Author: kannadanewsnow05

ಮೈಸೂರು : ಸದ್ಯ ರಾಜ್ಯದಲ್ಲಿ ರೈತರ ಜಮೀನಿನ ಪಹಣಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವ ವಿಚಾರವಾಗಿ ಇತ್ತೀಚಿಗೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ವಿರಕ್ತ ಮಠ ಕೂಡ ವಕ್ಫ್ ಆಸ್ತಿಗೆ ಸಿಗದೆ ಎಂದು ಹೇಳಲಾಗುತ್ತಿತ್ತು. ಇದೀಗ ಮೈಸೂರು ಜಿಲ್ಲೆಯ ಶ್ರೀರಂಗಪಟ್ಟಣದ ಶ್ರೀಚಿಕ್ಕಮ್ಮ ಚಿಕ್ಕದೇವಿ ದೇಗುಲವಿರುವ ಜಾಗ ಕೂಡ ವಕ್ಫ್ ಆಸ್ತಿಗೆ ಸೇರಿದ್ದು ಎಂದು ನಮೂದಾಗಿದೆ. ಹೌದು ಶ್ರೀರಂಗಪಟ್ಟಣ ತಾಲೂಕು ಮಹದೇವಪುರ ಗ್ರಾಮದಲ್ಲಿರುವ ದೇಗುಲವಿರುವ ೬ ಗುಂಟೆ ಜಮೀನು ವಕ್ಫ್ ಆಸ್ತಿ ಎಂದು ನಮೂದಾಗಿದೆ.ಮಹದೇವಪುರ ಗ್ರಾಮದ ಶ್ರೀಚಿಕ್ಕಮ್ಮ ಚಿಕ್ಕದೇವಿ ದೇಗುಲದ ೬ ಗುಂಟೆ ಜಾಗ ಇದೀಗ ಬಂಜರು ವಕ್ಫ್ ಆಸ್ತಿ ಎಂದು ಆರ್‌ಟಿಸಿಯಲ್ಲಿ ನಮೂದಾಗಿದೆ. ಗ್ರಾಮಸ್ಥರ ಮನೆ ದೇವರು ಹಾಗೂ ದೇಗುಲದ ಮೇಲೂ ವಕ್ಫ್ ಬೋರ್ಡ್ ಕಣ್ಣು ಹಾಕಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಕಲ್ಲು ತೂರಾಟ ಇನ್ನು ಇದೆ ವಕ್ಫ್ ವಿಚಾರವಾಗಿ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ಕೆಲವರು ನಮ್ಮ ಜಾಗ ವಕ್ಫ್ ಆಸ್ತಿಗೆ ಸೇರಿದೆ ಎಂದು…

