Author: kannadanewsnow05

ಹಾವೇರಿ : ರಾಜ್ಯದ ಮೂರು ಉಪಚುನಾವಣೆಗಳ ಕ್ಷೇತ್ರಗಳ ಪೈಕಿ ಇದೀಗ ಶಿಗ್ಗಾವಿ ಕಾಂಗ್ರೆಸ್ ಅಲ್ಲಿ ಬಂಡಾಯದ ಬಿಸಿ ಹೆಚ್ಚಿದ್ದು ಈಗಾಗಲೇ ಅಜ್ಜಂಪೀರ್ ಖಾದ್ರಿ ಅವರು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಮಾಜಿ ಸಂಸದ ಮಂಜುನಾಥ್ ಕುನ್ನೂರ್ ಕೂಡ ಪಕ್ಷೇತರ ಅಭ್ಯರ್ಥಿಯಾಗಿ ನಾವ್ ಪತ್ರ ಸಲ್ಲಿಸಿದ್ದಾರೆ. ಹೌದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಮಂಜುನಾಥ್ ಕುನ್ನೂರ್. ಶಿಗ್ಗಾವಿ ಪಕ್ಷೇತರ ಅಭ್ಯರ್ಥಿಯಾಗಿ ಮಂಜುನಾಥ್ ಕುನ್ನೂರ್ ನಾಮಪತ್ರ ಸಲ್ಲಿಸಿದ್ದಾರೆ. ಮಗ ರಾಜು ಕುನ್ನುರ್ ರಿಗೆ ಮಂಜುನಾಥ್ ಕುನ್ನೂರ್ ಕಾಂಗ್ರೆಸ್ ಟಿಕೆಟ್ ಕೇಳಿದ್ದರು. ಆದರೆ ಯಾಸಿರ್ ಅಹ್ಮದ್ ಪಠಾನ್ ಗೆ ಟಿಕೆಟ್ ನೀಡಿದೆ ಹಿನ್ನೆಲೆಯಲ್ಲಿ ಶಿಗ್ಗಾವಿ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈಗಾಗಲೇ ಅಜ್ಜಂಪಿರ್ ಖಾದ್ರಿ ಬಂಡಾಯ ಅಭ್ಯರ್ಥಿಯಾಗಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಮಂಜುನಾಥ್ ನಾಮಪತ್ರ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಗ್ಗಾವಿ ಕಾಂಗ್ರೆಸ್ ನಲ್ಲಿ ಈ ಇಬ್ಬರು ನಾಯಕರ ನಡೆಯಿಂದ ಕಾಂಗ್ರೆಸ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದಂತಾಗಿದೆ.

Read More

ರಾಮನಗರ : ತೀವ್ರ ಕಗ್ಗಂಟಾಗಿದ್ದ ಚನ್ನಪಟ್ಟಣದ ಎನ್‌ಡಿಎ ಅಭ್ಯರ್ಥಿಯಾಗಿ ಯಾರನ್ನು ಕಣಕ್ಕೆ ಇಳಿಸಬೇಕೆಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಗೆ ಟೆನ್ಶನ್ ಆಗಿತ್ತು. ಇದೀಗ ಪುತ್ರ ನಿಖಿಲ್ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿಯಾಗಿ ಇಂದು ಬೃಹತ್ ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಹೆಚ್‍ಡಿ ಕುಮಾರಸ್ವಾಮಿಯವರು, ನಮ್ಮಿಂದ ಅನ್ಯಾಯ ಆಗಿದ್ದರೆ ಶಿಕ್ಷೆ ಕೊಡಿ ಎಂದು ಭಾವುಕರಾಗಿ ಮಾತನಾಡಿದರು. ಇಂದು ಎನ್ ಡಿ ಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿಯವರು ಬೃಹತ್ ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು, ಪುತ್ರ ನಿಖಿಲ್ ಕುಮಾರಸ್ವಾಮಿಯನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ದೇವೇಗೌಡರು ಹಾಗೂ ನನಗೆ ಅಮೃತ ಕೊಟ್ಟಿರುವವರು ನೀವು. ಎಲ್ಲಾ ತೀರ್ಮಾನವನ್ನು ನಿಮಗೆ ಬಿಡುತ್ತೇನೆ.ನಮ್ಮಿಂದ ಅನ್ಯಾಯ ಆಗಿದ್ದರೆ ಶಿಕ್ಷೆ ಕೊಡಿ ಎಲ್ಲಾ ನೀವೇ ತೀರ್ಮಾನಿಸಿ ಎಂದು ಭಾವುಕರಾದರು. ನನ್ನ ಹಳೆ ಸ್ನೇಹಿತ ಯೋಗೇಶ್ವರ್ ತಬ್ಬಿಕೊಂಡು ಬೆನ್ನು ತಟ್ಟುತ್ತಾರೆ ಎಂದು ಚೆಲುವರಾಯಸ್ವಾಮಿ ವಿರುದ್ಧ ಎಚ್ ಡಿ ಕುಮಾರಸ್ವಾಮಿ…

