Author: kannadanewsnow05

ಚನ್ನಪಟ್ಟಣ : ಎರಡು ಬಾರಿ ಸಿಎಂ ಆಗಿದ್ದಾಗ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ದಿಗೆ ತಮ್ಮ ಕೊಡುಗೆ ಏನು ಎನ್ನುವ ಪಟ್ಟಿಯನ್ನು ಕುಮಾರಸ್ವಾಮಿ ಅವರು ಬಿಡುಗಡೆ ಮಾಡಲಿ. ಕ್ಷೇತ್ರದ ಅಭಿವೃದ್ದಿಗೆ ಅವರ ಸಾಕ್ಷಿ ಗುಡ್ಡೆಯನ್ನು ಜನರ ಮುಂದಿಡಲಿ ಎಂದು ಸಿ.ಪಿ.ಯೋಗೇಶ್ವರ್ ಅವರ ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್ ಶೋನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಶುಭ ಘಳಿಗೆಯಲ್ಲಿ ಯೋಗೇಶ್ವರ್ ಪಕ್ಷ ಸೇರಿದ್ದಾರೆ. ಇವರ ಕೈ ಬಲಪಡಿಸುವುದರ ಮೂಲಕ ದೇಶಕ್ಕೆ ಬಲವಾದ ಸಂದೇಶ ನೀಡಬೇಕು. ಅತಿ ಹೆಚ್ಚು ಮತಗಳ ಅಂತರದಿಂದ ಇವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಮಿಕ್ಕ ವಿಚಾರಗಳನ್ನು ನಾನು ಮಾತನಾಡುತ್ತೇನೆ. ಮುಂದಿನ ದಿನಗಳಲ್ಲಿ ಸಾಕಷ್ಟು ಸಿನಿಮಾಗಳನ್ನು ನಾವು ನೋಡಬೇಕಿದೆ. ಚುನಾವಣೆ ಗೆಲ್ಲುವುದೊಂದೇ ನಮ್ಮ ಗುರಿ. ಲೋಕಸಭಾ ಚುನಾವಣೆ ಯಲ್ಲಿ ಡಿ.ಕೆ.ಸುರೇಶ್ ಅವರಿಗೆ ಚನ್ನಪಟ್ಟಣದ ಜನತೆ 80 ಸಾವಿರಕ್ಕೂ ಹೆಚ್ಚು ಮತಗಳನ್ನು ನೀಡಿದ್ದರು. ಆದರೆ ಮಿಕ್ಕ ಕಡೆ ಕಡಿಮೆ ಮತಗಳು ಬಂದ ಕಾರಣಕ್ಕೆ ಗೆಲುವು ಸಾಧ್ಯವಾಗಲಿಲ್ಲ. ಕಾರ್ಯಕರ್ತರ ಕೈ ಬಿಡುವುದಿಲ್ಲ, ಅವರೊಟ್ಟಿಗೆ…

Read More

ಬೆಂಗಳೂರು : ಬೆಂಗಳೂರಿನ ಬಾಬು ಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣದಲ್ಲಿ 8 ಜನರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಇದೀಗ ಬೆಂಗಳೂರಿನ ಹೊರಮಾವುನಲ್ಲಿ ಕಟ್ಟಡವೊಂದು ವಾಲಿದ್ದ ಘಟನೆ ನಡೆದಿದೆ. ಹೌದು ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ವಾಲಿದೆ. ನಿರ್ಮಾಣ ಹಂತದಲ್ಲಿರುವಂತಹ ಕಟ್ಟಡ ವಾಲಿದೆ. ಹೊರಮಾವು ನಂಜಪ್ಪ ಗಾರ್ಡನ್ನಲ್ಲಿರುವಂತಹ ಕಟ್ಟಡ ವಾಲಿದ್ದು, ನಿರ್ಮಾಣ ಹಂತದಲ್ಲಿರುವ 6 ಅಂತಸ್ತಿನ ಕಟ್ಟಡ ವಾಲಿದೆ. ಕಟ್ಟಡದ ತೆರವಿಗೆ ಬಿಬಿಎಂಪಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಬಾಬು ಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣದಲ್ಲಿ ಇದುವರೆಗೂ 8 ಜನರು ಕಾರ್ಮಿಕರು ಸಾವನಪ್ಪಿದ್ದಾರೆ. ಇನ್ನು ಕೂಡ ಈ ಒಂದು ಕಟ್ಟಡ ತೆರವು ಕಾರ್ಯಾಚರಣೆ ನಡೆದಿದ್ದು. ಮೃತ ಕಾರ್ಮಿಕರ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಆದರೆ ಇದೀಗ ಹೊರಮಾವು ನಂಜಪ್ಪ ಗಾರ್ಡನಲ್ಲಿ ಮತ್ತೊಂದು ಕಟ್ಟಡ ವಾಲಿದೆ ಎಂದು ತಿಳಿದುಬಂದಿದೆ.

