Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಆರೋಪಿಯೊಬ್ಬ ಪರಿಚಯಸ್ಥ ಮಹಿಳೆಯ ಮೊಬೈಲ್ ನಲ್ಲೆ ಆಪ್ ಡೌನ್ಲೋಡ್ ಮಾಡಿ ಬಳಿಕ ವಿಡಿಯೋ ಕಾಲ್ ಮೂಲಕ ಆಕೆಯ ಬೆತ್ತಲೆ ವಿಡಿಯೋ ಇಟ್ಟುಕೊಂಡು ಹಣಕ್ಕೆ ಕಿರುಕುಳ ನೀಡಿದ್ದ ಆರೋಪಿಯ ವಿರುದ್ಧ ಇದೀಗ ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮಹಿಳೆ ವಿವಾಹಿತೆಯಾಗಿದ್ದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ವೇಳೆ ಮೂರನೇ ವ್ಯಕ್ತಿಯಿಂದ ಆರೋಪಿಯು ಮಹಿಳೆಗೆ ಸ್ನೇಹಿತನಾಗಿದ್ದ. ಕಾಲಕ್ರಮೇಣ ಮೂವರು ಓಡಾಡಿಕೊಂಡಿದ್ದರು. ಈ ವೇಳೆ ಮಹಿಳೆಗೆ ಅರಿವಿಲ್ಲದಂತೆ ಥರ್ಡ್ ಪಾರ್ಟಿ ಅಪ್ಲಿಕೇಷನ್ ಆ್ಯಪ್ ಅನ್ನ ಮಹಿಳೆಯ ಮೊಬೈಲ್ನಲ್ಲಿ ಡೌನ್ಲೋಡ್ ಮಾಡಿ ಆಕೆಗೆ ಅರಿವಿಲ್ಲದಂತೆ ಬೆತ್ತಲೆ ವಿಡಿಯೋ ಮಾಡಿಕೊಂಡಿದ್ದ. ಈ ನಡುವೆ ಮಹಿಳೆಗೆ ಗೊತ್ತಿಲ್ಲದಂತೆ ಅಪ್ಲೀಕೇಷನ್ ಡೌನ್ಲೋಡ್ ಮಾಡಿ ಮೊಬೈಲ್ನಲ್ಲಿ ಹೈಡ್ ಮಾಡಿದ್ದ. ತುರ್ತು ಫೋನ್ ಬರುವುದೆಂದು ಮಹಿಳೆಯು ಸ್ನಾನದ ಮನೆಯಲ್ಲಿ ಮೊಬೈಲ್ ಇಟ್ಟುಕೊಂಡಿದ್ದರು.ಈ ವೇಳೆ ಆ್ಯಪ್ ಆನ್ ಮಾಡಿಕೊಂಡು ಮೊಬೈಲ್ನಲ್ಲಿ ಸೆರೆಯಾಗುವ ವಿಡಿಯೋ ಹಾಗೂ ಆಡಿಯೊಗಳನ್ನ ಸಂಗ್ರಹಿಸಿದ್ದ. ಈ ವಿಡಿಯೋಗಳನ್ನು ನಿನ್ನ ಸ್ನೇಹಿತ ಕಳಿಸಿದ್ದಾನೆ ಎಂದು ಸುಳ್ಳು…
BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಟ್ರಾನ್ಸ್ಫಾರ್ಮರ್ ಸ್ಫೋಟದಿಂದ ಸುಟ್ಟು ಕರಕಲಾದ ಬನಾರಸ್ ಸೀರೆಗಳು!
ಬೆಂಗಳೂರು : ಟ್ರಾನ್ಸ್ಫಾರ್ಮರ್ ಸ್ಫೋಟದಿಂದ ಮನೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿಗಳ ಬನಾರಸ್ ಸೀರೆಗಳು ಬೆಂಕಿಗೆ ಆಸ್ತಿ ಆಗಿರುವ ಘಟನೆ ಇಂದು ಬೆಂಗಳೂರಿನ ಹೊಸಗುಡ್ಡದ ಹಳ್ಳಿಯಲ್ಲಿ ನಡೆದಿದೆ. ಹೌದು ಟ್ರಾನ್ಸ್ಫಾರ್ಮರ್ ಸ್ಪೋಟದಿಂದ ಮನೆಯೊಂದು ಬೆಂಕಿ ಹೊತ್ತಿ ಉರಿದಿದೆ. ಬೆಂಗಳೂರಿನ ಹೊಸಗುಡ್ಡದ ಹಳ್ಳಿಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಮೊದಲ ಮಹಡಿಯ ಮನೆಯಲ್ಲಿದ್ದ ನೂರಾರು ಬನಾರಸ್ ಸೀರೆ ಭಸ್ಮವಾಗಿದ್ದು, ತಕ್ಷಣ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎನ್ನಲಾಗಿದೆ.
