Subscribe to Updates
Get the latest creative news from FooBar about art, design and business.
Author: kannadanewsnow05
ಹಾವೇರಿ : ಹಾವೇರಿ ಜಿಲ್ಲೆಯ ಬ್ಯಾಡಗಿ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜ್ ಶಿವಣ್ಣನವರಿಗೆ ಲಘು ಹೃದಯಾಘಾತ ಆಗಿದೆ. ತಕ್ಷಣವೇ ಶಾಸಕ ಬಸವರಾಜ್ ಶಿವಣ್ಣ ಅವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಶಾಸಕರ ಆರೋಗ್ಯ ಸ್ಥಿರವಾಗಿರೋ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಿನ್ನೆ ಹಾವೇರಿಯಲ್ಲಿ ನಡೆದ ಕಾಂಗ್ರೆಸ್ ಸಾಧನ ಸಮಾವೇಶದಲ್ಲಿ ಭಾಗವಹಿಸಲು ಸಚಿವ ಶಿವಾನಂದ ಪಾಟೀಲ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಹಾಜರಾಗಿದ್ದರು. ಈ ಕಾರ್ಯಕ್ರಮದ ತಯಾರಿ ಹಾಗೂ ಭಾಗವಹಿಸುವ ಕಾರ್ಯದಲ್ಲಿ ಶಾಸಕ ಬಸವರಾಜ್ ಶಿವಣ್ಣ ಅವರು ದಿನಪೂರ್ತಿ ಬ್ಯುಸಿಯಾಗಿದ್ದರು. ಬೆಳಗ್ಗೆಯಿಂದಲೇ ಸ್ವಲ್ಪ ಸುಸ್ತು ಕಾಣಿಸಿಕೊಂಡಿದ್ದರೂ, ಕಾರ್ಯಕ್ರಮದ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು ಎನ್ನಲಾಗಿದೆ. ಮಧ್ಯಾಹ್ನದ ಹೊತ್ತಿಗೆ ಅಸ್ವಸ್ಥತೆ ಹೆಚ್ಚಾಗುತ್ತಿದ್ದಂತೆ ಕುಟುಂಬಸ್ಥರು ಹಾಗೂ ಪಕ್ಷದ ಕಾರ್ಯಕರ್ತರು ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಿದರು. ಪ್ರಾಥಮಿಕ ತಪಾಸಣೆಯಲ್ಲಿ ಹೃದಯ ಸಂಬಂಧಿತ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಹಾವೇರಿಯಿಂದ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.ಈ ವೇಳೆ 2 ಬ್ಲಾಕ್ ಕಂಡುಬಂದಿದ್ದು, 2 ಕಡೆ ಸ್ಟಂಟ್ ಅಳವಡಿಸಲಾಗಿದೆ…
ಕಲಬುರಗಿ : ವ್ಯಕ್ತಿಯೋರ್ವನನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ಸಂಜೆ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ಗಾಜಿಪುರ ಬಡಾವಣೆಯ ನಿವಾಸಿ ಶರಣಬಸಪ್ಪ ಗೌಳಿ (35) ಎಂದು ಗುರುತಿಸಲಾಗಿದೆ. ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಶರಣು ಗೌಳಿ ಅವರು ಶುಕ್ರವಾರ ಸಂಜೆ ಸುಮಾರು 6 ಗಂಟೆ ವೇಳೆಗೆ ಸೂಪರ್ ಮಾರ್ಕೆಟ್‌ನ ನರ್ತಕಿ ಬಾರ್ ಪಾರ್ಕಿಂಗ್ ಪ್ರದೇಶದಲ್ಲಿ ನಿಂತಿದ್ದಾಗ, ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ., ಎಸಿಪಿ ಶಿವನಗೌಡ ಪಾಟೀಲ ಹಾಗೂ ಬ್ರಹ್ಮಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು : ಮಂಗಳೂರಿನಲ್ಲಿ ಡ್ರಗ್ಸ್ ಮಾಡಲು ಯತ್ನಿಸಿದ ಮೂವರು ಡ್ರಗ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಂಗಳೂರಿನ ತಲಪಾಡಿಯಲ್ಲಿ ಮಾದಕ ವಸ್ತು MDMA ಮಾರಾಟ ಮಾಡಲು ಯತ್ನಿಸಿದ್ದು ಬೆಂಗಳೂರಿನಿಂದ MDMA ತಂದು ತಲಪಾಡಿಯಲ್ಲಿ ಮಾರಾಟಕ್ಕೆ ಯತ್ನಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಉಳ್ಳಾಲದ ಮುಸ್ತಫ (34) ಮೈಯೆದ್ದಿ (28) ಮೊಹಮ್ಮದ್ (28) ಎನ್ನುವ ಆರೋಪಿಗಳನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 11.9 ಲಕ್ಷ ರೂಪಾಯಿ ಮೌಲ್ಯದ 118.13 ಗ್ರಾಂ MDMA ವಶಕ್ಕೆ ಪಡೆದಿದ್ದಾರೆ. ಈ ಡ್ರಗ್ಸ್ ವಿಚಾರದಲ್ಲಿ ಇನ್ನೂ ಹಲವಾರು ಭಾಗಿಯಾಗಿರುವ ಮಾಹಿತಿ ತಿಳಿದು ಬಂದಿದೆ. ಉಳಿದ ಆರೋಪಿಗಳಿಗಾಗಿ ಸಿಸಿಬಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸಿಸಿಬಿ ಎಸಿಪಿ ಮನೋಜ್ ಕುಮಾರ್ ನೇತೃತ್ವದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿತ್ತು.
