Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಸಚಿವ ಡಿ. ಸುಧಾಕರ್ ನಿಧನಕ್ಕೆ ಸಂತಾಪ ಸೂಚಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಚಿತ್ರದುರ್ಗಕ್ಕೆ ಇಂದು ಸರ್ಕಾರ ರಜೆ ಘೋಷಣೆ ಮಾಡಿದ್ದು, ರಾಜ್ಯಾದ್ಯಂತ 3 ದಿನ ಸಂತಾಪ ಕೋರಲು ತಿಳಿಸಲಾಗಿದೆ. ಇನ್ನು ಮೃತರ ಅಂತಿಮ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ಸರ್ಕಾರ ಸೂಚನೆ ನೀಡಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯೂರು ಶಾಸಕರು ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ ಸುಧಾಕರ್ ಅವರು ಮೇ 10 ರಂದು ಬೆಳಗಿನ ಜಾವ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಹಿನ್ನೆಲೆ ಸರ್ಕಾರ ಸಂತಾಪ ಸೂಚಿಸಿ ಅಧಿಸೂಚನೆ ಹೊರಡಿಸಿದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರ ಆದೇಶಿಸಿದೆ. ಮೇ 10 ರಿಂದ 12 ರವರೆಗೆ ಮೂರು ದಿನಗಳು ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ನಿಯತವಾಗಿ ಹಾರಿಸಲ್ಪಡುವ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಿದಲಾಗಿದೆ.
ಬೆಂಗಳೂರು: ರಾಜ್ಯ ರಾಜಕಾರಣದ ಹಿರಿಯ ಮುಖಂಡರು ಹಾಗೂ ಹಾಲಿ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (63) ಅವರು ಭಾನುವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಸಚಿವರ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಮೂರು ದಿನಗಳ ರಾಜ್ಯ ಶೋಕಾಚರಣೆ ಸಚಿವ ಸುಧಾಕರ್ ಅವರ ಗೌರವಾರ್ಥವಾಗಿ ರಾಜ್ಯ ಸರ್ಕಾರವು ಮೇ 10 ರಿಂದ ಮೇ 12 ರವರೆಗೆ ಒಟ್ಟು ಮೂರು ದಿನಗಳ ಕಾಲ ರಾಜ್ಯಾದ್ಯಂತ ಅಧಿಕೃತ ಶೋಕಾಚರಣೆಯನ್ನು ಘೋಷಿಸಿದೆ. ಈ ಅವಧಿಯಲ್ಲಿ ರಾಜ್ಯದಾದ್ಯಂತ ಯಾವುದೇ ಸರ್ಕಾರಿ ಮನರಂಜನಾ ಕಾರ್ಯಕ್ರಮಗಳು ನಡೆಯುವುದಿಲ್ಲ ಮತ್ತು ಎಲ್ಲಾ ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲು ಸೂಚಿಸಲಾಗಿದೆ. ಚಿತ್ರದುರ್ಗ ಜಿಲ್ಲೆಗೆ ಸರ್ಕಾರಿ ರಜೆ ಮೃತರ ಸ್ವಗ್ರಾಮ ಮತ್ತು ಕಾರ್ಯಕ್ಷೇತ್ರವಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ಸೋಮವಾರ (ಮೇ 11) ಸರ್ಕಾರಿ ರಜೆಯನ್ನು ಘೋಷಿಸಲಾಗಿದೆ. ಜಿಲ್ಲೆಯ…
