Author: kannadanewsnow05

ನವದೆಹಲಿ : ಮಾಜಿ ಉಪ ಪ್ರಧಾನಿ ಹಾಗೂ ಭಾರತ ರತ್ನ ಪುರಸ್ಕೃತ , ಬಿಜೆಪಿಯ ಹಿರಿಯ ನಾಯಕರಾಗಿರುವ ಎಲ್ ಕೆ ಅಡ್ವಾಣಿ ಅವರು ವಯೋಸಹಜ ಕಾಯಿಲೆ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾಜಿ ಉಪ ಪ್ರಧಾನಿ ಹಾಗೂ ಭಾರತ ರತ್ನ ಪುರಸ್ಕೃತ ಎಲ್ ಕೆ ಅಡ್ವಾಣಿ ಅವರು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಅವರಿಗೆ ವಯೋ ಸಹಜ ಸಮಸ್ಯೆ ಹಿನ್ನೆಲೆಯಲ್ಲಿ ಅವರು ಇದೀಗ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

Read More

ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಜಿ.ಪರಮೇಶ್ವರ್ ಮಾತನಾಡಿದ್ದು ಅಶ್ಲೀಲ ವಿಡಿಯೋ ಹಂಚಿದ್ದು ಯಾರೆಂದು ಗೊತ್ತಿದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ. ಅಶ್ಲೀಲ ವಿಡಿಯೋ ಹಂಚಿದ್ದು ಯಾರು ಅಂತ ನಮಗೆ ಮಾಹಿತಿ ಇದೆ. ಸಾರ್ವಜನಿಕವಾಗಿ ಅನೇಕ ವಿಚಾರಗಳನ್ನು ಹಂಚಿಕೊಳ್ಳಲು ಆಗುವುದಿಲ್ಲ. ತನಿಖೆ ಮುಗಿದ ಬಳಿಕ ಸಾರ್ವಜನಿಕರಿಗೆ ಮಾಹಿತಿ ಗೊತ್ತಾಗುತ್ತದೆ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದರು.

