Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೈಕ್ ಮೇಲೆ ತೆರಳುತ್ತಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಮಚ್ಚು ಹಾಗೂ ಚಾಕುವಿನಿಂದ ಭೀಕರವಾಗಿ ಹಲ್ಲೆ ನಡೆಸಿ ದರೋಡೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಡೆಹಳ್ಳಿ ಎಂಬಲ್ಲಿ ನಡೆದಿದೆ. ಬೈಕ್ ಸವಾರನ ಮೇಲೆ ಮಚ್ಚು ಚಾಕುವಿನಿಂದ ಹಲ್ಲೆ ನಡೆಸಿ ದರೋಡೆ ಮಾಡಲಾಗಿದ್ದು,ಎಡೆ ಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯ ಬಳಿ ಸವಾರ ಕಲಂದರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಹಲ್ಲೆಗೆ ಒಳಗಾದಂತಹ ಕಲಂದರ್ಗೆ ಸದ್ಯ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು : ಜಾಮೀನು ಮಂಜೂರು ಮಾಡಿದ ನಂತರ ಕೇವಲ 7 ಗಂಟೆಯಲ್ಲಿ ಆರೋಪಿ ದರ್ಶನ್ ಜೈಲಿನಿಂದ ರಿಲೀಸ್ ಆಗಿದ್ದಾರೆ. ಆದರೆ, ದರ್ಶನ್ನನ್ನು ಕೊಲೆ ಕೇಸಿನಿಂದ ಪಾರು ಮಾಡಲು ಜೈಲಿಗೆ ಹೋಗಲು ಮುಂದಾಗಿದ್ದ ದರ್ಶನ್ ಗ್ಯಾಂಗ್ನ ರವಿಶಂಕರ್ ಕೂಡ ಇಂದೇ ತುಮಕೂರು ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಹೌದು ರೇಣುಕಾಸ್ವಾಮಿಯನ್ನು ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ ಆರೋಪದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಸೇರಿದಂತೆ 17 ಜನರ ಪೈಕಿ ಈಗಾಗಲೇ ಹಲವರು ಜೈಲಿನಿಂದ ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ. ಇದೇ ಕೇಸಿನ ಎ-8ನೇ ಆರೋಪಿ ರವಿಶಂಕರ್ ಕೂಡ ಇಂದು ತುಮಕೂರು ಜೈಲಿನಿಂದ ಜೈಲಿನಿಂದ ರಿಲೀಸ್ ಆಗಿದ್ದಾನೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A8 ಆರೋಪಿಯಾಗಿದ್ದ ರವಿಶಂಕರ್ಗೆ ನ್ಯಾಯಾಲಯದಿಂದ ಜಾಮೀನು ಸಿಕ್ಕಿ 17 ದಿನಗಳು ಕಳೆದಿವೆ. ಆದರೆ, ಜಾಮೀನು ಪಡೆದುಕೊಂಡು ಜೈಲಿನಿಂದ ಹೊರಗೆ ಹೋಗಲು ಇಬ್ಬರು ಶ್ಯೂರಿಟಿದಾರರು ಹಾಗೂ 2 ಲಕ್ಷ ರೂ. ಮೌಲ್ಯದ ಬಾಂಡ್ ಅನ್ನು ನೀಡುವಂತೆ ನ್ಯಾಯಾಲಯದಿಂದ ಷರತ್ತು ವಿಧಿಸಲಾಗಿತ್ತು. ಕಳೆದ 15 ದಿನಗಳ…
ರಾಮನಗರ : ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ಸಿಪಿ ಯೋಗೇಶ್ವರ್ ಅವರು ಕಳೆದ ಎರಡು ದಿನಗಳ ಹಿಂದೆ ಅವರ ಬೆಂಬಲಿಗರು ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಡಿಕೆ ಬ್ರದರ್ಸ್ ಈ ಒಂದು ಬಿಗ್ ಆಪರೇಷನ್ ಮಾಡಿದ್ದರು ಎಂದು ಹೇಳಲಾಗುತ್ತಿದೆ. ಇದೀಗ ಇದಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ರಿವರ್ಸ್ ಆಪರೇಷನ್ ಮಾಡಿದ್ದು, ರಾಮನಗರ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಇದೀಗ ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎನ್ನಲಾಗಿದ್ದಾರೆ. ಹೌದು ರಾಮನಗರ ಜಿಲ್ಲೆಯ ಚನ್ನಪಟ್ಟಣ ನಗರಸಭೆಯ ಮಾಜಿ ಸದಸ್ಯರು, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಮನಗರ ಜಿಲ್ಲಾ ಉಪಾಧ್ಯಕ್ಷರಾಗಿದ್ದ ಸೈಯದ್ ಅಸ್ಗರ್ ಹಲಿರವರು ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.