Subscribe to Updates
Get the latest creative news from FooBar about art, design and business.
Author: kannadanewsnow05
ಧಾರವಾಡ : ಧಾರವಾಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಾಚಾಪುರ ಬಳಿ ನಡೆದಿದೆ. ಮೃತರನ್ನು ಮಂಜುನಾಥ (19) ಮತ್ತು ಬಸವರಾಜ ಸೋಮಣ್ಣನವರ (36) ಎಂದು ತಿಳಿದು ಬಂದಿದೆ. ಬಸವರಾಜ್ ಮೂಲತಃ ಕಲಘಟಗಿ ತಾಲೂಕಿನ ತಾವರಗೇರಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದ್ದು, ಮಂಜುನಾಥ್ ಧಾರವಾಡ ಜಿಲ್ಲೆಯ ಜೋಗೆಲ್ಲಾಪುರ ಮೂಲದ ನಿವಾಸಿ ಎಂದು ತಿಳಿದುಬಂದಿದೆ. ಇನ್ನು ಈ ಒಂದು ಭೀಕರ ಅಪಘಾತದಲ್ಲಿ ಮತ್ತಿಬ್ಬರಿಗೆ ಗಾಯವಾಗಿದ್ದು, ತಕ್ಷಣ ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕಲಘಟಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ನಿನ್ನೆ ಬೆಂಗಳೂರಲ್ಲಿ ಮೆಟ್ರೋ ಕಾಮಗಾರಿಯ ವಯಾಡೆಕ್ಟ್ ಕೆಳಗೆ ಬಿದಿದ್ದು, ಪರಿಣಾಮ ರಸ್ತೆಯಲ್ಲಿ ನಿಂತಿದ್ದ ಆಟೋ ಮೇಲೆ ಬಿದ್ದು, ಆಟೋ ಚಾಲಕ ಸಾವನಪ್ಪಿದ್ದ ಘಟನೆ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ FIR ದಾಖಲಾಗಿದೆ. ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಲಾರಿ ಚಾಲಕ, NCC ಕಂಪನಿ ಮ್ಯಾನೇಜರ್ ಮತ್ತು ಗುತ್ತಿಗೆದಾರನ ವಿರುದ್ಧ FIR ದಾಖಲಾಗಿದೆ. BNS 281, 106 ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಂಗಳೂರಿನ ಯಲಹಂಕದ ಕೋಗಿಲು ಕ್ರಾಸ್ ಬಳಿ ಈ ಒಂದು ಘಟನೆ ನಡೆದಿತ್ತು. ಘಟನೆಯಲ್ಲಿ ಆಟೋ ಚಾಲಕ ಖಾಸಿಂಸಾಬ್ ಸ್ಥಳದಲ್ಲೇ ಮೃತಪಟ್ಟಿದ್ದ. ಘಟನೆ ಹಿನ್ನೆಲೆ ನಿನ್ನೆ ಮೆಟ್ರೋ ಕಾಮಗಾರಿ ಎಡವಟ್ಟಿಗೆ ಆಟೋ ಚಾಲಕ ಬಲಿಯಾಗಿರುವ ಘಟನೆ ಕೋಗಿಲು ಕ್ರಾಸ್ ಬಳಿ ನಡೆದಿತ್ತು. ಕಾಸಿಂ ಸಾಬ್ (35) ಮೃತ ದುರ್ದೈವಿಯಾಗಿದ್ದು, ರಾತ್ರಿ ಮೆಟ್ರೋ ಕಾಮಗಾರಿಗೆಂದು ಲಾರಿಯಲ್ಲಿ ವಯಾಡೆಕ್ಟ್ ತರಲಾಗುತಿತ್ತು. ವಯಾಡೆಕ್ಟ್ ಕೆಳಗೆ ಬಿದಿದ್ದು,…
ಗದಗ : ಕ್ಷುಲ್ಲಕ ಕಾರಣಕ್ಕೆ ಯುವಕರು ದೊಣ್ಣೆಗಳಿಂದ ಹೊಡೆದಾಡಿಕೊಂಡ ಘಟನೆ ಗದಗ ನಗರದ ಎಸ್ಎಮ್ ಕೃಷ್ಣ ಕಾಲೋನಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಘಟನೆಯಲ್ಲಿ ಹಲವು ಯುವಕರಿಗೆ ಗಂಭೀರವಾದ ಗಾಯಗಳಾಗಿದ್ದು ತಕ್ಷಣ ಅವರನ್ನು ಜಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ಗುಂಪುಗಳ ಗಲಾಟೆ ನೋಡಿ ಸ್ಥಳೀಯರು ಸಹಜವಾಗಿ ಭಯಭೀತರಾಗಿದ್ದಾರೆ. ಗಾಂಜಾ ಸೇವನೆ ಮಾಡಿ ರೌಡಿಸಂ ಮಾಡುತ್ತಿರುವ ಬಗ್ಗೆ ಇದೀಗ ಶಂಕೆ ವ್ಯಕ್ತವಾಗಿದೆ. ಬೆಟಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.