Read More

ಹಾವೇರಿ: ನಮ್ಮ ತಾಯಿಯವರ ಸೂಚನೆಯಂತೆ ಒಳ್ಳೆಯ ಮುಹೂರ್ತದಲ್ಲಿ ಇಂದು ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾವಿಯಲ್ಲಿಂದು ನಾಮಪತ್ರ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಂದೆ ತಾಯಿಯವರ ಆಶೀರ್ವಾದ, ಹಿರಿಯರ ಆಶೀರ್ವಾದ, ಪಕ್ಷದ ವರಿಷ್ಠರ ಆಶೀರ್ವಾದದಿಂದ ನಾನು ಇಂದು ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ನಾಳೆ ಬಹಿರಂಗವಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ. ನಾಳೆ ಪಕ್ಷದ ಅನೇಕ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಈ ಚುನಾವಣೆಯಲ್ಲಿ ಜನರ ಬಳಿ ಏನೇಂದು ಮನವಿ ಮಾಡುತ್ತೀರಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದುವರೆಗೂ ನಮ್ಮ ತಂದೆ ಬಸವರಾಜ ಬೊಮ್ಮಾಯಿಯವರಿಗೆ ಆಶೀರ್ವಾದ ಮಾಡುತ್ತಿದ್ದಿರಿ, ಈಗ ನನಗೆ ಆಶೀರ್ವಾದ ಮಾಡಿ ಎಂದು ಜನರಲ್ಲಿ ಮನವಿ ಮಾಡುತ್ತೇನೆ. ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ನಾನು ಬಡವರು, ಯುವಕರು, ಮಹಿಳೆಯರ ಪರವಾಗಿ ಕೆಲಸ ಮಾಡುತ್ತೇನೆ.ಚುನಾವಣೆಯಲ್ಲಿ ಜಯ ಗಳಿಸಿದರೆ ಅನೇಕ ಯೋಜನೆಗಳನ್ನು ಜಾರಿಗೊಳಿಸುವ ಕುರಿತು ಮುಂದಿನ ದಿನಗಳಲ್ಲಿ ತಿಳಿಸುವುದಾಗಿ ಹೇಳಿದರು.