ಚನ್ನಪಟ್ಟಣದ ಯರಬ್ ನಗರದಲ್ಲಿರುವ ಹಲಿರವರ ನಿವಾಸದಲ್ಲಿ ಬುಧವಾರ ಬೆಳಗ್ಗೆ ಕೇಂದ್ರ ಸಚಿವರಾಗಿರುವ ಹೆಚ್.ಡಿ ಕುಮಾರಸ್ವಾಮಿರವರು ಜೆಡಿಎಸ್ ಪಕ್ಷದ ಶಾಲು ಹೊದಿಸಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಹಾವೇರಿ : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿ ದರ್ಶನ್ ಅವರಿಗೆ ಇಂದು ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿತು. ಈ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿ ದರ್ಶನ ಅವರು ನನಗೆ ತುಂಬಾ ಆಪ್ತರು ಅವರಿಗೆ ಜಾಮೀನು ಸಿಕ್ಕಿದ್ದು ಖುಷಿಯಾಗಿದೆ ಎಂದು ತಿಳಿಸಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದಲ್ಲಿ ದರ್ಶನ್ಗೆ ಮಧ್ಯಂತರ ಜಾಮೀನು ಸಿಕ್ಕಿದೆ ಎಂದು ಗೊತ್ತಾಯಿತು. ಅವರು ನನ್ನ ಆಪ್ತರು. ಆತ್ಮೀಯರಾಗಿರುವ ಕಾರಣಕ್ಕೆ ಜಾಮೀನು ಸಿಕ್ಕಿರುವುದು ಸಹಜವಾಗಿಯೇ ಖುಷಿ ತಂದಿದೆ. ಅವರ ಆರೋಗ್ಯ ವಿಚಾರಿಸುತ್ತೇನೆ. ಅಲ್ಲದೆ ಈ ಘಟನೆಗೂ ಮುನ್ನ ಆಗಾಗ ಭೇಟಿಯಾಗುತ್ತಿದ್ದೆವು ಎಂದು ತಿಳಿಸಿದರು. ಇದೆ ವೇಳೆ ಉಪಚುನಾವಣೆ ಕುರಿತಂತೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಇಡೀ ರಾಜ್ಯವನ್ನು ಅಭಿವೃದ್ಧಿ ಮಾಡಿದ್ದಾರೆ. ಆದರೆ ಬೊಮ್ಮಾಯಿ ರಾಜ್ಯ ಇರಲಿ, ತಮ್ಮ ಕ್ಷೇತ್ರವನ್ನೂ ಅಭಿವೃದ್ಧಿ ಮಾಡಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ 8 ಸಾವಿರ ಮತಗಳ ಲೀಡ್ ಸಿಕ್ಕಿತ್ತು. ಆಗ ಬೊಮ್ಮಾಯಿ…
ಮೈಸೂರು : ದೀಪಾವಳಿ ಹಬ್ಬದ ಅಂಗವಾಗಿ ರಾಜ್ಯದಲ್ಲಿ ಕೇವಲ ಹಸಿರು ಪಟಾಕಿ ಸಿಡಿಸುವುದಕ್ಕೆ ಮಾತ್ರ ಅವಕಾಶವಿದ್ದು, ಅಲ್ಲದೆ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸುವುದಕ್ಕೆ ಅವಕಾಶ ಇದೆ ಎಂದು ಈಗಾಗಲೇ ರಾಜ್ಯ ಸರ್ಕಾರ ತಿಳಿಸಿದೆ. ಪಟಾಕಿ ಸಿಡಿಸುವ ವೇಳೆ ಯಾವುದೇ ರೀತಿಯಾದಂತಹ ಸಾವು ನೋವುಗಳು ಆಗದಂತೆ ಇದೀಗ ಮೈಸೂರಿನಲ್ಲಿ ಈ ಸ್ಥಳಗಳಲ್ಲಿ ನಿಶಬ್ದ ವಲಯ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸುವುದು ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯ, ಕುಕ್ಕರಹಳ್ಳಿ ಕೆರೆ, ಕಾರಂಜಿ ಕೆರೆ, ಲಿಂಗಾಬುದಿ ಕೆರೆ, ಸಾರ್ವಜನಿಕ ಉದ್ಯಾನವನಗಳು, ಆಸ್ಪತ್ರೆ ಹಾಗೂ ನರ್ಸಿಂಗ್ ಹೋಂಗಳು, ಶೈಕ್ಷಣಿಕ ಸಂಸ್ಥೆಗಳು, ನ್ಯಾಯಾಲಯ, ಧಾರ್ಮಿಕ ಸ್ಥಳಗಳಲ್ಲಿ 100 ಮೀಟರ್ ಸುತ್ತಳತೆಯ ಪ್ರದೇಶದಲ್ಲಿ ಅ.30ರಿಂದ ನವೆಂಬರ್ 2ರ ಮಧ್ಯರಾತ್ರಿ 12 ಗಂಟೆವರೆಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ.