Read More

ಮೈಸೂರು : ಬಡವರಿಗಾಗಿ ತಂದಿರುವಂತಹ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಎಂಎಲ್ಸಿ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲಲು ಗ್ಯಾರಂಟಿಗಳೆ ಕಾರಣ. ಗ್ಯಾರಂಟಿ ಯೋಜನೆಗಳಿಂದಲೇ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಕಾರಣವಾಯಿತು. ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷೆ ಮಾಡಿದಷ್ಟು ಸ್ಥಾನ ಸಿಗಲಿಲ್ಲ. ಆದರೂ ರಾಜ್ಯದಲ್ಲಿ ನಾವು 9 ಸ್ಥಾನವನ್ನು ಗೆದ್ದಿದ್ದೇವೆ ಎಂದರು. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ನನ್ನ ತಂದೆಗೆ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದೆ. ವರುಣ ಕ್ಷೇತ್ರವನ್ನು ಸಿಎಂ ಸಿದ್ದರಾಮಯ್ಯನವರಿಗೆ ಬಿಟ್ಟು ಕೊಟ್ಟಿದ್ದೆ.ಹೀಗಾಗಿ ಪಕ್ಷದ ವರಿಷ್ಠರು ಹಿರಿಯರು ನನ್ನನ್ನು ಎಂಎಲ್ಸಿ ಮಾಡಿದ್ದಾರೆ.ಪಕ್ಷವು ಏನೇ ಜವಾಬ್ದಾರಿ ನೀಡಿದರು ನಿಭಾಯಿಸುತ್ತೇನೆ.ಕಾಂಗ್ರೆಸ್ ಪಕ್ಷ ಬಲವರ್ಧನೆಗೆ ಶ್ರಮಿಸುತ್ತೇನೆ ಎಂದು ಮೈಸೂರಿನಲ್ಲಿ ಎಂಎಲ್ಸಿ ಡಾಕ್ಟರ್ ಯತೆಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದರು.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವಗಳನ್ನು ಪಡೆಯುತ್ತಿದೆ. ಇದೀಗ ಈ ಒಂದು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿದ ಆರೋಪಿಗಳಿಗೆ ನಟ ದರ್ಶನ್ ನೀಡಿದ 30 ಲಕ್ಷ ರೂಪಾಯಿಗಳನ್ನು ಪ್ರಕರಣದ ಎ 14 ಆರೋಪಿ ಪ್ರದೋಶ್ ಹಣ ಹಂಚಿದ್ದಾನೆ ಎಂದು ತಿಳಿದುಬಂದಿದೆ. ಹೌದು ರೇಣುಕಾ ಸ್ವಾಮಿ ಕೊಲೆಯ ನಂತರ ಆತನ ಶವವನ್ನು ಸಾಗಿಸಲು ನಟ ದರ್ಶನ್ ಅವರು 30 ಲಕ್ಷ ನೀಡಿದ್ದರು ಎಂದು ಈಗಾಗಲೇ ಪ್ರದೋಷ್ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಇದೀಗ ಒಂದು ಹೇಳಿಕೆಗೆ ಸಂಬಂಧಪಟ್ಟಂತೆ ಪ್ರದೋಷ ಕೊಲೆ ಮಾಡಿದ ನಂತರ ಆರೋಪಿಗಳನ್ನು ತನ್ನ ನಿವಾಸಕ್ಕೆ ಕರೆದುಕೊಂಡು ಹೋಗಿದ್ದ. ಅಲ್ಲದೆ ಈತ ವೃತ್ತಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಕೂಡ ಆಗಿದ್ದ ಎನ್ನಲಾಗಿದೆ. ಪ್ರದೋಷ್ ಮನೆಯಲ್ಲಿರೋ ಸಿಸಿಟಿವಿಯನ್ನು ಇದೀಗ ಪೊಲೀಸರು ಡಿವಿಆರ್ ವಶಕ್ಕೆ ಪಡೆದುಕೊಂಡಿದ್ದಾರೆ. ಕೃತ್ಯಕ್ಕೂ ಮೊದಲು ಆರೋಪಿಗಳು ಎಲ್ಲೆಲ್ಲಿ ಹೋಗಿದ್ದರು? ಹಾಗೂ ಮರ್ಡರ್ ಮಾಡಿದ ಬಳಿಕ ಯಾವ ಕಡೆ…

Read More

ಬೆಂಗಳೂರು : ರಾಜಕಾರಣಿ, ವಿಐಪಿ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಅವರನ್ನು ಹನಿ ಟ್ರ್ಯಾಪ್ ಮೂಲಕ ಬಲೆಗೆ ಬೀಳಿಸಿ ಕೊಂಡು ನಂತರ ಅವರಿಂದ ಕೋಟ್ಯಾಂತರ ರೂಪಾಯಿ ಹಣದ ಬೇಡಿಕೆ ಇಟ್ಟು ಬ್ಲ್ಯಾಕ್ ಮೆಲ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಎಂದು ಬೆಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಹೌದು ಹನಿ ಟ್ರ್ಯಾಪ್ ಮೂಲಕ ಬ್ಲಾಕ್ ಮೇಲ್ ಮಾಡುತ್ತಿದ್ದ ಇಬ್ಬರನ್ನು ಇದೀಗ ಬೆಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಮೈಸೂರು ಮೂಲದ ಸಂತೋಷ ಮತ್ತು ಪುಟ್ಟರಾಜು ಬಂಧಿತ ಆರೋಪಿಗಳು ಎಂದು ಹೇಳಲಾಗುತ್ತಿದೆ.ಕೋಟ್ಯಾಂತರ ರೂಪಾಯಿಗೆ ಬೇಡಿಕೆ ಇಟ್ಟು ಆರೋಪಿಗಳು ಬ್ಲಾಕ್ ಮೇಲ್ ಮಾಡಿದ್ದರು. ಈ ಸಂಬಂಧ ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ದೂರು ದಾಖಲಿಸಿದ್ದರು. ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಕೇಸ್ ದಾಖಲಿಸಿದ್ದರು.ಅಲ್ಲದೆ ವಿಶ್ವವಿದ್ಯಾಲಯ ಒಂದರ ಉಪಕುಲಪತಿಗೂ ಕೂಡ ಬ್ಲಾಕ್ ಮೇಲ್ ಮಾಡಿದ್ದರು. ಬಂಧಿತ ಆರೋಪಿಗಳ ಗ್ಯಾಂಗ್ನಲ್ಲಿ ಓರ್ವ ಯುವತಿ ಸಹ ಭಾಗಿಯಾಗಿದ್ದಾಳೆ ಎಂದು ತಿಳಿದುಬಂದಿದೆ. ಪ್ರಭಾವಿಗಳ ಸಂಪರ್ಕ ಮಾಡಿ ಆರೋಪಿಗಳು ಅವರನ್ನು ಫಾಲೋ ಮಾಡುತ್ತಿದ್ದರು.ಬಳಿಕ ವಿಐಪಿಗಳನ್ನು…

