Author: kannadanewsnow05

ಬೆಂಗಳೂರು : ಬಿಜೆಪಿ ಹಾಗೂ ಜೆಡಿಎಸ್ ಗೆ ಬಿಗ್ ಶಾಕ್ ನೀಡಿ ಇಂದು ಅಧಿಕೃತವಾಗಿ ಬಿಜೆಪಿಯ ಮಾಜಿ ಎಂಎಲ್ಸಿ ಸಿಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ಸಿಪಿ ಯೋಗೇಶ್ವರ್ ಅವರು ನಾನು ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದು ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಿಪಿ ಯೋಗೇಶ್ವರ್ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಪಿ ಯೋಗೇಶ್ವರ್ ಅವರಿಗೆ ಪಕ್ಷದ ಬಾವುಟ ನೀಡಿ ಸ್ವಾಗತಿಸಿದರು. ಬಳಿಕ ಮಾತನಾಡಿದ ಸಿಪಿ ಯೋಗೇಶ್ವರ್ ಅವರು, ನಾನು ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್ ಪಕ್ಷವನ್ನು ಸೇರಿದ್ದೇನೆ ಎಂದು ತಿಳಿಸಿದರು. ಕೆಲ ಸಂದರ್ಭದಲ್ಲಿ ನಾವು ಕಟ್ಟಿದ ಮನೆಗಳಲ್ಲಿ ನಾವೇ ಇರಲು ಆಗುವುದಿಲ್ಲ. ಸ್ವಯಂ ಪ್ರೇರಿತವಾಗಿ ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದೇನೆ.ಯಾವುದೆ ಷರತ್ತು ಇಲ್ಲದೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದೇನೆ ಎಂದು ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಬಳಿಕ ಹೇಳಿಕೆ ನೀಡಿದರು.…

Read More

ಬೆಂಗಳೂರು : ಬಿಜೆಪಿಯ ಮಾಜಿ ಎಂಎಲ್ಸಿ ಸಿ ಪಿ ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಗೆ ಸೇರ್ಪಡೆ ಗೊಳ್ಳುವಲ್ಲಿ ಕೊನೆಗೂ ಡಿಕೆ ಬ್ರದರ್ಸ್ ಅವರ ತಂತ್ರಗಾರಿಕೆ ಫಲಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಸಿಪಿ ಯೋಗೇಶ್ವರ್ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಹೌದು ರಾಜ್ಯ ರಾಜಕಾರಣದಲ್ಲಿ ಇಂದು ಅತಿ ದೊಡ್ಡ ಬೆಳವಣಿಗೆ ಆಗಿದ್ದು, ಚನ್ನಪಟ್ಟಣ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆಯೆ ಎಲ್ಲಾ ಪಕ್ಷಗಳಿಗೂ ಕಗ್ಗಂಟಾಗಿ ಪರಿಣಮಿಸಿತ್ತು.ಇದೀಗ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷವನ್ನು ಸೇರುವ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ ಎನ್ನಲಾಗಿದೆ. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾತನಾಡಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.ಪಕ್ಷದ ಸಿದ್ಧಾಂತಗಳನ್ನು ಒಪ್ಪಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಸಿಪಿ ಯೋಗೇಶ್ವರ್ ಮರಳಿ ಗೂಡಿಗೆ ಬಂದಿದ್ದಾರೆ. ಹಿಂದೆ ಕೆಲವರು ಬಿಜೆಪಿಗೆ ಹೋಗಿದ್ದರು ಈಗ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಅವರು ತಿಳಿಸಿದರು.ನಾನು ವಯನಾಡು…

