Subscribe to Updates
Get the latest creative news from FooBar about art, design and business.
Author: kannadanewsnow05
ತುಮಕೂರು : ಕಳೆದ ಕೆಲವು ತಿಂಗಳುಗಳ ಹಿಂದೆ ತುಮಕೂರಲ್ಲಿ ಮೀಟರ್ ಬಡ್ಡಿ ಕಿರುಕುಳಕ್ಕೆ ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣಾಗಿತ್ತು. ಈ ಹಿನ್ನೆಲೆ ಗೃಹ ಸಚಿವ ಜಿ.ಪರಮೇಶ್ವರ್ ಅವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೂ ಕೂಡ ಈ ಒಂದು ಮೀಟರ್ ದಂಧೆ ನಿಂತಿಲ್ಲ.ಇದೀಗ ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಪೌರ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಪೌರ ಕಾರ್ಮಿಕನನ್ನು ಅರುಣ್ ಕುಮಾರ್ (34) ಎಂದು ತಿಳಿದುಬಂದಿದೆ. ಅರುಣ್ ಕುಮಾರ್ ಗುಬ್ಬಿ ಪಟ್ಟಣ ಪಂಚಾಯತಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಪೌರ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರು. ಅರುಣ್ ಕುಮಾರ್ 1 ಲಕ್ಷ ಹಣವನ್ನ ಮೀಟರ್ ಬಡ್ಡಿಗೆ ಸಾಲ ಪಡೆದಿದ್ದರು. ಸಾಲ ಪಡೆದಿದ್ದ 1 ಲಕ್ಷ ಹಣಕ್ಕೆ 5 ಲಕ್ಷ ಹಣ ಕೊಡುವಂತೆ ಮೀಟರ್ ಬಡ್ಡಿ ದಂಧೆಕೋರರು ಕಿರುಕುಳ ನೀಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಪದೇ ಪದೇ 1 ಲಕ್ಷಕ್ಕೆ 5 ಲಕ್ಷ ಬಡ್ಡಿ ನೀಡುವಂತೆ ದಂಧೆಕೋರರು ಅರುಣ್…
ಬೆಂಗಳೂರು : ವಕ್ಫ್ ವಿವಾದಕ್ಕೆ ಸಂಬಂಧಪಟ್ಟಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಕ್ಫ್ ಮಂಡಳಿ ಸಭೆಯಲ್ಲಿ ರೈತರಿಗೆ ನೀಡಿದ ನೋಟೀಸ್ ಗಳನ್ನು ಹಿಂಪಡೆಯಿರಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರ ಮಧ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ತಿರುಗೇಟು ನೀಡಿದ್ದು, ನಿಮ್ಮ ಸರ್ಕಾರದಲ್ಲಿ ಆಗಿ ಹೋದಂತಹ ಮುಖ್ಯಮಂತ್ರಿಗಳ ಅವಧಿಯಲ್ಲಿ ಅನೇಕ ರೈತರ ಆಸ್ತಿಗಳನ್ನು ವಕ್ಫ್ ಗೆ ಬದಲಾಯಿಸಿರುವ ಕುರಿತು ದಾಖಲೆಗಳನ್ನು ಶೀಘ್ರ ಬಿಡುಗಡೆ ಮಾಡುತ್ತೇವೆ ಎಂದು ಸ್ಪೋಟಕ್ಕೆ ಹೇಗೆ ನೀಡಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ವಕ್ಪ್ ಆಸ್ತಿ ವಿಚಾರದಲ್ಲಿ ಸುಬಗರ ಸೋಗು ಹಾಕುವುದೇನು ಬೇಡ. ನಿಮ್ಮದೇ ಪಕ್ಷದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್ ಮತ್ತು ಈಗಿನ ನಿಮ್ಮ ಮಿತ್ರ ಪಕ್ಷವಾದ ಜೆಡಿಎಸ್ ನ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ನೂರಾರು ರೈತ ಕುಟುಂಬಗಳ ಆಸ್ತಿಗಳನ್ನು ವಕ್ಪ್ ಬೋರ್ಡ್ ಗೆ ಖಾತೆ ಬದಲಾಯಿಸಿದ ದಾಖಲೆಗಳನ್ನು ಶೀಘ್ರದಲ್ಲಿ ನಾವು ಬಿಡುಗಡೆ ಮಾಡುತ್ತೇವೆ. ಆಗ…
ಬೀದರ್ : ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶೈಲೇಂದ್ರ ಬೆಲ್ದಾಳೆ ಹಾಗೂ ಆರ್‌ಟಿಓ ಇನ್ಸ್ಪೆಕ್ಟರ್ ನಡುವೆ ಟಾಕ್ ವಾರ್ ನಡೆದಿದ್ದು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶೈಲೇಂದ್ರ ಬೆಲ್ದಾಳೆ ಹಾಗೂ ಆರ್ ಟಿ ಓ ಇನ್ಸ್ಪೆಕ್ಟರ್ ಮಂಜುನಾಥ್ ನಡುವಿನ ಟಾಕ್ ವಾರ್ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಾಸಕ ಶೈಲೇಂದ್ರ ಕಡೆ ಕೈಮಾಡಿ ಮಂಜುನಾಥ ಧಮ್ಕಿ ಹಾಕಿರುವ ಆರೋಪ ಕೇಳಿ ಬಂದಿದ್ದು, ಫೇಸ್ಬುಕ್ ಹಾಗೂ ವಾಟ್ಸಪ್ ನಲ್ಲಿ ಟಾಕ್ ವಾರ್ ವಿಡಿಯೋ ಸದ್ಯ ಹರಿದಾಡುತ್ತಿದೆ. ಆಡಿಯೋ ಬಿಡುಗಡೆ ಮಾಡಿ ಶಾಸಕರಿಗೆ ಮಂಜುನಾಥ್ ಕೊರವಿ ಮನವಿ ಮಾಡಿದ್ದಾರೆ. ಪೂರ್ತಿ ವಿಡಿಯೋ ಬಿಡುಗಡೆ ಮಾಡುವಂತೆ ಆರ್ ಟಿ ಓ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ. ನಾನೊಬ್ಬ ಸಣ್ಣ ಅಧಿಕಾರಿ ನಾನು ಮಾತನಾಡುವ ವಿಡಿಯೋ ಮಾಡಿಸಿದ್ದಾರೆ. ನಾನು ಮಾತನಾಡಿದ್ದ ವಿಡಿಯೋ ಎಡಿಟ್ ಮಾಡಿ ಬಿಡುಗಡೆ ಮಾಡಿದ್ದಾರೆ. ಸಚಿವರಾದ ಈಶ್ವರ್ ಖಂಡ್ರೆ ರಹೀಂ ಖಾನ್ ಗೆ ವಿಡಿಯೋ ರವಾನಿಸಿದ್ದಾರೆ. ಪೂರ್ತಿ ವಿಡಿಯೋ ಹಾಕಿದ್ದರೆ…
ಯಾದಗಿರಿ : ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಬೈಕ್ ಮೇಲೆ ತೆರಳುತ್ತಿದ್ದ ವ್ಯಕ್ತಿಯನ್ನು ನಾಲ್ವರು ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಗ್ರಾಮದ ಎಎಂಡಿ ಕ್ಯಾಂಪಿನ ಬಳಿ ಸಂಜೆ ನಡೆದಿದೆ. ಕೊಲೆಯಾದ ವ್ಯಕ್ತಿ ಜಾಪಾನಾಯಕ ತಾಂಡಾದ ತಿಪ್ಪಣ್ಣ (35) ಎಂದು ತಿಳಿದು ಬಂದಿದೆ.