Subscribe to Updates
Get the latest creative news from FooBar about art, design and business.
Author: kannadanewsnow05
ಹಾವೇರಿ : ವಕ್ಫ್ ಆಸ್ತಿ ವಿವಾದದ ಬಿಸಿ ಇದೀಗ ಹಾವೇರಿ ಜಿಲ್ಲೆಗೂ ತಟ್ಟಿದ್ದು, ಹಾವೇರಿ ಜಿಲ್ಲೆಯ ಕಡಕೋಳ ಗ್ರಾಮದಲ್ಲಿ ಮುಸ್ಲಿಂ ಮುಖಂಡರ ಮನೆಯ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ವಕ್ಫ್ ಬೋರ್ಡ್ ಹೆಸರಿನಲ್ಲಿ ಇಂದಿಕರಣಕ್ಕೆ ವಿರೋಧ ವ್ಯಕ್ತಪಡಿಸಿದ್ದು, ವಾಸವಿದ್ದ ಮನೆ ಖಾಲಿ ಮಾಡಿಸಬಹುದು ಎಂಬ ಆತಂಕಕ್ಕೆ ಒಳಗಾಗಿದ್ದ ಜನ ಮುಸ್ಲಿಂ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಹೌದು ಮುಸ್ಲಿಂ ಮುಖಂಡರ ಮನೆಯ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಮನೆಗಳ ಮೇಲೆ ಕಲ್ಲುತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 15 ಜನರನ್ನು ವಶಕ್ಕೆ ಪಡೆದುಕೊಂಡಿದ್ದೇವೆ ಎಂದು ಹಾವೇರಿ ಎಸ್ ಪಿ ಅಂಶು ಕುಮಾರ್ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಡಕೋಳ ಗ್ರಾಮದ ಕೆಲವರ ಮನೆಯ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ನಮಗೆ ಸಂಜೆ 7:30ಕ್ಕೆ ಮಾಹಿತಿ ಬಂತು. ಕಡಕೋಳ ಗ್ರಾಮದಲ್ಲಿ ಗಲಾಟೆಯಲ್ಲಿ ಐವರಿಗೆ…
ಬೆಂಗಳೂರು : ರಾಜ್ಯದ ಆದಾಯ ಸಂಗ್ರಹದಲ್ಲಿ ಗಣನೀಯ ಪ್ರಗತಿ ಸಾಧಿಸಿದ್ದು, ಆರ್ಥಿಕ ವರ್ಷದ 7 ತಿಂಗಳಲ್ಲಿಯೇ ಶೇ.53ರಷ್ಟು ಗುರಿ ಮುಟ್ಟಲಾಗಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ರಾಜ್ಯ 1.95 ಲಕ್ಷ ಕೋಟಿ ರು. ಆದಾಯ ಸಂಗ್ರಹದ ಗುರಿ ಹೊಂದಿದ್ದು, ಅಕ್ಟೋಬರ್ ಅಂತ್ಯದ ವೇಳೆಗೆ 1.03 ಲಕ್ಷಕೋರು. ಆದಾಯ ಸಂಗ್ರಹಿಸುವ ಮೂಲಕ ನಿಗದಿತ ಗುರಿಯ ಶೇ. 53ರಷ್ಟು ಸಾಧಿಸಿದಂತಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಆದಾಯ ಸಂಗ್ರಹದಲ್ಲಿ ಶೇ. 11.2ರಷ್ಟು ಪ್ರಗತಿ ಸಾಧಿಸಿದೆ ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಬಜೆಟ್ ಅನುದಾನ ವೆಚ್ಚ ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಳವಾಗಿದೆ. ಅಕ್ಟೋಬರ್ ಅಂತ್ಯಕ್ಕೆ ಶೇ. 46ರಷ್ಟು ಬಜೆಟ್ ಅನುದಾನ ವೆಚ್ಚ ಮಾಡಲಾಗಿದ್ದು, ಕಳೆದ ವರ್ಷ ಈ ಅವಧಿಯಲ್ಲಿ ಶೇ. 42ರಷ್ಟು ಸಾಧನೆ ಮಾಡಲಾಗಿತ್ತು. ಜತೆಗೆ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದ್ದ 52 ಸಾವಿರಕೋಟಿ ರು.ಗಳ ಪೈಕಿ ಈವರೆಗೆ 24,235 ಕೋಟಿ ರು. ಅನುದಾನ ಬಿಡುಗಡೆ ಮಾಡಲಾಗಿದೆ.ಜತೆಗೆ 2024-25ರ ಮೊದಲ ತ್ರೈಮಾಸಿಕ…