Read More

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಬಹು ದೊಡ್ಡ ಸಂಚಲನ ಸೃಷ್ಟಿಯಾಗಿದ್ದು ಬಿಜೆಪಿ ಮಾಜಿ ಎಂಎಲ್ಸಿ ಸಿಪಿ ಯೋಗೇಶ್ವರ್ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಕೆಪಿಸಿಸಿ ಕಚೇರಿಗೆ ಆಗಮಿಸಿದ್ದಾರೆ.ಈ ಕುರಿತಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಚನ್ನಪಟ್ಟಣ ಕ್ಷೇತ್ರಕ್ಕೆ ಸಿಪಿ ಯೋಗೇಶ್ವರ್ ಅವರೇ ಅಭ್ಯರ್ಥಿಯಾಗಬಹುದು ಎಂದು ತಿಳಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೆ ಒಂದೇ ಕಾರಿನಲ್ಲಿ ಸಿಪಿ ಯೋಗೇಶ್ವರ್ ಅವರು ಕೆಪಿಸಿಸಿ ಕಚೇರಿಗೆ ಆಗಮಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಈ ಹಿಂದೆ ಸಿಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದರು. ಬಳಿಕ ಬೇರೆ ಪಕ್ಷಕ್ಕೆ ಹೋಗಿದ್ದಾರೆ, ಇದೀಗ ಅವರು ಘರ್ ವಾಪಸಿ ಆಗಿದ್ದಾರೆ.ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗಲು ಯಾವುದೇ ರೀತಿಯಾದಂತಹ ಬೇಡಿಕೆ ಇಟ್ಟಿಲ್ಲ ಎಂದು ತಿಳಿಸಿದರು.

Read More

ಬೆಂಗಳೂರು : ಇಂದು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದು ಮೈತ್ರಿ ಪಕ್ಷಗಳಿಗೆ ಕೈ ಕೊಟ್ಟ ಬಿಜೆಪಿ ಮಾಜಿ ಎಂಎಲ್ಸಿ ಸಿಪಿ ಯೋಗೇಶ್ವರ್ ಇದೀಗ ಒಂದೇ ಕಾರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಪಿ ಯೋಗೇಶ್ವರ್ ಅವರು ಕೆಪಿಸಿಸಿ ಕಚೇರಿಗೆ ತೆರಳಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಲವೇ ಕ್ಷಣಗಳಲ್ಲಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಗೆ ತೆರಳಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ತಮ್ಮ ಎಂಎಲ್ಸಿ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜಿನಾಮೆ ನೀಡಿದರು. ಇದೀಗ ವಾಟ್ಸಾಪ್ ಮುಖಾಂತರ ಬಿಜೆಪಿಯ ಪ್ರಾಥಮಿಕ ಸದಸ್ಯ ಸ್ಥಾನಕ್ಕೂ ಕೂಡ ಸಿಪಿ ಯೋಗೇಶ್ವರ್ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಹಾಗಾಗಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಇದೀಗ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ…

Read More

ವಿಜಯನಗರ : ಕಲುಷಿತ ನೀರು ಕುಡಿದು ವಾಂತಿ-ಭೇದಿಯಿಂದ ಬಳಲಿ ನವಜಾತ ಶಿಶು ಸೇರಿದಂತೆ ಐವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಗ್ರಾಮದ ಸುಮಾರು 50ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಹರಪನಹಳ್ಳಿ ತಾಲೂಕಿನ ಟಿ ತುಂಬಿಗೇರೆ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತಪಟ್ಟವರನ್ನು ಸುರೇಶ್ (30), ಮಹಾಂತೇಶ್ (45), ಗೌರಮ್ಮ (60), ಹನುಮಂತಪ್ಪ (38) ಮತ್ತು ಎಂಟು ತಿಂಗಳ ಗಂಡು ಮಗು ಎಂದು ಹೇಳಲಾಗುತ್ತಿದೆ. ಇವರ ಸಾವಿಗೆ ಕಲುಷಿತ ನೀರು ಸೇವನೆ ಕಾರಣ ಎಂಬ ಅನುಮಾನ ವ್ಯಕ್ತವಾಗಿದೆ. ಕಳೆದ 15 ದಿನಗಳಿಂದ ಗ್ರಾಮಕ್ಕೆ ಚರಂಡಿ ನೀರು ಕಲುಷಿತವಾಗಿ ನೀರು ಪೂರೈಕೆ ಆಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನೇಕ ಜನರು ವಾಂತಿಭೇದಿಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಆದರೆ ಇದೀಗ ಕಲುಷಿತ ನೀರು ಸೇವಿಸಿ 8 ತಿಂಗಳ ಗಂಡು ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಗ್ರಾಮದ 50ಕ್ಕೂ ಹೆಚ್ಚು ಜನರು ವಾಂತಿ-ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗರ್ಭಿಣಿ ನಿಂಗಮ್ಮ ಎಂಬುವರು ವಾಂತಿ-ಭೇದಿಯಿಂದ…

