದ್ದು, ಪ್ರಿಯತಮನಿಂದ ಅಪ್ರಾಪ್ತೆಗೆ ಜನಿಸಿದ ಮಗು ಕಸದ ಬುಟ್ಟಿಯಲ್ಲಿ ಪತ್ತೆಯಾಗಿದೆ. ಈ ಒಂದು ಘಟನೆ ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಆರೋಪಿ ಯುವಕನನ್ನು ಅರೆಸ್ಟ್ ಮಾಡಿದ್ದು, ಆತನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. 21 ವರ್ಷ ಯುವಕನಿಂದ ಅಪ್ರಾಪ್ತೆ ಬಾಲಕಿ ಗರ್ಭಿಣಿಯಾಗಿದ್ದಾಳೆ. ನೆರೆಮನೆಯವರ ಸಹಾಯದಿಂದಲೇ ಮನೆಯಲ್ಲಿಯೇ ರಾತ್ರಿ ಬಾಲಕಿಗೆ ಹೆರಿಗೆ ಆಗಿದೆ. ಹೆರಿಗೆ ನಂತರ ಪೊರೆ ತೆರೆಯದ ಕಾರಣ ಮಗು ಸಾವನಪ್ಪಿದೆ ಎಂಬ ಆರೋಪ ಕೇಳಿ ಬಂದಿದೆ. ನಂತರ ಪ್ಲಾಸ್ಟಿಕ್ ಕವರ್ನಲ್ಲಿ ಹಾಕಿ ಕಸದ ಗಾಡಿಗೆ ಮಗುವನ್ನು ಡಂಪ್ ಮಾಡಿದ್ದಾರೆ. ಪಕ್ಕದ ಮನೆ ಅವರ ಕೈಗೆ ಕೊಟ್ಟು ಕಸದ ಲಾರಿಗೆ ಮಗುವನ್ನು ಎಸೆದಿದ್ದಾರೆ. ಯಲಹಂಕದ ಬಳಿ ತೊಟ್ಟಿಯಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಪ್ರತ್ಯಕ್ಷ ದರ್ಶಿಗಳ ಪ್ರಕಾರ ಮಗು ಸಾವನಪ್ಪಿತ್ತು. ಪೇಪರ್ ಆಯುವವರು ಬ್ಯಾಕ್ ಅತಿದಾಗ ಮಗು ಕೆಳಗಡೆ ಬಿದ್ದಿದೆ ತಕ್ಷಣ ಅವರು ಹೆದರಿ ಅಲ್ಲಿಂದ ಓಡಿ ಹೋಗಿದ್ದಾರೆ…
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಿನ್ನೆ ಸಿಇಟಿ ಪರೀಕ್ಷೆ ಬರೆಯುವ ಅಭ್ಯರ್ಥಿಯ ಜನಿವಾರವನ್ನು ತೆಗೆಸಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿ, ಯಾರು ಈ ರೀತಿ ನಡೆದುಕೊಂಡಿದ್ದಾರೋ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ಈ ರೀತಿ ನಿರ್ದೇಶನ ಕೊಡುವ ಅಧಿಕಾರ ಯಾರಿಗೂ ಇಲ್ಲ. ಅಲ್ಲದೆ ಈ ರೀತಿ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಹಾಗಾಗಿ ಸಂಬಂಧಪಟ್ಟ ಇಲಾಖೆ ಜೊತೆಗೆ ಮಾತನಾಡಿ ಕ್ರಮ ಕೈಗೊಳ್ಳಲಾಗುತ್ತದೆ. ನನ್ನ ಇಲಾಖೆ ಇಲ್ಲ ಅಂದರು ಕೂಡ ಸಂಬಂಧಪಟ್ಟ ಇಲಾಖೆಗೆ ಮಾತನಾಡಿ ನಮ್ಮ ಜಿಲ್ಲೆಯಲ್ಲಿ ಆಗುವುದರಿಂದ ಕಠಿಣವಾದ ಕ್ರಮ ತೆಗೆದುಕೊಳ್ಳುವ ಸೂಚನೆ ನೀಡಿದ್ದೇನೆ. ಈ ರೀತಿ ಮಾಡೋದು ಸರಿಯಲ್ಲ. ಇಂತಹ ವಿಷಯಗಳು ಬಹಳ ಸೂಕ್ತವಾದ ವಿಚಾರಗಳು ಇರುತ್ತವೆ. ಯಾವುದೇ ಜಾತಿ ಧರ್ಮಕ್ಕೆ ಆಗಲಿ ಗೌರವ ಕೊಡಬೇಕು. ನಮ್ಮ ಸರ್ಕಾರದಲ್ಲಿ ಈ ರೀತಿ ಆಗುತ್ತೆ ಎಂದರೆ…
