Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮೈತ್ರಿ ಪಕ್ಷಗಳಿಗೆ ಬಿಗ್ ಶಾಕ್ ಕೊಟ್ಟ ಸಿಪಿ ಯೋಗೇಶ್ವರ್ ಅವರು ಬಿಜೆಪಿ ಪಕ್ಷವನ್ನು ತೊರೆದು ಅಧಿಕೃತವಾಗಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಇದರಿಂದ ಬಿಜೆಪಿ ಹಾಗೂ ಜೆಡಿಎಸ್ ಗೆ ಸಿಪಿ ಯೋಗೇಶ್ವರ್ ಸೆಡ್ಡು ಹೊಡೆದಿದ್ದಾರೆ. ಇನ್ನು ಚನ್ನಪಟ್ಟಣ ಕ್ಷೇತ್ರಕ್ಕೆ ಯಾವ ಅಭ್ಯರ್ಥಿ ಕಣಕ್ಕಿಳಿಸುತ್ತೇವೆ ಎಂದು ಕಾದು ನೋಡಿ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಜೆಪಿ ನಗರದ ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರ ಜೊತೆ ಮಾತಮಾಡಿದ ಅವರು, ಚನ್ನಪಟ್ಟಣದ ಅಭ್ಯರ್ಥಿ ಬಗ್ಗೆ ಪ್ರತಿಕ್ರಿಸಿ, ಯಾರು ಅಂತ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಎನ್ಡಿಎ ಕೂಟದಿಂದಲೇ ಅಭ್ಯರ್ಥಿ ಘೋಷಣೆ ಮಾಡುತ್ತೇವೆ ಎಂದು ತಿಳಿಸಿದರು. ಅನಸೂಯ ಮಂಜುನಾಥ್ ಅಭ್ಯರ್ಥಿ ಆಗುವ ವಿಚಾರಕ್ಕೆ ಪ್ರತಿಕ್ರಿಯಿಸಿದ ನಿಖಿಲ್, ಕಾದು ನೋಡಿ ಎಂದಷ್ಟೇ ಹೇಳಿದರು. ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಆಶ್ಚರ್ಯವನ್ನೇನು ತಂದಿಲ್ಲ. ಅವರು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಕೊಟ್ಟಾಗಲೇ ನಿರೀಕ್ಷೆ ಇತ್ತು. ಹಾಗಾಗಿ ಸಿ…
ಬೆಂಗಳೂರು : ಬಿಜೆಪಿಗೆ ಕೈಕೊಟ್ಟು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಸಿಪಿ ಯೋಗೇಶ್ವರ್ ಅವರು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂದು ಅವರೇ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ ನಾಳೆ ಬೃಹತ್ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಪಕ್ಷದ ಬಾವುಟ ನೀಡಿ ಸಿಪಿ ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಇವಳೆ ಡಿಕೆ ಶಿವಕುಮಾರ್ ಅವರು ಇಂದು ಸಂಜೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ. ಹಾಗಾಗಿ ನಾಳೆ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು. ನಾಳೆ ಬೆಳಿಗ್ಗೆ 11 ಗಂಟೆಗೆ ಚನ್ನಪಟ್ಟಣ ತಾಲೂಕು ಕಚೇರಿಗೆ ಬೃಹತ್ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.ಸಿಪಿ ಯೋಗೇಶ್ವರ್ ಅವರಿಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿಕೆ ಸುರೇಶ್ ಸೇರಿದಂತೆ ಕಾಂಗ್ರೆಸ್ ನಾಯಕರು ಸಾಥ್ ನೀಡಲಿದ್ದಾರೆ.