Read More

ಬೆಂಗಳೂರು : ಬೇಲೆಕೆರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಬಂಧನವಾಗಿದೆ. ಸತೀಶ್ ಸೈಲ್ ಅಪರಾಧಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಶಿಕ್ಷೆ ಪ್ರಕಟಣೆಯ ಕುರಿತಂತೆ ವಾದ ಪ್ರತಿವಾದ ಆಲಿಸಿದ ಬಳಿಕ ಕೋರ್ಟ್ ಶಿಕ್ಷೆ ಪ್ರಮಾಣದ ಕುರಿತು ನಾಳೆ ಆದೇಶ ಪ್ರಕಟಿಸಲಿದೆ. ಹೌದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ಜಡ್ಜ್ ಸಂತೋಷ್ ಗಜಾನನ ಭಟ್ ಬೆಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯವು ಶಿಕ್ಷ ಪ್ರಮಾಣದ ಬಗ್ಗೆ ನಾಳೆ ಆದೇಶ ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಇಂದು ಶಿಕ್ಷೆ ಪ್ರಕಟಣೆಯ ಕುರಿತು ಎರಡು ಕಡೆಗೂ ವಾದ ಮಂಡನೆ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಣೆಯ ಕುರಿತಂತೆ ಕೋರ್ಟ್ ನಾಳೆ ಆದೇಶ ಪ್ರಕಟಿಸಲಿದೆ. ಏನಿದು ಪ್ರಕರಣ? ಅಂಕೋಲಾ ತಾಲೂಕಿನ ಬೇಲೆಕೇರಿ ವ್ಯಾಪ್ತಿಯಲ್ಲಿ 2009- 2010ರ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ 200 ಕೋಟಿ ರೂ.ಗ ಳಿಗೂ…

Read More

ಹಾವೇರಿ : ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಇದೀಗ ಕಾಂಗ್ರೆಸ್ ಗೆ ಬಂಡಾಯದ ಬಿಸಿ ತಗುಲಿದ್ದು, ಕಾಂಗ್ರೆಸ್ ಯಾಸಿರ್ ಅಹಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಖಾದ್ರಿ ಅವರಿಗೆ ಟಿಕೆಟ್ ನೀಡಿರಲಿಲ್ಲ ಹಾಗಾಗಿ ಇಂದು ಖಾದ್ರಿ ಅವರು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಅಜ್ಜಂಪಿರ್ ಖಾದ್ರಿ ಅವರ ಮನೆಗೆ ತೆರಳಿ ಅವರನ್ನು ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಮನವಳಿಕೆ ಪ್ರಯತ್ನ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಬೈಕ್ ನಲ್ಲಿ ತೆರಳಿ ಅಜ್ಜಂಪಿರ್ ಖಾದ್ರಿ ಅವರು ಓಡೋಡಿ ಹೋಗಿ ಕೊನೆಯ 13 ನಿಮಿಷಗಳು ಬಾಕಿ ಇರುವಾಗ ತಮ್ಮ ದಾಖಲೆಗಳೊಂದಿಗೆ ನಾಮಪತ್ರ ಸಲ್ಲಿಸಿದ್ದಾರೆ. ಇತ್ತ ಸಚಿವ ಜಮೀರ್ ಅಹ್ಮದ್ ಖಾನ್ ತೆರಳುತ್ತಿದ್ದ ಕಾರಿನ ಮೇಲೆ ಕಲ್ಲಿನಿಂದ ದಾಳಿ ನಡೆಸಲಾಗಿದೆ. ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಗೆ ಬಂಡಾಯದ ಬಿಸಿ ತಗುಲಿದ್ದು ಹೂಲಗೂರು ಗ್ರಾಮದಲ್ಲಿ…