ನಾಲ್ಕಾರು ಜನ ಸೇರಿ ಬೈಕ್ ಮೇಲೆ ಹೊರಟಿದ್ದ ತಿಪ್ಪಣ್ಣನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದು ಶಿಳ್ಳೆ, ಕೇಕೆ ಹಾಕುತ್ತಾ ಟೊಕಾಪುರ ರಸ್ತೆ ಮೂಲಕ ತೆರಳಿದರು ಎಂದು ಕೊಲೆ ನಡೆದಿದ್ದನ್ನು ನೋಡಿದವರು ತಿಳಿಸಿದ್ದಾರೆ. ಹಳೇ ವೈಷಮ್ಯವೇ ಹತ್ಯೆಗೆ ಕಾರಣ ಎನ್ನಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಪಿಐ ಎಸ್.ಎಂ.ಪಾಟೀಲ್ ಪೊಲೀಸ್ ಸಿಬ್ಬಂದಿಯೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಡಿಎಸ್ ಪಿ ಭೇಟಿ ನೀಡಿ ಪರಿಶೀಲನೆಗೆ ಸೂಚಿಸಿದರು. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಜಯಪುರ : ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಶಕ್ತಿ ಯೋಜನೆ ನಿಲ್ಲಿಸುವ ಕುರಿತು ಇತ್ತೀಚಿಗೆ ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದರು. ಈ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಗ್ಯಾರಂಟಿ ಯೋಜನೆ ಕುರಿತು ಕೀಳಾಗಿ ಮಾತಾಡ್ಬೇಡಿ ಎಂದು ಖಡಕ್ ವಾರ್ನಿಂಗ್ ನೀಡಿದ್ದರು. ಇದೀಗ ಸಚಿವ ಜಮೀರ್ ಅಹ್ಮದ್ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ. ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಮಗೆ ಸೀಟ್ ಬರಲಿಲ್ಲ. 18 ರಿಂದ 20 ಸೀಟು ಗೆಲ್ಲುತ್ತೇವೆ ಎಂದು ನಿರೀಕ್ಷೆ ಇತ್ತು. ಆದರೆ ಅದು ಹುಸಿಯಾಯಿತು. ಆಗ ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳಿಂದ ಲಾಭ ಆಗಲಿಲ್ಲ ಎಂದು ತಿಳಿಸಿದರು. ಆ ವೇಳೆ ಗ್ಯಾರಂಟಿಗಳನ್ನು ತೆಗೆದುಹಾಕಿ ಎಂದು ಹೇಳಿದರು. ಆಗ ಸಿಎಂ ರಾಜಕೀಯ ಲಾಭಕ್ಕೆ ಗ್ಯಾರಂಟಿ ಜಾರಿ ಮಾಡಿಲ್ಲ ಅಂದರು. ಬಡವರಿಗೆ…
ಚಿಕ್ಕಮಗಳೂರು : ರಾಜ್ಯದಲ್ಲಿ ವಕ್ಫ್ ವಿವಾದ ಭುಗಿಲೆಳೋಕು ಮುನ್ನ ಸಿಎಂ ಸಿದ್ದರಾಮಯ್ಯ ದಿಟ್ಟ ನಿರ್ಧಾರ ಕೈಗೊಂಡಿದ್ದು, ಇಲ್ಲಿಯವರೆಗೆ ಯಾವ ರೈತರಿಗೆ ನೋಟಿಸ್ ಕೊಟ್ಟಿದ್ದಿರೋ ಅದೆಲ್ಲವನ್ನು ಕೂಡಲೇ ಹಿಂಪಡೆಯಿರಿ ಎಂದು ವಕ್ಫ್ ಮಂಡಳಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರಿಂದ ಬಿಜೆಪಿ ಪರಿಷತ್ ಸದಸ್ಯ ಸಿಟಿ ರವಿ ಸಿಎಂ ಸಿದ್ದರಾಮಯ್ಯ ಅವರ ಈ ಒಂದು ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಈ ಕುರಿತು ಸಿಟಿ ರವಿ ಪ್ರತಿಕ್ರಿಯೆ ನೀಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ರೈತರಿಗೆ ಕೊಟ್ಟಿರುವ ನೋಟಿಸ್ ವಾಪಸ್ ಪಡೆಯಲು ಸೂಚಿಸಿದ್ದೀರಿ ರೈತರ ಪಹಣಿಯ ಕಾಲಂ ನಂಬರ್ 11ರಲ್ಲಿ ವಕ್ಫ್ ಅಂತ ನಮೂದಿಸಿದ್ದನ್ನು ಹಿಂಪಡೆಯಬೇಕು ಎಂದು ಸೂಚಿಸಿದ್ದೀರಿ. ಇದು ಕೇವಲ ಅರ್ಧ ನ್ಯಾಯ ಕೊಟ್ಟಂತಾಗಿದೆ. ವಕ್ಫ್ ಕಾಯಿದೆ ರದ್ದಾದ ಮೇಲೆ ನಮಗೆ ಪೂರ್ತಿ ನ್ಯಾಯ ಸಿಗುತ್ತದೆ. ನೀವು ಜನಾಭಿಪ್ರಾಯಕ್ಕೆ ಮಣಿದ್ದಿದಿರಿ. ಜನಾಕ್ರೋಶಕ್ಕೆ ಹೆದರಿದ್ದೀರಿ. ಪ್ರಜಾಪ್ರಭುತ್ವದಲ್ಲಿ ಜನಾಕ್ರೋಶಕ್ಕೆ ಹೆದರುವುದು ಒಳ್ಳೆಯ ಸಂಗತಿ ಎಂದರು. ನೀವು ಇಂದು ವಕ್ಫ್ ವಿವಾದಕ್ಕೆ ಸಂಬಂಧಿಸಿ ಜನರು…
ಬೆಳಗಾವಿ : ಗಂಡ ಹಾಗೂ ಅತ್ತೆಯ ಕಾಟಕ್ಕೆ ಬೆಸತ್ತು ಮಹಿಳೆ ತನ್ನ ಗಂಡು ಮಗುವಿನ ಜೊತೆ ಪ್ರಸಿದ್ದ ಹಿಂಡಲಗಾ ಗಣಪತಿ ದೇವಸ್ಥಾನ ಬಳಿಯ ಕೆರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಅಮ್ಮ ಮಗನನ್ನು ಕಲಕಾಂಬ ಗ್ರಾಮದ ಕವಿತಾ ಬಸವಂತ ಜುನೇ (40) ಬೆಳಗಾಂವಕರ ಮತ್ತು ಸಮರ್ಥ ಬಸವಂತ ಜುನೇ ಬೆಳಗಾಂವಕರ (14) ಎಂದು ಗುರುತಿಸಲಾಗಿದೆ.ಪತಿ ಹಾಗೂ ಅತ್ತೆಯ ಕಾಟಕ್ಕೆ ಮನನೊಂದು ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಮಹಿಳೆ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದ್ದು, ಪತಿ ಹಾಗೂ ಅತ್ತೆ ಕಾಟದಿದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮನೆ ಒಂದರಲ್ಲಿ ಗೀತಾ (37) ಎನ್ನುವ ಶವ ಪತ್ತೆಯಾಗಿದೆ. ಪತಿ ಮುರುಳಿನೇ ಕೊಲೆಗೈದು ನೇಣು ಬಿಗಿದಿದ್ದಾರೆ ಎಂದು ಮೃತ ಗೀತಾ ಪೋಷಕರು ಆರೋಪಿಸುತ್ತಿದ್ದಾರೆ. 17 ವರ್ಷಗಳ ಹಿಂದೆ ಮುರುಳಿ ಜೊತೆಗೆ ಮೃತ ಗೀತಾ ವಿವಾಹವಾಗಿದ್ದಳು. ಕಳೆದ ಕೆಲವು ತಿಂಗಳಿನಿಂದ ದಂಪತಿಯ ಮಧ್ಯ ಜಗಳ ನಡೆಯುತ್ತಿತ್ತು. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿದ ತಕ್ಷಣ ಪತಿಯೇ ಮಗಳನ್ನು ನೇಣು ಹಾಕಿ ಕೊಲೆ ಮಾಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಕಾಟನ್ ಪೇಟೆ ಠಾಣೆಯ ಪೊಲೀಸರು ಪ್ರಕರಣವನ್ನು ದಾಖಲಿಸಿ ಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ.
