Subscribe to Updates
Get the latest creative news from FooBar about art, design and business.
Author: kannadanewsnow05
ರಾಯಚೂರು : ಕಳೆದ ಕೆಲವು ತಿಂಗಳಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗರ್ಭಿಣಿಯರ ಸಾವು ಹಾಗೂ ಶಿಶುಗಳ ಸಾವು ಇಡಿ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ತಾಯಿ ಹಾಗೂ ಮಗುವಿನ ಮರಣದ ಪ್ರಮಾಣ ಕಡಿಮೆಗೊಳಿಸಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಇಂದು ರಾಯಚೂರಿನಲ್ಲಿ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಚಾಲನೆ ನೀಡಿದರು. ರಾಜ್ಯದಲ್ಲಿ ತಾಯಿ ಮಗುವಿನ ಮರಣ ಪ್ರಮಾಣವನ್ನ ಕಡಿಮೆಗೊಳಿಸುವ ನಿಟ್ಟಿನಲ್ಲಿ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ರಾಯಚೂರಿನಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಅಭಿಯಾನದ ಮೂಲಕ ಪ್ರತಿ ತಿಂಗಳು 9 ಮತ್ತು 24 ರಂದು ಎರಡು ಬಾರಿ ಗರ್ಭಿಣಿಯರ ಆರೋಗ್ಯ ತಪಾಸಣೆ ನಡೆಯಲಿದ್ದು, ರಾಜ್ಯಾದ್ಯಂತ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳಲ್ಲಿ ಅಭಿಯಾನ ನಡೆಯಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ರಾಜ್ಯದಲ್ಲಿ ತಾಯಿ ಮುಗುವಿನ ಮರಣ ಪ್ರಮಾಣ ಲಕ್ಷಕ್ಕೆ 64 ಇದೆ. ಇದನ್ನ ಶೂನ್ಯಕ್ಕೆ ತರಬೇಕು. ಆದರೆ ಕೆಲವು ವೈದ್ಯಕೀಯ ಕಾರಣಗಳಿಂದ…
ರಾಯಚೂರು : ರಾಜ್ಯದಲ್ಲಿ ತಾಯಿ ಮಗುವಿನ ಮರಣ ಪ್ರಮಾಣವನ್ನ ಕಡಿಮೆಗೊಳಿಸುವ ನಿಟ್ಟಿನಲ್ಲಿ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ರಾಯಚೂರಿನಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಅಭಿಯಾನದ ಮೂಲಕ ಪ್ರತಿ ತಿಂಗಳು 9 ಮತ್ತು 24 ರಂದು ಎರಡು ಬಾರಿ ಗರ್ಭಿಣಿಯರ ಆರೋಗ್ಯ ತಪಾಸಣೆ ನಡೆಯಲಿದ್ದು, ರಾಜ್ಯಾದ್ಯಂತ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳಲ್ಲಿ ಅಭಿಯಾನ ನಡೆಯಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ರಾಜ್ಯದಲ್ಲಿ ತಾಯಿ ಮುಗುವಿನ ಮರಣ ಪ್ರಮಾಣ ಲಕ್ಷಕ್ಕೆ 64 ಇದೆ. ಇದನ್ನ ಶೂನ್ಯಕ್ಕೆ ತರಬೇಕು. ಆದರೆ ಕೆಲವು ವೈದ್ಯಕೀಯ ಕಾರಣಗಳಿಂದ ಸಾವುಗಳು ಸಂಭವಿಸುತ್ತವೆ. ಸಾವಾಗದಂತೆ ತಡೆಯಲು ಸಾಧ್ಯವಿರುವ ಪ್ರಕರಣಗಳ ವಿಚಾರದಲ್ಲಿ ನಾವು ಹೆಚ್ಚು ಒತ್ತು ನೀಡಿ ತಾಯಿ ಮಗುವಿನ ಮರಣ ಪ್ರಮಾಣವನ್ನ ಕಡಿಮೆಗೊಳಿಸಬಹುದಾಗಿದೆ.