ಬೆಂಗಳೂರು: ಬೆಂಗಳೂರಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಮನೆಯಲ್ಲಿ ಗ್ಯಾಸ್ ಸೋರಿಕೆಯಿಂದ ಉಂಟಾದ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಎಸಿ ಮೆಕ್ಯಾನಿಕ್ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮೆಕ್ಯಾನಿಕ್ ನನ್ನು ಚಾಮುಂಡಿ ನಗರದ ನಿವಾಸಿ ರಾಶಿ (24) ಎಂದು ತಿಳಿದುಬಂದಿದೆ. ಮೂರು ದಿನಗಳ ಹಿಂದೆ ಮನೆಯಲ್ಲಿ ಗ್ಯಾಸ್ ಸೋರಿಕೆಯಾಗಿ ಗಾಯಗೊಂಡಿದ್ದ ಆತ ಚಿಕಿತ್ಸೆ ಫಲಿಸದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.ಮೃತ ರಾಶಿ ಮೂಲತಃ ತಮಿಳುನಾಡಿನವನಾಗಿದ್ದು, ಹಲವು ವರ್ಷಗಳ ಹಿಂದೆಯೇ ಆತನ ಕುಟುಂಬ ನಗರಕ್ಕೆ ವಲಸೆ ಬಂದು ಚಾಮುಂಡಿ ನಗರದಲ್ಲಿ ನೆಲೆಸಿತ್ತು. ಈತ ಎಸಿ ಮೆಕ್ಯಾನಿಕ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಅ.27 ರಂದು ರಾತ್ರಿ ಕುಟುಂಬದವರೆಲ್ಲ ಊಟ ಮುಗಿಸಿ ನೆಲಮಹಡಿಯಲ್ಲಿ ಮಲಗಿದ್ದರು. ಆಗ ರಾತ್ರಿ 10 ಗಂಟೆ ಸುಮಾರಿಗೆ ಮೊದಲ ಮಹಡಿಯಲ್ಲಿದ್ದ ಅಡುಗೆ ಮನೆಗೆ ರಾಶಿ ತೆರಳಿದ್ದ.ಆ ವೇಳೆ ಅಡುಗೆ ಮನೆ ಸ್ವಿಚ್ ಹಾಕುತ್ತಿದ್ದಂತೆ ಅನಿಲ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊಂಡು ರಾಶಿ…
ಬಳ್ಳಾರಿ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಗಳಿಗಾಗಿ ಪರಿಶಿಷ್ಟ ಪಂಗಡದ ಸಮುದಾಯ ಜನಾಂಗದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಬೆಂಗಳೂರು ಓನ್, ಕರ್ನಾಟಕ ಓನ್, ಗ್ರಾಮ ಓನ್ ಸೆಂಟರ್‌ಗಳ ಮೂಲಕ (https://sevasindhuservices.karnataka.gov.in) ಗೆ ಭೇಟಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನ.23 ಕೊನೆಯ ದಿನವಾಗಿದೆ. ಯೋಜನೆಗಳು: ನೇರಸಾಲ ಯೋಜನೆ : ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಘಟಕವೆಚ್ಚ ರೂ.1 ಲಕ್ಷ ಇದರಲ್ಲಿ ರೂ.50,000 ಸಹಾಯಧನ ಮತ್ತು ರೂ.50,000 ಸಾಲ) ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ : ವ್ಯಾಪಾರ ಮತ್ತು ಇತರೆ ಸಣ್ಣ ಉದ್ಯಮಗಳಿಗಾಗಿ ಘಟಕ ವೆಚ್ಚದ ಶೇ.70 ರಷ್ಟು ಅಥವಾ ಗರಿಷ್ಟ ರೂ.2 ಲಕ್ಷ ಸಹಾಯಧನ ಮತ್ತು ಉಳಿದ ಬ್ಯಾಂಕ್ ಸಾಲ. ಸ್ವಾವಲಂಭಿ ಸಾರಥಿ : ಸರಕು ವಾಹನ/ಟ್ಯಾಕ್ಸಿ ಉದ್ದೇಶಕ್ಕಾಗಿ ಘಟಕ ವೆಚ್ಚದ ಶೇ.75 ರಷ್ಟು ಅಥವಾ ಗರಿಷ್ಟ ರೂ.4 ಲಕ್ಷ ಸಹಾಯಧನ ಮತ್ತು ಉಳಿದ…
