Subscribe to Updates
Get the latest creative news from FooBar about art, design and business.
Author: kannadanewsnow05
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ನಾಡ ಬಂದೂಕಿನಿಂದ ಗುಂಡು ಹಾರಿಸಿ ವ್ಯಕ್ತಿಯೊಬ್ಬ ಅತ್ತೆ, ನಾದಿನಿ ಹಾಗು ಮಗಳನ್ನು ಭೀಕರವಾಗಿ ಹತ್ಯೆ ಮಾಡಿ, ಬಳಿಕ ತಾನು ಸಹ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನ ಮಾಗಲು ಗ್ರಾಮದಲ್ಲಿ ಈ ಒಂದು ಘೋರವಾದ ಘಟನೆ ನಡೆದಿದೆ. ಅತ್ತೆ ಜ್ಯೋತಿ (50) ನಾದಿನಿ ಸಿಂಧು (26) ಹಾಗು ಮಗಳು ಮೌಲ್ಯ (7) ಎನ್ನುವವರನ್ನು ರತ್ನಾಕರ್ ಎನ್ನುವ ವ್ಯಕ್ತಿ ಭೀಕರವಾಗಿ ಕೊಲೆ ಮಾಡಿದ್ದಾನೆ. ಮೂವರನ್ನು ಹತ್ಯೆ ಮಾಡಿದ ಬಳಿಕ ರತ್ನಾಕರ್ ತಾನು ಆತ್ಮಹತ್ಯೆಗೆ ಶರಣಾಗಿದ್ದಾನೆ. ರತ್ನಾಕರ ಮನೆಯ ಹಿಂಭಾಗದ ನಿರ್ಜನ ಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇತ್ತೀಚಿಗಷ್ಟೇ ಕೊಡಗು ಜಿಲ್ಲೆಯಲ್ಲಿ ಹೆಂಡತಿಗೆ ಅಕ್ರಮ ಸಂಬಂಧ ಇದೆ ಎಂದು ಶಂಕಿಸಿ ನಾಲ್ವರನ್ನು ಕೊಚ್ಚಿ ಕೊಂದು ಪತಿಯೊಬ್ಬ ಪರಾರಿಯಾಗಿದ್ದ ಘಟನೆ ನಡೆದಿತ್ತು. ಬಳಿಕ ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಚಿಕ್ಕಮಗಳೂರಲ್ಲು ಸಹ…
ಬೆಂಗಳೂರು : ರಾಜ್ಯದಲ್ಲಿ ನಿನ್ನೆಯಿಂದ ದುಬಾರಿ ದುನಿಯಾ ಆರಂಭವಾಗಿದ್ದು, ಹಾಲಿನ ದರ ವಿದ್ಯುತ್ ದರ ಏರಿಕೆಯಾಗಿದೆ. ಅಲ್ಲದೇ ಬೆಂಗಳೂರಲ್ಲಿ ಕಸಕ್ಕೂ ಸೆಸ್ ನೀಡಬೇಕಾಗಿದೆ. ಈ ಹಿನ್ನೆಲೆಯಲ್ಲಿ 2025-26ನೇ ಸಾಲಿನ ಆರ್ಥಿಕ ವರ್ಷ ನಿನ್ನೆಯಿಂದ ಆರಂಭಗೊಂಡಿದ್ದರೂ ಆಸ್ತಿ ತೆರಿಗೆ ಪಾವತಿಗೆ ಬಿಬಿಎಂಪಿ ವೆಬ್ ಸೈಟ್ ಸಿದ್ಧವಾಗದ ಕಾರಣ ಇನ್ನೂ ಎರಡೂರು ದಿನ ಆಸ್ತಿ ಮಾಲೀಕರು ತೆರಿಗೆ ಪಾವತಿ ಸಾಧ್ಯವಾಗುವುದಿಲ್ಲ. ಆಸ್ತಿ ತೆರಿಗೆ ಪಾವತಿ ಪೋರ್ಟಲನ್ನು ಎನ್‌ಐಸಿ ಅಭಿವೃದ್ಧಿ ಮತ್ತು ನಿರ್ವಹಣೆ ಮಾಡುತ್ತಿದೆ. ಪ್ರಸಕ್ತ ಸಾಲಿನಿಂದ ಬಿಬಿಎಂಪಿ ವ್ಯಾಪ್ತಿಯ ಕಟ್ಟಡಗಳ ವಿಸ್ತೀರ್ಣಕ್ಕೆ ಅನುಗುಣವಾಗಿ ಘನತ್ಯಾಜ್ಯ ಶುಲ್ಕ ವಿಧಿಸಿ ಆಸ್ತಿ ತೆರಿಗೆಯೊಂದಿಗೆ ವಸೂಲಿಗೆ ತೀರ್ಮಾನಿಸಲಾಗಿದೆ. ಜತೆಗೆ, ಸುಸ್ತಿ ಉಳಿಸಿಕೊಂಡ ಆಸ್ತಿ ಮಾಲೀಕರಿಗೆ ಆಸ್ತಿ ತೆರಿಗೆಯ ಶೇ.100ರಷ್ಟು ದಂಡ ವಿಧಿ ಸುವುದು, ಬಡ್ಡಿ ವಿಧಿಸುವುದಕ್ಕೆ ಸಂಬಂಧಿಸಿ ದಂತೆ ಆಸ್ತಿ ತೆರಿಗೆ ಪಾವತಿಸುವ ವೆಬ್ ಸಾಕಷ್ಟು ಬದಲಾಗಬೇಕಾಗಿದೆ. ಪೋರ್ಟಲ್ ಸಿದ್ದ ಪಡಿಸುವುದು ಬಾಕಿ ಇರುವ ಕಾರಣ 2-3 ದಿನ ತೆರಿಗೆ ಪಾವತಿ ತಡವಾಗಲಿದೆ ಎಂದಿದ್ದಾರೆ ಅಧಿಕಾರಿಗಳು. ಶೇ.5ರಷ್ಟು ವಿನಾಯಿತಿ…
