Subscribe to Updates
Get the latest creative news from FooBar about art, design and business.
Author: kannadanewsnow05
ರಾಮನಗರ : ರಾಜ್ಯದ ಮೂರು ಉಪಚುನಾವಣೆಗಳಲ್ಲಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದಲ್ಲಿ ಉಭಯ ಪಕ್ಷಗಳು ಭರ್ಜರಿ ಪ್ರಚಾರ ಮಾಡುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ಕಣಕ್ಕೆ ಇಳಿದಿದ್ದರೆ, ಇನ್ನೂ ಎನ್ ಡಿ ಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಪ್ರಚಾರ ಮಾಡುತ್ತಿದ್ದಾರೆ ಇಂದು ಪ್ರಚಾರದ ವೇಳೆ ನಿಖಿಲ್ ಕುಮಾರಸ್ವಾಮಿ ಬೈಕ್ ಮೇಲಿಂದ ಬಿದ್ದ ಘಟನೆ ನಡೆಯಿತು. ಚನ್ನಪಟ್ಟಣ ಉಪಚುನಾವಣಾ ಪ್ರಚಾರದ ವೇಳೆ ನಿಖಿಲ್ ಕುಮಾರಸ್ವಾಮಿ ಬೈಕ್‌ನಿಂದ ಬಿದ್ದಿದ್ದಾರೆ.ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ನಿಖಿಲ್ ಕಾರ್ಯಕರ್ತನ ಬೈಕ್ ಏರಿ ಪ್ರಚಾರ ನಡೆಸುತ್ತಿದ್ದರು. ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ ಎಂದು ತಿಳಿಬಂದಿದೆ. ಬೈಕ್ ಮೇಲಿಂದ ಬಿದ್ದ ತಕ್ಷಣ ಅಕ್ಕ ಪಕ್ಕದಲ್ಲಿದ್ದ ಕಾರ್ಯಕರ್ತರು ಕೂಡಲೇ ನಿಖಿಲ್ ಕುಮಾರಸ್ವಾಮಿ ಅವರನ್ನು ಮೇಲಕ್ಕೆ ಅತಿ ಉಪಚರಿಸಿದ್ದಾರೆ. ಸ್ವಲ್ಪ ಹೊತ್ತು ಅಲ್ಲಿಗೆ ವಿಶ್ರಾಂತಿ ಪಡೆದು ಬಳಿಕ ಮತ್ತೆ ಪ್ರಚಾರದಲ್ಲಿ ತೊಡಗಿದ್ದಾರೆ. ಈ ವೇಳೆ ಅವರಿಗೆ ಯಾವುದೇ ರೀತಿಯಾದಂತಹ ಗಂಭೀರವಾದ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಸಂತೇಕಲ್ಲಹಳ್ಳಿ ಬಳಿ ಗ್ಯಾಸ್ ಸಿಲಿಂಡರ್‌ಗಳನ್ನು ತುಂಬಿದ ಲಾರಿ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ವೇಳೆ ಅದೇ ಮಾರ್ಗವಾಗಿ ತೆರಳುತ್ತಿದ್ದ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಸ್ಥಳಕ್ಕೆ ಧಾವಿಸಿ ಆ್ಯಂಬುಲೆನ್ಸ್‌ಗಳನ್ನು ಕರೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕಳಿಸಿದ್ದಾರೆ. ಆ ಮೂಲಕ ಮಾನವೀಯತೆ ಮೆರೆದಿದ್ದಾರೆ. ಗಾಯಾಳುಗಳನ್ನು ಚಿಂತಾಮಣಿ, ಹೊಸಕೋಟೆ ಆಸ್ಪತ್ರೆಗಳಿಗೆ ರವಾನೆ ಮಾಡಲಾಗಿದೆ.