ಬಳ್ಳಾರಿ :ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಹಿಂಗಾರು ಹಾಗೂ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಲ್ಲಿ ವಿಮೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಹಿಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ನೀರಾವರಿ ಬೆಳೆ ಜೋಳ, ನೀರಾವರಿ ಮತ್ತು ಮಳೆಯಾಶ್ರಿತ ಬೆಳೆ ಕಡಲೆ ಮತ್ತು ಬೇಸಿಗೆ ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ನೀರಾವರಿ ಬೆಳೆಗಳಾದ ನೆಲಗಡಲೆ (ಶೇಂಗಾ), ಭತ್ತ ಹಾಗೂ ಹೋಬಳಿ ಮಟ್ಟದ ಹಿಂಗಾರು ಹಂಗಾಮಿನ ನೀರಾವರಿ ಬೆಳೆ ಮುಸುಕಿನ ಜೋಳ, ನೀರಾವರಿ/ಮಳೆಯಾಶ್ರಿತ ಬೆಳೆ ಸೂರ್ಯಕಾಂತಿ, ಕುಸುಮೆ, ಈರುಳ್ಳಿ ಮತ್ತು ಬೇಸಿಗೆ ಹಂಗಾಮಿನ ನೀರಾವರಿ ಬೆಳೆಗಳಾದ ಸೂರ್ಯಕಾಂತಿ, ಈರುಳ್ಳಿ ಜಿಲ್ಲೆಯ ಬೆಳೆಗಳಾಗಿವೆ. ಬೆಳೆ ವಿಮೆಗೆ ಕೊನೆಯ ದಿನ: ಹಿಂಗಾರು ಹಂಗಾಮಿನ ಬೆಳೆಗಳಾದ ಜೋಳ, ಮುಸುಕಿನ ಜೋಳ, ಸೂರ್ಯಕಾಂತಿ, ಕುಸುಮೆ ಬೆಳೆಗಳಿಗೆ ಡಿ.16 ಆಗಿದೆ. ಅದರಂತೆ ಮಳೆಯಾಶ್ರಿತ…
ಚಿತ್ರದುರ್ಗ : ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿಗೆ 9 ಮತ್ತು 11ನೇ ತರಗತಿ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಸುವ ಅವಧಿಯನ್ನು ಆಡಳಿತಾತ್ಮ ಕಾರಣಗಳಿಂದ ನ.9 ವರೆಗೆ ವಿಸ್ತರಿಸಲಾಗಿದೆ. 9ನೇ ತರಗತಿ ಪ್ರವೇಶ ಬಯಸುವ ಅಭ್ಯರ್ಥಿಗಳು 8 ತರಗತಿಯಲ್ಲಿ ಓದುತ್ತಿದ್ದು, 2010 ಮೇ 01 ರಿಂದ 2012 ಜುಲೈ 31 ಓಳಗೆ ಜನಿಸಿರಬೇಕು. 11 ತರಗತಿ ಪ್ರವೇಶ ಬಯಸುವ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಓದುತ್ತಿದ್ದು, 2008 ಜೂನ್ 1 ರಿಂದ 2010ರ ಜುಲೈ 31ರ ನಡುವೆ ಜನಿಸಿರಬೇಕು. ಅಭ್ಯರ್ಥಿಗಳು ಜಿಲ್ಲೆಯ ಖಾಯಂ ನಿವಾಸಿಯಾಗಿರಬೇಕು. ವೆಬ್‌ಸೈಟ್ https://cbsietms.nic.in/2024/nvsix/restrationclassIX/registrationclassIX ಹಾಗೂ https://cbsietms.nic.in/2024/nvsix/restrationclassXI/registrationclassXI ನಲ್ಲಿ ಅರ್ಜಿ ಸಲ್ಲಸಬಹುದು. ಆಯ್ಕೆ ಪರೀಕ್ಷೆಯ ವಸ್ತು ವಿಷಯ, ಮಾನದಂಡಗಳಿಗೆ ನವೋದಯ ವಿದ್ಯಾಲಯ ಸಮಿತಿ ಅಧಿಸೂಚನೆಯನ್ನು ವೀಕ್ಷಿಸುವಂತೆ ಪ್ರಾಚಾರ್ಯ ಡೇನಿಯಲ್ ರತನ್‌ಕುಮಾರ್ ತಿಳಿಸಿದ್ದಾರೆ.