Read More

ಬೆಂಗಳೂರು : ಯುವಕನ ಮೇಲೆ ದುಷ್ಕರ್ಮಿಗಳು ಲಾಂಗು ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿದ್ದು, ಯುಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ ಬೆಂಗಳೂರಿನ ಬ್ಯಾಡರಹಳ್ಳಿಯ ಮುನೇಶ್ವರ ನಗರದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಬೆಂಗಳೂರಿನಲ್ಲಿ ಅರುಣ್ ಎನ್ನುವ ಯುವಕನ ಮೇಲೆ ಮನಸ್ಸು ಇಚ್ಛೆ ಹಲ್ಲೆ ನಡೆಸಿದ್ದಾರೆ. ಲಾಂಗು ಮಚ್ಚುಗಳಿಂದ ನಡು ರಸ್ತೆಯಲ್ಲಿ ಡೆಡ್ಲಿ ಅಟ್ಯಾಕ್ ಮಾಡಲಾಗಿದೆ. ಬ್ಯಾಡರಹಳ್ಳಿಯ ಮುನೇಶ್ವರ ನಗರದಲ್ಲಿ ನಿನ್ನೆ ರಾತ್ರಿ ಒಂದು ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.ಮಾಹಿತಿ ಸಿಗುತ್ತಿದ್ದಂತೆ ಘಟನೆಕ್ಕೆ ಹೊಯ್ಸಳ ಪೊಲೀಸರು ಆಗಮಿಸಿದ್ದಾರೆ. ನಿನ್ನೆ ಸಂಜೆ ಹೆಗ್ಗನಹಳ್ಳಿ ಕಡೆಗೆ ಅರುಣ್ ಹೋಗಿದ್ದ. ಅಲ್ಲಿ ಕೆಲ ಯುವಕರ ಜೊತೆಗೆ ಗಲಾಟೆ ಮಾಡಿಕೊಂಡಿದ್ದ ಎನ್ನಲಾಗಿದೆ. ಬಳಿಕ ಕೆಲವರು ಫಾಲೋ ಮಾಡಿಕೊಂಡು ಬಂದು ಅರುಣ್ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ನಡೆಸಿದ ಬಳಿಕ ಎಸ್ಕೇಪ್ ಆಗಿದ್ದಾರೆ, ಇದೀಗ ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಹಲ್ಲೆ ನಡೆದ ವೇಳೆ ನಡು ರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ಬಿದ್ದು ಯುವಕ ಅರುಣ್…

Read More

ಬೆಂಗಳೂರು : ನಾನು ಗ್ಯಾರಂಟಿ ಕೊಡುವುದನ್ನು ವಿರೋಧಿಸುತ್ತಿಲ್ಲ. ಗ್ಯಾರಂಟಿ ಕೊಡಿ, ಆದರೆ ಗ್ಯಾರಂಟಿ ಹೆಸರಲ್ಲಿ ಆರ್ಥಿಕ ಪರಿಸ್ಥಿತಿ ಹಾಳು ಮಾಡಬೇಡಿ. ಮುಂದಿನ ಅಧಿಕಾರ ನಡೆಸುವ ಪೀಳಿಗೆ ಭವಿಷ್ಯ ಹಾಳು ಮಾಡಬೇಡಿ ಎಂದು ಕೇಂದ್ರ ಸಚಿವ HD ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದರು. ತೆರಿಗೆಯವರಿಗೆ 10 ಸಾವಿರ ಕೋಟಿ ಹೆಚ್ಚಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ. ಇದು ಯಾವ ಪುರುಷಾರ್ಥಕ್ಕೆ? ಗ್ಯಾರಂಟಿ ಹೆಸರು ಹೇಳಿಕೊಂಡು ಜನರಿಗೆ ಹೊರೆ ಮಾಡಿ, ಜನರ ಹಣ ಕಿತ್ತು ಕಾರ್ಯಕ್ರಮ ಮುಂದುವರಿಸುವುದರಲ್ಲಿ ಅರ್ಥ ಇಲ್ಲ. ಇದರಿಂದ ಕ್ಯಾಪಿಟಲ್ ಅಸೆಟ್ ಆಗುತ್ತಿಲ್ಲ, ಕೇವಲ ಖರ್ಚಾಗುತ್ತಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಅನ್ನ ಭಾಗ್ಯ ಯೋಜನೆಗೂ ಷರತ್ತು, ಮಾರ್ಗಸೂಚಿ ಅಳವಡಿಸಿದ್ದಾರೆ. ಅಕ್ಕಿ ಕೊಡುವುದನ್ನು ಕಡಿತಗೊಳಿಸಿದ್ದಾರೆ. ಇದು ಮುಂದೆ ಯಾವ ಹಂತಕ್ಕೆ ಹೋಗುತ್ತದೆ ಎಂದು ಕಾದು ನೋಡಿ. ನಮಗೆ ಗ್ಯಾರಂಟಿ ಬಗ್ಗೆ ಯಾವುದೇ ಹೊಟ್ಟೆ ಉರಿ ಇಲ್ಲ. ಗ್ಯಾರಂಟಿ ಬೇಕಾದರೆ ಡಬಲ್ ಮಾಡಿಕೊಳ್ಳಿ, ಆದರೆ ರಾಜ್ಯವನ್ನು ದೀವಾಳಿ ಮಾಡಬೇಡಿ…

