Author: kannadanewsnow05

ಕಲಬುರ್ಗಿ : ಸುಮಾರು 13 ವರ್ಷಗಳ ಕಾಲ ಪ್ರೀತಿಸಿದ ಹುಡುಗಿ ಬೇರೊಬ್ಬನ ಜೊತೆಗೆ ಮದುವೆಯಾಗಿದ್ದು ಅಲ್ಲದೆ,ಮದುವೆಯಾದ ಬಳಿಕ ಸುಮ್ಮನಿರದೆ ಪುನಃ ತನ್ನನ್ನು ಮದುವೆಯಾಗು ಇಲ್ಲವಾದರೆ ಪೊಲೀಸ್ ಕಂಪ್ಲೇಂಟ್ ಕೊಡುವುದಾಗಿ ಬೆದರಿಕೆ ಒಡ್ಡಿದ್ದಾಳೆ. ಇದರಿಂದ ಮನನೊಂದ ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮಡಕಿ ಗ್ರಾಮದಲ್ಲಿ ನಡೆದಿದೆ. ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಯುವಕನನ್ನು ದೇವೇಂದ್ರಪ್ಪ ಕಲಕೇರಿ (32) ಎಂದು ತಿಳಿದುಬಂದಿದೆ. ದೇವಿಂದ್ರಪ್ಪ ಅದೇ ಗ್ರಾಮದ ಯುವತಿಯನ್ನು ಪ್ರೀತಿಸಿದ್ದ. ನಾಲ್ಕು ವರ್ಷದ ಹಿಂದೇಯೆ ಯುವತಿ ಬೇರೊಬ್ಬನನ್ನು ಮದುವೆಯಾಗಿ ಬೆಂಗಳೂರಿನಲ್ಲಿ ಚಿಕ್ಕಪ್ಪ ಹಾಗೂ ಗಂಡನ ಜೊತೆಗೆ ವಾಸಿಸುತ್ತಿದ್ದಳು. ಮದುವೆ ಆದರೂ ಕೂಡ ದೇವೇಂದ್ರಪ್ಪನಿಗೆ ಕರೆ ಮಾಡಿ ನನ್ನನ್ನು ಮದುವೆಯಾಗುವಂತೆ ಎಂದು ದುಂಬಾಲು ಬಿದ್ದಿದ್ದಳು. ಯುವತಿ ಒತ್ತಾಯಿಸಿದರಿಂದ ದೇವೇಂದ್ರಪ್ಪ ಬೆಂಗಳೂರಿಗೆ ತೆರಳಿದ್ದಾನೆ.ಅಲ್ಲಿ ಚಿಕ್ಕಪ್ಪ ಎಂದು ಪರಿಚಯಿಸಿದ್ದ ವ್ಯಕ್ತಿಯೊಂದಿಗೆ ಮಲಗಿರುವುದನ್ನು ನೋಡಿ ತಾನು ಆಘಾತಗೊಂಡಿದ್ದಾಗಿಯೂ, ನಂತರ ನಡೆದ ಮಾತಿನ ಚಕಮಕಿ ವೇಳೆ ಆ ವ್ಯಕ್ತಿಗೆ ಚಾಕು…