ಬೆಂಗಳೂರು : ಇತ್ತೀಚಿಗೆ ಬೆಂಗಳೂರಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಬೆಂಗಳೂರಲ್ಲಿ ಯುವತಿ ಹಾಗು ಮಹಿಳೆ ಜೊತೆಗೆ ಅಸಭ್ಯವಾಗಿ ವರ್ತಿಸಿದ ಇಬ್ಬರು ಕಾಮುಕರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಪುಲಕೇಶಿ ನಗರದಲ್ಲಿ ಅಪರಿಚಿತ ಯುವತಿಯ ಜತೆ ಅನುಚಿತವಾಗಿ ವರ್ತಿಸಿದ ಆಟೋ ಚಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಅಪರಿಚಿತ ಯುವತಿ ತನ್ನ ಸ್ನೇಹಿತನ ಜತೆ ಅಂಗಡಿ ಮುಂದೆ ನಿಂತಿದ್ದಳು. ಈ ವೇಳೆ ಆಟೋ ಚಾಲಕ ಮಣಿ ಎಂಬಾತ ಫೋನ್ ನಂಬರ್ ಕೇಳಿದ್ದಲ್ಲದೇ, ಯುವತಿ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾನೆ. ಘಟನೆಯಿಂದ ಬೇಸತ್ತ ಯುವತಿ ಪುಲಕೇಶಿನಗರ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಆರೋಪಿ ಮಣಿಯನ್ನು ಪುಲಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಇತ್ತೀಚೆಗೆ ನಗರದ ಸುದ್ದಗುಂಟೆ ಪಾಳ್ಯದಲ್ಲಿ ಯುವಕನೊಬ್ಬ ಯುವತಿಗೆ ಕಿರುಕುಳ ನೀಡಿ ಪರಾರಿಯಾಗಿದ್ದ ಘಟನೆ ಸಾಕಷ್ಟು ಚರ್ಚೆ ಆಗಿತ್ತು. 10 ದಿನಗಳ ಬಳಿಕ ಆರೋಪಿಯನ್ನು ಬಂಧಿಸಲಾಗಿತ್ತು. ಇದೀಗ ಮತ್ತೊಂದು ಘಟನೆ ನಡೆದಿದೆ. ಮಹಿಳೆಗೆ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದಿದ್ದ ಯುವಕನ…
ಬೆಳಗಾವಿ : ಹೆಚ್ಚು ಕುಡಿತದ ಚಟಕ್ಕೆ ಬಿದ್ದಿದ್ದ ತಮ್ಮನನ್ನು ಅಣ್ಣ ಪ್ರಶ್ನಿಸಿದ್ದಾನೆ. ಇದೇ ವಿಚಾರಕ್ಕೆ ಅಣ್ಣ-ತಮ್ಮಂದಿರ ನಡುವೆ ಗಲಾಟೆ ನಡೆದು ಗಲಾಟೆ ವಿಕೋಪಕ್ಕೆ ತಿರುಗಿ ಅಣ್ಣ ಮಾರಕಾಸ್ತ್ರದಿಂದ ತಮ್ಮನನ್ನು ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಎಸ್ ಧಾಗೇರಾ ಗ್ರಾಮದಲ್ಲಿ ಒಂದು ಘಟನೆ ನಡೆದಿದೆ. ಮಾರಕಾಸ್ತ್ರದಿಂದ ಕೊಚ್ಚಿ ಲಕ್ಷ್ಮಣ ಬರಮ ಬಾಳೆಕುಂದ್ರಿ (28) ಭೀಕರ ಕೊಲೆಯಾಗಿದೆ. ಕೊಲೆ ಮಾಡಿದ ಅಣ್ಣ ಮಾರುತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಷ್ಟಪಟ್ಟು ದುಡಿದು ಅಣ್ಣತಮ್ಮಂದಿರು ಹೊಸದಾಗಿ ಮನೆ ಕಟ್ಟಿದ್ದರು. ತಂದೆ ಇಲ್ಲದೆ ಇಬ್ಬರು ಸಹೋದರರು ತಾಯಿಯ ಆರೈಕೆಯಲ್ಲಿ ಬೆಳೆದಿದ್ದರು. ಮನೆ ಕಟ್ಟಿ ಮದುವೆ ಮಾಡಿಕೊಡುವ ಪ್ಲಾನ್ ನಲ್ಲಿ ಇದ್ದರು. ತಮ್ಮ ಲಕ್ಷ್ಮಣ್ ಹೆಚ್ಚು ಕುಡಿಯುತ್ತಿದ್ದದ್ದನ್ನು ಅಣ್ಣ ಮಾರುತಿ ಪ್ರಶ್ನಿಸಿದ್ದಾನೆ. ಇಬ್ಬರ ನಡುವೆ ಇದೆ ವಿಚಾರಕ್ಕೆ ಗಲಾಟೆ ಆಗಿ ಸಹೋದರ ಮಾರುತಿ ತಮ್ಮನನ್ನೇ ಕೊಲೆ ಮಾಡಿದ್ದಾನೆ. ಎರಡು ದಿನದ ಹಿಂದೆ ನಡೆದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ…
ಶಿವಮೊಗ್ಗ : ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆಗೆ ಜನಿವಾರ ತೆಗೆಸಿರುವ ಆರೋಪ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಈ ಒಂದು ಘಟನೆ ನಡೆದಿದೆ ಎನ್ನಲಾಗಿದೆ. ತೀರ್ಥಹಳ್ಳಿಯ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷ ಕೇಂದ್ರದಲ್ಲಿ ನಿನ್ನೆ ಎರಡನೇ ದಿನದ ಸಿಇಟಿ ಪರೀಕ್ಷೆ ವೇಳೆ ಘಟನೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಗಾಯತ್ರಿ ದೀಕ್ಷೆ ಪಡೆದ ಜನಿವಾರವನ್ನು ತೆಗೆದಿಸಿದ್ದಕ್ಕೆ ಇದೀಗ ಆಕ್ರೋಶ ವ್ಯಕ್ತವಾಗಿದ್ದು, ಬ್ರಾಹ್ಮಣ ಮಹಾಸಭಾ ಮತ್ತು ವಿಪ್ರ ಸಂಘಟನೆ ಒಕ್ಕೂಟದಿಂದ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಇದೀಗ ಆಗ್ರಹಿಸಿದ್ದಾರೆ. ಪ್ರತಿಯೊಬ್ಬರಿಗೂ ಅವರದೇ ಆದಂತಹ ವೈಯಕ್ತಿಕ ಭಾವನೆಗಳಿರುತ್ತವೆ, ಈ ರೀತಿ ಮಾಡಿದವರ ವಿರುದ್ಧ ಸೂಕ್ತವಾದಂತಹ ಕ್ರಮ ಕೈಗೊಳ್ಳಿ ಎಂದು ಪರೀಕ್ಷಾ ಕೇಂದ್ರದ ಬಳಿ ಬ್ರಾಹ್ಮಣ ಮಹಾಸಭಾ ಮತ್ತು ವಿಪ್ರ ಸಂಘಟನೆ ಕೆಲವರು ಆಗ್ರಹಿಸಿದ್ದಾರೆ.