ಚಿತ್ರದುರ್ಗ : ಕಿಡ್ನಿ ವೈಪಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಕೇಂದ್ರ ಸರ್ಕಾರದ ಯೋಜನೆ ಅಡಿಯಲ್ಲಿ ಸಿಹಿಸುದ್ದಿಯೊಂದು ನೀಡಿದ್ದು, ಪ್ರಧಾನ ಮಂತ್ರಿ ರಾಷ್ಟ್ರೀಯ ಡಯಾಲಿಸಿಸ್ ಕಾರ್ಯಕ್ರಮದಡಿಯಲ್ಲಿ ಕಿಡ್ನಿ ವೈಪಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಉಚಿತ ಡಯಾಲಿಸ್ ಸೇವೆ ನೀಡಲಾಗುತ್ತಿದೆ. ಹೌದು ಪ್ರಧಾನ ಮಂತ್ರಿ ರಾಷ್ಟ್ರೀಯ ಡಯಾಲಿಸಿಸ್ ಕಾರ್ಯಕ್ರಮದಡಿಯಲ್ಲಿ ನೆಪ್ರೋಪ್ಲಸ್ ಸಂಸ್ಥೆಯ ಸಹಯೋಗದೊಂದಿಗೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಹಾಗೂ ಚಳ್ಳಕೆರೆ, ಹಿರಿಯೂರು, ಮೊಳಕಾಲ್ಮೂರು, ಹೊಳಲ್ಕೆರೆ ಹಾಗೂ ಹೊಸದುರ್ಗ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕಿಡ್ನಿ ವೈಪಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಉಚಿತ ಡಯಾಲಿಸಿಸ್ ಸೇವೆ ನೀಡುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆ.ಶಿವಕುಮಾರ್ ಅವರ ಮೊಬೈಲ್ ಸಂಖ್ಯೆ 7760924885, ಎಂ.ಹೆಚ್.ಮಂಜುನಾಥ್ ಮೊಬೈಲ್ ಸಂಖ್ಯೆ 9738485783ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಸರ್ವೇಕ್ಷಣಾ ಘಟಕದ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿತ್ರದುರ್ಗ : ಕೈಮಗ್ಗ ಮತ್ತು ಜವಳಿ ಇಲಾಖೆಯು ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರುಗಳಿಗೆ ಹಾಗೂ ಕೈಮಗ್ಗ ನೇಕಾರರಿಗೆ ಸಂಬಂಧಿಸಿದ ಇತರೆ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾರರಿಗೆ ವಾರ್ಷಿಕ ರೂ.5000/- ಗಳನ್ನು ನೀಡಲು ನೇಕಾರರ ಸಮ್ಮಾನ್ ಯೋಜನೆಯಡಿ 2024-25ನೇ ಸಾಲಿಗೆ ಈಗಾಗಲೇ ನೊಂದಾಯಿತವಾಗಿರುವ ಅರ್ಹ ಕೈಮಗ್ಗ, ವಿದ್ಯುತ್ ಮಗ್ಗ ನೇಕಾರರಿಂದ ಹೊಸದಾಗಿ ಅರ್ಜಿ ಪಡೆದು ಅರ್ಹವಿರುವ ನೇಕಾರರ ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ ನಲ್ಲಿ ಅಪ್‍ಲೋಡ್ ಮಾಡಲು ಕೇಂದ್ರ ಕಚೇರಿ ಪತ್ರದಲ್ಲಿ ಸೂಚಿಸಲಾಗಿದೆ. ಅದರಂತೆ 2023-24ನೇ ಸಾಲಿನಲ್ಲಿ ಈ ಯೋಜನೆಯಡಿ ಈಗಾಗಲೇ ಸೌಲಭ್ಯ ಪಡೆದಿರುವ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ಪಟ್ಟಿಯಲ್ಲಿ ನೊಂದಾಯಿತ ಕೈಮಗ್ಗ ನೇಯ್ಗೆ, ವಿದ್ಯುತ್ ಮಗ್ಗ ನೇಯ್ಗೆ ಚಟುವಟಿಕೆಯಲ್ಲಿ ತೊಡಗಿರುವ ಅರ್ಹ ನೇಕಾರರಿಂದ, 2024ರ ಅ.20ರೊಳಗಾಗಿ ಅರ್ಜಿ ಸಲ್ಲಿಸುವಂತೆ ಪತ್ರಿಕಾ ಪ್ರಕಟಣೆ ಹೊಡಿಸಲಾಗಿತ್ತು. ಇನ್ನೂ ಹಲವಾರು ನೇಕಾರರು ಅರ್ಜಿ ಸಲ್ಲಿಸದೇ ಇರುವುದರಿಂದ ಅರ್ಜಿ ಸಲ್ಲಿಸಲು ಇನ್ನೂ ಕಾಲಾವಕಾಶ ಅವಶ್ಯಕತೆ ಇರುವುದನ್ನು ಮನಗಂಡು ಅರ್ಜಿ ಸಲ್ಲಿಕೆ ಅವಧಿಯನ್ನು 2024ರ ನ.10ರೊಳಗಾಗಿ…