Read More

ದಕ್ಷಿಣಕನ್ನಡ : ರಸ್ತೆ ಮಧ್ಯದಲ್ಲೇ ಎರಡು ಮುಸ್ಲಿಂ ಯುವಕರ ಮಧ್ಯ ಗಲಾಟೆ ನಡೆಸಿದ್ದು, ಗಲಾಟೆಯಲ್ಲಿ ಲಾಂಗು ಮಚ್ಚು ಕೂಡ ಝಳಪಿಸಿದ್ದು, ಓರ್ವನಿಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ಮಂಗಳೂರು ಹೊರವಲಯದ, ಫರಂಗಿಪೇಟೆ ಬಳಿಯ ಅಮ್ಮೆಮಾರ್ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಹಳೇ ದ್ವೇಷದ ಹಿನ್ನೆಲೆ ತಲವಾರಿನಿಂದ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು. ತಸ್ಲೀಮ್ ಹಾಗೂ ಸ್ನೇಹಿತರು ಮಾತನಾಡುತ್ತಿದ್ದ ಪೋನ್ ಕಾಲ್​ ಬಂದ ಹಿನ್ನಲೆ ತಸ್ಲೀಮ್ ಹಾಗೂ ತಂಡ ಅಮ್ಮೆಮಾರ್ ಶಾಲಾ ಬಳಿಗೆ ಹೋಗಿ ಅಲ್ಲಿ ಹಲ್ಲೆ ಮಾಡಿದ್ದಾರೆ ಎಂದು ಮಾಹಿತಿ ದೊರೆತಿದೆ. ಸ್ಥಳೀಯ ನಿವಾಸಿಗಳಾದ ಮನ್ಸೂರ್, ಪಲ್ಟಿಇಮ್ರಾನ್ ತಂಡದಿಂದ ತಲವಾರು ದಾಳಿಯಾಗಿದ್ದು. ಹಲ್ಲೆ ಸಂಬಂಧ ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೋಲಿಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಬಂದಿದೆ.

Read More

ಬೆಂಗಳೂರು : ಈಗಾಗಲೇ ಕರ್ನಾಟಕ ರಾಜ್ಯಕ್ಕೆ ಹಳದಿ ಮತ್ತು ಕೆಂಪು ಮಿಶ್ರಿತ ನಾಡ ಧ್ವಜ ಹೊಂದಲಾಗಿದೆ. ಹೀಗಿದ್ದರೂ ಕೂಡ ರಾಜ್ಯಕ್ಕೆ ಪ್ರತ್ಯೇಕ ಧ್ವಜ ಹೊಂದುವ ಕುರಿತು ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಕರ್ನಾಟಕ ಹೈಕೋರ್ಟ್ ಇಂದು ವಜಾ ಮಾಡಿದೆ. ಹೌದು ಈ ಕುರಿತಂತೆ ಬೆಳಗಾವಿಯ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ್ ಎಂಬುವವರು ಕರ್ನಾಟಕಕ್ಕೆ ಪ್ರತ್ಯೇಕ ಧ್ವಜಕ್ಕಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಎನ್‌.ವಿ. ಅಂಜಾರಿಯಾ ಮತ್ತು ನ್ಯಾಕೆ ವಿ ಅರವಿಂದ್ ಅವರ ವಿಭಾಗೀಯ ಪೀಠ ಪಿಐಎಲ್ ವಜಾಗೊಳಿಸಿ ಆದೇಶಿಸಿದೆ. ಕಳೆದ 6 ವರ್ಷಗಳ ಹಿಂದೆ ಅಂದರೆ 2018 ಮಾರ್ಚ್ 8ರಂದು ಸಿಎಂ ಸಿದ್ದರಾಮಯ್ಯ ಅವರು ಹಳದಿ, ಬಿಳಿ ಮತ್ತು ಕೆಂಪು ವರ್ಣಗಳ ನಡುವೆ ಗಂಡಭೇರುಂಡ ಚಿಹ್ನೆ ಹೊಂದಿರುವ ಧ್ವಜವನ್ನು ಸಾರ್ವಜನಿಕವಾಗಿ ಅನಾವರಣಗೊಳಿಸಿದ್ದರು. ಈ ಧ್ವಜಕ್ಕಾಗಿ ಕೇಂದ್ರ ಸರ್ಕಾರದಿಂದ ಮಾನ್ಯತೆಗೆ ಕೋರಲಾಗಿತ್ತು. ಪ್ರತ್ಯೇಕ ನಾಡ ಧ್ವಜ ವಿಚಾರ ಕೋರ್ಟ್ ವ್ಯಾಪ್ತಿಗೆ ಒಳಪಡಲ್ಲ. ತಪ್ಪಾಗಿ ಅರ್ಥೈಸಿಕೊಂಡು…

