Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇಂಡಿಯಾ ಜಸ್ಟೀಸ್ ರಿಪೋರ್ಟ್ (IGR) 2025 ರ ಪ್ರಕಾರ, ಕರ್ನಾಟಕವು ನ್ಯಾಯಾಂಗ ಮತ್ತು ಪೊಲೀಸ್ ವ್ಯವಸ್ಥೆಗಳಲ್ಲಿ ಅಗ್ರಸ್ಥಾನ ಪಡೆದಿದೆ. ದಕ್ಷಿಣ ಭಾರತದ ರಾಜ್ಯಗಳು ಉತ್ತಮ ಪ್ರದರ್ಶನ ತೋರಿದರೆ, ಉತ್ತರ ಭಾರತದ ರಾಜ್ಯಗಳು ಹಿಂದುಳಿದಿವೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನಗಳಲ್ಲಿವೆ. ಈ ವರದಿಯು ನ್ಯಾಯ ಒದಗಿಸುವ ಸಾಮರ್ಥ್ಯದಲ್ಲಿ ರಾಜ್ಯಗಳನ್ನು ಶ್ರೇಣೀಕರಿಸುತ್ತದೆ. ಭಾರತ ನ್ಯಾಯ ವರದಿ (ಐಜೆಆರ್) 2025 ರಲ್ಲಿ ಕರ್ನಾಟಕ ತನ್ನ ಅಗ್ರ ಸ್ಥಾನವನ್ನು ಉಳಿಸಿಕೊಂಡಿದೆ, ಕಳೆದ ವರ್ಷ ಹೊಂದಿದ್ದ ಶ್ರೇಯಾಂಕವನ್ನು ಉಳಿಸಿಕೊಂಡಿದೆ. ಪೊಲೀಸ್, ನ್ಯಾಯಾಂಗ, ಕಾರಾಗೃಹಗಳು ಮತ್ತು ಕಾನೂನು ನೆರವಿನಲ್ಲಿ ರಾಜ್ಯಗಳ ಸಾಮರ್ಥ್ಯದ ಆಧಾರದ ಮೇಲೆ ಐಜೆಆರ್ ಸ್ಥಾನ ಪಡೆದಿದೆ. ಕಳೆದ ವರ್ಷ ಐದನೇ ಸ್ಥಾನ ಪಡೆದ ಆಂಧ್ರಪ್ರದೇಶ ಎರಡನೇ ಸ್ಥಾನದಲ್ಲಿದೆ. 2019 ರಲ್ಲಿ ಹನ್ನೊಂದನೇ ಸ್ಥಾನ ಪಡೆದಿದ್ದ ತೆಲಂಗಾಣ ತನ್ನ ಮೂರನೇ ಸ್ಥಾನವನ್ನು ಉಳಿಸಿಕೊಂಡಿದೆ. ಇನ್ನು ಪೊಲೀಸ್, ನ್ಯಾಯಾಂಗ, ಕಾರಾಗೃಹಗಳು ಮತ್ತು ಕಾನೂನು ನೆರವಿನಲ್ಲಿ ರಾಜ್ಯಗಳ ಸಾಮರ್ಥ್ಯದ ಆಧಾರದ ಮೇಲೆ ಐಜೆಆರ್…
ಈ ಅದೃಷ್ಟ ಅನ್ನೋದು ಒಂದು ರೀತಿ ಜಾಕ್ ಪಾಟ್ ಇದ್ದಂತೆ. ಯಾರು ಯಾವಾಗ ಬೇಕಾದರೂ ಶ್ರೀಮಂತರಾಗಬಹುದು, ಯಾವಾಗ ಬೇಕಾದರೂ ಎಲ್ಲವನ್ನು ಕಳೆದುಕೊಂಡು ಬೀದಿಗೆ ಬರಬಹುದು. ಇದೀಗ ಈ ಒಂದು ಅದೃಷ್ಟದ ಘಟನೆ ನಡೆದಿದ್ದು ಚಿಲಿಯಲ್ಲಿ, ತನ್ನ ತಂದೆಯ ಹಳೆಯ ಪಾಸ್ ಬುಕ್ ನಿಂದಲೇ ಅದೃಷ್ಟ ಖುಲಾಯಿಸಿದೆ. ಚಿಲಿಯ ಎಕ್ಸೆಕ್ವಿಯಲ್ ಹಿನೊಜೋಸಾ ತನ್ನ ತಂದೆಯ ಹಳೆಯ ಪಾಸ್ ಬುಕ್ ನಿಂದಲೇ ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿದ್ದಾನೆ. ತಂದೆ ಮರಣ ಹೊಂದಿದ ಹತ್ತು ವರ್ಷದ ಬಳಿಕ ಹಿನೊಜೋಸಾ ನಿಗೆ ತನ್ನ ತಂದೆಯ ಪಾಸ್ ಬುಕ್ ವೊಂದು ಸಿಕ್ಕಿದೆ. ಈ ಪಾಸ್‌ಬುಕ್ ಅನ್ನು 1960-70ರ ದಶಕದ್ದಾಗಿತ್ತು. ಹೌದು, ಮನೆ ಸ್ವಚ್ಛಗೊಳಿಸುತ್ತಿದ್ದಾಗ ಈ ಪಾಸ್ ಬುಕ್ ಸಿಕ್ಕಿದ್ದು, ವೇಸ್ಟ್ ಕಾಗದ ಎಂದುಕೊಂಡು ಅದರ ಬಗ್ಗೆ ಅಷ್ಟೇನು ತಲೆ ಕೆಡಿಸಿಕೊಳ್ಳಲಿಲ್ಲ. ಆಮೇಲೆ ಅದನ್ನು ಸೂಕ್ಷ್ಮವಾಗಿ ಗಮನಿಸಿದಾಗ ತಂದೆಯ ಪಾಸ್ ಬುಕ್ ಎಂದು ತಿಳಿಯಿತು. ಮಗನಿಗೆ ಗೊತ್ತಿಲ್ಲದ್ದಂತೆ ಆತನ ಹೆಸರಿನಲ್ಲಿ 1.40 ಲಕ್ಷ (ಚಿಲಿಯ ಪೈಸೆಗಳಲ್ಲಿ) ಠೇವಣಿ ಇಟ್ಟಿದ್ದರು ಎನ್ನುವುದು ತಿಳಿಯಿತು. ಹೀಗಾಗಿ…
