Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಮಳೆರಾಯ ತಣ್ಣಗಾಗಿದ್ದ ಆದರೆ ಇದೀಗ ಮತ್ತೆ ಅಬ್ಬರಿಸುತ್ತಿದ್ದು ಬೆಂಗಳೂರಿನ ಜನತೆ ಸಂಪೂರ್ಣವಾಗಿ ತತ್ತರಿಸಿ ಹೋಗಿದ್ದಾರೆ. ಇಂದು ಬೆಂಗಳೂರು ಮಹಾನಗರದಲ್ಲಿ ಮತ್ತೆ ಭಾರಿ ಮಳೆ ಆಗುತ್ತಿದ್ದು ಮಲ್ಲೇಶ್ವರಂ ನಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಆಗುತ್ತಿದೆ. ಹೌದು ಬೆಂಗಳೂರು ಮಹಾನಗರದ ಹಲವೆಡೆ ಭಾರಿ ಮಳೆಯಾಗುತ್ತಿ. ಇದೆ ವೇಳೆ ಮಲ್ಲೇಶ್ವರಂ ನಲ್ಲಿ ಆಟೋ ಬೈಕ್ ಗಳ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿದೆ. ಈ ವೇಳೆ ಕೆಲ ವಾಹನಗಳು ನುಜ್ಜುಗುಜ್ಜಾಗಿವೆ.ಈ ವೇಳೆ ಆಟೋದಲ್ಲಿ ಒಬ್ಬರು ಮಹಿಳೆ ಹಾಗೂ ಇಬ್ಬರೂ ಪುರುಷರು ಇದ್ದಿದ್ದು ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ರಾಜಾಜಿನಗರ, ಭಷ್ಯಂ ಸರ್ಕಲ್ ರಸ್ತೆ, ವಿಜಯನಗರ, ಮಂಜುನಾಥ ನಗರ ಮಾಗಡಿ ರಸ್ತೆ ಸೇರಿ ಹಲವೆಡೆ ಭಾರಿ ಮಳೆ ಆಗುತ್ತಿದೆ. ಮಳೆಗೆ ರಾಜಾಜಿನಗರದ ಒಂದು ಭಾಗದ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದೆ. ಮಳೆಯ ರಭಸಕ್ಕೆ ರಸ್ತೆಯಲ್ಲಿ ನೀರು ಹೊಳೆಯಂತೆ ಹರಿಯುತ್ತಿದೆ ಮಳೆಯಿಂದ ಫುಲ್ ಟ್ರಾಫಿಕ್ ಜಾಮ್ ಆಗಿದ್ದು…
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಆಗುತ್ತಿದ್ದು ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಈ ನೆಲೆಯಲ್ಲಿ ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ತಮಿಳುನಾಡಿನ ಕರಾವಳಿ ತೀರದಲ್ಲಿ ಗಾಳಿ ಪರಿಚಲನೆ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಸಿ ಎಸ್ ಪಾಟೀಲ್ ಈ ಕುರಿತು ಮಾಹಿತಿ ನೀಡಿದರು. ಬೆಳಗಾವಿ, ಧಾರವಾಡ, ಹಾವೇರಿ, ಗದಗ,b ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ರಾಮನಗರ ಹಾಗೂ ಮಂಡ್ಯ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ ಮುಂದಿನ ಮೂರು ಗಂಟೆಗಳ ಕಾಲ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಹಾಗಾಗಿ ಬೆಂಗಳೂರಿಗೆ ಆರೇಂಜ್…
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಡಿ ಅಧಿಕಾರಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು, ನನ್ನ ಭಾಮೈದ ತಂಗಿಗೆ ಅರಿಶಿನ ಕುಂಕುಮಕ್ಕೆ ಕೊಟ್ಟ ಜಮೀನನ್ನು ವಿವಾದ ಮಾಡಿದರು. ಅದಕ್ಕೇ ನಿವೇಶನವನ್ನೇ ವಾಪಸ್ ಕೊಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮೈಸೂರು ಜಿಲ್ಲೆಯ ಸ್ವ ಕ್ಷೇತ್ರ ವರುಣಾದಲ್ಲಿ ಸುಮಾರು 501 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅವರು, ಸಿದ್ದರಾಮಯ್ಯ 42 ವರ್ಷದ ರಾಜಕಾರಣದಲ್ಲಿ ಎಂದೂ ಬಡವರಿಗೆ ಅನ್ಯಾಯ ಮಾಡಿಲ್ಲ. ಒಂದು ರೂಪಾಯಿ ಲಂಚ ಪಡೆದಿಲ್ಲ. ನನ್ನ ಮೇಲಿನ ಸುಳ್ಳು ಆರೋಪವನ್ನು ಸಹಿಸುತ್ತೀರ? ಎಂದು ಪ್ರಶ್ನಿಸಿದರು. ಕುಮಾರಸ್ವಾಮಿ, ಯಡಿಯೂರಪ್ಪ, ಜೋಶಿ, ವಿಜಯೇಂದ್ರ ಮೊದಲಾದವರಿಗೆ ನನ್ನನ್ನು ಕಂಡರೆ ಹೊಟ್ಟೆ ಉರಿ. ಮೂರು ವರ್ಷದಿಂದ ಮೈಸೂರಿನ ಕುವೆಂಪು ರಸ್ತೆಯಲ್ಲಿ ಮನೆ ಕಟ್ಟಿಸುತ್ತಿದ್ದೇನೆ. ಒಬ್ಬ ಮುಖ್ಯಮಂತ್ರಿ ಮೇಲೆ ಗೂಬೆ ಕೂರಿಸುವ ಕೆಲಸ ಆಗುತ್ತಿದೆ. ಕಾಯಾ ವಾಚ ಮನಸಾ ಪ್ರಾಮಾಣಿಕವಾಗಿ ರಾಜಕಾರಣದಲ್ಲಿ ಇದ್ದೇನೆ.…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಾಂತರ ರೂಪಾಯಿ ಅಕ್ರಮಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಳ್ಳಾರಿ ಹಾಗೂ ರಾಯಚೂರು ಕ್ಷೇತ್ರದ ಚುನಾವಣೆಗೆ ಹಣ ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಇದೀಗ ಬಿಜೆಪಿ ದೂರು ನೀಡಿದೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಣವನ್ನು ರಾಯಚೂರು ಹಾಗೂ ಬಳ್ಳಾರಿ ಚುನಾವಣೆಗೆ ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ರಾಜ್ಯ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆಯಾಗಿದೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ದೂರು ನೀಡಲಾಗಿದೆ. ಈಗಾಗಲೇ ಈ ಒಂದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಮೂರು ತಿಂಗಳುಗಳ ಕಾಲ ಜೈಲಿನಲ್ಲಿದ್ದ ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಅವರು ಇತ್ತೀಚಿಗೆ ಜೈಲಿನಿಂದ ಬಿಡುಗಡೆಯಾಗಿದ್ದರು. ಇದೀಗ ರಾಜ್ಯ ಬಿಜೆಪಿ ನಾಯಕರು ಮತ್ತೊಂದು ಆರೋಪ ಮಾಡಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು…
ವಿಜಯನಗರ : ವಿಜಯನಗರ ಜಿಲ್ಲೆಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಕಲುಷಿತ ನೀರು ಸೇವಿಸಿ ಇಬ್ಬರು ಸಾವನಪ್ಪಿದ್ದು, 15 ಜನ ಅಸ್ವಸ್ಥರಾಗಿರುವ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಟಿ. ತುಂಬಿಗೇರಿಯಲ್ಲಿ ನಡೆದಿದೆ. ಮೃತಪಟ್ಟವರನ್ನ ಗ್ರಾಮದ ಸುರೇಶ ಭೋವಿ (32) ಎಂಬುವರು ನಿನ್ನೆ ಮೃತಪಟ್ಟಿದ್ದರೆ, ಮಹಾಂತೇಶ ಭೋವಿ (35) ಎನ್ನುವವರು ಕಳೆದ ನಾಲ್ಕು ದಿನದ ಹಿಂದೆ ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಇದೆ ವೇಳೆ 15 ಜನರು ಕಲುಷಿತ ನೀರು ಸೇವಿಸಿ ವಾಂತಿ ಭೇತಿಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ನೀರಿನ ಪೈಪ್ ಒಡೆದು, ಅದಕ್ಕೆ ಚರಂಡಿ ನೀರು ಸೇರಿ ನೀರು ಕಲುಷಿತಗೊಂಡಿದೆ. ಅದೇ ಕಲುಷಿತ ನೀರು ಕುಡಿದ ಜನರು ವಾಂತಿ- ಭೇದಿಯಿಂದ ಬಳಲುತ್ತಿದ್ದಾರೆ ಎನ್ನಲಾಗುತ್ತಿದ್ದು, ಆದರೆ ಗ್ರಾಮಸ್ಥರು ಕಲುಷಿತ ನೀರು ಸೇವನೆಯೆ ಇದಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಗ್ರಾಮಕ್ಕೆ ತಾಲೂಕು