Author: kannadanewsnow05

ತುಮಕೂರು : ಇತ್ತೀಚಿಗೆ ಹೃದಯಘಾತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೆ ಇದೆ. ಅದರಲ್ಲೂ ಯುವಕರಲ್ಲಿ ಕೂಡ ಈ ಒಂದು ಹೃದಯಘಾತ ಸಂಭವಿಸುತ್ತಿದ್ದು, ಆತಂಕಕ್ಕೆ ಎಡೆಮಾಡಿದೆ. ಇದೀಗ ತುಮಕೂರಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಹೃದಯಘಾತದಿಂದ ಸಾವನಪ್ಪಿದ್ದಾರೆ. ಹೌದು ತುಮಕೂರು ಜಿಲ್ಲೆಯ ತಿಪಟೂರು ನಗರದಲ್ಲಿ ಈ ಒಂದು ಘಟನೆ ನಡೆದಿದೆ.ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದಾಗ ಕಾಂತರಾಜುಗೆ ಹೃದಯಘಾತವಾಗಿದೆ. ತಕ್ಷಣ ಅವರನ್ನು ಹುಳಿಯರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕಾಂತರಾಜ್ ಸಾವನ್ನಪ್ಪಿದ್ದಾರೆ. ಕಾಂತರಾಜ್ ತಿಪಟೂರು ನಗರ ಠಾಣೆಯಲ್ಲಿ ಅಷ್ಟೆ ಅಲ್ಲದೆ ಹಲವು ಪೊಲೀಸ್ ಠಾಣೆಗಳಲ್ಲಿ ಕೂಡ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಮದ್ಯ ಪ್ರಿಯರಿಗೆ ಸಿಹಿ ಸುದ್ದಿಯೊಂದು ನೀಡಿರುವ ಪ್ರವಾಸೋದ್ಯಮ ಇಲಾಖೆಯು ನೆರೆಯ ಗೋವಾ ಬೀಚ್ ಗಳಲ್ಲಿ ಯಾವ ರೀತಿ ಮದ್ಯ ಮಾರಾಟ ಮಾಡಲಾಗುತ್ತದೆಯೊ ಅದೇ ಒಂದು ಮಾದರಿಯಲ್ಲಿ ಕರ್ನಾಟಕದ ಬೀಚ್ ಗಳಲ್ಲಿಯೂ ಸಹ ಮದ್ಯ ಮಾರಾಟಕ್ಕೆ ಪ್ರವಾಸೋದ್ಯಮ ಇಲಾಖೆ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಹೌದು ರಾಜ್ಯದ ಬೀಚ್​ಗಳಿಗೆ ಪ್ರವಾಸಿಗರನ್ನು ಸೆಳೆಯುವ ಮತ್ತು ಪ್ರವಾಸೋದ್ಯಮವನ್ನು ಇನ್ನಷ್ಟು ಲಾಭದಾಯಕವನ್ನಾಗಿಸುವ ಉದ್ದೇಶದೊಂದಿಗೆ ಮಹತ್ವದ ಕ್ರಮಕ್ಕೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ರಾಜ್ಯದ ಕರಾವಳಿಯ ಬೀಚ್​ಗಳಲ್ಲಿ ಕೂಡ ಗೋವಾದ ಮಾದರಿಯಲ್ಲಿ ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ​​ ಬಗ್ಗೆ ಚಿಂತನೆ ನಡೆಸುತ್ತಿದೆ. ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್‌ಗಳಲ್ಲಿ ಟೆಂಟ್​​ಗಳನ್ನು ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ. ಮಂಗಳೂರಿನಲ್ಲಿ ನಡೆದ ‘ಕನೆಕ್ಟ್ 2024’ನಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಜೇಂದ್ರ ಕೆವಿ, ಬೀಚ್​ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಸುವ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಇನ್ನೂ ಮೂರು ಗಂಟೆಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಇರಿ ಎಂದು ಜನರಿಗೆ ಸೂಚಿಸಲಾಗಿದೆ. ಈ ಮಧ್ಯೆ ಬೆಂಗಳೂರಿನ ಜನತೆಗೆ ಸಾಂಕ್ರಾಮಿಕ ರೋಗಗಳ ಭೀತಿ ಕೂಡ ಎದುರಾಗಿದೆ. ಈ ಕುರಿತಂತೆ ಬಿಬಿಎಂಪಿ ಆರೋಗ್ಯ ವಿಭಾಗ ಮಾರ್ಗಸೂಚಿ ಹೊರಡಿಸಿದೆ. ಮಳೆ ಅವಾಂತರದ ಡ್ಯಾಮೇಜ್ ಕಂಟ್ರೋಲ್ ಗೆ ಪಾಲಿಕೆ ಮುಂದಾಗಿದೆ ಈ ಮೂಲಕ ಬೆಂಗಳೂರಿನ ಜನತೆ ವಿಶ್ವಾಸ ಗಳಿಸಲು ತಯಾರಿ ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಮಳೆಯ ಬಳಿಕ ರೋಗಗಳ ಆತಂಕ ಶುರುವಾಗಿದೆ. ಸಾಂಕ್ರಾಮಿಕ ರೋಗ ತಡೆಗೆ ನಿಗಾ ಇಡಲು ಬಿಬಿಎಂಪಿ ಇದೀಗ ಸಿದ್ಧತೆ ಮಾಡಿಕೊಂಡಿದೆ. ಮಳೆ ಬಿದ್ದ ಜಾಗದಲ್ಲಿ ಮುಂಜಾಗ್ರತಾ ಕ್ರಮಕ್ಕೆ ಪಾಲಿಕೆ ಸಿದ್ಧತೆ ಮಾಡಿಕೊಂಡಿದೆ. ಮಳೆಯಿಂದ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ತಗ್ಗಿದ ಬಳಿಕ ಸಾಂಕ್ರಾಮಿಕ ರೋಗ ಹರಡುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ನೀರಿನ ಮೂಲಗಳು ಪರಿಶೀಲನೆಗೆ ಬಿಬಿಎಂಪಿ ಪ್ಲಾನ್…

