Author: kannadanewsnow05

ಯಾದಗಿರಿ : ಯಾದಗಿರಿಯಲ್ಲಿ ಭೀಕರ ಮರ್ಡರ್ ನಡೆದಿದ್ದು, ಪತಿ ಜೊತೆಗಿನ ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಯಾದಗಿರಿ ತಾಲೂಕಿನ ಹೊಸಹಳ್ಳಿ ಗ್ರಾಮದ ಬಳಿ ಈ ಒಂದು ಕೊಲೆ ನಡೆದಿದೆ. ಚಾಮನಹಳ್ಳಿ ತಾಂಡಾ ನಿವಾಸಿ ಸಾಗರ ರಾಠೋಡ್ (30)ಎನ್ನುವ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ ಸಾಗರ ರಾಥೋಡ್ ಪತ್ನಿಯ ಪ್ರಿಯಕರ ರೆಡ್ಡಿ ರಾಠೋಡ್ ನಿಂದ ಈ ಒಂದು ಕೃತ್ಯ ನಡೆದಿದೆ. ಸಾಗರ್ ಪತ್ನಿಯ ಜೊತೆಗೆ ರೆಡ್ಡಿ ಅನೈತಿಕ ಸಂಬಂಧ ಹೊಂದಿದ್ದ ಇದನ್ನು ಪ್ರಶ್ನಿಸಿದಕ್ಕೆ ರೆಡ್ಡಿ ರಾಠೋಡ್ ಸಾಗರ್ನನ್ನು ಕೊಲೆ ಮಾಡಿದ್ದಾನೆ. ಸದ್ಯ ಪ್ರಕರಣದ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Read More

ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿರುವ ಹೋಟೆಲ್ ಗಳಿಗೆ 10 ಸಾವಿರ ಕಮರ್ಷಿಯಲ್ ಸಿಲಿಂಡರ್ ಗಳನ್ನು ಪೂರೈಕೆ ಮಾಡಲಾಗುತ್ತೆ ಎಂದು ವಿಧಾನ ಪರಿಷತ್ ನಲ್ಲಿ ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು. ಕಮರ್ಷಿಯಲ್ ಸಿಲಿಂಡರ್ ಗಳ ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ಸಚಿವ ಕೆಎಚ್ ಮುನಿಯಪ್ಪ ಅವರು ಇಂದು ಅ ಸಿಲಿಂಡರ್ ವಿತರಣಾ ಸಂಸ್ಥೆಗಳ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದಾರೆ. IOC, HP, GALL, ಭಾರತ್ ಪೆಟ್ರೋಲಿಯಂ ಅಧಿಕಾರಿಗಳು ಈ ಒಂದು ಸಭೆಯಲ್ಲಿ ಭಾಗಿಯಾಗಿದ್ದರು ಆಹಾರ ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ ಸಭೆ ನಡೆಸಲಾಗಿದೆ. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆಹಾರ ಸಚಿವ ಕೇಶವ್ಯಪ್ಪ ಕಮರ್ಷಿಯಲ್ ಸಿಲಿಂಡರ್ ಗೆ ರಿಜಿಸ್ಟರ್ ಮಾಡಿಸಿಕೊಳ್ಳಬೇಕು. ಗೇಲ್ ಕಂಪನಿಯಲ್ಲಿ ಒಂದು ವಾರದೊಳಗೆ ರಿಜಿಸ್ಟರ್ ಮಾಡಿಸಿಕೊಳ್ಳಬೇಕು ಕೇಂದ್ರ ನೀಡುತ್ತಿದ್ದ 9000 ಸಿಲಿಂಡರ್ ಸಂಖ್ಯೆ ಏರಿಕೆ ಮಾಡಿದ್ದು ರಾಜ್ಯಕ್ಕೆ 10,000 ಸಿಲಿಂಡರ್ ನೀಡಲಿದೆ. ವಿನಾಕಾರಣ ಗ್ಯಾಸ್ ಡಿಸ್ಟ್ರಿಬ್ಯೂಟರ್ ಗಳ ಮೇಲೆ ಯಾರು ಒತ್ತಡ ಇರಬಾರದು ಬಂದಿರುವ ಸಮಸ್ಯೆಯನ್ನು ಎಲ್ಲರೂ…