Read More

ಬೆಂಗಳೂರು : ಇಂದು ನಾಡಿನಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಮಧ್ಯ ಬೆಂಗಳೂರಿನಲ್ಲಿ ಪಟಾಕಿ ಖರೀದಿ ಬಲು ಜೋರಾಗಿದ್ದು, ಆದರೆ ಗ್ರೀನ್ ಪಟಾಕಿಯ ಬೆಲೆ ಏರಿಕೆಗೆ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು ಬೆಂಗಳೂರಿನ ಚಾಮರಾಜಪೇಟೆ ಸೇರಿ ಹಲವೆಡೆ ಮೈದಾನಗಳಲ್ಲಿ ಪಟಾಕಿ ಸ್ಟಾಲ್​ಗಳಲ್ಲಿ ಭರ್ಜರಿ ವ್ಯಾಪಾರವಾಗುತ್ತಿದೆ. ಬಗೆ ಬಗೆಯ ಗ್ರೀನ್ ಪಟಾಕಿಗಳು ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಹೊಸೂರಿನಿಂದ ಬಂದಿರುವ ಪಟ್ ಪಟ್ ಪಟಾಕಿಗಳು ಗ್ರಾಹಕರ ಗಮನಸೆಳೆಯುತ್ತಿವೆ. ಗ್ರೀನ್ ಪಟಾಕಿಗೆ ಮಾತ್ರ ಮಾರಾಟಕ್ಕೆ ಅವಕಾಶ ಇರುವುದರಿಂದ ಜೋರಾಗಿ ಸದ್ದುಮಾಡುವ ದೊಡ್ಡ ದೊಡ್ಡ ಪಟಾಕಿಗಳಿಗೆ ಹುಡುಕಾಡುವ ಜನರಿಗೆ ಸ್ವಲ್ಪ ಬೇಸರವಾಗಿದೆ. ಅತ್ತ ಪಟಾಕಿಗಳ ಬೆಲೆ ಏರಿಕೆಯಾಗಿರುವುದು ಕೂಡ ಗ್ರಾಹಕರನ್ನು ನಿರಾಸೆಗೊಳಿಸಿದೆ. ಇದೆ ವೇಳೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ ಆದೇಶದಂತೆ ರಾತ್ರಿ 8 ರಿಂದ 10ರ ವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಅವಕಾಶ ಕಲ್ಪಿಸಲಾಗಿದ್ದು, ಈ ಸಂಬಂಧ ಬೆಂಗಳೂರು ಪೊಲೀಸ್‌ ಇಲಾಖೆಯು ಪಟಾಕಿ ಸಿಡಿಸುವ ಕುರಿತಾಗಿ ಮಾರ್ಗಸೂಚಿ ಪ್ರಕಟಿಸಿದೆ.…

