Author: kannadanewsnow05

ವಿಜಯಪುರ : ವಿಜಯಪುರ ರೈತರ ಜಮೀನುಗಳ ಪಹಣಿಗಳಲ್ಲಿ ವಕ್ಫ್ ಹೆಸರು ವಿಚಾರಕ್ಕೆ ಸಂಬಂಧಪಟ್ಟಂತೆ ಯಾವುದೇ ಆಸ್ತಿಯ ಹಕ್ಕನ್ನು ನಿರ್ಣಯ ಮಾಡುವ ಅಧಿಕಾರ ಕಂದಾಯ ಇಲಾಖೆ ಅಧಿಕಾರಿಗಳಿಗೆ ಇರಲ್ಲ ಎಂದು ವಿಜಯಪುರ ಜಿಲ್ಲಾಧಿಕಾರಿ ಟಿ ಭೂಬಾಲನ್ ವಿಡಿಯೋ ಮುಖಾಂತರ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಖಾಸಗಿ ವ್ಯಕ್ತಿ ಖಾಸಗಿ ಸಂಸ್ಥೆ ಸರ್ಕಾರಿ ಸಂಸ್ಥೆಯವರು ಅವರ ಬಳಿಯ ಸೂಕ್ತ ದಾಖಲಾತಿ ಕಂದಾಯ ಇಲಾಖೆಗೆ ನೀಡಬೇಕು. ಸಂಬಂಧಿಸಿದವರಿಗೆ ಕಂದಾಯ ಇಲಾಖೆ ಅಧಿಕಾರಿಗಳು ನೋಟಿಸ್ ನೀಡುತ್ತಾರೆ. ನಂತರ ಹಕ್ಕನ್ನು ಖಚಿತಪಡಿಸಿಕೊಂಡು ದಾಖಲಾತಿಗಳನ್ನು ಇಂಡೀಕರಣ ಮಾಡಲಾಗುತ್ತದೆ. ಇಂಡೀಕರಣ ಮಾಡುವುದು ಕಂದಾಯ ಇಲಾಖೆ ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ ಎಂದಿದ್ದಾರೆ. 1974 ರಲ್ಲಿ ವಕ್ಫ್ ಬೋರ್ಡ್ ಗೆಜೆಟ್ ನೋಟಿಫಿಕೇಶನ್ ಹೊರಡಿಸಿತ್ತು. ಆಸ್ತಿಗಳ ಕಂದಾಯ ಇಲಾಖೆಗೆ ಇಂಡೀಕರಣ ಮಾಡಲು ಪಟ್ಟಿ ನೀಡಿದ್ದಾರೆ. ವಿಜಯಪುರ ಜಿಲ್ಲಾ ವಕ್ಫ್ ಬೋರ್ಡ್ ಅಧಿಕಾರಿಗಳು ನೀಡಿದ್ದಾರೆ. ದಾಖಲಾತಿ ಪರಿಶೀಲಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ.ಈ ಪ್ರಕ್ರಿಯೆಗಾಗಿ ರೈತರಿಗೆ ಹಾಗೂ ಮಾಲೀಕರಿಗೆ ನೋಟಿಸ್ ನೀಡಲಾಗುತ್ತದೆ. ನೋಟಿಸ್ ಗೆ ಭಯಪಡುವ ಅಗತ್ಯವಿಲ್ಲವೆಂದು ಜಿಲ್ಲಾಧಿಕಾರಿ ಧೈರ್ಯ ತುಂಬಿದ್ದಾರೆ.…

Read More

ಬೆಂಗಳೂರು : ಮಲ್ಟಿಪ್ಲೆಕ್ಸ್ ಸಿನಿಮಾ ಮಂದಿರಗಳಲ್ಲಿ ಪ್ರವೇಶ ದರವನ್ನು 200 ರೂಪಾಯಿ ನಿಗದಿಪಡಿಸಿ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಗೃಹ ಕಚೇರಿ ಕೃಷ್ಣ ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದ ಬಳಿಕ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಮಾತನಾಡಿ,ಇತ್ತೀಚೆಗೆ ಮಲ್ಟಿಪ್ಲೆಕ್ಸ್‌ ಸೇರಿದಂತೆ ಚಿತ್ರಮಂದಿರಗಳಲ್ಲಿ ಪ್ರವೇಶ ದರ ದುಬಾರಿಯಾಗಿದ್ದು, ಸಾವಿರದಿಂದ ಒಂದೂವರೆ ಸಾವಿರ ರೂಪಾಯಿವರೆಗೂ ಟಿಕೆಟ್ ದರವನ್ನು ನಿಗದಿಪಡಿಸಲಾಗುತ್ತಿದೆ. ಇದರಿಂದ ಕನ್ನಡ ಪ್ರೇಕ್ಷಕರಿಗೆ ಹೊರೆಯಾಗಿದೆ‌. ರೂ.200 ಮೀರದಂತೆ ಪ್ರವೇಶದರ ವಿಧಿಸುವಂತೆ ಸಿಎಂಗೆ ಮನವಿ ಸಲ್ಲಿಸಿದ್ದೇವೆ ಎಂದರು. ಇತ್ತೀಚೆಗೆ ವಾಣಿಜ್ಯ ಮಂಡಳಿಯ ಮುಂಭಾಗದಲ್ಲಿ ನಿರ್ಮಾಪಕರು, ವಿತರಕರು, ಪ್ರದರ್ಶಕರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ದುಬಾರಿ ಪ್ರವೇಶ ದರದಿಂದ ಚಿತ್ರಮಂದಿರದಲ್ಲಿ ಚಿತ್ರ ವೀಕ್ಷಿಸಲು ಪ್ರೇಕ್ಷಕರು ಗಣನೀಯ ಪ್ರಮಾಣದಲ್ಲಿ ಕುಂಠಿತಗೊಂಡು ಚಿತ್ರ ನಿರ್ಮಾಣಕ್ಕೆ ಹಾಕಿದ ಬಂಡವಾಳ ಸಹ ವಾಪಸ್ ಪಡೆಯಲು ಕಷ್ಟಸಾಧ್ಯವಾಗುತ್ತಿದೆ. ಹಾಗಾಗಿ ಕೂಡಲೇ 200…

Read More

ಬೆಂಗಳೂರು : ಬೆಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು 7 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.ಈ ಒಂದು ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ ಕೋರ್ಟ್ ಆದೇಶ ನಿಜಕ್ಕೂ ನನಗೆ ಶಾಕ್ ನೀಡಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಈ ವಿಚಾರದ ಕುರಿತಾಗಿ ಪ್ರತಿಕ್ರಿಯಿಸಿದ ಅವರು, ಕಾನೂನಿಗೆ ಯಾರೇ ಆಗಲಿ ಗೌರವ ಕೊಡಬೇಕು. ಶಾಸಕ ಸತೀಶ್ ಸೈಲ್​​ಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಅವರು ಮೇಲ್ಮನವಿ ಸಲ್ಲಿಸಬಹುದು ಎನಿಸುತ್ತೆ. ಆದರೆ ಕಾನೂನಿಗೆ ಎಲ್ಲರೂ ತಲೆ ಬಾಗಬೇಕು. ಇನ್ನು ಶಾಸಕ ಸ್ಥಾನ ವಜಾ ಬಗ್ಗೆ ಕೋರ್ಟ್​ ನೀಡಿರುವ ಆದೇಶದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಲೀಗಲಿ ಏನು ಆಗಬೇಕೋ ಅದು ಆಗುತ್ತದೆ ಎಂದು ತಿಳಿಸಿದರು. ಬೇಲೆಕೇರಿ ಅದಿರು ನಾಪತ್ತೆ ಕೇಸ್‌ನ 6 ಪ್ರಕರಣಗಳಲ್ಲೂ ಕಾಂಗ್ರೆಸ್ ಶಾಸಕ ಸತೀಶ್ ರೈಗೆ 7 ವರ್ಷ ಜೈಲು ಎಂದು ಕೋರ್ಟ್ ಆದೇಶ ಹೊರಡಿಸಿದೆ.…

