Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕೃಷಿಹೊಂಡದಲ್ಲಿ ತಾಯಿ ಮತ್ತು ಮಗಳ ಶವಗಳು ಪತ್ತೆಯಾಗಿದ್ದು, ಪತಿಯೇ ತನ್ನ ಹೆಂಡತಿ ಮತ್ತು ಮಗಳನ್ನು ಕೊಂದು ಶವಗಳನ್ನು ಕೃಷಿ ಹೊಂಡಕ್ಕೆ ಎಸೆಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದ್ದು, ಈ ಒಂದು ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಇಂಡ್ರಸನಹಳ್ಳಿ ಎಂಬಲ್ಲಿ ನಡೆದಿದೆ. ಹೌದು ಅನುಮಾನಾಸ್ಪದ ರೀತಿಯಲ್ಲಿ ಕೃಷಿ ಹೊಂಡದಲ್ಲಿ ತಾಯಿ ಮತ್ತು ಮಗಳ ಮೃತ ದೇಹಗಳು ಪತ್ತೆಯಾಗಿವೆ. ದೇವನಹಳ್ಳಿ ತಾಲೂಕಿನ ಇಂಡ್ರಸನಹಳ್ಳಿ, ಗ್ರಾಮದಲ್ಲಿ ಒಂದು ಘಟನೆ ನಡೆದಿದೆ. ಜಮೀನು ಭಾಗ ಕೇಳಿದ್ದಕ್ಕೆ ಗಂಡನಿಂದಲೇ ತಾಯಿ ಮತ್ತು ಮಗಳ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಹಿಳೆ ಮಾಲ ಮತ್ತು ಮಗಳು ಅನುಶ್ರೀ ಮೃತದೇಹಗಳು ಪತ್ತೆಯಾಗಿವೆ. ಕೊಲೆ ಮಾಡಿ ಕೃಷಿ ಹೊಂಡಕ್ಕೆ ಎಸೆದಿರುವ ಆರೋಪ ಕೇಳಿ ಬರುತ್ತಿದೆ.ಮಗಳನ್ನು ಕಳೆದುಕೊಂಡು ಇದೀಗ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.
ಮಂಡ್ಯ : ಜೆಡಿಎಸ್ ಮತ್ತು ಬಿಜೆಪಿಯವರು ಹಾಲು ಜೇನಿನಂತೆ ಇದ್ದೇವೆ. ಹಾಗಾಗಿ 2028ಕ್ಕೆ ರಾಜ್ಯದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಸರ್ಕಾರ ಬರಲಿದೆ ಎಂದು ಮಂಡ್ಯದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಸ್ಪೋಟಕವಾದ ಹೇಳಿಕೆ ನೀಡಿದರು. ಮಂಡ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಆರ್ ಅಶೋಕ್ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಯಾವುದೇ ರೀತಿಯ ಒಡಕು ಇಲ್ಲ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ 4 ತಿಂಗಳಲ್ಲಿ ಬದಲಾಗ್ತಾರೋ ಇಲ್ವೋ ಗೊತ್ತಿಲ್ಲ. ಡಿಕೆ ಶಿವಕುಮಾರ್ ಈಗಾಗಲೇ ಸಿಎಂ ಕುರ್ಚಿಗೆ ಡಬಲ್ ಹಾಕಿ ಕೂತಿದ್ದಾರೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದಂತೂ ಸತ್ಯ ಎಂದು ಆರ್ ಅಶೋಕ್ ತಿಳಿಸಿದರು.
ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಮಾವಿನ ಹಣ್ಣಿನ ಸೀಸನ್ ನಲ್ಲಿ ಜನರು ಮಾವಿನ ಹಣ್ಣು ಖರೀದಿಗೆ ಅಷ್ಟು ಆಸಕ್ತಿ ತೋರಿಲ್ಲ. ಹಾಗಾಗಿ ರಾಜ್ಯದಲ್ಲಿ ಮಾವಿನ ಹಣ್ಣಿನ ದರ ತೀವ್ರ ಕುಸಿತ ಕಂಡಿದೆ. ಇದರಿಂದ ರಾಜ್ಯದ ಮಾವು ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ HD ದೇವೇಗೌಡ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಹೌದು ಮಾವು ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೃಷಿ ಸಚಿವ ಚೌಹಾಣ್ಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಪತ್ರ ಬರೆದಿದ್ದಾರೆ.ರಾಜ್ಯದಲ್ಲಿ ಮಾವಿನ ದರ ಕುಸಿತದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಮಾವು ಬೆಳೆಗಾರರ ಸಮಸ್ಯೆ ಬಗೆಹರಿಸಬೇಕು ಎಂದು ಎಚ್ ಡಿ ದೇವೇಗೌಡ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ರಾಮನಗರ : ಡಿಕೆ ಶಿವಕುಮಾರ್ ಸಿಎಂ ಆಗಬೇಕು ಅಂತ ಕನಸು ಕಾಣಬೇಕು ಅಷ್ಟೇ ಎಂದು ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಹೇಳಿಕೆಗೆ ಇದೀಗ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ತಿರುಗೇಟು ನೀಡಿದ್ದು, ಮಾದಪ್ಪನ ಆಣೆಗು ಹೇಳುತ್ತೇನೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಹಾಗೆ ಆಗುತ್ತಾರೆ ಎಂದು ತಿಳಿಸಿದರು. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್, ಕಳೆದ ಬಾರಿ ನಮ್ಮದೇ ಸರ್ಕಾರ ರಚನೆ ಮಾಡುತ್ತೇವೆ ಅಂತ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಹೇಳಿದ್ದರು. ಗ್ಯಾರಂಟಿ ಯೋಜನೆಗಳು ಕೊಡಲು ಸಾಧ್ಯವಿಲ್ಲ ಅಂತ ಹೇಳಿದ್ದರು. ಕೊಟ್ಟ ಮಾತಿನಂತೆ ನಾವು 5 ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದೇವೆ ಎಂದರು. ಅಳಲ್ದೆ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ 140 ಸ್ಥಾನಗಳನ್ನು ಗೆದ್ದು ಸರ್ಕಾರ ರಚನೆ ಮಾಡುತ್ತೇವೆ. ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ 140 ಸೀಟುಗಳನ್ನು ಗೆದ್ದು ಸರ್ಕಾರ ರಚಿಸುತ್ತೇವೆ. ಮಾದಪ್ಪನ ಆಣೆಗೂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದು ರಾಮನಗರದಲ್ಲಿ ಕಾಂಗ್ರೆಸ್ ಶಾಸಕರು ಹೇಳಿಕೆ ನೀಡಿದರು.