Read More

ಬೆಂಗಳೂರು : ಸದ್ಯಕ್ಕೆ ಬೆಂಗಳೂರಿನಲ್ಲಿ ಮಳೆ ನಿಲ್ಲುವ ಯಾವ ಲಕ್ಷಣಗಳು ಕೂಡ ಕಾಣುತ್ತಿಲ್ಲ. ಭಾರಿ ಮಳೆಯಿಂದಾಗಿ ಬೆಂಗಳೂರಿನಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು, ಹಲವು ಪ್ರದೇಶಗಳಲ್ಲಿ ಬೃಹತ್ ಗಾತ್ರದ ಮರಗಳು ಧರೆಗೆ ಉರುಳಿ ಅವಾಂತರ ಸೃಷ್ಟಿಯಾಗಿದೆ. ಇದೀಗ ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನ ಜನ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ನೆನ್ನೆ ರಾತ್ರಿ ಸುರಿದ ಮಳೆಗೆ ಹಲವೆಡೆ ಮರಗಳು ಧರೆಗೆ ಉರುಳಿವೆ. ಮಹದೇವಪುರ, ಬೊಮ್ಮನಹಳ್ಳಿ ಬಿಟಿಎಂ ಲೇಔಟ್, ಬಾಪೂಜಿ ನಗರದಲ್ಲಿ ಮರಗಳು ಧರೆಗೆ ಉರುಳಿ ಅವಾಂತರ ಸೃಷ್ಟಿಯಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ತುಂತುರು ಮಳೆ ಹಾಗೂ ಇಬ್ಬನಿ ಜಾಸ್ತಿಯಾಗಿದ್ದರ ಪರಿಣಾಮ ಸರಣಿ ಅಪಘಾತವಾಗಿದೆ. ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಸರಣಿ ಅಪಘಾತ ನಡೆದಿದ್ದು, 7 ಕಾರುಗಳ ಮಧ್ಯೆ ಅಪಘಾತ ನಡೆದಿರುವ ಘಟನೆ ಬೆಂಗಳೂರಿನ ಯಲಹಂಕದ ಬಳಿ ನಡೆದಿದೆ. ಹೌದು ಯಲಹಂಕ ತೆರಳುವ ಮುಖ್ಯ ರಸ್ತೆಯಲ್ಲಿ ವಾಹನಗಳ ನಡುವೆ ಅಪಘಾತ ನಡೆದಿದ್ದು,7 ಕಾರುಗಳ ನಡುವೆ ಸರಣಿ ಅಪಘಾತವಾಗಿದ್ದು, ಆದರೆ ಯಾವುದೇ ಹೆಚ್ಚು ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.ರಾತ್ರಿ ಸುರಿದ ಮಳೆಯಿಂದ ಕೂಡ ಹಲವಡೆ ಅವಾಂತರ ಸೃಷ್ಟಿಯಾಗಿದೆ.