Read More

ಬೆಂಗಳೂರು : ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಅನುಮತಿ ನೀಡಬೇಕು ಎಂಬ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಈ ಕುರಿತಂತೆ ಮಾತನಾಡಿರುವ ಸಚಿವ ಶಿವಾನಂದ್ ಪಾಟೀಲ್ ಕೇಂದ್ರ ಸರಕಾರವು ಶೇಂಗಾವನ್ನು ಬೆಂಬಲ ಬೆಲೆಗೆ ಖರೀದಿಸಲು ಒಪ್ಪಿಗೆ ನೀಡಿದೆ. ಹಾಗೂ ಪ್ರತಿ ಕ್ವಿಂಟಾಲ್​ಗೆ 6,783 ರೂ. ದರವನ್ನು ನಿಗದಿಪಡಿಸಲಾಗಿದೆ. ಬೆಂಬಲ ಬೆಲೆಯ ಮಾರ್ಗಸೂಚಿ ಅನ್ವಯ ಕೊಪ್ಪಳ, ಧಾರವಾಡ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಗದಗ ಮತ್ತು ಬಾಗಲಕೋಟೆ, ದಾವಣಗೆರೆ, ರಾಯಚೂರು, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ರೈತರಿಂದ ಶೇಂಗಾ ಖರೀದಿಗೆ ಅನುಮತಿ ದೊರೆತಿದೆ ಎಂದು ತಿಳಿಸಿದರು. ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿ ಪ್ರಕ್ರಿಯೆಯಲ್ಲಿ ರೈತರಿಗೆ ಯಾವುದೇ ರೀತಿ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ನೋಂದಣಿ ಮತ್ತು ಖರೀದಿ ಪ್ರಕ್ರಿಯೆ ಆರಂಭಿಸುವ ಪೂರ್ವದಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಯಾವುದೇ ಖರೀದಿ ಕೇಂದ್ರದಿಂದ ದೂರುಗಳು ಬರಬಾರದು ಎಂದು…