ನವದೆಹಲಿ : ಶೀಘ್ರದಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದ್ದು, ಈ ತಿಂಗಳಾಂತ್ಯಕ್ಕೆ ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಆಗುವ ಸಾಧ್ಯತೆ ಇದೆ. ಈ ಸಂಬಂಧ ಕೇಂದ್ರ ಸಚಿವ ಅಮಿತ್ ಷಾ ಮತ್ತು ಜೆಪಿ ನಡ್ದ ಸಭೆ ಕರೆದಿದ್ದಾರೆ ಎನ್ನಲಾಗಿದೆ. ಇದೆ ವೇಳೆ 15 ರಾಜ್ಯಗಳ ಬಿಜೆಪಿ ಘಟಕಗಳ ಅಧ್ಯಕ್ಷರ ಆಯ್ಕೆ ಬಗ್ಗೆಯೂ ಈ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಕರ್ನಾಟಕ, ಉತ್ತರಪ್ರದೇಶ, ಮಧ್ಯಪ್ರದೇಶ, ಗುಜರಾತ್ ಹಾಗು ಓಡಿಸ್ಸಾ ಸೇರಿದಂತೆ 15 ರಾಜ್ಯಗಳ ಬಿಜೆಪಿ ಅಧ್ಯಕ್ಷರ ಚುನಾವಣೆಯ ಬಗ್ಗೆ ಚರ್ಚೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಹುಬ್ಬಳ್ಳಿ : ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಒಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹುಬ್ಬಳ್ಳಿಯ ಹೊರವಲಯದ ನೇಕಾರ ನಗರದ ಬಳಿ ಈ ಒಂದು ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿದೆ. ಸವಣೂರಿನಿಂದ ಬಸ್ ವಾಸ್ಕೋಕೆ ತೆರಳುತ್ತಿತ್ತು.ಘಟನೆ ಕುರಿತು ಹುಬ್ಬಳ್ಳಿಯ ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಅಕ್ರಮವಾಗಿ ಗಣಿಗಾರಿಕೆ ಮಾಡುತ್ತಿದ್ದ ವೇಳೆ ಗುಡ್ಡದ ಮೇಲಿನ ಬೃಹತ್ ಬಂಡೆಗಳು ಉರುಳಿಬಿದ್ದ ಪರಿಣಾಮ ಗಣಿಗಾರಿಕೆ ಮಾಡುತ್ತಿದ್ದ ಹಲವು ಕಾರ್ಮಿಕರು ಸಿಲುಕಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಡ್ರಾಮಿ ಗ್ರಾಮದಲ್ಲಿ ನಡೆದಿದೆ. ಹೌದು ನಿನ್ನೆ ರಾತ್ರಿ 10 ಗಂಟೆಯ ಸುಮಾರಿಗೆ ಸವದತ್ತಿ ತಾಲ್ಲೂಕಿನ ಯಡ್ರಾವಿ ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ನಡೆದ ಸಂದರ್ಭದಲ್ಲಿ, ಗುಡ್ಡದ ಮೇಲಿನ ಬೃಹತ್ ಬಂಡೆಗಳು ಉರುಳಿಬಿದ್ದಿವೆ. ಇದರಿಂದ ಒಂದು ಜೆಸಿಬಿ ಹಾಗೂ ಟ್ರ್ಯಾಕ್ಟರ್ ಸಂಪೂರ್ಣ ನಜ್ಜುಗುಜ್ಜಾಗಿವೆ. ಬಂಡೆಗಲ್ಲುಗಳ ಮಧ್ಯೆ ಅಕ್ರಮ ಗಣಿಕಾರಿಗೆ ನಡೆಸಿದವರು ಸಿಕ್ಕಿಕೊಂಡ ಅನುಮಾನ ಇದೆ. ರಾತ್ರಿ ಗುಡ್ಡದ ಪಕ್ಕದಲ್ಲಿ ಅಕ್ರಮವಾಗಿ ಗಣಿಗಾರಿಗೆ ನಡೆಯುತ್ತಿತ್ತು. ಏಕಾಏಕಿ ಬೃಹತ್ ಬಂಡೆಗಳು ಗುಡ್ಡದ ಮೇಲಿಂದ ಉರುಳಿದವು. ವಿಷಯ ತಿಳಿದ ಸವದತ್ತಿ ಅಗ್ನಿಶಾಸಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಆಗ ನಜ್ಜುಗುಜ್ಜಾದ ವಾಹನಗಳು ಸಿಕ್ಕವು. ಆದರೆ, ಬಂಡೆಗಲ್ಲುಗಳ ಮಧ್ಯೆ ಯಾರಾದರೂ ಸಿಕ್ಕಿಕೊಂಡಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಘಟನೆ ಕುರಿತಂತೆ ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಕೊಪ್ಪಳ : ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪುರಸಭೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಅಮಾನತು ಮಾಡಿ ಕೊಪ್ಪಳ ಜಿಲ್ಲಾಧಿಕಾರಿ ನಳಿನ್ ಅತುಲ್ ಆದೇಶ ಹೊರಡಿಸಿದ್ದಾರೆ. ಎಂ.ಎನ್ ಖಾಜಾ ಹುಸೇನ್, ರಾಘವೇಂದ್ರ ಬೇವಿನಾಳ ಅಧಿಕಾರಿಗಳು ಅಮಾನತುಗೊಂಡಿದ್ದಾರೆ. ಹಿರಿಯ ಅಧಿಕಾರಿಗಳ ಸಭೆ ಮತ್ತು ವಾಣಿಜ್ಯ ಮಳಿಗೆ ಹರಾಜು ವೇಳೆ ಇಬ್ಬರು ಅಧಿಕಾರಿಗಳು ಆಗಿದ್ದರು ಕಂದಾಯ ವಸುಲಿಗೆ ಟಾರ್ಗೆಟ್ ನೀಡಿದ್ದರೂ ಕೂಡ ವಿಳಂಬ ಮಾಡಿದ್ದಾರೆ ಈ ಹಿನ್ನಲೆಯಲ್ಲಿ ಇಬ್ಬರನ್ನು ಇದೀಗ ಅಮಾನತು ಮಾಡಲಾಗಿದೆ.
ಕೊಪ್ಪಳ : ರಾಜ್ಯದಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದು, ನಿನ್ನೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿ ಕೆಲಕಾಲ ವಾಹನ ಸವಾರರು ಪರದಾಟ ನಡೆಸಿದ್ದ ಘಟನೆ ನಡೆದಿತ್ತು. ಇದೀಗ ಕೊಪ್ಪಳ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಘೋರ ಘಟನೆ ಒಂದು ನಡೆದಿದ್ದು ಮಳೆಯಿಂದಾಗಿ ಮನೆ ಗೋಡೆ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕೋಷ್ಟಗಿ ತಾಲೂಕಿನ ನಂದಿಹಾಳ ಗ್ರಾಮದಲ್ಲಿ ನಡೆದಿದೆ. ನಂದಿಹಾಳದಲ್ಲಿ ಮಳೆಗೆ ಮನೆ ಗೋಡೆ ಕುಸಿದು ವ್ಯಕ್ತಿ ಸಾವನ್ನಪ್ಪಿದ್ದಾರೆ. ನಂದಿಹಾಳ ಗ್ರಾಮದ ಶರಣಪ್ಪ ಭಾವಿಕಟ್ಟಿ (38) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕುಷ್ಟಗಿ ತಹಸೀಲ್ದಾರ್ ಮತ್ತು ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಜಾತಿ ಗಣತಿ ವರದಿ ಜಾರಿ ಸಂಬಂಧ ಈಗಾಗಲೇ ಹಿಂದಿನ ಸಂಪುಟ ಸಭೆಯಲ್ಲಿ ವರದಿ ಮಂಡನೆಯಾಗಿದ್ದು, ಹಲವು ಸಚಿವರು ಪರ ಮತ್ತು ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಬಳಿಕ ಏಪ್ರಿಲ್ 17ರಂದು ಅಂದರೆ ಇಂದು ರಾಜ್ಯ ಸರ್ಕಾರ ವಿಶೇಷ ಸಂಪುಟ ಸಭೆ ನಿಗದಿ ಮಾಡಿತ್ತು. ಈ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಶೇಷ ಸಂಪುಟ ಸಭೆ ನಡೆಯಲಿದೆ.