Read More

ಕೊಪ್ಪಳ : ಈಗಾಗಲೇ ಆಕೆಗೆ ಎರಡು ಹೆಣ್ಣು ಮಕ್ಕಳು ಇದ್ದವು. ಇದೀಗ ಮೂರನೇ ಮಗು ಕೂಡ ಹೆಣ್ಣಾಗಿದ್ದರಿಂದ ಪತಿಯು ಹೆಣ್ಣು ಹೆತ್ತಿದಿಯ ಎಂದು ನಿಂದಿಸಿದ್ದಾನೆ. ಇದರಿಂದ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ತಾಲ್ಲೂಕಿನ ಚಳ್ಳಾರಿ ಗ್ರಾಮದಲ್ಲಿ ನಡೆದಿದೆ. ಚಳ್ಳಾರಿಯ ಗಣೇಶ ಗುಮಗೇರಿ ಹಾಗೂ ಹನುಮವ್ವ ಹಲವು ವರ್ಷಗಳ ಹಿಂದೆ ಮದುವೆಯಾಗಿದ್ದರು. ಈಗಾಗಲೇ ಹನುಮವ್ವಗೆ ಎರಡು ಹೆಣ್ಣು ಮಕ್ಕಳು ಇದ್ದವು. ಕಳೆದ ಕೆಲವು ತಿಂಗಳ ಹಿಂದೆ ಮೂರನೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಈ ಬಾರಿಯೂ ಕೂಡ ಹೆಣ್ಣು ಮಗು ಆಗಿದ್ದರಿಂದ ಗಣೇಶ್ ಹಾಗೂ ಹನುಮವ್ವ ನಡುವೆ ಆದಾಗ ಗಲಾಟೆ ಆಗುತ್ತಿತ್ತು ಇದರಿಂದ ಮನನೊಂದು ಹನುಮವ್ವ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೂರನೇ ಮಗು ಹೆಣ್ಣಾದ ನಂತರ ಅಳಿಯ ಗಣೇಶ ನನ್ನ ಮಗಳಿಗೆ ವಿಪರೀತವಾಗಿ ಕಾಟ ಕೊಟ್ಟಿದ್ದಾನೆ. ಮದ್ಯ ವ್ಯಸನಿಯೂ ಆಗಿದ್ದರಿಂದ ಹೊಡೆದು ಮೂರು ಹೆಣ್ಣು ಹೆತ್ತಿದ್ದೀಯಾ ಎಂದು ನಿಂದಿಸಿದ್ದರಿಂದ ಮನನೊಂದು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹನುಮವ್ವ ಅವರ ತಂದೆ ಬಸಪ್ಪ…

Read More

ಕೊಪ್ಪಳ : ಗಂಗಾವತಿ ತಾಲ್ಲೂಕಿನ ಸಾಣಾಪುರ ಗ್ರಾಮದ ಕೆರೆಯಲ್ಲಿ ಬುಧವಾರ ಈಜಲು ಹೋದಾಗ ಕಾಲು ಜಾರಿ ಬಿದ್ದ ಇಸ್ರೇಲ್‌ ಪ್ರಜೆಯನ್ನು ಸಹ ಪ್ರವಾಸಿಗರು ರಕ್ಷಿಸಿದ್ದಾರೆ. ಸಾವಿನ ದವಡೆಯಿಂದ ಪಾರಾದ ಇಸ್ರೇಲ್‌ ದೇಶದ ಜೇರುಸೆಲಂನ ಲೇವಿಅಮಿಟ್ ತನ್ನ ಸ್ನೇಹಿತರ ಜೊತೆಗೆ ಹಂಪಿ ಹಾಗೂ ಆನೆಗೊಂದಿ ಭಾಗದಲ್ಲಿ ಪ್ರವಾಸಕ್ಕೆ ಬಂದಿದ್ದರು. ಪ್ರವಾಸಿ ತಾಣದಲ್ಲಿ ಸುತ್ತಾಡಿದ ಬಳಿಕ ಆರಂಭದಲ್ಲಿ ಕೆರೆಯ ದಡದಲ್ಲಿ ಸ್ವಲ್ಪ ನೀರಿದ್ದ ಜಾಗದಲ್ಲಿ ಸ್ನಾನ ಮಾಡುತ್ತಿದ್ದರು. ಪ್ರವಾಸಿ ತಾಣದಲ್ಲಿ ಸುತ್ತಾಡಿದ ಬಳಿಕ ಆರಂಭದಲ್ಲಿ ಕೆರೆಯ ದಡದಲ್ಲಿ ಸ್ವಲ್ಪ ನೀರಿದ್ದ ಜಾಗದಲ್ಲಿ ಸ್ನಾನ ಮಾಡುತ್ತಿದ್ದಾಗ ಕಾಲು ಜಾರಿ ಕೆರೆಯ ಆಳಕ್ಕೆ ಹೋಗಿದ್ದಾರೆ. ನೀರಿನಲ್ಲಿ ಮುಳುಗಿ ಏಳುತ್ತಿರುವುದನ್ನು ಗಮನಿಸಿದ ಸಹ ಪ್ರವಾಸಿಗರು ರಕ್ಷಣೆ ಮಾಡಿದರು.