ಮಡಿಕೇರಿ : ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯಿಂದ ರಾಷ್ಟ್ರವ್ಯಾಪಿ ಡಿಜಿಟಲ್ ಲೈಫ್ ಸರ್ಟಿಫಿಕೆಟ್ ಅಭಿಯಾನವನ್ನು ನವೆಂಬರ್, 01 ರಿಂದ 30 ರವರೆಗೆ ಹಮ್ಮಿಕೊಂಡಿದ್ದು, ಪಿಂಚಣಿದಾರರು ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರಾದ ಎಸ್.ಪಿ.ರವಿ ಅವರು ಕೋರಿದ್ದಾರೆ. ಮುಖ ಚಹರೆ ಮತ್ತು ಬೆರಳಚ್ಚು ದೃಡೀಕರಣದ ಡಿಜಿಟಲ್ ಪ್ರಕ್ರಿಯೆ ಮೂಲಕ ಈ ಅಭಿಯಾನ ನಡೆಯಲಿದೆ. ಪಿಂಚಣಿದಾರರು ತಮ್ಮ ಡಿಜಿಟಲ್ ಲೈಫ್ ಪ್ರಮಾಣ ಪತ್ರವನ್ನು ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಪಿಪಿಒ ಸಂಖ್ಯೆ ಮತ್ತು ಪಿಂಚಣಿದಾರರ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ತಮ್ಮ ಬಯೋಮೆಟ್ರಿಕ್ ಪರಿಶೀಲಿಸಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಮತ್ತು ಕೇಂದ್ರ ಸರ್ಕಾರದ ಪಿಂಚಣಿದಾರರು, ಕುಟುಂಬ ಪಿಂಚಣಿದಾರರು ತಮ್ಮ ಹತ್ತಿರದ ಅಂಚೆ ಕಚೇರಿಯಲ್ಲಿ ಅಥವಾ ಪೋಸ್ಟ್ ಮೆನ್ ಮೂಲಕ 70 ರೂ. ಶುಲ್ಕ ಪಾವತಿಸಿ, ಈ ಸೌಲಭ್ಯ ಪಡೆದು ತಮ್ಮ ಡಿಜಿಟಲ್ ಲೈಫ್ ಪ್ರಮಾಣ ಪತ್ರ ಸಲ್ಲಿಸುವಂತೆ ಜಿಲ್ಲಾ ಅಂಚೆ ಇಲಾಖೆ ತಿಳಿಸಿದೆ.
ಬೆಂಗಳೂರು : ಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕೇವಲ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೆ ಸುಪ್ರೀಂಕೋರ್ಟ್ ಆದೇಶದಂತೆ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅನುಮತಿ ಇದೆ. ಇದೆ ವೇಳೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ರಾತ್ರಿ 8 ರಿಂದ 10ರ ವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಅವಕಾಶ ಕಲ್ಪಿಸಲಾಗಿದ್ದು, ಈ ಸಂಬಂಧ ಬೆಂಗಳೂರು ಪೊಲೀಸ್ ಇಲಾಖೆಯು ಪಟಾಕಿ ಸಿಡಿಸುವ ಕುರಿತಾಗಿ ಮಾರ್ಗಸೂಚಿ ಪ್ರಕಟಿಸಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ 1) ಹಸಿರು ಪಟಾಕಿಗಳನ್ನೇ ಖರೀದಿಸಿ, ಪರಿಸರ ಸ್ನೇಹಿ ದೀಪಾವಳಿ ಆಚರಿಸಬೇಕು. 2) ಹಸಿರು ಪಟಾಕಿ ಸಂದರ್ಭದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಖಚಿತಪಡಿಸಿಕೊಳ್ಳಬೇಕು. 3) ಅಧಿಕೃತ ಪರವಾನಗಿ ಪಡೆದ ಅಂಗಡಿ / ಮಳಿಗೆಗಳಿಂದಲೇ ಪಟಾಕಿ ಖರೀದಿಸಬೇಕು. 4) ಕೆಲವು ಅಂಗಡಿಗಳಲ್ಲಿ ಅನಧಿಕೃತವಾಗಿ ಪಟಾಕಿ ಮಾರಾಟ ಮಾಡುವ ಸಾಧ್ಯತೆಯಿದ್ದು, ಅಂತಹ…














