Subscribe to Updates
Get the latest creative news from FooBar about art, design and business.
Author: kannadanewsnow05
ಕೊಡಗು : ಕೊಡಗು ಜಿಲ್ಲೆಯ ಹಲವೆಡೆ ಇಂದು ಬೆಳಗ್ಗೆ ಲಘು ಭೂಕಂಪನ ಅನುಭವವಾಗಿದೆ ಎಂದು ತಿಳಿದುಬಂದಿದೆ. ಮಡಿಕೇರಿ ತಾಲೂಕಿನ ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಭೂಕಂಪನ ಅನುಭವವಾಗಿದೆ. ಹೌದು ಈ ಕುರಿತು ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಸದ್ಯ, ಈ ವಿಚಾರದ ಬಗ್ಗೆ ಭೂ ವಿಜ್ಞಾನಿಗಳಿಗೆ ಮಾಹಿತಿ ನೀಡಲು ಗ್ರಾಮ ಪಂಚಾಯತ್ ಅಧಿಕಾರಿಗಳು ಮುಂದಾಗಿದ್ದಾರೆ.ಸದ್ಯ ಈ ಬಗ್ಗೆ ಅಧಿಕಾರಿಗಳು ಭೂವಿಜ್ಞಾನಿಗಳಿಗೆ ಮಾಹಿತಿ ನೀಡಲು ಮುಂದಾಗಿದ್ದಾರೆ.ಅದೃಷ್ಟವಶಾತ್ ಯಾವುದೇ ರೀತಿಯಲ್ಲಿ ಹಾನಿ, ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಬೆಂಗಳೂರು : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ವಿಡಿಯೋ ಪ್ರಸಾರ ಮಾಡಿದ್ದ ಯೂಟ್ಯೂಬರ್ ಎಂ.ಡಿ.ಸಮೀರ್ ವಿರುದ್ಧ ಬಳ್ಳಾರಿಯ ಕೌಲ್ ಬಜಾರ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಹೌದು 8 ಕುರಿತು ಯೂಟ್ಯೂಬರ್ ಸಮೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.ಸಮೀರ್ ಪರ ವಕೀಲರು, ”ಎಫ್‌ಐಆರ್ ದಾಖಲಿಸಿರುವುದು ಕಾನೂನು ಬಾಹಿರ. ಇದು ನಾಗರಿಕರಿಗೆ ಸಾಂವಿಧಾನಿಕವಾಗಿ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು 19(1) ಮತ್ತು 21ನೇ ವಿಧಿಗೆ ವಿರುದ್ಧ ಎಂದು ಪೀಠಕ್ಕೆ ತಿಳಿಸಿದರು. ಧಾರ್ಮಿಕ ವ್ಯಕ್ತಿಯ ಹೇಳಿಕೆ ಧರ್ಮದ ವಿರುದ್ಧ ಹೇಳಿಕೆ ಆಗುವುದಿಲ್ಲ. ಅದರ ವ್ಯಾಪ್ತಿ ಸೀಮಿತವಾದುದು. ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಆರೋಪಗಳು ಈ ಪ್ರಕರಣದಲ್ಲಿ ಅನ್ವಯ ಆಗುವುದಿಲ್ಲ. ಹಾಗೇನಾದರೂ ಇದ್ದರೆ ನಿತ್ಯಾನಂದ ಸ್ವಾಮಿ ವಿರುದ್ಧ ಪ್ರಕರಣ ದಾಖಲಿಸುವುದಕ್ಕೇ ಸಾಧ್ಯವಿರುತ್ತಿರಲಿಲ್ಲ ಎಂದು ಪೀಠಕ್ಕೆ ತಿಳಿಸಿದರು.
