Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯಪುರ : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ನಟಿ ರನ್ಯಾರಾವ್ ಸದ್ಯ ಬೆಂಗಳೂರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಈ ಒಂದು ಪ್ರಕರಣದಲ್ಲಿ ಸಚಿವರ ಹೆಸರು ಕೇಳಿ ಬರುತ್ತಿದೆ ಎಂದು ಬಿಜೆಪಿ ಗಂಭೀರವಾಗಿ ಆರೋಪಿಸಿತ್ತು. ಆದರೆ ಇದಕ್ಕೆ ಮತ್ತಷ್ಟು ಪುಷ್ಟಿ ನೀಡುವಂತೆ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಟಿ ರನ್ಯಾ ಜೊತೆಗೆ ಸಂಪರ್ಕದಲ್ಲಿದ್ದ ಇಬ್ಬರು ಸಚಿವರ ಹೆಸರನ್ನು ನಾಳೆ ಸದನದಲ್ಲಿ ಬಹಿರಂಗಪಡಿಸುತ್ತೇನೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಇಡೀ ಪ್ರಕರಣ ಕುರಿತು ಸೋಮವಾರ ಸದನದಲ್ಲಿ ಮಾತನಾಡುವೆ. ಆಕೆಯೊಂದಿಗೆ ಸಂಪರ್ಕವಿರುವ ಇಬ್ಬರು ಸಚಿವರ ಹೆಸರನ್ನು ಸದನದಲ್ಲಿ ಹೇಳುವೆ. ಈಗ ಆ ಬಗ್ಗೆ ಮಾಧ್ಯಮಗಳ ಮುಂದೆ ಹೇಳುವುದಿಲ್ಲ. ಇದು ಸದನದ ರಹಸ್ಯ ಎಂದರು. ಆಕೆಗೆ ಪ್ರೊಟೋಕಾಲ್ ಕೊಟ್ಟವರ ಮಾಹಿತಿ ಸಂಗ್ರಹ ಮಾಡಿದ್ದೇವೆ. ಚಿನ್ನ ಎಲ್ಲಿಂದ ತಂದಿದ್ದಾರೆ? ಎಲ್ಲಿಟ್ಟು ತಂದಿದ್ದಾರೆ ಎಂಬುದು ಗೊತ್ತಿದೆ ಎಂದು ಯತ್ನಾಳ್ ಹೇಳಿದರು. ರನ್ಯಾಗೆ ಕೆಐಎಡಿಬಿಯಿಂದ 12 ಎಕರೆ ಜಮೀನು…
ರಾಜ್ಯಾದ್ಯಂತ ಹಬ್ಬಿರುವ ‘ಡ್ರಗ್ಸ್’ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದೇ ನಮ್ಮ ಸರ್ಕಾರದ ಗುರಿ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ದೊಡ್ಡ ಡ್ರಗ್ಸ್ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ. ಸುಮಾರು 75 ಕೋಟಿಗೂ ಅಧಿಕ ಮೌಲ್ಯದ MDMA ಅನ್ನು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿಕೊಂಡಿದ್ದಾರೆ. ಮಂಗಳೂರು ಪೊಲೀಸರ ಈ ಒಂದು ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ಲಾಘಿಸಿದ್ದಾರೆ. ಈ ಕುರಿತು ಟ್ವೀಟ್ ನಲ್ಲಿ ಮಂಗಳೂರು ಪೋಲಿಸರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ. ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ಎಂಡಿಎಂಎ ಮಾದಕ ದ್ರವ್ಯವನ್ನು ವಶಕ್ಕೆ ಪಡೆದು, ಸಾವಿರಾರು ಯುವ ಜನರ ಬದುಕಿಗೆ ಎದುರಾಗಲಿದ್ದ ಬಹುದೊಡ್ಡ ಅಪಾಯವೊಂದನ್ನು ನಮ್ಮ ಪೊಲೀಸರು ನಿವಾರಿಸಿದ್ದಾರೆ. ನಾವು ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಾದಕದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣದ ಪಣತೊಟ್ಟು, ಡ್ರಗ್ಸ್ ಮಾರಾಟ ಮತ್ತು ಸೇವನೆಯ ವಿರುದ್ಧ ಸಮರ ಸಾರಿದ್ದೇವೆ. ಕೆಲವು ತಿಂಗಳುಗಳ ಹಿಂದೆ…
ವಿಜಯಪುರ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ರಾಜ್ಯ ಪಾಕಿಸ್ತಾನದ ಒಂದು ಭಾಗದಂತಾಗಿದೆ. ಮದರಸಾಗಳಿಗೆ ಹಣ ಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉರ್ದು ಶಾಲೆಗಳಿಗೆ 100 ಕೋಟಿ ಹಣ ನೀಡುತ್ತೇವೆ ಎಂದು ಹೇಳಿದ್ದಾರೆ. ಆದರೆ ಮದರಸಾದಲ್ಲಿ ದೇಶದ್ರೋಹಿ ವಿಚಾರಗಳನ್ನು ಕಲಿಸುತ್ತಾರೆ. ಇಸ್ಲಾಂ ಎಂದರೆ ಅನ್ಯ ಧರ್ಮಗಳನ್ನು ನಾಶಪಡಿಸುವುದು ಎಂದರ್ಥ ಎಂದು ಶಾಸಕ ಬಚನಗೌಡ ಪಾಟೀಲ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅನ್ಯಕೋಮಿನವರಿಗೆ ಸರ್ಕಾರದ ಬಗ್ಗೆ ಸ್ವಲ್ಪವೂ ಭಯ ಇಲ್ಲದಂತಾಗಿದೆ. ಅವರು ಸ್ವೇಚ್ಛಾಚಾರದಿಂದ ರಾಜ್ಯದಲ್ಲಿ ಜೀವನ ಮಾಡುತ್ತಿದ್ದಾರೆ. ಸಚಿವರು ಕೂಡ ಏನನ್ನು ಮಾಡುತ್ತಿಲ್ಲ ಅವರೆಲ್ಲ ಜೀರೋ ಆಗಿದ್ದಾರೆ. ತಮ್ಮ ಸ್ಥಾನಕ್ಕೆ ಡಾ.ಜಿ ಪರಮೇಶ್ವರ್ ರಾಜೀನಾಮೆ ನೀಡುತ್ತಿಲ್ಲ. ಸಿಎಂಗೆ ಹೇಳಿ ಬೇರೆ ಇಲಾಖೆಯನ್ನಾದರೂ ತೆಗೆದುಕೊಳ್ಳಲಿ ಎಂದು ಗ್ರಹದ ಚಿವರ ವಿರುದ್ಧ ಶಾಸಕ ಯತ್ನಾಳ್ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಇರೋವರ್ಗು ಮುಸ್ಲಿಮರಿಗೆ ನಮ್ಮನ್ನು ಏನು ಮಾಡೋಕೆ ಆಗಲ್ಲ ಎಂಬ ಧೈರ್ಯ ಬಂದಿದೆ. ಇದನ್ನೆಲ್ಲ ವಿರೋಧಿಸಿ ಹೋರಾಟ ಮಾಡಲು ಬಿಜೆಪಿಯು ಕೂಡ…
ಮಂಡ್ಯ : ಕಳೆದ 3 ತಿಂಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆಯು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಶಿಂಡಬೋಗನಹಳ್ಳಿಯಲ್ಲಿ ನಡೆದಿದೆ. ಮೃತಳನ್ನು ದಾವಣಗೆರೆ ಮೂಲದ ರಾಧಿಕಾ (23) ಎಂದು ತಿಳಿಬಂದಿದೆ. ರಾಧಿಕಾ 3 ತಿಂಗಳ ಹಿಂದೆ ಮಂಡ್ಯದ ಅಜೇಯನನ್ನು ಪ್ರೀತಿಸಿ ಮದುವೆಯಾಗಿದ್ದಳು. ಆದರೆ ಅಜೇಯ್ ಮನೆಯವರು ಇಬ್ಬರನ್ನು ಮನೆಗೆ ಸೇರಿಸಿಕೊಳ್ಳಲಿಲ್ಲ. ಹಾಗಾಗಿ ಅಜೇಯ್ ಹಾಗು ರಾಧಿಕಾ ಇಬ್ಬರು ಅಜೇಯ್ ಚಿಕ್ಕಪ್ಪನ ಮನೆಯಲ್ಲಿ ವಾಸ ಮಾಡುತ್ತಿದ್ದರು. ಆದರೆ ಅದೇನಾಯ್ತೋ ಗೊತ್ತಿಲ್ಲ ಇಂದು ಅಜೇಯ್ ಚಿಕ್ಕಪ್ಪನ ಮನೆಯಲ್ಲಿ ರಾಧಿಕಾಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನೆ ಕುರಿತು ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೀದರ್ : ಬೀದರ್ ನಲ್ಲಿ ಘೋರವಾದಂತಹ ದುರಂತ ನಡೆದಿದ್ದು, ಸ್ನೇಹಿತರ ಜೊತೆಗೆ ಬಾವಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಬೀದರ್ ಜಿಲ್ಲೆಯ ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ವಿಠಲಪುರದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಹೌದು ಬಾವಿಯಲ್ಲಿ ಈಜಲು ಹೋಗಿದ್ದ ಇಬ್ಬರೂ ಯುವಕರು ನೀರು ಪಾಲಾಗಿದ್ದಾರೆ. ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ವಿಠಲಪುರದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ವಿಠಲಪುರ ನಿವಾಸಿ ಆದಂತಹ ಪ್ರಶಾಂತ ಯಲಗುರ್ತಿ ಹಾಗೂ ಶಿವಾಜಿ ನೀರು ಪಾಲಾಗಿದ್ದಾರೆ ಎನ್ನಲಾಗಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ದಾಸರವಾಡಿ ಗ್ರಾಮದ ನಿವಾಸಿ ಶಿವಾಜಿ ಹಾಗು ಪ್ರಶಾಂತ್ ನಿನ್ನೆ ಸ್ನೇಹಿತರ ಜೊತೆಗೆ ಈಜಲು ಹೋಗಿದ್ದಾಗ ಈ ಒಂದು ದುರಂತ ನಡೆದಿದೆ. ಘಟನೆ ಕುರಿತಂತೆ ಭೀಮನಖೇಡ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು : ಭದ್ರಾ ನದಿಯಲ್ಲಿ ಈಜಲು ತೆರಳಿದ ಇಬ್ಬರು ಪ್ರವಾಸಿಗರು ನೀರು ಪಾಲಾಗಿ ಸಾವನಪ್ಪಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಕಳಸ ತಾಲೂಕಿನ ಕಂಚಿನಕೆರೆ ಬಳಿ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ಜಗದೀಶ್ ಹಾಗು ಛೋಟಾ ಎಂದು ತಿಳಿದುಬಂದಿದೆ. 7 ಸ್ನೇಹಿತರು ಸೇರಿ ಚಿಕ್ಕಮಂಗಳೂರು ಜಿಲ್ಲಾ ಪ್ರವಾಸಕ್ಕೆ ಬಂದಿದ್ದಾಗ ಇಬ್ಬರು ಯುವಕರು ನೀರು ಪಾಲಾಗಿದ್ದಾರೆ, ಬೆಂಗಳೂರಿನಿಂದ ಸ್ನೇಹಿತರ ಜೊತೆಗೆ ಜಗದೀಶ್ ಮತ್ತು ಚೋಟ ಎನ್ನುವ ಯುವಕರು ಪ್ರವಾಸಕ್ಕೆ ಬಂದಿದ್ದರು. ಘಟನೆ ಕುರಿತಂತೆ ಕಳಸ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : ಕಲ್ಬುರ್ಗಿಯಲ್ಲಿ ‘ಮಂಗಳಮುಖಿಯನ್ನು’ ಬೆತ್ತಲೆಗೊಳಿಸಿ, ತಲೆ ಬೋಳಿಸಿ ಹಲ್ಲೆ!
