Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಯುವಕ ಆಸ್ತಿ ವಿದ್ವಾದ ವಿಚಾರವಾಗಿ ವಿಜಯಪುರ ಜಿಲ್ಲಾಧಿಕಾರಿಯನ್ನು ಬಿಜೆಪಿ ಮುಖಂಡರ ನಿಯೋಗ ಎಂದು ಭೇಟಿ ಆಯಿತು. ಈ ವೇಳೆ ಬಿಜೆಪಿ ಮುಖಂಡರು ನೀವು ರೈತರ ಅಹವಾಲನ್ನು ಆಲಿಸಿತು. ಈ ವೇಳೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ರೈತರಿಗೆ ನೀಡಿದ ನೋಟಿಸ್ ಹಿಂಪಡೆಯಲಾಗಿದೆ ಎಂದು ಸ್ಪಷ್ಟಪಡಿಸಿದರು. ಜಿಲ್ಲೆಯ ಸಿಂದಗಿ, ಪಡಗಾನೂರು ಹಡಗಲಿ ಗ್ರಾಮಕ್ಕೆ ಬಿಜೆಪಿ ನಿಯೋಗ ಭೇಟಿ ನೀಡಿತು. ರೈತರಿಂದ ದಾಖಲೆ ಮಾಹಿತಿ ಸಂಗ್ರಹಿಸಿರುವ ಬಿಜೆಪಿ ನಂತರ ಜಿಲ್ಲಾಧಿಕಾರಿ ಭೇಟಿಗೆ ಆಗಮಿಸಿತು. ಡಿಸಿ ಅವರನ್ನು ಭೇಟಿಯಾದ ಸಂಸದ ಗೋವಿಂದ ಕಾರಜೋಳ ನೇತೃತ್ವದ ನಿಯೋಗ ಡಿಸಿಗೆ ಪ್ರೊಸೀಡಿಂಗ್ ಕಾಪಿ ಕೇಳಿದ್ದಾರೆ. ನೋಟಿಸ್ ಕೊಡದೆ ಪಹಣಿಯಲ್ಲಿ ವಕ್ಫ್ ಹೆಸರು ಉಲ್ಲೇಖವಾಗಿದೆ ಯಾಕೆ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಜಿಲ್ಲಾಧಿಕಾರಿ ಇಂಡಿ, ಚಡಚಣದಲ್ಲಿ ಮಾತ್ರ 44 ರೈತರ ಜಮೀನಿನಲ್ಲಿ ಇಂದಿಕರಣ ಮಾಡಿದ್ದೇವೆ. ರೈತರಿಗೆ ಕೊಟ್ಟ ನೋಟಿಸ್ ರದ್ದು ಮಾಡಿದ್ದೇವೆ. ರೈತರ ರೈತರಿಗೆ ನೀಡಿದ್ದ ನೋಟಿಸ್ ಈಗಾಗಲೇ ರದ್ದುಗೊಳಿಸಿದ್ದೇವೆ ಎಂದರು. ಜಿಲ್ಲಾಧಿಕಾರಿ ಜೊತೆಗೆ ಬಿಜೆಪಿ ನಿಯೋಗದ ವಕೀಲ…
ಬೆಂಗಳೂರು : ವಿಜಯಪುರದಲ್ಲಿ ವಕ್ಫ್ ಆಸ್ತಿ ಹೆಸರಲ್ಲಿ ರೈತರಿಗೆ ನೋಟಿಸ್ ನೀಡಿದ್ದನ್ನು ವಿರೋಧಿಸಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಅವರು ನಮ್ಮ ದೇಶದಲ್ಲಿ ಇದ್ದದ್ದು ಸಂವಿಧಾನ ಮಾತ್ರ. ಷರಿಯಾ ಬೇಕು ಅಂದ್ರೆ ಪಾಕಿಸ್ತಾನಕ್ಕೆ ಹೋಗಿ ಎಂದು ಎಂಎಲ್ಸಿ ಸಿ.ಟಿ.ರವಿ ಅವರು ಸಚಿವ ಜಮೀರ್ ಅಹ್ಮದ್ ವಿರುದ್ಧ ಹರಿಹಾಯ್ದಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಾನ ಕೊಟ್ಟಿದ್ದೇ ನಿಜವಾಗಿದ್ರೆ, ಸೂಕ್ತ ದಾಖಲೆ ಇದ್ರೆ ಅದು ವಕ್ಫ್ ಆಸ್ತಿ ಆಗುತ್ತದೆ. ಸರ್ಕಾರ ಗ್ರ್ಯಾಂಟ್ ಕೊಟ್ರೂ ಅದು ವಕ್ಫ್ ಆಸ್ತಿ ಅಂತ ಪರಿಗಣಿಸಬಹುದು. ವಕ್ಫ್ ಬೋರ್ಡ್ ಖರೀದಿಸಿದ್ರೆ ಅದು ವಕ್ಫ್ ಆಸ್ತಿ ಅಂತ ಹೇಳಬಹುದು. ಆದರೆ ಸ್ವಯಂಪ್ರೇರಿತವಾಗಿ ವಕ್ಫ್ ಎಂದು ಘೋಷಿಸಿಕೊಳ್ಳುವ ಮತ್ತು ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡಿದ್ದರೆ ಅದು ವಕ್ಫ್ ಆಸ್ತಿ ಆಗಲ್ಲ ಎಂದರು. ವಕ್ಫ್ ಆಸ್ತಿ ಹೆಸರಲ್ಲಿ ರೈತರಿಗೆ ನೋಟಿಸ್ ಕೊಡೋದನ್ನು ತಕ್ಷಣ ನಿಲ್ಲಿಸಲಿ. ಜಮೀರ್ ಅಹ್ಮದ್ ಜಿಲ್ಲಾ ಪ್ರವಾಸ ಮಾಡಿ, ಅಧಿಕಾರಿಗಳಿಗೆ ಧಮ್ಕಿ ಹಾಕಿ ನೋಟಿಸ್…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ನಲ್ಲಿ ನ್ಯಾ.ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠದಲ್ಲಿ ನಟ ದರ್ಶನ್ ಅವರು ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಎಸ್.ವಿಶ್ವಜೀತ್ ಶೆಟ್ಟಿ ಅವರು ನಟ ದರ್ಶನ್ ಜಾಮೀನು ಅರ್ಜಿಯ ಕುರಿತು ನಾಳೆಗೆ ಆದೇಶ ಕಾಯ್ದಿರಿಸಿದರು. ವಿಚಾರಣೆಯ ವೇಳೆ ದರ್ಶನ್ ಪರ ಹಿರಿಯ ವಕೀಲ ಸಿ ವಿ ನಾಗೇಶ್ ವಾದ ಮಂಡಿಸಿ ದರ್ಶನ್ ಬೆನ್ನುಮೂಳೆ ಹಾಗೂ ಎಂ ಆರ್ ಐ ಸ್ಕ್ಯಾನ್ ಮಾಡಿಸಿದ್ದಾರೆ. ರೋಗಿಗೆ ಬೆನ್ನಿನ ನರದ L5 ಹಾಗೂ S1 ಡಿಸ್ಕ್ ನ್ಯೂನ್ಯತೆ ಕಂಡು ಬಂದಿದೆ. ಅಕ್ಟೋಬರ್ 23ರಂದು ದರ್ಶನ ಜೊತೆಗೆ ಸಮಾಲೋಚಿಸಿ ಶಸ್ತ್ರಚಿಕಿತ್ಸೆಯ ಬಗ್ಗೆ ದರ್ಶನ್ ಗೆ ಮಾಹಿತಿ ನೀಡಲಾಗಿದೆ. ಶಸ್ತ್ರಚಿಕಿತ್ಸೆಯ ಪರಿಣಾಮಗಳ ಬಗ್ಗೆಯೂ ಕೂಡ ವೈದ್ಯರು ದರ್ಶನ್ ಅವರಿಗೆ ಮಾಹಿತಿ ನೀಡಿದ್ದಾರೆ. ನರದ ತೊಂದರೆಯಿಂದ ಕಾಲಿನಲ್ಲಿ ಸ್ಪರ್ಶ ಶಕ್ತಿ ಕಳೆದುಕೊಳ್ಳುವಂತಾಗಲಿದೆ ಅಲ್ಲದೆ ಮೂತ್ರ ನಿಯಂತ್ರಣದ ಸಮಸ್ಯೆ ಕೂಡ ಕಾಣಿಸಿಕೊಳ್ಳಬಹುದು…