Read More

ಹಾವೇರಿ : ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆಗೆ ಭರದ ಸಿದ್ಧತೆ ನಡೆದಿದ್ದು ಈಗಾಗಲೇ ಉಭಯ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿವೆ. ಇನ್ನು ಶಿಗ್ಗಾವಿ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಸಂಸದ ಮಂಜುನಾಥ್ ಕುನ್ನೂರ್ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿದೆ. ಹೌದು ಶಿಗ್ಗಾವಿಯಲ್ಲಿ ಯಾಸಿರ್​ ಪಠಾಣ್​​​ಗೆ ಕಾಂಗ್ರೆಸ್​​​ ಟಿಕೆಟ್​ ನೀಡಿದ್ದಕ್ಕೆ ಬಂಡಾಯವೆದ್ದ ಅಜ್ಜಂಪೀರ್​ ಖಾದ್ರಿ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆಗೆ ಚರ್ಚಿಸಿದ ಬಳಿಕ ನಾಮಪತ್ರ ಹಿಂಪಡೆಯುವುದಾಗಿ ತಿಳಿಸಿದ್ದಾರೆ. ಆದರೆ ಇದೀಗ ಅಗತ್ಯ ಹಾಗೂ ಸಮರ್ಪಕ ವಿವರ ನೀಡಿದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಮಂಜುನಾಥ್ ಕುನ್ನುರ್ ಸಲ್ಲಿಸಿದ ನಾಮಪತ್ರ ತಿರಸ್ಕೃತಗೊಂಡಿದೆ. ತಮ್ಮ ಪುತ್ರ ರಾಜು ಕುನ್ನೂರ್ ಅವರಿಗೆ ಟಿಕೆಟ್​ ಕೈತಪ್ಪಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಮಂಜುನಾಥ್ ಅವರು ಪಕ್ಷಕ್ಕೆ ಈ ಮೂಲಕ ಬಂಡಾಯದ ಬಿಸಿಯನ್ನು ಮುಟ್ಟಿಸಿದ್ದಾರೆ. ಇನ್ನು ಯಾವುದೇ ಬಂಡಾಯದ ಬಿಸಿ ಹೆಚ್ಚಾಗಲು ಬಿಡಲ್ಲ. ಎಲ್ಲರೂ ಒಟ್ಟಾಗಿ ಚುನಾವಣೆಯ ಎದುರಿಸುತ್ತೇವೆ. ಖಾದ್ರಿ ಅವರು ತಮ್ಮ ನಾಮಪತ್ರವನ್ನು ವಾಪಸ್​ ಪಡೆಯಲಿದ್ದಾರೆ ಎಂದು ಕೆಪಿಸಿಸಿ…

Read More

ಹೈದ್ರಾಬಾದ್ : ಇತ್ತೀಚಿನ ದಿನಗಳಲ್ಲಿ ಯುವ ಜನತೆಗೆ ಮನೆ ಊಟಕ್ಕಿಂತ ಸ್ಟ್ರೀಟ್ ಫುಡ್, ಜಂಕ್ ಫುಡ್ ಹಾಗೂ ಹೋಟೆಲ್ ಗಳಲ್ಲಿನ ಊಟ ನೆಚ್ಚಿನ ಆಹಾರವಾಗಿದೆ. ಆದರೆ ಈ ಒಂದು ಆಹಾರ ಪದ್ಧತಿ ನಮ್ಮ ದೇಹದ ಮೇಲೆ ಎಷ್ಟು ದುಷ್ಪರಿಣಾಮ ಬೀರುತ್ತದೆ ಎಂಬುದು ಅವರಿಗೆ ಅರಿವಿಲ್ಲ. ಇದೀಗ ಹೈದರಾಬಾದ್ ನಲ್ಲಿ ಮೊಮೋಸ್ ತಿಂದು ಓರ್ವ ಮಹಿಳೆ ಸಾವನಪ್ಪಿದ್ದು, 50 ಜನರು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಹೌದು ಈ ಒಂದು ಘಟನೆ ಹೈದ್ರಾಬಾದ್ ನ ಬಂಜಾರ ಹಿಲ್ಸ್ ಪಿಎಸ್ ನಲ್ಲಿ ನಡೆದಿದೆ. ಮೃತ ಯುವತಿಯನ್ನು ಸಿಗದಕುಂಟಾ ಬಸ್ತಿಯ ನಿವಾಸಿಯಾದ ರೇಷ್ಮಾ (29) ಎಂದು ತಿಳಿದುಬಂದಿದೆ. ರೇಷ್ಮಾ ಬೀದಿಬದಿ ಆಹಾರ ತಿಂದಿದ್ದಾಳೆ. ಆರೋಗ್ಯದಲ್ಲಿ ಏರುಪೇರು ಕಂಡುಬಂದ ಕೂಡಲೇ ಮನೆಯವರು ನಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಆದರೆ ಆಕೆಯ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಪ್ರತಿ ವಾರದಂತೆ ಈ ವಾರವೂ ನಂದಿನಗರದಲ್ಲಿ ಸಂತೆ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಅಲ್ಲಿ ತಯಾರಾದ ಮೊಮೊಸ್ ಗಳನ್ನು ಹಲವರು ಖರೀದಿಸಿ ತಿಂದರು. ಮೊಮೊಸ್…

