Subscribe to Updates
Get the latest creative news from FooBar about art, design and business.
Author: kannadanewsnow05
BIG NEWS : ಆಸ್ಟ್ರೇಲಿಯಾ ಮಣಿಸಿ ಫೈನಲ್ ತಲುಪಿದ ಭಾರತ : ಟೀಂ ಇಂಡಿಯಾಗೆ ಅಭಿನಂದನೆ ತಿಳಿಸಿದ ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು : ನಿನ್ನೆ ನಡೆದ ಚಾಂಪಿಯನ್ಸ್ ಟ್ರೊಫಿ ಸೆಮಿ ಫೈನಲ್ ಮ್ಯಾಚ್ ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಭಾರತವು ಚಾಂಪಿಯನ್ಸ್ ಟ್ರೋಫಿ 2025 ಕ್ಕೆ ಅರ್ಹತೆ ಪಡೆದಿದೆ. ಮೆನ್ ಇನ್ ಬ್ಲೂ ತಂಡವು ಸೆಮಿಫೈನಲ್ ನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಗೆ ಪ್ರವೇಶಿಸಿತು. ಭಾರತ ಫೈನಲ್ ತಲುಪಿದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭಾರತ ತಂಡಕ್ಕೆ ಅಭಿನಂದನೆ ತಿಳಿಸಿದ್ದು, ಈ ಕುರಿತು ಸಾಮಾಜಿಕ ಜಾಲತಾಣ X ನಲ್ಲಿ ಬ್ಲೂ ಬಾಯ್ಸ್ ಅದ್ಭುತ ಆಟದಿಂದ ಭಾರತ ಇಂದು ಗೆಲವು ಸಾಧಿಸಿದೆ. ಫೈನಲ್ ನಲ್ಲೂ ಹೀಗೆ ಆಡಿ ಐಸಿಸಿ ಚಾಂಪಿಯನ್ ಟ್ರೊಫಿ ಕಪ್ ಗೆಲ್ಲಲಿ ಎಂದು ಡಿಕೆ ಶಿವಕುಮಾರ್ ಟೀಂ ಇಂಡಿಯಾಗೆ ಶುಭ ಹಾರೈಸಿದ್ದಾರೆ. 265 ರನ್ಗಳ ಗುರಿ ಬೆನ್ನತ್ತಿದ ಭಾರತ ಒಂದು ಹಂತದಲ್ಲಿ 2 ವಿಕೆಟ್ ನಷ್ಟಕ್ಕೆ 43 ರನ್ ಗಳಿಸಿತ್ತು. ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಪರಿಸ್ಥಿತಿಯನ್ನು ನಿಯಂತ್ರಿಸಿ 91 ರನ್ಗಳ ಅಮೂಲ್ಯ ಜೊತೆಯಾಟವನ್ನು ನೀಡಿದರು. ಶ್ರೇಯಸ್ 45…
ಯಾದಗಿರಿ : ಸದ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಕುರಿತು ಬಾರಿ ಚರ್ಚೆ ನಡೆಯುತ್ತಿದ್ದು ಒಂದು ಕಡೆ ಟಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆಂದು ಹಲವರು ಭವಿಷ್ಯ ನುಡಿಸಿದರೆ ಇನ್ನೊಂದು ಕಡೆ ಸಿಎಂ ಸಿದ್ದರಾಮಯ್ಯ ಪರವಾಗಿ ಬ್ಯಾಟ್ ಬೀಸುತ್ತಿದ್ದಾರೆ ಇದರ ಮಧ್ಯ ನೊಣವಿನಕೆರೆಯ ಶಿವಯೋಗೇಶ್ವರ ಶಿವಾಚಾರ್ಯರು ಡಿಕೆ ಶಿವಕುಮಾರ್ ಸಿಎಂ ಆಗುವುದು ಎಲ್ಲರ ಸಂಕಲ್ಪವಾಗಿದೆ ಎಂದು ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ. ಯಾದಗಿರಿಯ ಅಬ್ಬೆತುಮಕೂರಲ್ಲಿ ಮಾತನಾಡಿದ ಅವರು, ಡಿಕೆ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದ್ದಿದ್ದಾರೆ. ನೊಣವಿನಕೆರೆಯ ಸೋಮ್ಮೆಕಟ್ಟೆ ಶಿವಯೋಗೇಶ್ವರ ಶಿವಾಚಾರ್ಯರು ಈ ಒಂದು ಭವಿಷ್ಯ ನುಡಿದಿದ್ದು, ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂಬುದು ಎಲ್ಲರ ಆಸೆಯಾಗಿದೆ. ರೈತರು ಸದ್ಭಕ್ತರು ವರ್ತಕರು ಸೇರಿದಂತೆ ಎಲ್ಲರ ಆಶಯ ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂಬುದು ಇದೆ. ಡಿಕೆ ಶಿವಕುಮಾರ್ ಸಿಎಂ ಆಗಲು ಯೋಗ್ಯವಾದ ವ್ಯಕ್ತಿ. ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಸಂಕಲ್ಪವಿದೆ. ಡಿಕೆ ಸಿಎಂ ಆಗಬೇಕೆಂಬುದು ನಮ್ಮ ಮಠದ ಆಶೀರ್ವಾದವೂ ಇದೆ. ಒಂದು ದಿನ ಡಿಕೆಸಿಎಂ ಆಗುತ್ತಾರೆಂದು…
ಬೆಂಗಳೂರು : ಇತ್ತೀಚಿಗೆ ಬೆಂಗಳೂರು ನಗರದಲ್ಲಿ ಅಕ್ರಮವಾಗಿ ಬಂದು ವಿದೇಶಿಗರು ವಾಸಿಸುತ್ತಿದ್ದಾರೆ. ವೀಸಾ ಮುಗಿದರು ಸಹ ವಿದೇಶಕ್ಕೆ ತೆರಳದೆ ಇಲ್ಲಿಯೇ ಇದ್ದಾರೆ. ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘಿಸಿ ವಿದೇಶಿ ಪ್ರಜೆಗಳಿಗೆ ಬಾಡಿಗೆ ನೀಡುವ ಮನೆ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದೇಶಿಯರ ಕಾಯ್ದೆ ಪ್ರಕಾರ ವಿದೇಶಿ ಪ್ರಜೆಗಳಿಗೆ ತನ್ನ ಮನೆ ಬಾಡಿಗೆ ನೀಡಿದ 24 ತಾಸಿನೊಳಗೆ ವಿದೇಶಿಯರ ನೋಂದಣಿ ಇಲಾಖೆಯ ಆನ್‌ಲೈನ್ ಪೋರ್ಟಲ್‌ನಲ್ಲಿ ಫಾರಂ-ಸಿ ಅನ್ನು ಅಧಿಕಾರಿಗಳಿಗೆ ಸಲ್ಲಿಸಬೇಕಿದೆ ಎಂದರು. ಎಫ್‌ಆರ್‌ಓಓ ಅಧಿಕಾರಿಗಳು ಅನುಮೋದಿಸಿದ ಮನೆಯ ಮಾಲೀಕ/ನಿರ್ವಹಕಾರ ವಿದೇಶಿ ವ್ಯಕ್ತಿ ವಾಸ್ತವ್ಯಕ್ಕೆ ಬಂದ 24 ತಾಸಿನಲ್ಲೇ ನಮೂನೆ-ಸಿ ರ ಮುದ್ರಿತ ಪ್ರತಿಗಳನ್ನು ಹೊಂದಿರಬೇಕು ಎಂಬ ನಿಯಮವಿದೆ. ಆದರೆ ಈ ನಿಯಮವನ್ನು ಮನೆ ಮಾಲೀಕರು ಪಾಲಿಸುತ್ತಿಲ್ಲ. ಕಳೆದ ಐದುವರ್ಷಗಳಲ್ಲಿ ವಿದೇಶಿಪ್ರಜೆಗಳಿಗೆ ಕಾನೂನುಬಾಹಿರವಾಗಿ ಮನೆಗಳನ್ನು ಬಾಡಿಗೆ ನೀಡಿದವರ ವಿರುದ್ಧ 70 ಪ್ರಕಣಣಗಳು ದಾಖಲಾಗಿವೆ…