ಬಳ್ಳಾರಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರಿಗೆ ಇಂದು ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದು ಈ ಹಿನ್ನೆಲೆಯಲ್ಲಿ ಇದೀಗ ನಟ ದರ್ಶನ್ ಅವರು ಬಳ್ಳಾರಿ ಜೈಲಿನಿಂದ ರಿಲೀಸ್ ಆಗಿದ್ದಾರೆ. ದರ್ಶನ್ ಹೊರ ಬರುತ್ತಿದ್ದಂತೆ ಅವರ ಅಭಿಮಾನಿಗಳ ಹರ್ಷೋದ್ಗಾರ, ಜೈ ಘೋಷಣೆ ಮುಗಿಲುಮುಟ್ಟಿತು. ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ ಬಳಿಕ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದ ಬಳ್ಳಾರಿ ಜೈಲಿಗೆ ಇಮೇಲ್ ಮುಖಾಂತರ ದರ್ಶನ್ ಅವರನ್ನು ರಿಲೀಸ್ ಮಾಡಿ ಎಂದು ಆದೇಶದ ಪ್ರತಿ ಕಳುಹಿಸಿದ್ದರು. ಜೈಲು ಅಧಿಕಾರಿಗಳು ಇದೀಗ ಆದೇಶ ಪ್ರತಿಯನ್ನು ಪಡೆದುಕೊಂಡು ನಟ ದರ್ಶನ್ ಅವರನ್ನು ರಿಲೀಸ್ ಮಾಡಿದ್ದಾರೆ. ಹೈ ಸೆಕ್ಯೂರಿಟಿ ಸೆಲ್ ನಿಂದ ನಟ ದರ್ಶನ್ ಕುಂಟುತ್ತಲೇ ಹೊರಬಂದರು. ಹೊರಗಡೆ ಇನ್ನೋವಾ ಕಾರಿನಲ್ಲಿ ಪತ್ನಿ ವಿಜಯಲಕ್ಷ್ಮಿ ಅವರು ಪತಿ ದರ್ಶನ್ ಅವರ ಬರುವಿಕೆಯಗಾಗಿ ಕಾದು ಕುಳಿತಿದ್ದರು. ಜೈಲಿನಿಂದ ಹೊರಗಡೆ ಬಂದ ಬಳಿಕ ನಟ ದರ್ಶನ್ ಅವರು ಪತ್ನಿ ತಂದ ಕಾರಿನಲ್ಲಿ ಬೆಂಗಳೂರಿಗೆ ತೆರಳಲಿದ್ದು, ಅಭಿಮಾನಿಗಳನ್ನು…
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಸಿಲಿಕಾನ್ ಸಿಟಿಯಲ್ಲಿ ಭಾರಿ ಮಳೆ ಆಗಿದ್ದರಿಂದ ಹಲವು ಅವಾಂತರ ಸೃಷ್ಟಿಯಾಗಿದ್ದವು. ಇದೀಗ ಕೊಂಚ ಬಿಡುವು ಮಾಡಿಕೊಂಡಿದ್ದ ಮಳೆರಾಯ ಇಂದು ಮತ್ತೆ ಅಬ್ಬರಿಸಿದ್ದು, ಭಾರಿ ಮಳೆಯಿಂದಾ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಸಂಪೂರ್ಣ ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಮನೆಗೆ ತೆರಳಲು ಪರದಾಟ ನಡೆಸಿದರು. ಹೌದು ಆರ್ಆರ್ ನಗರ, ಕೆಂಗೇರಿ, ವಿಜಯನಗರ, ಬ್ಯಾಟರಾಯನಪುರ, ಚಂದ್ರಲೇಔಟ್, ಜ್ಞಾನಭಾರತಿ, ನಾಗರಬಾವಿ, ಮಾಗಡಿ ರಸ್ತೆ, ಸುಮ್ಮನಹಳ್ಳಿ ಸೇರಿದಂತೆ ಹಲವೆಡೆ ನಗರದ ಹಲವೆಡೆ ಮಳೆಯಾಗಿದೆ. ಭಾರಿ ಮಳೆಯಿಂದಾಗಿ ಸುಮ್ಮನಹಳ್ಳಿ ಜಂಕ್ಷನ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್ ಜಾಮ್ನಿಂದ ವಾಹನ ಸವಾರರು ಪರದಾಡಿದರು. ಟ್ರಾಫಿಕ್ ನಿಯಂತ್ರಣಕ್ಕೆ ಸಂಚಾರಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಕೆಲಕಾಲ ಸುರಿದ ಮಳೆಯಿಂದ ಗೊರಗುಂಟೆಪಾಳ್ಯ ಬಳಿ ರಸ್ತೆ ಮೇಲೆ ಮಳೆ ನೀರು ನಿಂತು ಅವಾಂತರ ಸೃಷ್ಟಿಯಾಗಿದೆ. ಗೊರಗುಂಟೆಪಾಳ್ಯ-ಪೀಣ್ಯಾ ಸಂಪರ್ಕ ರಸ್ತೆ ಜಲಾವೃತಗೊಂಡಿದೆ. ನಿಂತ ನೀರಿನಲ್ಲೇ ವಾಹನಗಳು ಸಂಚರಿಸುತ್ತಿವೆ.ಇನ್ನು ಸುಮನಹಳ್ಳಿ ಜಂಕ್ಷನ್ನಲ್ಲಿ ನೀರು ನಿಂತಿರುವುದರಿಂದ ನಿಧಾನಗತಿಯಿಂದ ಸಂಚರಿಸುವಂತೆ ವಾಹನ ಸವಾರರಲ್ಲಿ…
ಬಳ್ಳಾರಿ : ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀ ಬಳ್ಳಾರಿಯ ಕನಕ ದುರ್ಗಮ್ಮ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಟ ದರ್ಶನ್ ಗೆ ಜಾಮೀನು ಮಂಜೂರಾಗುತ್ತಿದ್ದಂತೆ ಬಳ್ಳಾರಿ ಜೈಲಿಗೆ ತೆರಳಿ, ಪತಿಯನ್ನು ಭೇಟಿಯಾದ ವಿಜಯಲಕ್ಷ್ಮೀ ಬಳಿಕ ಬಳ್ಳಾರಿಯ ಕನಕ ದುರ್ಗಮ್ಮ ದೇವಾಲಯಕ್ಕೆ ಆಗಮಿಸಿದರು. ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮನಃಪೂರ್ವಕವಾಗಿ ಪ್ರಾರ್ಥಿಸಿದರು. ಇದೇ ವೇಳೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರನ್ನು ನೋಡಲು ದೇವಸ್ಥಾನಕ್ಕೆ ಆಗಮಿಸಿದ ದರ್ಶನ್ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸ್ ಸಿಬ್ಬಂದಿ ಹರಸಾಹಸಪಟ್ಟರು. ಈ ವೇಳೆ ಮಹಿಳಾ ಹೋಂ ಗಾರ್ಡ್ ಸಿಬ್ಬಂದಿ ಒಬ್ಬರು ಕೆಳಗೆ ಬಿದ್ದಿದ್ದರು. ಇದನ್ನು ಲೆಕ್ಕಿಸಿದೆ ಅವರನ್ನು ತುಳಿದುಕೊಂಡು ಹೋಗಿ ದರ್ಶನ ಅಭಿಮಾನಿಗಳು ಮೃಗಿಯ ವರ್ತನೆ ತೋರಿದ್ದಾರೆ.
ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ರಸ್ತೆಯಲ್ಲಿ ಭೀಕರ ಅಪಘಾತ ಒಂದು ಸಂಭವಿಸಿದ್ದು, ಪಕ್ಕದಲ್ಲೇ ಬರುತ್ತಿದ್ದ ವಾಹನವೊಂದಕ್ಕೆ ಬುಲೆಟ್ ಬೈಕ್ ಟಚ್ ಆಗಿ ಡಿವೈಡರ್ಗೆ ಡಿಕ್ಕಿ ಹೊಡೆದಿದ್ದು ಸ್ಥಳದಲ್ಲೇ ಯುವಕ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾನೆ ಎಂದು ಹೇಳಲಾಗುತ್ತಿದೆ. ಮೃತ ಯುವಕನನ್ನು ಚಿಕ್ಕಬಳ್ಳಾಪುರ ನಗರದ ರಾಹುಲ್ (18) ಎಂದು ಗುರುತಿಸಲಾಗಿದೆ. ಬುಲೆಟ್ ಬೈಕ್ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಚಿಕ್ಕಬಳ್ಳಾಪುರ ನಗರದ ನಿವಾಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.ಈ ಒಂದು ಅಪಘಾತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಚಿಕ್ಕಸಣ್ಣೆ ಗೇಟ್ ಬಳಿ ನಡೆದಿದೆ.ಅಪಘಾತದ ಕುರಿತಂತೆ ಕೆಂಪೇಗೌಡ ಏರ್ ಪೋರ್ಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜಿಲ್ಲೆ ದಂತಹ ನಟ ದರ್ಶನ್ ಅವರಿಗೆ ಇಂದು ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ ಈ ಮೂಲಕ ನಟ ದರ್ಶನ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ದರ್ಶನ್ ಬಿಡುಗಡೆಯಾಗುತ್ತಿರುವ ಸುದ್ದಿ ತಿಳಿದು ನಿರ್ದೇಶಕ ತರುಣ್ ಸುಧೀರ್ ತಾಯಿ ಮಾಲತಿ ಸುಧೀರ್ ರವರು ಸಂತೋಷಗೊಂಡಿದ್ದಾರೆ. ನಟ ದರ್ಶನ್ ಬಿಡುಗಡೆಯ ಸುದ್ದಿ ತಿಳಿದು ಮಾಲತಿ ಸುಧೀರ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಯಾವುದೋ ಒಂದು ಕೆಟ್ಟ ಗಳಿಗೆಯಲ್ಲಿ ಇಂತಹ ಒಂದು ಅನಾಹುತ ನಡೆದಿದೆ. ಆದರೆ ನಟ ದರ್ಶನ್ ಸಾಮಾನ್ಯ ಮನುಷ್ಯನ ಅಂತೂ ಅಲ್ಲ. ಆತನು ಒಬ್ಬ ದೇವತಾ ಮನುಷ್ಯನೇ ಆಗಿದ್ದಾನೆ ಎಂದು ತರುಣ್ ಸುಧೀರ್ ತಾಯಿ ಮಾಲತಿ ಸುಧೀರ್ ಅವರು ಭಾವುಕರಾಗಿ ಮಾತನಾಡಿದ್ದಾರೆ. ನಟ ದರ್ಶನ್ ಬಿಡುಗಡೆಯಾಗಿದ್ದಕ್ಕೆ ನನಗೆ ತುಂಬಾ ಖುಷಿಯಾಗುತ್ತಿದೆ ಸದ್ಯಕ್ಕೆ ಆತನನ್ನು ಭೇಟಿಯಾಗಲ್ಲ. ಹೊರಗಡೆ ಬರಲಿ ಆಮೇಲೆ ಆರೋಗ್ಯ ಸುಧಾರಿಸಿಕೊಳ್ಳಿ ಬಳಿಕ ಆತನನ್ನು ಭೇಟಿಯಾಗುತ್ತೇನೆ. ಅಭಿಮಾನಿಗಳು ಮೊದಲು ಆತನನ್ನು ಭೇಟಿಯಾಗಲಿ. ಅವನು ನನ್ನ…