Read More

ಬೆಂಗಳೂರು : ಮಾಜಿ ಸಚಿವರ ಪುತ್ರನಿಗೆ ಹನಿಟ್ರ್ಯಾಪ್ ಮಾಡಿದ್ದ ಪ್ರಕರಣಕ್ಕೆ ಸಂಬಂಪಟ್ಟಂತೆ ಕಾಂಗ್ರೆಸ್ ನಾಯಕಿಯ ಬಂಧನವಾಗಿದೆ. ಬೆಂಗಳೂರಿನ ಸಿಸಿಬಿ ಪೊಲೀಸರಿಂದ ಕಾಂಗ್ರೆಸ್ ನಾಯಕಿಯಾಗಿ ಗುರುತಿಸಿಕೊಂಡಿದ್ದ ಮಂಜುಳಾ ಪಾಟೀಲ್ ಳನ್ನು ಇದೀಗ ಬಂಧಿಸಲಾಗಿದೆ. ಬಂಧಿತ ಮಂಜುಳಾ ಪಾಟೀಲ್ ಳನ್ನು ನಲಪಾಡ್ ಬ್ರಿಗೇಡ್ ನ ಕಲಬುರ್ಗಿ ಘಟಕದ ಅಧ್ಯಕ್ಷೆ ಎಂದು ಹೇಳಲಾಗುತ್ತಿದೆ. ಮಾಜಿ ಸಚಿವರ ಪುತ್ರನಿಗೆ ವಾಟ್ಸಪ್ ಕರೆ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಳು. ಕಾಂಗ್ರೆಸ್ನ ಮಾಜಿ ಮಂತ್ರಿ ಪುತ್ರನಿಗೆ ಖೆಡ್ಡ ತೋಡಿ 20 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಳು ಎನ್ನಲಾಗಿದೆ. ಈ ವೇಳೆ ಹನಿಟ್ರ್ಯಾಪ್ ವಿಚಾರ ಕೇಳಿ ಮಂಜುಳಾಗೆ ಮಾಜಿ ಸಚಿವರ ಪುತ್ರ ಉಲ್ಟಾ ಹೊಡೆದು ಖೆಡ್ಡ ತೋಡಿದ್ದ. 20 ಲಕ್ಷ ಆಗಲ್ಲ ಕಡಿಮೆ ಮಾಡಿ ಅಂತ ಮಾಜಿ ಸಚಿವರ ಪುತ್ರ ಹೇಳಿದ್ದ. ಅದಕ್ಕೆ ಮಂಜುಳ 20 ಲಕ್ಷದಲ್ಲಿ ನಯಾ ಪೈಸೆ ಸಹ ಕಡಿಮೆ ಆಗಲ್ಲ ಎಂದು  ಹೇಳಿದ್ದಳು. ಇದೀಗ 20 ಲಕ್ಷ ಹಣ ಪಡೆಯುವಾಗ ಮಂಜುಳಾ ಪಾಟೀಲ್ ಸಿಸಿಬಿ ಪೊಲೀಸರಿಗೆ ರೆಡ್…

Read More

ಬೆಂಗಳೂರು : ಬೆಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಏಳು ವರ್ಷಗಳ ಕಾಲ ಕಠಿಣ ಶಿಕ್ಷೆ ವಿಧಿಸಿದೆ ಈ ವಿಚಾರವಾಗಿ ಲೋಕಾಯುಕ್ತ ನಿವೃತ್ತ ನ್ಯಾ. ಸಂತೋಷ್ ಹೆಗಡೆ ಅವರು ಈ ಒಂದು ಪ್ರಕರಣದಲ್ಲಿ ಇನ್ನೂ ಹಲವರಿದ್ದಾರೆ ಅವರಿಗೂ ಶಿಕ್ಷೆ ಆಗಬೇಕು ಎಂದು ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಂದು ತೀರ್ಪಿನ ಮುಖಾಂತರ ತಪ್ಪು ಮಾಡಿದವರಿಗೆ ಶಿಕ್ಷೆ ಹಾಗೆ ಆಗುತ್ತದೆ ಎಂದು ತೋರಿಸುತ್ತದೆ. ಅಕ್ರಮ ಅದಿರು ಸಾಗಣೆ ಕೇಸ್ನಲ್ಲಿ ಶಿಕ್ಷೆಯಾಗಿದ್ದು ಉತ್ತಮ ಬೆಳವಣಿಗೆ ಶಿಕ್ಷೆ ಆಗಿರುವುದರಿಂದ ನ್ಯಾಯಾಂಗದ ಶಕ್ತಿ ತೋರಿಸಿ ದಂತಾಗುತ್ತದೆ. ನ್ಯಾಯಾಂಗದ ಮೇಲೆ ಜನರಿಗೆ ವಿಶ್ವಾಸ ಬಂದಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ ಹೆಗಡೆ ಪ್ರತಿಕ್ರಿಯೆ ನೀಡಿದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುವ ಸಂದರ್ಭದಲ್ಲಿ ದೊಡ್ಡ ರಾಜಕಾರಣಿಗಳ ವಿರುದ್ಧ ತನಿಖೆಯ ವೇಳೆ ಅಡೆ-ತಡೆ ಎದುರಾಗಿತ್ತು.ನನ್ನ ಜೊತೆಗೆ ಕೆಲಸ ಮಾಡಿದಾಗ ಅಧಿಕಾರಿಗಳಿಗೆ ಇದೀಗ ಸಂತೃಪ್ತಿ ಸಿಕ್ಕಂತಾಗುತ್ತದೆ ಅಕ್ರಮದಲ್ಲಿ ಇನ್ನೂ ಹಲವರಿದ್ದಾರೆ…