ಚಿಕ್ಕಮಗಳೂರು : ಚಿಕ್ಕಮಂಗಳೂರಲ್ಲಿ ಭೀಕರವಾದಂತ ಅಪರಾಧ ಸಂಭವಿಸಿದ್ದು ಚಿಕ್ಕಮಂಗಳೂರು ಜಿಲ್ಲೆಯ ಹಿರೇಮಂಗಳೂರು ಸಮೀಪ ರೈಲ್ವೆ ಬ್ರಿಡ್ಜ್ ಬಳಿ ಕಾರು ಮತ್ತು ಬೈಕ್ ಮುಖಾಂತರ ಡಿಕ್ಕಿ ಹೊಡಿದಿವೆ. ಈ ಒಂದು ಅಪಘಾತದಲ್ಲಿ ಇಬ್ಬರಿಗೆ ಗಂಭೀರವಾದಗಳಾಗಿದ್ದು ಇಬ್ಬರ ಆರೋಗ್ಯ ಸ್ಥಿತಿ ಕೂಡ ಇದೀಗ ಚಿಂತಾಜನಕವಾಗಿದೆ ಎನ್ನಲಾಗಿದೆ. ಹೌದು ಚಿಕ್ಕಮಂಗಳೂರಿನ ಹಿರೇಮಗಳೂರು ರೈಲ್ವೆ ಬ್ರಿಡ್ಜ್ ಬಳಿ ಒಂದು ಅಪಘಾತ ಸಂಭವಿಸಿದೆ. ಚಿಕ್ಕಮಂಗಳೂರಿನ ಕೋಟೆ ಪ್ರದೇಶ ನಿವಾಸಿ ಚಿರಂತ (35) ತೆಗುರು ಗ್ರಾಮದ ನಿವಾಸಿ ತೇಜಸ್ (24) ಗಂಭೀರವಾದ ಗಾಯ ಆಗಿದೆ. ರೈಲ್ವೆ ಬ್ರಿಡ್ಜ್ ಡಿಕ್ಕಿಯಾಗಿ ಕಾರು ಬಿದ್ದು ನುಜ್ಜುಗುಜ್ಜಾಗಿದೆ. ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಮಂಗಳೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಇತ್ತೀಚೆಗೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಹಾವಳಿಯಿಂದ ಅನೇಕ ಜನರು ಆತ್ಮಹತ್ಯೆ ಶರಣಾಗುತ್ತಿದ್ದರು. ಈ ಹಿನ್ನೆಲೆಯಲ್ಲಿ, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಹಾವಳಿ ತಡೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಸುಗ್ರೀವಾಜ್ಞೆಗೆ ಕಾನೂನು ರೂಪ ನೀಡಲಾಗುತ್ತಿದ್ದು, ಅದಕ್ಕೆ ಪೂರಕವಾಗಿ ಮೂರು ವಿಧೇಯಕಗಳನ್ನು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ಮಂಡಿಸಿದರು. ಸಾಲ ಪಡೆದವರ ವಿರುದ್ಧ ಲೇವಾದೇವಿದಾರ ಅಥವಾ ಲೇವಾದೇವಿ ಸಂಸ್ಥೆ ಬಲವಂತದ ಕ್ರಮ ಕೈಗೊಳ್ಳುವುದನ್ನು ತಡೆಯುವ ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ವಿಧೇಯಕ 2025, ಜತೆಗೆ ದುಬಾರಿ ಬಡ್ಡಿ ವಿಧಿಸುವುದನ್ನು ತಡೆಯುವುದು ಹಾಗೂ ಗಿರವಿದಾರರಿಂದ ರಕ್ಷಿಸುವ ಕರ್ನಾಟಕ ಗಿರವಿದಾರರ (ತಿದ್ದುಪಡಿ) ವಿಧೇಯಕ 2025, ಕರ್ನಾಟಕ ಮಿತಿ ಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ (ತಿದ್ದುಪಡಿ) ವಿಧೇಯಕ 2025 ಅನ್ನು ಮಂಡಿಸಲಾಯಿತು. ಸಾಲ ವಸೂಲಾತಿ ವಿಚಾರದಲ್ಲಿ ಕಿರುಕುಳ ನೀಡುವವರಿಗೆ ಗರಿಷ್ಠ 10 ವರ್ಷಗಳ ಗರಿಷ್ಠ ಜೈಲು ಶಿಕ್ಷೆ ಹಾಗೂ 5 ಲಕ್ಷ ರು.ವರೆಗೆ ದಂಡ ವಿಧಿಸುವ ಕುರಿತ ತಿದ್ದುಪಡಿಯನ್ನು ಈ 3 ವಿಧೇಯಕಗಳಲ್ಲೂ…
