Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ವಿಜಯಪುರ ರೈತರಿಗೆ ವಕ್ಫ್ ಬೋರ್ಡ್ ನಿಂದ ನೋಟಿಸ್ ನೀಡಿದ ವಿಚಾರವಾಗಿ ಕಾಂಗ್ರೆಸ್ ಸರ್ಕಾರ ಬಂದರೆ ವಿಶೇಷವಾಗಿ ಮುಸ್ಲಿಮರನ್ನು ಓಲೈಕೆ ಮಾಡುತ್ತಾರೆ. ಟಿಪ್ಪು ಸುಲ್ತಾನ್ ಜಯಂತಿಗೆ ಆದೇಶ ಹೊರಡಿಸಿದ್ದರು.ಅವರೇನು ಕೇಳಿದ್ರಾ ಜಯಂತಿ ಮಾಡಿ ಅಂತ? ಎಂದು ವಿಧಾನಸೌಧದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿ ಕಾರಿದರು. ಕಾಂಗ್ರೆಸಿಗರು ಎಲ್ಲಾ ಆಸ್ತಿಯನ್ನ ವಕ್ಫ್ ಬೋರ್ಡ್ ಗೆ ಬರೆಯುತ್ತಾರೆ. ಅವನ್ಯಾರೋ ಪಾರ್ಲಿಮೆಂಟ್ ನಮ್ಮದೇ ಅಂತ ಹೇಳಿದ್ದಾನೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವಿಧಾನಸೌಧ, ಲೋಕಸಭೆ ಅವರದ್ದೇ. ಎಲ್ಲಾ ಆಸ್ತಿಗಳು ಮುಸ್ಲಿಮರದಂತೆ ಏನು ಅರಬ್ ನವರು ಕೊಟ್ರಾ? ಕಾಂಗ್ರೆಸ್ ಪಕ್ಷಕ್ಕೆ ಎಂತಹ ಹೀನಾಯ ಪರಿಸ್ಥಿತಿ ಬಂದಿದೆ ಅಂದರೆ ಮಾತು ಎತ್ತಿದರೆ ಎಲ್ಲವನ್ನೂ ಎಸ್ಐಟಿ ಎಸ್ಐಟಿ ಎನ್ನುತ್ತಾರೆ. ಈಗ ತಹಶೀಲ್ದಾರ್ ತಪ್ಪು ಆಗಿದ್ದು ಬಿಜೆಪಿ ಕಾಲದಲ್ಲಿ ಅಂತ ಹೇಳುತ್ತಿದ್ದಾರೆ. ಕಾಲ ಯಾವುದು ಅನ್ನೋದಲ್ಲ ತಪ್ಪು ಏನಾಗಿದೆ ಅನ್ನೋದು ಮುಖ್ಯ.ಯಾರ ಕಾಲದಲ್ಲಿ ಆಗಲಿ ತಪ್ಪು ಸರಿಪಡಿಸಬೇಕು. ಕಾಂಗ್ರೆಸ್ನವರು ಎಲ್ಲವನ್ನು ಅಲ್ಪಸಂಖ್ಯಾತರಿಗೆ ಬರೆದು ಕೊಡುತ್ತಾರೆ. ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆಯ ಪ್ರವೃತ್ತಿ ಬಿಡಬೇಕು. ಈ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ಇಡಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಇದೀಗ ಮುಡಾದ ಮಾಜಿ ಆಯುಕ್ತ ನಟೇಶ್ ಮನೆಯ ಮೇಲೆ ಹಾಗೂ ಬಿಲ್ಡರ್ ಮಂಜುನಾಥ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೇ ನಡೆಸುತ್ತಿದ್ದಾರೆ ಎನ್ನಲಾಗಿದೆ. ಹೌದು ಮುಡಾ ಹಗರಣಕ್ಕೆ ಸಂಬಂಧಿಸಿದಪಟ್ಟಂತೆ ಬೆಂಗಳೂರಿನ ಮಲ್ಲೇಶ್ವರಂ ನ 10ನೇ ಕ್ರಾಸ್ ನಲ್ಲಿರುವ ಮುಡಾ ಮಾಜಿ ಆಯುಕ್ತ ನಟೇಶ್ ಮನೆ ಮೇಲೆ ಐವರು ಇಡಿ ಅಧಿಕಾರಿಗಳು ದಾಳಿ ಮಾಡಿದ್ದು ಶೋಧ ನಡೆಸುತ್ತಿದ್ದಾರೆ. ಇಡಿ ದಾಳಿಯ ವೇಳೆ ಮಾಜಿ ಆಯುಕ್ತ ನಟೇಶ್ ಮನೆಯಲ್ಲಿ ಇದ್ದರು ಎಂದು ತಿಳಿದುಬಂದಿದೆ. ಇನ್ನೊಂದು ಕಡೆ ಬಿಲ್ಡರ್ ಮಂಜುನಾಥ್ ನಿವಾಸದ ಮೇಲು ಕೂಡ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿ ಇರುವ ಬಿಲ್ಡರ್ ಮಂಜುನಾಥ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ದಾಖಲೆಗಳು ಪರಿಶೀಲನೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಹಾಸನ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೈಲರ್ಜಿಗೆ ಏರಿಸಲು ಇಂದು ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್ಚಿಗೆ ಪಾಟೀಲ್ ತಿಳಿಸಿದರು. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್ ಕೆ ಪಾಟೀಲ್ ಅವರು ಹಾಸನದ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೈಲ್ದರ್ಜೆಗೆ ಏರಿಸಲು ಸಂಪುಟದಲ್ಲಿ ಅನುಮೋದನೆ ದೊರಕಿದೆ ಎಂದರು. ಅಲ್ಲದೆ ರಾಯಚೂರು ವಿವಿಗೆ ‘ಮಹರ್ಷಿ ವಾಲ್ಮೀಕಿ ಎಂದು ಮರುನಾಮಕರಣ ಮಾಡಲು ಸರ್ಕಾರ ನಿರ್ಧರಿಸಿದೆ. ಕಳೆದ ಕೆಲವು ದಿನಗಳ ಹಿಂದೆ ರಾಯಚೂರಿನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ರಾಯಚೂರು ವಿಶ್ವವಿದ್ಯಾಲಯಕ್ಕೆ ವಾಲ್ಮೀಕಿಯವರ ನಾಮಕರಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ನಡೆದ ಸಂಪುಟದಲ್ಲಿ ವಾಲ್ಮೀಕಿ ವಿಶ್ವವಿದ್ಯಾಲಯ ಎಂದು ನಾಮಕರಣಕ್ಕೆ ಅನುಮೋದನೆ ನೀಡಲಾಗಿದೆ ಎಂದು ಎಚ್ ಕೆ ಪಾಟೀಲ್ ತಿಳಿಸಿದರು.
BREAKING : ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿಗೆ ಬಿಗ್ ರಿಲೀಫ್ : ವಂಚನೆ ಕೇಸ್ ನಲ್ಲಿ ಬಿಡುಗಡೆಗೆ ಹೈಕೋರ್ಟ್ ಆದೇಶ
ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಾಂತರ ರೂಪಾಯಿ ವಂಚನೆ ಎಸೆಗಿದ್ದ ಪ್ರಕರಣದಲ್ಲಿ ಬಂಧಿತರಾಗಿದ್ದ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಸಹೋದರ ಗೋಪಾಲ ಜೋಶಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಈ ಒಂದು ಪ್ರಕರಣಕ್ಕೆ ತಡೆಯಾಜ್ಞೆ ನೀಡಿ ಬಿಡುಗಡೆಗೆ ಆದೇಶ ನೀಡಿದೆ. ಹೌದು ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆಯನ್ನು ಕೈಗೊತ್ತಿಕೊಂಡು, ತನಿಖೆ ಹಾಗೂ ದೂರಿನ ಆಧಾರದಲ್ಲಿ ಆನಂತರ ಕೈಗೊಂಡಿರುವ ಎಲ್ಲಾ ಕ್ರಮಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದಾರೆ. ಅಲ್ಲದೆ ಪೊಲೀಸ್ ಕಸ್ಟಡಿಯಲ್ಲಿರುವ ಅರ್ಜಿದಾರರನ್ನು ಕಾನೂನಿನ ಅನ್ವಯ ಬಿಡುಗಡೆ ಮಾಡಬೇಕು ಎಂದು ಆದೇಶ ಹೊರಡಿಸಿದ್ದಾರೆ. ಪ್ರಕರಣ ಹಿನ್ನೆಲೆ? ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಸಹೋದರ ಗೋಪಾಲ ಜೋಶಿ ವಿರುದ್ಧ,ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ದೇವಾನಂದ ಚೌವ್ಹಾಣ್ ಹಾಗೂ ಪತ್ನಿ ಸುನೀತಾ ಚೌವ್ಹಾಣ್ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. 5 ಕೋಟಿಗೆ ಬೇಡಿಕೆ ಇಟ್ಟಿದ್ದರು. ಆದರೆ ದೇವಾನಂದ ದಂಪತಿ 5…
ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ ನಡೆದಂತಹ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿ ಸಂಬಂಧ ಆಯೋಗ ರಚನೆಗೆ ಸಂಪುಟ ಅಸ್ತು ಎಂದಿದೆ ಎಂದು ಕ್ಯಾಬಿನೆಟ್ ಸಭೆಯ ಬಳಿಕ ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಹೆಚ್ ಕೆ ಪಾಟೀಲ್, ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳ ಕುರಿತು ಮಾತನಾಡಿ, ಒಳ ಮೀಸಲಾತಿ ಜಾರಿ ಸಂಬಂಧ ಆಯೋಗ ರಚನೆಗೆ ಸಂಪುಟ ಅಸ್ತು ಎಂದಿದ್ದು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚನೆ ಮಾಡಲಾಗಿದೆ. ಆಯೋಗ ರಚಿಸಿ ದತ್ತಾಂಶ ಸ್ವೀಕರಿಸಿ ಮುಂದೆ ನಿರ್ಣಯಿಸಿ ನಿರ್ಧಾರ ಕೈಗೊಳ್ಳಲಾಗುತ್ತೆ ಎಂದು ಎಚ್ ಕೆ ಪಾಟೀಲ್ ತಿಳಿಸಿದರು. ಮೂರು ತಿಂಗಳಲ್ಲಿ ವರದಿ ಸಲ್ಲಿಕೆ ಮಾಡಲು ಆಯೋಗಕ್ಕೆ ಸೂಚನೆ ನೀಡಲಾಗಿದೆ. ಅದಲ್ಲದೆ ಮುಂದಿನ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಲಾಗಿದೆ ಇಂದಿನಿಂದ ಯಾವುದೇ ನೇಮಕಾತಿ ನೋಟಿಫಿಕೇಷನ್ ಆದರೂ ಕೂಡ ಆಯೋಗದ ವರದಿ ಆಧರಿಸಿ ಮುಂದಿನ ತೀರ್ಮಾನ…
ರಾಮನಗರ : ಚನ್ನಪಟ್ಟಣ ಉಪಚುನಾವಣೆಗೆ HD ದೇವೇಗೌಡರು ಅಂಬುಲೆನ್ಸ್ ನಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಾರೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ ನೀಡಿದ್ದರು. ಈ ಒಂದು ಹೇಳಿಕೆಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದು, ದೇವೇಗೌಡರ ವಯಸ್ಸಿಗೆ ಡಿಕೆ ಸುರೇಶ್ ಅವರು ಬದುಕಿರುತ್ತಾರೆ ಇಲ್ಲವೋ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಎಚ್ ಡಿ ದೇವೇಗೌಡ ಆಂಬುಲೆನ್ಸ್ ನಲ್ಲಿ ಪ್ರಚಾರಕ್ಕೆ ಬರುತ್ತಾರೆ ಎಂಬ ಡಿಕೆ ಸುರೇಶ್ ಹೇಳಿಕೆಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದು HD ದೇವೇಗೌಡರ ವಯಸ್ಸಿಗೆ ಡಿಕೆ ಸುರೇಶ್ ಬದುಕಿರುತ್ತಾರೋ ಇಲ್ಲವೋ ಗೊತ್ತಿಲ್ಲ.ಎಚ್‌ಡಿ ದೇವೇಗೌಡರು ಬೆವರು ಸುರಿಸಿ ಪಕ್ಷ ಕಟ್ಟಿದ್ದಾರೆ. ಈ ವಯಸ್ಸಿನಲ್ಲೂ ಪಕ್ಷಕ್ಕಾಗಿ ದೇವೇಗೌಡರು ದುಡಿಯುತ್ತಿದ್ದಾರೆ. ಎಚ್ ಡಿ ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ.ಇದಕ್ಕೆ ಕ್ಷೇತ್ರದ ಜನರು ಮತಗಳ ಮೂಲಕ ಉತ್ತರ ಕೊಡಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಎಚ್ ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗಲೇ ಮಗನನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ ಎಂದು…
