Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವುದೇ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸಚಿವರು ಭೇಟಿ ನೀಡಿ, ಮನವಿ ಸ್ವೀಕರಿಸಿದರು.ಈ ವೇಳೆ ಮಾತನಾಡಿದ ಸಚಿವರು, ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಸಲು ಸರ್ಕಾರಕ್ಕೆ ಸಹಾನುಭೂತಿ ಇದೆ. ವೈಯಕ್ತಿಕವಾಗಿ ಎಂದಿಗೂ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಪರ ನಿಲ್ಲುತ್ತೇನೆ ಎಂದು ಅವರು ಭರವಸೆ ನೀಡಿದರು. ಬಜೆಟ್‌ನಲ್ಲಿ ಸಮಾಧಾನಕರ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನವನ್ನು ಬಜೆಟ್ನಲ್ಲಿ ಹೆಚ್ಚಿಸಲಾಗಿದೆ. 2017ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗಲೇ ವೇತನ ಹೆಚ್ಚಿಸಲಾಗಿತ್ತು. ಈಗಲೂ ಸಿದ್ದರಾಮಯ್ಯನನವರೇ ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು ಹೆಚ್ಚಿಸಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಗೌರವಧನ ಏರಿಕೆಯಾಗುವ ವಿಶ್ವಾಸವಿದೆ ಎಂದು ಸಚಿವರು ಹೇಳಿದರು. ನಾಳೆ ಗ್ರ್ಯಾಚುಯಿಟಿ ವಿತರಣೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನವಾದ ನಾಳೆ…
ಕೊಪ್ಪಳ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಪ್ರವಾಸಕ್ಕೆ ಎಂದು ಬಂದಿದ್ದ ವಿದೇಶಿ ಮಹಿಳೆಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ನಡೆದಿದ್ದು ವರದಿಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಪ್ರವಾಸಿತಾಣ ಸಾಣಾಪುರ ಕೆರೆ ಬಳಿ ಜಂಗ್ಲಿಗೆ ಹೋಗುವ ರಸ್ತೆ ಮಧ್ಯದಲ್ಲಿನ ತುಂಗಾಭದ್ರ ಎಡದಂಡೆ ಕಾಲುವೆ ಪಕ್ಕ ಈ ಘಟನೆ ನಡೆದಿದೆ. ಗಿಟಾರ್ ಬಾರಿಸುತ್ತಾ ಕುಳಿತಿದ್ದ ಇಬ್ಬರು ವಿದೇಶಿ ಹಾಗೂ ಮೂವರು ದೇಶಿಯ ಪ್ರವಾಸಿಗರ ಮೇಲೆ ಗುರುವಾರ ತಡರಾತ್ರಿ ಹಲ್ಲೆಯಾಗಿದೆ. ವಾಯುವಿಹಾರಕ್ಕೆಂದು ಹೋಗಿದ್ದ ಸಂದರ್ಭದಲ್ಲಿ ವಿದೇಶಿಯರಿದ್ದ ಗುಂಪಿನ ಮೇಲೆ ದಾಳಿ ಮಾಡಿರುವ ಕೆಲ ಸ್ಥಳೀಯ ಯುವಕರು, ಗುಂಪಿನಲ್ಲಿದ್ದ ಪುರುಷರನ್ನು ಕಾಲುವೆಗೆ ದೂಡಿ, ಒಬ್ಬ ವಿದೇಶಿ ಮತ್ತು ಒಬ್ಬ ಸ್ಥಳೀಯ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಘಟನೆಯಲ್ಲಿ ಕಾಲುವೆಗೆ ಬಿದ್ದಿದ್ದ ಒಬ್ಬ ಸ್ವದೇಶಿ ಯುವಕ ನಾಪತ್ತೆಯಾಗಿದ್ದು, ಇನ್ನುಳಿದವರಿಗೆ ಗಾಯಗಳಾಗಿವೆ. ಅಮೆರಿಕ ಮೂಲದ ಡೇನಿಯಲ್, ಇಸ್ರೇಲ್ನ ಸೀಮಾ, ಗಂಗಾವತಿ ತಾಲ್ಲೂಕಿನ ಆನೆಗೊಂದಿಯ ಹಾರ್ಟ್…