ಬೆಂಗಳೂರು : ರೀಲ್ಸ್ ಹುಚ್ಚಿಗೆ ಜನ ಏನು ಬೇಕಾದರೂ ಮಾಡೋಕೆ ಹೇಸುವುದಿಲ್ಲ. ಇದೀಗ ಬೆಂಗಳೂರು ನಗರದಲ್ಲಿ ಟ್ರಾಫಿಕ್ ನಡುವೆ ರಸ್ತೆ ದಾಟುವುದೇ ದೊಡ್ಡ ಸರ್ಕಸ್ ಮಾಡಿದಂಗೆ.ಇನ್ನು ಗಡಿಬಿಡಿಯಲ್ಲಿ ಸಿಗ್ನಲ್ ಪಾಲಿಸದೇ ರಸ್ತೆ ದಾಟಲು ಹೋಗಿ ಪ್ರಾಣ ಕಳೆದುಕೊಂಡವರ ಹಲವಾರು ಉದಾಹರಣೆಗಳಿವೆ. ಇದರ ಮಧ್ಯ ನಡು ರಸ್ತೆಯಲ್ಲಿಯೇ ವ್ಯಕ್ತಿಯೋರ್ವ ಚೇರ್ ಹಾಕಿಕೊಂಡು ಕುಳಿತು ಟೀ ಕುಡಿಯುತ್ತಾ ರೀಲ್ಸ್ ಮಾಡಿದ್ದಾನೆ. ಹೌದು ಈ ರೀಲ್ಸ್ ವೈರಲ್ ಆಗಿದ್ದು, ಅನೇಕರು ಈತನ ನಡೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಡಿಯೊ ಹಂಚಿಕೊಂಡು ಬೆಂಗಳೂರು ಪೊಲೀಸ್ ಎಕ್ಸ್ ಖಾತೆಯನ್ನು ಉಲ್ಲೇಖಿಸಿದ್ದರು. ಇದರ ಆಧಾರದ ಮೇಲೆ ದೂರು ದಾಖಲಿಸಿಕೊಂಡು ಕ್ರಮಕ್ಕೆ ಮುಂದಾದ ಹಲಸೂರು ಗೇಟ್ ಉಪ ವಿಭಾಗದ ಎಸ್ ಜೆ ಪಾರ್ಕ್ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಪ್ರಚಾರದ ತೆವಲಿಗೆ ಕಳೆದ ಏಪ್ರಿಲ್ 12 ರಂದು ವಾಹನ ಸಂಚಾರ ಹೆಚ್ಚಾಗಿರುವ ಎಸ್.ಜೆ.ಪಾರ್ಕ್ ಬಳಿ ರಸ್ತೆಯಲ್ಲಿ ರೀಲ್ಸ್ ಮಾಡುತ್ತಾ ಕಿರಿಕ್ ಮಾಡಿದ್ದ. ನಂತರ ಆ ರೀಲ್ಸ್ ಅನ್ನು ತನ್ನ ಇನ್‌ಸ್ಟಾಗ್ರಾಮ್ ಖಾತೆ simbu_str_123…
ಬೆಂಗಳೂರು : ಇತ್ತೀಚಿಗೆ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ತನಿಖೆಯಲ್ಲಿ ಇರುವಾಗಲೇ ಬೆಂಗಳೂರಿನಲ್ಲಿ ಮತ್ತೊರ್ವ ಬಿಜೆಪಿ ಕಾರ್ಯಕರ್ತ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಫೇಸ್ಬುಕ್ ನಲ್ಲಿ ವಿಡಿಯೋ ಮಾಡಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮರಕ್ಕೆ ನೇಣು ಬಿಗಿದುಕೊಂಡು ಪ್ರವೀಣ್ ಗೌಡ ಬೇಲೂರು (35) ಆತ್ಮಹತ್ಯೆಗೆ ಶರಣಾಗಿದ್ದಾರೆ. ಆನೇಕಲ್ ಪಟ್ಟಣದ ಎಸ್ವಿಎಂ ಸ್ಕೂಲ್ ಬಳಿ ಈ ಒಂದು ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಪಟ್ಟಣದ ಎಸ್ವಿಎಂ ಸ್ಕೂಲ್ ಬಳಿ ಸಾವಿಗೆ ಕಾರಣರಾದವರ ಹೆಸರುಗಳನ್ನು ವಿಡಿಯೋದಲ್ಲಿ ರೆಕಾರ್ಡ್ ಮಾಡಿ ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಡಿಯೋದಲ್ಲಿ ಏನಿದೆ? ಕಳೆದ ಎರಡು ತಿಂಗಳಿನಿಂದ ಮಾನಸಿಕವಾಗಿ ನೊಂದಿದ್ದೇನೆ. ನನ್ನ ಸಾವಿಗೆ ಕೆಲವರು ನೇರವಾಗಿ ಕಾರಣರಾಗಿದ್ದಾರೆ. ಸಮಂದೂರ್ ಕಿರಣ್, ಗೋಕುಲ್ ಪ್ಯಾಶನ್ ಹರೀಶ್, ಭಾಸ್ಕರ್, ನಾರಾಯಣಪ್ಪ ದೊಡ್ಡಹಾಗಡೆ, ಮಧುಗೌಡ,ಳ್ ಹಾಗು ಸರವಣ ಎಂಬುವವರ ಹೆಸರು ವಿಡಿಯೋದಲ್ಲಿ…