ಬೆಂಗಳೂರು : ಹಿರಿಯ ನಿರ್ದೇಶಕ, ನಟ ಜೋ ಸೈಮನ್ ನಿನ್ನೆ ನಿಧನ ಹೊಂದಿದ್ದಾರೆ. ಫಿಲಂ ಚೇಂಬರ್ನಲ್ಲಿ ಆಯೋಜಿಸಿದ್ದ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಿದ್ದಾಗ ಹೃದಯಾಘಾತ ಉಂಟಾಗಿ ಜೋ ಸೈಮನ್ ಅವರು ನಿಧನ ಹೊಂದಿದ್ದಾರೆ. ಜೋ ಸೈಮನ್ ಅವರ ಅಂತಿಮ ದರ್ಶನವನ್ನು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ. ಇಂದೇ ಕ್ರಿಶ್ಚಿಯನ್ ವಿಧಿ-ವಿಧಾನಗಳ ಅನುಸಾರ ಅವರ ಅಂತಿಮ ಕಾರ್ಯಗಳು ನಡೆಯಲಿವೆ. ಸಿನೆಮಾ ರಂಗದಲ್ಲಿ ಜೋ ಸೈಮನ್ ಅವರು ನಡೆದು ಬಂದ ಹಾದಿ ಮಂಡ್ಯ ಮೂಲದ ಜೊ ಸೈಮನ್ ಆರಂಭದಲ್ಲಿ ಟಚ್ ಅಪ್ ಬಾಯ್, ಸಹಾಯಕ ಮೇಕ್ಅಪ್ ಮ್ಯಾನ್ ಮತ್ತು ಸೆಟ್ ಬಾಯ್ ಆಗಿ ಕೆಲಸ ಮಾಡಿದ್ದರು. ನಂತರ ಅವರು ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಲು ಪ್ರಾರಂಭಿಸಿದರು. ಅವರು ಕೆ.ಎಸ್.ಆರ್.ದಾಸ್, ಆರ್.ಎನ್. ಜಯಗೋಪಾಲ್, ಕಣಗಾಲ್ ಪ್ರಭಾಕರ ಶಾಸ್ತ್ರಿ, ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಮುಂತಾದ ನಿರ್ದೇಶಕರೊಂದಿಗೆ ಕೆಲಸ ಮಾಡಿದ್ದಾರೆ. ವಿಷ್ಣುವರ್ಧನ್ ಅಭಿನಯದ ಸಾಹಸಸಿಂಹ ಚಿತ್ರದ ನಿರ್ದೇಶಕರಾಗಿದ್ದ ಜೊ ಸೈಮನ್ ಸಿಂಹದ ಜೋಡಿ, ನನ್ನ ರೋಷ ನೂರು ವರುಷ, ಮಹಾ…
ಬೆಂಗಳೂರು : ಬೆಂಗಳೂರಲ್ಲಿ ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗಂಭೀರವಾಗಿ ಗಾಯಗೊಂಡಿದ್ದ ಪೂರ್ಣಿಮಾ ಎನ್ನುವ ಮಹಿಳೆ ಸಾವನಪ್ಪಿದ್ದಾರೆ. ವಿಕ್ಟೋರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳಿದಿದ್ದಾರೆ ಕಳೆದ ಮಂಗಳವಾರ ಮಂಜುಶ್ರೀ ಲೇಔಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ರಾಮಮೂರ್ತಿನಗರ ಠಾಣಾ ವ್ಯಾಪ್ತಿಯ ಮಂಜುಶ್ರೀ ಲೇಔಟ್ ನಲ್ಲಿ ಗ್ಯಾಸ್ ಸೋರಿಕೆಯಾಗಿ ವಾಸನೆ ಬಂದಾಗ ಬಾಡಿಗೆದಾರನ ಮನೆಗೆ ಮಾಲಕಿ ಪೂರ್ಣಿಮಾ ಹೋಗಿದ್ದಳು. ಬಾಡಿಗೆದಾರನ ಮನೆ ಪರಿಶೀಲನೆ ಹೋಗಿದ್ದ ವೇಳೆ ಮಾಲಕಿ ಪೂರ್ಣಿಮಾ ಸ್ವಿಚ್ ಆನ್ ಮಾಡುತ್ತಿದ್ದಂತೆ ಅಗ್ನಿ ಅವಘಡ ಸಂಭವಿಸಿತ್ತು. ಪೂರ್ಣಿಮಾ ಹಾಗೂ ಬಾಡಿಗೆದಾರ ವೆಂಕಟೇಶ್ ಗೆ ಗಂಭೀರವಾದ ಗಾಯಗಳಾಗಿತ್ತು. ಪೂರ್ಣಿಮಾ ಇದೀಗ ಸಾವನ್ನಪ್ಪಿದ್ದು, ಬಾಡಿಗೆದಾರ ವೆಂಕಟೇಶ ಸ್ಥಿತಿ ಗಂಭೀರವಾಗಿದೆ.