ಬೆಂಗಳೂರು : ಈ ಬಾರಿಯ ದೀಪಾವಳಿಯಲ್ಲಿ ಪಟಾಕಿ ಮಾರಾಟಕ್ಕೂ ಹಾಗೂ ಪಟಾಕಿ ಸಿಡಿಸುವ ಸಾರ್ವಜನಿಕರಿಗೂ ಕೂಡ ಹಲವು ನಿಯಮಗಳು ಅನ್ವಯವಾಗುತ್ತವೆ. ಆದರೆ ಬೆಂಗಳೂರಿನಲ್ಲಿ ಪಟಾಕಿ ಮಾರಾಟಗಾರರಿಂದ ನಿಯಮ ಉಲ್ಲಂಘನೆಯಾಗಿದ್ದು, ಈ ಕುರಿತಂತೆ ಅಧಿಕಾರಿಗಳಿಗೆ ಮಾಹಿತಿ ಸಿಕ್ಕರೂ ಕೂಡ ಅವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೌದು ಬೆಂಗಳೂರಿನಲ್ಲಿ ನಿಯಮಗಳನ್ನು ಮೀರಿ ಪಟಾಕಿ ಮಾರಾಟ ಮಾಡಲಾಗಿದೆ. ದಾಸರಹಳಿಯ ವಲಯ ಬಿಬಿಎಂಪಿ ಮೈದಾನದಲ್ಲಿ ಪಟಾಕಿ ಮಾರಾಟದ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಪಟಾಕಿ ಬಾಕ್ಸ್ ಮೇಲೆ ಸಿಎಸ್ಐಆರ್ ಮಾರ್ಕ್ ಇಲ್ಲ, ಕ್ಯೂಆರ್ ಕೋಡ್ ಇಲ್ಲ ಅಲ್ಲದೆ ಕಡ್ಡಾಯವಾಗಿ ಹಸಿರು ಪಟಾಕಿ ಮಾರಾಟ ನಿಯಮ ಸಹ ಉಲ್ಲಂಘನೆ ಮಾಡಲಾಗಿದೆ. ಇನ್ನು ಮಳಿಗೆಗಳಲ್ಲಿ ಬೆಂಕಿ ನಂದಿಸುವ ಯಾವುದೇ ಸಾಧನೆಗಳು ಇಲ್ಲದೆ ಪಟಾಕಿ ಮಾರಾಟ ಮಾಡಲಾಗುತ್ತಿದೆ. ದಾಸರಹಳ್ಳಿ ಪಟಾಕಿ ವರ್ತಕರ ಸಂಘದಿಂದ ನಿಯಮಗಳ ಉಲ್ಲಂಘನೆಯಾಗಿದೆ. ಈ ವೇಳೆ ಪಟಾಕಿ ಮಾರಾಟ ಮಳಿಗೆಯಲ್ಲಿ ಡಿಸಿಪಿಗಳು ಪರಿಶೀಲನೆ ಕಡ್ಡಾಯವಿದ್ದು, ನಿಯಮ ಉಲ್ಲಂಘಿಸಿದರು ಕೂಡ ಪೊಲೀಸರು ಸ್ಥಳಕ್ಕೆ ಭೇಟಿ…
ಬೆಳಗಾವಿ : ಹಿರಿಯರಿಂದ ಬಂದಂತಹ ಆಸ್ತಿಯನ್ನು ಕೇವಲ ತಾನು ಒಬ್ಬನೇ ಅನುಭವಿಸಬೇಕೆಂದು ಅಣ್ಣನೊಬ್ಬ ಇಡೀ ಆಸ್ತಿಯನ್ನು ತನ್ನ ಹೆಸರಿಗೆ ಬರೆಸಿಕೊಂಡಿದ್ದಾನೆ. ಇದಕ್ಕೆ ತಮ್ಮ ನನಗೂ ಪಾಲು ಬೇಕು ಎಂದು ಕೇಳಿದಾಗ ಅವನ ಹಾಗೂ ಆತನ ಕುಟುಂಬದ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ್ ತಾಲೂಕಿನ ಅಲಕನೂರಿನಲ್ಲಿ ನಡೆದಿದೆ. ಆಸ್ತಿ ತನ್ನ ಹೆಸರಿಗೆ ಬರೆಸಿಕೊಂಡ ಅಣ್ಣನನ್ನು ಕರೆಪ್ಪ ಎಂದು ಹೇಳಲಾಗುತ್ತಿದ್ದು, ಆಸ್ತಿಯನ್ನು ತಮ್ಮ ಹೆಸರಿಗೆ ಮಾಡುವಂತೆ ಅಣ್ಣನಿಗೆ ಕರೆಪ್ಪನ ತಮ್ಮ ಗೋಪಾಲ ಕೇಳಿದ್ದಾನೆ. ಇಷ್ಟಕ್ಕೆ ತಮ್ಮ ಗೋಪಾಲ ಹಾಗೂ ಆತನ ಕುಟುಂಬದ ಮೇಲೆ ಕರೆಪ್ಪ ಹಲ್ಲೆ ಮಾಡಿದ್ದಾನೆ.