ಬೆಂಗಳೂರು : ಬೆಂಗಳೂರಲ್ಲಿ ಭಾರಿ ಕಳ್ಳತನ ಒಂದು ನಡೆದಿದ್ದು ತಂದೆಯೊಬ್ಬರು ತನ್ನ ಮೂವರು ಹೆಣ್ಣು ಮಕ್ಕಳ ಕಾಲೇಜು ಪೀಸ್ ಗಾಗಿ ಎಂದು ಕಷ್ಟಪಟ್ಟು ಕೂಡಿಟ್ಟಿದಂತಹ ಹಣ ಮತ್ತು ಚೀನಾ ಭರಣವನ್ನು ಖದೀಮರು ಕಳ್ಳತನ ಮಾಡಿರುವ ಘಟನೆ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಬೆಂಗಳೂರಿನ ಪ್ಯಾಲೇಸ್ ಆವರಣದಲ್ಲಿ ವಾಸಿಸುವ ಶ್ರೀನಿವಾಸ್ ಎಂಬ ಕಾರ್ಮಿಕರ ಮನೆಯಲ್ಲಿ ಕಳ್ಳತನ ನಡೆದಿದೆ. ತನ್ನ ಮೂವರು ಹೆಣ್ಣುಮಕ್ಕಳ ಕಾಲೇಜು ಶುಲ್ಕಕ್ಕಾಗಿ ಸಾಲದ ಮೂಲಕ ಸಂಗ್ರಹಿಸಿದ್ದ 65,000 ರೂಪಾಯಿ ನಗದು ಮತ್ತು 5 ಗ್ರಾಂ ಚಿನ್ನಾಭರಣವನ್ನು ಕಳ್ಳರು ದೋಚಿದ್ದಾರೆ. ನಿನ್ನೆ ಮಧ್ಯಾಹ್ನದ ವೇಳೆ, ಶ್ರೀನಿವಾಸ್ ಮತ್ತು ಅವರ ಪತ್ನಿ ಕೆಲಸಕ್ಕೆ ತೆರಳಿದ್ದರು, ಮತ್ತು ಅವರ ಮೂವರು ಮಕ್ಕಳು ಕಾಲೇಜಿಗೆ ಹೋಗಿದ್ದರು. ಈ ಸಂದರ್ಭದಲ್ಲಿ ಮನೆ ಖಾಲಿಯಾಗಿತ್ತು. ಅಪರಿಚಿತ ವ್ಯಕ್ತಿಗಳು ಮನೆಯ ಬಾಗಿಲನ್ನು ಮುರಿದು ಒಳನುಗ್ಗಿ, ಕಳೆದ ವಾರ ಸಾಲದ ಮೂಲಕ ಸಂಗ್ರಹಿಸಿದ್ದ 65,000 ರೂಪಾಯಿ ನಗದು ಮತ್ತು 5 ಗ್ರಾಂ ಚಿನ್ನಾಭರಣವನ್ನು ಕಳ್ಳತನ ಮಾಡಿದ್ದಾರೆ. ಘಟನೆಯ ಬಗ್ಗೆ…
ವಿಜಯನಗರ : ರಾಜ್ಯದಲ್ಲಿ ಒಂದು ಹೃದಯವಿದ್ರಾವಕ ಘಟನೆ ನಡೆದಿದ್ದು, ಪಾಪಿಗಳು ನವಜಾತ ಹೆಣ್ಣು ಶಿಶುವನ್ನು ಚರಂಡಿಯಲ್ಲಿ ಬಿಸಾಡಿ ಹೋಗಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದಲ್ಲಿ ನಿನ್ನೆ ನಡೆದಿದೆ. ದಶಮಾಪುರ ಗ್ರಾಮದ ಆಶಾ ಕಾರ್ಯಕರ್ತೆ ಮಲ್ಲಮ್ಮ ಅವರು ನೀಡಿರುವ ಪ್ರಕರಣದ ಪ್ರಕಾರ, ಗ್ರಾಮದ ಕಣಿವೆಹಳ್ಳಿ ಕೃಷ್ಣಪ್ಪನವರ ಗಣದ ಪಕ್ಕದಲ್ಲಿರುವ ಚರಂಡಿಯಲ್ಲಿ ನವಜಾತ ಅಪರಿಚಿತ ಹೆಣ್ಣು ಶಿಶುವಿನ ಶವ ಅಂಗಾತವಾಗಿ ತೇಲುತ್ತಿದ್ದನ್ನು ಗ್ರಾಮಸ್ಥರು ಗಮನಿಸಿದ್ದಾರೆ. ಈ ಬಗ್ಗೆ ಅವರು ಮಾತನಾಡಿಕೊಳ್ಳುತ್ತಿದ್ದನ್ನು ತಿಳಿದುಕೊಂಡು ಕೂಡಲೇ ಗ್ರಾಮ ಅಭಿವೃದ್ಧಿ ಅಧಿಕಾರಿ ನವೀನ್ ಅವರಿಗೆ ದೂರವಾಣಿ ಮೂಲಕ ತಿಳಿಸಿ ಗ್ರಾಮ ಪಂಚಾಯತ್ ಸಿಬ್ಬಂದಿಯೊಂದಿಗೆ ಶಿಶುವನ್ನು ಚರಂಡಿಯಿಂದ ಹೊರ ತೆಗೆದು ನೋಡಿದಾಗ ಶಿಶು ಸುಮಾರು 2-3 ದಿನಗಳ ಹಿಂದೆ ಜನಿಸಿದ ನವಜಾತ ಶಿಶು ಎಂದು ತಿಳಿದು ಬಂದಿದೆ. ಕಚೇರಿಯ ಮೇಲ್ವಿಚಾರಕಿಯರಾದ ನಾಗರತ್ನಮ್ಮ, ಲಲಿತಮ್ಮ ಸ್ಥಳಕ್ಕೆ ಬಂದು ನೋಡಿ ವಿಷಯವನ್ನು ಪೊಲೀಸ್ ಠಾಣೆಯಲ್ಲಿ ತಿಳಿಸಿ ನವಜಾತ ಮೃತ ಹೆಣ್ಣು ಶಿಶುವಿನ ವಾರಸುದಾರರನ್ನು ಪತ್ತೆ ಮಾಡಿ ಅವರ ವಿರುದ್ಧ…