ಹಾಸನ : ರಾಜ್ಯದ ಪಡಿದರ ಚೀಟಿದಾರರಿಗೆ ಸರ್ಕಾರ ಇದೀಗ ಸಿಹಿಸುದ್ದಿ ಒಂದನ್ನು ನೀಡುತ್ತಿದ್ದು, ಫೆಬ್ರುವರಿ ಅಂತ್ಯ ಅಥವಾ ಮಾರ್ಚ್ ತಿಂಗಳಿನಿಂದ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತೆ ಎಂದು ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು. ಹಾಸನದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಸರ್ಕಾರ ರಾಜ್ಯದ ಪಡಿತರ ಚೀಟಿದಾರರಿಗೆ ಈ ಒಂದು ಇಂದಿರಾ ಕಿಟ್ ಯೋಜನೆ ಜಾರಿಗೆ ಮಾಡಿದ್ದು, ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ತಿಂಗಳಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತೆ. ಸಕ್ಕರೆ, ಬೆಳೆ, ಅಡುಗೆ ಎಣ್ಣೆ ಉಪ್ಪು ಒಳಗೊಂಡ ಈ ಒಂದು ಕಿಟ್ ವಿತರಿಸಲಾಗುತ್ತಿದ್ದು ಇದರಿಂದ ಪೌಷ್ಟಿಕ ಆಹಾರ ಸಿಗಲಿದೆ ಎಂದು ಅವರು ತಿಳಿಸಿದರು.
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಲು ಶಿಫಾರಸ್ಸು ಮಾಡಿದಂತ ಪತ್ರವೊಂದು ವೈರಲ್ ಆಗಿತ್ತು. ಇದೇ ಪತ್ರವನ್ನು ಶಾಸಕ ಸುನೀಲ್ ಕುಮಾರ್ ಕಾರ್ಕಳ ಕೂಡ ಶೇರ್ ಮಾಡಿ, ಸಿಎಂ ವಿರುದ್ಧ ಕಿಡಿಕಾರಿದ್ದರು. ಈ ಬೆನ್ನಲ್ಲೇ ನಕಲಿ ಶಿಫಾರಸ್ಸು ಪತ್ರ ಸಿದ್ಧಮಾಡಿ, ಹಂಚಿದವರ ವಿರುದ್ಧ ಸರ್ಕಾರ ಎಫ್ಐಆರ್ ದಾಖಲಿಸಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಒಂದೇ ಸುಳ್ಳನ್ನು ನೂರು ಬಾರಿ ಹೇಳಿ ಅದನ್ನೇ ಸತ್ಯವಾಗಿಸುವ ಬಿಜೆಪಿಯ ಸುಳ್ಳಿನ ಫ್ಯಾಕ್ಟರಿಯ ಮತ್ತೊಂದು ವಿಫಲ ಹುನ್ನಾರವಿದು. ಸುನೀಲ್ ಕುಮಾರ್ ಅವರೇ, ದಿನಾಂಕವಿಲ್ಲದ, ರೆಫರೆನ್ಸ್ ಸಂಖ್ಯೆಯಿಲ್ಲದ ಒಂದು ನಕಲಿ ಪತ್ರವನ್ನು ಹಿಡಿದು ಜನರಲ್ಲಿ ಗೊಂದಲ ಸೃಷ್ಟಿಸಲು ಹೊರಟಿರುವ ನಿಮಗೆ ಕನಿಷ್ಠ ಜ್ಞಾನವೂ ಇಲ್ಲವೇ? ಆರೋಗ್ಯ ಇಲಾಖೆಯ ಅಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗಾಯಿಸಲು ನಮ್ಮ ನಿಯಮಗಳಲ್ಲಿ ಅವಕಾಶವೇ ಇಲ್ಲ ಎಂಬುದು ತಿಳಿಯದಷ್ಟು ಬೌದ್ಧಿಕ ದಿವಾಳಿತನವೇ? ಈ ನಕಲಿ ಪತ್ರದ ಬಗ್ಗೆ ನಮ್ಮ ಮುಖ್ಯಮಂತ್ರಿ…
ಬೆಂಗಳೂರು : ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ||ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಮಂಡ್ಯ ಆರೋಗ್ಯ ಇಲಾಖೆಯಿಂದ ಮೈಸೂರು ಗ್ರಾಮಾಂತರ ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಿರುವ ನಕಲಿ ಪತ್ರದ ಕುರಿತು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಟ್ವೀಟ್‌ನಲ್ಲಿ ಹಂಚಿಕೊಂಡಿರುವ ಅವರು, ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ||ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಮತ್ತು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದೆ. ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಲಿದೆ. ಇಂತಹ…
