Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಜಾತಿ ಗಣತಿ ವರದಿ ಜಾರಿ ಸಂಬಂಧ ಈಗಾಗಲೇ ಹಿಂದಿನ ಸಂಪುಟ ಸಭೆಯಲ್ಲಿ ವರದಿ ಮಂಡನೆಯಾಗಿದ್ದು, ಹಲವು ಸಚಿವರು ಪರ ಮತ್ತು ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಬಳಿಕ ಏಪ್ರಿಲ್ 17ರಂದು ಅಂದರೆ ಇಂದು ರಾಜ್ಯ ಸರ್ಕಾರ ವಿಶೇಷ ಸಂಪುಟ ಸಭೆ ನಿಗದಿ ಮಾಡಿತು ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಶೇಷ ಸಂಪುಟ ಸಭೆ ನಡೆಯಲಿದೆ. ಈಗಾಗಲೇ ಈ ಒಂದು ಜಾತಿ ಗಣತಿ ವರದಿ ಜಾರಿ ಸಂಬಂಧ ಸ್ವಪಕ್ಷ ಕಾಂಗ್ರೆಸ್ ನಲ್ಲಿಯೇ ಹಲವು ಸಚಿವರು ಶಾಸಕರು ಬೆಂಬಲ ವ್ಯಕ್ತಪಡಿಸಿದರೆ ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಜಾತಿ ಗಣತಿ ಅಂಕಿ ಅಂಶ ಕೂಡ ಕೆಲವು ದಿನಗಳ ಹಿಂದೆ ಬಹಿರಂಗವಾಗಿದ್ದು, ಮುಸ್ಲಿಮರು ಅತ್ಯಧಿಕ ಜನಸಂಖ್ಯೆ ಹೊಂದಿದ್ದಾರೆ ಎನ್ನಲಾಗಿದೆ. ಜಾತಿಗಣತಿ ವರದಿ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾಗಲಿ ಎಂದು ಸತೀಶ್ ಜಾರಕಿಹೊಳಿ ಸೇರಿದಂತೆ ಇತರೆ ಸಚಿವರಿಂದ ಒತ್ತಾಯ ಕೇಳಿ ಬಂದಿದೆ.ಇಂದು ಕ್ಯಾಬಿನೆಟ್ ನಲ್ಲಿ ವಿಶೇಷ ಅಧಿವೇಶನಕ್ಕೆ ಒತ್ತಾಯ ಮಾಡುವ ಸಾಧ್ಯತೆ ಇದೆ. ಸದನದಲ್ಲಿ…
ಬೆಂಗಳೂರು : ಜೂನ್ 1, 2025 ರ ವೇಳೆಗೆ 5 ವರ್ಷ 5 ತಿಂಗಳು ವಯಸ್ಸಿನ ಮತ್ತು ಪ್ರಿ ಪ್ರೈಮರಿ ಉತ್ತೀರ್ಣರಾದ ವಿದ್ಯಾರ್ಥಿಗಳು ಈ ವರ್ಷಕ್ಕೆ ಮಾತ್ರ 1 ನೇ ತರಗತಿ ಪ್ರವೇಶಕ್ಕೆ ಅರ್ಹರು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ಜೂನ್ 1, 2025 ರ ವೇಳೆಗೆ 5 ವರ್ಷ 5 ತಿಂಗಳು ವಯಸ್ಸಿನ ಮತ್ತು ಪ್ರಿ ಪ್ರೈಮರಿ ಉತ್ತೀರ್ಣರಾದ ಮಕ್ಕಳು 1 ನೇ ತರಗತಿ ಪ್ರವೇಶಕ್ಕೆ ಅರ್ಹರಾಗಿರುತ್ತಾರೆ – ಆದರೆ 2025-26 ರ ಶೈಕ್ಷಣಿಕ ವರ್ಷಕ್ಕೆ ಮಾತ್ರ ಅನ್ವಯಿಸುತ್ತದೆ ಎಂದು ಹೇಳಿದರು. ವಯಸ್ಸಿನ ಮಾನದಂಡಗಳಲ್ಲಿ ಇದು ಒಂದು ಬಾರಿಯ ಸಡಿಲಿಕೆಯಾಗಿದ್ದು, 2025-26 ರ ಶೈಕ್ಷಣಿಕ ವರ್ಷಕ್ಕೆ ಮಾತ್ರ ಅನ್ವಯಿಸುತ್ತದೆ ಎಂದು ಹೇಳಿದರು ಎಂದು ಸಚಿವರು ಹೇಳಿದರು.ಪ್ರಮಾಣಿತ ಕನಿಷ್ಠ ವಯಸ್ಸಿನ ಅವಶ್ಯಕತೆ ಆರು ವರ್ಷಗಳು 2026-27 ರಿಂದ ಜಾರಿಯಲ್ಲಿರುತ್ತದೆ. ಈ ಸಡಿಲಿಕೆ ರಾಜ್ಯ ಮಂಡಳಿಯ ಅಡಿಯಲ್ಲಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ…
ಬೆಂಗಳೂರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ಎರಡನೇ ಪರೀಕ್ಷೆಗೆ ನೋಂದಾಯಿಸಿಕೊಂಡ ಶೇ.92.4 ರಷ್ಟು ಅನುತ್ತೀರ್ಣ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಇನ್ನೂ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯಲು ಅರ್ಹರಾಗಿದ್ದಾರೆ ಎಂದು ಹೇಳಿದರು.ಇದು ಪಿಯುಸಿಯ ಮೊದಲ ಪರೀಕ್ಷೆಗಳಲ್ಲಿ ವಿಫಲರಾದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮುಂದುವರಿಸಲು ಗಮನಾರ್ಹ ಅವಕಾಶವನ್ನು ಒದಗಿಸುತ್ತದೆ. ಪ್ರಾಥಮಿಕ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗದ 1,69,353 ವಿದ್ಯಾರ್ಥಿಗಳಲ್ಲಿ, ಹೆಚ್ಚಿನವರು ಈಗ ಏಪ್ರಿಲ್ 24 ರಿಂದ ಮೇ 8 ರ ನಡುವೆ ನಡೆಯಲಿರುವ ದ್ವಿತೀಯ ಪರೀಕ್ಷೆಗೆ ದಾಖಲಾಗಿದ್ದಾರೆ. ಈ ದ್ವಿತೀಯ ಪರೀಕ್ಷೆಯ ಫಲಿತಾಂಶಗಳನ್ನು ಸಿಇಟಿ ಫಲಿತಾಂಶದ ಮುನ್ನ ಪ್ರಕಟಿಸಲಾಗುವುದು. “ದ್ವಿತೀಯ ಪಿಯುಸಿ ಎರಡನೇ ಪರೀಕ್ಷೆಯ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲು ಸಿಇಟಿ ಅಧಿಕಾರಿಗಳು ಕಾಯುವುದಾಗಿ ತಿಳಿಸಿದ್ದಾರೆ, ಎರಡನೇ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಅವರ ಅರ್ಹತೆಯನ್ನು ಖಚಿತಪಡಿಸಿಕೊಳ್ಳುತ್ತಾರೆ” ಎಂದು ಸಚಿವ ಬಂಗಾರಪ್ಪ ಹೇಳಿದರು. ಇದಲ್ಲದೆ, ಜೂನ್ 9 ರಿಂದ ಜೂನ್ 20 ರವರೆಗೆ ಮೂರನೇ ಪರೀಕ್ಷೆಯನ್ನು ನಿಗದಿಪಡಿಸಲಾಗಿದ್ದು, ಜೂನ್…
ಬೆಂಗಳೂರು : ಇಂದಿನಿಂದ ಮುಂದಿನ 5 ದಿನ ಸಂಜೆ, ರಾತ್ರಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 5 ದಿನ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಈ ಕುರಿತು ಮುನ್ಸೂಚನೆ ನೀಡಿದೆ. ಗುಡುಗು ಸಹಿತ ಭಾರಿ ಮಳೆ ಆಗುವ ಮುನ್ಸೂಚನೆ ನೀಡಿದೆ. ಇನ್ನು ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವಡೆ ಹಗುರ ಮಳೆ ಆಗುವ ಸಾಧ್ಯತೆ ಇದ್ದು ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳ ಕಾಲ ಸಂಜೆ ಮತ್ತು ರಾತ್ರಿಯ ವೇಳೆ ಮಳೆ ಆಗುವ ಸಾಧ್ಯತೆ ಇದೆ ಏಪ್ರಿಲ್ 20ರವರೆಗೆ ಬೆಂಗಳೂರಿನಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಧಾರಾಕಾರ ಮಳೆ ಇಂದು ಬೆಂಗಳೂರಿನಲ್ಲಿ ಸಂಜೆ ಧಾರಾಕಾರವಾಗಿ ಮಳೆ ಸುರಿಯಿತು ಬೆಂಗಳೂರಿನ ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್, ಮೆಜೆಸ್ಟಿಕ್, ಜೆಪಿ ನಗರ,ಜಯನಗರ, ವಿಜಯನಗರ, ರಾಜಾಜಿನಗರ ಮಹದೇವಪುರ ಕೆ ಆರ್…
ಉತ್ತರಪ್ರದೇಶ : ಇತ್ತೀಚಿಗೆ ಗುಜರಾತಿನ ವಾರಣಾಸಿಯಲ್ಲಿ 23 ಜನರು 19 ವರ್ಷದ ಯುವತಿಯ ಮೇಲೆ ಸತತವಾಗಿ 5 ದಿನಗಳ ಕಾಲ ಅತ್ಯಾಚಾರ ಎಸಗಿದ್ದ ಘಟನೆ ಇಡೀ ದೇಶವೇ ಬೆಚ್ಚಿ ಬೀಳಿಸಿತ್ತು. ಇದೀಗ ಮತ್ತೊಂದು ಘೋರ ಘಟನೆ ಉತ್ತರಪ್ರದೇಶದಲ್ಲಿ ನಡೆದಿದದ್ದು, ಬಹಿರ್ದೆಸೆಗೆ ತೆರಳಿದ್ದ 21 ವರ್ಷದ ಯುವತಿಯ ಮೇಲೆ ಐವರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಹಮೀರ್ ಪುರದಲ್ಲಿ ನಡೆದಿದೆ. ನಿನ್ನೆ ರಾತ್ರಿ ಯುವತಿಯು ಬಹಿರ್ದೆಸೆಗೆ ಎಂದು ತೆರಳಿದ್ದಾಳೆ. ಈ ವೇಳೆ ಐವರು ಕಾಮುಕರು ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ಕುರಿತಂತೆ ಹಮೀರ್ ಪುರದಲ್ಲಿ FIR ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಓರ್ವ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಸದ್ಯ ಯುವತಿಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದು ಯುವತಿ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ವಿನಯ್ ಕುಲಕರ್ಣಿ ಹಾಗು ಚಂದ್ರಶೇಖರ್ ಇಂಡಿ ಜಾಮೀನು ರದ್ದತಿಗೆ ಸಿಬಿಐ ಅರ್ಜಿ ಸಲ್ಲಿಸಿದೆ. ಸಾಕ್ಷಿಗಳಿಗೆ ಹಣದ ಆಮಿಷ ಒಡ್ಡಿರುವುದರಿಂದ ಜಾಮೀನು ರದ್ಧತಿಗೆ ಇದೀಗ ಸಿಬಿಐ ಮನವಿ ಮಾಡಿದೆ ಎಂದು ತಿಳಿದುಬಂದಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ಕುರಿತು ವಿಚಾರಣೆ ನಡೆಯಿತು. ಈ ಸಂಬಂಧ ಸಂಗ್ರಹಿಸಿದ ಸಾಕ್ಷ್ಯ ಪರಿಗಣಿಸಲು ಎಸ್ ಪಿ ಪಿ ಗಂಗಾಧರ ಶೆಟ್ಟಿ ಮನವಿ ಮಾಡಿದರು. ಸುಪ್ರೀಂ ಕೋರ್ಟ್ ನೀಡಿರುವ ಜಾಮೀನನ್ನು ಸೆಶನ್ ರದ್ದು ಪಡಿಸಬಹುದೇ? ಅರ್ಜಿ ವಿಚಾರಣಾ ಯೋಗ್ಯವೇ? ಎಂಬ ಬಗ್ಗೆ ವಾದ ಮಂಡಿಸಲು ಇದೆ ವೇಳೆ ಕೋರ್ಟ್ ಸೂಚನೆ ನೀಡಿತು. ಬೆದರಿಕೆ ಇರುವುದರಿಂದ ಸಾಕ್ಷಿ ಹೇಳಲು ಸಾಕ್ಷಿಗಳು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಜಾಮೀನು ರದ್ದು ಕೋರಿರುವ ಅರ್ಜಿ ವಿಚಾರಣೆಗೆ ಪರಿಗಣಿಸಲು ಎಸ್ ಪಿ ಪಿ ಮನವಿ ಮಾಡಿದರು. ತನ್ನದೇ 164 ಹೇಳಿಕೆ ವಿರುದ್ಧ ಎಸಿಪಿ ಶಿವಾನಂದ ಛಲವಾದಿ ಸಾಕ್ಷಿ…