Read More

ಬೆಂಗಳೂರು : ಚನ್ನಪಟ್ಟಣ ಕ್ಷೇತ್ರಕ್ಕೆ ಕೊನೆ ಕ್ಷಣದಲ್ಲಿ ಸಿಪಿ ಯೋಗೇಶ್ವರ್ ಅವರು ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ಇಂದು ಬೃಹತ್ ಮೆರವಣಿಗೆ ಮೂಲಕ ಜನಪಟ್ಟಣ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.ಇತ್ತ ಎನ್‌ಡಿಎ ಮೈತ್ರಿ ಪಕ್ಷದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಗೆ ಚನ್ನಪಟ್ಟಣಕ್ಕೆ ಯಾವ ಅಭ್ಯರ್ಥಿ ನಿಲ್ಲಿಸಬೇಕೆಂಬ ಗೊಂದಲದಲ್ಲಿ ಇದ್ದಾರೆ. ಇದೀಗ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ. ಹೌದು ಈಗಾಗಲೇ ಸಿಪಿ ಯೋಗೇಶ್ವರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹಾಗು ಜೆಡಿಎಸ್ ಯಾವ ಅಭ್ಯರ್ಥಿಯನ್ನು ಚನ್ನಪಟ್ಟಣ ಕ್ಷೇತ್ರದಲ್ಲಿ ಕಣಕ್ಕೆ ಇಳಿಸಬೇಕೆಂಬ ಗೊಂದಲದಲ್ಲಿ ಇದ್ದರು. ಇದೀಗ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರ ಒತ್ತಡದ ಮೇರೆಗೆ ಕೊನೆಯದಾಗಿ ನಿಖಿಲ್ ಕುಮಾರಸ್ವಾಮಿ ಎನ್ ಡಿ ಎ ಅಭ್ಯರ್ಥಿಯಾಗಿ ಚನ್ನಪಟ್ಟಣ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ.ಈ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರೇ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ನಿಖಿಲ್ ಕುಮಾರಸ್ವಾಮಿ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ…

Read More

ರಾಮನಗರ : ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಇಂದು ಬೃಹತ್ ಮೆರವಣಿಗೆಯೊಂದಿಗೆ ಚನ್ನಪಟ್ಟಣದ ತಾಲೂಕು ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರು ಭಾಗಿಯಾಗಿದ್ದರು. ಇಂದು ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಿಪಿ ಯೋಗೇಶ್ವರ್ ಅವರು ಚನ್ನಪಟ್ಟಣದಲ್ಲಿ ಬೃಹತ್ ರೋಡ್ ಶೋ ಮುಖಾಂತರ ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರು ಸಿ.ಪಿ.ಯೋಗೇಶ್ವರನ್ನು ಆಶೀರ್ವದಿಸಿ ಬೆಂಬಲಿಸುವ ನಂಬಿಕೆಯಿದೆ. ಕಾಂಗ್ರೆಸ್ ಅಭ್ಯರ್ಥಿ ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚನ್ನಪಟ್ಟಣ ಉಪಚುನಾವಣೆ ನಿಮಿತ್ತ ಚನ್ನಪಟ್ಟಣ ತಹಶೀಲ್ದಾರ್ ರವರ ಕಚೇರಿಯಲ್ಲಿ ಇಂದು ತಮ್ಮ ಪಕ್ಷದ ಅಭ್ಯರ್ಥಿಯಾದ ಸಿ ಪಿ ಯೋಗೇಶ್ವರ್ ರವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಯಲ್ಲಿ ಭಾಗವಹಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಚನ್ನಪಟ್ಟಣದ ಉಪಚುನಾವಣೆಯಲ್ಲಿ ಜೆಡಿಎಸ್ ನವರು ಯಾರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುತ್ತಾರೆ ಎನ್ನುವುದು ಮುಖ್ಯವಲ್ಲ. ಸಿ.ಪಿ.…