ಈ ಗುರಿಯೊಂದಿಗೆ ಮಾತೃತ್ವ ಸುರಕ್ಷಾ ಅಭಿಯಾನವನ್ನ ರಾಜ್ಯದಲ್ಲಿ ದೊಡ್ಡಮಟ್ಟದಲ್ಲಿ ಕೈಗೊಳ್ಳಲು ಮುಂದಾಗಿದ್ದೇವೆ.. ರಾಯಚೂರಿನಲ್ಲಿ ತಾಯಿ ಮಗುವಿನ ಮರಣ ಪ್ರಮಾಣ ಹೆಚ್ಚಿರುವುದರಿಂದ ಇಲ್ಲಿಂದಲೇ ಅಭಿಯಾನ ಆರಂಭಿಸುತ್ತಿರುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಗರ್ಭಿಣಿಯರಿಗೆ ಗುಣಮಟ್ಟದ ಆರೋಗ್ಯ…
ಬೆಂಗಳೂರು : 2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಪೈಲ್ವಾನ್ ಚಿತ್ರದಲ್ಲಿ ನಟಿಸಿದ ನಟ ಕಿಚ್ಚ ಸುದೀಪ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರಕಿದೆ. ಇನ್ನು ಅದೇ ರೀತಿಯಾಗಿ ಪಿ ಶೇಷಾದ್ರಿ ನಿರ್ದೇಶನದ ಮೋಹನದಾಸ ಅತ್ಯುತ್ತಮ ಚಿತ್ರ ಪ್ರಶಸ್ತಿ, ಡಾರ್ಲಿಂಗ್ ಕೃಷ್ಣ ನಿರ್ದೇಶನದ ಲವ್ ಮಾಕ್ಟೆಲ್ ಗೆ ದ್ವಿತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿ ದೊರೆತಿದೆ. ಇನ್ನು ಪೈಲ್ವಾನ್ ಚಿತ್ರದಲ್ಲಿ ನಟಿಸಿದ ನಟ ಕಿಚ್ಚ ಸುದೀಪ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರಕಿದೆ. ಅಲ್ಲದೇ ತ್ರಯಂಬಕಂ ಸಿನಿಮಾಗಾಗಿ ಅನುಪಮ ಗೌಡಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. ತಬಲ ನಾಣಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಸಿಕ್ಕಿದೆ. ಕೆಮೆಸ್ಟ್ರಿ ಆಫ್ ಕರಿಯಪ್ಪ ಚಿತ್ರಕ್ಕೆ ತಬಲ ನಾಣಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಸಿಕ್ಕಿದೆ. ಅದೇ ರೀತಿಯಾಗಿ ಅನುಷಾ ಕೃಷ್ಣಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಸಿಕ್ಕಿದೆ.ಬ್ರಾಹ್ಮಿ ಚಿತ್ರಕ್ಕಾಗಿ ಅನುಷಾ ಕೃಷ್ಣಾಗೆ ಈ ಪ್ರಶಸ್ತಿ ಲಭಿಸಿದೆ.
ಮಧ್ಯಪ್ರದೇಶ : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ತಮ್ಮ ಪತ್ನಿಯ ವಿರುದ್ಧ ಕಿರುಕುಳ ಆರೋಪ ಮಾಡಿ ಡೆತ್ ನೋಟ್ ಬರೆದಿಟ್ಟು, ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಅದರ ಬೆನ್ನಲ್ಲೇ, ಇಂದೋರ್ ನಲ್ಲಿ ಮತ್ತೊಂದು ಪ್ರಕರಣ ವರದಿಯಾಗಿದ್ದು, ವ್ಯಕ್ತಿ ಒಬ್ಬರು ಯುವಕರೇ ಮದುವೆಯಾಗಬೇಡಿ ಎಂದು ಬರೆದಿಟ್ಟು ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೌದು ಪತ್ನಿ ಹಾಗೂ ಆಕೆಯ ಸಂಬಂಧಿಕರಿಂದ ಕಿರುಕುಳ ಅನುಭವಿಸಿದ್ದಾಗಿ ಆರೋಪಿಸಿರುವ 28 ವರ್ಷದ ವ್ಯಕ್ತಿಯೊಬ್ಬರು, ಯಾರೂ ಮದುವೆಯಾಗಬೇಡಿ ಎಂದು ಯುವಕರಿಗೆ ಕರೆ ನೀಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ನಿತಿನ್ ಪಡಿಯಾರ್ ಬರೆದಿರುವ ಮರಣ ಪತ್ರ, ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಪತ್ನಿಯು ದೇಶದ ಕಾನೂನನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾಳೆ ಎಂದು ಅದರಲ್ಲಿ ಆರೋಪಿಸಲಾಗಿದೆ. ಯಾರ ಹೆಸರನ್ನೂ ಉಲ್ಲೇಖಿಸದೆ, ಕೇಂದ್ರ ಸರ್ಕಾರವು ಕಾನೂನುಗಳಿಗೆ ಬದಲಾವಣೆ ತರಬೇಕು ಎಂದು ಮನವಿ ಮಾಡಲಾಗಿದೆ. ಪತ್ರದಲ್ಲಿ ಏನಿದೆ? ಮೃತ ವ್ಯಕ್ತಿಯು ತಮ್ಮ ಪತ್ರದಲ್ಲಿ, ನಾನು ನಿತಿನ್ ಪಡಿಯಾರ್, ಮಹಿಳೆಯರು ಕಾನೂನುಗಳನ್ನು ದುರುಪಯೋಗ…
ಹುಬ್ಬಳ್ಳಿ : ವಿವಾಹಿತೆಯ ಜೊತೆ ಮಾತನಾಡಿದ್ದಕ್ಕೆ, ವಿವಾಹಿತೆಯ ಸಂಬಂಧಿಕರು ಯುವಕನನ್ನು ಅಪಹರಿಸಿ ಬೆತ್ತಲೆ ಗೊಳಿಸಿ ಬ್ಲೇಡ್ ನಿಂದ ಸಿಕ್ಕಸಿಕ್ಕ ಕಡೆ ಕುಯ್ದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇದೀಗ ಹುಬ್ಬಳ್ಳಿಯ ಕಸಬಾ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಹಲ್ಲೆಗೆ ಒಳಗಾದ ಯುವಕ ಮುಜಾಫಿರ್ ನನ್ನು ನಿನ್ನೆ 10 ರಿಂದ 15 ಜನರ ಗುಂಪು ಹಲ್ಲೆ ಮಾಡಿದ್ದು ಬೆತ್ತಲೆ ಮಾಡಿ ಬ್ಲೇಡ್ ನಿಂದ ಆರೋಪಿಗಳು ಇರಿದಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ.
ಮೈಸೂರು : ಮುಡಾ ಕಚೇರಿಗೆ ಸಂಬಂಧಪಟ್ಟಂತೆ ಇದೀಗ ಮೈಸೂರಲ್ಲಿರುವ ಮುಡಾ ಕಚೇರಿಯ ಮೇಲೆ ಇದೀಗ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ಮಾಡಿ ಹಲವು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ಟಿಜೆ ಉದೇಶ್ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿದೆ.ಈ ವೇಳೆ ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಹೌದು ಮುಡಾ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿದ್ದು, ಕುತೂಹಲಕ್ಕೆ ಕಾರಣವಾದ ಲೋಕಾಯುಕ್ತ ಎಸ್ಪಿ ನಡೆ. ಲೋಕಾಯುಕ್ತ ಎಸ್ಪಿ ಟಿಜೆ ಉದೇಶ ನೇತೃತ್ವದಲ್ಲಿ ಇದೀಗ ಮುಡಾ ಕಛೇರಿ ಮೇಲೆ ದಾಳಿ ನಡೆಸಿದೆ. ದಾಳಿಯ ವೇಳೆ ಮುಡಾ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಅಲ್ಲಿಗೆ ಊಟ ತರಿಸಿಕೊಂಡಿದ್ದಾರೆ. ಇದೆ ವೇಳೆ ಮುಡಾ ಆಯುಕ್ತ ರಘುನಂದನ್ ರಜೆಯ ಮೇಲೆ ಇದ್ದಾರೆ. ಕಮಿಷನರ್ ರಘುನಂದನ್ ಅನುಪಸ್ಥಿತಿಯಲ್ಲಿ ಇದೀಗ ಲೋಕಾಯುಕ್ತ ಅಧಿಕಾರಿಗಳು ರೆಡ್ ಮಾಡಿದ್ದಾರೆ. ಕಳೆದ 2020 ನವೆಂಬರ್ 11 ರಂದು ಮುಡಾ ಸಭಾಂಗಣದಲ್ಲಿ ನಡೆದ ನಡಾವಳಿ ಸಭೆಯ ಕುರಿತು ಮಾಹಿತಿ ಪಡೆಯಲಿದ್ದು ನಡಾವಳಿಯ ಧ್ವನಿ ಸುರುಳಿಯನ್ನು ಅಧಿಕಾರಿಗಳು…