ಬೆಂಗಳೂರು : ಇನ್ಮುಂದೆ ಮಚ್ಚು, ಲಾಂಗ್ ತೋರಿಸುವವರು, ಕಾನಾನು ಸುವ್ಯವಸ್ಥೆ ಹಾಳು ಮಾಡುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ಜೆಡಿಎಸ್ ನಾಯಕ ಎಸ್.ಎಲ್.ಭೋಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಕಳೆದ 2-3 ವರ್ಷಗಳ ಅವಧಿಯಲ್ಲಿ ನಡೆದಿರುವ ವಿವಿಧ ಅಪರಾಧ ಪ್ರಕರಣಗಳು, ಕೈಗೊಂಡ ಕ್ರಮ, ಅಪರಾಧಿಗಳ ಬಂಧನ ಕುರಿತು ಅಂಕಿ ಅಂಶಗಳ ಸಹಿತ ವಿವರಿಸಿ, ಕಾನೂನು ಮತ್ತು ಸುವ್ಯವಸ್ಥೆ ಹದಗೆಡಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಸಮಾಜದ ಶಾಂತಿ ಹಾಳು ಮಾಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಗಲಭೆ ಸೃಷ್ಟಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಗೂಂಡಾ ಕಾಯ್ದೆಯಡಿ ಮೂರು ವರ್ಷಗಳಲ್ಲಿ 139 ಗೂಂಡಾಗಳನ್ನು ಬಂಧಿಸಿ ಜೈಲಿಗಟ್ಟಲಾಗಿದೆ. ಪೊಲೀಸ್ ಠಾಣೆಗಳಲ್ಲಿ ಬೀಟ್ ವ್ಯವಸ್ಥೆ ಹೆಚ್ಚಿಸಲಾಗಿದೆ. ಹೊಯ್ಸಳ ಗಸ್ತು ಕರ್ತವ್ಯ ಬಲಪಡಿಸಲಾಗಿದೆ. ನಗರದ ಯಾವುದೇ ಸ್ಥಳದಿಂದ 112ಗೆ ಕರೆ ಮಾಡಿದರೆ ಸರಾಸರಿ…
ಕಲ್ಬುರ್ಗಿ : ರಾಜ್ಯದಲ್ಲಿ ಇಂದು ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದಂತಹ ನಾಲ್ವರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ನಡೆದಿದೆ. ಹೌದು ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ ಎಂಬ ಗ್ರಾಮದಲ್ಲಿ ಈ ಭೀಕರ ಅಪಘಾತ ನಡೆದಿದೆ. ಮೃತರನ್ನು ಸಿದ್ದು, ಸರೇಶ್ ರೆಡ್ಡಿ, ಮಲ್ಲು ಪೂಜಾರಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತಿ ವೇಗವಾಗಿ ಬಂದಂತಹ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲೇ ಈ ನಾಲ್ವರು ವ್ಯಕ್ತಿಗಳು ಸಾವನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ಗಳು ಸಂಪೂರ್ಣವಾಗಿ ನುಜ್ಜುಗುಜ್ಜಗಿವೆ. ಅಪಘಾತದ ಕುರಿತು ಸೇಡಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ದುಬೈ ನಿಂದ ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟಿ ರಮ್ಯಾ ರಾವ್ ಗೆ ಇದೀಗ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಮೂರು ದಿನಗಳ ಕಾಲ ಡಿ ಆರ್ ಐ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ ಯಾರಾವ್ ಅವರು ಇತ್ತೀಚಿಗೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಇಂದು ನಟಿ ರನ್ಯಾರಾವ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ನಟಿ ರನ್ಯಾ ರಾವ್ ಅವರಿಗೆ ಮೂರು ದಿನ ಡಿ ಆರ್ ಐ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಸಿದೆ. ದುಬೈ ನಿಂದ ಸುಮಾರು 14 ಕೆಜಿ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಇತ್ತೀಚಿಗೆ ಅರೆಸ್ಟ್ ಆಗಿದ್ದರು. ಇದೀಗ ಮೂರು ದಿನಗಳ ಕಾಲ ನೀಡಿ DRI ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ
ಬೆಂಗಳೂರು : ಈಗಾಗಲೇ ಕೆಎಸ್ಆರ್ಟಿಸಿ ಬಸ್ ಟಿಕೆಟ್ ಪ್ರಯಾಣದ ಹಾಗೂ ಮೆಟ್ರೋ ಪ್ರಯಾಣದ ದರ ಹೆಚ್ಚಳ ಮಾಡಿ ರಾಜ್ಯದ ಜನತೆಗೆ ಸರ್ಕಾರ ಶಾಕ್ ನೀಡಿದೆ. ಇದರ ಬೆನ್ನಲ್ಲೇ ಗಾಯದ ಮೇಲೆ ಬರೆ ಎಳೆದಂತೆ ಶೀಘ್ರದಲ್ಲಿ ನಂದಿನಿ ಹಾಲಿನ ದರ ಏರಿಕೆ ಆಗಲಿದೆ. ಅಧಿವೇಶನದ ಬಳಿಕ ನಂದಿನಿ ಹಾಲಿನ ದರ ಏರಿಕೆ ಆಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಾಲಿನಗರ ಏರಿಕೆ ಆಗಲಿದೆ. ಹೆಚ್ಚಳ ಮಾಡಿರುವ ಹಾಲಿನ ದರದ ಹಣ ರೈತರಿಗೆ ಹೋಗಲಿದೆ. ವಿಧಾನಮಂಡಲ ಅಧಿವೇಶನ ನಡೆಯುವ ಸಂದರ್ಭದಲ್ಲಿ ಅಥವಾ ಅಧಿವೇಶನ ಮುಗಿದ ಬಳಿಕ ನಂದಿನಿ ಹಾಲಿನ ದರ ಏರಿಕೆಯಾಗಲಿದೆ ಎಂದು ಬೆಂಗಳೂರಿನಲ್ಲಿ ಕೆಎಂಎಫ್ ಅಧ್ಯಕ್ಷ ಅಭಿಮಾನಿ ಹೇಳಿಕೆ ನೀಡಿದರು.
ಬೆಂಗಳೂರು : ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಖಾತೆಗೆ ಬಂದಿಲ್ಲ ಎಂದು ರಾಜ್ಯದ ಯಜಮಾನಿಯರು ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ಒಂದು ತಿಂಗಳ ಗೃಹಲಕ್ಷ್ಮಿ ಹಣ ಖಾತಿಗೆ ಜಮೆ ಆಗಿತ್ತು. ಇದೀಗ ಗೃಹಲಕ್ಷ್ಮೀ ಯೋಜನೆಯನ್ನು ಯಾವುದೇ ಕಾರಣಕ್ಕೂ ಪರಿಷ್ಕರಣೆ ಮಾಡುವುದಿಲ್ಲ, ಜನೆವರಿ ಮತ್ತು ಫೆಬ್ರುವರಿ ತಿಂಗಳ ಗೃಹಲಕ್ಷ್ಮಿ ಹಣ ಶೀಘ್ರ ಖಾತೆಗೆ ಜಮೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗೃಹಲಕ್ಷ್ಮಿ ಯೋಜನೆಯು ಸದ್ಯ ಈಗ ಯಾವ ರೀತಿ ನಡೆದುಕೊಂಡು ಹೋಗುತ್ತಿದೆಯೇ; ಹಾಗೆಯೇ ಮುಂದುವರೆದುಕೊಂಡು ಹೋಗಲಿದೆ; ಅದರಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅನುದಾನ ಸರಿಯಾಗಿ ಸದ್ಭಳಕೆ ಕೆಲವೊಂದು ಇಲಾಖೆಗಳಲ್ಲಿ ಕಳೆದ ಬಜೆಟ್ ನಲ್ಲಿ ನೀಡಿದ ಹಣವೇ ಖರ್ಚಾಗುತ್ತಿಲ್ಲವೆಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ನನ್ನ ಇಲಾಖೆ ಇಷ್ಟು ವರ್ಷ ಬೇರೆ ರೀತಿಯಲ್ಲಿ ಇತ್ತು.…
ಬೆಳಗಾವಿ : ಕಳೆದ ವರ್ಷ ರಾಜ್ಯದಲ್ಲಿ ಬಳ್ಳಾರಿ ಬೆಳಗಾವಿ ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸರಣಿ ಬಾಣಂತಿಯರ ಸಾವು ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೆಳೆಸಿದ್ದು ಇದೀಗ ಬೆಳಗಾವಿಯ ಬಿಮ್ಸ್ ನಲ್ಲಿ ಮತ್ತೊರ್ವ ಬಾಣಂತಿಯ ಸಾವಾಗಿರುವುದು ಪ್ರಕರಣ ವರದಿಯಾಗಿದೆ. ಮೃತ ಬಾಣಂತಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಲಗಮೇಶ್ವರ ಗ್ರಾಮದ ಕೀರ್ತಿ ನೇಸರಗಿ(19) ಮೃತ ಬಾಣಂತಿ ಎನ್ನಲಾಗಿದ್ರ್. ಕೀರ್ತಿಗೆ ಎರಡು ದಿನದ ಹಿಂದೆ ವೈದ್ಯರು ಸಿಜರಿನ್ ಮಾಡಿ ಹೆರಿಗೆ ಮಾಡಿದ್ದರು. ಆದರೆ ಕೀರ್ತಿಗೆ ತೀವ್ರ ರಕ್ತಸ್ರಾವವಾಗಿ ಇದೀಗ ಸಾವನಪ್ಪಿದ್ದಾರೆ. ಬಾಣಂತಿ ಕೀರ್ತಿಗೆ ರಕ್ತಸ್ರಾವ ಆಗುತ್ತಿದ್ದರೂ ಕೂಡ ಯಾವುದೇ ಐಸಿಯು ನಲ್ಲಿ ಚಿಕಿತ್ಸೆ ಕೊಡಿಸದೆ ವಾರ್ಡ್ ಗೆ ಶಿಫ್ಟ್ ಮಾಡಿದ್ದರು. ಹಾಗಾಗಿ ಕೀರ್ತಿ ಸಾವನಪ್ಪಿದ್ದಾಳೆ ಎಂದು ಮೃತ ಕೀರ್ತಿಯ ಕುಟುಂಬಸ್ಥರು ವೈದ್ಯರ ವಿರುದ್ಧ ಗಂಭೀರವಾದ ಆರೋಪ ಮಾಡುತ್ತಿದ್ದಾರೆ. ಘಟನೆ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣಕನ್ನಡ : ಇತ್ತೀಚಿಗೆ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ವಯಸ್ಸಿನ ಮಿತಿ ಎನ್ನದೆ ಹೃದಯಘಾತಕ್ಕೆ ಅನೇಕರು ಬಲಿಯಾಗುತ್ತಿದ್ದಾರೆ. ಇದೀಗ ರೈಲಲ್ಲಿ ಪ್ರಯಾಣಿಸುತ್ತಿರುವಾಗಲೇ ಗ್ರಾಮ ಪಂಚಾಯಿತಿ ಸದಸ್ಯರು ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ. ಹೃದಯಾಘಾತಕ್ಕೆ ಬಲಿಯಾದ ವ್ಯಕ್ತಿಯನ್ನು ಕುತ್ತಾರು ಮದನಿನಗರ ನಿವಾಸಿ ಮುನ್ನೂರು ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ಅಝೀಝ್ ಆರ್.