ಹಾಗಾಗಿ ಇಡೀ ರಾಜ್ಯದ ಜನತೆಯ ಚಿತ್ತ ರಾಜ್ಯ ಸರ್ಕಾರ ಏನು ನಿರ್ಧಾರ ತೆಗೆದುಕೊಳ್ಳಲಿದೆ ಎನ್ನುವುದರ ಮೇಲಿದೆ. ಈಗಾಗಲೇ ಈ ಒಂದು ಜಾತಿ ಗಣತಿ ವರದಿ ಜಾರಿ ಸಂಬಂಧ ಸ್ವಪಕ್ಷ ಕಾಂಗ್ರೆಸ್ ನಲ್ಲಿಯೇ ಹಲವು ಸಚಿವರು ಶಾಸಕರು ಬೆಂಬಲ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಜಾತಿ ಗಣತಿ ಅಂಕಿ ಅಂಶ ಕೂಡ ಕೆಲವು ದಿನಗಳ ಹಿಂದೆ ಬಹಿರಂಗವಾಗಿದ್ದು, ಮುಸ್ಲಿಮರು ಅತ್ಯಧಿಕ ಜನಸಂಖ್ಯೆ ಹೊಂದಿದ್ದಾರೆ ಎನ್ನಲಾಗಿದೆ. ಜಾತಿಗಣತಿ ವರದಿ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾಗಲಿ ಎಂದು ಸತೀಶ್ ಜಾರಕಿಹೊಳಿ ಸೇರಿದಂತೆ ಇತರೆ ಸಚಿವರಿಂದ ಒತ್ತಾಯ…
ರಾಮನಗರ : ರಾಮನಗರ ಜಿಲ್ಲೆಯಲ್ಲಿ ಪುಂಡರ ವ್ಹಿಲಿಂಗ್ ಹಾವಳಿ ಹೆಚ್ಚಾಗಿದ್ದು,ಇದೀಗ ಬೈಕ್ ವ್ಹಿಲಿಂಗ್ ಮಾಡುತ್ತಿದ್ದ ಪುಂಡರನ್ನು ಹಿಡಿಯಲು ಹೋದ ಪೊಲೀಸರ ಮೇಲೆ ಹಲ್ಲೆ ನಡೆಸಲಾಗಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ಬೈಕ್ ಕಿತ್ತುಕೊಂಡು ಹೋಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಸಂಬಂಧ ಬೈಕ್ ವ್ಹಿಲಿಂಗ್ ಮಾಡುತ್ತಿದ್ದ ಪ್ರಮುಖ ಆರೋಪಿಯ ತಂದೆಯನ್ನು ರಾಮನಗರ ಪೊಲೀಸರು ಬಂಧಿಸಿದ್ದು, ಈ ಸಂಬಂಧ 6 ಜನರ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ. ಈ ಒಂದು ಘಟನೆ ರಾಮನಗರದ ಯಾರಬ್ ನಗರದಲ್ಲಿ ನಡೆದಿದ್ದು. ಚನ್ನಪಟ್ಟಣದ ಸಂಚಾರಿ ಠಾಣೆ ಪೊಲೀಸರಾದ ಜಯಕುಮಾರ್ ಹಾಗೂ ಬಸವರಾಜ್ ಮೇಲೆ ಹಲ್ಲೆ ನಡೆಸಿ ಬೈಕ್ ಕಿತ್ತುಕೊಂಡು ಹೋದ ಆರೋಪ ಕೇಳಿ ಬಂದಿದೆ. ಸೈಫ್ ಖಾನ್ ಮತ್ತು ಆತನ ಗ್ಯಾಂಗ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ರಾಮನಗರದ ಬೀಡಿ ಕಾಲೋನಿ ನಿವಾಸಿಯಾಗಿರುವ ಸೈಫ್ ಖಾನ್ ಚನ್ನಪಟ್ಟಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಬೈಕ್ ವೀಲಿಂಗ್ ಮಾಡುತ್ತಿದ್ದರು. ಈ ಬಗ್ಗೆ ಚನ್ನಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಸೈಫ್ ಖಾನ್…