Read More

ದಾವಣಗೆರೆ : ಏಪ್ರಿಲ್ 9ರಂದು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ ಶಾಮನೂರು ನಾಮಪತ್ರ ಸಲ್ಲಿಕೆ ಮಾಡಿದರು. ದಾವಣಗೆರೆ ಮಹಾನಗರ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು ಈ ವೇಳೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸಾತ್ ನೀಡಿದರು. ಇನ್ನೂ ತಂದೆ ಮಲ್ಲಿಕಾರ್ಜುನ ಹಾಗೂ ತಾಯಿ ಪ್ರಭಾ ಮಲ್ಲಿಕಾರ್ಜುನ ಕೂಡ ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು. ದಾವಣಗೆರೆ ದಕ್ಷಿಣ ಕ್ಷೇತ್ರ ಅಭ್ಯರ್ಥಿ ಘೋಷಣೆ ಹೈಕಮಾಂಡ್ಗೆ ತಲೆ ನೋವಾಗಿ ಪರಿಣಮಿಸಿತ್ತು. ನಾವು ಸಮರ್ಥ್ ಅವರನ್ನು ಅಭ್ಯರ್ಥಿಯಾಗಿ ಮಾಡಿದ್ದೇವೆ. ನಾನು ಕೂಡ ಇವತ್ತು ನಾಮಪತ್ರ ಸಲ್ಲಿಸುವಾಗ ಭಾಗಿಯಾಗಿದ್ದೆ. ಬ್ಲಾಕ್ ಕಮಿಟಿ ಅಧ್ಯಕ್ಷ ಅಯುಬ್ ಕೂಡ ಇದ್ದರು. ನಮ್ಮದು ಎಲ್ಲರನ್ನೂ ಒಳಗೊಂಡಿರುವಂತಹ ಪಕ್ಷ. ಯಾರಾದ್ರೂ ಯಾವ ಶಾಸಕರು ಮೃತರಾಗುತ್ತಾರೋ ಅವರ ಕುಟುಂಬಕ್ಕೆ ಟಿಕೆಟ್ ನೀಡಲಾಗುತ್ತೆ.ಇದು ಕಾಂಗ್ರೆಸ್ ಪಕ್ಷದ ನೀತಿ. ಬಾಗಲಕೋಟೆಯಲ್ಲಿ ಮೇಟಿ ಅವರ ಚಿಕ್ಕ ಮಗನಿಗೆ ಟಿಕೆಟ್ ನೀಡಲಾಗಿದೆ. ದಾವಣಗೆರೆಯಲ್ಲಿ ಸಮರ್ಥ ಅವರಿಗೆ…

Read More

ದಾವಣಗೆರೆ : ಏಪ್ರಿಲ್ 9ರಂದು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ ಶಾಮನೂರು ನಾಮಪತ್ರ ಸಲ್ಲಿಕೆ ಮಾಡಿದರು. ದಾವಣಗೆರೆ ಮಹಾನಗರ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು ಈ ವೇಳೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸಾತ್ ನೀಡಿದರು. ಇನ್ನೂ ತಂದೆ ಮಲ್ಲಿಕಾರ್ಜುನ ಹಾಗೂ ತಾಯಿ ಪ್ರಭಾ ಮಲ್ಲಿಕಾರ್ಜುನ ಕೂಡ ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು. ದಾವಣಗೆರೆ ದಕ್ಷಿಣ ಕ್ಷೇತ್ರ ಅಭ್ಯರ್ಥಿ ಘೋಷಣೆ ಹೈಕಮಾಂಡ್ಗೆ ತಲೆ ನೋವಾಗಿ ಪರಿಣಮಿಸಿತ್ತು. ನಾವು ಸಮರ್ಥ್ ಅವರನ್ನು ಅಭ್ಯರ್ಥಿಯಾಗಿ ಮಾಡಿದ್ದೇವೆ. ನಾನು ಕೂಡ ಇವತ್ತು ನಾಮಪತ್ರ ಸಲ್ಲಿಸುವಾಗ ಭಾಗಿಯಾಗಿದ್ದೆ. ಬ್ಲಾಕ್ ಕಮಿಟಿ ಅಧ್ಯಕ್ಷ ಅಯುಬ್ ಕೂಡ ಇದ್ದರು. ನಮ್ಮದು ಎಲ್ಲರನ್ನೂ ಒಳಗೊಂಡಿರುವಂತಹ ಪಕ್ಷ. ಯಾರಾದ್ರೂ ಯಾವ ಶಾಸಕರು ಮೃತರಾಗುತ್ತಾರೋ ಅವರ ಕುಟುಂಬಕ್ಕೆ ಟಿಕೆಟ್ ನೀಡಲಾಗುತ್ತೆ.ಇದು ಕಾಂಗ್ರೆಸ್ ಪಕ್ಷದ ನೀತಿ. ಬಾಗಲಕೋಟೆಯಲ್ಲಿ ಮೇಟಿ ಅವರ ಚಿಕ್ಕಮಗನಿಗೆ ಟಿಕೆಟ್ ನೀಡಲಾಗಿದೆ ದಾವಣಗೆರೆಯಲ್ಲಿ ಸಮರ್ಥ ಅವರಿಗೆ ಟಿಕೆಟ್…