ವಿಜಯಪುರ : ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ್ದು ಅಲ್ಲದೆ, ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನೀಡಿದ್ದ ನೋಟಿಸ್ ಗೆ ಉತ್ತರಿಸದ ಹಿನ್ನೆಲೆಯಲ್ಲಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಕ್ರಮ ಕೈಗೊಂಡಿತ್ತು. ಆದರೆ ಇದಕ್ಕೆ ಯಾವುದಕ್ಕೂ ಜಗ್ಗದೆ ಬಗದೇ ಶಾಸಕ ಯತ್ನಾಳ್ ಬಿಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. 2028 ರಲ್ಲಿ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮಾತನಾಡಿದ್ದು, ಮತ್ತೆ ಬಿ.ಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂತ್ರಿ ಆಗಿ ಎಂದು ಆಗ ಬಸವರಾಜ ಬೊಮ್ಮಾಯಿ ಹೇಳಿದ್ದರು. ಆಗ ನಾನು ಅಭಿವೃದ್ಧಿಗೆ ಹಣ ಕೊಡಿ ಮಂತ್ರಿಗಿರಿ ಬೇಡ ಎಂದು ನಾನು ಅವರಿಗೆ ಹೇಳಿದ್ದೆ. ಕಾರಿನ ಮೇಲೆ ಕೆಂಪು ಗೂಟ ಹಾಕಿಕೊಂಡು ಓಡಾಡುವ ಶೋಕಿ…
ಬೆಂಗಳೂರು : ನಿನ್ನೆಯಿಂದಲೇ ರಾಜ್ಯದಲ್ಲಿ ಹಾಲಿನ ದರ ಲೀಟರ್ ಗೆ 4 ರೂ. ಹೆಚ್ಚಳವಾಗಿದ್ದು, ಅಲ್ಲದೇ ಮೊಸರು, ವಿದ್ಯುತ್ ದರ, ಸೇರಿದಂತೆ ಬೆಂಗಳೂರಲ್ಲಿ ಕಸಕ್ಕೂ ಸೆಸ್ ನೀಡಬೇಕಾಗಿದೆ. ಇದೆಲ್ಲದರ ಮಧ್ಯ ರಾಜ್ಯದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಮಧ್ಯರಾತ್ರಿಯಿಂದ ಡಿಸೈಲ್ ಅನ್ನು ಪ್ರತಿ ಲೀಟರ್ ಗೆ 2 ರೂ.ಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಈ ಕುರಿತು ಅಧಿಸೂಚನೆ ಹೊರಡಿಸಿದೆ. ಡೀಸೆಲ್ ಮೇಲೆ ವಿಧಿಸಲಾಗುತ್ತಿರುವ ಮಾರಾಟ ತೆರಿಗೆ ದರವನನು ಶೇಕಡಾ 21.17ಕ್ಕೆ ಏರಿಸಲಾಗಿದೆ. ಹೀಗಾಗಿ ಪ್ರತಿ ಲೀಟರ್ ಮೇಲೆ 2 ರೂಪಾಯಿ ಏರಿಕೆಯಾಗಿದೆ. ಏರಿಕೆ ಬಳಿಕ ಕರ್ನಾಟಕದಲ್ಲ ಡೀಸೆಲ್ ಮಾರಟ ದರ 91.02 ರೂಪಾಯಿ ಆಗಿದೆ. ಪರಿಷ್ಕೃತ ಮಾರಾಟ ದರವೂ ನರೆಯ ರಾಜ್ಯಗಳಿಗೆ ಹೋಲಿಸಿದರೆ ಕಡಿಮೆ ಇರುತ್ತದೆ ಎಂದು ಸರ್ಕಾರ ತನ್ನ ಅಧಿಸೂಚನೆಯಲ್ಲಿ ಹೇಳಿದೆ. ಹೌದು ಇಂದಿನಿಂದಲೇ ಕರ್ನಾಟಕದಲ್ಲಿ ಡೀಸೆಲ್ ಬೆಲೆ ಏರಿಕೆ ಮಾಡಿದೆ. ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಕರ್ನಾಟಕ ಸರ್ಕಾರ ಹೆಚ್ಚಿಸಿದೆ. ಬಳಿಕ…