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ನಿನ್ನೆ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಹಾಗೂ ಬೈಕ್ ಮಧ್ಯ ಅಪಘಾತ ಸಂಭವಿಸಿದ್ದರಿಂದ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಸಾವನಪ್ಪಿದ್ದು ಮತ್ತೊರ್ವನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಶಿವಮೊಗ್ಗ ಹೊರವಲಯ ನಿದಿಗೆ ಬಳಿ ನಡೆದಿದೆ. ಈ ಒಂದ್ ಭೀಕರ ಅಪಘಾತದಲ್ಲಿ ವಿದ್ಯಾನಗರದ ನಿವಾಸಿಗಳಾದ ರಾಹುಲ್(17) ಹಾಗೂ ಚೈತನ್ಯ(23) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ತೇಜಸ್ವಿ(24) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೈಕ್ ಸವಾರರು ರಾಂಗ್ ಸೈಡ್ ಹೋಗಿ ಲಾರಿಗೆ ಗುದ್ದಿದ್ದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲಿ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತವಾದ ಬೈಕ್ ಇದಕ್ಕೂ ಮೊದಲು ರಸ್ತೆಯಲ್ಲಿ ಇನ್ನೊಂದು ಬೈಕ್​ಗೆ ಡಿಕ್ಕಿ ಹೊಡೆದಿದೆ. ನಂತರ ಲಾರಿಗೆ ಡಿಕ್ಕಿ ಹೊಡೆದಿದೆ. ಬೈಕ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಜ್ಜುಗುಜ್ಜಾಗಿದೆ. ಈ ಕುರಿತು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚನ್ನಪಟ್ಟಣ : ಎರಡು ಬಾರಿ ಸಿಎಂ ಆಗಿದ್ದಾಗ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ದಿಗೆ ತಮ್ಮ ಕೊಡುಗೆ ಏನು ಎನ್ನುವ ಪಟ್ಟಿಯನ್ನು ಕುಮಾರಸ್ವಾಮಿ ಅವರು ಬಿಡುಗಡೆ ಮಾಡಲಿ. ಕ್ಷೇತ್ರದ ಅಭಿವೃದ್ದಿಗೆ ಅವರ ಸಾಕ್ಷಿ ಗುಡ್ಡೆಯನ್ನು ಜನರ ಮುಂದಿಡಲಿ ಎಂದು ಸಿ.ಪಿ.ಯೋಗೇಶ್ವರ್ ಅವರ ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್ ಶೋನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಶುಭ ಘಳಿಗೆಯಲ್ಲಿ ಯೋಗೇಶ್ವರ್ ಪಕ್ಷ ಸೇರಿದ್ದಾರೆ. ಇವರ ಕೈ ಬಲಪಡಿಸುವುದರ ಮೂಲಕ ದೇಶಕ್ಕೆ ಬಲವಾದ ಸಂದೇಶ ನೀಡಬೇಕು. ಅತಿ ಹೆಚ್ಚು ಮತಗಳ ಅಂತರದಿಂದ ಇವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಮಿಕ್ಕ ವಿಚಾರಗಳನ್ನು ನಾನು ಮಾತನಾಡುತ್ತೇನೆ. ಮುಂದಿನ ದಿನಗಳಲ್ಲಿ ಸಾಕಷ್ಟು ಸಿನಿಮಾಗಳನ್ನು ನಾವು ನೋಡಬೇಕಿದೆ. ಚುನಾವಣೆ ಗೆಲ್ಲುವುದೊಂದೇ ನಮ್ಮ ಗುರಿ. ಲೋಕಸಭಾ ಚುನಾವಣೆ ಯಲ್ಲಿ ಡಿ.ಕೆ.ಸುರೇಶ್ ಅವರಿಗೆ ಚನ್ನಪಟ್ಟಣದ ಜನತೆ 80 ಸಾವಿರಕ್ಕೂ ಹೆಚ್ಚು ಮತಗಳನ್ನು ನೀಡಿದ್ದರು. ಆದರೆ ಮಿಕ್ಕ ಕಡೆ ಕಡಿಮೆ ಮತಗಳು ಬಂದ ಕಾರಣಕ್ಕೆ ಗೆಲುವು ಸಾಧ್ಯವಾಗಲಿಲ್ಲ. ಕಾರ್ಯಕರ್ತರ ಕೈ ಬಿಡುವುದಿಲ್ಲ, ಅವರೊಟ್ಟಿಗೆ…

Read More

ಬೆಂಗಳೂರು : ಬೆಂಗಳೂರಿನ ಬಾಬು ಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣದಲ್ಲಿ 8 ಜನರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಇದೀಗ ಬೆಂಗಳೂರಿನ ಹೊರಮಾವುನಲ್ಲಿ ಕಟ್ಟಡವೊಂದು ವಾಲಿದ್ದ ಘಟನೆ ನಡೆದಿದೆ. ಹೌದು ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ವಾಲಿದೆ. ನಿರ್ಮಾಣ ಹಂತದಲ್ಲಿರುವಂತಹ ಕಟ್ಟಡ ವಾಲಿದೆ. ಹೊರಮಾವು ನಂಜಪ್ಪ ಗಾರ್ಡನ್ನಲ್ಲಿರುವಂತಹ ಕಟ್ಟಡ ವಾಲಿದ್ದು, ನಿರ್ಮಾಣ ಹಂತದಲ್ಲಿರುವ 6 ಅಂತಸ್ತಿನ ಕಟ್ಟಡ ವಾಲಿದೆ. ಕಟ್ಟಡದ ತೆರವಿಗೆ ಬಿಬಿಎಂಪಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಬಾಬು ಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣದಲ್ಲಿ ಇದುವರೆಗೂ 8 ಜನರು ಕಾರ್ಮಿಕರು ಸಾವನಪ್ಪಿದ್ದಾರೆ. ಇನ್ನು ಕೂಡ ಈ ಒಂದು ಕಟ್ಟಡ ತೆರವು ಕಾರ್ಯಾಚರಣೆ ನಡೆದಿದ್ದು. ಮೃತ ಕಾರ್ಮಿಕರ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಆದರೆ ಇದೀಗ ಹೊರಮಾವು ನಂಜಪ್ಪ ಗಾರ್ಡನಲ್ಲಿ ಮತ್ತೊಂದು ಕಟ್ಟಡ ವಾಲಿದೆ ಎಂದು ತಿಳಿದುಬಂದಿದೆ.

Read More