ಬೆಂಗಳೂರು: ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭೇಟಿಯ ನಡುವೆಯೇ ರಾಜಧಾನಿ ಬೆಂಗಳೂರಿನಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿರುವುದು ತೀವ್ರ ಸಂಚಲನ ಮೂಡಿಸಿದೆ. ಪ್ರಧಾನಿಗಳು ಸಂಚರಿಸಬೇಕಿದ್ದ ಕಗ್ಗಲೀಪುರದ ತಾತಗುಣಿ ರಸ್ತೆಯ ಸಮೀಪದಲ್ಲಿ ಜಿಲೇಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಭದ್ರತಾ ದೃಷ್ಟಿಯಿಂದ ಇದು ಅತ್ಯಂತ ಗಂಭೀರ ವಿಚಾರವಾಗಿ ಪರಿಣಮಿಸಿದೆ. ಬದಲಾದ ಪ್ರಧಾನಿ ಕಾರ್ಯಕ್ರಮ ಪೂರ್ವ ನಿಯೋಜಿತ ವೇಳಾಪಟ್ಟಿಯಂತೆ ಪ್ರಧಾನಿ ಮೋದಿ ಅವರು ಇಂದು ಮಧ್ಯಾಹ್ನ 1.05ಕ್ಕೆ ಬೆಂಗಳೂರಿನ ಎಚ್‌ಎಎಲ್ (HAL) ವಿಮಾನ ನಿಲ್ದಾಣಕ್ಕೆ ತಲುಪಬೇಕಿತ್ತು. ಅಲ್ಲಿಂದ ಅವರು ವಿಶೇಷ ವಿಮಾನದ ಮೂಲಕ ಹೈದರಾಬಾದ್‌ಗೆ ಪ್ರಯಾಣ ಬೆಳೆಸಬೇಕಿತ್ತು. ಆದರೆ, ಸ್ಫೋಟಕಗಳು ಪತ್ತೆಯಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅವರ ಪ್ರಯಾಣದಲ್ಲಿ ವಿಳಂಬವಾಗಿದೆ. ಸದ್ಯ ಪ್ರಧಾನಿಗಳು ಕನಕಪುರ ರಸ್ತೆಯ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲೇ ಉಳಿದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರಿಂದ ಓರ್ವನ ಬಂಧನ ಘಟನೆ ನಡೆದ ತಕ್ಷಣವೇ ಕಾರ್ಯಪ್ರವೃತ್ತರಾದ ಬೆಂಗಳೂರು ಪೊಲೀಸರು ಸ್ಫೋಟಕಗಳಿದ್ದ ಸ್ಥಳವನ್ನು ತಮ್ಮ ಸುಪರ್ದಿಗೆ ಪಡೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ…
ಚೈನ್ನೈ : ತಮಿಳುನಾಡಿನಲ್ಲಿ ಮೊಟ್ಟ ಮೊದಲ ಬಾರಿಗೆ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಅಧಿಕಾರಕ್ಕೆ ಬಂದಿದ್ದು, ಇಂದು ಚೆನ್ನೈನ ಜವಾಹರ್ಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. ಈ ವೇಳೆ ನಟ ವಿಜಯ್ ಪ್ರಮಾಣ ವಚನ ಸ್ವೀಕರಿಸಿ ಇದೀಗ ಮುಖ್ಯಮಂತ್ರಿ ಕುರ್ಚಿಯನ್ನು ಅಲಂಕರಿಸಿದ್ದಾರೆ. ಸಿನಿಮೀಯ ಶೈಲಿಯಲ್ಲಿ ಕುರ್ಚಿ ಅಲಂಕರಿಸಿದ ಸಿಎಂ: ಪ್ರಮಾಣ ವಚನ ಸ್ವೀಕರಿಸಿದ ಬಳಿಕ ವೇದಿಕೆಯ ಮೇಲೆ ಸಿದ್ಧಪಡಿಸಲಾಗಿದ್ದ ಮುಖ್ಯಮಂತ್ರಿಗಳ ಅಧಿಕೃತ ಆಸನದ ಬಳಿ ಬಂದ ವಿಜಯ್, ಕೆಲ ಕ್ಷಣಗಳ ಕಾಲ ಕುರ್ಚಿಯನ್ನೇ ದಿಟ್ಟಿಸಿ ನೋಡಿದರು. ನಂತರ ಭಾವುಕರಾಗಿ ಕೈಮುಗಿದು, ಅತ್ಯಂತ ನಿಧಾನವಾಗಿ ಸಿಎಂ ಕುರ್ಚಿಯ ಮೇಲೆ ಆಸೀನರಾದರು. ಬೆಳ್ಳಿತೆರೆಯ ಮೇಲೆ ಮಾಸ್ ಎಂಟ್ರಿ ನೀಡುವಂತೆ, ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ಕುರ್ಚಿ ಅಲಂಕರಿಸಿದ ದಳಪತಿಯನ್ನು ಕಂಡು ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಮಹಿಳಾ ಸುರಕ್ಷತೆ ಮತ್ತು ಉಚಿತ ವಿದ್ಯುತ್‌ಗೆ ಆದ್ಯತೆ: ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ವಿಜಯ್ ಅವರು ಜನರ ನಿರೀಕ್ಷೆಯಂತೆ ಜನಪರ ಯೋಜನೆಗಳಿಗೆ ಚಾಲನೆ ನೀಡಿದರು. ತಮ್ಮ ಮೊದಲ…
ಚಾಮರಾಜನಗರ : ನಾಡಿನ ಪ್ರಸಿದ್ಧ ಯಾತ್ರಾಸ್ಥಳವಾದ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ದಾಳಿ ನಡೆಸಿದ್ದು, ಪಾಲಕರ ಜೊತೆ ಬಂದಿದ್ದ ಬಾಲಕ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಲಗ್ಗೆರೆ ವಾರ್ಡ್‌ನ ನಿವಾಸಿ ಸುರೇಶ ಎಂಬವರ ಪುತ್ರ ಹರ್ಷಿತ್ ಚಿರತೆ ದಾಳಿಯಿಂದ ಮೃತಪಟ್ಟಿದ್ದಾನೆ. ಲಗ್ಗೆರೆ ವಾರ್ಡ್‌ನ ನಿವಾಸಿಗಳು ಶನಿವಾರ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ದೇವರ ದರ್ಶನ ಪಡೆದ ವಾಸ್ತವ್ಯ ಹೂಡಿದ್ದರು. ಇಂದು ಬೆಳಗ್ಗೆ 10ಕ್ಕೂ ಹೆಚ್ಚು ಜನರು ನಾಗಮಲೆಗೆ ತೆರಳುತ್ತಿದ್ದಾಗ ಇಂಡಿಗನತ್ತ ಗ್ರಾಮದ ಸಮೀಪ ಬಾಲಕನ ಮೇಲೆ ಚಿರತೆ ದಾಳಿ ನಡೆಸಿ ಪೊದೆಗೆ ಎಳೆದೊಯ್ದು ಕೊಂದಿದೆ. ಈ ಸಂದರ್ಭದಲ್ಲಿ ಜತೆಗಿದ್ದ ಕುಟುಂಬಸ್ಥರು ಜೋರಾಗಿ ಕಿರುಚಾಡಿದರೂ ಬಿಡದೆ ಎಳೆದೊಯ್ದ ಚಿರತೆ ಬಾಲಕನನ್ನು ಕೊಂದು ಹಾಕಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ಪಡೆದು ಶವ ಪತ್ತೆ ಹಚ್ಚಿದ್ದಾರೆ.