Read More

ತೆಲಂಗಾಣ : ಇತ್ತೀಚಿಗೆ ಕೇರಳದಲ್ಲಿ ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ 50 ವರ್ಷದ ವ್ಯಕ್ತಿ ಒಬ್ಬರಿಗೆ ಗಂಟಲಲ್ಲಿ ಇಡ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ವರದಿಯಾಗಿತ್ತು. ಇದೀಗ ದೋಸೆ ತಿನ್ನುವಾಗ ಗಂಟಲಲ್ಲಿ ಸಿಲುಕಿ ವ್ಯಕ್ತಿ ಒಬ್ಬರು ಸಾವನಪ್ಪಿರುವ ಘಟನೆ ತೆಲಂಗಾಣದ ನಾಗರ್ ಕರ್ನೂಲ್ ಜಿಲ್ಲೆಯ ಕಲ್ವಕುರ್ತಿಯಲ್ಲಿ ನಡೆದಿದೆ. ಹೌದು ತೆಲಂಗಾಣದಲ್ಲಿ ಈ ದುರಂತ ಸಂಭವಿಸಿದೆ. ವೆಂಕಟಯ್ಯ(43) ಮೃತ ವ್ಯಕ್ತಿ ಎಂದು ಹೇಳಲಾಗುತ್ತಿದೆ. ಪಟ್ಟಣದ ಸುಭಾಷನಗರ ನಿವಾಸಿಯಾಗಿರುವ ಈತ ದೋಸೆ ಗಂಟಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ನಾಗರ್ ಕರ್ನೂಲ್ ಜಿಲ್ಲೆಯ ಕಲ್ವಕುರ್ತಿಯಲ್ಲಿ ಈ ಘಟನೆ ನಡೆದಿದೆ. ಕುಟುಂಬದವರು ಹೇಳುವ ಪ್ರಕಾರ,ವೆಂಕಟಯ್ಯ ಮದ್ಯ ಸೇವಿಸಿ ದೋಸೆ ತಿನ್ನುತ್ತಿದ್ದನು. ಈ ಅನುಕ್ರಮದಲ್ಲಿ, ದೋಸೆ ಗಂಟಲಿಗೆ ಸಿಲುಕಿಕೊಂಡು ಉಸಿರಾಡಲು ಸಾಧ್ಯವಾಗಲಿಲ್ಲ. ನೀರು ಕುಡಿಯುವಾಗ ಪಕ್ಕಕ್ಕೆ ಬಿದ್ದು ಪ್ರಜ್ಞಾಹೀನರಾದರು. ಕೂಡಲೇ ಆಸ್ಪತ್ರೆಗೆ ಸಾಗಿಸಿದಾಗ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಇತ್ತೀಚೆಗಷ್ಟೇ ಕೇರಳದಲ್ಲೂ ಇಂತಹದ್ದೇ ಘಟನೆ ಬೆಳಕಿಗೆ ಬಂದಿದೆ. ವಾಳಯಾರ್ ನಲ್ಲಿ ಇಡ್ಲಿ ತಿನ್ನುವ ಸ್ಪರ್ಧೆ ನಡೆದಿತ್ತು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 50 ವರ್ಷದ…

Read More

ಚನ್ನಪಟ್ಟಣ : ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಿಪಿ ಯೋಗೇಶ್ವರ್ ಅವರು ಚನ್ನಪಟ್ಟಣದಲ್ಲಿ ಬೃಹತ್ ರೋಡ್ ಶೋ ಮುಖಾಂತರ ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನಿಷ್ಠ 50 ಸಾವಿರ ಮತಗಳಿಂದ ಸಿಪಿ ಯೋಗೇಶ್ವರ್ ಗೆಲ್ಲಬೇಕು ಎಂದು ಯೋಗೆಶ್ವರ್ ಪರ ರೋಡ್ ಶೋ ನಲ್ಲಿ‌ ಭಾಗವಹಿಸಿ ಮಾತನಾಡಿದರು. ಕೆರೆಗಳಿಗೆ ಜೀವದಾನ ಮಾಡಿದ ಯೋಗೀಶ್ವರ್ ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು ಬಾರಿ ಶಾಸಕರಾಗಿದ್ದು ಕಾಂಗ್ರೆಸ್ಸಿಗೆ ಮರಳಿದ್ದಾರೆ. ಇವರನ್ನು ನಾವೆಲ್ಲಾ ಸ್ವಾಗತಿಸಿದ್ದೇವೆ. ಯೋಗೀಶ್ವರ್ ಗೆಲ್ಲುವ ಮೂಲಕ‌ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಿ ಎಂದು ಕರೆ ನೀಡಿದರು. ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ. ಬಿಜೆಪಿ ಒಕ್ಕೂಟದಿಂದ ಕುಮಾರಸ್ವಾಮಿಯೇ ನಿಲ್ಲಲಿ, ನಿಖಿಲ್ ಕುಮಾರಸ್ವಾಮಿಯೇ ನಿಲ್ಲಲಿ,…