ಬೆಂಗಳೂರು : ಈಗಾಗಲೇ KSRTC ಬಸ್, ಮೆಟ್ರೋ ಟಿಕೆಟ್ ಪ್ರಯಾಣದ ದರ ಏರಿಕೆ ಮಾಡಿ ಸರ್ಕಾರ ಜನರ ಆಕ್ರೋಶಕ್ಕೆ ಗುರಿಯಾಗಿದ್ದು, ಇದರ ಬೆನ್ನಲ್ಲೆ ಇದೀಗ ಮತ್ತೊಂದು ಶಾಕ್ ನೀಡಲು ಹೊರಟಿರುವ ಸರ್ಕಾರ ವಿವಿಧ ದರ ಏರಿಕೆಗಳಿಂದ ತತ್ತರಿಸಿರುವ ಸಾರ್ವಜನಿಕರಿಗೆ ಇದೀಗ ವಿದ್ಯುತ್ ಮೀಟರ್ ದರ ಶೇ.400 ರಿಂದ ಶೇ.800 ರಷ್ಟು ಏರಿಕೆ ಮಾಡಿ ಹೊಸ ಶಾಕ್ ನೀಡಿದೆ. ಹೌದು ಬೆಸ್ಕಾಂ ಸಂಸ್ಥೆ ತನ್ನ ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಹೊಸ ವಿದ್ಯುತ್ ಸಂಪರ್ಕ ಪಡೆಯಲು ಸ್ಮಾರ್ಟ್ ಮೀಟರ್ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ.ಜ.15 ರಿಂದ ಅನ್ವಯವಾಗುವಂತೆ ಬೆಸ್ಕಾಂ ವ್ಯಾಪ್ತಿಯಲ್ಲಿ ತೆಗೆದುಕೊಳ್ಳುವ ಎಲ್ಲಾ ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕೂ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಲಾಗಿದೆ. ಇನ್ನು ಹೊಸ ಕಾಯಂ ಸಂಪರ್ಕ ಪಡೆಯಲೂ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಿದ್ದು, ಪ್ರಿಪೇಯ್ಡ್ ಅಥವಾ ಪೋಸ್ಟ್ ಪೇಯ್ಡ್ ಎಂಬ ಆಯ್ಕೆ ನೀಡಿದೆ. ಸ್ಮಾರ್ಟ್ ಮೀಟರ್ ನಿರ್ವಹಣೆ ಬಗ್ಗೆ ಬೆಸ್ಕಾಂ ಮಾರ್ಗಸೂಚಿ ಹೊರಡಿಸಿದ್ದು, ಪ್ರಿಪೇಯ್ಡ್ ಗ್ರಾಹಕರು ಕನಿಷ್ಠ 100 ರು. ಅಥವಾ ಒಂದು…
ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಬಿಐ ತನಿಖೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್ ಗೆ ಮತ್ತೆ ಮೇಲ್ಮನವಿ ಸಲ್ಲಿಸಿದ್ದಾರೆ. ಹೀಗಾಗಿ ಸಿಎಂ ಹಾಗೂ ಪತ್ನಿ ಪಾರ್ವತಿಗೆ ಸಂಕಷ್ಟ ಎದುರಾದಂತೆ ಆಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (Mysore Urban Development Authority -MUDA) ಭೂ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಕಾನೂನು ಸವಾಲುಗಳನ್ನು ಎದುರಿಸುತ್ತಿದ್ದು, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಆರ್ ಟಿಐ ಕಾರ್ಯಕರ್ತ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿ.ಎಂ.ಗೆ 14 ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸ್ನೇಹಮಯಿ ಕೃಷ್ಣ ಅವರು ಪ್ರಕರಣವನ್ನು ರಾಜ್ಯ ಒಂಬುಡ್ಸ್ ಮನ್ ಲೋಕಾಯುಕ್ತದಿಂದ ಸಿಬಿಐಗೆ ವರ್ಗಾಯಿಸುವಂತೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು. ಆದರೆ, ಲೋಕಾಯುಕ್ತರಿಂದ ಪಕ್ಷಪಾತ ಅಥವಾ ಕಳಪೆ ತನಿಖೆಯನ್ನು ಸೂಚಿಸಲು ಯಾವುದೇ ಪುರಾವೆಗಳಿಲ್ಲ ಎಂದು ತೀರ್ಪು ನೀಡಿ ನ್ಯಾಯಾಲಯವು ಫೆಬ್ರವರಿ 7 ರಂದು ಮನವಿಯನ್ನು…
ಬೆಂಗಳೂರು : ಬೆಂಗಳೂರಲ್ಲಿ ನಿನ್ನೆ ರಾತ್ರಿ ಭೀಕರವಾದ ಹತ್ಯೆ ನಡೆದಿದ್ದು, ಮದ್ಯ ಸೇವಿಸಲು ಎಂದು ಬಾರ್‌ಗೆ ಬಂದಿದ್ದ ರೌಡಿ ಶೀಟರ್ ನನ್ನು ನಾಲೈದು ಮಂದಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಯಲಹಂಕದ ಕೊಡಗಿ ತಿರುಮಲಪುರ ನಿವಾಸಿ ಜಯರಾಮ್ (42) ಹತ್ಯೆಯಾದ ರೌಡಿ ಶೀಟರ್ ಎಂದು ತಿಳಿದುಬಂದಿದೆ. ಮಂಗಳವಾರ ರಾತ್ರಿ ಸುಮಾರು 9.30ಕ್ಕೆ ಹೆಸರಘಟ್ಟ ರಸ್ತೆಯ ತಿರುಮಲಪುರ ವಿಲೇಜ್‌ನ ಸಾಯಿ ಬಾರ್‌ನಲ್ಲಿ ಈ ಘಟನೆ ನಡೆದಿದೆ. ಹತ್ಯೆ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹತ್ಯೆಯಾದ ಜಯರಾಮ್ ಯಲಹಂಕ ಉಪನಗರ ಪೊಲೀಸ್ ಠಾಣೆಯ ರೌಡಿ ಶೀಟರ್ ಆಗಿದ್ದಾನೆ. ಈತನ ವಿರುದ್ಧ ಕೊಲೆ, ದರೋಡೆ, ಹಲ್ಲೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳು ದಾಖಲಾಗಿವೆ. ಪ್ರಸ್ತುತ ಯಲಹಂಕದ ಕೊಡಗಿ ತಿರುಮಲಪುರದಲ್ಲಿ ಪತ್ನಿ ಮತ್ತು ಮಕ್ಕಳ ಜತೆ ನೆಲೆಸಿದ್ದ. ಕೋಳಿ ಅಂಗಡಿ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ. ಮಂಗಳವಾರ ರಾತ್ರಿ ಮದ್ಯ ಸೇವಿಸಲು ಹೆಸರಘಟ್ಟ ರಸ್ತೆಯ ತಿರುಮಲಪುರ ವಿಲೇಜ್‌ನ…
ಬೆಂಗಳೂರು : ಶಿವಮೊಗ್ಗದಲ್ಲಿ ಲವ್ ಜಿಹಾದ್ ಪುಸ್ತಕ ಬಿಡುಗಡೆಗೆ ಪಾಲ್ಗೊಳ್ಳಲು ನಗರಕ್ಕೆ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ 7 ದಿನಗಳ ನಿರ್ಬಂಧ ವಿಧಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಬಂಧ ತೆರವುಗೊಳಿಸುವಂತೆ ಕ್ರಮದ ಮುತಾಲಿಕ್ ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಇದೀಗ ಪ್ರಮೋದ್ ಮುತಾಲಿಕ್ ಗೆ ಶಿವಮೊಗ್ಗ ನಗರಕ್ಕೆ ತೆರಳಲು ಅನುಮತಿ ನೀಡಿದೆ. ಘಟನೆ ಹಿನ್ನೆಲೆ? ಶಿವಮೊಗ್ಗದಲ್ಲಿ ಮಾರ್ಚ್ 1ರಂದು ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದಕ್ಕಾಗಿ ಪ್ರಮೋದ್ ಮುತಾಲಿಕ್ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದರು. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಅವರನ್ನು ಶಿವಮೊಗ್ಗ ಹೊರವಲಯದ ರಾಗಿಗುಡ್ಡದ ಬಳಿ ತಡೆದು ವಾಪಸ್ ಕಳುಹಿಸಲಾಗಿತ್ತು. ಫೆಬ್ರವರಿ 28 ರಿಂದ 7 ದಿನಗಳ ಕಾಲ ಪ್ರಮೋದ್ ಮುತಾಲಿಕ್ ಶಿವಮೊಗ್ಗ ಜಿಲ್ಲೆ ಪ್ರವೇಶಿಸದಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಶ್ರೀರಾಮ ಸೇನೆ ವತಿಯಿಂದ ಪ್ರಕಟಿಸಲಾದ ಲವ್ ಜಿಹಾದ್ ಪುಸ್ತಕ ಬಿಡುಗಡೆಗಾಗಿ ಪ್ರಮೋದ್ ಮುತಾಲಿಕ್ ಆಗಮಿಸಿದ್ದರು. ಇದಕ್ಕೂ ಮುನ್ನ ಅವರು ಪತ್ರಿಕಾಗೋಷ್ಠಿ ಕರೆದಿದ್ದರು. ನಂತರ ಭದ್ರಾವತಿಯಲ್ಲಿ…
ಕೊಪ್ಪಳ : ಪೊಲೀಸ್ ಸಿಬ್ಬಂದಿಗಳಿಗೆ ಬಂದೂಕು ತರಬೇತಿ ನೀಡುತ್ತಿದ್ದ ವೇಳೆ, ಆಕಸ್ಮಿಕವಾಗಿ ಗುಂಡು ಸಿಡಿದು ಕುರಿ ಕಾಯುತ್ತಿದ್ದ ಮಹಿಳೆಗೆ ತಗೋಳಿ ಗಂಭೀರವಾದ ಗಾಯಗಳಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಬ್ಬಲಗುಡ್ಡ ಗ್ರಾಮದಲ್ಲಿ ನಡೆದಿದೆ. ದ್ರಾಕ್ಷಾಯಿನಿ ರೇಣುಕಾ ( 34) ಗುಂಡು ತಗುಲಿ ಗಾಯಗೊಂಡಿರುವ ಮಹಿಳೆ ಎಂದು ತಿಳಿದುಬಂದಿದೆ. ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಮುನಿರಾಬಾದ್ ಡ್ಯಾಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ದ್ರಾಕ್ಷಾಯಿನಿ ಹೊಲದಲ್ಲಿ ಕುರಿಹಟ್ಟಿಯಿಂದ ಪಾತ್ರೆಗಳನ್ನು ಸ್ವಚ್ಛಗೊಳಿಸಲು ಬಂದಿದ್ದ ವೇಳೆ, ಪೊಲೀಸರಿಂದ ಹಾರಿಸಲಾದ ಗುಂಡು ಅಚಾನಕ್ ಎಡ ಕೈ ಗೆ ತಗುಲಿದ್ದು, ಮಹಿಳೆಯ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಆಸ್ಪತ್ರೆಗೆ ಭೇಟಿ ನೀಡಿ ಹಿರಿಯ ಪೊಲೀಸ್ ಅಧಿಕಾರಿಗಳು ಮಹಿಳೆಯ ಆರೋಗ್ಯವನ್ನು ವಿಚಾರಿಸಿದ್ದಾರೆ.