ಆರೋಗ್ಯ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮೈಸೂರು : ಸಿಎಂ ಸಿದ್ದರಾಮಯ್ಯ ಯಾವತ್ತೂ ಭ್ರಷ್ಟಾಚಾರ ಮಾಡಿದವರಲ್ಲ. ಸೇಮ ಸಿದ್ದರಾಮಯ್ಯ ಅವರ ಧ್ವನಿ ಅಡಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಊರನ್ನೇ ಲೂಟಿ ಮಾಡಿದವರು ಪ್ರಾಮಾಣಿಕತೆಯ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ತಾಯೂರು ಗೇಟ್ ನಲ್ಲಿ ಸಚಿವ ಡಾ. ಎಚ್ ಸಿ ಮಹದೇವಪ್ಪ ಆಕ್ರೋಶ ಹೊರಹಾಕಿದರು. ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ತಾಯೂರು ಗೇಟ್ ಬಳಿ ಮಾತನಾಡಿದ ಅವರು, ಕೆಲವರು ಸೂರ್ಯನಿಗೆ ಉಗಿಯುವ ಕೆಲಸವನ್ನು ಮಾಡುತ್ತಿದ್ದಾರೆ. ಸೂರ್ಯನಿಗೆ ಉಗುಳು ತಗುವುದಿಲ್ಲ ಸೂರ್ಯನಿಗೆ ಅಪಮಾನ ಮಾಡುವ ಕೆಲಸ ಮಾಡಲಾಗುತ್ತಿದೆ. ಕೆಲವರು ರಾಜ್ಯ ಸರ್ಕಾರ ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದ್ದಾರೆ ಎಂದರು. ಸಿದ್ದರಾಮಯ್ಯ ಧ್ವನಿ ಅಡಗಿದರೆ ಶೋಷಿತರ ಧ್ವನಿ ಅಡಗುತ್ತದೆ. ಹೀಗಾಗಿ ಸಿದ್ದರಾಮಯ್ಯ ಧ್ವನಿ ಅಡಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಊರನ್ನೆ ಲೂಟಿ ಮಾಡಿದವರು ಪ್ರಾಮಾಣಿಕತೆಯ ಬಗ್ಗೆ ಮಾತನಾಡುತ್ತಿದ್ದಾರೆ. ಇವರಿಗೆ ಯಾವ ನೈತಿಕತೆ ಇದೆ ಹೇಳಿ ಎಂದು ಮಹದೇವಪ್ಪ ಆಕ್ರೋಶ ಹೊರಹಾಕಿದರು.
ಬೀದರ್ : ಪೈಂಟರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೋಬ್ಬ ಮನೆಗೆ ಬಣ್ಣ ಹಚ್ಚುವ ವೇಳೆ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೀದರ್ ನಗರದ ವಿದ್ಯಾನಗರದಲ್ಲಿ ನಡೆದಿದೆ. ಆದರೆ ಕುಟುಂಬಸ್ಥರು ಇದು ಅಸಹಜ ಸಾವಲ್ಲ ಕೊಲೆ ಆಗಿದೆ ಎಂದು ಆರೋಪಿಸುತ್ತಿದ್ದಾರೆ. ಹೌದು ವಿದ್ಯಾನಗರದ ವಿದ್ಯಾನಂದ ಸ್ವಾಮಿ ಎಂಬುವವರ ಮನೆಗೆ ಬಣ್ಣ ಹಚ್ಚುವ ವೇಳೆ ದುರ್ಘಟನೆ ನಡೆದಿದ್ದು. ಮಂದಕನಳ್ಳಿ ಗ್ರಾಮದ ಇಮ್ಯಾನುವೆಲ್ (23) ಬಣ್ಣ ಹಚ್ಚುವ ವೇಳೆ ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ. ಗುತ್ತಿಗೆದಾರ, ಮನೆ ಮಾಲೀಕ, ಇಂಜನೀಯರ್‌ಗಳೆ ಸಾವಿಗೆ ಕಾರಣ ಎಂದು ಗ್ರಾಮಸ್ಥರ ಆಕ್ರೋಶ ವ್ತಕ್ತಪಡಿಸಿದ್ದಾರೆ. ಬ್ರಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಯುವಕನ ಶವದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಲ್ಲದೆಪ್ರಕರಣ ದಾಖಲಿಸಲು ಪೊಲೀಸರು ಹಿಂದೇಟು ಹಾಕಿದ್ದಾರೆ ಎಂದು ಗ್ರಾಮಸ್ಥರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಗಾಂಧಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು : ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 2015 ರಂದು ಮಾಜಿ ಮುಖ್ಯಮಂತ್ರಿಗೆ ನೀಡಲಾದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್‌ಐಟಿ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದಾರೆ. ಹೌದು