Read More

ಬೆಂಗಳೂರು : ಬೆಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಸತೀಶ್ ಸೈಲ್ ಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಸೇರಿದಂತೆ ಒಟ್ಟು 6 ಪ್ರಕರಣಗಳಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಸೇರಿದಂತೆ ಇತರೆ ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದೆ. ಅಲ್ಲದೆ 6 ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು 44 ಕೋಟಿಗೂ ಅಧಿಕ ದಂಡ ವಿಧಿಸಿದೆ. ಒಟ್ಟು 6 ಪ್ರಕರಣಗಳಲ್ಲಿ ಶಿಕ್ಷೆ ನೀಡಿರುವ ನ್ಯಾಯಲಯ ಅದರಂತೆ ಪ್ರತಿಯೊಂದು ಶಿಕ್ಷೆಗೂ ಕೂಡ ದಂಡ ವಿಧಿಸಿದೆ. ಒಳಸಂಚು ಆರೋಪದ ಅಡಿ 5 ವರ್ಷ ಜೈಲು ಶಿಕ್ಷೆ, ವಂಚನೆ ಕೇಸ್ ನಲ್ಲಿ 7 ವರ್ಷ ಕಠಿಣ ಶಿಕ್ಷೆ, ಕಳ್ಳತನ ಪ್ರಕರಣದಲ್ಲಿ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇನ್ನು 4,5 ಹಾಗೂ 6ನೇ ಕೇಸ್ ನಲ್ಲಿ ಕೂಡ ಶಿಕ್ಷೆ ವಿಧಿಸಿದೆ. ಎಲ್ಲ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು 44 ಕೋಟಿ ದಂಡ ವಿಧಿಸಿದ ಕೋರ್ಟ್ ದಂಡದ ಮೊತ್ತವನ್ನು ಸರ್ಕಾರಕ್ಕೆ ಜಪ್ತಿ ಮಾಡಿಕೊಳ್ಳಲು ಆದೇಶ ನೀಡಿದೆ.…