ಕೋಲಾರ : ರಾತ್ರಿ ಪಾಳಯದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳಾ ಎಎಸ್ಐ ಮೇಲೆ ಜಾರ್ಖಂಡ್ ಮೂಲದ ವ್ಯಕ್ತಿ ಒಬ್ಬ ಚಾಕು ಇರಿದು ಭೀಕರವಾಗಿ ಹಲ್ಲೆ ಮಾಡಿ ಗಾಯಗೊಳಿಸಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ನಡೆದಿದೆ. ಹೌದು ರಾತ್ರಿಯ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಪೊಲೀಸ್ ಎಸ್‌ಐಗೆ ಜಾರ್ಖಂಡ್ ಮೂಲದ ಅಜಯ್ ಸಿಂಗ್ ಎಂಬಾತ ಚಾಕು ಇರಿದಿದ್ದು, ಎಎಸ್‌ಐ ಬಾನು ಚಾಕು ಇರಿತಕ್ಕೊಳಗಾಗಿದ್ದಾರೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾತ್ರಿಯ ಪಾಳಿಯಲ್ಲಿ ತಿರುಗುತ್ತಿದ್ದ ಎ ಎಸ್ ಐ ಬಾನು ಅವರು, ಜಾರ್ಖಂಡ್ ಮೂಲದ ಅಜಯ್ ಸಿಂಗನನ್ನು ಇಷ್ಟೊತ್ತಿನಲ್ಲಿ ಯಾಕೆ ಓಡಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ ಇದಕ್ಕೆ ಅಜಯ್ ಸಿಂಗ್ ಎಎಸ್ಐ ಬಾಲು ಮೇಲೆ ಚಾಕು ಇರಿದು ಹಲ್ಲೆ ಮಾಡಿದ್ದಾನೆ.ಆರೋಪಿ ಅಜಯ್ ಸಿಂಗ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನ್ಯಾಯಾಧೀಶರಾದಂತಹ ವಿಶ್ವಜೀತ್ ಶೆಟ್ಟಿ ಅವರ ಪೀಠದಲ್ಲಿ ನಡೆಯಿತು.ವಿಚಾರಣೆ ವೇಳೆ ದರ್ಶನ್ ಪರ ವಕೀಲ ಸಿ ವಿ ನಾಗೇಶ್ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರ ಪ್ರಕರಣವನ್ನು ಉಲ್ಲೇಖಿಸಿ ವಾದ ಮಂಡಿಸಿದರು ಡಿಕೆ ಶಿವಕುಮಾರ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಸಿ ಜಾಮೀನು ಉಲ್ಲೇಖಿ ಸಿಸಿ ನಾಗೇಶ್ ವಾದ ಮಂಡಿಸಿದ್ದು, ಡಿಕೆ ಶಿವಕುಮಾರ್ ಅವರಿಗಿದ್ದ ಸಮಸ್ಯೆ ಗಿಂತ ಹೆಚ್ಚಿನ ಅನಾರೋಗ್ಯ ದರ್ಶನ್ ಅವರಿಗೆ ಇದೆ. 2022 23ರಲ್ಲಿಯೂ ಈ ಬಗ್ಗೆ ಚಿಕಿತ್ಸೆ ಪಡೆಯಲಾಗಿದೆ. ಬೆನ್ನು ಹುರಿಯ ಸಮಸ್ಯೆಯಿಂದ ಈಗಾಗಲೇ ಕಾಲು ಮರಗಟ್ಟುವಿಕೆ ಆಗುತ್ತಿದೆ. ಹೀಗೆ ಮುಂದುವರೆದರೆ ಇನ್ನಷ್ಟು ಸಮಸ್ಯೆ ಆಗಬಹುದು. ಡಿಸ್ಕ್ ನಲ್ಲಿನ ಸಮಸ್ಯೆಯಿಂದ ನರದಿಂದ ರಕ್ತ ಪರಿಚಲನೆ ಆಗುತ್ತಿಲ್ಲ. ಹೀಗಾಗಿ ಶಸ್ತ್ರಚಿಕಿತ್ಸೆ ಅಗತ್ಯವಿದೆ ಪಾರಂಪರಿಕ ಚಿಕಿತ್ಸೆಯಿಂದ ಇದು ಪರಿಹಾರ ಆಗುವುದಿಲ್ಲ. ಶಸ್ತ್ರಚಿಕಿತ್ಸೆಯಿಂದ ಮಾತ್ರವೇ ಈ ಸಮಸ್ಯೆ…