Read More

ಬೆಳಗಾವಿ : ರೈತರೊಬ್ಬರ ಹೊಲದಲ್ಲಿ ಈಜಲು ತೆರಳಿದ್ದಾಗ ವಸತಿ ನಿಲಯದ ವಿದ್ಯಾರ್ಥಿಯೊಬ್ಬ ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬೈಲಹೊಂಗಲ ತಾಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದ ರಜತ್ ಕಲ್ಲೊಳ್ಳಿ (17) ಎಂದು ತಿಳಿದುಬಂದಿದೆ. ರಜತ್ ಬೈಲಹೊಂಗಲ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಬರುವ ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಯಾಗಿದ್ದ ಎನ್ನಲಾಗುತ್ತಿದೆ. ಇನ್ನು ರಜತ್ ಸರ್ಕಾರಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಗೆಳೆಯರ ಜೊತೆಗೆ ಹೊಂಡದಲ್ಲಿ ಈಜಲು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬೈಲಹೊಂಗಲ ತಹಶಿಲ್ದಾರ ಹನುಮಂತ ಶಿರಹಟ್ಟಿ, ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಬಳ್ಳಾರಿ ಜೈಲಿನಲ್ಲಿ ಇರುವಂತಹ ನಟ ದರ್ಶನ್ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ನಾಳೆ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ. ವಿಚಾರಣೆಯ ವೇಳೆ ನಟ ದರ್ಶನ್ ಅವರ ಬೆನ್ನು ನೋವಿನ ವರದಿಯನ್ನು ಕೋರ್ಟಿಗೆ ಸಲ್ಲಿಸಲಾಗಿದೆ. ಬೆನ್ನು ನೋವಿನ ಸಮಸ್ಯೆಗೆ ಸಂಬಂಧಿಸಿದಂತೆ ವೈದ್ಯಕೀಯ ವರದಿಯಲ್ಲಿ ಸ್ಪೋಟಕ ವಿಷಯ ಬಹಿರಂಗವಾಗಿದ್ದು ನಟ ದರ್ಶನ್ ಅವರ ಬೆನ್ನು ಮೂಳೆಯ L5 ಹಾಗೂ S1 ನಲ್ಲಿ ವಿಪರೀತ ನೋವು ಕಾಣಿಸಿಕೊಂಡಿದ್ದು, ಅಲ್ಲದೆ ಬೆನ್ನಿನಲ್ಲಿ ಊತ ಸಹ ಕಂಡುಬಂದಿದೆ. ಅಲ್ಲದೆ ಇತ್ತೀಚಿಗೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಎಂ ಆರ್ ಐ ಹಾಗೂ ಸಿಟಿ ಸ್ಕ್ಯಾನ್ ಮಾಡಿಸಲಾಗಿತ್ತು. ಇದೆ ರೀತಿ ಮುಂದುವರೆದರೆ ನಟ ದರ್ಶನ್ ಅವರಿಗೆ ಪ್ಯಾರಲಿಸಿಸ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇಂದು ನಟ ದರ್ಶನ್ ಅವರ ಆರೋಗ್ಯದ ಕುರಿತು ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ಬಳಿಕ ದರ್ಶನ್ ಪರ ವಕೀಲ…