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಪಾತ್ರವಹಿಸಿರುವ ಜಾರಿ ನಿರ್ದೇಶನಾಲಯ (ED) ಇದೀಗ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಇಂದು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ED ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಗಾಂಧಿ ಕುಟುಂಬಕ್ಕೆ ಸೇರಿದ 700 ಕೋಟಿ ಮೌಲ್ಯದ ಆಸ್ತಿ ಜಪ್ತಿಗೆ ಸಿದ್ಧತೆ ಮಾಡಿಕೊಂಡಿದ್ದು, ಪ್ರಕರಣದ ವಿಚಾರಣೆಯನ್ನು ಈ ವೇಳೆ ನ್ಯಾಯಾಲಯ ಏಪ್ರಿಲ್ 25ಕ್ಕೆ ಮುಂದೂಡಿತು. ಗಾಂಧಿ ಕುಟುಂಬದ ವಿರುದ್ಧ ಇಡಿಯಿಂದ ಇಂದು ಮೊದಲ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಯಿತು. ಬರೋಬ್ಬರಿ 661 ಕೋಟಿ ರೂ. ಮುಟ್ಟುಗೊಲು ಇಡೀ ಪ್ರಕರಣದ ಹಿಂದಿನ ಹಿನ್ನೆಲೆ 2014ರಲ್ಲಿ ಡಾ. ಸುಬ್ರಮಣಿಯನ್ ಸ್ವಾಮಿ ದೆಹಲಿ ನ್ಯಾಯಾಲಯದಲ್ಲಿ ಸಲ್ಲಿಸಿದ ಖಾಸಗಿ ದೂರಿನಲ್ಲಿ ದೊರಕಿದ್ದು, ಈ ದೂರಿನ ಆಧಾರದ ಮೇಲೆ 2021ರಲ್ಲಿ ED ತನಿಖೆಯನ್ನು ಪ್ರಾರಂಭಿಸಿತು. ದೂರಿನಲ್ಲಿ, ಕ್ರಿಮಿನಲ್ ಪಿತೂರಿ ಮೂಲಕ ಎಜಿಎಲ್‌ನ 2,000 ಕೋಟಿ ರೂ.…
ಕಲಬುರ್ಗಿ : ಕಲ್ಯಾಣ ಕರ್ನಾಟಕ ಭಾಗಕ್ಕೆ 5,500 ಶಾಲಾ ಶಿಕ್ಷಕರ ನೇಮಕ ಮಾಡಲಾಗುತ್ತಿದೆ. ಶಿಕ್ಷಣ ಮಟ್ಟ ಸುಧಾರಿಸಲು ಶಿಕ್ಷಕರನ್ನು ನೇಮಕ ಮಾಡುತ್ತಿದ್ದೇವೆ. ಅಷ್ಟೇ ಅಲ್ಲದೆ ನಮ್ಮ ಸಂಪುಟ ಉಪ ಸಮಿತಿ ನಿಗವಹಿಸುತ್ತದೆ. ಪರೀಕ್ಷೆಯಲ್ಲಿ ಪಾರದರ್ಶಕತೆಯನ್ನು ತರುವುದು ನಮ್ಮ ಗುರಿಯಾಗಿದೆ ಎಂದು ಸಚಿವ ಶರಪ್ರಕಾಶ್ ಪಾಟೀಲ್ ತಿಳಿಸಿದರು. ಕಲ್ಬುರ್ಗಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಲ್ಬುರ್ಗಿಯಲ್ಲಿ ನಾಳೆ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು ಈ ಒಂದು ಉದ್ಯೋಗ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ. ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷರು ಚಾಲನೆ ನೀಡುತ್ತಾರೆ. ಇದು ನಮ್ಮ ಯುವನಿಧಿ ಕಾರ್ಯಕ್ರಮದ ಒಂದು ಭಾಗ ಕೂಡ. ಉದ್ಯೋಗ ಮೇಳದಲ್ಲಿ 250ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿವೆ ಒಂದು ಲಕ್ಷಕ್ಕೂ ಹೆಚ್ಚು ಉದ್ಯೋಗ ನೀಡಬೇಕು ಕೆಲಸ ಆಗಲಿದೆ. ಆಯ್ಕೆಯಾದವರಿಗೆ ಸ್ಥಳದಲ್ಲಿ ನೇಮಕಾತಿ ಆದೇಶ ಪತ್ರ ವಿತರಣೆ ಮಾಡಲಾಗುತ್ತದೆ…
ಉತ್ತರಪ್ರದೇಶ : ಕಳೆದ ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀ ರಾಮ ಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್ ಸಂದೇಶ ಬಂದಿತ್ತು. ಇದೀಗ ಮತ್ತೊಂದು ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದು ಇಮೇಲ್ ನಲ್ಲಿ ಶ್ರೀರಾಮ ಮಂದಿರವನ್ನು ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಬೆದರಿಕೆ ಇಮೇಲ್ ಸಂದೇಶ ಬಂದಿದೆ. ಹೌದು ರಾಮ ಜನ್ಮಭೂಮಿ ಟ್ರಸ್ಟಿಗೆ ಬಂದಿರುವ ಬೆದರಿಕೆ ಇ-ಮೇಲ್ ಅನ್ನು ಅಧಿಕಾರಿಗಳು ಇದೀಗ ಪರಿಶೀಲನೆ ಮಾಡುತ್ತಿದ್ದಾರೆ. ತಮಿಳುನಾಡು ಮೂಲದಿಂದ ಇ-ಮೇಲ್ ಸಂದೇಶ ಬಂದಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಈ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಚಿತ್ರದುರ್ಗ : ಚಿತ್ರದುರ್ಗದಲ್ಲಿ ಘೋರವದ ದುರಂತ ಒಂದು ಸಂಭವಿಸಿದ್ದು ಜಾತ್ರೆಗೆ ಎಂದು ಕ್ರಮಕ್ಕೆ ಆಗಮಿಸಿದ್ದ 9 ವರ್ಷದ ಬಾಲಕಿ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಬಿ ದುರ್ಗ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಿ.ದುರ್ಗ ಗ್ರಾಮದ ಬಳಿ ಕೃಷಿ ಹೊಂಡದಲ್ಲಿ ಬಿದ್ದು ಬಾಲಕಿ ಸಾವನ್ನಪ್ಪಿದ್ದಾಳೆ. ಚಿತ್ರದುರ್ಗ ತಾಲೂಕಿನ ಲಕ್ಷ್ಮಿಸಾಗರ ಗ್ರಾಮದ ಮೈನಾ (9) ಎನ್ನುವ ಬಾಲಕಿ ಸಾವನ್ನಪ್ಪಿದ್ದಾಳೆ.ಜಾತ್ರೆಗೆ ಎಂದು ಬಿ.ದುರ್ಗ ಗ್ರಾಮಕ್ಕೆ ಬಂದಿದ್ದ ವೇಳೆ ಈ ಒಂದು ಅವಘಡ ಸಂಭವಿಸಿದೆ. ಘಟನೆ ಕುರಿತಂತೆ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರ್ಗಿ : ಕಲ್ಬುರ್ಗಿಯಲ್ಲಿ ಭೀಕರವಾದ ಅಗ್ನಿ ದುರಂತ ಸಂಭವಿಸಿದ್ದು, ಕಲ್ಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಹೊರವಲಯದಲ್ಲಿರುವ ವಾಸವದತ್ತ ಸಿಮೆಂಟ್ ಕಾರ್ಖಾನೆಯಲ್ಲಿ ದೊಡ್ಡ ಪ್ರಮಾಣದ ಜಮಿನೀನಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಅತ್ಯಧಿಕ ಪ್ರಮಾಣದಲ್ಲಿ ಸಂಗ್ರಹಿ ಇಟ್ಟಿದ ಕಸಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟಿರುವ ಘಟನೆ ಶನಿವಾರ ನಡೆದಿದೆ. ಶನಿವಾರ ರಾತ್ರಿ 7ಗಂಟೆಗೆ ಅಲ್ಟ್ರಾಟೆಕ್ (ವಾಸವದತ್ತಾ) ಸಿಮೆಂಟ್ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ತಗುಲಿದ್ದು, ಕೂಡಲೇ ಕಂಪನಿಯ ಅಗ್ನಿ ಶಾಮಕ ದಳದ 2 ವಾಹನ ಮತ್ತು ಮಳಖೇಡ ಅಲ್ಟ್ರಾಟೇಕ್ ಸಿಮೆಂಟ್ ಕಾರ್ಖಾನೆಯ 1 ವಾಹನ ಹಾಗೂ ಅಗ್ನಿ ಶಾಮಕ ದಳದ 1 ವಾಹನ ಬೆಂಕಿ ನಂದಿಸಲು ತೆರಳಿದ್ದಾಗ ಎಲ್ಲಾ ಕಡೆ ಬೆಂಕಿ ವಿಸ್ತರಣೆಗೊಂಡಿತು. ಅಗ್ನಿ ಶಾಮಕ ದಳದ 4 ವಾಹನಗಳು ಹಾಗೂ ಕಾರ್ಖಾನೆ ಸಿಬ್ಬಂದಿಗಳು ಸೇರಿ ಶನಿವಾರ ರಾತ್ರಿ 7 ಗಂಟೆಯಿಂದ ಬೆಂಕಿ ನಂದಿಸಲು ಎಷ್ಟೇ ಪ್ರಯತ್ನ ಪಟ್ಟರೂ ಇಲ್ಲಿಯವರೆಗೆ ಸಂಪೂರ್ಣ ಬೆಂಕಿ ನಂದಿಸಲುಎಷ್ಟೇ ಪ್ರಯತ್ನ ಪಟ್ಟರೂ ಇಲ್ಲಿಯವರೆಗೆ ಸಂಪೂರ್ಣ…
ಯಾದಗಿರಿ : ಸಹೋದರಿಯನ್ನು ನೋಡಲು ಯುವಕನೊಬ್ಬ ಬೈಕ್ ಮೇಲೆ ತೆರಳುತ್ತಿದ್ದ ವೇಳೆ ವಿದ್ಯುತ್ ತಂತಿಯೊಂದು ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಯಾದಗಿರಿ ನಗರದ ಎಪಿಎಂಸಿ ಯಾರ್ಡ್ ಬಳಿ ನಡೆದಿದೆ. ಮೃತ ಯುವಕನನ್ನು ಖಾಜಾ ಪಟೇಲ್ (20) ಎಂದು ತಿಳಿದುಬಂದಿದೆ.ಯುವಕ ವಡಿಗೇರಾ ತಾಲೂಕಿನ ಬಬಲಾದ ಗ್ರಾಮದ ನಿವಾಸಿಯಾಗಿದ್ದು, ತನ್ನ ಸಹೋದರಿಯನ್ನು ನೋಡಲು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ವಿದ್ಯುತ್ ತಂತಿ ಮೈಮೇಲೆ ಬಿದ್ದಿದೆ. ಕೂಡಲೆ ಯುವಕ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾನೆ. ಹೈವೋಲ್ವೇಜ್ ಲೈನ್ ಆಗಿದ್ದ ಕಾರಣ ವಿದ್ಯುತ್ ತಂತಿ ಯುವಕನ ಬೆನ್ನಿನೊಳಗೆ ಹೊಕ್ಕಿದೆ. ಘಟನೆಗೆ ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು : ಕರ್ನಾಟಕ ಸಹಕಾರಿ ಅಫೆಕ್ಸ್ ಬ್ಯಾಂಕ್‌ನಿಂದ 439 ಕೋಟಿ ರೂ. ಸಾಲ ಪಡೆದು ಷರತ್ತುಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಸಿಐಡಿಗೆ ಹೈಕೋರ್ಟ್ ಅನುಮತಿ ನೀಡಿದೆ. ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಆರೋಪ ಪಟ್ಟಿಯಲ್ಲಿ ಜಾರಕಿಹೊಳಿ ಅವರನ್ನು ದೋಷಮುಕ್ತಗೊಳಿಸಲಾಗಿದಿಯೇ? ಇಲ್ಲವೇ, ಆರೋಪಿಯನ್ನಾಗಿಸಲಾಗಿದೆಯೇ ಎಂದು ವಿಚಾರಣೆ ವೇಳೆ ಸರ್ಕಾರದ ಪರ ವಕೀಲರನ್ನು ನ್ಯಾಯಪೀಠ ಪ್ರಶ್ನಿಸಿತು. ಇದಕ್ಕೆ ವಕೀಲರು, ಪ್ರಕರಣ ಸಂಬಂಧ 2,000 ಪುಟಗಳ ಆರೋಪ ಪಟ್ಟಿ ಸಿದ್ಧಪಡಿಸಿದ್ದು, ಅರ್ಜಿದಾರರನ್ನು ಆರೋಪಿಯನ್ನಾಗಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ಅರ್ಜಿದಾರರ ಪರ ವಕೀಲರು ಆಕ್ಷೇಪ ವ್ಯಕ್ತಿಪಡಿಸಿ, ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಎಫ್‌ಐಆರ್ ಪ್ರಶ್ನಿಸಿ ಈ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಅರ್ಜಿ ವಿಚಾರಣಾ ಸಂದರ್ಭದಲ್ಲಿ ಆರೋಪ ಪಟ್ಟಿ ಸಲ್ಲಿಕೆಯಾಗಿದೆ. ಆರೋಪ ಪಟ್ಟಿ ಸಲ್ಲಿಸಿರುವುದರಿಂದ ಪ್ರಸ್ತುತ ಅರ್ಜಿಯ ಮೂಲ ಉದ್ದೇಶ ವಿಫಲವಾಗಲಿದೆ ಎಂದು ವಾದ ಮಂಡಿಸಿದರು.
ಬೆಂಗಳೂರು : ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಹಾಗೂ ವಿನಯ್ ಗೌಡ ಜೈಲಿಗೆ ಹೋಗಿ ಬಂದಿದ್ದಾರೆ. ಈ ವೇಳೆ ಪೊಲೀಸರು ಇನ್ಸ್ಟಾಗ್ರಾಮ್ ರಿಲ್ಸ್ ಡಿಲೀಟ್ ಮಾಡುವಂತೆ ಸೂಚಿಸಿದ್ದರು. ಪೊಲೀಸರ ಸೂಚನೆ ಮೇರೆಗೆ ರಜತ್ ರೀಲ್ಸ್ ಡಿಲೀಟ್ ಮಾಡಿದ್ದಾರೆ. ಪ್ರಕರಣ ಹಿನ್ನೆಲೆ? ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ಗೌಡ, ರಜತ್ ಕಿಶನ್ ಲಾಂಗ್ ಹಿಡಿದು ರೀಲ್ಸ್ ಮಾಡಿ ಪೋಸ್ ಮಾಡಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಈ ಇಬ್ಬರ ವಿರುದ್ಧ ಬೆಂಗಳೂರಿನ ಬಸವೇಶ್ವರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ವಿನಯ್ಗೌಡ, ರಜತ್ ಕಿಶನ್ ಕೈಯಲ್ಲಿ ಲಾಂಗು, ಕಣ್ಣಿಗೆ ಕೂಲಿಂಗ್ ಗ್ಲಾಸ್, ಕೈಯಲ್ಲಿ ಲಾಂಗು ಹಿಡಿದು ನಟ ದರ್ಶನ್ ಅವರ ಅಭಿನಯದ ಮೆಜೆಸ್ಟಿಕ್ ಹಾಡಿಗೆ ಸ್ಲೋ ಮೋಷನ್ ವಾಕ್ ಮಾಡಿದ್ದರು. ಸಾರ್ವಜನಿಕ ಸ್ಥಳವಾಗಿರುವ ರಸ್ತೆಯಲ್ಲಿ ಲಾಂಗ್ ಹಿಡಿದು ಭಯದ ವಾತಾವರಣ ಸೃಷ್ಟಿಸುವ ರೀಲ್ಸ್ ಮಾಡಿದ್ದರು. ಇದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು.