Read More

ಬೆಂಗಳೂರು : ಚನ್ನಪಟ್ಟಣ ಕ್ಷೇತ್ರಕ್ಕೆ ಕೊನೆ ಕ್ಷಣದಲ್ಲಿ ಸಿಪಿ ಯೋಗೇಶ್ವರ್ ಅವರು ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ಇಂದು ಬೃಹತ್ ಮೆರವಣಿಗೆ ಮೂಲಕ ಜನಪಟ್ಟಣ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.ಇತ್ತ ಎನ್‌ಡಿಎ ಮೈತ್ರಿ ಪಕ್ಷದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಗೆ ಚನ್ನಪಟ್ಟಣಕ್ಕೆ ಯಾವ ಅಭ್ಯರ್ಥಿ ನಿಲ್ಲಿಸಬೇಕೆಂಬ ಗೊಂದಲದಲ್ಲಿ ಇದ್ದಾರೆ. ಇದೀಗ ಸಾರಾ ಮಹೇಶ್ ಅವರು ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ಸುಳಿವು ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಜೆಡಿಎಸ್ ಮುಖಂಡ ಸಾರಾ ಮಹೇಶ್ ಅವರು, HD ಕುಮಾರಸ್ವಾಮಿ ಕೇಂದ್ರದ ಜವಾಬ್ದಾರಿ ಹೊತ್ತಿರುವುದರಿಂದ ಪಕ್ಷದ ಸಂಘಟನೆ ಜವಾಬ್ದಾರಿ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ತೊಡಗಿಸಿಕೊಂಡಿದ್ದಾರೆ. ಆದರೆ ಪ್ರಾರಂಭದಿಂದಲೂ ನಾನು ಅಭ್ಯರ್ಥಿಯಲ್ಲ ನಾವು NDA ಅಭ್ಯರ್ಥಿ ಗೆಲ್ಲಿಸುವುದು ನಮ್ಮ ಗುರಿ ಎಂದು ಎಲ್ಲ ಸಭೆ ಸಮಾರಂಭಗಳಲ್ಲಿ ಕುಮಾರಸ್ವಾಮಿವೂ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಈಗ ನಮ್ಮೆಲ್ಲರ ಪಕ್ಷದ ಇವತ್ತಿನ ಕಾರ್ಯಕರ್ತರ, ಮುಖಂಡರ, ಒತ್ತಾಯ ಇರುವಂತದ್ದು ಕೊನೆ ಕ್ಷಣದಲ್ಲಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಿರುವುದರಿಂದ ನಿಖಿಲ್ ಕುಮಾರಸ್ವಾಮಿಗೆ…

