Author: kannadanewsnow05

ದಾವಣಗೆರೆ : ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭವಾಗಿ ಗಲಾಟೆ ವೇಳೆ ಚಾಕುವಿನಿಂದ ಇರಿದು ಯುವಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಬಳಿಯ ಅಡಿಕೆ ತೋಟದಲ್ಲಿ ಈ ಒಂದು ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಶುರುವಾಗಿ, ಬಳಿಕ ಮೊಹಮ್ಮದ್ ಜಾವೇದ್ (25) ಎನ್ನುವ ಯುವಕ ಕೊಲೆಯಾಗಿದ್ದಾನೆ. ಘಟನೆ ಸಂಭಂದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಲೆ ಕುರಿತು ಚೆನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ನವದೆಹಲಿಯಲ್ಲಿ ಕರ್ನಾಟಕ ಭವನ ಉದ್ಘಾಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ತರಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಹಲವು ಸಚಿವರು ಸಹ ದೆಹಲಿಗೆ ತರಲಿದ್ದು ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ಬಹಳ ಮಹತ್ವ ಪಡೆದುಕೊಂಡಿದೆ. ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸಚಿವ ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ ಸೇರಿದಂತೆ ಹಲವು ಸಚಿವರು ದೆಹಲಿಗೆ ತೆರಳಲಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಸಚಿವ ಈಶ್ವರ ಖಂಡ್ರೆ ಕಣ್ಣಿಟ್ಟಿದ್ದು ಈ ಕುರಿತು ಚರ್ಚೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೆ ವಾಲ್ಮೀಕಿ ಹಗರಣದಲ್ಲಿ ಸಚಿವ ಬಿ ನಾಗೇಂದ್ರ ಅವರು ಮತ್ತೆ ಸಚಿವ ಸಂಪುಟಕ್ಕೆ ಸೇರುವ ತವಕದಲ್ಲಿದ್ದು, ಹೀಗಾಗಿ ಈ ಒಂದು ವಿಚಾರ ಕುರಿತು ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರ ಜೊತೆಗೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ವಾಲ್ಮೀಕಿ ಹಗರಣ ಹಿನ್ನೆಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ…

Read More

ಕಲಬುರ್ಗಿ : ಡ್ಯಾಂ ವೀಕ್ಷಣೆ ವೇಳೆ ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ನೀರುಪಾಲಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಕಮಲಾಪುರ್ ತಾಲೂಕಿನ ಬೆಳಕೋಟ ಗ್ರಾಮದಲ್ಲಿ ನಡೆದಿದೆ. ನೀರುಪಾಲಾದವರನ್ನು ಆಸಿಫ್ ಅಹಮದ್ ಶೇಕ್ (43) ಹಾಗೂ ಮೊಹಮ್ಮದ್ ನಿಜಾಮ್ ಚೋಟುಮಿಯಾ (30) ಎಂದು ತಿಳಿದುಬಂದಿದೆ. ಕಲ್ಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಬೇಳಕೋಟ ಗ್ರಾಮದಲ್ಲಿ ಈ ಒಂದು ದುರಂತ ಸಂಭವಿಸಿದೆ. ಡ್ಯಾಮ್ ವೀಕ್ಷಣೆಗೆ ಆರು ಜನ ಸ್ನೇಹಿತರೊಂದಿಗೆ ಕಲ್ಬುರ್ಗಿಯಿಂದ ಬೆಳಕೋಟ ಗ್ರಾಮಕ್ಕೆ ಬಂದಿದ್ದರು. ನೀರು ಪಾಲದವರಿಗಾಗಿ ಇದೀಗ ಅಗ್ನಿಶಾಮಕ ದಳ ಹಾಗೂ SDRF ತಂಡದಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ. ಘಟನೆ ಕುರಿತಂತೆ ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು : ಮುಡಾ ಕಮಿಷನರ್ ವಿರುದ್ಧವೇ ವಾಮಾಚಾರ ನಡೆಸುವ ಬೆದರಿಕೆ ಕೇಳಿಬಂದಿದ್ದು, ಬ್ರೋಕರ್ ಗಳ ಅಟ್ಟಹಾಸಕ್ಕೆ ಇದೀಗ ಮಂಗಳೂರಿನ ಮುಡಾ ಕಮಿಷನರ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮಂಗಳೂರಿನ ಉರ್ವ ಠಾಣೆಗೆ ಮುಡಾ ಕಮಿಷನರ್ ನೂರ್ ಝಹರಾ ಖಾನಂ ದೂರು ನೀಡಿದ್ದಾರೆ. ಕಮಿಷನರ್ ದೂರು ಹಿನ್ನೆಲೆ ಇದೀಗ ಉರ್ವ ಪೊಲೀಸ್ ಠಾಣೆಯಲ್ಲಿ ಇಬ್ಬರು ದಲ್ಲಾಳಿಗಳ ವಿರುದ್ಧ FIR ದಾಖಲಾಗಿದೆ. ಕಚೇರಿಗೆ ದಲ್ಲಾಳಿಗಳಿಗೆ ನಿರ್ಬಂಧ ವಿಧಿಸಿದ್ದಕ್ಕೆ ವಾಮಾಚಾರದ ಬೆದರಿಕೆ ಕೇಳಿ ಬಂದಿದೆ. ಅಲ್ಲದೇ ವಾಟ್ಸಪ್ ಮೂಲಕ ಹಾಗು ಫೋನ್ ಕರೆ ಮೂಲಕ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಹಾಗಾಗಿ ಮುಡಾ ಕಮಿಷನರ್ ನೂರ್ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಇಬ್ಬರು ದಲ್ಲಾಳಿಗಳ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಮಂಗಳೂರಿನ ಊರ್ವ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಬ್ರೋಕರ್ಗಳಾದ ವಹಾಬ (45) ಸಾಬೀದ್ (25) ಎನ್ನುವವರ ವಿರುದ್ಧ FIR ದಾಖಲಾಗಿದೆ. ಅಲ್ಲದೇ ವಾಟ್ಸಪ್ ಗ್ರೂಪ್ ನಲ್ಲಿ ದಲ್ಲಾಳಿಗಳು ಪ್ರಾಣ…

Read More

ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ಇಂದು ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಐವರ ಸಾವಾಗಿದ್ದು, 24 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಲ್ಡಾನ ಜಿಲ್ಲೆಯ ಶೇಗಾಂವ್ ಮತ್ತು ಖಮ್ಗಾಂವ್ ಹೆದ್ದಾರಿಯಲ್ಲಿ ಈ ಒಂದು ಅಪಘಾತ ನಡೆದಿದೆ. ಎರಡು ಖಾಸಗಿ ಬಸ್ಸುಗಳು ಮತ್ತು ಬೋಲೇರೋ ಆಹಾರದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಐವರು ಸಾವನಪ್ಪಿದ್ದು 24 ಜನರಿಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ತುಮಕೂರು : ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರ ಪುತ್ರ ಹಾಗೂ ಕಾಂಗ್ರೆಸ್ ಎಂಎಲ್ಸಿ ರಾಜೇಂದ್ರ ಅವರ ಹತ್ಯೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ತುಮಕೂರು ಡಿವೈಎಸ್ಪಿ ಮಂಜುನಾಥ್ ಅವರ ನೇತೃತ್ವದಲ್ಲಿ ರಚನೆಯಾಗಿದ್ದ ತನಿಖಾ ತಂಡವನ್ನು ಇದೀಗ ಏಕಾಏಕಿ ಬದಲಾಯಿಸಲಾಗಿದೆ. ಹೌದು ಡಿವೈಎಸ್ಪಿ ಮಂಜುನಾಥ್ ತನಿಖಾ ತಂಡದಿಂದ ಕಿಕ್ ಔಟ್ ಮಾಡಲಾಗಿದೆ. ಮಾಗಡಿ ಡಿವೈಎಸ್ಪಿ ಪ್ರವೀಣ್ ಗೆ ತನಿಖಾ ತಂಡದ ಹೊಣೆ ವಹಿಸಲಾಗಿದೆ. ಶಿರಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಘವೇಂದ್ರ, ಕ್ಯಾತ್ಸಂದ್ರ ಠಾಣೆಯ ಪಿಎಸ್ಐ ಚೇತನ್ ಕುಮಾರ್ ಬದಲು ಎಸ್ಪಿ ಕಚೇರಿಯ ಇನ್ಸ್ಪೆಕ್ಟರ್ ಅವಿನಾಶ್ ಹಾಗೂ ಕ್ಯಾತ್ಸಂದ್ರ ಸಿಪಿಐ ರಾಮಪ್ರಸಾದ್ ತನಿಖಾ ತಂಡ ಸೇರ್ಪಡೆಯಾಗಿದ್ದಾರೆ. ಮಾರ್ಚ್ 22 ರಂದು ಎಂಎಲ್‌ಸಿ ರಾಜೇಂದ್ರ ಎಸ್ ಪಿಗೆ ದೂರು ನೀಡಿದ್ದರು. ಪ್ರಕರಣ ಸಂಬಂಧ ಕ್ಯಾತ್ಸಂದ್ರ ಠಾಣೆಯಲ್ಲಿ ಎಫ್ಐಆರ್ ಎಫ್ ಐ ಆರ್ ದಾಖಲಾದ ಬೆನ್ನಲ್ಲೇ ತನಿಖಾ ತಂಡವನ್ನು ರಚಿಸಲಾಗಿತ್ತು. ಮಧುಗಿರಿ ಡಿವೈಎಸ್ಪಿ ಮಂಜುನಾಥ್ ನೇತೃತ್ವದಲ್ಲಿ ತನಿಕಾ ತಂಡ ರಚನೆ ಮಾಡಲಾಗಿತ್ತು. ಕಳೆದ ನಾಲ್ಕು…