ಶಿವಮೊಗ್ಗ : ವಿದ್ಯಾರ್ಥಿಗಳು ಗಳಿಸಿದ ಜ್ಞಾನವನ್ನು ತಮ್ಮ ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಸಮಾಜ, ದೇಶ ಮತ್ತು ಪರಿಸರದ ಒಳಿತಿಗಾಗಿ ಬಳಸಿಕೊಳ್ಳಬೇಕು ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು. ಇಂದು ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಘಟಿಕೋತ್ಸವ ಸಮಾರಂಭವು ವಿದ್ಯಾರ್ಥಿಗಳ ಜೀವನದ ಅತ್ಯಮೂಲ್ಯ ಕ್ಷಣಗಳಲ್ಲಿ ಒಂದಾಗಿದೆ. ಇದು ಕಠಿಣ ಪರಿಶ್ರಮ ಮತ್ತು ಸಮರ್ಪಣೆಯ ಆಚರಣೆ ಮಾತ್ರವಲ್ಲ, ಇದು ನಿಮ್ಮ ಕನಸುಗಳ ಹಾರಾಟದ ಆರಂಭವಾಗಿದೆ. ಈ ಘಟಿಕೋತ್ಸವವು ಶಿಕ್ಷಣದ ಹಾದಿಯಿಂದ ಅನುಭವ ಮತ್ತು ಕ್ರಿಯೆಯ ಹಾದಿಗೆ ಹೆಜ್ಜೆ ಹಾಕಲಿದ್ದೀರಿ ಎಂಬ ಸಂದೇಶವನ್ನು ನೀಡುತ್ತದೆ ಎಂದು ಹೇಳಿದರು. ಆತ್ಮೀಯ ವಿದ್ಯಾರ್ಥಿಗಳೇ, ಸವಾಲುಗಳಿಂದ ಕೂಡಿದ ಜಗತ್ತು ನಿಮ್ಮ ಮುಂದೆ ಇದೆ. ನೆನಪಿಡಿ, ಪ್ರತಿ ಸವಾಲು ಅವಕಾಶವನ್ನು ತರುತ್ತದೆ. ಶಿಕ್ಷಣವು ಕೇವಲ ವೃತ್ತಿಯನ್ನು ಮಾಡುವ ಸಾಧನವಲ್ಲ, ಆದರೆ ಮಾನವೀಯತೆಯ ಉನ್ನತಿಗೆ ನಿಮ್ಮ ಕೊಡುಗೆಯನ್ನು ಖಚಿತಪಡಿಸಿಕೊಳ್ಳಲು ಇದು ಒಂದು ಸಾಧನವಾಗಿದೆ ತಿಳಿಸಿದರು. ವಿದ್ಯಾರ್ಥಿಗಳೇ, ಮೊದಲನೇದಾಗಿ ಕನಸು ಮತ್ತು ಅವುಗಳನ್ನು…
ಚಾಮರಾಜನಗರ : ಅರಣ್ಯವನ್ನು ರಕ್ಷಣೆ ಮಾಡಬೇಕಿದ್ದ ಅರಣ್ಯ ರಕ್ಷಕನಿಂದಲೇ ಇದೀಗ ಘೋರ ಕೃತ್ಯನಡೆದಿದ್ದು, ಚಾಮರಾಜನಗರ ಜಿಲ್ಲೆಯಲ್ಲಿ ಕೊಳ್ಳೇಗಾಲ ತಾಲೂಕಿನಲ್ಲಿ ಅರಣ್ಯ ರಕ್ಷಕನು ಸಂಬಂಧಿಯ ಜೊತೆಗೆ ಸೇರಿ ಆನೆ ದಂತಗಳನ್ನು ಮಾರಾಟ ಮಾಡುತ್ತಿದ್ದ. ಈ ವೇಳೆ ಅರಣ್ಯ ಅಧಿಕಾರಿಗಳು ಕ್ಷೀಪ್ರ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಆನೆ ದಂತ ಸಾಗಿಸುತ್ತಿದ್ದ ಫಾರೆಸ್ಟ್ ವಾಚರ್ ಮತ್ತು ಆತನ ಸಂಬಂಧಿಯನ್ನು ಅರೆಸ್ಟ್ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಮೊಳೆ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ. ಬೈಕ್ ನಲ್ಲಿ ಆನೆದಂತ ಸಾಧಿಸುತ್ತಿದ್ದಾಗ ಇಬ್ಬರು ಖದೀಮರು ಸಿಕ್ಕಿ ಬಿದ್ದಿದ್ದಾರೆ. ವಾಚರ್ ಚಂದ್ರಶೇಖರ್ (27) ಹಾಗೂ ಬಸವರಾಜ್ ನನ್ನು ಅರಣ್ಯ ಅಧಿಕಾರಿಗಳು ಇದೀಗ ಅರೆಸ್ಟ್ ಮಾಡಿದ್ದಾರೆ. ಆನೆ ದಂತವನ್ನು ಚಾಪೆಯಲ್ಲಿ ಸುತ್ತಿಕೊಂಡು ಬೈಕ್ನಲ್ಲಿ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಕೊಳ್ಳೇಗಾಲ ಅರಣ್ಯ ಸಂಚಾರಿ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ, ಆನೆ ದಂತ ಸಮೇತ ಇಬ್ಬರನ್ನು ಬಂಧಿಸಿದ್ದು, ಪರಾರಿಯಾಗಿರುವ ಮತ್ತೊಬ್ಬ ಆರೋಪಿಗಾಗಿ ಶೋಧ…