Read More

ನವದೆಹಲಿ : ರಣವೀರ್ ಸಿಂಗ್ ನಟನೆಯ ‘ಧುರಂದರ್ 2′ ಸಿನಿಮಾ ಸೂಪರ್ ಹಿಟ್ ಆಗಿದೆ. ಹಿಂದೆ ಯಾವ ಸಿನಿಮಾಗಳೂ ಮಾಡದಷ್ಟು ಅಬ್ಬರದಲ್ಲಿ ಸಿನಿಮಾ ರಿಲೀಸ್ ಆಗಿದೆ. ಹಲವು ದಾಖಲೆಗಳನ್ನು ಸಿನಿಮಾ ಉಡೀಸ್ ಮಾಡಿದೆ. ನಾಲ್ಕು ದಿನಕ್ಕೆ 761 ಕೋಟಿ ರೂಪಾಯಿ ಸಂಗ್ರಹಿಸಿದೆ. ಹೌದು ಧುರಂದರ-2 ಸಿನಿಮಾ ಭರ್ಜರಿ 761 ಕೋಟಿ ರೂಪಾಯಿ ದಾಖಲೆಯ ಕಲೆಕ್ಷನ್ ಮಾಡಿದೆ ನಾಲ್ಕು ದಿನದಲ್ಲಿ 761 ಸಂಗ್ರಹಿಸಿದೆ. ಬಾಹುಬಲಿ ಮತ್ತು RRR ಚಿತ್ರಗಳ ದಾಖಲೆಗಳನ್ನು ದುರಂದರ-2ಸಿನಿಮಾ ಮುರಿದಿದೆ. ಧುರಂಧರ್ 2’ ಚಿತ್ರ ಮಾರ್ಚ್ 19ರಂದು ರಿಲೀಸ್ ಆಯಿತು. ಈ ಸಿನಿಮಾ ಎದುರು ‘ಟಾಕ್ಸಿಕ್’ ತೆರೆಗೆ ಬರಬೇಕಿತ್ತು. ಆದರೆ, ಚಿತ್ರತಂಡ ತನ್ನ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕಿಕೊಂಡಿತು. ಇದು ‘ಧುರಂಧರ್ 2’ ಮತ್ತಷ್ಟು ಅಬ್ಬರಿಸಲು ಸಹಕಾರಿ ಆಗಿದೆ. ಈ ಚಿತ್ರದ ಪ್ರೀಮಿಯರ್ ಶೋಗೆ 11 ಸಾವಿರ ಶೋ ಸಿಕ್ಕಿತ್ತು. ಆ ಬಳಿಕ ಪ್ರತಿ ದಿನ ಸರಾಸರಿ 20 ಸಾವಿರ ಶೋಗಳು ಸಿಗುತ್ತಿವೆ. ಪ್ರೀಮಿಯರ್ ಶೋ ದಿನವನ್ನು ಲೆಕ್ಕಕ್ಕೆ ಹಿಡಿದರೆ…