ಮೈಸೂರು : ಮೈಸೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, 2 ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮೂವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ ಗ್ರಾಮದಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಮೈಸೂರು ಜಿಲ್ಲೆಯ ಆನಂಜನಗೂಡು ತಾಲೂಕಿನ ಚಿಕ್ಕಹೊಮ್ಮ ಗ್ರಾಮದಲ್ಲಿ ಕುಮಾರ್ (30) ಹಾಗೂ ಮಹೇಶ್ (22) ಸಾವನಪ್ಪಿದ್ದಾರೆ. ಘಟನೆಯಲ್ಲಿ ಬಸವರಾಜು ಗದಗ್ ಮತ್ತು ಇನ್ನೋರ್ವ ಬಸವರಾಜು ಸೇರಿದಂತೆ ಮೂವರಿಗೆ ಗಂಭೀರವಾದ ಗಾಯಗಳಾಗಿದ್ದು, ಗಾಯಾಳುಗಳಿಗೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕವಲಂದೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ.
ಬೆಂಗಳೂರು : IPL ಉದ್ಘಾಟನಾ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿರುವ ರಾಯಲ್ ಚಾಲೆಂಜರ್ಸ್ ತಂಡ ಬೆಂಗಳೂರು ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಹೌದು ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಸೆಣಸಲಿದೆ. ಇದರೊಂದಿಗೆ, ಬೆಂಗಳೂರಿನಲ್ಲಿ ಪ್ರಸಕ್ತ ಋತುವಿನ ಮೊದಲ ಐಪಿಎಲ್ ಪಂದ್ಯ ನಡೆದಂತಾಗಲಿದೆ. ಇದಕ್ಕಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರೂ ಸಿದ್ಧತೆ ಮಾಡಿಕೊಂಡಿದ್ದಾರೆ. ವಾಹನ ನಿಲುಗಡೆ, ವಾಹನ ನಿಲುಗಡೆ ನಿಷೇಧ ವಿವರವನ್ನು ಹಂಚಿಕೊಂಡಿದ್ದಾರೆ. ಸ್ಟೇಡಿಯಂ ಸುತ್ತಮುತ್ತ ಸಂಚಾರ ದಟ್ಟಣೆ ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಬುಧವಾರ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆ ವರೆಗೂ ಸ್ಟೇಡಿಯಂ ಸುತ್ತಮುತ್ತ ನೋ ಪಾರ್ಕಿಂಗ್ ಇರಲಿದೆ. ಪಂದ್ಯ ವೀಕ್ಷಿಸಲು ಬರುವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಂಗಣ ಸುತ್ತಮುತ್ತ ವಾಹನಗಳ…
ಬೆಂಗಳೂರು : ರಾಜ್ಯದಲ್ಲಿ ಸಚಿವ ಕೆ.