Read More

ರಾಮನಗರ : ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಇಂದು ಬೃಹತ್ ಮೆರವಣಿಗೆಯೊಂದಿಗೆ ಚನ್ನಪಟ್ಟಣ ತಾಲೂಕು ಕಚೇರಿಗೆ ನಾಮಪತ್ರ ಸಲ್ಲಿಸಲು ತೆರಳಿದ್ದಾ. ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡಿದ್ದು, ಬಿಜೆಪಿಯವರ ಭ್ರಷ್ಟಾಚಾರದ ಹಿಸ್ಟರಿ ತೆಗೆದರೆ ಅವರಿಗೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೂ ಬರಕ್ಕಾಗಲ್ಲ ಎಂದು ವಾಗ್ದಾಳಿ ನಡೆಸಿದರು. ಸಿ ಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆಗೂ ಮುಂಚೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚನ್ನಪಟ್ಟಣದಲ್ಲಿ ಅಜೆಂಡಾ ಶುರು ಮಾಡಿದೆ ಬಿಜೆಪಿ ಮತ್ತು ಜೆಡಿಎಸ್ ನವರು. ಯೋಗೇಶ್ವರ್ ಅವರನ್ನು ನಾವು ಗೆದ್ದೇ ಗೆಲ್ಲಿಸುತ್ತೇವೆ. ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಿದ್ದರು ಎಂದು ಅವರು ತಿಳಿಸಿದರು. ಆದರೆ ಅವರನ್ನ MLC ಸ್ಥಾನಕ್ಕೆ ರಾಜೀನಾಮೆ ಕೊಡಕ್ಕೆ ಕಳಿಸಿದ್ದು ಯಾರು? ಈ ಬಗ್ಗೆ ತನಿಖೆ ಮಾಡಿ. ನಾನು ಅವರನ್ನು ಸಂಪರ್ಕಿಸಿ ಇಲ್ಲ ಅವರು ನಿನ್ನೆನೇ ನಮ್ಮ ಮನೆಗೆ ಬಂದು ಭೇಟಿಯಾಗಿ ಚರ್ಚೆ ಮಾಡಿದ್ದು. ಹಾಗಾಗಿ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಿದ್ದು ಯಾರು ಎಂದು ತನಿಖೆ ಮಾಡಿಸಿ ಎಂದು ಮಾಧ್ಯಮಗಳಿಗೆ…

Read More

ರಾಮನಗರ : ರಾತ್ರಿಯ ವೇಳೆ ಮಫ್ತಿಯಲ್ಲಿ ಇದ್ದಂತಹ ಪಿಎಸ್ಐ ಮೇಲೆ ಪಾನಮತ್ತರಾಗಿದ್ದ ಯುವಕರು ಬಿಯರ್ ಬಾಟಲ್ ನಿಂದ ಭುಜಕ್ಕೆ ಹೊಡೆದು ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ರಾಮನಗರದ ರಾಯರದೊಡ್ಡಿಯಲ್ಲಿನ ಸುಪ್ರಿತ್ ವೈನ್ಸ್ ಬಳಿ ನಡೆದಿದೆ. ಹೌದು ನಿನ್ನೆ ರಾತ್ರಿ ಐಜೂರು ಪೊಲೀಸ್ ಠಾಣೆ ಪ್ರಭಾರ ಪಿಎಸ್‌ಐ ದುರುಗಪ್ಪ ಮಫ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.ಈ ವೇಳೆ ರಾಯರದೊಡ್ಡಿ ನಿವಾಸಿ ಕಿರಣ್ ಕುಮಾರ್‌, ಪಾದರಹಳ್ಳಿ ವಾಸಿ ಶ್ರೀಕಾಂತ ಹಾಗೂ ಚೇತನ್ ಅಲಿಯಾಸ್ ಕುಂತಿ PSI ದುರುಗಪ್ಪ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇದೀಗ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣವೊಂದರ ಆರೋಪಿ ಮತ್ತು ಮಾಲು ಪತ್ತೆ ಮಾಡುವ ಸಲುವಾಗಿ ಮಫ್ತಿಯಲ್ಲಿ ಪಿಎಸ್ ಐ ದುರುಗುಪ್ಪರವರು ಪೇದೆಗಳಾದ ಚನ್ನಬಸಪ್ಪ ಮತ್ತು ಶಿವರಾಜ ಅವರೊಂದಿಗೆ ರಾಯರದೊಡ್ಡಿಗೆ ತೆರಳಿದ್ದಾರೆ.ದುರುಗುಪ್ಪ ಸುಪ್ರೀತಾ ವೈನ್ಸ್ ಮುಂಭಾಗ ಆರೋಪಿ ಮತ್ತು ಮಾಲಿನ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾಗ ಪಾನಮತ್ತರಾಗಿದ್ದ ಮೂವರು ಗಲಾಟೆ ಮಾಡಿಕೊಂಡಿದ್ದಾರೆ. ಈ ವೇಳೆ ಪಿಎಸ್ಐ ದುರ್ಗಪ್ಪ ಅವರು ನಾನು ಪೊಲೀಸ್…

Read More