Read More

ಬೆಂಗಳೂರು : ಕಳೆದ ವರ್ಷ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಿ ಅಧಿಕಾರಕ್ಕೆ ಬಂದಿತ್ತು. ಇದೀಗ ಇದೇ ಒಂದು ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ಹಣಕಾಸು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರದ ಬೊಕ್ಕಸಕ್ಕೆ ಆದಾಯ ಸಂಗ್ರಹದಲ್ಲಿ 12,000 ಕೋಟಿ ಕೊರತೆ ಇದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ರಾಜಸ್ವ ಹೆಚ್ಚಿಸಲು ಕ್ರಮ ಕೈಗೊಳ್ಳಿ ಮತ್ತು ವೇಗ ನೀಡಿ ಎಂದು ಹಣಕಾಸು ಇಲಾಖೆಯೊಂದಿಗೆ ಇತ್ತೀಚೆಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಸರ್ಕಾರಿ ಹಿರಿಯ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, 2024-25ರ ಆರ್ಥಿಕ ವರ್ಷದ ಮೂರನೇ ತ್ರೈಮಾಸಿಕದ ಆರಂಭದಲ್ಲಿ 12,000 ಕೋಟಿ ರೂಪಾಯಿ ಕಡಿಮೆ ಹಣ ಸಂಗ್ರಹವಾಗಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಪ್ರಯೋಜನಗಳನ್ನು ಪಡೆಯಲು ಅವಿಭಜಿತ ಕುಟುಂಬಗಳು ವಿಭಜನೆಯಾಗುತ್ತಿವೆ. ವಿಭಜನೆಯಾದ ಕುಟುಂಬದ ಮಹಿಳೆಯರು ನಮ್ಮದು ಪ್ರತ್ಯೇಕ ಕುಟುಂಬ ಅಂತ ಹೇಳಿ ಎರಡು ಸಾವಿರ ರೂ. ಪಡೆಯುತ್ತಿದ್ದಾರೆ. ಇದು ಹೀಗೆ ಮುಂದುವರೆದರೆ ಸರ್ಕಾರದ ಬೊಕ್ಕಸಕ್ಕೆ ಹೊಡೆತ ಬೀಳಲಿದೆ. ಹೀಗಾಗಿ ಸರ್ಕಾರವು ಗ್ಯಾರಂಟಿ ಯೋಜನೆ…

Read More

ರಾಮನಗರ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗಿಫ್ಟ್ ಕೂಪನ್‌ಗಳನ್ನು ಹಂಚಿ ವ್ಯಾಪಕ ಅಕ್ರಮ ನಡೆಸಿತ್ತು. ಇದೀಗ ಉಪಚುನಾವಣೆಯಲ್ಲಿಯೂ ಕೂಡ ಅದೇ ರೀತಿಯ ಅಕ್ರಮ ನಡೆಸಲು ಹೊರಟಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಚನ್ನಪಟ್ಟಣದಲ್ಲಿ ಚುನಾವಣೆ ಪ್ರಚಾರದಲ್ಲಿ ಮಾತನಾಡಿದ ಅವರು,, ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ, ಮಾಗಡಿ ಸೇರಿದಂತೆ ರಾಜ್ಯದ ಹಲವಾರು ವಿಧಾನಸಭೆ ಕ್ಷೇತ್ರಗಳಲ್ಲಿ 3 ಸಾವಿರ ರೂ. 5 ಸಾವಿರ ರೂ. ಮೌಲ್ಯದ ಗಿಫ್ಟ್ ಕೂಪನ್ ಹಂಚಲಾಯಿತು. ಚುನಾವಣೆ ಮುಗಿದ ಮೇಲೆ ಆ ಕೂಪನ್‌ಗಳನ್ನು ಬೆಂಗಳೂರಿನ ಲುಲು ಮಾಲ್‌ಗೆ ಹೋಗಿ ಕೊಡಿ, ಅಲ್ಲಿಗೆ ಹೋಗಿ ನಿಮಗೆ ಬೇಕಾದ ವಸ್ತುವನ್ನು ಖರೀದಿ ಮಾಡಿ ಎಂದು ಆಮಿಷ ಒಡ್ಡಿದ್ದರು. ಇದನ್ನು ನಂಬಿ ಕೂಪನ್ ಹಿಡಿದುಕೊಂಡು ಲುಲು ಮಾಲ್‌ಗೆ ಹೋದರೆ ಅಲ್ಲಿ ಕೂಪನ್ ಇಲ್ಲ, ವಸ್ತುಗಳೂ ಇಲ್ಲ.ಕಾಂಗ್ರೆಸ್ ಪಕ್ಷವು ವಾಮಮಾರ್ಗದಲ್ಲಿ ಚುನಾವಣೆಗಳನ್ನು ಗೆಲ್ಲುವ ಚಾಳಿ ಮಾಡಿಕೊಂಡಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿಯೂ ಕೂಪನ್ ಷಡ್ಯಂತ್ರ ಮಾಡಲು ಕಾಂಗ್ರೆಸ್ ಹೊರಟಿದೆ. ಇಂಥ ವಂಚನೆಯ ಕುತಂತ್ರಕ್ಕೆ,…