ಎನ್ ರಾಜಣ್ಣ ಮೇಲೆ ಹನಿಟ್ರ್ಯಾಪ್ ಗೆ ಯತ್ನಿಸಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಆದರೆ ಹನಿಟ್ರ್ಯಾಪ್ ಬದಲಾಗಿ ಕೊಲೆಗೆ ಸಂಚು ರೂಪಿಸಿದ್ದರು ಎನ್ನುವ ಆಡಿಯೋ ಇದೀಗ ಸೋರಿಕೆಯಾಗಿದೆ. ಹತ್ಯೆ ಸುಪಾರಿಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ರಾಜೇಂದ್ರ ಅವರ ಭೇಟಿಗೆ ಯತ್ನಿಸಿದ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಮತ್ತೋರ್ವ ಮಹಿಳೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ, ಆರೋಪಿ ಗುಂಡನ ಲವರ್ ಯಶೋಧಾಳನ್ನು ಖಾಕಿ ವಶಕ್ಕೆ ಪಡೆದುಕೊಂಡಿದೆ. ಯಶೋಧಳನ್ನು ವಶಕ್ಕೆ ಪಡೆದು ಬೆನ್ನಲ್ಲೇ ಆರೋಪಿ ಗುಂಡಾ ಪರಾರಿಯಾಗಿದ್ದಾನೆ ಸೋಮನ ಸಹಚರ ಗುಂಡನಿಗಾಗಿ ಇದೀಗ ಪೊಲೀಸರು ಶೋಧ ಮುಂದುವರಿಸಿದ್ದಾರೆ. ಇತ್ತೀಚೆಗೆ, ರಾಜೇಂದ್ರ ಅವರ ಸುಪಾರಿಗೆ ಸಂಬಂಧಿಸಿದಂತೆ 18 ನಿಮಿಷಗಳ ಟೆಲಿಫೋನ್ ಸಂಭಾಷಣೆಯೊಂದು ಲೀಕ್ ಆಗಿತ್ತು. ಅತ್ತ, ರಾಜೇಂದ್ರ ಅವರು ತಮಗೆ ಸಿಕ್ಕಿರುವ ಕೆಲವು ಸಾಕ್ಷ್ಯಾಧಾರಗಳನ್ನು ಸೇರಿಸಿಕೊಂಡು ತುಮಕೂರು ಎಸ್ಪಿಯವರಿಗೆ ದೂರು ನೀಡಿದ್ದರು. ಆ ಹಿನ್ನೆಲೆಯಲ್ಲಿ, ತನಿಖೆ ನಡೆಸಿರುವ ಪೊಲೀಸರು ಓರ್ವ ಮಹಿಳೆ ಸೇರಿ ಮೂವರನ್ನು ಬಂಧಿಸಿದ್ದಾರೆ…
ತಮಿಳುನಾಡು : ತಮಿಳುನಾಡಿನಲ್ಲಿ ಬಹುದೊಡ್ಡ ರಾಜಕೀಯ ಬದಲಾವಣೆ ಆಗುವ ಸಾಧ್ಯತೆ ಇದ್ದು ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಐಪಿಎಸ್ ಅಧಿಕಾರಿ ಹಾಗು ತಮಿಳುನಾಡಿನ ಹಾಲಿ ಅಧ್ಯಕ್ಷ ಅಣ್ಣಾಮಲೈ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ತಮಿಳುನಾಡು ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ನೀಡುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಬಿಜೆಪಿ ಅಧ್ಯಕ್ಷರ ರೇಸ್ ನಲ್ಲಿ ಇಬ್ಬರು ಹೆಸರು ಕೇಳಿ ಬಂದಿದ್ದು, ಹಾಗಾಗಿ ಕೇಂದ್ರ ಸಚಿವ ಮುರುಗನ್ ಮತ್ತು ತಮಿಳುಸೈ ಸುಂದರ್ ರಾಜನ ಹೆಸರು ಕೇಳಿ ಬಂದಿದೆ. ಎಐಎಡಿಎಂಕೆ ಬೇಡಿಕೆಗೆ ಬಿಜೆಪಿ ಹೈಕಮಾಂಡ್ ಮಣಿಯಿತಾ? ಎನ್ನುವ ಅನುಮಾನ ಇದೀಗ ಶುರುವಾಗಿದೆ. ಅಧ್ಯಕ್ಷ ಸ್ಥಾನ ಬದಲಾಯಿಸುವಂತೆ ಬಿಜೆಪಿ ಹೈಕಮಾಂಡ್ ಬಳಿ ಬೇಡಿಕೆ ಇಟ್ಟಿತ್ತು. ಹಾಗಾಗಿ ಇನ್ನು ಎರಡು ವಾರದಲ್ಲಿ ಹಾಲಿ ಅಧ್ಯಕ್ಷ ಅಣ್ಣಾಮಲೈ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು : ಯುಗಾದಿ ಹಬ್ಬದ ನಿಮಿತ್ಯವಾಗಿ ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಆರ್ಚನಗೌಡ ತುಫಿಹಾಳ ಪುತ್ರ ಹಾಗೂ ಶಾಸಕರ ಸಹೋದರ ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿ ಮರಗಳನ್ನು