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಇದೀಗ ಭಾರಿ ಬೆಳವಣಿಗೆ ಆಗಿದ್ದು, ಮೂರು ಪಕ್ಷಗಳ ಶಾಸಕರ ಮಹತ್ವದ ಸಭೆ ನಡೆದಿದೆ. ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಶಾಸಕರು ಒಂದೇ ಕಡೆ ಸೇರಿ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಈ ಒಂದು ಸಭೆಯಲ್ಲಿ 56ಕ್ಕೂ ಹೆಚ್ಚು ಶಾಸಕರು ಭಾಗಿಯಾಗಿದ್ದರು. ಅದರಲ್ಲೂ ಮೊದಲ ಬಾರಿಗೆ ಆಯ್ಕೆಯಾದ ಶರಣಗೌಡ ಕಂದಕೂರು, ಶಿವಗಂಗಾ ಬಸವರಾಜ್ ಈ ಒಂದು ಸಭೆ ಆಯೋಜನೆ ಮಾಡಿದ್ದು ಹೊಸದಾಗಿ ಆಯ್ಕೆಯಾದ ಶಾಸಕರು ಈ ಸಭೆಯಲ್ಲಿ ಭಾಗಿಯಾಗಿದ್ದರು. ಹೌದು ಜೆಡಿಎಸ್ ಕಾಂಗ್ರೆಸ್ ಹಾಗು ಬಿಜೆಪಿ ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದರು.ಅಲ್ಲದೇ ಜೆಡಿಎಸ್ ಶಾಸಕರಿಗೆ ಔತಣಕೂಟಕ್ಕೆ ವಿಶೇಷ ಅಹ್ವಾನ ನೀಡಲಾಗಿದೆ. ಅಲ್ಲದೇ ಹಿರಿಯ ಮತ್ತು ಕಿರಿಯ ಶಾಸಕರಿಗೂ ಆ ಅಹ್ವಾನ ನೀಡಲಾಗಿದೆ. ಇದೀಗ ಮೂರು ಪಕ್ಷದ ಶಾಸಕರ ಸಭೆ ತೀವ್ರ ಕುತೂಹಲ ಮೂಡಿಸಿದೆ. ಮೊದಲ ಬಾರಿಗೆ ಆಯ್ಕೆಯಾದ ಶಾಸಕರೇ ಈ ಒಂದು ಸಭೆಯಲ್ಲಿ ಭಾಗಿಯಾಗಿದ್ದಾರೆ. ಶೇಕಡಾ 70ಕ್ಕಿಂತ ಹೆಚ್ಚು ಮೊದಲ ಬಾರಿಗೆ ಆಯ್ಕೆಯಾದ ಶಾಸಕರಿಗೆಅಹ್ವಾನ ನೀಡಲಾಗಿದೆ. ಪಕ್ಷಾತೀತವಾಗಿ ಮೊದಲ ಬಾರಿಯ…
ಬೆಳಗಾವಿ : ಬೆಳಗಾವಿಯಲ್ಲಿ ಮಹಾನಗರ ಪಾಲಿಕೆಯ ಜಾಗಕ್ಕಾಗಿ ಎರಡು ಸಮುದಾಯದ ನಡುವೆ ಗಲಾಟೆ ನಡೆದಿದೆ. ಗಲಾಟೆ ಎಷ್ಟರಮಟ್ಟಿಗೆ ಇತ್ತು ಎಂದರೆ ಎರಡು ಸಮುದಾಯದವರು ಪರಸ್ಪರ ಕಲ್ಲುತೂರಾಟ ನಡೆಸಿ, ಗಲಾಟೆ ಮಾಡಿರುವ ಘಟನೆ ಬೆಳಗಾವಿಯ ಖಡೆ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳಗಾವಿಯ ಗಣಾಚಾರಿ ಗಳ್ಳಿಯಲ್ಲಿ ಪರಸ್ಪರ ಕಲ್ಲುತೂರಾಟ ನಡೆಸಲಾಗಿದೆ. ಹಿಂದೂ ಕಾರ್ಟಿಕ ಸಮುದಾಯದ ಕೆಲವರಿಂದ ಜಾಗ ಒತ್ತುವರಿ ಮಾಡಿರುವ ಆರೋಪ ಕೇಳಿ ಬಂದಿದೆ. ಒತ್ತುವರಿ ತೆರವಿಗೆ ಗಣಾಚಾರಿ ಸಮಾಜದ ಯುವಕರು ಆಗ್ರಹಿಸಿದ್ದಾರೆ. ಒತ್ತುವರಿ ಜಾಗ ಗುರುತಿಸಲು ಬಂದಿದ್ದಾಗ ಗಲಾಟೆ ನಡೆದಿದೆ.ಈ ವೇಳೆ 2 ಸಮುದಾಯಗಳು ಪರಸ್ಪರ ಕಲ್ಲುತೂರಾಟ ನಡೆಸಿವೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಗಣಾಚಾರಿ ಸಮುದಾಯದ ಇಬ್ಬರು ಯುವಕರಿಗೆ ಗಾಯಗಳಾಗಿವೆ. ರಾಜು ತಳವಾರ್ ಮತ್ತು ಸುರೇಶ್ ಲಾಠಿ ಎಂಬುವರಿಗೆ ಗಾಯಗಳಾಗಿವೆ. ಹೊರಗಿನಿಂದ ಹುಡುಗರನ್ನು ಕರೆ ತಂದು ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ಗಾಯಾಳುಗಳಿಗೆ ಇದೀಗ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು,…