ಬಾಗಲಕೋಟೆ : ಬಾಗಲಕೋಟೆಯಲ್ಲಿ ಇಂದು ಘೋರ ದುರಂತ ನಡೆದಿದ್ದು, ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮುಳುಗಿ ಇಬ್ಬರು ಮೃತ ಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಚಿಕನಾಳ ಗ್ರಾಮದಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ. ಮೃತರನ್ನು ಕೊಪ್ಪಳ ಜಿಲ್ಲೆ ಬಳೂಟಗಿ ಗ್ರಾಮದ ನಿವಾಸಿ ಮಂಜುನಾಥ ಬಾಲಪ್ಪ ಬಂಡಿ(13) ಚಿಕನಾಳ ಗ್ರಾಮದ ನಿವಾಸಿ ಷಣ್ಮುಖಪ್ಪ ನಿಲಪ್ಪ ತಿಪ್ಪಣ್ಣವರ (30) ಎಂದು ತಿಳಿದು ಬಂದಿದೆ. ಈ ಸಂಬಂಧ ಅಮೀನಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಳ್ಳದಲ್ಲಿ ಕಾಲು ಜಾರಿ ಬಿದ್ದ ಬಾಲಕನ್ನು ರಕ್ಷಿಸಲು ಹೋಗಿ ಯುವಕ ಕೂಡ ಮೃತಪಟ್ಟಿದ್ದಾನೆ ಎನ್ನಲಾಗಿದೆ. ನೀರುಪಾಲಾದ ಇಬ್ಬರ ಮೃತ ದೇಹವನ್ನು ಹೂರಗೆ ತೆಗೆದು, ಗುಡೂರ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಕಳಿಸಲಾಗಿದೆ.
ಕೊಪ್ಪಳ : ಇತ್ತೀಚಿಗೆ ಪೊಲೀಸ್ ಇಲಾಖೆಯಲ್ಲಿ ಪಿಎಸ್ಐ ನೇಮಕಾತಿಯಲ್ಲಿ ಬಹುದೊಡ್ಡ ಹಗರಣ ನಡೆದಿತ್ತು. ಹಾಗಾಗಿ ಕಳೆದ ಐದು ವರ್ಷದಿಂದ ಯಾವುದೇ ನೇಮಕಾತಿ ಆಗಿಲ್ಲ. ಇದೀಗ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಂದು ಸಾವಿರ ಪಿಎಸ್ಐ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ 500 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ನಡೆದಿದ್ದು, ಅವರೆಲ್ಲ ತರಬೇತಿ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಎಂಟು ಸಾವಿರ ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇವೆ. ಆದ್ಯತೆಯ ಮೇರೆಗೆ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ರಾಜ್ಯದಲ್ಲಿ ಹೆಚ್ಚುವರಿ ಟ್ರಾಫಿಕ್ ಪೊಲೀಸ್ ಸ್ಟೇಷನ್ ಸೇರಿದಂತೆ ಇನ್ನಿತರ ಕಾರ್ಯಚಟುವಟಿಕೆಗಳಿಗೆ ಮುಂದಿನ ಬಜೆಟ್ನಲ್ಲಿ ಅನುದಾನ ಮೀಸಲಿಡಲಾಗುವುದು ಎಂದರು. ಆಳಂದ ಶಾಸಕ ಬಿ.ಆರ್. ಪಾಟೀಲ್, ಸಚಿವ ಹೆಚ್. ಕೆ. ಪಾಟೀಲ್ ಆರೋಪದ ಬಗ್ಗೆ ಪ್ರತ್ರಿಕ್ರಿಯಿಸಿ, ಅವರು ಆರೋಪ ಮಾಡಿದ್ದು ಸರ್ಕಾರದ ವಿರುದ್ಧವಲ್ಲ ಬಿ.ಆರ್. ಪಾಟೀಲ್ ಹಿರಿಯರು, ಅವರ ಸಲಹೆಯನ್ನು ಕೂಡ ಸರ್ಕಾರ ಸ್ವೀಕರಿಸಲಿದೆ. ಸರ್ಕಾರ…