ತುಮಕೂರು : ಸೆಲ್ಫಿ ಹುಚ್ಚಾಟಕ್ಕೆ ಅನೇಕರು ತಮ್ಮ ಜೀವಕ್ಕೆ ಆಪತ್ತು ತಂದುಕೊಂಡಿದ್ದು ಉಂಟು ಹಾಗೂ ಪ್ರಾಣವನ್ನು ಕೂಡ ಕಳೆದುಕೊಂಡಿದ್ದು ಉಂಟು. ಇದೀಗ ಅಂತದ್ದೇ ಸೆಲ್ಫಿ ಕ್ರೇಜಿಗೆ ರಾಜ್ಯದಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು ತುಮಕೂರಿನಲ್ಲಿ ಕೆರೆ ಕೋಡಿಗೆ ಬಿದ್ದ ಯುವತಿಯು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಹೌದು ತುಮಕೂರಿನ ಗುಬ್ಬಿ ತಾಲೂಕಿನ ಶಿವಪುರದ ಸೋಮನಾಥ್ ಎಂಬುವವರ ಪುತ್ರಿ ಹಂಸ ಸ್ನೇಹಿತರೊಂದಿಗೆ ಮೈದಾಳ ಕೆರೆ ನೋಡಲು ತೆರಳಿದ್ದರು. ಈ ವೇಳೆ ಕೋಡಿಯಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದಿದ್ದರು. ನೀರಿನಲ್ಲಿ ಜಾರಿ ಕಲ್ಲಿನ ಪೊಟರೆಯಲ್ಲಿ ಸಿಲುಕಿದ್ದರು. ಮಂದಾರಗಿರಿ ಬೆಟ್ಟದ ತಪ್ಪಲಿನಲ್ಲಿರುವ ಮೈದಾಳ ಕೆರೆ ಕೋಡಿಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋದ ವಿದ್ಯಾರ್ಥಿನಿ ಹಂಸ (20) ಕೆಳಕ್ಕೆ ಬಿದ್ದು ಕಾಣೆಯಾಗಿದ್ದಳು. ಸಂಜೆಯಾದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಪಾಯಕ್ಕೆ ಸಿಲುಕಿರುವ ಸಾಧ್ಯತೆಯಿದೆ ಎನ್ನಲಾಗಿತ್ತು. ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿ ನಿನ್ನೆ ಸಂಜೆಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದರು. ರಾತ್ರಿಯಾದರೂ ಆಕೆ ಪತ್ತೆಯಾಗಲಿಲ್ಲ. ಕೆರೆ ಕೋಡಿ ನೀರನ್ನು…
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ಮುಡಾ ಹಗರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಮುಡಾ ಹಗರಣದ ತನಿಖೆಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಡೆಸುತ್ತಿದ್ದಾರೆ. ಮುಡಾ ಹಗರಣದ ಜಾಡು ಬೆಂಗಳೂರಿನವರೆಗೂ ವ್ಯಾಪಿಸಿದ್ದು, ಇಡಿ ಅಧಿಕಾರಿಗಳು ಇಲ್ಲಿನ ಜೆಪಿ ನಗರದಲ್ಲಿರುವ ಬಿಲ್ಡರ್ ಎನ್. ಮಂಜುನಾಥ್ ಎಂಬುವರ ಮನೆ ಮೇಲೆ ದಾಳಿ ಮಾಡಿ, ದಾಖೆಗಳನ್ನು ಪರಿಶೀಲಿಸುತ್ತಿದ್ದಾರೆ. ಇದರ ಮಧ್ಯ ಸ್ನೇಹಮಯಿ ಕೃಷ್ಣ ಬಿಲ್ಡರ್ ಮಂಜುನಾಥ್ ವಿರುದ್ಧ ವಿಡಿಯೋ ಸಮೇತವಾಗಿ ಮತ್ತೊಂದು ದೂರು ನೀಡಿದ್ದಾರೆ ಎನ್ನಲಾಗಿದೆ. ಹೌದು ಸ್ನೇಹಮಯಿ ಕೃಷ್ಣ ಅವರು ಬಿಲ್ಡರ್ ಮಂಜುನಾಥ ವಿರುದ್ಧ ಮತ್ತೊಂದು ದೂರು ದಾಖಲಿಸಿದ್ದಾರೆ. ಮೈಸೂರಿನ ಶಿವಣ್ಣ ಎಂಬುವವರಿಂದ ಬಿಲ್ಡರ್ ಮಂಜುನಾಥ ಹಣ ಪಡೆದಿದ್ದರು ಎಂದು ಆರೋಪಿಸಿ ದೂರು ನೀಡಿದ್ದಾರೆ ಎನ್ನಲಾಗಿದೆ. 25 ಲಕ್ಷ ನಗದು ಹಣ ಎಣಿಸುತ್ತಿರುವ ಸಮೇತ ಸ್ನೇಹಮಯಿ ಕೃಷ್ಣ ಸಾಕ್ಷಿ ಸಮೇತವಾಗಿ ಇಡಿಗೆ ದೂರು ಕೊಟ್ಟಿದ್ದಾರೆ. ಸದ್ಯ ಮುಡಾ ಹಗರಣಕ್ಕೆ ವಿಡಿಯೋ ಪ್ರಮುಖ ಸಾಕ್ಷಿಯಾಗಿದೆ. ಬಿಲ್ಡರ್…