ಅಲಕನೂರ ಗ್ರಾಮದ ಹೊರವಲಯದ ಜಮೀನಿನಲ್ಲಿ ಈ ಒಂದು ಗಲಾಟೆ ನಡೆದಿದೆ. ಗೋಪಾಲ ಮಾಂಗ, ಶೈನಪ್ಪ ಮಾಂಗ, ಆನಂದ್ ಮಾಂಗ, ಕುಲಾಬಾಯಿ ಮಾಂಗ, ಬಸವರಾಜ ಮಾಂಗ ಎಂಬುವರ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆಗೊಳಗಾದವರನ್ನು ಹಾರೂಗೇರಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತಂತೆ ಹಾರುಗೆರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಕರೆಪ್ಪ ಮತ್ತು ಆತನ ಮಕ್ಕಳ…
ಬೆಂಗಳೂರು : ಮುಡಾ ಹಗರಣ ಸೇರಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾಯುಕ್ತನಿಗೆ ಹಾಗೂ ಜಾರಿ ನಿರ್ದೇಶನಾಲಯ ತನಿಖೆಯಿಂದ ದೇವರ ಸಂಕಷ್ಟಕ್ಕೆ ಸಿಲುಕಿದ್ದಾರೆ ಇದರ ಮಧ್ಯ ಸಿಎಂ ಸಂಘಕ್ಕೆ ರಾಜೀನಾಮೆ ನೀಡಿ ಎಂದು ವಿಪಕ್ಷಗಳು ಆಗ್ರಹಿಸುತ್ತಲೇ ಇವೆ. ಟೀ ಕುರಿತಾಗಿ ಕನ್ನಡಪರ ಹೋರಾಟಗಾರ ವಾಟಳ್ ನಾಗರಾಜ್ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನಿಸಿದರೆ ರಾಜ್ಯದಲ್ಲಿ ಕ್ರಾಂತಿ ಆಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಕರ್ನಾಟಕ ರಾಜ್ಯೋತ್ಸವ ಸಮಿತಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭ ಮಾತನಾಡಿದ ಅವರು,ಸ್ನೇಹ ಇದೆ ಅಂತಾ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಹೊಗಳುತ್ತಿಲ್ಲ. 40 ವರ್ಷದ ರಾಜಕಾರಣದಲ್ಲಿ ಸಿದ್ದರಾಮಯ್ಯಗೆ ಏನೂ ಸಿಕ್ಕಿಲ್ಲ. ಯಾರೇ ಬೀದಿಯಲ್ಲಿ ಹೋಗುವವರಿಬ್ಬರು ರಾಜ್ಯಪಾಲರಿಗೆ ದೂರು ಕೊಟ್ಟರು. ವಿರೋಧ ಪಕ್ಷದವರು ಎತ್ತಿಕಟ್ಟಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಿಸಿದ್ದಾರೆ. ಸಿಎಂಗೆ ನೋಟಿಸ್ ಕೊಟ್ಟಿದ ದಿನವೇ ರಾಜ್ಯಪಾಲರ ವಿರುದ್ಧ ಮೊದಲು ಪ್ರತಿಭಟನೆ ಮಾಡಿದ್ದೇ ನಾನು ಎಂದಿದ್ದಾರೆ.