Read More

ಬೆಂಗಳೂರು : ನಂದಿನಿ ಹಾಲಿನ ದರ ಹೆಚ್ಚಳವಾಗುತ್ತಿದ್ದಂತೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದು, ಇದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು ನಂದಿನಿ ಹಾಲಿನ ದರ ಏರಿಕೆ ಮಾಡಿರುವ ಎರಡು ರೂಪಾಯಿ ನೇರವಾಗಿ ರೈತರಿಗೆ ತಲುಪುತ್ತದೆ ಎಂದು ತಿಳಿಸಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂದಿನಿ ಹಾಲಿನ ದರ ಏರಿಕೆ ಆಗಿರುವ 2 ರೂಪಾಯಿ ರೈತರಿಗೆ ತಲುಪುತ್ತದೆ. ರೈತರಿಗೆ ಹಣ ತಲುಪುವುದಿಲ್ಲ ಅನ್ನುವುದನ್ನು ಯಾರು ಹೇಳಿದರು? ಕೆಎಂಎಸ್ ಉಳಿದರೆ ರೈತರು ಉಳಿದಂತೆ. ರೈತರು ಸಾಲದಿಂದ ಹಸುಗಳನ್ನು ಮಾರಾಟ ಮಾಡುತ್ತಿದ್ದಾರೆ. ಬಿಜೆಪಿಯವರ ರೈತ ವಿರೋಧಿ ಧೋರಣೆ ಎದ್ದು ಕಾಣುತ್ತದೆ ಎಂದು ತಿಳಿಸಿದರು. ನಮ್ಮಲ್ಲಿ ಹಾಲಿನ ದರ ಎಷ್ಟಿದೆ, ಮಹಾರಾಷ್ಟ್ರದಲ್ಲಿ ಎಷ್ಟಿದೆ, ಬೇರೆ ರಾಜ್ಯದಲ್ಲಿ ಹಾಲಿನ ದರ ಎಷ್ಟಿದೆ ಎನ್ನುವುದನ್ನು ಬಿಜೆಪಿ ಅವರು ಮೊದಲು ತಿಳಿದುಕೊಳ್ಳಲಿ ಆಮೇಲೆ ಬೆಲೆ ಏರಿಕೆ ಕುರಿತು ಮಾತನಾಡಲಿ ಎಂದು ತಿರುಗೇಟು ನೀಡಿದರು. ಇನ್ನೂ ಇದೆ ವಿಚಾರವಾಗಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ದರ ಹೆಚ್ಚಳ ಮಾಡಿರುವುದು ರೈತರು…