ಪ್ರಕರಣದ ತನಿಖೆಯಲ್ಲಿ ಮಧ್ಯ ಪ್ರವೇಶ ಮತ್ತು ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌ಡಿ ಕುಮಾರಸ್ವಾಮಿ ಅವರಿಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಅಕ್ರಮ ಗಣಿಗಾರಿಕೆ ಪ್ರಕರಣಗಳ ತನಿಖೆ ನಡೆಸುತ್ತಿರುವ ಕರ್ನಾಟಕ ಲೋಕಾಯುಕ್ತದ ಎಸ್‌ಐಟಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ. ಪ್ರಕರಣದ ಎರಡನೇ ಆರೋಪಿಯಾಗಿರುವ ಕುಮಾರಸ್ವಾಮಿ, ಪ್ರಕರಣದ ಸಂಬಂಧಿಸಿದ ದಾಖಲೆಗಳನ್ನು ಅಕ್ರಮವಾಗಿ ಪಡೆದಿದ್ದಾರೆ ಎಂದು ಎಸ್‌ಐಟಿ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದೆ.ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಆರೋಪಿಗಳ ಪರ ವಕೀಲರಿಗೆ ಸೂಚಿಸಿದ ನ್ಯಾಯಾಲಯ ವಿಚಾರಣೆಯನ್ನು ಅಕ್ಟೋಬರ್ 25ಕ್ಕೆ ಮುಂದೂಡಿತು.
ಬೆಂಗಳೂರು : ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪಾನಿಪುರಿ ವ್ಯಾಪಾರಿಯನ್ನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಸರ್ವೇಶ್ ಎಂದು ಹೇಳಲಾಗುತ್ತಿದ್ದು, ಈ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಕೊಲೆಯಾದ ಸರ್ವೇಶ್, ವರ್ಷದ ಹಿಂದೆ ಪತ್ನಿ ಮತ್ತು ಮಗನ ಜೊತೆ ಬೆಂಗಳೂರಿಗೆ ಬಂದು ನೆಲೆಸಿದ್ದರು. ಕೋನಪ್ಪನ ಅಗ್ರಹಾರ ಪುರಸಭೆಯ ಬಳಿ ಪಾನಿಪುರಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆದ್ರೆ, ಕುಡಿತದ ಚಟದಿಂದ ಈತ ಬಲಿಯಾಗಿದ್ದಾನೆ. ಆರೋಪಿಗಳು ಪಾರ್ಕಿಂಗ್ ಟೈಲ್ಸ್ನಿಂದ ತಲೆಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಸರ್ವೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇನ್ನು ಸರ್ವೇಶ್ ನನ್ನು ಕೊಲೆಗೈದ ಆರೋಪಿಗಳನ್ನು ಜಾರ್ಖಂಡ್‌ನ ರಾಹುಲ್ ಕುಮಾರ್ (27), ಸಹದೇವ್ ತುರಿ (45) ಎಂದು ಹೇಳಲಾಗುತ್ತಿದೆ. ಸದ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.
ಬೆಂಗಳೂರು : ಬೆಂಗಳೂರು ನಗರದಲ್ಲಿ ಕಳೆದ ಹಲವು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಶಾಲಾ ಕಾಲೇಜುಗಳಿಗೆ ಹಾಗೂ ಅಂಗನವಾಡಿಗಳಿಗೆ ರಜೆ ನೀಡಲಾಗಿತ್ತು. ಆದರೆ ನಾಳೆ ಬೆಂಗಳೂರಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಹಾಗೂ ಅಂಗನವಾಡಿಗಳಿಗೆ ಯಾವುದೇ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಜಗದೀಶ್ ಅವರು, ಬೆಂಗಳೂರು ನಗರ ಜಿಲ್ಲೆಯ ಶಾಲಾ ಕಾಲೇಜು ಮತ್ತು ಅಂಗನವಾಡಿಗಳಿಗೆ ರಜೆ ಇಲ್ಲ. ಬೆಂಗಳೂರಿನಲ್ಲಿ ನಾಳೆ ವ್ಯಾಪಕ ಮಳೆ ಯಾಗುವ ಬಗ್ಗೆ ಮುನ್ಸೂಚನೆ ಇಲ್ಲ. ಹಾಗಾಗಿ ನಾಳೆ ಶಾಲಾ ಕಾಲೇಜು ಹಾಗು ಅಂಗನವಾಡಿಗಳಿಗೆ ರಜೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.