ಧಾರವಾಡ : ರಾಜ್ಯದಲ್ಲಿ ವಕ್ಫ್ ವಿವಾದ ಭುಗಿಲೆದ್ದ ತಕ್ಷಣ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ ಇಂದು ವಕ್ಫ್ ಮಂಡಳಿ ಸಭೆಯನ್ನು ನಡೆಸಿ, ರೈತರಿಗೆ ನೀಡಿದ ನೋಟಿಸ್ ಗಳನ್ನು ಕೂಡಲೇ ಹಿಂಪಡೆಯಿರಿ ಎಂದು ತಕ್ಷಣ ಆದೇಶ ನೀಡಿದರು. ಈ ಹಿನ್ನೆಲೆಯಲ್ಲಿ ರೈತರು ಸಿಎಂ ಸಿದ್ದರಾಮಯ್ಯ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಹೌದು ರೈತರ ಪಹಣಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದ್ದರಿಂದ ವಕ್ಫ್ ಬೋರ್ಡ್ ನಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ರೈತರಿಗೆ ನೋಟಿಸ್ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ರೈತರು ಆತಂಕಕ್ಕೆ ಒಳಗಾಗಿದ್ದು ಸರ್ಕಾರ ವಿರುದ್ಧ ಆಕ್ರೋಶವನ್ನು ಹೊರ ಹಾಕಿದ್ದರು. ಅಲ್ಲದೆ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸರ್ಕಾರದ ನಡೆಯನ್ನು ಖಂಡಿಸಿ ತೀವ್ರ ವಿರೋಧಿಸಿದ್ದರು. ಇದೀಗ ಎಂದು ಸಿಎಂ ಸಿದ್ದರಾಮಯ್ಯ ಅವರು ವಕ್ಫ್ ಮಂಡಳಿಯ ಸಭೆ ನಡೆಸಿ ಅಧಿಕಾರಿಗಳಿಗೆ ಕೊಡಲೇ ನೋಟಿಸ್ ಗಳನ್ನು ಹಿಂಪಡೆಯಿರಿ ರೈತರಿಗೆ ಯಾವುದೇ ರೀತಿಯಾಗಿ ತೊಂದರೆ ಕೊಡಬೇಡಿ ಎಂದು ಖಡಕ್ ಸೂಚನೆ ನೀಡಿದ್ದಾರೆ.ಅಲ್ಲದೆ ವಕ್ಫ್ ಹೆಸರು ತಿದ್ದುಪಡಿ ಆದೇಶ ನೀಡಿದ್ದಕ್ಕೆ ರೈತರು ಸಂತಸಗೊಂಡಿದ್ದಾರೆ. ಹಾಗಾಗಿ…
ರಾಮನಗರ : ಹೋಂ ಸ್ಟೇ ನಲ್ಲಿ ತಂಗಿದ್ದ ಯುವತಿಯರ ಫೋಟೋಗಳನ್ನು ತೆಗೆದಿದ್ದನ್ನು ಪ್ರಶ್ನಿಸಿದಕ್ಕೆ ನೈತಿಕ ಪೊಲೀಸ್ ಗಿರಿ ನಡೆಸಿ ವಿದ್ಯಾರ್ಥಿಯ ಮೇಲೆ ಭೀಕರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ರಾಮನಗರ ತಾಲೂಕಿನ ಚಿಕ್ಕೇನಹಳ್ಳಿ ಹೋಂ ಸ್ಟೇನಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಯುವತಿಯರ ಫೋಟೋ ತೆಗೆದಿದ್ದನ್ನು ಪ್ರಶ್ನಿಸಿದಕ್ಕೆ ಕೊಲೆ ಚಿಕ್ಕೇನಹಳ್ಳಿ ಹೋಂ ಸ್ಟೇನಲ್ಲಿ ವಿದ್ಯಾರ್ಥಿಯ ಭೀಕರ ಕೊಲೆಯಾಗಿದೆ. ರಾಮನಗರ ತಾಲೂಕಿನ ಚಿಕ್ಕೇನಹಳ್ಳಿ ಫಾರಂ ಹೌಸ್ ನಲ್ಲಿ ಈ ಒಂದು ಘಟನೆ ನಡೆದಿದೆ. ಬೆಂಗಳೂರು ಮೂಲದ ಪುನೀತ್ (21) ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯು ಕಳೆದ ಅಕ್ಟೋಬರ್ 26ರಂದು ನಡೆದಿದ್ದು ಇದೀಗ ಬೆಳಕಿಗೆ ಬಂದಿದೆ. ಬಿಕಾಂ ಪದವಿ ಮುಗಿದ ಹಿನ್ನೆಲೆಯಲ್ಲಿ ಯುವತಿಯರು ಹಾಗೂ ಹಲವರು ವಿದ್ಯಾರ್ಥಿಗಳು ಈ ಒಂದು ಹೋಂ ಸ್ಟೇಗೆ ಬೀಳ್ಕೊಡುಗೆ ಸಮಾರಂಭ ಮುಗಿದ ಬಳಿಕ ವಿದ್ಯಾರ್ಥಿಗಳೆಲ್ಲರೂ ಸೇರಿ ಪಾರ್ಟಿ ಮಾಡಲು ಆಗಮಿಸಿದ್ದರು. ಈ ವೇಳೆ ಅಲ್ಲಿದ್ದ ಚಂದು ಮತ್ತು ನಾಗೇಶ್ ಹೋಂ ಸ್ಟೇ ನಲ್ಲಿ…
ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಹಾಗೂ ಸಾಧನೆಗಳ ಕುರಿತಂತೆ ಸಿಎಂ ಸಿದ್ದರಾಮಯ್ಯ ಬಹಿರಂಗ ಚರ್ಚೆಗೆ ಆಹ್ವಾನ ನೀಡಿ ಸವಾಲು ಹಾಕಿದ್ದರು. ಅದಕ್ಕೆ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮರು ಸವಾಲು ಹಾಕಿದ್ದು , ನಿಮ್ಮ ಸರ್ಕಾರದ ಅಭಿವೃದ್ಧಿ ಶೂನ್ಯ, ಭ್ರಷ್ಟ ಆಡಳಿತದ ಕುರಿತಂತೆ ಪ್ರಧಾನಿ ಮೋದಿಯವರು ಯಾಕೆ ನಮ್ಮ ಸಾಮಾನ್ಯ ಕರ್ತರೂ ಕೂಡ ಸಮರ್ಥರಿದ್ದಾರೆ ಎಂದು ಮರು ಸವಾಲು ಹಾಕಿದ್ದಾರೆ. ಈ ಕುರಿತಂತೆ ಬಿ ವೈ ವಿಜಯೇಂದ್ರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸುಧೀರ್ಘ ಟ್ವೀಟ್ ಮಾಡಿದ್ದು, ಈ ರಾಜ್ಯದಲ್ಲಿ ನೀವು ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಎಂಬ ಪದ ಸಂಪೂರ್ಣವಾಗಿ ಮಾಸಿ ಹೋಗಿದೆ. ಅಭಿವೃದ್ಧಿಯ ವಿಚಾರ ಬಂದಾಗಲೆಲ್ಲ ರಾಜ್ಯದ ಸಂಪನ್ಮೂಲವನ್ನು ಬರಿದು ಮಾಡಿ ಸರ್ಕಾರದ ಖಜಾನೆಯನ್ನು ಖಾಲಿ ಮಾಡಿಕೊಂಡು ಕುಳಿತಿರುವ ನೀವು ಆಧಾರವಿಲ್ಲದೇ ಕೇಂದ್ರದ ಅನುದಾನಗಳು ಹರಿದು ಬರುತ್ತಿಲ್ಲವೆಂದು ಸುಳ್ಳು ಆರೋಪ ಮಾಡುತ್ತೀರಿ. ಆ ಮೂಲಕ ಜವಾಬ್ದಾರಿಯಿಂದ ನುಣುಚಿಕೊಳ್ಳುವ ವ್ಯರ್ಥ ಪ್ರಯತ್ನ…
ವಿಜಯಪುರ : ವಕ್ಫ್ ವಿಚಾರವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು, ವಕ್ಫ್ ಮಂಡಳಿ ಸಭೆಯಲ್ಲಿ ರೈತರಿಗೆ ನೀಡಿದ ನೋಟಿಸ್ಕೊಳ್ಳಲು ಕೂಡಲೇ ಹಿಂಪಡೆಯಿರಿ ಎಂದು ಖಡಕ್ ಸೂಚನೆ ನೀಡಿದ್ದಾರೆ.ಇದೆ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ವಕ್ಫ್ ವಿಚಾರವಾಗಿ ನಾವು ಯಾರಿಗೂ ನೋಟಿಸ್ ನೀಡಿಲ್ಲ ಎಂದು ತಿಳಿಸಿದರು. ಈ ಮೂಲಕ ಸಚಿವ ಜಮೀರ್ ಅಹ್ಮದ್ ಉಲ್ಟಾ ಹೊಡೆದರಾ ಎನ್ನಲಾಗುತ್ತಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ವಕ್ಫ್ ವಿಚಾರದಲ್ಲಿ ಬಿಜೆಪಿ ಅವರು ಅನವಶ್ಯಕ ಗೊಂದಲ ಸೃಷ್ಟಿ ಮಾಡಿದ್ದಾರೆ. ಜಿಲ್ಲೆಯ ಹೊನವಾಡದಲ್ಲಿ ಕೇವಲ 11 ಎಕರೆ ಮಾತ್ರ ವಕ್ಫ್ ಅಸ್ತಿಯಿದೆ. ಆದರೆ ಅಲ್ಲಿ 1,200 ಎಕರೆ ಇದೆ ಅಂತಾ ಹೇಳಿದ್ದಾರೆ. ನಾವು ಯಾರಿಗೂ ನೋಟಿಸ್ ನೀಡಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ತಿಳಿಸಿದರು. ಬಿಜೆಪಿ ಸರಕಾರದಲ್ಲೂ ವಕ್ಫ್ ಆಸ್ತಿ ಅತಿಕ್ರಮಿಸಿದ ಸಾವಿರಾರು ಜನರಿಗೆ ನೋಟಿಸ್ ನೀಡಲಾಗಿತ್ತು. ವಕ್ಫ್ ಆಸ್ತಿಯಲ್ಲಿ ಒಂದು ಇಂಚು ಸರಕಾರದ್ದು ಇಲ್ಲ, ವಕ್ಫ್ ಆಸ್ತಿಯೇ ಸಾಕಷ್ಟು ಒತ್ತುವರಿಯಾಗಿದೆ. ಅದನ್ನ ಸರಿಪಡಿಸುವ ಕೆಲಸ ನಾನು ಮಾಡುತ್ತಿದ್ದೇನೆ ಎಂದರು.…
ಬೆಂಗಳೂರು : ವಿಜಯಪುರ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೈತರ ಪಹಣಿಗಳಲ್ಲಿ ವಕ್ಫ್ ಆಸ್ತಿಯೆಂದು ನಮೂದಾಗಿರುವುದನ್ನು ನೋಡಿ ರೈತರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ವಕ್ಫ್ ಮಂಡಳಿ ಸಭೆಯಲ್ಲಿ ಕೂಡಲೇ ರೈತರಿಗೆ ನೀಡಿರುವ ನೋಟಿಸ್ ಪಡೆಯಿರಿ ಎಂದು ಸೂಚನೆ ನೀಡಿದ್ದಾರೆ ಈ ವಿಚಾರವಾಗಿ ಕಾಂಗ್ರೆಸ್ ಶಾಸಕ ಅಜೇಯ್ ಸಿಂಗ್ ಮಾತನಾಡಿದ್ದು, ವಕ್ಫ್ ವಿಚಾರವಾಗಿ ಬಿಜೆಪಿ ಅವಧಿಯಲ್ಲೇ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು. ವಕ್ಫ್ ವಿಚಾರವಾಗಿ ನೋಟಿಸ್ ಕೊಟ್ಟಿರುವವರು ಯಾರು? ವಕ್ಫ್ ವಿಚಾರವಾಗಿ ಬಿಜೆಪಿ ಅವಧಿಯಲ್ಲೇ ನೋಟಿಸ್ ನೀಡಲಾಗಿದೆ. ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಗೊಂದಲ ಸೃಷ್ಟಿ ಮಾಡುತ್ತಿದೆ. ವಕ್ಫ್ ವಿಚಾರವಾಗಿ ಬಿಜೆಪಿ ಅವರು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಚುನಾವಣೆ ಮುಗಿಯುವವರೆಗೂ ಮಾತ್ರ ಈ ನಾಟಕ ಆಡುತ್ತಾರೆ.ಬಿಜೆಪಿ ನಾಯಕರ ವಿರುದ್ಧ ಶಾಸಕ ಅಜಯ್ ಸಿಂಗ್ ವಾಗ್ದಾಳಿ ನಡೆಸಿದರು. ಇನ್ನು ಗ್ಯಾರಂಟಿ ಯೋಜನೆಯ ಕುರಿತು ಮೋದಿ ಟೀಕೆ…
ಬೆಳಗಾವಿ : ರಾಜ್ಯದಲ್ಲಿ ಭುಗಿಲೆದ್ದಿದ್ದ ರೈತರ ಪಹಣಿಗಳಲ್ಲಿ ವಕ್ಫ್ ನಮೂದಾಗಿರುವ ವಿಚಾರವಾಗಿ ಇಂದು ವಕ್ಫ್ ಮಂಡಳಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ರೈತರಿಗೆ ನೀಡಿರುವ ನೋಟೀಸ್ ಕೂಡಲೇ ಹಿಂಪಡೆಯಿರಿ ಎಂದು ಅಧಿಕಾರಿಗಳಿಗೆ ಕಡಕ್ ಸೂಚನೆ ನೀಡಿದ್ದಾರೆ ಈ ಒಂದು ವಿಚಾರವಾಗಿ ಮಾಜಿ ವಕ್ಫ್ ಸಚಿವೆ ಸಚಿ ಶಶಿಕಲಾ ಜೊಲ್ಲೆಯವರು ಕೊನೆಗೂ ಸಿಎಂ ಸಿದ್ದರಾಮಯ್ಯ ಅವರಿಗೆ ದೇವರು ಒಳ್ಳೆ ಬುದ್ಧಿ ಕೊಟ್ಟಿದ್ದಾನೆ ಎಂದು ತಿಳಿಸಿದ್ದಾರೆ. ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಈ ಒಂದು ಮಂಡಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಯಾವುದೇ ಅಧಿಕಾರಿಗೆ ಆಗಲಿ ಇಂತಹ ಆದೇಶ ನೀಡಿಲ್ಲ. ಯಾವುದೇ ತಪ್ಪು ಸಹ ನಡೆದಿಲ್ಲ. ಆದರೆ ಈಗ ಇಂತಹ ಒಂದು ಬೆಳವಣಿಗೆ ನೋಡಿ ಸಹಜವಾಗಿ ನಾನು ಶಾಕ್ ಗೆ ಒಳಗಾಗಿದ್ದೆ. ಅಲ್ಲದೆ, ಈ ಒಂದು ವಿಚಾರವಾಗಿ ನಮ್ಮ ಬಿಜೆಪಿ ನಾಯಕರು ದೊಡ್ಡ ಮಟ್ಟದ ಹೋರಾಟ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಒಳ್ಳೆಯ ನಿರ್ಧಾರ ತೆಗೆದುಕೊಂಡಿದ್ದು ದೇವರು ದೀಪಾವಳಿ ಸಂದರ್ಭದಲ್ಲಿ ಅವರಿಗೆ ಒಳ್ಳೆಯ…
ಕೋಲಾರ : ಕೋಲಾರದಲ್ಲಿ ಇಂದು ಭೀಕರ ಅಪಘಾತ ಸಂಭವಿಸಿದ್ದು ರಸ್ತೆಯ ಬದಿಯಲ್ಲಿರುವ ಡಿವೈಡರ್ ಮೇಲೆ ನಿಂತಿದ್ದ ಇಬ್ಬರ ಮೇಲೆ ಕಾರು ಹರಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಹೌದು ಕಾರು ಡಿಕ್ಕಿಯಾಗಿ ರಸ್ತೆ ಡಿವೈಡರ್ ಮೇಲೆ ನಿಂತಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.ಉತ್ತರ ಭಾರತದ ಮೂಲದ ಕಿರಣ್ ಹಾಗೂ ರಜನಿಸಿಂಗ್ ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ದೀಪಾವಳಿ ಹಬ್ಬದ ಅಂಗವಾಗಿ ಪಟಾಕಿ ಸಿಡಿಸುವ ವೇಳೆ ಎಷ್ಟೇ ಜಾಗರೂಕರಾಗಿ ಇರಿ ಎಂದು ಹೇಳಿದರೂ ಕೂಡ ಕೆಲವೊಂದು ಬಾರಿ ಅವಘಡಗಳು ಸಂಭವಿಸುತ್ತಲೆ ಇರುತ್ತವೆ. ಇದೀಗ ಬೆಂಗಳೂರಿನಲ್ಲಿ ಇಂದು ಪಟಾಕಿ ಸಿಡಿಸಿದ ಪರಿಣಾಮ 9 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನಲ್ಲಿ ಪಟಾಕಿ ಸಿಡಿದು ಇದುವರೆಗೂ 54 ಜನರಿಗೆ ಗಂಭೀರವಾದ ಗಾಯಗಳಾಗಿವೆ. ಮಿಂಟೋ ಆಸ್ಪತ್ರೆಯಲ್ಲಿ 10, ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 12, ಅಗರ್ವಾಲ್ ಆಸ್ಪತ್ರೆಯಲ್ಲಿ 9, ನಾರಾಯಣ ನೇತ್ರಾಲಯದಲ್ಲಿ 23 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಇವುಗಳಲ್ಲಿ ಬೇರೆಯವರು ಸಿಡಿಸಿದ ಪಟಾಕಿಯಿಂದ ಕಣ್ಣಿನ ತೊಂದರೆಗೆ ಒಳಗಾದವರೇ ಹೆಚ್ಚು ಎನ್ನಲಾಗಿದೆ. ಶುಕ್ರವಾರ ಓರ್ವ ವಯಸ್ಕ ಸೇರಿದಂತೆ 10 ಮಕ್ಕಳು ಪಟಾಕಿ ಅವಘಡಗಳಿಗೆ ತುತ್ತಾಗಿ ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. 6 ಮಂದಿ ಹೊರರೋಗಿ ವಿಭಾಗದಲ್ಲಿ ಹಾಗೂ ನಾಲ್ವರು ಇತರೆ ವಿಭಾಗದಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. 4 ಮಕ್ಕಳಿಗೆ ತೀವ್ರ ಹಾಗೂ 2 ಮಕ್ಕಳಿಗೆ ಸಾಮಾನ್ಯ, ಒಂದು ಮಗುವಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಶಂಕರ ಕಣ್ಣಿನ…













