Subscribe to Updates
Get the latest creative news from FooBar about art, design and business.
Author: kannadanewsnow05
ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರವಾದ ಕೊಲೆ ನಡೆದಿದ್ದು, ದುಷ್ಕರ್ಮಿಗಳು ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾದ ಘಟನೆ ನಗರದ ಬೊಮ್ಮನಕಟ್ಟೆ ಕೆರೆ ಏರಿ ಬಳಿ ತಡರಾತ್ರಿ ಶನಿವಾರ ನಡೆದಿದೆ. ಕೊಲೆಯಾದ ರೌಡಿ ಶೀಟರ್ ನನ್ನು ಅವಿನಾಶ್ (32) ಎಂದು ತಿಳಿದುಬಂದಿದೆ. ಈ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಶಿಕ್ಷೆಗೆ ಒಳಗಾಗಿದ್ದ ಅವಿನಾಶ್, ಐದು ವರ್ಷಗಳ ಕಾಲ ಜೈಲಿನಲ್ಲಿದ್ದ ಆನಂತರ ಮೇಲಿನ ಕೋರ್ಟ್ನಿಂದ ಜಾಮೀನು ಪಡೆದು ಹೊರಗಿದ್ದ ಎಂದು ತಿಳಿದು ಬಂದಿದೆ. ಈ ನಡುವೆ ಪಾರ್ಟಿ ಮಾಡಲು ಎಂದು ಆತನನ್ನು ಕರೆತಂದು ಬೊಮ್ಮನಕಟ್ಟೆಯಲ್ಲಿ ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮಾಹಿತಿ ತಿಳಿದ ಕೂಡಲೇ ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧಾರವಾಡ : ಕರ್ತವ್ಯ ಲೋಪ ಆರೋಪದಡಿ ಗುಡಿನಕಟ್ಟಿ ಗ್ರಾಮ ಪಂಚಾಯಿತಿ ಪಿಡಿಓ ಅಮಾನತುಕೊಂಡಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡಿನಕಟ್ಟಿ ಗ್ರಾಮ ಪಂಚಾಯಿತಿ ಪಿಡಿಓ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ಸೂಚನೆಯ ಮೇರೆಗೆ ಸಸ್ಪೆಂಡ್ ಮಾಡಲಾಗಿದೆ. ಅಮಾನತುಗೊಳಿಸಿ ಧಾರವಾಡ ಜಿಲ್ಲಾ ಪಂಚಾಯತ್ ಸಿಇಒ ಭುವನೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಯರಿನಾರಾಯಣಪುರಕ್ಕೆ ಮೂಲಸೌಕರ್ಯ ಕಲ್ಪಿಸದೆ ಪಿಡಿಓ ಕರ್ತವ್ಯ ಲೋಪ ಎಸಗಿದ್ದಾರೆ. ಯರಿನಾರಾಯಣಪುರ ಗ್ರಾಮದ ಕೆರೆಗೆ ಬಿದ್ದು ಅವಳಿ ಮಕ್ಕಳು ಮೃತಪಟ್ಟಿದ್ದರು. ಸಚಿವ ಸಂತೋಷ್ ಲಾಡ್ ಭೇಟಿಯ ವೇಳೆ ಗ್ರಾಮದ ನಿವಾಸಿಗಳು ದೂರು ನೀಡಿದ್ದರು. ಜನರ ಸುರಕ್ಷತೆಗೆ ಪಿಡಿಓ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸಚಿವರು ಅಮಾನತಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು : ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಜನರಿಗೆ ಯೋಗದ ಕುರಿತು ಜಾಗೃತಿ ಮೂಡಿಸಲು ಯೋಗ ಮಂದಿರಗಳನ್ನು ಸ್ಥಾಪಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ. ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಯೋಗವನ್ನು ಜನಪ್ರಿಯಗೊಳಿಸಲು ‘ಯೋಗ ಮಂದಿರ’ಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗುತ್ತದೆ. ಮೈಸೂರನ್ನು ಯೋಗ ಜಿಲ್ಲೆಯನ್ನಾಗಿ ಮಾಡುವ ಯೋಜನೆ ಇದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು. ವಿಶ್ವ ಮಟ್ಟದಲ್ಲಿ ಮನ್ನಣೆ ಪಡೆದಿರುವ ಯೋಗವನ್ನು ನಾವು ಹೆಚ್ಚಿನ ಜನರಿಗೆ ಪರಿಚಯಿಸಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಾಕಿಕೊಳ್ಳುತ್ತಿದೆ. ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಯೋಗ ಪರಿಚಯಿಸುವ ‘ಯೋಗ ಮಂದಿರ’ಗಳನ್ನು ಪ್ರಾರಂಭಿಸುವುದಾಗಿ ತಿಳಿಸಿದರು. ಮೈಸೂರು ಜಿಲ್ಲೆಯನ್ನು ಯೋಗ ಜಿಲ್ಲೆಯನ್ನಾಗಿ ನಿರ್ಮಿಸುವತ್ತ ಈಗಾಗಲೇ ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ.…
ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಕೊಲೆ ಆಗಿದ್ದು, ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದ ಹೊರವಲಯದ ಸಾಗರ ನಗರದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಯಾಸಿನ್ ಜಾತಗಾರ (22) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ರೋಹಿತ್ ಜಾಧವ್, ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಚಾಕುವಿನಿಂದ ಚುಚ್ಚಿ ಆರೋಪಿಯು ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಮೈಸೂರಲ್ಲಿ ಘೋರ ಘಟನೆ ನಡೆದಿದ್ದು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಭೋಗೇಶ್ವರ ಕಾಲೋನಿಯಲ್ಲಿ ವಾಸವಿದ್ದ ಮುಕುಂದ (38) ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಇದೀಗ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಭೋಗೇಶ್ವರ ಕಾಲೋನಿಯಲ್ಲಿ ಕಳೆದ 7 ವರ್ಷದಿಂದ ಮುಕುಂದ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಗುಡ್ಲೂರು ತಾಲೂಕಿನ ಪಂಡನತೋರಯ್ ಗ್ರಾಮದವನಾಗಿದ್ದು, ಜಮೀನು ಭೋಗ್ಯಕ್ಕೆ ಪಡೆದು ಮುಕುಂದ ಇಲ್ಲಿಯೇ ವ್ಯವಸಾಯ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಮುಕುಂದ ಮಾನಸಿಕ ಸ್ಥಿಮಿತ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಆತ್ಮಹತ್ಯೆಗು ಮುನ್ನ ತಾಯಿಗೆ ಕರೆ ಮಾಡಿ ವಾಪಸ್ ಕರೆಸಿಕೊಳ್ಳುವಂತೆ ಮುಕುಂದ ಮನವಿ ಮಾಡಿದ್ದ. ನನಗೆ ಇಲ್ಲಿರಲು ಆಗುತ್ತಿಲ್ಲ ವಾಪಸ್ ಕರೆದುಕೊಂಡು ಹೋಗಿ ಅಂತ ಹೇಳಿದ್ದ. ಆದರೆ ಮನೆಯವರು ಬರುವಷ್ಟರಲ್ಲಿ ಮುಕುಂದ ಜಮೀನಿನಲ್ಲಿ ಕತ್ತು ಕೊಯ್ದುಕೊಂಡಿದ್ದಾನೆ. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮುಕುಂದ ಮೃತಪಟ್ಟಿದ್ದಾನೆ. ಘಟನೆ…