ಬೆಂಗಳೂರು : ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ವಿಜಯ ಸಾಧಿಸಿದ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಹೆಚ್‌ಎಎಲ್ ವಿಮಾನ ನಿಲ್ದಾಣದ ಬಳಿ ನೆರೆದಿದ್ದ ಸಾವಿರಾರು ಬಿಜೆಪಿ ಕಾರ್ಯಕರ್ತರನ್ನು, ಅಭಿಮಾನಿಗಳನ್ನು ಉದ್ದೇಶಿಸಿ ಭರ್ಜರಿ ಭಾಷಣ ಮಾಡಿದರು. ಅದಾದ ಬಳಿಕ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮೋತ್ಸವ ಹಾಗೂ ಆರ್ಟ್ ಆಫ್ ಲಿವಿಂಗ್ ಆಶ್ರಮದ 45ನೇ ವರ್ಷದ ಕಾರ್ಯಕ್ರಮದಲ್ಲಿ ಭಾಗಿಯಾದರು. ಇವಳೆ ಧ್ಯಾನ ಮಂದಿರ ಉದ್ಘಾಟಿಸಿದರು. ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ತೆರಳುವ ಮುನ್ನ ಮಾತನಾಡಿದ ಅವರು, ಭಾರತವು ಬಲಿಷ್ಠವಾಗಬೇಕಾದರೆ ಅದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ. ನಮಗೆ ಮಾನಸಿಕ ಶಾಂತಿ ಮತ್ತು ಆಧ್ಯಾತ್ಮಿಕ ಬಲವೂ ಬೇಕು. ಶ್ರೀ ಶ್ರೀ ರವಿಶಂಕರ್ ಗುರೂಜಿಯವರಂತಹ ಮಹನೀಯರು ಈ ಕೆಲಸವನ್ನು ಜಾಗತಿಕ ಮಟ್ಟದಲ್ಲಿ ಮಾಡುತ್ತಿದ್ದಾರೆ. ಅವರ 70ನೇ ಜನ್ಮೋತ್ಸವದ ಸಂದರ್ಭದಲ್ಲಿ ಹೊಸ ಧ್ಯಾನ ಮಂದಿರ ಉದ್ಘಾಟಿಸುತ್ತಿರುವುದು ನನ್ನ ಸೌಭಾಗ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಪ್ರಧಾನಿ ಮೋದಿ,…
ಕಲಬುರಗಿ: ಪ್ರೀತಿ ಎಂಬುದು ಎಷ್ಟು ಸುಂದರವೋ, ಅದು ಮುರಿದುಬಿದ್ದಾಗ ಆಗುವ ನೋವು ಅಷ್ಟೇ ಭೀಕರ. ಪ್ರೀತಿಸಿದ ಹುಡುಗಿ ಕೈಕೊಟ್ಟಾಗ ಯುವಕನೊಬ್ಬ ತನ್ನ ಅಜ್ಜಿಯ ಮುಂದೆ ಕಣ್ಣೀರಿಡುತ್ತಾ ಮಗುವಿನಂತೆ ನೋವು ತೋಡಿಕೊಂಡಿರುವ ಹೃದಯಸ್ಪರ್ಶಿ ವಿಡಿಯೋವೊಂದು ಈಗ ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಪ್ರೀತಿಸಿದ ಹುಡುಗಿಯಿಂದ ದೂರಾದ ನೋವು: ಮೂಲತಃ ಕಲಬುರಗಿಯವನಾದ ಮೌನೇಶ್ ಎಂಬ ಯುವಕ ಈ ವಿಡಿಯೋ ಹಂಚಿಕೊಂಡಿದ್ದಾನೆ. ತಾನು ಗಾಢವಾಗಿ ಪ್ರೀತಿಸಿದ ಯುವತಿ, “ನಮ್ಮ ಪ್ರೀತಿಯನ್ನು ಮನೆಯವರು ಒಪ್ಪುತ್ತಿಲ್ಲ” ಎಂಬ ಕಾರಣ ನೀಡಿ ಆತನಿಂದ ದೂರಾಗಿದ್ದಾಳೆ. ಪ್ರೀತಿಯಲ್ಲಿ ಸೋತ ಯುವಕ ಆಘಾತಕ್ಕೊಳಗಾಗಿ, ತನ್ನ ನೋವನ್ನು ತಡೆದುಕೊಳ್ಳಲಾಗದೆ ಅಜ್ಜಿಯ ಮೊರೆ ಹೋಗಿದ್ದಾನೆ. ಅಜ್ಜಿಯ ಬಳಿ ಅಳಲು ತೋಡಿಕೊಂಡ ಮೊಮ್ಮಗ: ತನ್ನ ಇನ್‌ಸ್ಟಾಗ್ರಾಮ್ ಖಾತೆಯಾದ (m.k.bhai.mounesh) ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ, ಯುವಕ ಅಜ್ಜಿಯ ಬಳಿ ಕುಳಿತು ಅಳುತ್ತಿದ್ದಾನೆ. “ನನಗೆ ರಾತ್ರಿ ನಿದ್ದೆ ಬರುತ್ತಿಲ್ಲ, ಆಕೆಯನ್ನು ಮರೆಯಲು ಸಾಧ್ಯವಾಗುತ್ತಿಲ್ಲ, ಸಿಕ್ಕಾಪಟ್ಟೆ ಅಳು ಬರುತ್ತಿದೆ” ಎಂದು ಅಜ್ಜಿಯ ಮಡಿಲಲ್ಲಿ ಮಗುವಿನಂತೆ ಅತ್ತು ತನ್ನ…