Read More

ಬೆಂಗಳೂರು : ಚನ್ನಪಟ್ಟಣದ ಉಪಚುನಾವಣೆಗೆ ಎನ್.ಡಿ.ಎ ದಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಸಿಪಿ ಯೋಗೇಶ್ವರ್ ಅವರು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಸಿಪಿ ಯೋಗೆಶ್ವರ್ ಅವರು ಬಿಜೆಪಿಗೆ ಗುಡ್ ಬೈ ಹೇಳಿ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೌದು ಬಿಜೆಪಿ ನಾಯಕರ ನಡೆಗೆ ಸಹಜವಾಗಿ ಸಮಾಧಾನಗೊಂಡಿದ್ದ ಸಿಪಿ ಯೋಗೇಶ್ವರ್ ಅವರು ಇತ್ತೀಚಿಗೆ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದೀಗ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ವಾಟ್ಸಪ್ ಮುಖಾಂತರ ಬಿಜೆಪಿ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಕೆಲವೇ ಕ್ಷಣಗಳಲ್ಲಿ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

Read More

ಬೆಂಗಳೂರು : ಬಿಜೆಪಿಯ ಮಾಜಿ MLC ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದೆ. ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ NDA ಟಿಕೆಟ್ ಸಿಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದ ಸಿ.ಪಿ.ಯೋಗೇಶ್ವರ್ ಇದೀಗ ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚಿಸಿದ್ದು, ಕಾಂಗ್ರೆಸ್ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಚನ್ನಪಟ್ಟಣ ಕ್ಷೇತ್ರಕ್ಕೆ ಸಿಪಿ ಯೋಗೇಶ್ವರ್ ಅವರೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು ಈಗಾಗಲೇ ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಆದರೆ ಚನ್ನಪಟ್ಟಣ ಕ್ಷೇತ್ರ ಬಹಳ ಕುತೂಹಲ ಮೂಡಿಸಿತ್ತು. ಒಂದು ಕಡೆ ಕುಮಾರಸ್ವಾಮಿಯವರು ಸಿಪಿ ಯೋಗೇಶ್ವರ್ ಅವರಿಗೆ ತಮ್ಮ ಜೆಡಿಎಸ್ ಪಕ್ಷ ಚಿನ್ಹೆ ಬಳಸಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ಸೂಚಿಸಿದ್ದರು.ಆದರೆ ಇದಕ್ಕೆ ಒಪ್ಪದ ಸಿಪಿ ಯೋಗೇಶ್ವರ್ ಬಿಜೆಪಿಯಿಂದಲೇ ಸ್ಪರ್ಧಿಸುತ್ತೇನೆ ಎಂದು ತಿಳಿಸಿದರು. ಬಳಿಕ ಅವರು ಹುಬ್ಬಳ್ಳಿಗೆ ತೆರಳಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.…

Read More

ಬೆಂಗಳೂರು : ಬಿಜೆಪಿಯ ಮಾಜಿ ಸಚಿವ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದೆ. ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ಎನ್ ಡಿಎ ಟಿಕೆಟ್ ಸಿಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದ ಸಿ.ಪಿ.ಯೋಗೇಶ್ವರ್ ಇದೀಗ ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚಿಸಿದ್ದು, ಕಾಂಗ್ರೆಸ್ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿ ನಾಯಕರ ಒಂದು ಸಂದೇಶಕ್ಕಾಗಿ ಕಾದು ಕುಳಿತಿದ್ದ ಸಿಪಿ ಯೋಗೇಶ್ವರ್ ನಿನ್ನೆ ರಾತ್ರಿಯವರೆಗೂ ಬಿಜೆಪಿ ನಾಯಕರ ಒಂದು ನಿರ್ಧಾರಕ್ಕೆ ಕಾದು ನೋಡುವ ತಂತ್ರ ಅನುಸರಿಸಿದರು. ಆದರೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗದ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆಗೆ ಸಿಪಿ ಯೋಗೇಶ್ವರ್ ಚರ್ಚಿಸಿದ್ದು ಬಹುತೇಕ ಅವರು ಇಂದೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿ ನಾಯಕರ ನಡೆಗೆ ಸಿಪಿ ಯೋಗೇಶ್ವರ್ ತೀವ್ರ ಅಸಮಾಧಾನ ಹೊರಹಾಕಿದ್ದು, ಬಿಜೆಪಿ ನಾಯಕರ ರೆಸ್ಪಾನ್ಸ್ ಗಾಗಿ ಸಿಪಿ ಯೋಗೇಶ್ವರ್ ಕಾದು ಕುಳಿತಿದ್ದರು. ಚನ್ನಪಟ್ಟಣದ ಕಾಸಿಗೆ…