ಬೆಂಗಳೂರು : ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್.ಡಿ ಕುಮಾರಸ್ವಾಮಿ ಅವರು ತೀವ್ರ ಕಫ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದ್ದು, ಸದ್ಯ ಸ್ವಲ್ಪ ಆರೋಗ್ಯ ಸುಧಾರಣೆ ಆಗಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಚೆನ್ನೈನ ಅಪೋಲೋ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದರು. ಆದರೂ ಕೂಡ ಕಫಾ ಹಾಗೂ ಕೆಮ್ಮು ಕಡಿಮೆಯಾಗಿರಲಿಲ್ಲ. ಕಳೆದ ನಾಲ್ಕು ದಿನಗಳಿಂದ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಎಚ್‌ಡಿಕೆ ಇಂದು ದೆಹಲಿಗೆ ತೆರಳಬೇಕಿತ್ತು. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸ ರದ್ದಾಗಿದೆ.
ಬೆಂಗಳೂರು : ರಾಜ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡುವ ಸಂಬಂಧ ಮಾರ್ಚ್.13ರಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿ ಪಡಿಸಲಾಗಿದೆ. ದಿನಾಂಕ 13-03-2025ರಂದು ಗುರುವಾರ ಸಂಜೆ 7 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 6ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ನಿಗದಿ ಪಡಿಸಲಾಗಿದೆ. ಮಾರ್ಚ್.13ರ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡಲಿದ್ದಾರೆ. ಅಂದು ಸಿಎಂ ಸಿದ್ಧರಾಮಯ್ಯ ಅವರು ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯೂ ಅಸ್ತು ಎನ್ನಲಿದ್ದಾರೆ.
ಚಾಮರಾಜನಗರ : ಕ್ರಷರ್ ಮಾಲೀಕನಿಂದ 4,500 ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ಲ್ಯಾಬ್ ಟೆಕ್ನಿಷಿಯನ್ ನಂದರಾಜು ಎಂಬಾತ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಎಂ ಸ್ಯಾಂಡ್ ಗುಣಮಟ್ಟ ಪರೀಕ್ಷಾ ವರದಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೃಷರ್ ಮಾಲೀಕ ಪ್ರಸನ್ನ ಕುಮಾರನಿಂದ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾನೆ. ಲ್ಯಾಬ್ ಟೆಕ್ನಿಷಿಯನ್ ನಂದರಾಜುನನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ.