Read More

ಕೊಪ್ಪಳ : ಜಿಲ್ಲೆಯ ಹಿರಿಯ ರಾಜಕೀಯ ಮುತ್ಸದ್ದಿ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಕರಿಯಣ್ಣ. ಹೆಚ್ . ಸಂಗಟಿ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಸಂಗಟಿ ಕರಿಯಣ್ಣ ಅವರು ತಮ್ಮ ಜನಮುಖಿ ಕೆಲಸಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜನಪ್ರಿಯ ರಾಗಿದ್ದರು. ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ, ಕಾಳಿದಾಸ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ,ರಾಜೀವ್ ಗಾಂಧಿ ಯುವ ಮಂಡಲದ ಅಧ್ಯಕ್ಷರಾಗಿ ಹಾಗೂ ಜಿಲ್ಲೆಯ ವಿವಿಧ ಹುದ್ದೆಗಳಲ್ಲಿ ಅವರು ಅತ್ಯಂತ ಕ್ಷಮತೆಯಿಂದ ಕಾರ್ಯನಿರ್ವಹಿಸಿದ್ದರು. ವಿಧಾನ ಪರಿಷತ್ತಿನ ಸದಸ್ಯರಾಗಿ ಒಳ್ಳೆಯ ಸಂಸದೀಯ ಪಟುವಾಗಿ ಗುರುತಿಸಿಕೊಂಡಿದ್ದರು. ಅವರ ನಿಧನ ನೋವನ್ನುಂಟು ಮಾಡಿದೆ. ಅವರ ಕುಟುಂಬಕ್ಕೆ ಹಾಗೂ ಅವರ ಅನುಯಾಯಿಗಳಿಗೆ ಈ ದುಃಖ ಭರಿಸುವ ಶಕ್ತಿ ಭಗವಂತ ಕೊಡಲಿ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು ಮಾರ್ಚ್ 23:- ಮಹಿಳೆಯರ ಮೇಲೆ ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಡುಬಿದರೆ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಹಾಗೂ ಸಂತ್ರಸ್ತೆಯ ಭೇಟಿ ಮಾಡಿದ್ದಾರೆ. ಪ್ರಕರಣಕ್ಕೆ‌ ಸಂಬಂಧಿಸಿದಂತೆ ಅನೇಕ ವಿಚಾರಗಳ ಬಗ್ಗೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಡಿಜಿಪಿ ಅವರಿಗೆ ಸೂಚಿಸಿದ್ದೇನೆ ಎಂದರು. ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ಮೇಲೆ ಆರೋಪ ಬಂದ ಬಳಿಕ ಅಮಾನತು ಮಾಡುವ ಮೂಲಕ ತಕ್ಷಣದ ಕ್ರಮ‌ಕೈಗೊಳ್ಳಲಾಗಿದೆ. ವರದಿ ನೀಡುವಂತೆ ಸೂಚಿಸಲಾಗಿದ್ದು, ಕೊಡುತ್ತಾರೆ. ಇನ್ನೂ ಅನೇಕ ವಿಚಾರಗಳನ್ನು ಕೇಳಿದ ಮೇಲೆ ಹೆಚ್ಚಿನ ತನಿಖೆ ಮಾಡಬೇಕೆಂದು ಸಿಐಡಿ ತನಿಖೆಗೆ ವಹಿಸಲಾಗಿದೆ. ತನಿಖೆ ಬಳಿಕ ಸತ್ಯಾಂಶ ಹೊರಬರುತ್ತದೆ. ಇನ್ನು ಎಷ್ಟು ಜನ ಸಂತ್ರಸ್ತರಿದ್ದಾರೆ ಎಂಬುದು ತನಿಖೆ ವೇಳೆ ಗೊತ್ತಾಗಲಿದೆ.‌…