Read More

ಬೆಂಗಳೂರು : ಬೆಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬೆಂಗಳೂರಿನ ಜನ ಪ್ರತಿನಿಧಿಗಳ ನ್ಯಾಯಾಲಯವು ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ತೀರ್ಪು ಪ್ರಕಟವಾಗಲಿದ್ದು ಬೆಂಗಳೂರಿನ ಜನ ಪ್ರತಿನಿಧಿಗಳ ನ್ಯಾಯಾಲಯದ ಜಡ್ಜ್ ಸಂತೋಷ ಗಜಾನನ ಭಟ್ ಅವರು, ಮೂರು ಪ್ರಕರಣಗಳಲ್ಲಿ ಶಾಸಕ ಸತೀಶ್ ಸೈಲ್ ಗೆ ಒಟ್ಟು 15 ವರ್ಷ ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದ್ದಾರೆ.ಅಲ್ಲದೆ ಒಟ್ಟು 9 ಕೋಟಿ 60 ಲಕ್ಷ ದಂಡ ವಿಧಿಸಬೇಕು ಎಂದು ಕೋಟ್ ಆದೇಶಿಸಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಈ ಕುರಿತು ತೀರು ಪ್ರಕಟಿಸಿರುವ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರು ಕಳ್ಳತನ ಪ್ರಕರಣದಲ್ಲಿ ಅಪರಾಧೀಗಳಿಗೆ 5 ವರ್ಷ ಅಲ್ಲದೆ ವಂಚನೆ ಪ್ರಕರಣದಲ್ಲಿ 7 ವರ್ಷ ಹಾಗೂ ಒಳಸಂಚು ಆರೋಪದಲ್ಲಿ 5 ವರ್ಷ ಶಿಕ್ಷೆ ಪ್ರಕಟಿಸಲಾಗಿದೆ.ಹಾಗಾಗಿ ಸತೀಶ್ ಸೈಲ್ ಅವರಿಗೆ ಜೈಲೇ ಗತಿ ಎನ್ನುವಂತಾಗಿದೆ. ಕಳೆದ 2010 ರ ಜೂನ್ 2ರಲ್ಲಿ, ಅಂದರೆ ಕೇವಲ…

Read More

ಬೆಂಗಳೂರು : ಶಿಗ್ಗಾವಿ ಬಂಡಾಯ ಅಭ್ಯರ್ಥಿ ಅಜ್ಜಂಪೀರ್ ಖಾದ್ರಿ ಜೊತೆಗೆ ಸಂಧಾನ ಯಶಸ್ವಿಯಾಗಿದ್ದು, ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಅವರೊಂದಿಗೆ ಸಂಧಾನ ಮಾಡಿದ್ದರು. ಆದರೆ ಅದು ಫಲಿಸಲಿಲ್ಲ. ಹಾಗಾಗಿ ಇದೀಗ ಬಂಡಾಯ ಅಭ್ಯರ್ಥಿ ಅಜ್ಜಂಪೀರ್ ಖಾದ್ರಿ ಸಂಧಾನ ಯಶಸ್ವಿಯಾಗಿದ್ದು, ಅಕ್ಟೋಬರ್ 30ರಂದು ನಾಮಪತ್ರ ಹಿಂಪಡೆಯುತ್ತಾರೆ ಎಂದು ಉಪಮುಖ್ಯಮಂತ್ರಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸದಾಶಿವನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಯೂ ಅಜ್ಜಂಪಿರ್ ಖಾದ್ರಿ ಹೆಸರು ಚಾಲ್ತಿಯಲ್ಲಿತ್ತು ಉಪಚುನಾವಣೆಯಲ್ಲಿ ಅಜ್ಜಂಪಿರ್ ಖಾದ್ರಿ ಹೆಸರು ಚಾಲ್ತಿಯಲ್ಲಿತ್ತು ಹಾಗಾಗಿ ಅವರ ಜೊತೆ ಸಂಧಾನ ನಡೆಯಿಸಿದ್ದು ಅಕ್ಟೋಬರ್ 30 ರಂದು ಅಜ್ಜಂಪಿರ್ ನಾಮಪತ್ರ ಹಿಂಪಡೆಯುತ್ತಾರೆ. ಶಿಗ್ಗಾವಿ ಬಡ್ಡಾಯ ಅಭ್ಯರ್ಥಿ ಅಜ್ಜಂಪೀರ್ ಖಾದ್ರಿ ಸಂಧಾನ ಯಶಸ್ವಿಯಾಗಿದೆ ಎಂದು ತಿಳಿಸಿದರು. ಬಳಿಕ ಬಂಡಾಯ ಅಭ್ಯರ್ಥಿ ಅಜ್ಜಂ ಪೀರ್ ಖಾದ್ರಿ ಮಾತನಾಡಿ ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸಂಧಾನ ಮಾಡಿದ್ದರು. ನಾಳೆ ಕಾರ್ಯಕರ್ತರ ಜೊತೆ ಬರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಗೆ ಹೇಳಿದ್ದೇನೆ. ನಮ್ಮ…

