Subscribe to Updates
Get the latest creative news from FooBar about art, design and business.
Author: kannadanewsnow05
ಗದಗ : ಗದಗ ನಲ್ಲಿ ನವ ವಿವಾಹಿತ ನಿಗೂಢವಾಗಿ ಸಾವನಪ್ಪಿದ್ದಾರೆ. ಮದುವೆಯಾದ ನಾಲ್ಕೇ ತಿಂಗಳಿಗೆ ಮಹಿಳೆ ಸಾವನಪ್ಪಿದ್ದಾರೆ. ಗದಗ ಜಿಲ್ಲೆಯ ಬೆಟಗೇರಿಯ ಶರಣಬಸವೇಶ್ವರ ನಗರದಲ್ಲಿ ಈ ಒಂದು ಘಟನೆ ನಡೆದಿದೆ. ಬಳ್ಳಾರಿ ಮೂಲದ ಪೂಜಾ ಅಯ್ಯನಗೌಡ್ರು ಎನ್ನುವ ಮಹಿಳೆ ಸಾವನ್ನಪ್ಪಿರುವ ಮಹಿಳೆ ಎಂದು ತಿಳಿದುಬಂದಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಪೂಜಾಳ ಮೃತ ದೇಹ ಪತ್ತೆಯಾಗಿದೆ. ಮನೆ ಕೆಟಕಿಗೆ ನೇಣು ಹಾಕಿಕೊಂಡು ಸ್ಥಿತಿಯಲ್ಲಿ ಪೂಜಾ ಮೃತ ದೇಹ ಪತ್ತೆಯಾಗಿದೆ. ಕಳೆದ ನಾಲ್ಕು ತಿಂಗಳ ಹಿಂದೆ ಅಮರೇಶ ಎಂಬಾತನ ಜೊತೆಗೆ ಪೂಜಾಳ ವಿವಾಹವಾಗಿತ್ತು. ಸಾವಿಗೂ ಮುನ್ನ ಪೂಜಾ ಡೆತ್ ನೋಟ್ ಬರೆದಿಟ್ಟಿದ್ದಾಳೆ ಎನ್ನಲಾಗಿದೆ. ನನ್ನ ಸಾವಿಗೆ ಅತ್ತೆ ಮತ್ತು ಭಾವ ವೀರಣ್ಣಗೌಡ ಕಾರಣ ಎಂದು ಬರೆದಿರುವ ಡೆತ್ ನೋಟ್ ಪತ್ತೆಯಾಗಿದೆ ಡೆತ್ ನೋಟ್ ಪತ್ತೆಗುತ್ತಿದ್ದಂತೆ ಪೂಜಾ ಪೋಷಕರು ಆಕ್ರೋಶ ಅವರ ಹಾಕಿದ್ದು ಪೂಜಾ ಅತ್ತೆ ಮತ್ತು ಭಾವನ ವಿರುದ್ಧ ಕಿಡಿ ಕಾರುತ್ತಿದ್ದಾರೆ.