Read More

ಬೆಂಗಳೂರು : ವಿಜಯಪುರದಲ್ಲಿ ರೈತರ ಜಮೀನುಗಳು ವಕ್ಫ್ ಆಸ್ತಿ ಎಂದು ತೋರಿಸುತ್ತಿರುವ ವಿಚಾರವಾಗಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಬಿಜೆಪಿ ಪರಿಶೀಲನ ತಂಡವನ್ನು ರಚನೆ ಮಾಡಿದ್ದರು ಇದಕ್ಕೆ ಬಸನಗೌಡ ಪಾಟೀಲ್ ಯತ್ನಾಳ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೆ ಇಂದು ಮತ್ತೆ ಪುನರ್ ರಚನೆ ಮಾಡಿದ್ದಾರೆ. ಹೌದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಬಿಜೆಪಿ ಪರಿಶೀಲನ ತಂಡ ಪುನರ್ ರಚಿಸಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶದ ಬೆನ್ನಲ್ಲೆ ತಂಡ ಪುನರ್ ರಚನೆ ಮಾಡಲಾಗಿದೆ. ಸಂಸದ ಜಿಗಜಿಣಗಿ ಶಾಸಕ ಯತ್ನಾಳ ಸೇರ್ಪಡೆಗೊಳಿಸಿ ತಂಡ ಪುನರ್ ರಚಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ. ನಾಳೆ ಕಾರಜೋಳ ನೇತೃತ್ವದ ಈ ತಂಡ ವಿಜಯಪುರ ಜಿಲ್ಲೆಗೆ ತೆರಳಲಿದೆ. ಇಂದು ತಂಡಕ್ಕೆ ರಮೇಶ್ ಜಿಗಜಿಣಗಿ, ಶಾಸಕ ಯತ್ನಾಳ್ ಹಾಗೂ ಮಾಜಿ ಜಿಲ್ಲಾಧ್ಯಕ್ಷ ಎಂ.ಬಿ ಜಿರಲಿ ಸೇರ್ಪಡೆ ಮಾಡಿದ ವಿಜಯೇಂದ್ರ. ನಿನ್ನೆ ಬಿವೈ ವಿಜಯೇಂದ್ರ ಬಿಜೆಪಿಯ ಪರಿಶೀಲನ ತಂಡ ರಚಿಸಿದ್ದರು. ಬಿಜೆಪಿ ತಂಡ ಬಹಿಷ್ಕರಿಸುವುದಾಗಿ ಇಂದು ಬಸವನಗೌಡ ಪಾಟೀಲ…

Read More

ಹುಬ್ಬಳ್ಳಿ : ಇತ್ತೀಚಿಗೆ ಹುಚ್ಚು ನಾಯಿ ಹಾಗೂ ಬೀದಿ ನಾಯಿಗಳ ದಾಳಿಯಿಂದ ಮಕ್ಕಳು ಗಾಯಗೊಂಡಿರುವ ಘಟನೆಗಳು ನಡೆದಿವೆ. ಇದೀಗ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಹುಚ್ಚುನಾಯಿ ದಾಳಿಗೆ ಸುಮಾರು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹೌದು ಹುಬ್ಬಳ್ಳಿ ನಗರದ ಗೋಕುಲ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದ್ದು, ಹುಚ್ಚುನಾಯಿ ದಾಳಿಯಿಂದ ಸುಮಾರು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕೂಡಲೇ ಗಾಯಳುಗಳನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಾಯಿಗೆ ಹುಚ್ಚು ಹಿಡಿದಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ ಸದ್ಯ ಗಾಯಾಳುಗಳಿಗೆ ಹುಬ್ಬಳ್ಳಿಯಕೆಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ರಾಮನಗರ : ಕ್ರಷರ್ ನಿಂದ ಜಲ್ಲಿ ಸಾಗಿಸುತ್ತಿದ್ದ ಲಾರಿ ಮಾಲೀಕನಿಗೆ ನೋಟಿಸ್ ನೀಡಲಾಗಿತ್ತು. ಆದರೆ ನೋಟಿಸ್ ಗೆ ಹೆದರಿದ ಲಾರಿ ಚಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರದಲ್ಲಿ ನಡೆದಿದೆ. ಲಾರಿ ಚಾಲಕ ಗಣಿ ಮತ್ತು ಭೂ ವಿಜ್ಞಾನ ಕಚೇರಿಯ ಬಳಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ರಾಮನಗರದಲ್ಲಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಚೇರಿಯ ಬಳಿ ಮಾಗಡಿ ಮೂಲದ ನಾಗೇಶ್ (50) ಆತ್ಮಹತ್ಯೆಗೆ ಶರಣಾದ ಲಾರಿ ಚಾಲಕ ಎಂದು ತಿಳಿದುಬಂದಿದೆ. ಸದ್ಯ ಕಚೇರಿ ಆವರಣದ ಮರದಲ್ಲಿ ನಾಗೇಶ್ ಶವ ನೇತಾಡುತ್ತಿದೆ. ಘಟನಾ ಸ್ಥಳಕ್ಕೆ ರಾಮನಗರದ ಐಜೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಧಿಕಾರಿಗಳ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಆರೋಪ ಕೂಡ ಕೇಳಿ ಬಂದಿದೆ. ಮಧ್ಯಾಹ್ನ ಕಚೇರಿಗೆ ಬಂದಿದ್ದ ಲಾರಿ ಮಾಲೀಕ ನಾಗೇಶ್ ನನಗೆ ನೋಟಿಸ್ ಯಾಕೆ ಕೊಟ್ಟಿದ್ದೀರಿ ಅಂತ ಪ್ರಶ್ನೆ ಮಾಡಿದ್ದಾನೆ. ನಿಯಮ ಉಲ್ಲಂಘನೆ ಆಗಿದೆ ಅದಕ್ಕೆ ಕಾರಣ ಕೊಡಿ ಎಂದು ಗಡಿ ಮತ್ತು ಭೂ ವಿಜ್ಞಾನ ಅಧಿಕಾರಿ ತಿಳಿಸಿದ್ದಾರೆ.…