ಕಲಬುರ್ಗಿ : ಕಲ್ಬುರ್ಗಿಯಲ್ಲಿ ಕುರಿ ಕಾಯುವ ಬೆಳೆ ಕುರಿಗಾಹಿಯ ಮೇಲೆ ಏಕಾಏಕಿ ಚಿರತೆಯೊಂದು ದಾಳಿ ಮಾಡಿದೆ. ಚಿರತೆಯ ದಾಳಿಯಿಂದ ಕುರಿಗಾಹಿ ನಿಂಗಪ್ಪ ಪೂಜಾರಿ ಸ್ಥಿತಿ ಗಂಭೀರವಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ರೇವಣ್ಣೂರು ಬಳಿ ಈ ಒಂದು ಘಟನೆ ನಡೆದಿದೆ. ಕುರಿಗಳನ್ನು ಮೇಯಿಸುತ್ತಿದ್ದ ನಿಂಗಪ್ಪನ ಮೇಲೆ ಚಿರತೆ ಏಕಾಏಕಿ ದಾಳಿ ಮಾಡಿದೆ. ಗಾಯಾಳು ನಿಂಗಪ್ಪಗೆ ತಕ್ಷಣ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ವಿಷಯ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಸಿಬ್ಬಂದಿಗೆ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಚಿರತೆ ಸೆರೆ ಹಿಡಿದು ಸ್ಥಳಾಂತರ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕಲಬುರ್ಗಿ ಜಿಲ್ಲೆಯ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ : ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಯೊಂದು ಬೆಂಕಿಗೆ ಆಹುತಿ ಆಗಿರುವ ಘಟ್ನೆ ಹೊಸಹೊಳಲು ಗ್ರಾಮದಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆ ಸಂಪೂರ್ಣವಾಗಿ ಹೊತ್ತಿ ಉರಿದಿರುವ ಘಟನೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಹೊಸ ಹೊಳಲು ಗ್ರಾಮದಲ್ಲಿ ನಡೆದಿದೆ. ಹೊಸಹೂಳಲು ಗ್ರಾಮದ ಮಹೇಶ್ ಎಂಬುವವರ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿ ಆಗಿದೆ. ಈ ಒಂದು ಅವಘಡದಲ್ಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಮನೆಯಲ್ಲಿ ಯಾರು ಇಲ್ಲದಿದ್ದರಿಂದ ಭಾರಿ ದುರಂತ ತಪ್ಪಿದೆ ಘಟನೆ ಕುರಿತು ಕೆಆರ್ ಪೇಟೆ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ನಾವು ಆಹಾರ ಇಲಾಖೆಯ ಅಧಿಕಾರಿಗಳು ಎಂದು ಹೇಳಿ ಕಿರಾಣಿ ಅಂಗಡಿ ಮೇಲೆ ನಕಲಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ಅಂಗಡಿ ಮಾಲೀಕರು ತೀವ್ರ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ನಕಲಿ ಅಧಿಕಾರಿಗಳ ಮುಖವಾಡ ಕಳಚಿ ಬಿದ್ದಿದ್ದು, ಘಟನೆಯಲ್ಲಿ ಅಂಗಡಿ ಮಾಲೀಕರು ಓರ್ವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮತ್ತೊರ್ವ ಆರೋಪ ಪರಾರಿಯಾಗಿರುವ ಘಟನೆ ನಡೆದಿದೆ. ಹೌದು ದಾಳಿಯ ವೇಳೆ ನಕಲಿ ಅಧಿಕಾರಿಗಳ ಬೆವರಿಳಿಸಿದ ಕಿರಾಣಿ ಅಂಗಡಿಗಳ ಮಾಲೀಕರು, ಮೊದಲು ನಾವು ಆಹಾರ ಇಲಾಖೆ ಅಧಿಕಾರಿಗಳು ಅಂತ ಹೇಳಿ ನಕಲಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ಮೀಡಿಯಾದವರೆಂದು ಪರಾರಿಗೆ ಯತ್ನಿಸಿದ್ದಾರೆ.ಈ ವೇಳೆ ಮಂಜುನಾಥ್ ನನ್ನು ಹಿಡಿದು ಅಂಗಡಿ ಮಾಲೀಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಮತ್ತೋರ್ವ ನಕಲಿ ಫುಡ್ ಆಫೀಸರ್ ಲಕ್ಷ್ಮಣ್ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಹುಬ್ಬಳ್ಳಿ ಘಂಡಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