ಕೆ.ಸಿ (42) ಎಂದು ತಿಳಿದುಬಂದಿದೆ.ವ್ಯವಹಾರ ನಿಮಿತ್ತ ದೆಹಲಿಗೆ ತೆರಳಿ ವಾಪಸ್ಸಾಗುತ್ತಿದ್ದಾಗ ದಾರಿ ಮಧ್ಯೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ಸಮೀಪ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಮುಂದಿನ ನಿಲ್ದಾಣ ಕುಮಟಾದಲ್ಲಿ ಆಸ್ಪತ್ರೆಗೆ ಕೊಂಡೊಯ್ಯುವ ಪ್ರಯತ್ನ ಮಾಡಲಾಯಿತಾದರೂ ಅದಾಷ್ಟರಲ್ಲಾಗಲೇ ಅಬ್ದುಲ್ ಅಝೀಝ್ ನಿಧನರಾಗಿದ್ದರು ಎಂದು ಮೂಲಗಳು ತಿಳಿಸಿವೆ. ಮೃತರು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದರು ಎನ್ನಲಾಗಿದೆ.ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಇಂದು ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲೆ ವಿಶ್ವವಿದ್ಯಾಲಯಗಳ ಸ್ಥಗಿತ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದು, ಮೈಸೂರು ವಿಶ್ವವಿದ್ಯಾಲಯದಲ್ಲಿ ಸರ್ಟಿಫಿಕೇಟ್ ತೆಗೆದುಕೊಳ್ಳುವುದಕ್ಕೂ ಚಾಮರಾಜನಗರ, ಮಂಡ್ಯ ವಿಶ್ವವಿದ್ಯಾಲಯ ಸರ್ಟಿಫಿಕೇಟ್ ತೆಗೆದುಕೊಳ್ಳುವುದಕ್ಕೂ ವ್ಯತ್ಯಾಸವಿದೆ. ಬಿವೈ ವಿಜಯೇಂದ್ರ ಅಕ್ಕನ ಮಗ ಪಿಇಎಸ್ ವಿಶ್ವವಿದ್ಯಾಲಯ ಓದಿದ್ದರು ಪ್ರವೇಶ ಸಿಗಲಿಲ್ಲ ಎಂದು ತಿಳಿಸಿದರು. ವಿದೇಶಿ ವಿಶ್ವವಿದ್ಯಾಲಯದಲ್ಲಿ ಬಿವೈ ವಿಜಯೇಂದ್ರ ಅಕ್ಕನ ಮಗನಿಗೆ ಪ್ರವೇಶ ಸಿಗಲಿಲ್ಲ. ಎಸ್ ಎಂ ಕೃಷ್ಣ ವಿದೇಶಾಂಗ ಸಚಿವರಾಗಿದ್ದಾಗ ವಿದೇಶಿ ವಿಶ್ವ ವಿದ್ಯಾಲಯದಲ್ಲೂ ಪ್ರವೇಶ ಸಿಗಲಿಲ್ಲ. ಕೆಲವು ವಿವಿಗಳನ್ನು ಬೇರೆ ವಿವಿಗಳ ಜೊತೆ ವಿಲೀನ ಮಾಡುತ್ತಿದ್ದೇವೆ ಅಷ್ಟೇ. ವಿಶ್ವವಿದ್ಯಾಲಯಗಳು ನಾವು ಮುಚ್ಚುತ್ತಿದ್ದೇವೆ ಅಂತ ಅಲ್ಲ ಎಂದು ತಿಳಿಸಿದರು. ಬೆಂಗಳೂರು ವಿವಿ, ಮೈಸೂರು ವಿವಿಗೆ ಅವುಗಳದ್ದೇ ಆದಂತಹ ಸ್ಥಾನ ಮತ್ತು ಮೌಲ್ಯವಿದೆ. ಹೊಸ ವಿಶ್ವವಿದ್ಯಾಲಯಗಳನ್ನು ವಿಲೀನ ಮಾಡುತಿದ್ದೇವೆ.ಆದರೆ ಯಾವುದೇ ವಿಶ್ವವಿದ್ಯಾಲಯಗಳನ್ನು ಮುಚ್ಚಿಲ್ಲ ಹೊಸ ವಿಶ್ವವಿದ್ಯಾಲಯಗಳಿಗೆ ಯಾವುದೇ ಉಪನ್ಯಾಸಕರು ಹೋಗುತ್ತಿರಲಿಲ್ಲ.ನೀವು ವಿಭಜನೆ ಮಾಡುತ್ತೀರಿ, ನಾವು ವಿಲೀನ ಮಾಡುತ್ತೇವೆ. ನಮಗೂ ನಿಮಗೂ ಇಷ್ಟೆ ವ್ಯತ್ಯಾಸವಿದೆ ನೀವು…