Read More

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದು ನಾಳೆಯಿಂದ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಿದೆ. ಹೌದು ನಾಳೆಯಿಂದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಸಂಜೆ ಸಣ್ಣ ಪ್ರಮಾಣದ ಮಳೆಯಾಗಲಿದ್ದು, ನಾಳೆಯಿಂದ ಹೆಚ್ಚಾಗುವ ಸಾಧ್ಯತೆ ಇದೆ.ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನು ಅದೇ ರೀತಿಯಾಗಿ ಧಾರವಾಡ, ಕಲಘಟಗಿ, ಬೆಳಗಾವಿಯಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆಯುಂಟಾಗುತ್ತಿದ್ದು, ಇದರ ಪರಿಣಾಮ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡಿನ ಮೇಲಾಗಲಿದೆ. ಇಂದು ಧಾರವಾಡ, ಕಲಬುರಗಿ, ಬಾಗಲಕೋಟೆ, ಗದಗ…

Read More

ಬೆಂಗಳೂರು : ಮನೆಯಲ್ಲಿ ವಿಷಕಾರಿ ವಸ್ತುಗಳು ಆಗಿರಬಹುದು ಅಥವಾ ದ್ರವರೂಪದ ವಸ್ತುಗಳನ್ನು ಮಕ್ಕಳ ಕೈಗೆ ಸಿಗದಂತೆ ಪೋಷಕರು ಎಚ್ಚರಿಕೆ ವಹಿಸಿ ಮಕ್ಕಳ ಕೈಗೆ ಸಿಗದಂತೆ ಇಡಬೇಕು. ಇಲ್ಲವಾದರೆ ಮಕ್ಕಳ ಪ್ರಾಣಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಇದೀಗ ಬೆಂಗಳೂರಿನಲ್ಲಿ ಇಂತಹದ್ದೇ ಘಟನೆ ನಡೆದಿದ್ದು, ಜ್ಯೂಸ್ ಎಂದು ತಿಳಿದು ಅಲೋವೆರಾ ಡಬ್ಬದಲ್ಲಿದ್ದ ಹರ್ಬಿಸೈಡ್ ಔಷಧಿ ಕುಡಿದು ಬಾಲಕಿಯೋರ್ವಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬ್ಯಾಟರಾಯನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಜ್ಯೂಸ್ ಎಂದು ತಿಳಿದು ನಿಧಿಕೃಷ್ಣ (14) ಎನ್ನುವ ಬಾಲಕಿ ಸಾವನ್ನಪ್ಪಿದ್ದಾಳೆ. ಆರೋಗ್ಯ ಕಪಡಿಕೊಳ್ಳಲು ನಿಧಿ ಅಲೋವೆರಾ ಜ್ಯೂಸ್ ಕುಡಿಯುತ್ತಿದ್ದಳು. ಈ ವೇಳೆ ಕುಟುಂಬಸ್ಥರು ಅಲೋವೆರಾ ಜ್ಯೂಸ್ ಖಾಲಿಯಾದ ಡಬ್ಬದಲ್ಲಿ ಔಷಧ ತುಂಬಿಟ್ಟಿದ್ದರು. ಮಾರ್ಚ್ 4 ರಂದು ಜ್ಯೂಸ್ ಎಂದು ಹರ್ಬಿಸೈಡ್ ಔಷದ ಕುಡಿದಿದ್ದಾಳೆ. ಅನಾರೋಗ್ಯ ಹಿನ್ನೆಲೆಯಲ್ಲಿ ತಕ್ಷಣ ನಿಧಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 31ರಂದು ನಿಧಿ ಮೃತಪಟ್ಟಿದ್ದಾಳೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಈ ಒಂದು ಪ್ರಕರಣ…