ಮಂಗಳೂರು : ಗ್ಯಾಸ್ ಟ್ಯಾಂಕರ್ ಗೆ KSRTC ಬಸ್ ಡಿಕ್ಕಿಯಾಗಿ 30 ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲಶಪುರ ತಾಲೂಕಿನ ಮಾರನಹಳ್ಳಿ ಎಂಬಲ್ಲಿ ನಡೆದಿದೆ. 30 ಪ್ರಯಾಣಿಕರಿಗೆ ಗಾಯಗಳಾಗಿದ್ದು 10ಕ್ಕೂ ಹೆಚ್ಚು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಸಕಲೇಶಪುರದಿಂದ ಕೆಎಸ್ಆರ್ಟಿಸಿ ಬಸ್ ಧರ್ಮಸ್ಥಳಕ್ಕೆ ತೆರಳುತ್ತಿತ್ತು. ಮಂಗಳೂರು ಕಡೆಯಿಂದ ಗ್ಯಾಸ್ ಟ್ಯಾಂಕರ್ ಬೆಂಗಳೂರು ಕಡೆಗೆ ಬರುವಾಗ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದಿದೆ. ಗಂಭೀರವಾದ ಗಾಯಗೊಂಡವರನ್ನು ಹಾಸನ ಮತ್ತು ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ಗಾಯಾಲುಗಳಿಗೆ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾದಗಿರಿ : ಯಾದಗಿರಿಯಲ್ಲಿ ಇಂದು ಘೋರವಾದ ದುರಂತ ಸಂಭವಿಸಿದ್ದು, ಆಟವಾಡುತ್ತ ತೆರೆದ ಬಾವಿಯಲ್ಲಿ ಬಿದ್ದು 6 ವರ್ಷದ ಬಾಲಕ ಸಾವನಪ್ಪಿರುವ ಘಟನೆ ಯಾದಗಿರಿ ನಗರದಲ್ಲಿ ನಡೆದಿದೆ. ಯಾದಗಿರಿ ನಗರದ ಕೋಲಿವಾಡ ಬಡಾವಣೆಯಲ್ಲಿ ಈ ಒಂದು ಘಟನೆ ನಡೆದಿದ್ದು, ಆಟವಾಡುತ್ತಾ ತೆರೆದ ಬಾವಿಗೆ ಬಿದ್ದು ರಾಜು (6) ಎನ್ನುವ ಬಾಲಕ ಸಾವನಪ್ಪಿದ್ದಾನೆ. ಸದ್ಯ ಬಾಲಕನಿಗಾಗಿ ಅಗ್ನಿಶಾಮಕ ಸಿಬ್ಬಂದಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಗುಜರಾತಿನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು ಪೈಲಟ್ ಸೇರಿದಂತೆ ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದರು. ಇದೀಗ ಈ ಒಂದು ಘಟನೆ ಮಾಸುವ ಮುನ್ನವೇ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದಲ್ಲಿ ಮತ್ತೊಂದು ಬಾರಿ ಅನಾಹುತ ಒಂದು ತಪ್ಪಿದೆ. ಇಂಧನ ಖಾಲಿಯಾದ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೌದು ಇಂಧನ ಖಾಲಿಯಾದ ಹಿನ್ನೆಲೆಯಲ್ಲಿ ವಿಮಾನ ತುರ್ತು ಭೂಸ್ಪರ್ಶವಾಗಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದಲ್ಲಿ ಜೂನ್ 19ರಂದು ನಡೆದ ಘಟನೆ ತಡವಾಗಿ ಬಳಕೆಗೆ ಬಂದಿದೆ. ಇಂಧನ ಖಾಲಿಯಾಗಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಅದೃಷ್ಟವಶಾತ್ ಭಾರಿ ಅನಾಹುತ ಒಂದು ತಪ್ಪಿದೆ. ಗುವಾಹಟಿಯಿಂದ ಇಂಡಿಗೋ ವಿಮಾನ ಚೈನ್ನೈ ಗೆ ತೆರಳುತ್ತಿತ್ತು. 180 ಪ್ರಯಾಣಿಕರನ್ನು ಹೊತ್ತು ಇಂಡಿಗೋ ವಿಮಾನ ಚೈನ್ನೈಗೆ ತೆರಳುತ್ತಿತ್ತು. ಇಂಧನ ಖಾಲಿಯಾಗಿದ್ದನ್ನು ತಿಳಿದು MAYDAYಎಂದು ಕೂಗಿ ಪೈಲಟ್ ತುರ್ತು ಭೂಸ್ಪರ್ಶ ಮಾಡಿದ್ದಾರೆ. ನಂತರ ಇಂಧನ ತುಂಬಿಸಿಕೊಂಡು…