ಬೆಂಗಳೂರು : ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಪರವಾಗಿ ನಿರ್ಣಯ ತೆಗೆದುಕೊಂಡಿದ್ದೇವೆ. ಸಾಮಾಜಿಕ ನ್ಯಾಯ ಸುಮ್ಮ ಸುಮ್ಮನೆ ಬರುವುದಿಲ್ಲ. ಇಂಥಾ ತೀರ್ಮಾನ ಮಾಡಬೇಕಾಗುತ್ತದೆ.ಒಳಮೀಸಲಾತಿಗಾಗಿ ಮಾದಿಗ ಸಮುದಾಯ ದಶಕಗಳಿಂದ ಹೋರಾಟ ನಡೆಸಿದೆ. ಈಗ ಸುಪ್ರೀಂಕೋರ್ಟ್ ಕೂಡ ತೀರ್ಪು ನೀಡಿದೆ. ನಾವು ಜಾರಿ ಮಾಡಲೇಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಒಳಮೀಸಲಾತಿ ಕುರಿತ ಸಚಿವ ಸಂಪುಟದ ನಿರ್ಣಯಕ್ಕಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರನ್ನ ಅಭಿನಂದಿಸಿದ ಮಾದಿಗ ಸಮುದಾಯದ ರಾಜ್ಯ ಮುಖಂಡರು, ಒಳಮೀಸಲಾತಿ ಹೋರಾಟದ ನಾಯಕರು, ಪದಾಧಿಕಾರಿಗಳು ಮತ್ತು ಸಮುದಾಯದ ಜನಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, 101 ಪರಿಶಿಷ್ಟ ಜಾತಿಗಳಿವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಮುಖ್ಯ. ಎಲ್ಲರನ್ನೂ ಸಮಾಧಾನ ಮಾಡುವುದು ಸಾಧ್ಯವಿಲ್ಲದಿದ್ದರೂ, ಶೇ.90 ರಷ್ಟು ಸಮುದಾಯಗಳಿಗೆ ಸಮಾಧಾನ ಆಗುವ ತೀರ್ಮಾನ ತೆಗೆದುಕೊಳ್ಳಬೇಕಿದೆ. ಇದನ್ನು ನಮ್ಮ ಸರ್ಕಾರ ಮಾಡಲಿದೆ ಎಂದರು. ಗೃಹ ಸಚಿವ ಪರಮೇಶ್ವರ್ ಅವರ ನಿವಾಸದಲ್ಲಿ ನಡೆದ ದಲಿತ ಶಾಸಕರ ಸಭೆಯಲ್ಲಿ, “ಒಳ ಮೀಸಲಾತಿಗೆ ತಮ್ಮ ವಿರೋಧ ಇಲ್ಲ”…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಅಕ್ರಮ ಎಸಗಿದವರಿಗೆ ಇಡಿ ಅಧಿಕಾರಿಗಳು ಚುರುಕು ಮುಟ್ಟಿಸುತ್ತಿದ್ದು, ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಿನ್ನೆ ಮುಡಾದ ಮಾಜಿ ಆಯುಕ್ತ ನಟೇಶ್ ಅವರ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿತ್ತು. ಇದೀಗ ಇಡಿ ಹಿಟ್ ಲಿಸ್ಟ್ ನಲ್ಲಿ 20ಕ್ಕೂ ಹೆಚ್ಚು ಜನಪ್ರತಿನಿಧಿಗಳು ಹಾಗೂ ಉದ್ಯಮಿಗಳ ಹೆಸರು ಇದೆ ಎನ್ನಲಾಗಿದೆ. ಅಲ್ಲದೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಪಟ್ಟಂತಹ ಬೆಂಗಳೂರಿನ ಜೆಪಿ ನಗರದಲ್ಲಿರುವ ಬಿಲ್ಡರ್ ಮಂಜುನಾಥ್ ನಿವಾಸದ ಮೇಲು ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೇ ನಡೆಸಿದ್ದರು. ಅದಾದ ಬಳಿಕ ಇನ್ನೊಬ್ಬ ಮುಡಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರ ನಿವಾಸದ ಮೇಲು ಇಡೀ ಅಧಿಕಾರಿಗಳು ದಾಳಿ ಮಾಡಿದ್ದರು. ನಿನ್ನೆ ಬೆಳಿಗ್ಗೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕ ಕೂಡಲೇ ವಾಕಿಂಗ್ ಗೆ ಹೋಗಿದ್ದ ದಿನೇಶ್ ಕುಮಾರ್ ಅಲ್ಲಿಂದಲೇ ಪರಾರಿಯಾಗಿದ್ದಾರೆ. ಹಾಗಾಗಿ ಇಂದು ಈಡೇ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ದಿನೇಶ್…
ವಿಜಯಪುರ : ಜಿಲ್ಲೆಯ ಸಾವಿರಾರು ಎಕರೆ ಭೂಮಿ ವಕ್ಫ್ ಭೂಮಿಗೆ ಸೇರಿದ್ದು ಎಂದು ಸರ್ಕಾರದಿಂದ ರೈತರಿಗೆ ನೋಟಿಸ್ ನೀಡಿದ ವಿಚಾರವಾಗಿ, ನಿನ್ನೆ ಸಚಿವರು ಜಂಟಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದರು.ಇದೀಗ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ವಿರಕ್ತ ಮಠದ ಆಸ್ತಿ ಕೂಡ ವಕ್ಫ್ ಗೆ ಆಸ್ತಿಗೆ ಸೇರಿದೆ ಎಂದು ಹೇಳಲಾಗುತ್ತಿದೆ. ಹೌದು ಸಿಂದಗಿ ಪಟ್ಟಣದ ವಿರಕ್ತ ಮಠದ ಆಸ್ತಿ ಇದೀಗ ವಕ್ಫ್ ಆಸ್ತಿಯಾಗಿದೆ. ಸರ್ವೆ ನಂ 1020 ರ ಅಸ್ತಿಯಲ್ಲಿ ಕಬರಸ್ಥಾನ ವಕ್ಫ್ ಬೋರ್ಡ್ ಎಂದು ನೋಂದಣಿಯಾಗಿದೆ.ಸಿದ್ದಲಿಂಗ ಸ್ವಾಮಿಜಿಗಳು ಈ ಮಠದ ಪೀಠಾಧಿಪತಿಗಳಾಗಿದ್ದಾಗ ಪಹಣಿಯ ಕಾಲಂ ನಂ 11 ಖಾಲಿ ಇತ್ತು. 2018-19 ರಲ್ಲಿ ಖಾಲಿ ಇದ್ದ ಕಲಂ ನಲ್ಲಿ ವಕ್ಫ್ ಬೋರ್ಡ್ ಎಂದು ಸೇರ್ಪಡೆಯಾಗಿದೆ. 13ನೇ ಶತಮಾನದಲ್ಲಿ ಸ್ಥಾಪನೆಯಾಗಿರುವ ಮಠ ಖಬರಸ್ಥಾನ ವಕ್ಫ್ ಬೋರ್ಡ್ ಆಗಿದ್ದು ಹೇಗೆ? ವಕ್ಫ್ ಬೋರ್ಡ್‌ಗೆ 1.28 ಎಕರೆ ಆಸ್ತಿಯನ್ನು ಸೇರಿಸಿದ್ದಕ್ಕೆ ಮಠದ ಭಕ್ತರ ತೀವ್ರ ವಿರೋಧ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದೆ ರೀತಿ ಸಿಂದಗಿ ತಾಲೂಕಿನಲ್ಲಿ…