ಶಿವಮೊಗ್ಗ : ಶಿವಮೊಗ್ಗದಲ್ಲಿ ಮತ್ತೊಂದು ಘೋರವಾದ ದುರಂತವೊಂದು ನಡೆದಿದ್ದು, ಜಮೀನೊಂದರ ಕೃಷಿ ಹೊಂಡಕ್ಕೆ ಯುವಕರಿಬ್ಬರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ದಾರುಣ ಘಟನೆ, ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಯಡವಾಲ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಮೃತ ಯುವಕರನ್ನು ಯಡವಾಲ ಗ್ರಾಮದ ನಿವಾಸಿ ಗೌತಮ್ (22) ಹಾಗೂ ಶಿವಮೊಗ್ಗದ ಕುಂಬಾರಗುಂಡಿ ಬಡಾವಣೆ ನಿವಾಸಿ ಚಿರಂಜೀವಿ (22) ಎಂದು ತಿಳಿದುಬಂದಿದೆ.ಘಟನೆಯಲ್ಲಿ ಹೊಂಡಕ್ಕೆ ಬಿದ್ದಿದ್ದ ಮತ್ತೋರ್ವ ಯುವಕ ಈಜಿ ದಡ ಸೇರಿದ್ದಾನೆ ಎಂದು ತಿಳಿದುಬಂದಿದೆ. ಮೃತ ಗೌತಮ್ ಅವರ ಕುಟುಂಬಕ್ಕೆ ಸೇರಿದ ತೋಟದ ಪಕ್ಕದ ಜಮೀನೊಂದರ ಬಳಿ ಘಟನೆ ನಡೆದಿದೆ. ರಾತ್ರಿ ಗೌತಮ್ ಸುಮಾರು 10 ಜನ ಸ್ನೇಹಿತರ ಜೊತೆಗೂಡಿ ತೋಟಕ್ಕೆ ಹೋಗಿದ್ದರು. ಈ ವೇಳೆ ಕೃಷಿ ಹೊಂಡದಿಂದ ನೀರು ತರಲು ಹೋದಾಗ ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದು ಈತನ ರಕ್ಷಣೆಗೆ ಹೋದ ಮತ್ತೋರ್ವನು ನೀರು ಪಾಲಾಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ತಂಡ ಆಗಮಿಸಿದೆ. ಕೃಷಿ ಹೊಂಡದಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ.…
ರಾಮನಗರ : ಕಾಂಗ್ರೆಸ್ ಶಾಸಕ ಬಿ ಆರ್ ಪಾಟೀಲ್ ಆಡಿಯೋ ವೈರಲ್ ಆದ ಬಳಿಕ ಸರ್ಕಾರಕ್ಕೆ ಬಿಗ್ ಡ್ಯಾಮೇಜ್ ಆಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡ್ತಿದೆ ಎನ್ನುವ ಆರೋಪವನ್ನ ಅವರದ್ದೇ ಪಕ್ಷದ ಶಾಸಕರು ಮಾಡ್ತಿದ್ದು, ಸರ್ಕಾರ ಮುಜುಗರ ಉಂಟು ಮಾಡ್ತಿದೆ. ಈಗ ಈ ವಿಚಾರವಾಗಿ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಮಾತನಾಡಿದ್ದು ವಸತಿ ಯೋಜನೆ ಅಡಿಯಲ್ಲಿ ಮನೆ ಹಂಚಿಕೆಗೆ ಲಂಚ ಪಡೆದ ಆರೋಪ ಸುಳ್ಳು ಎಂದು ತಿಳಿಸಿದರು. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಸತಿ ಯೋಜನೆ ಅಡಿ ಮನೆ ಹಂಚಿಕೆಗೆ ಲಂಚ ಪಡೆದ ಆರೋಪ ಸುಳ್ಳು. ಗ್ರಾಮ ಸಭೆಯಲ್ಲಿ ಯಾರೋ ಒಬ್ಬರು ಹೇಳಿದರೆ ಅದು ಆಗುತ್ತಾ? ಗ್ರಾಮ ಪಂಚಾಯಿತಿಯವರೇ ಈ ಬಗ್ಗೆ ತೀರ್ಮಾನ ಮಾಡುವುದು. ಮಂತ್ರಿ ಹಾಗೂ ಸರ್ಕಾರಕ್ಕೂ ಏನು ವ್ಯತ್ಯಾಸ ಇದೆ ಅದೆಲ್ಲ ಸುಳ್ಳು. ಬಿ ಆರ್ ಪಾಟೀಲ್ ಗೆ ಸಂಪೂರ್ಣ ಮಾಹಿತಿ ಇದೆಯೋ ಇಲ್ಲವೋ ಗೊತ್ತಿಲ್ಲ. ಶಾಸಕ ಬಿ ಆರ್ ಪಾಟೀಲ್ ಜೊತೆಗೆ ನಾನು ಈ ಕುರಿತು ಮಾತನಾಡುತ್ತೇನೆ ಎಂದು…