ಹಾವೇರಿ : ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಂದ ಇತ್ತೀಚಿಗೆ ಹಲವು ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಇದೀಗ ಹಾವೇರಿಯಲ್ಲಿ ಮಹಿಳೆಯರು ವಿನೂತನ ಪ್ರತಿಭಟನೆ ಮಾಡಿದ್ದು ಪೋಸ್ಟ್ ಬಾಕ್ಸ್ ನಲ್ಲಿ ಮಂಗಳಸರವನ್ನು ಪ್ಯಾಕ್ ಮಾಡಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಳುಹಿಸಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳು ಎಂದು ಮನವಿ ಮಾಡಿ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಹೌದು ಹಾವೇರಿಯಲ್ಲಿ ನೂರಾರು ಮಹಿಳೆಯರಿಂದ ವಿನೂತನ ಪ್ರತಿಭಟನೆ ನಡೆಸುತ್ತಿದ್ದು, ಮಾಂಗಲ್ಯ ಸರವನ್ನು ಉಳಿಸಿ ಎಂದು ಮಹಿಳೆಯರಿಂದ ವಿನೂತನ ಅಭಿಯಾನ ಆರಂಭವಾಗಿದೆ. ಹಾವೇರಿಯ ಅಂಚೆ ಕಚೇರಿಯ ಮುಂದೆ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಾಂಗಲ್ಯ ಸರವನ್ನು ಪ್ಯಾಕ್ ಮಾಡಿ ಪೋಸ್ಟ್ ಡಬ್ಬಿಗೆ ಹಾಕಿ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಂಗಲ್ಯ ಸರವನ್ನು ಪ್ಯಾಕ್ ಮಾಡಿ ಮಹಿಳೆಯರು ಇದೀಗ ಕಳುಹಿಸಿದ್ದಾರೆ.ಮೈಕ್ರೋ ಫೈನಾನ್ಸ್ ಸಿಬ್ಬಂದಿ ದಿನನಿತ್ಯ ಬಂದು ಕಿರುಕುಳ ನೀಡುತ್ತಿದ್ದಾರೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಿಳೆಯರು ಮನವಿ ಮಾಡಿದ್ದಾರೆ. ಅಲ್ಲದೆ ಜಿಲ್ಲಾಡಳಿತ ಮತ್ತು ಎಸ್ಪಿ ಕಚೇರಿಗೂ…
ಬೆಳಗಾವಿ : ತನ್ನ ಸ್ನೇಹಿತರ ಜೊತೆಗೆ ಈಜುಲು ತೆರಳಿದ್ದ ಬಾಲಕನೊಬ್ಬ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ವಾಘ್ವಾಡೆ ಗ್ರಾಮದಲ್ಲಿ ನಡೆದಿದೆ.ಮೃತ ಬಾಲಕನನ್ನು ಗಣೇಶ್ ಸುತಾರ್ (15) ಎಂದು ತಿಳಿದುಬಂದಿದೆ. ಮೃತ ಗಣೇಶ್ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಸ್ನೇಹಿತರ ಜೊತೆಗೆ ಈಜಲು ಕೆರೆಗೆ ಹೋಗಿದ್ದಾಗ ಈ ಅವಘಡ ಸಂಭವಿಸಿದೆ.ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಗಣೇಶನ ಮೃತದೇಹ ಹೊರತೆಗೆಯುತ್ತಿದ್ದಂತೆ ಮೃತ ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.