ಬೆಂಗಳೂರು : ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ವಕ್ಫ್ ಆಸ್ತಿಯೆಂದು ಯಾವ ರೈತರಿಗೂ ನೋಟೀಸ್ ಕೊಟ್ಟಿಲ್ಲ. ಆದ್ದರಿಂದ ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ. ಈ ವಿಚಾರದಲ್ಲಿ ಬಿಜೆಪಿ ಬೇಕೆಂದೇ ರಾಜಕೀಯ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಇಂದು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿಜಯಪುರ ಜಿಲ್ಲಾ ಉಸ್ತುವಾರಿ ಮತ್ತು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಮಾತನಾಡಿ, ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ತಿಳಿಸಿದ್ದಾರೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ಒಂದು ಕಾಲಕ್ಕೆ 14,201.32 ಎಕರೆ ವಕ್ಫ್ ಮಂಡಳಿ ಆಸ್ತಿಯಾಗಿತ್ತು. ಈ ಪೈಕಿ ಭೂ ಸುಧಾರಣಾ ಕಾಯ್ದೆಯಡಿ 11,835.29 ಎಕರೆ ಮತ್ತು ಇನಾಂ ರದ್ದತಿ ಕಾಯ್ದೆಯಡಿ 1,459.26 ಎಕರೆಯನ್ನು ರೈತರಿಗೆ ಮಂಜೂರು ಮಾಡಲಾಗಿದೆ ಎಂದರು. ಜಮೀರ್ ಅಹ್ಮದ್ ಮಾತನಾಡಿ, ಹೊನವಾಡದಲ್ಲಿ…
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಬಾಬುಸಾಬ್ ಪಾಳ್ಯ ದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಭೀಕರ ದುರಂತದಲ್ಲಿ 8 ಜನ ಕಾರ್ಮಿಕರು ಮೃತಪಟ್ಟಿದ್ದರು. ಇದೀಗ ಮೃತ ಕುಟುಂಬಸ್ಥರಿಗೆ ಸಚಿವ ಸಂತೋಷ್ ಲಾಡ್ ಪರಿಹಾರದ ಚೆಕ್ ವಿತರಿಸಿದ್ದಾರೆ. ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ 8 ಜನರು ಕಾರ್ಮಿಕರು ಸಾವನ್ನಪ್ಪಿದ್ದರು. ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಸೂಕ್ತ ಮಾಹಿತಿ ಪಡೆದುಕೊಂಡರು.ಬಳಿಕ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಘೋಷಿಸಿದ್ದಾರೆ. ಇದೀಗ ಬೆಂಗಳೂರಿನ ವಿಕಾಸ ಸೌಧದಲ್ಲಿ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೃತ ಕುಟುಂಬಸ್ಥರಿಗೆ 2.04 ಲಕ್ಷ ಪರಿಹಾರದ ಚೆಕ್ ವಿತರಿಸಿದ್ದಾರೆ.