ಭೇಟಿಯಾಡಿ ಕಟ್ಟಿಗೆಗೆ ಕಟ್ಟಿ ಬರವಣಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ, ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ ಇಲಾಖೆ ಸಚಿವ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ಕುರಿತು ಮಾಹಿತಿ ಬಂದಿದ್ದು ಈ ಒಂದು ಪ್ರಕರಣದಲ್ಲಿ ಯಾರೇ ಇದ್ದರೂ ಕೂಡ ಅವರ ವಿರುದ್ಧ ಸೂಕ್ತವಾದಂತಹ ಕ್ರಮ ಕೈಗೊಳ್ಳಲಾಗುತ್ತದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿದವರು ಯಾರೇ ಇದ್ದರೂ ಅವರನ್ನು ರಕ್ಷಣೆ ಮಾಡುವುದಿಲ್ಲ. ಶಾಸಕರ ಪುತ್ರ ಹಾಗೂ ಸಹೋದರನ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು. ರಾಯಚೂರು ಜಿಲ್ಲೆಯ ಮಸ್ಕಿ ಕಾಂಗ್ರೆಸ್ ಶಾಸಕ ಆರ್ ಬಸವನಗೌಡ ತುರ್ವಿಹಾಳ ಪುತ್ರ ಸತೀಶ್ ಗೌಡ ಮತ್ತು ಸಹೋದರನ ನೇತೃತ್ವದಲ್ಲಿ ಯುಗಾದಿ…
ವಾಷಿಂಗ್ಟನ್ : ಬಾಹ್ಯಾಕಾಶದಲ್ಲಿ ಸಿಲುಕಿದ್ದ ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಂ ಇತ್ತೀಚಿಗೆ ಭೂಮಿಗೆ ವಾಪಸ್ ಆಗಿದ್ದರು. ಭೂಮಿಗೆ ಬಂದ ಬಳಿಕ ಸುಮಿತಾ ವಿಲಿಯಂ ಮೊದಲ ಪ್ರತಿಕ್ರಿಯೆ ನೀಡಿದ್ದು, ಬಾಹ್ಯಾಕಾಶದಲ್ಲಿ ಭಾರತ ಯಾವ ರೀತಿ ಕಾಣಿಸುತ್ತದೆ ಎಂದು ಮಾತನಾಡಿದ್ದು ಅಲ್ಲದೆ ಭಾರತ ಶ್ರೇಷ್ಠ ಪ್ರಜಾಪ್ರಭುತ್ವ ದೇಶ ಎಂದು ಕೊಂಡಾಡಿದ್ದಾರೆ. ಅಮೇರಿಕಾದ ವಾಷಿಂಗ್ಟನ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು ಶೀಘ್ರದಲ್ಲೇ ನನ್ನ ತಂದೆಯ ತಾಯ್ನಾಡಿಗೆ ಭೇಟಿ ನೀಡುತ್ತೇನೆ ಎಂದು ಅಮೆರಿಕದ ವಾಷಿಂಗ್ಟನ್ ನಲ್ಲಿ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಹೇಳಿಕೆ ನೀಡಿದ್ದಾರೆ. ಭಾರತದ ಬಗ್ಗೆ ಮಾತನಾಡಿದ ಗಗನಯಾತ್ರಿ ಸುನಿತಾ ವಿಲಿಯಮ್ಸ್, ಮುಂದಿನ ಕಾರ್ಯಾಚರಣೆಯಲ್ಲಿ ಭಾಗವಹಿಸುವವರನ್ನು ಭೇಟಿ ಮಾಡುತ್ತೇನೆ. ಭಾರತ ಶ್ರೇಷ್ಠ ಪ್ರಜಾಪ್ರಭುತ್ವ ದೇಶ. ಬಾಹ್ಯಾಕಾಶ ಜಗತ್ತಿನಲ್ಲಿ ತನ್ನ ನೆಲೆಯನ್ನು ಸ್ಥಾಪಿಸಿದೆ. ಭಾರತೀಯರಿಗೆ ಸಹಾಯ ಮಾಡಲು ನಾನು ಹಿಂಜರಿಯುವುದಿಲ್ಲ. ಬಾಹ್ಯಾಕಾಶದಿಂದ ಭಾರತ ಅದ್ಭುತವಾಗಿ ಕಾಣುತ್ತದೆ. ಹಿಮಾಲಯದ ಮೇಲೆ ಹೋದಾಗಲೆಲ್ಲ ಅದ್ಭುತ ಚಿತ್ರಗಳು ಸಿಕ್ಕವು ಎಂದು ಭಾರತದ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು. ಭಾರತ ಅದ್ಭುತವಾಗಿದೆ. ನಾವು…