Read More

ಬೆಂಗಳೂರು : ಬಿಜೆಪಿಗೆ ಕೈಕೊಟ್ಟು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಸಿಪಿ ಯೋಗೇಶ್ವರ್ ಅವರು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೃಹತ್ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ನಿನ್ನೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಪಕ್ಷದ ಬಾವುಟ ನೀಡಿ ಸಿಪಿ ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಸಂಜೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ. ಹಾಗಾಗಿ ನಾಳೆ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು. ಇಂದು ಬೆಳಿಗ್ಗೆ 11 ಗಂಟೆಗೆ ಚನ್ನಪಟ್ಟಣ ತಾಲೂಕು ಕಚೇರಿಗೆ ಬೃಹತ್ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.ಸಿಪಿ ಯೋಗೇಶ್ವರ್ ಅವರಿಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿಕೆ ಸುರೇಶ್ ಸೇರಿದಂತೆ ಸೇರಿದಂತೆ ಹಲವು ಸಚಿವರು, ಜಿಲ್ಲೆಯ ಶಾಸಕರು ಸಾಥ್ ನೀಡಲಿದ್ದಾರೆ.

Read More

ಬೆಂಗಳೂರು : ಒಂದು ಕಡೆ ಚನ್ನಪಟ್ಟಣ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಬೇಕೆಂಬ ಗೊಂದಲದಲ್ಲಿ ಹೆಚ್‍ಡಿ ಕುಮಾರಸ್ವಾಮಿ ಇದ್ದರೆ, ಇನ್ನೊಂದು ಕಡೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ತೀವ್ರ ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲೆ ಚಿಕಿತ್ಸೆ ನೀಡಲಾಗುತ್ತಿದೆ. ಹೌದು ಚೆನ್ನಮ್ಮ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆ ಚೆನ್ನಮ್ಮ ಆರೋಗ್ಯ ವಿಚಾರಿಸಲು ಕುಟುಂಬ ಸದ್ಯಸ್ಯರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಕೇಂದ್ರ ಸಚಿವರಾಗಿರುವ ಹೆಚ್‌ಡಿ ಕುಮಾರಸ್ವಾಮಿ ಅವರು ನಿನ್ನೆ ಚನ್ನಪಟ್ಟಣ ಟಿಕೆಟ್ ವಿಚಾರವಾಗಿ ಸಭೆ ನಡೆಸಬೇಕಿತ್ತು ಆದ್ರೆ, ಚೆನ್ನಮ್ಮ ಅವರ ಅನಾರೋಗ್ಯ ಹಿನ್ನೆಲೆ ಸಭೆ ರದ್ದುಗೊಳಿಸಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆ ವಿಚಾರವಾಗಿ ನಿನ್ನೆ ಬಿಜೆಪಿ ಜೆಡಿಎಸ್ ಸಮನ್ವಯ ಸಮಿತಿ ಸಭೆ ಕರೆದಿತ್ತು, ಬೆಂಗಳೂರಿನ ಕಾಸಿಗೆ ಹೋಟೆಲಲ್ಲಿ ಈ ಒಂದು ಸಭೆ ನಡೆಬೇಕಿತ್ತು ಆದರೆ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಈ ಹಿನ್ನೆಲೆಯಲ್ಲಿ ನಾಳೆ ಹೈಕಮಾಂಡ್‌ನಿಂದಲೇ ಅಭ್ಯರ್ಥಿ ಘೋಷಣೆ ಮಾಡಿಸುತ್ತೇನೆ ಎಂದು ಹೆಚ್‌ಡಿ ಕುಮಾರಸ್ವಾಮಿ ಅವರು ನಿನ್ನೇನೆ…

Read More

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ಮಾಜಿ ಸಚಿವ ಬಿ ನಾಗೇಂದ್ರ ಅವರು ಜಾಮೀನಿನ ಮೇಲೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. ಇದೀಗ ಜಾಮೀನು ರದ್ದು ಕೋರಿ ಇಡಿ ಅಧಿಕಾರಿಗಳು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಕೋಟ್ಯಂತರ ಹಣವನ್ನು ಅಕ್ರಮವಾಗಿ ವರ್ಗಾಯಿಸಿರುವ ಪ್ರಕರಣದ ಆರೋಪಿಯಾಗಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ಜಾಮೀನು ರದ್ದುಪಡಿಸುವಂತೆ ಕೋರಿ ಜಾರಿ ನಿರ್ದೇಶನಾಲಯ (ED) ಹೈಕೋರ್ಟ್ ಮೆಟ್ಟಿಲೇರಿದೆ. ಈ ಕುರಿತು ಇ.ಡಿ. ಹೈಕೋರ್ಟ್‌ಗೆ ಸಲ್ಲಿಸಿರುವ ಕ್ರಿಮಿನಲ್ ಅರ್ಜಿ ಗುರುವಾರ ಗುರುವಾರ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿದೆ. ಇತ್ತೀಚೆಗೆ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರಿಗೆ ಜಾಮೀನು ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು.

Read More