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ಮಗಳೊಂದಿಗೆ ಸಲುಗೆಯಿಂದ ಇರಬೇಡ ಎಂದಿದ್ದಕ್ಕೆ ತಂದೆಯನ್ನು ಕೆಲಸಗಾರನೇ ಮಾರಕಾಸ್ತ್ರದಿಂದ ಹೊಡೆದು ಹತ್ಯೆಗೈದ ಘಟನೆ ಕುಮಾರಸ್ವಾಮಿ ಲೇಔಟ್ ಠಾಣಾ ವ್ಯಾಪ್ತಿಯ ಔಟರ್ ರಿಂಗ್ ರಸ್ತೆ ಬಳಿಯಿರುವ ಎಸ್.ಬಿ ಟಿಂಬರ್ ಅಂಗಡಿಯಲ್ಲಿ ನಡೆದಿದೆ. ಸೈಯ್ಯದ್ ಅಸ್ಲಂ (60) ಕೊಲೆಯಾದ ಟಿಂಬರ್ ಅಂಗಡಿ ಮಾಲೀಕ. 23 ವರ್ಷದ ಯುವಕ ಇಲಿಯಾಸ್ ಕೊಲೆ ಆರೋಪಿಯಾಗಿದ್ದು, ಈತ ಸೈಯದ್ ನ ಅಂಗಡಿಯಲ್ಲಿ ಕಲೆದ ಎರಡು ವರ್ಷಗಳಿಂದ ಕೆಲಸಕ್ಕಿದ್ದ. ಸೈಯ್ಯದ್ ಮಗಳೊಂದಿಗೆ ಸಲುಗೆಯಿಂದ ಮಾತನಾಡುತ್ತಿದ್ದ. ಇದರಿಂದ ಸೈಯದ್, ಕೆಲಸಗಾರನಿಗೆ ತಮ್ಮ ಮಗಳ ಜೊತೆ ಸಲುಗೆಯಿಂದ ಮಾತನಾಡಬೇಡ, ಸರಿಯಲ್ಲ ಎಂದು ಬುದ್ಧಿವಾದ ಹೇಳಿದ್ದಾರೆ. ಇಂದು ಬೆಳಗ್ಗೆ ಪಾನಮತ್ತನಾಗಿ ಅಂಗಡಿ ಬಳಿ ಬಂದಿದ್ದ ಆರೋಪಿ ಹಾಗೂ ಸೈಯ್ಯದ್ ಅಸ್ಲಮ್ ನಡುವೆ ಇದೇ ವಿಚಾರವಾಗಿ ಮತ್ತೆ ಗಲಾಟೆಯಾಗಿತ್ತು. ಸಿಟ್ಟಿಗೆದ್ದ ಆರೋಪಿ, ಅಂಗಡಿಯಲ್ಲಿದ್ದ ಮಾರಕಾಸ್ತ್ರದಿಂದ ಹೊಡೆದು ಸೈಯ್ಯದ್‌ನನ್ನು ಹತ್ಯೆಗೈದಿರುವುದು ತನಿಖೆಯಿಂದ ತಿಳಿದು ಬಂದಿದೆ.
ಕಲಬುರ್ಗಿ : ಅಭಿವೃದ್ಧಿಗೆ ನಮ್ಮ ಸರ್ಕಾರದಲ್ಲಿ ಹಣಕ್ಕೆ ಕೊರತೆ ಇಲ್ಲ. ಎಲ್ಲಾ ವರ್ಗದ ಜನರಿಗೆ, ಅವಕಾಶಗಳಿಂದ ವಂಚಿತರಾದ ಜನರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸಲು ನಾವು ನಿರಂತರವಾಗಿ ಶ್ರಮಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ₹216.53 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ₹6.20 ಕೋಟಿ ವೆಚ್ಚದ ಬ್ರಾಕಿಥೆರಪಿ ವಿಕೀರಣ ಚಿಕಿತ್ಸೆ ಘಟಕ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದರು. ನಮ್ಮ ಪ್ರಣಾಳಿಕೆಯಲ್ಲಿ, ಬಜೆಟ್ ನಲ್ಲಿ ಘೋಷಿಸಿದ ಕಾರ್ಯಕ್ರಮಗಳೆಲ್ಲಾ ಜಾರಿ ಆಗುತ್ತಿರುವುದು ಜನರ ಕಣ್ಣಿಗೆ ಕಾಣುತ್ತಿದೆ, ಬಿಜೆಪಿ ಕಣ್ಣಿಗೆ ಮಾತ್ರ ಕಾಣುತ್ತಿಲ್ಲ. ಪ್ರತೀ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು, ಟ್ರಾಮಾ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ ಇರಲೇಬೇಕು ಎನ್ನುವುದು ನಮ್ಮ ಸರ್ಕಾರದ ಗುರಿ. ಬಡವರಿಗೂ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಸಿಗಬೇಕು ಎನ್ನುವ ಉದ್ದೇಶದಿಂದ ಈ ಘೋಷಣೆ ಮಾಡಿದ್ದು ಒಂದೊಂದೇ ಜಿಲ್ಲೆಯಲ್ಲಿ ಇವೆಲ್ಲವೂ ನೆರವೇರುತ್ತಿವೆ. ಅಭಿವೃದ್ಧಿಗೆ ಸರ್ಕಾರದ ಬಳಿ…
ಬೀದರ್ : ಕಳೆದ ಒಂದುವರೆ ವರ್ಷದಿಂದ ಬೀದರ್ ನಲ್ಲಿ ವಿಮಾನ ಹಾರಾಟ ಬಂದ್ ಆಗಿತ್ತು. ಇದೀಗ ಇಂದು ವಿಮಾನ ಹರಾಟಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಪ್ರಯಾಣಿಕರಿಗೆ ಬೋರ್ಡಿಂಗ್ ಪಾಸ್ ನೀಡಿ ಸಿಎಂ ಸಿದ್ದರಾಮಯ್ಯ ಇಂದು ವಿಮಾನ ಹಾರಾಟಕ್ಕೆ ಚಾಲನೆ ನೀಡಿದರು. ಕಾರಣವೇನು? ಉಡಾನ್ ಯೋಜನೆಯ ಅಡಿ ನೀಡುತ್ತಿದ್ದ ರಿಯಾಯ್ತಿಯನ್ನು ನಿಲ್ಲಿಸಿದ್ದರು. ರಿಯಾಯಿತಿ ನಿಲ್ಲಿಸಿದ್ದಕ್ಕೆ ಬೀದರ್ನಲ್ಲಿ ವಿಮಾನ ಹಾರಾಟ ಬಂದ್ ಆಗಿತ್ತು. ಒಂದುವರೆ ವರ್ಷದಿಂದ ವಿಮಾನ ಹಾರಾಟ ಸ್ಥಗಿತಗೊಂಡಿತ್ತು. ಬೀದರ್ ಬೆಂಗಳೂರು ಮಧ್ಯ ವಿಮಾನ ಹಾರಾಟ ಬಂದ್ ಆಗಿತ್ತು. ರಾಜ್ಯ ಸರ್ಕಾರದಿಂದ ರಿಯಾಯ್ತಿ ಕೊಡುವುದಾಗಿ ಒಪ್ಪಂದ ಆದ ಬಳಿಕ ಇಂದಿನಿಂದ ಬೀದರ್ ನಿಂದ ವಿಮಾನ ಹಾರಾಟ ಆರಂಭವಾಗಿದೆ.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಕಲ್ಯಾಣಿಗೆ ಹಾರಿ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದ ಕನ್ನಡ ಭವನದ ಬಳಿ ನಡೆದಿದೆ. ಆತ್ಮಹತ್ಯೆಯ ಹಿಂದೆ ಸಿ.ಎಸ್ ವಿಕ್ಕಿ ಎನ್ನುವರು ವಂಚನೆ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಚಿಕ್ಕಬಳ್ಳಾಪುರದ ಕನ್ನಡ ಭವನದ ಬಳಿ ಇರುವ ಕಲ್ಯಾಣಿಗೆ ಹಾರಿ ಮಹಿಳೆ ಒಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.ಕಲ್ಯಾಣಿಗೆ ಹಾರಿ ವಿನುತಾ ಎನ್ನುವ ಮಹಿಳೆ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಸಿ ಎಸ್ ವಿಕ್ಕಿ ಎಂಬುವರ ವಿರುದ್ಧ ವಂಚನೆ ಆರೋಪ ಕೇಳಿಬಂದಿದ್ದು, ವಿನತಾ ಪತಿ ಕುಮಾರ್ ಹಾಗು ವಿನುತ ಸೋದರ ವಂಚನೆ ಆರೋಪ ಮಾಡುತ್ತಿದ್ದಾರೆ.ಈ ಬಗ್ಗೆ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದೆ.