Read More

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಅಪ್ರಾಪ್ತೆಯ ಕತ್ತು ಸೀಳಿ ಹತ್ಯೆಗೈದು ಪರಾರಿಯಾಗಿದ್ದ ಆರೋಪಿಯನ್ನು ಇಲ್ಲಿನ ಡಿ.ಜೆ.ಹಳ್ಳಿ ಠಾಣೆ ಪೊಲೀಸರು ರಾಜಸ್ಥಾನದ ಅಜ್ಮೀರ್​ನಲ್ಲಿ ಬಂಧಿಸಿದ್ದಾರೆ. ಆರೋಪಿ ಶಬೀಲ್‌ (20) ಎಂಬಾತನನ್ನು ಬಂಧಿಸಿ ಬೆಂಗಳೂರಿಗೆ ಕರೆತರಲಾಗುತ್ತಿದೆ. ಮಾರ್ಚ್ 17ರಂದು ಡಿ.ಜೆ.ಹಳ್ಳಿ ವ್ಯಾಪ್ತಿಯ ಸಕ್ಕರೆ ಮಂಡಿ ಸಮೀಪದ ಪಾಳು ಬಿದ್ದ ಮನೆಯಲ್ಲಿ ಅಪ್ರಾಪ್ತೆಯ (17 ವರ್ಷಕ್ಕಿಂತ ಮೇಲ್ಪಟ್ಟ) ಮೃತದೇಹ ಪತ್ತೆಯಾಗಿತ್ತು. ಕೊಲೆಯಾದ ಅಪ್ರಾಪ್ತೆ ಮತ್ತು ಶಬೀಲ್‌ಗೆ ಮದುವೆ ನಿಶ್ಚಿತಾರ್ಥವಾಗಿತ್ತು. ಬಕ್ರೀದ್ ಹಬ್ಬದ ನಂತರ ಇಬ್ಬರಿಗೂ ಮದುವೆ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದರು. ಇಬ್ಬರೂ ಸಹ ಸಕ್ಕರೆ ಮಂಡಿಯಲ್ಲಿರುವ ಶಬೀಲ್‌ನ ಸಂಬಂಧಿಕರ ಒಡೆತನದ ಪಾಳು ಬಿದ್ದ ಕಟ್ಟಡದ ಬಳಿ ಆಗಾಗ್ಗೆ ಭೇಟಿಯಾಗುತ್ತಿದ್ದರು. ನಿಶ್ಚಿತಾರ್ಥದ ಬಳಿಕ ಸಣ್ಣ, ಸಣ್ಣ ವಿಷಯಗಳಿಗೂ ಅನುಮಾನಿಸುತ್ತಿದ್ದ ಶಬೀಲ್, ಅಪ್ರಾಪ್ತೆಯ ಜೊತೆ ಜಗಳವಾಡಲಾರಂಭಿಸಿದ್ದ. ಅದೇ ಕಾರಣದಿಂದ ಬರ್ಬರ ಕೃತ್ಯ ಎಸಗಿ ಪರಾರಿಯಾಗಿದ್ದ ಎಂಬ ಮಾಹಿತಿ ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ. ಕೃತ್ಯದ ಬಳಿಕ ಬಂಧನ ಭೀತಿಯಿಂದ ಕುಟುಂಬ ತೊರೆದಿದ್ದ ಆರೋಪಿ, ಯಾರ ಸಂಪರ್ಕಕ್ಕೂ ಸಿಗದೆ…

Read More

ಬೆಂಗಳೂರು : ರಾಜ್ಯದಲ್ಲಿ ಒಂದೇ ದಿನ 2 ಡಿಜಿಟಲ್ ಅರೆಸ್ಟ್ ಕೇಸ್ ಗಳು ಬೆಳಕಿಗೆ ಬಂದಿವೆ. ಸೈಬರ್ ವಂಚಕರು 94 ವರ್ಷದ ವೃದ್ಧನಿಗೆ ಡಿಜಿಟಲ್ ಅರೆಸ್ಟ್ ಮಾಡಿ 5 ಕೋಟಿ ರೂಪಾಯಿ ವಂಚನೆ ಎಸಗಿದ್ದಾರೆ. ನಿವೃತ್ತ ಸಂಶೋಧಕನಿಗೆ ಸೈಬರ್ ವಂಚಕರು ಭಾರಿ ವಂಚನೆ ಎಸಗಿದ್ದಾರೆ. ಲ್ಯಾಂಡ್ ಲೈನ್ ಗೆ ಕರೆ ಮಾಡಿ ಡಿಜಿಟಲ್ ಅರೆಸ್ಟ್ ಮೂಲಕ 5 ಕೋಟಿ ರೂಪಾಯಿ ವಂಚನೆ ಎಸಗಿದ್ದಾರೆ. ಮೊದಲು ಟೆಲಿಕಾಂ ಆಫೀಸ್ ನಿಂದ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದ ಬಳ್ಳಾರಿಯಲ್ಲಿ ಮಾನವ ಕಳ್ಳ ಸಾಗಾಣಿಕೆ ಕೆಎಸ್ ದಾಖಲಾಗಿದೆ. ಇನ್ಸ್ಪೆಕ್ಟರ್ ಕರೆ ಮಾಡುತ್ತಾರೆ ಎಂದು ಕಾಲ್ ಕಟ್ ಮಾಡಿದ್ದ. ಬಳಿಕ ಸಂದೀಪ್ ರಾವ್ ಹೆಸರಿನಲ್ಲಿ ವೃದ್ಧನಿಗೆ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದಾನೆ. ಸಿಬಿಐ ಅಧಿಕಾರಿ ಎಂದು ಆಧಾರ್ ಕಾರ್ಡ್ ವಾಟ್ಸಪ್ಪ್ ಮಾಡಿಸಿಕೊಂಡಿದ್ದ. ವೃದ್ಧರ ಮೊಬೈಲ್ ನಂಬರ್ ಗೆ ನಕಲಿ ಎಫ್ಐಆರ್ ಕಳುಹಿಸಿದ್ದ ಆರೋಪಿ ನಂತರ ಸಿ ಬಿ ಐ ಪೊಲೀಸರ ರೀತಿ ಡ್ರೆಸ್ ಹಾಕಿ ವಿಡಿಯೋ ಕಾಲ್…