Read More

ಬೆಂಗಳೂರು : ಅತಿಯಾದ ಟ್ರಾಫಿಕ್, ಜನದಟ್ಟಣೆ, ವಾಹನಗಳ ಸೌಂಡ್ ಹಾರ್ನ್ ಇದೆಲ್ಲವೂ ಬೆಂಗಳೂರಿನ ಜನತೆಗೆ ನಿತ್ಯ ದರ್ಶನವಾಗಿದೆ. ಇದಲ್ಲದರ ಮಧ್ಯ ಕೂಡ ಕಾರು ಚಾಲಕನೊಬ್ಬ ಸಿಗ್ನಲ್ ಬಳಿ ನಿದ್ರೆಗೆ ಜಾರಿರುವ ಘಟನೆ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಹಾಗೂ ಸಿಲ್ಕ್ ಬೋರ್ಡ್ ರಸ್ತೆಯಲ್ಲಿ ನಡೆದಿದೆ. ಹೌದು ಸಂಚಾರ ದಟ್ಟಣೆ ಹಾಗೂ ವಾಹನಗಳ ಜೋರು ಹಾರ್ನ್ ಶಬ್ದದ ನಡುವೆಯೂ ನಡು ರಸ್ತೆಯಲ್ಲಿ ಚಾಲಕನೊಬ್ಬ ಕಾರಿನಲ್ಲಿ ಯೇ ನಿದ್ದೆಗೆ ಜಾರಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಕುಟುಂಬದ ಸದಸ್ಯರ ಜತೆಗೆ ಪ್ರವಾಸಕ್ಕೆ ತೆರಳಿ ಸುಸ್ತಾಗಿದ್ದ ಕಾರು ಚಾಲಕ, ಸಂಚಾರ ದಟ್ಟಣೆ ಹಿನ್ನೆಲೆಯಲ್ಲಿ ಕಾರನ್ನು ರಸ್ತೆಯಲ್ಲಿ ನಿಲ್ಲಿಸಿದ್ದಾರೆ. ಈ ವೇಳೆ ಕಣ್ಣು ಮುಚ್ಚಿ ನಿದ್ದೆಗೆ ಜಾರಿದ್ದಾರೆ. ಈ ನಡುವೆ ದಟ್ಟಣೆ ಕಡಿಮೆ ಯಾಗಿ ವಾಹನಗಳು ಮಂದಗತಿಯಲ್ಲಿ ಮುಂದಕ್ಕೆ ಚಲಿಸಿವೆ. ಆದರೂ ಚಾಲಕ ನಿದ್ದೆಯಿಂದ ಎಚ್ಚರಗೊಂಡಿಲ್ಲ. ಹಿಂದಿನ ವಾಹನಗಳು ಜೋರಾಗಿ ಹಾರ್ನ್ ಮಾಡಿದರೂ ಚಾಲಕ ಎಚ್ಚರಗೊಂಡಿಲ್ಲ. ಬಳಿಕ ಸಾರ್ವಜನಿಕರೊಬ್ಬರು ತಮ್ಮ ಮೊಬೈಲ್‌ನಲ್ಲಿ ಚಾಲಕ ಕಾರಿನಲ್ಲಿ ನಿದ್ದೆ ಮಾಡುತ್ತಿರುವುದನ್ನು ವಿಡಿಯೋ…