Read More

ಬೆಂಗಳೂರು : ನಂದಿನಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚ 2. ರೂ.ಗಳನ್ನು ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು. ಅವರು ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸರ್ಕಾರ ಜನರಿಗೆ ಕೊಟ್ಟಿರುವ ಗ್ಯಾರಂಟಿ ಭಾಗ್ಯ ಎಂದು ಹಾಲಿನ ದರ ಏರಿಕೆ ಬಗ್ಗೆ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾಸ್ವಾಮಿ ಅವರು ಮಾಡಿರುವ ಟೀಕೆ ಬಗ್ಗೆ ಪ್ರತಿಕ್ರಿಯೆ ನೀಡಿ ನಾಳೆ ಈ ಬಗ್ಗೆ ಜಾಹೀರಾತು ನೀಡಲಾಗುತ್ತಿದೆ ಎಂದರು. ಬೆಲೆ ಏರಿಕೆ ಮಾಡಿಲ್ಲ. ಹಾಲಿನ ಪ್ರಮಾಣ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚದ ಮೊತ್ತವನ್ನು ಹೆಚ್ಚಿಸಲಾಗಿದೆ ಎಂದರು.ಹಾಲಿನ ಉತ್ಪಾದನೆ ಜಾಸ್ತಿಯಾಗಿದ್ದು ಮಾರುಕಟ್ಟೆ ವ್ಯವಸ್ಥೆ ಇಲ್ಲದ ಕಾರಣ ಹೆಚ್ಚು ಹಾಲು ನೀಡಿ ದರ ಹೆಚ್ಚಿಸಲಾಗಿದೆ ಎಂದರು. ಕುರಿಗಾಹಿಗಳು ಕುರಿತ ಬಜೆಟ್ ಘೋಷಣೆಗಳಿಗೆ ಸರ್ಕಾರಿ ಆದೇಶ ಕುರಿಗಾಹಿಗಳು ಬಂದೂಕು ಪರವಾನಗಿ, ಸಂಚಾರಿ ಕುರಿಗಾಹಿಗಳ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ, ಆಸ್ಪತ್ರೆಗಳಲ್ಲಿ ಔಷಧಿ, ಚಿಕಿತ್ಸೆ ದೊರೆಯಬೇಕು.…

Read More

ನವದೆಹಲಿ : ನಿನ್ನೆ ಬೀದರ್ನಲ್ಲಿ ಸಚಿವ ಜಮೀರ್ ಅಹ್ಮದ್ ಅವರು ಕಾರ್ಯಕ್ರಮ ಒಂದರಲ್ಲಿ ಮುಸ್ಲಿಮತಗಳಿಂದ ಮಾತ್ರ ಸಾಗರ ಖಂಡ್ರೆ ಗೆದ್ದಿದ್ದು, ಮುಸ್ಲಿಂ ಅವರ ಕೆಲಸಗಳನ್ನು ಯಾವುದೇ ಮುಲಾಜಿಲ್ಲದೆ ಮಾಡಬೇಕಾಗುತ್ತದೆ ಎಂಬ ಹೇಳಿಕೆ ಭಾರಿ ಸದ್ದು ಮಾಡಿತ್ತು. ಈ ಒಂದು ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಲು ಇವರು ನಾಲಾಯಕರಾಗಿದ್ದಾರೆ ಎಂದು ಕಿಡಿಕಾರಿದ್ದಾರೆ. ಇವರ ನಡವಳಿಕೆಯನ್ನು ನೋಡಿದರೆ ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬಂದಿದೆ ಅನ್ನುವ ಭ್ರಮೆಯಲ್ಲಿದ್ದಾರೆ. ಬೆಂಗಳೂರು ಮಹಾನಗರದಲ್ಲಿ ಪಶು ಆಸ್ಪತ್ರೆಗೆ ನೀಡಿದ ಜಾಗವನ್ನು ಏಕಾಏಕಿ ವಕ್ಫ ಮಂಡಳಿಗೆ ನೀಡಿದೆ. ಒಂದು ಕಡೆಯಿಂದ ಮಾತನಾಡಿದ್ದಾರೆ ಜವಾಬ್ದಾರಿ ಸ್ಥಾನದಲ್ಲಿದ್ದು ಈ ರೀತಿ ಹೇಳಿಕೆ ನೀಡಿದ್ದಾರೆ. ಯಾವ ಅರ್ಥದಲ್ಲಿ ಜಮೀರ್ ಅವರು ಮಾತನಾಡಿದ್ದಾರೆ ಎಂದರೆ ಮುಸಲ್ಮಾನ ಓಟಿನಿಂದ ಮಾತ್ರ ಸಾಗರ್ ಖಂಡ್ರೆ ಗೆದ್ದಿದ್ದಾರೆ ಎಂದು ಹೇಳಿದ್ದಾರೆ. ಸರ್ಕಾರದಲ್ಲಿ ಸಚಿವ ರಾಗಿ ಕೆಲಸ ಮಾಡಲು ಕೂಡ ನಾಲಾಯಕ ಸಚಿವರಾಗಿದ್ದಾರೆ. ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸ್…

