Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು: ರಾಜ್ಯ ಸರ್ಕಾರವು ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಮೇಲೆ ಹಿಂದಿನ ಪ್ರಕರಣ ರೀ ಓಪನ್ ಮಾಡಿ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಕಿದ್ದಾರೆ. ಶುಕ್ರವಾರ ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನವರು ಸೇಡಿನ ರಾಜಕೀಯ ಮಾಡಿದ್ದಾರೆ. ಲೋಕಸಭೆ ಚುನಾವಣೆಗೆ ಎನ್ಡಿಎ ಜತೆ ಕೈ ಜೋಡಿಸಲಾಗಿದ್ದು, ಇದರ ಬಗ್ಗೆ ಸಂಶಯ ಬೇಡ. ಕರಸೇವಕರ ಮೇಲಿನ ಪ್ರಕರಣ ಮರು ತನಿಖೆ ಮಾಡಿದ್ದು ಸೇಡಿನ ರಾಜಕೀಯ. ಮೈತ್ರಿ ಇರುವವರೆಗೆ ಸೇಡಿನ ರಾಜಕೀಯ ಮಾಡಿದರೆ ನಾವು ದನಿ ಎತ್ತಲಿದ್ದೇವೆ. ಇಂತಹ ಸಮಯದಲ್ಲಿ ನಾವು ಮಾತನಾಡುವ ಅವಶ್ಯಕತೆ ಇದೆ ಎಂದು ತಿಳಿಸಿದರು. ಕಾಂಗ್ರೆಸ್ ಅಂತ್ಯ ಕಾಣಲಿದೆ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ನಾಯಕತ್ವದಲ್ಲಿ ಕಾಂಗ್ರೆಸ್ ಅಂತ್ಯ ಕಾಣಲಿದೆ. 60 ವರ್ಷ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ನಾವು ಅವರನ್ನು ನಾವು ಸೋಲಿಸಿಯೇ ಸೋಲಿಸುತ್ತೇವೆ. ಎನ್ಡಿಎ ಸೋಲಿಸಿ ರಾಜ್ಯದಲ್ಲಿ…
ಬೆಂಗಳೂರು : ನನಗೆ ಕಿರುಕುಳ ನೀಡುವ ಉದ್ದೇಶದಿಂದ ದ್ವೇಷ ರಾಜಕಾರಣ ನಡೆಯುತ್ತಿದೆ. ಅಧಿಕಾರಿಗಳೂ ರಾಜಕೀಯ ಮಾಡುತ್ತಿದ್ದಾರೆ, ಮಾಡಲಿ. ಭಗವಂತ ಹಾಗೂ ನ್ಯಾಯಾಲಯದ ಮೇಲೆ ನನಗೆ ನಂಬಿಕೆಯಿದೆ. ಕಾಲಚಕ್ರ ಉರುಳಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ ಕಿಡಿ ಕಾರಿದ್ದಾರೆ. ಇದು, ತಮ್ಮ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಯಿಂದ ಹಿಂಪಡೆದ ರಾಜ್ಯ ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿರುವುದಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರಿಗಳ ವಿರುದ್ಧ ಕೂಡ ಆಕ್ರೋಶ ಹೊರಹಾಕಿದರು. ಈ ಸಂಬಂಧ ಶುಕ್ರವಾರ ವಿಧಾನಸೌಧ ದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ನಾಯಕರ ಮೇಲೂ ಇದೇ ರೀತಿ ಪ್ರಕರಣಗಳು ಇದ್ದರೂ ಅವರ ಮೇಲೆ ಯಾವುದೇ ಕ್ರಮ ಇಲ್ಲ. ನನಗೆ ಕಿರುಕುಳ ನೀಡುವುದಕ್ಕೂ ಒಂದು ಮಿತಿ ಇದೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದುನನಗೆ ಗೊತ್ತಿದೆ. ರಾಜ್ಯಸಭೆಗೆ ಅಹ್ಮದ್ ಪಟೇಲ್ ಅವರು ಸ್ಪರ್ಧಿಸಿದ್ದಾಗ ನಾನು ನಮ್ಮ ಪಕ್ಷದ ಶಾಸಕರನ್ನು ರಕ್ಷಣೆ ಮಾಡಿದ್ದಕ್ಕೆ ನನ್ನ ಮೇಲೆ ದಾಳಿ ನಡೆಯುತ್ತಿದೆ…