Read More

ಮೈಸೂರು : ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ವಿಶೇಷ ವಿಮಾನದಲ್ಲಿ ಇಂದು ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಸ್ಥಳೀಯ ಕಾಂಗ್ರೆಸ್‌ ಮುಖಂಡರು ಹಾಗೂ ಶಾಸಕರು ಬರಮಾಡಿಕೊಂಡರು. ರಾಹುಲ್‌ ಗಾಂಧಿ ಅವರಿಂದ ತೆರವಾಗಿರುವ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನಾಳೆ ಕಾಂಗ್ರೆಸ್‌ನ ಹಿರಿಯ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.ಈ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ವಿಶೇಷ ವಿಮಾನದ ಮೂಲಕ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದರು. ನಂತರ ರಸ್ತೆಯ ಮೂಲಕ ಗುಂಡ್ಲುಪೇಟೆ ಮಾರ್ಗವಾಗಿ ವಯನಾಡ್‌ಗೆ ತೆರಳಿದರು.ಈ ವೇಳೆ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಸಂಸದ ಸುನಿಲ್ ಬೋಸ್, ಶಾಸಕರಾದ ರವಿಶಂಕರ್, ದರ್ಶನ್ ದ್ರುವನಾರಾಯಣ್, ಎ.ಆರ್.ಕೃಷ್ಣಮೂರ್ತಿ, ವಿಧಾನ ಪರಿಷತ್…

Read More

ಬಳ್ಳಾರಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ನಟ ದರ್ಶನವರು ಬಳ್ಳಾರಿ ಜೈಲಿನಲ್ಲಿ ಇದ್ದು ಅವರಿಗೆ ತೀವ್ರವಾಗಿ ಬೆನ್ನು ನೋವಿನ ಸಮಸ್ಯೆ ಕಾಣಿಸಿಕೊಂಡಿದೆ. ಹಾಗಾಗಿ ಇಂದು ಅವರು ಕೊನೆಗೂ ಪತ್ನಿಯ ಮಾತಿಗೆ ಬೆಲೆ ಕೊಟ್ಟು, ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲು ಒಪ್ಪಿಗೆ ಸೂಚಿಸಿದ್ದಾರೆ. ಆದ್ದರಿಂದ ಇದೀಗ ಬಳ್ಳಾರಿಯ ಕೇಂದ್ರ ಕಾರಾಗೃಹದ ಪೊಲೀಸರು ನಟ ದರ್ಶನ್ ಅವರನ್ನು ವಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ನಟ ದರ್ಶನ್ ಅವರನ್ನ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ರಸ್ತೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಇದಕ್ಕೂ ಮುನ್ನ ನಟ ದರ್ಶನ್ ಅವರನ್ನು ಭೇಟಿಯಾಗಲು ಪತ್ನಿ ವಿಜಯಲಕ್ಷ್ಮಿ ಹಾಗೂ ಭಾವ ಜೈಲಿಗೆ ಆಗಮಿಸಿದ್ದರು.ಈ ವೇಳೆ ಪತ್ನಿ ವಿಜಯಲಕ್ಷ್ಮಿ ಅವರು ನಟ ದರ್ಶನ್ ಅವರಿಗೆ ಚಿಕಿತ್ಸೆ ತೆಗೆದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಹೀಗಾಗಿ ನಟ ದರ್ಶನ ಅವರು ಪತ್ನಿಯ ಮಾತಿಗೆ ಬೆಲೆ ಕೊಟ್ಟು ಚಿಕಿತ್ಸೆ ಪಡೆದುಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ. ಇದೀಗ ನಟ ದರ್ಶನ್ ಅವರನ್ನು…

Read More