ಬೆಂಗಳೂರು : ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ (BJP) ಐತಿಹಾಸಿಕ ವಿಜಯ ಸಾಧಿಸಿದ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಹೆಚ್‌ಎಎಲ್ ವಿಮಾನ ನಿಲ್ದಾಣದ ಬಳಿ ನೆರೆದಿದ್ದ ಸಾವಿರಾರು ಬಿಜೆಪಿ ಕಾರ್ಯಕರ್ತರನ್ನು, ಅಭಿಮಾನಿಗಳನ್ನು ಉದ್ದೇಶಿಸಿ ಭರ್ಜರಿ ಭಾಷಣ ಮಾಡಿದರು. ಬಂಗಾಳದ ಗೆಲುವಿನ ಸಂಭ್ರಮದ ಜೊತೆಗೆ ಕರ್ನಾಟಕದೊಂದಿಗಿನ ತಮ್ಮ ಅವಿನಾಭಾವ ಸಂಬಂಧ ಮತ್ತು ದೇಶದ ಅಭಿವೃದ್ಧಿಯಲ್ಲಿ ಕನ್ನಡಿಗರ ಪಾತ್ರವನ್ನು ಪ್ರಧಾನಿ ಮುಕ್ತಕಂಠದಿಂದ ಶ್ಲಾಘಿಸಿದರು. ಕಾಂಗ್ರೆಸ್ ಎಲ್ಲೆಲ್ಲಿ ಅಧಿಕಾರಕ್ಕೆ ಬರುತ್ತದೆಯೋ ಅಲ್ಲೆಲ್ಲ ಒಂದೊಂದು ಸಮಸ್ಯೆ ಇದ್ದೇ ಇರುತ್ತದೆ. ಹಿಮಾಚಲ ಪ್ರದೇಶದಲ್ಲಿ ಸಫಾಯಿ ಕರ್ಮಚಾರಿಗಳಿಗೆ ವೇತನ ದೊರೆಯುತ್ತಿಲ್ಲ. ತೆಲಂಗಾಣದಲ್ಲಿ ರೈತರ ಆತ್ಮಹತ್ಯೆಗಳಾಗುತ್ತಿವೆ. ಕೇರಳದಲ್ಲಿ ಬಹುಮತದೊಂದಿಗೆ ಚುನಾವಣೆ ಗೆದ್ದರೂ ಇನ್ನೂ ಸಿಎಂ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಇಲ್ಲಿ ಕರ್ನಾಟಕದಲ್ಲೂ ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ ಎಂದು ಹೇಳುವ ಮೂಲಕ ರಾಜ್ಯ ಸರ್ಕಾರದ ಆಂತರಿಕ ಕಚ್ಚಾಟವನ್ನು ಮೋದಿ ಲೇವಡಿ ಮಾಡಿದರು. ಬೆಂಗಳೂರನ್ನು ಭಾರತದ ಭವಿಷ್ಯದ ಎಂಜಿನ್ ಎಂದು ಕರೆದ ಪ್ರಧಾನಿ, ‘ಇಂದು ಇಡೀ…
ಚೈನ್ನೈ : ತಮಿಳುನಾಡಿನ ಚೆನ್ನೈನಲ್ಲಿ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಇಂದು ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ತಮಿಳುನಾಡು ಸಿಎಂ ಆದ ಬಳಿಕ ವಿಜಯ್ ಮೊದಲ ಭಾಷಣ ಮಾಡಿದ್ದು ಇದು ನನ್ನ ಗೆಲುವಲ್ಲ ಇದು ತಮಿಳುನಾಡಿನ ಜನತೆಯ ಗೆಲುವು. ಇಂದಿನಿಂದ ತಮಿಳುನಾಡಲ್ಲಿ ಹೊಸ ಯುಗ ಆರಂಭವಾಗಿದೆ ಎಂದು ಹೇಳಿದರು. ಪ್ರಣಾಳಿಕೆಯ ಮೊದಲ ಭರವಸಿಗೆ ವಿಜಯ್ ಸಹಿ ಹಾಕಿದ ಬಳಿಕ ಮಾತನಾಡಿದ ಅವರು, ನಾನು ಕೊಟ್ಟಿರುವ ಗ್ಯಾರಂಟಿಗಳನ್ನು ಈಡೇರಿಸುತ್ತೇನೆ.10 ಲಕ್ಷ ಕೋಟಿ ಸಾಲವನ್ನು ನನ್ನ ಮೇಲೆ ಹೊರಿಸಿದ್ದಾರೆ. ಸ್ಟಾಲಿನ್ ನೇತೃತ್ವದ ಹಿಂದಿನ ಸರ್ಕಾರ ರಾಜ್ಯದ ಖಜಾನೆ ಖಾಲಿ ಮಾಡಿದೆ. ಮೇಲೆ ಏಳಲು ಕಷ್ಟವಾಗಿದೆ. ತಮಿಳುನಾಡಿನ ಆರ್ಥಿಕ ದುಸ್ಥಿತಿಯಲ್ಲಿದೆ. ಇಂತಹ ಸಮಯದಲ್ಲಿ ನಾನು ಬಂದಿದ್ದೇನೆ. ರಾಜ್ಯದ ಆರ್ಥಿಕತೆ ಬಗ್ಗೆ ಶ್ವೇತಪತ್ರ ಹೊರಡಿಸುತ್ತೇನೆ. ತಮಿಳುನಾಡಿನಲ್ಲಿ ಇದೀಗ ಹೊಸ ಯುಗ ಆರಂಭವಾಗಿದೆ. ತಮಿಳುನಾಡಿನ ಎಂಟು ಕೋಟಿ ಜನರು ನಮ್ಮವರೇ ನಿಮ್ಮ ಒಂದು ರೂಪಾಯಿಯನ್ನು ಲೂಟಿ ಹೊಡೆಯಲು ಬಿಡಲ್ಲ ಎಂದು ತಿಳಿಸಿದರು.…
ನವದೆಹಲಿ : ಇಂದು ಚೆನ್ನೈನ ಜವಾಹರ್ಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆದ ನೂತನ ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮದಲ್ಲಿ ದಳಪತಿ ವಿಜಯ್ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಿದರು. ಈ ವಿಚಾರವಾಗಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಭವಿಷ್ಯದಲ್ಲಿ INDIA ಒಕ್ಕೂಟವನ್ನು ಸೇರಬಹುದು ಎಂದು ಕೇಂದ್ರದ ಮಾಜಿ ಹಣಕಾಸು ಸಚಿವ, ಕಾಂಗ್ರೆಸ್ ನಾಯಕ ಪಿ ಚಿದಂಬರಂ ಆಶಾವಾದ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಜಯ್ ಅವರ ಟಿವಿಕೆ ಪಕ್ಷವನ್ನು ಕೂಡ ‘ಇಂಡಿಯಾ’ ಕೂಟಕ್ಕೆ ಸೇರಲು ಮನವೊಲಿಸಬೇಕು ಎಂಬುದು ನನ್ನ ಆಸೆ. ಸ್ಟಾಲಿನ್ ಅವರು ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆಯೇ ಹೊರತು ಇಲ್ಲಿಯವರೆಗೆ ಇಂಡಿಯಾ ಕೂಟದ ಬಗ್ಗೆ ನಕಾರಾತ್ಮಕವಾಗಿ ಮಾತನಾಡಿಲ್ಲ. ಆದ್ದರಿಂದ ಅವರು ಮೈತ್ರಿಯಲ್ಲೇ ಉಳಿಯುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದು ತಿಳಿಸಿದರು. ರಾಜ್ಯ ಮಟ್ಟದಲ್ಲಿ ನಾವು ಪರಸ್ಪರ ಎದುರಾಳಿಗಳಾಗಿದ್ದರೂ ರಾಷ್ಟ್ರಮಟ್ಟದಲ್ಲಿ ಇಂಡಿಯಾ ಕೂಟದಲ್ಲಿ ಜೊತೆಯಾಗಿರಬಹುದು. ಇದಕ್ಕೆ ಕೇರಳದ ಸಿಪಿಎಂ ಮತ್ತು ಪಶ್ಚಿಮ ಬಂಗಾಳದ ಟಿಎಂಸಿ ಉದಾಹರಣೆಗಳಾಗಿವೆ ಎಂದರು.