ಮೈಸೂರು : ವ್ಯಕ್ತಿಯೊಬ್ಬರಿಗೆ ಇ ಸ್ವತ್ತು ಮಾಡಿ ಕೊಡಲು ಕಂದಾಯ ಅಧಿಕಾರಿ ಹಾಗೂ ಬಿಲ್ ಕಲೆಕ್ಟರ್ ಇಬ್ಬರು ಸೇರಿ 25,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವೇಳೆ 25,000 ಈ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹೌದು ಕಂದಾಯ ಅಧಿಕಾರಿ, ಬಿಲ್ ಕಲೆಕ್ಟರ್ ರೇಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 25,000 ಲಂಚ ಸ್ವೀಕರಿಸುವಾಗ ರೆಡ್ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೈಸೂರು ಲೋಕಾಯುಕ್ತ ಅಧಿಕಾರಿಗಳು ಈ ಒಂದು ಕಾರ್ಯಾಚರಣೆ ನಡೆಸಿದ್ದಾರೆ. ಪಾಲಿಕೆ ವಲಯ ಕಚೇರಿಯ ಬಿಲ್ ಕಲೆಕ್ಟರ್ ರಜಾಕ್ ಹಾಗೂ ಕಂದಾಯ ಅಧಿಕಾರಿ ನಂದೀಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಎಸ್ ಪಿ ಟಿಜೆ ಉದೇಶ್ ಮಾರ್ಗದರ್ಶನದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿದೆ. ಇ ಸ್ವತ್ತು ಮಾಡಿಕೊಡಲು 25,000 ಲಂಚ ಸ್ವೀಕಾರ ಮಾಡುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾರೆ. ಸದ್ಯ…
ತುಮಕೂರು : ಇತ್ತೀಚಿಗೆ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಅದರಲ್ಲೂ ಯುವಜನತೆಗೆ ಈ ಒಂದು ಹೃದಯಾಘಾತ ಎನ್ನುವುದು ಸಾಮಾನ್ಯವಾದ ಕಾಯಿಲೆ ಆಗಿಬಿಟ್ಟಿದೆ. ಇದೀಗ ಇಂದು ತುಮಕೂರಿನಲ್ಲಿ ಸಚಿವ ಕೆಎನ್ ರಾಜಣ್ಣ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ಒಂದು ಸಮಾರಂಭ ಮುಗಿಸಿ ಮನೆಗೆ ತೆರಳುವಾಗ ಮಹಿಳೆಯೋಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೌದು ಸಚಿವ ಕೆ.ಎನ್ ರಾಜಣ್ಣ ಅಭಿನಂದನಾ ಸಮಾರಂಭದ ಬಳಿಕ ಮಹಿಳೆಗೆ ಹೃದಯಘಾತವಾಗಿದ್ದು, ಹೃದಯಾಘಾತದಿಂದ ಸೀಗೇಹಳ್ಳಿ ನಿವಾಸಿ ಸುನಂದಮ್ಮ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಸೀಗೆಹಳ್ಳಿ ನಿವಾಸಿಯಾಗಿರುವ ಸುನಂದಮ್ಮ ಅವರು ಅಭಿನಂದನಾ ಸಮಾರಂಭ ಮುಗಿಸಿ ಬಸ್ ನಲ್ಲಿ ತೆರಳುವಾಗ ಈ ಒಂದು ಘಟನೆ ನಡೆದಿದೆ. ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಈ ಒಂದು ಅಭಿನಂದನಾ ಕಾರ್ಯಕ್ರಮ ನಡೆದಿತ್ತು.