Read More

ಬೆಂಗಳೂರು : ಹಣ ಡಬಲ್ ಮಾಡಿಕೊಳ್ಳುವ ಆಸೆಗೆ ಬಿದ್ದು ಅದೆಷ್ಟೋ ಜನರು ಲಕ್ಷಾಂತರ ಕೋಟ್ಯಾಂತರ ಹಣ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಇದೀಗದುಪ್ಪಟ್ಟು ಆದಾಯಗಳಿಸುವ ಆಮಿಷವೊಡ್ಡಿ ಆನ್ ಲೈನ್‌ ಟ್ರೇಡಿಂಗ್‌ನಲ್ಲಿ ಖಾಸಗಿ ಕಂಪನಿಯ ಲೆಕ್ಕಧಿಕಾರಿಯೊಬ್ಬರಿಂದ ಸೈಬರ್‌ವಂಚಕರು ಬರೋಬ್ಬರಿ 4.5 ಕೋಟಿ ಪಡೆದು ವಂಚನೆ ಎಸಗಿರುವ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ಉತ್ತರಹಳ್ಳಿಯ ಪೂರ್ಣಪ್ರಜ್ಞಾ ಲೇಔಟ್ ನಿವಾಸಿ ಕೆ.ಎಂ.ಮಧುಕುಮಾರ್ ವಂಚನೆಗೆ ಒಳಗಾಗಿದ್ದು, ಇವರು ನೀಡಿದ ದೂರಿನ ಮೇರೆಗೆ ಅಪರಿಚಿತರ ವಿರುದ್ಧ ದಕ್ಷಿಣ ವಿಭಾಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲ ದಿನಗಳ ಹಿಂದೆ ಸಂಜೀವ್ ಸಿಂಗ್ ಎಂಬಾತ ಪರಿಚಯ ಮಾಡಿಕೊಂಡು ಮಧುಗೆ ವಂಚಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ನನ್ನ ಮೊಬೈಲ್‌ಗೆ ಸೆ.2ರಂದು ಸಂಜೀವ್ ಸಿಂಗ್ ಎಂಬಾತ ಈ ಸ್ಟಾಕ್ ಮಾರ್ಕೆಟ್ ವಿನ್ನರ್ ವಿಐಪಿ 1 ಎಂಬ ವಾಟ್ ಪ್ಸ್ ಆ್ಯಪ್ ಗ್ರೂಪ್‌ ಗೆ ಸೇರುವಂತೆ ಸಂದೇಶ ಕಳುಹಿಸಿದ್ದ. ಅದರಲ್ಲಿ ಸ್ಟಾಕ್ ಮಾರ್ಕೆಟಿಂಗ್ ಬಗ್ಗೆ ತರಬೇತಿ ಹಾಗೂ ಅದರ ಮಾಹಿತಿಯನ್ನು ನೀಡುವುದಾಗಿ ತಿಳಿಸಿದ್ದ. ಅದರಂತೆ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಹಲವು RTI ಕಾರ್ಯಕರ್ತತು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಇದರ ಬೆನ್ನಲ್ಲೆ ಬಿಬಿಎಂಪಿ ವ್ಯಾಪ್ತಿಯ ಪ್ರತಿ ವಿಧಾನಸಭಾ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ಅನುದಾನ ಹಂಚಿಕೆ ಮಾಡಿದ್ದು ಆದರೆ, ಜಯನಗರ ಬಿಟ್ಟು ಉಳಿದೆಲ್ಲ ಕ್ಷೇತ್ರಗಳಿಗೆ ಅನುದಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರಿಗೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ದೂರು ಸಲ್ಲಿಸಲಾಗಿದೆ. ಹೌದು ಬಿಜೆಪಿ ಶಾಸಕ ಪ್ರತಿನಿಧಿಸುವ ಜಯನಗರ ವಿಧಾನಸಭಾ ಕ್ಷೇತ್ರವನ್ನು ಈ ಅನುದಾನ ಹಂಚಿಕೆಯಿಂದ ಹೊರಗಿಟ್ಟಿರುವುದು ವ್ಯಾಪಕ ಟೀಕೆಗೆ ಕಾರಣವಾಗಿದೆ. ಇದೆ ವಿಚಾರ ಇಟ್ಟುಕೊಂಡು ಡಿಕೆ ಶಿವಕುಮಾರ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ವಕೀಲ ಹೆಚ್​.ಯೋಗೇಂದ್ರ ಎನ್ನುವರು ಡಿಕೆ ಶಿವಕುಮಾರ್ ವಿರುದ್ಧ ಇಂದು ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್​ ಅವರಿಗೆ ಲಿಖಿತ ದೂರು ನೀಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆ ಸಚಿವರ ವಿವೇಚನಾ ಕೋಟಾದಡಿ ಅನುದಾನ ಹಂಚಿಕೆ ಮಾಡದೇ ಪ್ರಮಾಣವಚನದ ಉದ್ದೇಶ ಉಲ್ಲಂಘಿಸಿದ್ದಾರೆ. ಉಪಮುಖ್ಯಮಂತ್ರಿ ಆಗುವ ವೇಳೆ…