ಮೈಸೂರು : ಸಿಎಂ ಸಿದ್ದರಾಮಯ್ಯ ಮಗ ಸೊಸೆ ಹೆಸರಿನಲ್ಲಿ ಪಬ್ ಮಾಡಿದ್ದಾರೆ. ಅದಕ್ಕೆಲ್ಲ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮಾಸ್ಟರ್ ಮೈಂಡ್ ಆಗಿದ್ದು, ಬೈರತಿ ಸುರೇಶ್ ಕ್ಷೇತ್ರದಲ್ಲಿ ಆ ಪಬ್ ಇದೆ. ಆತನನ್ನು ಒಳಗಡೆ ಹಾಕಿದರೆ ಎಲ್ಲ ವಿಷಯ ಹೊರಗಡೆ ಬರುತ್ತದೆ ಎಂದು ಪರಿಷತ್ ಬಿಜೆಪಿ ಸದಸ್ಯ ಎಚ್. ವಿಶ್ವನಾಥ್ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಭೈರತಿ ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀವು ಎಷ್ಟೇ ಹೇಳಿದರೂ ಸಿಎಂ ಸಿದ್ದರಾಮಯ್ಯ ಭ್ರಷ್ಟ ಅಂತ ಜನ ನಿರ್ಧರಿಸಿದ್ದಾರೆ. ಮನೆ ಇಲ್ಲ ಮರಿಸ್ವಾಮಿ ಮನೆಯಲ್ಲಿ ಮಲಗ್ತೀನಿ ಎನ್ನುತ್ತೇನೆ ಅಂದರೆ ಜನ ನಂಬಲ್ಲ. ಸಿದ್ದರಾಮಯ್ಯ ಭ್ರಷ್ಟ ಅಂತ ಜನ ತೀರ್ಮಾನ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಮಗ ಸೊಸೆ ಹೆಸರಿನಲ್ಲಿ ಪಬ್ ಮಾಡಿದ್ದಾರೆ ಅದಕ್ಕೆಲ್ಲ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮಾಸ್ಟರ್ ಮೈಂಡ್. ಭೈರತಿ ಸುರೇಶ್ ಕ್ಷೇತ್ರದಲ್ಲಿ ಆ ಪಬ್ ಇದೆ ಸಿದ್ದರಾಮಯ್ಯ ನಾನು ಒಳ್ಳೆಯವನು ಅಂತ ಡಂಗೂರ ಸಾರುತ್ತಿದ್ದಾರೆ. ಸಿಎಂ…
ಮೈಸೂರು : ತೀವ್ರ ಅಚ್ಚರಿ ಮೂಡಿಸಿದ ಬಿಜೆಪಿಯ ಮಾಜಿ ಎಂಎಲ್ಸಿ ಸಿಪಿ ಯೋಗೇಶ್ವರ್ ಅವರು ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಒಂದು ವಿಚಾರವಾಗಿ ಪರಿಷತ್ ಬಿಜೆಪಿ ಸದಸ್ಯ ಎಚ್ ವಿಶ್ವನಾಥ್ ಅವರು ಸಿಪಿ ಯೋಗೇಶ್ವರ್ ಸೈನಿಕ ಕುಲಕ್ಕೆ ಅವಮಾನ ಅವನೊಬ್ಬ ಫ್ರಾಡ್ ಎಂದು ಆಕ್ರೋಶ ಹೊರಹಾಕಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಪಿ ಯೋಗೇಶ್ವರ್ ಸೈನಿಕ ಕುಲಕ್ಕೆ ಅವಮಾನ, ಅವನೊಬ್ಬ ಫ್ರಾಡ್ ಜೆಡಿಎಸ್ ಬಿಜೆಪಿ ಕಾಂಗ್ರೆಸ್ ಎಲ್ಲಾ ಪಕ್ಷದವರು ಕರೆಯುತ್ತಿದ್ದಾರೆ. ಅವನೊಬ್ಬ ದೊಡ್ಡ ಲೀಡರ್ ಅಂತ ಎಲ್ಲರೂ ಕರೆಯುತ್ತಿದ್ದೀರಾ? ಸಿಎಂ ಅವರೇ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಏಕೆ ಹಾಳು ಮಾಡುತ್ತಿದ್ದೀರಿ? ಸರ್ಕಾರ ಈಗಾಗಲೇ ಮುಡಾ, ವಾಲ್ಮೀಕಿ ನಿಗಮದ ಅಕ್ರಮದಲ್ಲಿ ಸಿಲುಕಿದೆ. ಇದರ ನಡುವೆ ಇನ್ನೊಬ್ಬ ಫ್ರಾಡ್ ಸೇರಿಸಿಕೊಂಡಿದ್ದೀರಿ. ಕರ್ನಾಟಕ ರಾಜ್ಯ ಫ್ರಾಡ್ ಗಳ ಸಂತೆಯಾಗಿದೆ. ನಾನು ಹುಣಸೂರು ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೆ. ಸಿಎಂ ಆಗಿದ್ದ ಬಿಎಸ್ ಯಡಿಯೂರಪ್ಪ ಉಪಚುನಾವಣೆಗೆ ಬೇಕಾಗಿದ್ದನ್ನು ಕೊಟ್ಟು…
ಬೆಂಗಳೂರು : ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಮೃತ ಕಾರ್ಮಿಕನನ್ನು ಸೋಲು ಪಾಸ್ವಾನ್ ಎಂದು ಗುರುತಿಸಲಾಗಿದೆ.ಈ ಮೂಲಕ ಇದುವರೆಗೂ 6 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಬಿಹಾರ್ ಮೂಲದ ಟೈಲ್ಸ್ ಕಾರ್ಮಿಕ ಎಂದು ಹೇಳಲಾಗುತ್ತಿದ್ದು, ತಿರುಪಾಲಿ, ಅರ್ಮಾನ್ ಸೇರಿದಂತೆ ಇದುವರೆಗೂ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇದುವರೆಗೂ 13 ಜನ ಕಾರ್ಮಿಕರನ್ನು ರಕ್ಷಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಾಲಿಕ ಭುವನ್ ರೆಡ್ಡಿ ಗುತ್ತಿಗೆದಾರ ಮುನಿಯಪ್ಪ ಇಬ್ಬರನ್ನು ಕೂಡ ಹೆಣ್ಣೂರು ಪೊಲೀಸ್ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಟ್ಟಡದ ಮಾಲೀಕ ಭುವನ್ ರೆಡ್ಡಿ ನಾಲ್ಕು ಕಟ್ಟಡ ನಿರ್ಮಾಣ ಮಾಡಲಾಗುತ್ತೆ ಎಂದು ಅನುಮತಿ ಪಡೆದವು ಆರು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಕಟ್ಟಡದ ಮಾಲಿಕ ಭುವನ್ ರೆಡ್ಡಿ ಹಾಗೂ ಗುತ್ತಿಗೆದಾರ ಮುನಿಯಪ್ಪನನ್ನು ಇಬ್ಬರನ್ನು ಹೆಣ್ಣೂರು ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನಾ ಸ್ಥಳದಲ್ಲಿ NDRF, SDRF ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ರಕ್ಷಣಾ ಕಾರ್ಯಚರಣೆ ಮುಂದುವರಿಸಿದ್ದಾರೆ.
ಬೆಂಗಳೂರು : ನ್ಯಾಯಾಲಯದ ಅನುಮತಿ ಇಲ್ಲದೆ ಬೆಂಗಳೂರು ಮಹಾನಗರದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಫ್ಲೆಕ್ಸ್, ಹೋರ್ಡಿಂಗ್ಸ್‌ಗಳ ಜಾಹೀರಾತು ಬೈಲಾ 2024ರ lಅಧಿಸೂಚನೆ ಹೊರಡಿಸದಂತೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೊರ್ಟ್ ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಜಾಹೀರಾತು ಪ್ರಕಟಿಸುವ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ನಗರದಲ್ಲಿ ಜಾಹೀರಾತು ಹೊರಡಿಸುವುದಕ್ಕೆ ಸಂಬಂಧಿಸಿದಂತೆ ಬೈಲಾ ನಿಯಮಗಳನ್ನು ತಿದ್ದುಪಡಿ ಮಾಡುವುದಕ್ಕೆ ಬಿಬಿಎಂಪಿ ಮುಂದಾಗಿದ್ದು, ಪ್ರಕ್ರಿಯೆ ನಡೆಯುತ್ತಿದೆ. ಸಂಬಂಧಪಟ್ಟವರು ಮತ್ತು ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ ಎಂದು ಪೀಠಕ್ಕೆ ವಿವರಿಸಿದರು. ಅರ್ಜಿದಾರರ ವಾದವನ್ನು ಆಲಿಸಿದ ನ್ಯಾಯಪೀಠ, ನಗರದಲ್ಲಿ ಅಳವಡಿಸಿರುವ ಫ್ಲೆಕ್ಸ್, ಹೋರ್ಡಿಂಗ್ಸ್ ಮತ್ತು ಅಕ್ರಮ ಜಾಹೀರಾತುಗಳಿಗೆ ಸಂಬಂಧಿಸಿದ ಅರ್ಜಿಗಳು ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿವೆ. ಈ ನಿಟ್ಟಿನಲ್ಲಿ ಈ ಸಂಬಂಧ ಅಧಿಸೂಚನೆ ಹೊರಡಿಸಬೇಕಾದರೂ ನ್ಯಾಯಾಲಯದ ಅನುಮತಿ ಪಡೆಯಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು ನವೆಂಬರ್ 8ಕ್ಕೆ ಮುಂದೂಡಿತು.
ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ಭೀಕರ ದುರಂತ ಸಂಭವಿಸಿದ್ದು ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಐವರು ಕಾರ್ಮಿಕರು ಸಾವನ್ನಪ್ಪಿದ್ದರು. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೆಣ್ಣೂರು ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಣ್ಣೂರು ಠಾಣೆ ಪೊಲೀಸರಿಂದ ಇಬ್ಬರು ಆರೋಪಿಗಳನ್ನು ಇದೀಗ ಬಂಧಿಸಲಾಗಿದೆ.ಬಂಧಿತರನ್ನ ಕಟ್ಟಡದ ಮಾಲೀಕ ಭುವನ್ ರೆಡ್ಡಿ ಹಾಗೂ ಗುತ್ತಿಗೆದಾರ ಮುನಿಯಪ್ಪ ಎಂದು ಹೇಳಲಾಗುತ್ತಿದೆ.ನಾಲ್ಕು ಮಹಡಿ ಕಟ್ಟಡ ನಿರ್ಮಾಣಕ್ಕೆ ಭುವನ್ ರೆಡ್ಡಿ ಅನುಮತಿ ಪಡೆದಿದ್ದ. 6ನೇ ಮಹಡಿ ನಿರ್ಮಾಣದ ವೇಳೆ ನಿನ್ನೆ ಕಟ್ಟಡ ಕುಸಿದು ಬಿದ್ದಿತ್ತು. ಕಟ್ಟಡ ಕುಸಿದು ಇದುವರೆಗೂ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮುಂದುವರೆದ ಕಾರ್ಯಾಚರಣೆ ಮೊಹಮ್ಮದ್ ಸಾಹಿಲ್, ತಿರುಪಾಲಿ, ಅರ್ಮಾನ್, ಶಂಕರ್, ಸತ್ಯರಾಜ್ ಮೃತಪಟ್ಟವರು. ರಾತ್ರಿ ಇಡೀ ಅವಶೇಷಗಳಡಿ ಸಿಲುಕಿದವರ ಪತ್ತೆಕಾರ್ಯ ನಡೆದಿದೆ. ಕಾಮಗಾರಿಯ ವೇಳೆಗೆ 21 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಈಗಾಗಲೇ ಅಗ್ನಿಶಾಮಕ, ಎನ್ಡಿಆರ್ಎಫ್, ಪೊಲೀಸರು…
ದಾವಣಗೆರೆ : ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗ್ರಹಲಕ್ಷ್ಮಿ ಯೋಜನೆ ಮಹಿಳೆಯರಿಗೆ ಬಹಳ ಸಹಕಾರಿಯಾಗಿದೆ. ಈ ಒಂದು ಹಣವನ್ನು ತರಲು ಬ್ಯಾಂಕಿಗೆ ತೆರಳಿದ್ದ ಮಹಿಳೆಯನ್ನು ಆಕೆಯ ಪತಿಯೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಉಜ್ಜಪ್ಪರ ಒಡೆರಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೌದು ಕೊಳೆಯಾದ ಮಹಿಳೆಯನ್ನು ಸತ್ಯಮ್ಮ ಎಂದು ಗುರುತಿಸಲಾಗಿದ್ದು ಇನ್ನು ಹತ್ಯೆಗೈದ ಪತಿಯನ್ನ ಅಣ್ಣಪ್ಪ ಎಂದು ಹೇಳಲಾಗುತ್ತಿದೆ.ಗೃಹಲಕ್ಷ್ಮೀ ಯೋಜನೆ ಹಣ ಪಡೆಯಲು ಸತ್ಯಮ್ಮ ನಿನ್ನೆ ಜಗಳೂರು ತಾಲೂಕಿನ ಅಸಗೋಡ್ ಬ್ಯಾಂಕ್ಗೆ ಬಂದಿದ್ದರು. ಇದೇ ವೇಳೆ ಬ್ಯಾಂಕ್ಗೆ ಬಂದ ಪತಿ ಅಣ್ಣಪ್ಪ ಪತ್ನಿ ಸತ್ಯಮ್ಮಳನ್ನ ಮನವೊಲಿಸಿ ಜಮೀನಿಗೆ ಕರೆದೊಯ್ದು ಹಲ್ಲೆ ಮಾಡಿದ್ದಾನೆ. ಬಳಿಕ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ದಂಪತಿ 12 ವರ್ಷದ ಹಿಂದೆ ಪ್ರೀತಿಸಿ ಮದುವೆ ಆಗಿದ್ದರು. ದಂಪತಿಗೆ ಒಂದು ಹೆಣ್ಣು, ಒಂದು ಗಂಡು ಇದೆ. ಪತಿ ಅಣ್ಣಪ್ಪ ನಿತ್ಯ ಕುಡಿದು ಬಂದು ಪತ್ನಿ ಸತ್ಯಮ್ಮರಿಗೆ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದನು. ಇದರಿಂದ ಬೇಸತ್ತ ಸತ್ಯಮ್ಮ ತವರು…