ಬೆಂಗಳೂರು: 2026ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ನಿಗಮದ ಬಸ್ಸುಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅನುಮತಿಸಿ ಆದೇಶಿಸಲಾಗಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಸುತ್ತೋಲೆ ಹೊರಡಿಸಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 28.02.2026 ರಿಂದ ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಉಲ್ಲೇಖಿತ-1 ರ ಪತ್ರದಲ್ಲಿ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ರವರು ಕೋರಿರುತ್ತಾರೆ ಎಂದಿದ್ದಾರೆ. ಅದರನ್ವಯ ಕ.ರಾ.ರ.ಸಾ.ನಿಗಮವು, ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 28.02.2026 ರಿಂದ 17.03.2026 ರವರೆಗೆ, ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು…
ಚಿಕ್ಕಬಳ್ಳಾಪುರ : ಇಂದು ಪ್ರೇಮಿಗಳ ದಿನ ಹಿನ್ನೆಲೆ ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿಮೀ ದೂರದಲ್ಲಿರುವ ಈ ಗಿರಿಧಾಮವು ಸಾಮಾನ್ಯವಾಗಿ ವಾರಾಂತ್ಯ ಮತ್ತು ಸಾರ್ವಜನಿಕ ರಜಾ ದಿನಗಳಲ್ಲಿ ಹೆಚ್ಚಿನ ಜನಸಂದಣಿಯನ್ನು ಹೊಂದಿರುತ್ತದೆ. ವಿಶೇಷ ದಿನಗಳಲ್ಲಿ ಪ್ರವಾಸಿಗರ ಸಂಖ್ಯೆ ಮತ್ತಷ್ಟು ಹೆಚ್ಚಿರುತ್ತದೆ. ಫೆಬ್ರವರಿ 14ರ ಪ್ರೇಮಿಗಳ ದಿನ ನಂದಿಬೆಟ್ಟಕ್ಕೆ ಹೆಚ್ಚಿನ ಪ್ರವಾಸಿಗರು ಬರುತ್ತಾರೆ. ಇದೇ ವೇಳೆ ಕೆಲವು ಅಹಿತಕಾರ ಘಟನೆಗಳು ನಡೆದ ಕಾರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಕ್ರಮ ತೆಗೆದುಕೊಂಡಿದೆ. ಆದೇಶದ ಪ್ರಕಾರ, ಶನಿವಾರ ನಂದಿ ಬೆಟ್ಟಕ್ಕೆ ಯಾವುದೇ ಖಾಸಗಿ ವಾಹನಗಳು ಅಥವಾ ಪ್ರವಾಸಿಗರನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ. ನಿರ್ಬಂಧವನ್ನು ಜಾರಿಗೊಳಿಸಲು ಪ್ರವೇಶ ಸ್ಥಳದಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ವಾರಾಂತ್ಯ ಮತ್ತು ರಜಾದಿನಗಳಲ್ಲಿ, ನಂದಿ ಬೆಟ್ಟಕ್ಕೆ 3,000 ರಿಂದ 3,500 ದ್ವಿಚಕ್ರ ವಾಹನಗಳಲ್ಲಿ ಮತ್ತು 1,500 ರಿಂದ 1,700 ನಾಲ್ಕು ಚಕ್ರ ವಾಹನಗಳಲ್ಲಿ 16…