ಕೊಡಗು : ಕೊಡಗು ಜಿಲ್ಲೆಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ತನ್ನ ಸ್ನೇಹಿತನ ಜೊತೆಗೆ ಮೀನು ಹಿಡಿಯಲು ಹೋದ ಸಂದರ್ಭದಲ್ಲಿ ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಸವಿಗೀಡಾಗಿರುವ ಘಟನೆ ನಡೆದಿದೆ. ಹೊಸತೋಟ ಬಳಿಯ ಗರಗಂದೂರಿನಲ್ಲಿ ದುರ್ಘಟನೆ ಸಂಭವಿಸಿದೆ. ಮೃತ ಯುವಕನನ್ನು ಸೋಮವಾರಪೇಟೆ ಬಳಿಯ ನಗರೂರು ಗ್ರಾಮದ ಯೋಗೇಶ್(25) ಎಂದು ತಿಳಿದುಬಂದಿದೆ. ಮೃತ ಯೋಗೇಶ್ ಮತ್ತು ಆತನ ಸ್ನೇಹಿತ ಪ್ರದೀಪ್ ಎಂಬುವರು ಕೆಲಸಕ್ಕೆ ರಜೆ ಇದ್ದ ಹಿನ್ನೆಲೆಯಲ್ಲಿ ಮೀನು ಹಿಡಿಯಲು ಹೋದಾಗ ಈ ದುರಂತ ಸಂಭವಿಸಿದೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಿ ವಿರುದ್ಧ ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ಪೊಲೀಸ್ ಸಲ್ಲಿಸಿರುವ ಬಿ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ತಕರಾರು ಅರ್ಜಿಯ ಕುರಿತು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಬಳಿಕ ಜಡ್ಜ್ ಸಂತೋಷ್ ಗಜಾನನ ಭಟ್ ಅವರು, ಲೋಕಾಯುಕ್ತ ಪೊಲೀಸರಿಗೆ ತನಿಖೆ ಮುಂದುವರಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಮೇ 7ಕ್ಕೆ ಮುಂದೂಡಿ ಅದೇಶಿಸಿದರು. ಈ ವೇಳೆ ಜಡ್ಜ್ ಸಂತೋಷ ಗಜಾನನ ಭಟ್ ಅವರು ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ, ಪೊಲೀಸರಿಗೆ ತನಿಖೆ ಮುಂದುವರಿಸುವಂತೆ ಸೂಚನೆ ನೀಡಿದರು. ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಬಗ್ಗೆ ಸದ್ಯಕ್ಕೆ ಆದೇಶ ನೀಡಲಿಲ್ಲ. ಅಲ್ಲದೆ ಇಡಿ ಅಧಿಕಾರಿಗಳಿಗೂ ತಕರಾರು ಅರ್ಜಿ ಸಲ್ಲಿಸಬಹುದು ಎಂದು ಇದೆ ವೇಳೆ ಜಡ್ಜ್ ತಿಳಿಸಿದರು. ಬಳಿಕ ಮೇ 7ರಂದು ವಿಚಾರಣೆಯನ್ನು ಮುಂದೂಡಿದರು. ವಿಚಾರಣೆ ಆರಂಭವಾದಾಗ ಪ್ರಕರಣ ಸಂಬಂಧ ಇಂದು ಕೋರ್ಟ್ ಗೆ ದೂರುದಾರ ಸ್ನೇಹಮಯಿ…
ಬೆಳಗಾವಿ : ಇತ್ತೀಚಿಗೆ ಸೈಬರ್ ವಂಚಕರಿಂದ ಅನೇಕರು ಮೋಸ ಹೋಗಿ ಬೀದಿಗೆ ಬಂದಿದ್ದು ಅಲ್ಲದೇ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳು ಸಹ ನಡೆದಿವೆ. ಇದೀಗ ಇತ್ತೀಚಿಗೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ವೃದ್ಧ ದಂಪತಿಗಳು ಸೈಬರ್ ವಂಚಕರಿಂದ 50 ಲಕ್ಷ ಹಣ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಗುಜರಾತ ರಾಜ್ಯದ ಸೂರತ್‌ನ ನಿವಾಸಿ ಚಿರಾಗ್ ಜೀವರಾಜಬಾಯ್ ಲಕ್ಕಡ್ ಎಂದು ತಿಳಿದುಬಂದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆರೋಪಿ ವಿರುದ್ಧ ಅಪರಾಧ ಸಂಖ್ಯೆ 32/2025 ಕಲಂ 66(ಡಿ) ಐಟಿ ಕಾಯ್ದೆ ಮತ್ತು ಕಲಂ 108, 308(2), 319(2), 03(5) ಬಿಎನ್ಎಸ್ ಅಡಿ ಖಾನಾಪುರ ತಾಲೂಕಿನ ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ಹಿನ್ನೆಲೆ? ಬೀಡಿ ಗ್ರಾಮದ ಕ್ರಿಶ್ಚಿಯನ್ ಓಣಿಯ ನಿವಾಸಿಗಳಾಗಿದ್ದ ನಿವೃತ್ತ ರೈಲ್ವೆ ಉದ್ಯೋಗಿ ಡಿಯಾಗೋ ನಜರತ್ (83) ಮತ್ತು ಅವರ ಪತ್ನಿ ಪ್ಲೇವಿಯಾ ನಜರತ್ (78) ಅವರು ಮಾರ್ಚ್ 27ರಂದು…
ಬೆಂಗಳೂರು : ರಾಜ್ಯ ಸರ್ಕಾರ ಡೀಸೆಲ್ ಬೆಲೆ ಏರಿಕೆ ಮಾಡಿದ ಬೆನ್ನಲ್ಲೇ, ಇದೀಗ ಲಾರಿ ಚಾಲಕರು ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದು ಇಂದು ಮಧ್ಯರಾತ್ರಿ ಇಂದಲೇ ಲಾರಿ ಮುಷ್ಕರ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ, ಕೆಲ ಅಗತ್ಯ ವಸ್ತುಗಳು ಸಿಗೋದು ಬಹುತೇಕ ಡೌಟ್ ಎಂದೇ ಹೇಳಲಾಗುತ್ತಿದೆ. ಹಾಲು, ಔಷಧ, ಹಣ್ಣು ಮತ್ತು ತರಕಾರಿ, ಸಿಲಿಂಡರ್ ಸಾಗಣೆ ವಾಹನ, ಆಂಬುಲೆನ್ಸ್ ಅಗ್ನಿಶಾಮಕ ಸೇವೆ ವಾಹನಗಳ ಸಂಚಾರ ಇರಲಿದೆ. ಆದರೆ ಶೋರೂಮ್ ಗಳಿಗೆ ವಾಹನಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಅಕ್ಕಿ, ಬೇಳೆ, ದಿನಸಿ ಸೇರಿ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇನ್ನು ಸಿಮೆಂಟ್, ಮರಳು, ಜಲ್ಲಿಕಲ್ಲು, ಕಟ್ಟಡ ನಿರ್ಮಾಣ ಸಾಮಗ್ರಿಗಳಲ್ಲಿ ಕೊರತೆ ಕಂಡುಬರಲಿದೆ. ಪೆಟ್ರೋಲ್ ಡೀಸೆಲ್ ಸಾಗಣೆ ವಾಹನ ನಿಲುಗಡೆಯಿಂದ ಇವೆಲ್ಲ ಸಮಸ್ಯೆಗಳು ಎದುರಾಗಲಿವೆ. ಎರಡು ಅಥವಾ ಮೂರು ದಿನಗಳಲ್ಲಿ ಪೆಟ್ರೋಲ್ ಡೀಸೆಲ್ ಲಭ್ಯತೆಯಲ್ಲಿ ಕೂಡ ಕೊರತೆ ಉಂಟಾಗಲಿದೆ. ನೆರೆ ರಾಜ್ಯಗಳಿಂದ ಬರುವ ಲಾರಿ ಮತ್ತು ಟ್ರಕ್ ಗಳಿಗೆ ತಡೆ ಬೀಳುವುದರಿಂದ ಶೋರೂಮ್ಗಳಿಗೆ ವಾಹನಗಳ ಪೂರೈಕೆಯಲ್ಲೂ…
ಬೆಂಗಳೂರು : ಜಾತಿ ಗಣತಿ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಶಾಸಕರ ಜೊತೆ ಚರ್ಚಿಸಲು ಡಿಸಿಎಂ ಡಿ.ಕೆ.ಶಿವಕುಮಾರ್ ನಾಳೆ ಸಭೆ ಕರೆದಿದ್ದಾರೆ.ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಮುದಾಯದ ಶಾಸಕರ ಜೊತೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಜಾತಿ ಗಣತಿ ವರದಿಯನ್ನು ಸಂಪೂರ್ಣವಾಗಿ ನೋಡಿಲ್ಲ, ಅದರ ಅಧ್ಯಯನ ಮಾಡಲಾಗುತ್ತಿದೆ. ನಾಳೆ ಕಾಂಗ್ರೆಸ್ ಪಕ್ಷದ ನಮ್ಮ ಸಮುದಾಯದ ಶಾಸಕರ ಸಭೆ ಕರೆದಿದ್ದೇನೆ. ಅವರ ಜೊತೆ ಚರ್ಚೆ ಮಾಡಿ, ಯಾರ ಮನಸ್ಸಿಗೂ ನೋಯಿಸದೇ ಎಲ್ಲರ ಗೌರವ ಕಾಪಾಡಲು ಸಲಹೆ ನೀಡುತ್ತೇವೆ ಎಂದರು. ಜಾತಿ ಗಣತಿ ವಿಚಾರ ರಾಜ್ಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ಕುರಿತು ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮುಗಿಬಿದ್ದಿವೆ. ಆದರೆ ಸರ್ಕಾರ ಮಾತ್ರ ಜಾತಿ ಗಣತಿಯನ್ನು ಸಮರ್ಥಿಸಿಕೊಳ್ಳುತ್ತಿದೆ. ಜೊತೆಗೆ ಜಾತಿ ಗಣತಿ ಕುರಿತು ಚರ್ಚಿಸಲು ಏ 17 ರಂದು ವಿಶೇಷ ಸಚಿವ ಸಂಪುಟ ಸಭೆ ಕರೆದಿದೆ. ಈ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಈ…
ತುಮಕೂರು : ಸಾವು ಯಾವಾಗ ಹೇಗೆ ಯಾವ ರೂಪದಲ್ಲಿ ಬರುತ್ತೆ ಅನ್ನೋದಕ್ಕೆ ಹೇಳೋಕೆ ಆಗಲ್ಲ. ಮನೆ ಸಮೀಪದ ಬೀದಿದೀಪ ಆರಿಸಲು ಹೋದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಶಿಕ್ಷಕರೋಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಬ್ಯಾಡಗೆರೆ ಎಂಬಲ್ಲಿ ನಡೆದಿದೆ. ಮೃತರನ್ನು ಬ್ಯಾಡಗೆರೆ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ನಿಟ್ಟೂರು ಗ್ರಾಮದ ಲೋಕೇಶ್ ರಾವ್ (35) ಎದು ತಿಳಿದುಬಂದಿದ್ದು, ಇಂದು ಬೆಳಗ್ಗೆ ಮನೆ ಸಮೀಪದ ಬೀದಿದೀಪ ಆರಿಸಲು ಹೋದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಬೀದಿ ದೀಪಗಳಿಗೆ ಅಳವಡಿಸಿರುವ ವೈರ್ ಗಳಿಗೆ ಸ್ವಿಚ್ ಹಾಕದೆ ಇರುವುದರಿಂದ ಈ ದುರಂತ ಸಂಭವಿಸಿದೆ ಎಂದು ಬೆಸ್ಕಾಂ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.
ಬೆಂಗಳೂರು : ವಿಜಾಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟಿಸಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಕ್ರಮ ಕೈಗೊಂಡಿದೆ. ಇದರ ಬೆನ್ನಲ್ಲೆ ಬಿಜೆಪಿ ಶಾಸಕರಾದಂತಹ ಶಿವರಾಂ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಅವರಿಗೂ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ನೀಡಿತ್ತು. ಇದೀಗ ಶಾಸಕ ಶಿವರಾಮ್ ಹೆಬ್ಬಾರ್‌ಗೂ ನಮ್ಮ ಪಕ್ಷಕ್ಕೂ ಮುಗಿದ ಅಧ್ಯಾಯ. ಅವರು ಈಗ ನಮ್ಮ ಪಕ್ಷದವರಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಶಾಕಿಂಗ್ ಗ್ ಹೇಳಿಕೆ ನೀಡಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದಲ್ಲಿ ನಾವು ಪ್ರತಿಭಟನೆ ಮಾಡುತ್ತಿದ್ದರೆ, ಹೆಬ್ಬಾರ್ ಅವರು ಕುಳಿತೇ ಇರುತ್ತಾರೆ. ಅವರನ್ನು ನಾವು ಕೈ ಬಿಟ್ಟಿದ್ದೇವೆ. ಶಿವರಾಮ್ ಹೆಬ್ಬಾರ್‌ಗೂ, ಬಿಜೆಪಿಗೂ ಸಂಬಂಧವಿಲ್ಲ ಎಂದರು. ಇನ್ನು ಉಚ್ಛಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೊಲೆ ಬೆದರಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾರಿಗೇ ಆಗಲಿ ಕೊಲೆ ಬೆದರಿಕೆ ಹಾಕಬಾರದು. ಹಿಂದುತ್ವದ…
ಬೆಂಗಳೂರು : ಬೆಂಗಳೂರಿನಲ್ಲಿ ಅತಿ ವೇಗವಾಗಿ ತೆರಳುತ್ತಿದ್ದ ವಾಟರ್ ಟ್ಯಾಂಕ್ ಒಂದು, ನಿಯಂತ್ರಣ ಕಳೆದುಕೊಂಡು ಪಲ್ಟಿ ಆಗಿರುವ ಘಟನೆ ಬೆಂಗಳೂರಿನ ದೋಮ್ಮಸಂದ್ರ ಬಳಿ ನಡು ರಸ್ತೆಯಲ್ಲಿಯೇ ವಾಟರ್ ಟ್ಯಾಂಕ್ ಒಂದು ಪಲ್ಟಿಯಾಗಿದೆ. ತಕ್ಷಣ ಸಾರ್ವಜನಿಕರು ವಾಟರ್ ಟ್ಯಾಂಕರ್ ಚಾಲಕನನ್ನು ರಕ್ಷಣೆ ಮಾಡಿದ್ದಾರೆ. ಚಾಲಕ ಸೇರಿದಂತೆ ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.ಅಪಘಾತದಲ್ಲಿ ಯಾವುದೇ ರೀತಿಯಾದ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ವೈಟ್‌ಫೀಲ್ಡ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ : ಜಾತಿಗಣತಿ ಬಿಡುಗಡೆ ಮಾಡಿದ ಕೊಡಲೇ ಸರ್ಕಾರ ಬೀಳುತ್ತದೆ ಎಂದು ದಾವಣಗೆರೆಯಲ್ಲಿ ಬಿಜೆಪಿ ಮಾಜಿ ಸಚಿವ ರೇಣುಕಾಚಾರ್ಯ ಹೇಳಿಕೆ ನೀಡಿದರು. ವರದಿ ಬಿಡುಗಡೆ ಮಾಡಿದರೆ ನೂರಕ್ಕೆ ನೂರು ಸರ್ಕಾರ ಪತನ ಆಗಲಿದೆ ಎಂದು ತಿಳಿಸಿದರಿ. ಜಾತಿ ಗಣತಿ ಅವೈಜ್ಞಾನಿಕವಾಗಿದ್ದು. ಇವರು ಯಾರ ಮನೆಗೆ ಬಂದು ಜಾತಿ ಗಣತಿ ಮಾಡಿದ್ದಾರೆ? ರಾಜ್ಯದಲ್ಲಿ ಜಾತಿ ಜನಗಣತಿ ಪಾರದರ್ಶಕವಾಗಿ ಮಾಡಿಲ್ಲ. ಜಾತಿ ಗಣತಿ ವರದಿಯಲ್ಲಿ ಮುಸ್ಲಿಮರ ಸಂಖ್ಯೆ ಹೆಚ್ಚಾಗಿದೆ. ಮುಸ್ಲಿಮರಿಗೆ 4 ಪರ್ಸೆಂಟ್ ಇದ್ದ ಮೀಸಲಾತಿ 8 ಪರ್ಸೆಂಟ್ ಮಾಡುತ್ತಿದ್ದಾರೆ.ಬಹು ಸಂಖ್ಯಾತರಾದ ಅವರಿಗೆ ಮೀಸಲಾತಿ ಏಕೆ ಬೇಕು? ಎಂದು ಪ್ರಶ್ನಿಸಿದ್ದಾರೆ. ವೀರಶೈವ ಲಿಂಗಾಯತರನ್ನ ಒಡೆಯುವ ಕೆಲಸ ಮಾಡಿದ್ದಾರೆ. ಅವರದ್ದೇ ಸರ್ಕಾರದಲ್ಲಿ ಹಲವರು ಇದಕ್ಕೆ ವಿರೋಧ ಮಾಡುತ್ತಿದ್ದಾರೆ. ಶಾಮನೂರು ಶಿವಶಂಕರಪ್ಪ, ಎಂಬಿ ಪಾಟೀಲ್, ಡಿಕೆ ಶಿವಕುಮಾರ್ ವಿರೋಧಿಸುತ್ತಿದ್ದಾರೆ ಎಂದು ಬಿಜೆಪಿ ಮರಿ ಸಚಿವ ಎಂಪಿ ರೇಣುಕಾಚಾರ್ಯ ತಿಳಿಸಿದರು.