ಬೆಂಗಳೂರು : ತೀವ್ರ ಕುತೂಹಲ ಮೂಡಿಸಿದ ಬಿಜೆಪಿಯ ಮಾಜಿ ಎಂಎಲ್ಸಿ ಸಿಪಿ ಯೋಗೇಶ್ವರ್ ಅವರ ನಡೆ ಕೊನೆಗೂ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದರ ಮೂಲಕ ಅಂತ್ಯ ಹಾಡಿದ್ದಾರೆ. ಇಂದು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಇಂದು ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆಗೆ ಚರ್ಚಿಸಿ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿರೇಂದ್ರ ಅವರಿಗೆ ವಾಟ್ಸಪ್ ಮುಖಾಂತರ ಪ್ರಾಥಮಿಕ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು. ನಂತರ ಡಿಕೆ ಶಿವಕುಮಾರ್ ಅವರೊಂದಿಗೆ ಕೆಪಿಸಿಸಿ ಕಚೇರಿಗೆ ಆಗಮಿಸಿ ಅಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು. ಡಿಸಿಎಂ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಸ್ವಾಗತಿಸಿದರು. ಈ ವೇಳೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು ಚನ್ನಪಟ್ಟಣದ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ಅವರು ನಾಳೆ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಸಂಜೆ ಎಲ್ಐಸಿಸಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ…
ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ಮನವಿಗೆ ಸ್ಪಂದಿಸಿದ ರಾಯಬಾಗ ತಾಲೂಕಿನ ಮಂಟೂರು ಗ್ರಾಮದ ಮಲ್ಲವ್ವ ಮೇಟಿ ಅವರು ತಾವು ನಿರ್ಮಿಸಿದ ಗ್ರಂಥಾಲಯಕ್ಕೆ ‘ಗೃಹಲಕ್ಷ್ಮಿ’ ಎಂದು ಹೆಸರಿಟ್ಟಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯು ರಾಜ್ಯದ ಜನರ ಮನ ಗೆದ್ದಿರುವುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ. ಮಲ್ಲವ್ವ ಮೇಟಿ ಅವರ ನಿಸ್ವಾರ್ಥ ಸೇವೆಯನ್ನು ಪ್ರಶಂಸಿಸಿದ ಸಚಿವರು, ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ‘ಕಾನೂರು ಹೆಗ್ಗಡತಿ’ ಎಂಬ ಪುಸ್ತಕವನ್ನು ಗ್ರಂಥಾಲಯಕ್ಕೆ ಉಡುಗೊರೆ ನೀಡಿದ್ದರು. ಕಳೆದ ಒಂದು ವರ್ಷದ ಗೃಹಲಕ್ಷ್ಮಿ ಯೋಜನೆಯ ಮೊತ್ತವನ್ನು ಕೂಡಿಟ್ಟಿದ್ದ ಮಲ್ಲವ್ವ ಮೇಟಿ, ಗ್ರಾಮದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ಗ್ರಂಥಾಲಯವನ್ನು ನಿರ್ಮಿಸಿದ್ದರು. ಮಲ್ಲವ್ವ ಮೇಟಿ ಕಾರ್ಯವನ್ನು ಮೆಚ್ಚಿದ್ದ ಸಚಿವರು, ಗ್ರಂಥಾಲಯಕ್ಕೆ ಗೃಹಲಕ್ಷ್ಮಿ ಗ್ರಂಥಾಲಯ ಎಂದು ಹೆಸರಿಡಬೇಕು ಎಂದು ಮನವಿ ಮಾಡಿದ್ದರು.