Read More

ಬೆಂಗಳೂರು : ನಗರದಲ್ಲಿ ಕಾನೂನು ಬಾಹಿರ ಕಟ್ಟಡಗಳಿಗೆ ಕಡಿವಾಣ ಹಾಕಲು ಕಷ್ಟವಾಗುತ್ತಿದೆ. ಹೀಗಾಗಿ ನಿಯಮ ಬಾಹಿರ ಕಟ್ಟಡ ನಿರ್ಮಾಣ ಹಾಗೂ ಅದರಿಂದ ಆಗುವ ಅನಾಹುತ ತಡೆಗಟ್ಟಲು ಪ್ರಬಲ ಕಾನೂನು ರೂಪಿಸಲು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಕ್ ಸಿದ್ದರಾಮಯ್ಯ ಅವರು, ನಗರದಲ್ಲಿ ಅನಧಿಕೃತ ಕಟ್ಟಡಗಳ ನಿರ್ಮಾಣ ಅವ್ಯಾಹತವಾಗಿ ನಡೆಯುತ್ತಿದೆ. ಕಂದಾಯ ಬಡಾವಣೆಗಳಲ್ಲಿ ಹಾಗೂ ಬಿ ಖಾತಾ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ಪಡೆಯುತ್ತಿಲ್ಲ. ಸೆಟ್‌ ಬ್ಯಾಕ್‌ ಬಿಡದೆ ಅಕ್ರಮವಾಗಿ 6 ರಿಂದ 8 ಮಹಡಿ ಕಟ್ಟುತ್ತಿದ್ದಾರೆ. ಇಂತಹ ಅಕ್ರಮ ನಿರ್ಮಾಣದಿಂದ ಇತ್ತೀಚೆಗೆ ಕಟ್ಟಡ ನೆಲಸಮ ಆಗಿ 8 ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ಅಕ್ರಮ ನಿರ್ಮಾಣಗಳನ್ನು ನಿಯಂತ್ರಿಸಲು ಕಾನೂನು ಭದ್ರ ಮಾಡುತ್ತಿದ್ದೇವೆ ಎಂದರು. ಇನ್ನು ಬಾಬು ಸಾಬ್ ಪಾಳ್ಯ ಘಟನೆ ಕುರಿತು ಮಾತನಾಡಿದ ಅವರು, ಇಂತಹ ಘಟನೆಗಳು ಮರುಕಳಿಸದಂತೆ ಅಕ್ರಮ ಕಟ್ಟಡಗಳ ನಿರ್ಮಾಣ ನಿಯಂತ್ರಿಸಲು ಬಿಬಿಎಂಪಿ, ಬಿಎಂಆರ್‌ಡಿಎ…

Read More