ಬೆಂಗಳೂರು : ಕರ್ನಾಟಕ ಮುಂದುವರೆದ ರಾಜ್ಯವೆಂದು ನ್ಯಾಯಯುತ ಅನುದಾನ ನೀಡದೆ ನಮಗೆ ಅನ್ಯಾಯ ಮಾಡಲಾಗುತ್ತಿದೆ. ಹಸು ಹಾಲು ಕೊಡುತ್ತದೆ ಎಂದು ಅಷ್ಟೂ ಹಾಲನ್ನು ಕರೆದರೆ ಕರು ಬಡವಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಹೀಗಾಗಿ ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯಗಳ ವಿರುದ್ಧ ಸಮಸ್ತ ಕನ್ನಡಿಗರು ಧ್ವನಿಯೆತ್ತಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇಂದು ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 69 ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ, ದೇಶದಲ್ಲಿ ಅತಿ ಹೆಚ್ಚು ತೆರಿಗೆ ನೀಡುವ ಎರಡನೇ ರಾಜ್ಯವಾಗಿದೆ. 4 ಲಕ್ಷ ಕೋಟಿಗೂ ಹೆಚ್ಚು ತೆರಿಗೆ ನೀಡಿದರೂ, ಕೇಂದ್ರದಿಂದ ದೊರೆಯುವ ತೆರಿಗೆ ಪಾಲು ಕೇವಲ 50-60 ಸಾವಿರ ಕೋಟಿ ಮಾತ್ರ. ಕನ್ನಡ ನಾಡು ಮುಂದುವರೆದಿದೆ ಎಂದು ಕೇಂದ್ರ ಸರ್ಕಾರ ನಮಗೆ ಅನ್ಯಾಯವೆಸಗಬಾರದು. ರಾಜ್ಯಕ್ಕೆ ಬರಬೇಕಾದ ನ್ಯಾಯಯುತ ತೆರಿಗೆ ಪಾಲನ್ನು ನೀಡಿ ಎಂದು ಕೇಂದ್ರಕ್ಕೆ ನಮ್ಮ ಬೇಡಿಕೆಗೆ ರಾಜಕೀಯ ಬಣ್ಣವನ್ನು ಬಳಿಯಲಾಗುತ್ತಿದೆ. ನಮ್ಮ…
ಬೆಂಗಳೂರು : ಕನ್ನಡ ಪ್ರಾಚೀನ ಭಾಷೆ. ಎರಡು ಸಾವಿರ ವರ್ಷಗಳ ಇತಿಹಾಸ ಇರುವ ಭಾಷೆ. ಇದು ಶಾಸ್ತ್ರೀಯ ಭಾಷೆ. ನಾವು ಮಾಡಬೇಕಿರೋದು, ಕನ್ನಡ ಕಲಿಸುವ ಮತ್ತು ಕನ್ನಡದಲ್ಲಿ ವ್ಯವಹರಿಸುವ ಕಾರ್ಯವನ್ನು ಮಾಡಬೇಕು. ಕರ್ನಾಟಕದಲ್ಲಿ ಕಡ್ಡಾಯವಾಗಿ ಕನ್ನಡವೇ ವ್ಯಾವಹಾರಿಕ ಭಾಷೆ ಆಗಿರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿ ನಡೆದ ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯಾವುದೇ ಭಾಷೆ ಬಗ್ಗೆ ಹಾಗೂ ಸಂಸ್ಕೃತಿ ಬಗ್ಗೆ ಉದಾರತೆ ಇರಬಾರದು. ಅಭಿಮಾನ ಇರಬೇಕು. ಕನ್ನಡ ಶಾಸ್ತ್ರೀಯ ಭಾಷೆ. ಆದರೆ ಕೇಂದ್ರ ಸರ್ಕಾರ ಕನ್ನಡ ಭಾಷೆ ಅಭಿವೃದ್ಧಿಗೆ ಅನುದಾನ ನೀಡ್ತಾ ಇಲ್ಲ. ಅದನ್ನು ನಾನು ಈಗ ಮಾತಾಡಲ್ಲ. ಇಂತ ಸ್ಥಾನಮಾನ ಇರುವ ಭಾಷೆ ಕನ್ನಡ ಎಂದರು. ಮನುಷ್ಯತ್ವ ಪ್ರೀತಿಸಲು ಉದಾರತೆ ಇರಬೇಕು. ಆದರೆ ಭಾಷೆಗೆ ಇರಬಾರದು. ತಮಿಳುನಾಡಿನವರು ಇಲ್ಲಿ ಬಂದು ತಮಿಳು ಮಾತನಾಡಿದರೆ ನಾವು ಅವರದೇ ಭಾಷೆಯಲ್ಲಿ ಮಾತನಾಡುತ್ತೇವೆ. ತೆಲಗು ಮಾತಾಡಿದರೆ ನಾವೂ ಕೂಡ ತೆಲಗು…
ರಾಯಚೂರು : ಮನೆ ಮುಂದೆ ಪಟಾಕಿ ಹೊಡೆಯುತ್ತಿರುವ ವಿಚಾರಕ್ಕೆ ಗಲಾಟೆಯಾಗಿದ್ದು, ಕೊಲೆಯಲ್ಲಿ ಅಂತ್ಯಗೊಂಡ ಘಟನೆ ರಾಯಚೂರು ಜಿಲ್ಲೆಯ ನಗರದ ರಾಗಿಮಾನಗಡ್ಡದಲ್ಲಿ ನಡೆದಿದೆ. ಇದೀಗ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಲೆ ಮಾಡಿರುವ ಹಂತಕರುಕೊಲೆಯಾದ ನರಸಿಂಹಲು (32) ಮನೆಯ ಮುಂದೆ ಪಟಾಕಿ ಸಿಡಿಸುತ್ತಿದ್ದರು, ಇದಕ್ಕೆ ವಿರೋಧಿಸಿದ್ದ ನರಸಿಂಹಲು ಮನೆಯಲ್ಲಿ ಮಕ್ಕಳಿದ್ದಾರೆ ಮನೆಮುಂದೆ ಪಟಾಕಿ ಸಿಡಿಸಬೇಡಿ ಎಂದು ಹೇಳಿದ್ದನು.ಇದರಿಂದಾಗಿ ಕೆರಳಿದ್ದ ಹಂತಕರು ನರಸಿಂಹಲು ಮೇಲೆ ಹಲ್ಲೆಗೆ ಮುಂದಾಗಿದ್ದರು. ಎರಡು ಗುಂಪುಗಳ ಮಧ್ಯೆ ಪರಸ್ಪರ ಬಡಿದಾಟವಾಗಿದ್ದು. ರಾಗಿಮನಗಡ್ಡದಲ್ಲಿ ಕಾರ್ನರ್ ಬಳಿ ಮನೆ ಹೊಂದಿರುವ ಮೃತ ನರಸಿಂಹ, ನಿನ್ನೆ ರಾತ್ರಿ ರಸ್ತೆಯಲ್ಲಿ ಅದೇ ಏರಿಯಾದ ಹುಡುಗರು ಪಟಾಕಿ ಹೊಡೆಯುತ್ತಿದ್ದರು. ಆಗ ಯಾಕೆ ಪಟಾಕಿ ಹೊಡೆಯುತ್ತಿದ್ದಿರಿ ಅಂತ ನರಸಿಂಹ ಪ್ರಶ್ನಿಸಿದ್ದಾರೆ. ಆಗ ಏರಿಯಾ ಹುಡುಗರು ಮಾತು ಕೇಳದ ಹಿನ್ನೆಲೆ ನರೇಶ್, ಪ್ರವೀಣ್ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಆಗ ಹಲ್ಲೆಗೊಳಗಾದ ಯುವಕರು ಹಾಗೂ ಅವರ ಕಡೆಯವರಿಂದ ನರಸಿಂಹನ ಹತ್ಯೆ ಮಾಡಿದ್ದಾರೆ. ಮೃತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ…