Read More

ಧಾರವಾಡ : ಈಗಾಗಲೇ ರೈತರ ಜಮೀನುಗಳು ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ತೋರಿಸುತ್ತಿರುವ ಹಿನ್ನೆಲೆಯಲ್ಲಿ ವಿಜಯಪುರದ ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿದೆ. ಇದರ ಬೆನ್ನಲ್ಲೇ ಇದೀಗ ಧಾರವಾಡದಲ್ಲೂ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ಹಲವು ರೈತರ ಜಮೀನುಗಳನ್ನು ವಕ್ಫ್ ಬೋರ್ಡ್ ಅಸ್ತಿಗೆ ಜೋಡಣೆಯದದ್ದು ಕಂಡುಬಂದಿದೆ. ಹೌದು ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಜವಳಗಿ, ಮಸೂತಿ ಹಾಗೂ ಹುಟಗಿ ಎಂಬ ಕುಟುಂಬಕ್ಕೆ ಸೇರಿದ ಜಮೀನುಗಳು ಪಿತ್ರಾರ್ಜಿತವಾಗಿದ್ದು, ಅವುಗಳನ್ನು ಈ ರೈತರು ಯಾರಿಂದಲೂ ದಾನವಾಗಿ ಪಡೆದಿಲ್ಲ ಆದರೂ ಇವರ ಜಮೀನಿನ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿಗೆ ಈ ಜಮೀನು ಒಳಪಟ್ಟಿದೆ ಎಂದು ನಮೂದಾಗಿದ್ದು, ಅದನ್ನು ತೆಗೆದು ಹಾಕಲು ರೈತರು ವಕ್ಫ್ ಕಚೇರಿ, ತಹಶೀಲ್ದಾರ್ ಕಚೇರಿಗೆ ಅಲೆದಾಡಿದರೂ ಅಧಿಕಾರಿಗಳು ಮಾತ್ರ ಯಾವುದಕ್ಕೂ ಸ್ಪಂದನೆ ನೀಡಲಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ತಮ್ಮ ಜಮೀನನ್ನು ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿರುವ ಈ ರೈತರೆಲ್ಲ ಉಪ್ಪಿನ ಬೆಟಗೇರಿ ಗ್ರಾಮದವರು.…

Read More

ಬಳ್ಳಾರಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರು ಈ ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಅಲ್ಲಿನ ರಾಜಾತಿಥ್ಯ ಪತ್ರಣಕ್ಕೆ ಸಂಬಂಧಪಟ್ಟಂತೆ ನಂತರ ಅವರನ್ನು ಬಳ್ಳಾರಿ ಜಿಲ್ಲೆಗೆ ಶಿಫ್ಟ್ ಮಾಡಲಾಯಿತು. ಇದೀಗ ಈ ಒಂದುಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ನೇತೃತ್ವದಲ್ಲಿ ಬಳ್ಳಾರಿ ಜೈಲಿಗೆ ಆಗಮಿಸಿದ್ದು, ನಟ ದರ್ಶನ್ ಅವರನ್ನು ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆಸಲಿದ್ದಾರೆ. ಈಗಾಗಲೇ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ ಅವರು ಜಾಮೀನು ಅರ್ಜಿ ಸಲ್ಲಿಸಿದ್ದು, ಅಲ್ಲದೆ ಅವರಿಗೆ ತೀವ್ರವಾಗಿ ಬೆನ್ನು ನೋವು ಕಾಣಿಸಿಕೊಂಡಿದೆ. ಇಂದು ಹೈ ಕೋರ್ಟ್ ನಲ್ಲಿ ಇವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು ಸದ್ಯದಲ್ಲೇ ತೀರ್ಪು ಹೊರಬೀಳಲಿದೆ

Read More