ಕಲಬುರ್ಗಿ : ಕಲ್ಬುರ್ಗಿಯಲ್ಲಿ ಅಮಾನವೀಯ ಘಟನೆ ನಡೆದಿದ್ದು, ಮಂಗಳಮುಖಿಯನ್ನು ಬೆತ್ತಲೆಗೊಳಿಸಿ ತಲೆ ಬೋಳಿಸಿ ಹಲ್ಲೆ ನಡೆಸಲಾಗಿದೆ. ಮಂಗಳಮುಖಿಯರಿಂದಲೇ ಮಂಗಳಮುಖಿಯ ಮೇಲೆ ಈ ಒಂದು ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ. ಹೌದು ಕಲ್ಬುರ್ಗಿ ನಗರದ ಕೇಂದ್ರ ಬಸ್ ನಿಲ್ದಾಣದ ಬಳಿ ಈ ಒಂದು ಘಟನೆ ನಡೆದಿದ್ದು, ಕಲ್ಬುರ್ಗಿ ಜನತೆಯನ್ನು ಬೆಚ್ಚಿ ಬೀಳಿಸಿದೆ. ಘಟನೆ ನಡೆದಿದ್ದು ಇಷ್ಟೇ. ಹಲ್ಲೆಗೆ ಒಳಗಾದ ಅಂಕಿತಾ ಎನ್ನುವ ಮಂಗಳಮುಖಿ ಬಿಕ್ಷಾಟನೆ ಮಾಡಿದ್ದಳು. ಆದರೆ ಬಿಕ್ಷಾಟನೆ ಮಾಡಿದ್ದ ಪಾಲು ಕೊಡದಿದ್ದಕ್ಕೆ ಉಳಿದ ಮಂಗಳಮುಖಿಯರು ಅಂಕಿತಾಳ ಮೇಲೆ ಈ ರೀತಿ ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ. ತಲೆ ಕೂದಲು ಬೋಳಿಸಿ ಬೆತ್ತಲೆ ಮಾಡಿ ಹಲೆ ಮಾಡಿದ್ದಾರೆ. ಹಾಡ ಹಗಲೇ ಈ ಘಟನೆ ನಡೆದಿದ್ದು ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ. ಘಟನೆ ಕುರಿತು ಅಶೋಕ್ ನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ವಿಜಯನಗರ : ಸಮರ್ಪಕವಾದ ಉತ್ತರ ನೀಡದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ವಿರುದ್ಧ ಲೋಕಾಯುಕ್ತ ಇದೀಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ನಡೆದಿದೆ. ನಿನ್ನೆ ಕಚೇರಿಗೆ ಭೇಟಿ ನೀಡಿದ ವೇಳೆ ಸಮರ್ಪಕವಾದ ಉತ್ತರ ನೀಡದ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಉಪ ಲೋಕಾಯುಕ್ತ ಬಿ ವೀರಪ್ಪ, ಹೊಸಪೇಟೆ ನಗರದಲ್ಲಿರುವ ಇಲಾಖೆ ಕಚೇರಿಗೆ ಬಿ.ವಿರಪ್ಪ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದರು. ಇಲಾಖೆ ಕಚೇರಿಗೆ ಉಪಲೋಕಾಯುಕ್ತ ಬಿ ವೀರಪ್ಪ ನೆನ್ನೆ ಭೇಟಿ ನೀಡಿದ್ದರು. 107 ಬಾಲ್ಯ ವಿವಾಹ ಪ್ರಕರಣಗಳ ಪೈಕಿ 49 FIR ದಾಖಲಿಸಲಾಗಿದೆ. ಕಚೇರಿ ಅಧಿಕ್ಷಕ ನಾಗಭೂಷಣ ಫೋನ್ ಪೇ ಹಾಗೂ ಯುಪಿಐ ಪರಿಶೀಲನೆ ಮಾಡಿದ್ದಾರೆ. ಫೋನ್ ಪೇ ಮತ್ತು ಯುಪಿಐ ಪರಿಶೀಲನೆ ಮಾಡಿದಾಗ ಅದು ಡಿಲೀಟ್ ಮಾಡಿದ್ದು ಗೊತ್ತಾಗಿದೆ. ಉಪನಿರ್ದೇಶಕಿ ಶ್ವೇತಾ ಮೊಬೈಲ್ ಫೋನ್ ಪೆ ವಹಿವಾಟು ತಪಾಸಣೆ ಮಾಡಿದ್ದಾರೆ. ಗನ್ ಮ್ಯಾನ್ ಮೂಲಕ…
ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ಕುರಿಗಾಹಿಗಳ ಮೇಲೆ ದೌರ್ಜನ್ಯ ಹಾಗೂ ಹಲ್ಲೆ ಕೊಲೆ ಪ್ರಕರಣಗಳು ಹೆಚ್ಚುತ್ತಿವೆ ಈ ನೆಲೆಯಲ್ಲಿ ಕುರಿಗಾಹಿಗಳ ರಕ್ಷಣೆಗಾಗಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು ಕುರಿಗಾಹಿಗಳ ರಕ್ಷಣೆಗಾಗಿ ಪ್ರತ್ಯೇಕ ಕಾನೂನು ರಚನೆ ಮಾಡಲು ಇದೀಗ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಹೌದು ಕುರಿಗಾಹಿಗಳ ದೌರ್ಜನ್ಯ ತಡೆಗಾಗಿ ವಿಧೇಯಕ ಮಂಡನೆಗೆ ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಸಾಂಪ್ರದಾಯಿಕ ಕುರಿಗಾಹಿಗಳ ರಕ್ಷಣೆಗೆ ಪ್ರತ್ಯೇಕ ವಿಧೇಯಕ ತರಲು ಚಿಂತನೆ ನಡೆಸಲಾಗುತ್ತಿದೆ. ಪಶು ಸಂಗೋಪನ ಇಲಾಖೆಯಿಂದ ವಿಧೇಯಕ ಮಂಡನೆಗೆ ತಯಾರಿ ಮಾಡಲಾಗುತ್ತಿದ್ದು, ಸಾಂಪ್ರದಾಯಿಕ ವಲಸೆ ಕುರಿಗಾಹಿಗಳ ಮೇಲೆ ದೌರ್ಜನ್ಯ ಹೆಚ್ಚುತ್ತಿದೆ. ವಲಸೆ ಕುರಿಗಾಹಿಗಳ ಆಸ್ತಿಪಾಸ್ತಿಗಳ ಒತ್ತುವರಿ ಕೂಡ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕುರಿಗಾಹಿಗಳ ರಕ್ಷಣೆಗೆ ಪ್ರತ್ಯೇಕ ಕಾನೂನು ರಚಿಸಲು ಚಿಂತನೆ ನಡೆಸುತ್ತಿದೆ. ಅಲ್ಲದೆ ಇತ್ತೀಚೆಗೆ ಅಷ್ಟೇ ಬಾಗಲಕೋಟೆ ಜಿಲ್ಲೆಯ ಕೆರೂರು ಗ್ರಾಮದ ಬಳಿ, ರಾತ್ರಿಯ ವೇಳೆ ಕುರಿಗಳನ್ನು ಕಳ್ಳತನ ಮಾಡಲು ದುಷ್ಕರ್ಮಿಗಳು ಬಂದಿದ್ದರು. ಇವಳೆ ಕುರಿಗಾಹಿ ಓರ್ವನನ್ನು ಹಿಡಿದಿದ್ದ, ಆದರೆ ಉಳಿದವರು ಬಂದು…
ಕಲಬುರ್ಗಿ : ಕಲ್ಬುರ್ಗಿಯಲ್ಲಿ ಭೀಕರವಾದ ಕೊಲೆಯಾಗಿದ್ದು ಸ್ನೇಹಿತರು ಸೇರಿ ಇನ್ನೊಬ್ಬ ಸ್ನೇಹಿತನನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಕೊಲೆಯ ಭೀಕರತೆ ಯಾವ ರೀತಿ ಇತ್ತು ಎಂದರೆ, 12 ಬಾರಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಸ್ನೇಹಿತನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಹೌದು ಕಲಬುರ್ಗಿಯಲ್ಲಿ ಸ್ನೇಹಿತನನ್ನೇ ಹತ್ಯೆಗೈದ ಫ್ರೆಂಡ್ಸ್. ಕಲ್ಲು ಎತ್ತು ಹಾಕಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಸುಮಾರು 12 ಬಾರಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಕೊಲೆಯಾದ ಯುವಕನನ್ನು ರೇವಣಸಿದ್ದಪ್ಪ ಎಂದು ತಿಳಿದುಬಂದಿದ್ದು ಮನೆಯಲ್ಲಿದ್ದ ಈತನನ್ನು ಫೋನ್ ಮಾಡಿ ಮನೆಯಿಂದ ಹೊರಗಡೆ ಕರೆಸಿಕೊಂಡಿದ್ದಾರೆ. ಬಳಿಕ ಬೈಕ್ ನಲ್ಲಿ ಸ್ನೇಹಿತ ರೇವನಸಿದ್ದಪ್ಪನನ್ನು ಕರೆತಂದು ನಡು ರಸ್ತೆಯ ಮೇಲೇನೆ 12 ಬಾರಿ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಸಿಸಿ ಕ್ಯಾಮೆರಾದಲ್ಲಿ ಕೊಲೆಯ ಭಯಾನಕ ದೃಶ್ಯ ಸೆರೆಯಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಯಾವ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ ಎಂಬುವುದರ ಕುರಿತು ತನಿಖೆ ಕೈಗೊಂಡಿದ್ದಾರೆ.