Read More

ಬೆಂಗಳೂರು : ಬೆಂಗಳೂರಲ್ಲಿ ಲೋಕಾಯುಕ್ತ ಬಂಧನದ ಭೀತಿಯಲ್ಲಿ ಪಿಐ ಪರಾರಿ ಆಗಿದ್ದು, ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕುಮಾರ್ ಪರಾರಿಯಾಗಿದ್ದಾನೆ. ಲೋಕಾಯುಕ್ತ ಕಾರ್ಯಾಚರಣೆ ವೇಳೆ ಕುಮಾರ್ ಆಗಿದ್ದಾನೆ. ಸುಳ್ಳು ಕೇಸ್ ದಾಖಲಿಸಿ 4 ಕೋಟಿ ಮೌಲ್ಯದ ಮನೆ ಮಾರಾಟಕ್ಕೆ ಒತ್ತಡ ಹಾಕಿದ್ದಾನೆ ಎಂದು ಆರೋಪ ಕೇಳಿಬಂದಿದೆ. ನಾಗರಬಾವಿಯ ಖಾಸಗಿ ಹೋಟೆಲ್ ನಲ್ಲಿ ಡೀಲ್ ವೇಳೆ ಲೋಕಾಯುಕ್ತ ದಾಳಿ ನಡೆಸಿದೆ. ವಿಚಾರ ತಿಳಿದು ಮನೆಯಲ್ಲಿ ಪೊಲೀಸ್ ಜೀಪ್ ಬಿತ್ತು ಪಿಐ ಕುಮಾರ್ ಎಸ್ಕೆಪ್ ಆಗಿದ್ದಾನೆ. ಡೀಲ್ ಮಾಡುವ ವೇಳೆ ಇಬ್ಬರೂ ಪೊಲೀಸ್ ಕಾನ್ಸ್ಟೇಬಲ್ತಿದ್ದಾರೆ ಅಧಿಕಾರ ದುರ್ಬಳಕೆ ಆರೋಪದಡಿ ಇಬ್ಬರು ಪಿಸಿಗಳು ಸೇರಿ ಐವರನ್ನು ಅರೆಸ್ಟ್ ಮಾಡಲಾಗಿದೆ ಭ್ರಷ್ಟಾಚಾರ ತಡೆ ಕಾಯಿದೆಯ ಅಡಿ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಗಳನ್ನು ಬಂಧಿಸಲಾಗಿದೆ. ಪಿಐ ವಿರುದ್ಧ ಆರೋಪವೇನು? ಸಿವಿಲ್ ಕಾಂಟ್ರಾಕ್ಟರ್ ಚನ್ನೇಗೌಡ ಪತ್ನಿ ಅನುಷಾಗೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪಿಐ ಕುಮಾರ್ ಇಂದ ಕಿರುಕುಳ ಆರೋಪ ಕೇಳಿ ಬಂದಿದ್ದು ಸುಳ್ಳು ಕೇಸ್ ದಾಖಲಿಸಿ 4 ಕೋಟಿ…

Read More

ಚಿಕ್ಕಬಳ್ಳಾಪುರ : ಚಾಲಕನ ನಿಯಂತ್ರಣ ಕಳೆದುಕೊಂಡು ಖಾಸಗಿ ಬಸ್ ಒಂದು ವಿದ್ಯುತ್ ಕಂಬ ಹಾಗು ಕಂಪೌಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಈ ಒಂದು ಘಟನೆ ನಡೆದಿದೆ. ಬಸ್ ಗೆ ಬೆಂಕಿ ತಗುಲಿ ಪಕ್ಕದಲ್ಲಿದ್ದ ಹಳೆ ಬೈಕ್ ಗಳು ಸಹ ಸುಟ್ಟು ಕರಕಲಾಗಿವೆ. ಖಾಸಗಿ ಬಸ್ ಗೆ ತಗುಲಿದ್ದ ಬೆಂಕಿ ಪಕ್ಕದಲ್ಲೇ ಇದ್ದ 10ಕ್ಕೂ ಹೆಚ್ಚು ಬೈಕ್ ಗಳಿಗೆ ತಗುಲಿದೆ. ಅಪರಾಧ ಪ್ರಕರಣಗಳಲ್ಲಿ ಪೊಲೀಸರು ಬೈಕ್ ಗಳನ್ನು ಜಪ್ತಿ ಮಾಡಿದ್ದರು. ಬೆಂಕಿ ಹತ್ತಿಕೊಂಡ ಜಾಗದ ಬಳಿಯೇ ಪೆಟ್ರೋಲ್ ಬಂಕ್ ಕೂಡ ಇದೆ. ಕೂಡಲೇ ಸ್ಥಳೀಯರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾನೆ. ಈ ಒಂದು ಖಾಸಗಿ ಬಸ್ ಶ್ರೀನಿವಾಸ ನಾಯ್ಡು ಎಂಬವರಿಗೆ ಸೇರಿತ್ತು. ಚಿಂತಾಮಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More