Read More

ಬೆಂಗಳೂರು : ಕಮರ್ಷಿಯಲ್ ಸಿಲಿಂಡರ್ ಗಳ ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ಸಚಿವ ಕೆಎಚ್ ಮುನಿಯಪ್ಪ ಅವರು ಇಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು ಸಿಲಿಂಡರ್ ವಿತರಣಾ ಸಂಸ್ಥೆಗಳ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದಾರೆ. IOC, HP, GALL, ಭಾರತ್ ಪೆಟ್ರೋಲಿಯಂ ಅಧಿಕಾರಿಗಳು ಈ ಒಂದು ಸಭೆಯಲ್ಲಿ ಭಾಗಿಯಾಗಿದ್ದರು ಆಹಾರ ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ ಸಭೆ ನಡೆಸಲಾಗಿದೆ. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆಹಾರ ಸಚಿವ ಕೇಶವ್ಯಪ್ಪ ಕಮರ್ಷಿಯಲ್ ಸಿಲಿಂಡರ್ ಗೆ ರಿಜಿಸ್ಟರ್ ಮಾಡಿಸಿಕೊಳ್ಳಬೇಕು. ಗೇಲ್ ಕಂಪನಿಯಲ್ಲಿ ಒಂದು ವಾರದೊಳಗೆ ರಿಜಿಸ್ಟರ್ ಮಾಡಿಸಿಕೊಳ್ಳಬೇಕು ಕೇಂದ್ರ ನೀಡುತ್ತಿದ್ದ 9000 ಸಿಲಿಂಡರ್ ಸಂಖ್ಯೆ ಏರಿಕೆ ಮಾಡಿದ್ದು ರಾಜ್ಯಕ್ಕೆ 10,000 ಸಿಲಿಂಡರ್ ನೀಡಲಿದೆ. ವಿನಾಕಾರಣ ಗ್ಯಾಸ್ ಡಿಸ್ಟ್ರಿಬ್ಯೂಟರ್ ಗಳ ಮೇಲೆ ಯಾರು ಒತ್ತಡ ಇರಬಾರದು ಬಂದಿರುವ ಸಮಸ್ಯೆಯನ್ನು ಎಲ್ಲರೂ ಜೊತೆಗೂಡಿ ಸಹಕರಿಸಿದರೆ ಬಗೆಹರಿಯುತ್ತದೆ ಎಂದು ಸಚಿವ ಕೆಎಚ್ ಮುನಿಯಪ್ಪ ಮನವಿ ಮಾಡಿದರು. ಸಿಎಂ ಸಿದ್ದರಾಮಯ್ಯ ಸಿಲಿಂಡರ ಭಾವದ ಕುರಿತು ಕೇಂದ್ರಕ್ಕೆ ಎರಡನೇ ಪತ್ರ ಬರೆದ ಬಳಿಕ…

Read More