ಮಂಗಳೂರು : ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಮಂಗಳೂರು ನಗರದಲ್ಲಿ ಶನಿವಾರ ನಡೆದಿದೆ. ತೀವ್ರ ಅನಾರೋಗ್ಯದ ಹಿನ್ನೆಲೆ ದಕ್ಷಿಣ ಕನ್ನಡದ ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ ಮೃತ ಯುವಕನಾಗಿದ್ದಾನೆ. 29 ವರ್ಷದ ಯುವಕ ಜೈಸನ್ ಜಾರ್ಜ್‌ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಈತನನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಶನಿವಾರದಂದು ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಜೈಸನ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಶಸ್ತ್ರಚಿಕಿತ್ಸೆಗೆ ತೆರಳುವ ಮುನ್ನ ಜಾರ್ಸ್, ಸಾಕಷ್ಟು ಗಾಬರಿಗೊಂಡಿದ್ದರು. ಆಪರೇಷನ್ ಥಿಯೇಟರ್ ಗೆ ತೆರಳುವ ಮುನ್ನ ಬಿಪಿ ಕೊಂಚ ಏರಿಕೆಯಾಗಿತ್ತು. ಡಾಕ್ಟರ್ ಗಳು ಅಗತ್ಯ ಮುನ್ನೆಚ್ಚರಿಕೆ ಕೈಗೊಂಡಿದ್ದರೂ ಕೂಡಾ ಸಾವು ಸಂಭವಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಕೇರಳ : ಇಂದು ಸಂಜೆ ಶೋರನೂರ್ ರೈಲು ನಿಲ್ದಾಣದ ಬಳಿ ತಿರುವನಂತಪುರಂ ಕಡೆಗೆ ಹೋಗುವ ಕೇರಳ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದು ತಮಿಳುನಾಡಿನ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ನೈರ್ಮಲ್ಯ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ. ಹೌದು ಕೇರಳದ ಪಾಲಕ್ಕಡ್ ರೈಲು ನಿಲ್ದಾಣದಿಂದ ಕೆಲವು ಕಿಲೋಮೀಟರ್ ದೂರದಲ್ಲಿರುವ ಶೋರನೂರ್ ಸೇತುವೆಯ ಬಳಿ ರೈಲ್ವೆ ಹಳಿಯಿಂದ ಕಸವನ್ನು ತೆರವುಗೊಳಿಸುತ್ತಿದ್ದಾಗ ನವದೆಹಲಿ-ತಿರುವನಂತಪುರಂ ರೈಲು ಮಧ್ಯಾಹ್ನ 3.05 ರ ಸುಮಾರಿಗೆ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ರೈಲ್ವೆಯಿಂದ ನೈರ್ಮಲ್ಯ ಕರ್ತವ್ಯಕ್ಕಾಗಿ ಗುತ್ತಿಗೆ ಪಡೆದಿದ್ದ ಕಾರ್ಮಿಕರ ದೇಹಗಳು ಹಳಿಯಿಂದ ದೂರಕ್ಕೆ ಹೋಗಿ ಬಿದ್ದಿವೆ. ಮೃತರನ್ನು ತಮಿಳುನಾಡಿನ ಸೇಲಂ ಮೂಲದ ಲಕ್ಷ್ಮಣನ್, ವಲ್ಲಿ ಮತ್ತು ಲಕ್ಷ್ಮಣನ್ ಎಂದು ತಿಳಿದುಬಂದಿದ್ದು, ಇನ್ನೋರ್ವ ವ್ಯಕ್ತಿಗಾಗಿ ಶೋಧ ಕಾರ್ಯ ಮುಂದುವರೆದಿದೆ.ಮೂರು ಶವಗಳನ್ನು ಈ ಪ್ರದೇಶದಿಂದ ಹೊರತೆಗೆಯಲಾಗಿದ್ದು, ನಾಲ್ಕನೆಯ ಮೃತದೇಹವನ್ನು ಪತ್ತೆ ಹಚ್ಚಲು ಪ್ರಯತ್ನಿಸಲಾಗುತ್ತಿದೆ. ನಾಲ್ಕನೇ ಶವ ಭರತಪುಳ ನದಿಗೆ ಬಿದ್ದಿದೆ ಎಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ…