ಬೆಳಗಾವಿ : ಕಳೆದ ವರ್ಷ ಬೆಳಗಾವಿ ಜಿಲ್ಲೆಯ ವಂಟಮುರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆ ಇಡೀ ದೇಶಾದ್ಯಂತ ಸುದ್ದಿಯಾಗಿತ್ತು. ಇದೀಗ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡದಲ್ಲಿ ದಲಿತರ ಗುಡಿಸಲುಗಳಿಗೆ ಸವರ್ಣಿಯರು ಬೆಂಕಿ ಹಾಕಿರುವ ಘಟನೆ ನಡೆದಿದೆ. ಹೌದು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು, ಗೋಮಾಳ ಜಾಗದಲ್ಲಿ ಮಹದೇವ್ ಮಾದರ್ ಎನ್ನುವವರು ಸುಮಾರು 12 ಗುಂಟೆ ಜಾಗದಲ್ಲಿ ಗುಡಿಸಿಲು ಹಾಕಿಕೊಂಡು ನೆಲೆಸಿದ್ದರು.ಈ ಜಾಗಕ್ಕಾಗಿ ಮಹಾವೀರ ಕುರಾಡೆ ಹಾಗೂ ಮಹಾದೇವ ಮಾದರ್ ಕುಟುಂಬಗಳ ನಡುವೆ ಜಗಳವಿತ್ತು. ಮುಗಳಖೋಡ ಗ್ರಾಮದಲ್ಲಿನ ಈ ಒಂದು ಗೋಮಾಳ ಜಾಗಕ್ಕಾಗಿ ಎರಡು ಕುಟುಂಬಗಳ ಮಧ್ಯೆ ಜಗಳವಿತ್ತು. ಗೋಮಾಳ ಜಾಗದಲ್ಲಿ ಶೆಡ್ ಹಾಕಿಕೊಂಡಿದ್ದ ಮಹಾದೇವ ಮಾದರ್ ಕುಟುಂಬ ಸುಮಾರು 12 ಗುಂಟೆ ಗೋಮಾಳ ಜಾಗದಲ್ಲಿ ಗುಡಿಸಲುಗಳನ್ನು ನಿರ್ಮಾಣ ಮಾಡಿದ್ದರು. ಈ ಗುಡಿಸಲುಗಳಿಗೆ ಊರಿನ ಮಹಾವೀರ ಕುರಾಡೆ ಕುಟುಂಬದವರು ಬೆಂಕಿ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಬಹಳ ದಿನಗಳಿಂದಲೂ…
ಬೆಂಗಳೂರು : ಇಂದು ರಾಜ್ಯಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ ಅತ್ಯಂತ ಸುಸೂತ್ರವಾಗಿ ನಡೆದಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದರು. ಈ ಕುರಿತಂತೆ ಮಾತನಾಡಿದ ಅವರು, ಗ್ರಾಮ ಆಡಳಿತ ಅಧಿಕಾರಿಯ ಒಂದು ಸಾವಿರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಲಿಖಿತ ಪರೀಕ್ಷೆ ಅತ್ಯಂತ ಸುಗಮವಾಗಿ ನಡೆಯಿತು. ಪರೀಕ್ಷೆಗೆ ಶೇ. 80 ರಷ್ಟು ಮಂದಿ ಹಾಜರಾಗಿದ್ದರು ಎಂದು ತಿಳಿಸಿದ್ದಾರೆ. ಬೆಂಗಳೂರಿನ 88 ಕೇಂದ್ರ ಸೇರಿದಂತೆ ರಾಜ್ಯದ 1,173 ಕೇಂದ್ರಗಳಲ್ಲಿ ಯಾವುದೇ ತೊಂದರೆ ಇಲ್ಲದೆ ಪರೀಕ್ಷೆ ನಡೆಯಿತು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಒಟ್ಟು 4.79 ಲಕ್ಷ ಅಭ್ಯರ್ಥಿಗಳ ಪೈಕಿ 4.16 ಲಕ್ಷ ಮಂದಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡಿದ್ದರು. ಅವರಲ್ಲಿ ಶೇ. 80 ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಅವರು ವಿವರಿಸಿದರು.