Read More

ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್‌ಗೆ ಸೇರಿಸುವ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ. ತಮ್ಮ ಜಮೀನುಗಳ ಪಹಣಿ ಪತ್ರಗಳಲ್ಲಿ ವಕ್ಫ್ ಬೋರ್ಡ್ ಹೆಸರನ್ನು ಸೇರಿಸಿರುವುದನ್ನು ರೈತರು ಪ್ರಶ್ನಿಸುತ್ತಿದ್ದಾರೆ ಮತ್ತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಚಿವ ಎಂಬಿ ಪಾಟೀಲ್ ಮಾಧ್ಯಮ ಪ್ರಕಟಣೆ ಹೊರಡಿಸುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ರೈತರಿಗೆ ಸೇರಿದ ಜಮೀನಲ್ಲಿ ಒಂದಿಂಚು ಕೂಡ ಯಾರ ವಶವೂ ಆಗಲು ಬಿಡುವುದಿಲ್ಲ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ 10 ಸರ್ವೇ ನಂಬರುಗಳ 11 ಎಕರೆ ಆಸ್ತಿ ಮಾತ್ರ ವಕ್ಫ್ ಆಸ್ತಿ ಎಂದು ಗೆಜೆಟ್ ನೋಟಿಫಿಕೇಷನ್ ಆಗಿದ್ದು, ಅದರಲ್ಲಿ 10 ಎಕರೆ 14 ಗುಂಟೆ ಖಬರಸ್ತಾನ ಇದೆ. ಉಳಿದದ್ದು ಈದ್ಗಾ, ಮಸೀದಿ ಇತ್ಯಾದಿ ಕಟ್ಟಡಗಳಿವೆ ಹಾಗೂ ಈ ಭೂಮಿಯು ಗ್ರಾಮ ಪಂಚಾಯಿತಿಯ ವ್ಯಾಪ್ತಿಗೆ ಸೇರಿದ್ದು, ಯಾವುದೇ ರೈತರ ಖಾಸಗಿ ಜಮೀನು ಒಳಪಟ್ಟಿಲ್ಲ ಎಂಬುದನ್ನು ಗಮನಿಸಬೇಕು.…

Read More

ಮೈಸೂರು : ಕೇವಲ 300 ರೂಪಾಯಿ ಸಲುವಾಗಿ ಸಹೋದರರ ಮಧ್ಯ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಈ ವೇಳೆ ಮನನೊಂದ ತಮ್ಮ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಅಹಲ್ಯ ಗ್ರಾಮದಲ್ಲಿ ಈ ಒಂದು ದುರಂತ ಸಂಭವಿಸಿದೆ. ಹೌದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸಿದ್ದರಾಜು ಎಂದು ಹೇಳಲಾಗುತ್ತಿದೆ. ಕರೆಂಟ್ ಬಿಲ್ ಕಟ್ಟಿ ಮನೆಗೆ ಬಂದ ಸಿದ್ದರಾಜು ಅಣ್ಣ ನಿಂಗಣ್ಣನ ಬಳಿ 200 ರೂಪಾಯಿ ಕರೆಂಟ್ ಬಿಲ್ ಕಟ್ಟಿದ್ದೇನೆ 200 ರೂ ಕೊಡು ಎಂದು ಕೇಳಿದ್ದಾನೆ. ಈ ವೇಳೆ ನನ್ನ ಬಳಿ ಹಣ ಕೇಳುತ್ತೀಯಾ ನಿಂಗಣ್ಣ ತಮ್ಮ ಸಿದ್ದರಾಜು ಮೇಲೆ ಹಲ್ಲೆ ಮಾಡಿದ್ದಾನೆ. ಕರೆಂಟ್ ಬಿಲ್ ಕಟ್ಟಿ ತನ್ನ 200 ರೂಪಾಯಿ ಕೇಳಿದ್ದಕ್ಕೆ ಅಣ್ಣ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಮನನೊಂದು ಸಿದ್ದರಾಜು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪಗಳು ಕೇಳಿಬಂದಿವೆ. ಈ ಒಂದು ಆತ್ಮಹತ್ಯೆಗೆ ಸಂಬಂಧಿಸಿದಂತೆ ಜಯಪುರ ಪೊಲೀಸ್ ಠಾಣೆಯಲ್ಲಿ…

Read More