ವಿಜಯಪುರ : ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ.ಇದೀಗ ಅವರ ವಿರುದ್ಧ ಮತ್ತೊಂದು ಆರೋಪ ಮಾಡಿದ್ದು, ಯಡಿಯೂರಪ್ಪ ಸಿಎಂ ಆಗಿದ್ದಾಗ ಸಾವಿರಾರು ಕೋಟಿ ರೂಪಾಯಿ ದುಡ್ಡು ತಿಂದಿದ್ದಾರೆ ಎಂದು ಸ್ಪೋಟಕ ವಾದಂತಹ ಆರೋಪ ಮಾಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಎಸ್‌ವೈ ಸಿಎಂ ಇದ್ದಾಗ ಮಂತ್ರಿಯಾಗು ಎಂದಿದ್ದರು ಆದರೆ ನಾನು ಆಗಿರಲಿಲ್ಲ. ಅವರು ಸಿಎಂ ಇದ್ದಾಗ ಸಾವಿರಾರು ಕೋಟಿ ರೂ. ಹಣ ತಿಂದಿದ್ದಾರೆ. ಭ್ರಷ್ಟ ಸಿಎಂ ಮಂತ್ರಿಮಂಡಲದಲ್ಲಿ ನಾನು ಇರಲ್ಲ ಎಂದು ತಿರಸ್ಕರಿಸಿದ್ದೇನೆ. ಪ್ರತಿ ನಿತ್ಯ ಅಪ್ಪ, ಮಗ ನಡ್ಡಾ ಅವರ ಬಳಿ ಹೋಗಿ, ಯತ್ನಾಳ್ ಅವರನ್ನು ತೆಗೆಯಿರಿ. ವಿಜಯೇಂದ್ರನನ್ನು ಸಿಎಂ ಮಾಡಿ ಎಂದು ಗೋಳಾಡುತ್ತಾರೆ ಎಂದು ವ್ಯಂಗ್ಯವಾಡಿದರು. ವಿಜಯೇಂದ್ರ ನನ್ನನ್ನು ಸ್ಟಾರ್ ಮಾಡುವ ಅವಶ್ಯಕತೆಯಿಲ್ಲ. ಈ ರಾಜ್ಯದ ಜನ ನಮ್ಮನ್ನು ಒಪ್ಪಿಕೊಂಡಿದ್ದಾರೆ. ನೀವು ಹೀರೋ ಆಗಬೇಕು ಅಂದರೆ ಖರ್ಚು ಮಾಡಿ.ಕರ್ನಾಟಕದಲ್ಲಿ ಬಿಜೆಪಿ ಉಳಿಯಬೇಕಾದ್ರೆ ರಾಜ್ಯಾಧ್ಯಕ್ಷ ಸ್ಥಾನದಿಂದ…
ಕಲಬುರ್ಗಿ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಮಹಿಳೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬೀಕರವಾಗಿ ಕೊಲೆ ಮಾಡಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಇಟಗಾ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಕೊಲೆಯಾದ ಮಹಿಳೆಯನ್ನು ಜ್ಯೋತಿ (29) ಎಂದು ಹೇಳಲಾಗುತ್ತಿದೆ. ಕಳೆದ ಹತ್ತು ವರ್ಷದ ಹಿಂದೆ ಹೀಗೆ ಮದುವೆಯಾಗಿತ್ತು. ಕಲ್ಬುರ್ಗಿಯ ಸಂಗಮೇಶ್ವರ ಕಾಲೋನಿಯಲ್ಲಿ ಗಂಡನ ಜೊತೆಗೆ ವಾಸಿಸುತ್ತಿದ್ದಳು. ಆದರೆ ಕಳೆದ ಐದು ವರ್ಷದ ಹಿಂದೆ ಗಂಡನ ಮನೆ ಬಿಟ್ಟು ತವರು ಮನೆ ಸೇರಿದ್ದಳು. ಇನ್ನು ನಿನ್ನೆ ಮನೆಯಿಂದ ಹೊರಗಡೆ ಹೋದ ಜ್ಯೋತಿ ಮಧ್ಯಾಹ್ನದ ಹೊತ್ತಿಗೆ ಸುಟ್ಟ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಕೌಟುಂಬಿಕ ಕಲಹದಿಂದ ಸಂಬಂಧಿಕರೇ ಯಾರೋ ಈ ಒಂದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ.