Read More

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ಕಾಂಗ್ರೆಸ್ಸಿನ ನಾಯಕ ರಾಹುಲ್ ಗಾಂಧಿಯವರು ಆಯ್ಕೆಯಾಗಿದ್ದಾರೆ ಈ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ಐಡಿಬಿಟಿ ಸಚಿವ ಪ್ರಿಯಾಂಕ ಖರ್ಗೆ ಪ್ರತಿಕ್ರಿಯೆ ನೀಡಿದ್ದು ಇನ್ನು ಮುಂದೆ ಸಂಸತ್ತಿನಲ್ಲಿ ಜನರ ಧ್ವನಿಯಾಗಿ ರಾಹುಲ್ ಗಾಂಧಿ ಇರಲಿದ್ದಾರೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸತ್ ನಲ್ಲಿ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರ ಗುಣಗಾನ ನಡೆಯುತ್ತಿತ್ತು ಈ ವೇಳೆ ವಿರೋಧ ಪಕ್ಷದ ನಾಯಕರನ್ನು ಹೊರಹಾಕಲಾಗುತ್ತಿತ್ತು. ಆದರೆ ಇದೀಗ ಸಂಸತ್ತಿನಲ್ಲಿ ಕೊನೆಗೂ ಜನರ ಧ್ವನಿಯನ್ನು ಕೇಳಬಹುದಾಗಿದೆ. ಪ್ರಸ್ತುತ ಸಮಸ್ಯೆಗಳನ್ನು ಅಲ್ಲಿ ಚರ್ಚಿಸಲಾಗುತ್ತದೆ. ಮೊದಲು ವಿಪಕ್ಷದರನ್ನು ಹೊರಗೆ ಹಾಕಲಾಗುತ್ತಿತ್ತು ಇದೀಗ ರಾಹುಲ್ ಗಾಂಧಿಯವರು ಜನರ ಧ್ವನಿಯಾಗಿ ಸಂಸತ್ತಿನಲ್ಲಿ ಇರಲಿದ್ದಾರೆ ಎಂದು ತಿಳಿಸಿದರು. ಇನ್ನೂ ರಾಹುಲ್ ಗಾಂಧಿ ಅವರು ವಿಪಕ್ಷ ನಾಯಕರಾಗಿ ಆಯ್ಕೆಯಾದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಕೂಡ ಅಭಿನಂದನೆ ಸಲ್ಲಿಸಿದ್ದು, ಸೇಡಿನ ರಾಜಕಾರಣ ಮತ್ತು ನಿರಂತರವಾದ ವೈಯಕ್ತಿಕ ಚಾರಿತ್ರ್ಯಹನನವನ್ನು ಎದುರಿಸುತ್ತಲೇ ತನ್ನ ದಣಿವರಿಯದ ಹೋರಾಟದ ಮೂಲಕ ಸರ್ವಾಧಿಕಾರಿ…

Read More

ಬೆಂಗಳೂರು : ರಾಜ್ಯದಲ್ಲಿ ಜೂನ್ 25 ರಿಂದ 29 ರವರೆಗೆ ಹಲವೆಡೆ ಭಾರಿ ಮಳೆಯಾಗಲಿದೆ, ಹಾಗಾಗಿ ರಾಜ್ಯದ 7 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಅಧಿಕ ಮಳೆ ಸುರಿಯಲಿದೆ. ಅಲ್ಲದೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬಾಗಲಕೋಟೆ,ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲ್ಬುರ್ಗಿ, ರಾಯಚೂರು, ಹಾವೇರಿಯಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Read More