Author: kannadanewsnow05

ಬೆಂಗಳೂರು : ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಹಣ ಹಂಚುವಂತೆ ತಾವು ಹೇಳಿದ್ದಾಗಿ ನಕಲಿ ಆಡಿಯೊವನ್ನು ಸೃಷ್ಟಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಇದರಿಂದ ನನ್ನ ಘನತೆಗೆ ಧಕ್ಕೆಯುಂಟಾಗುತ್ತಿದೆ ಎಂದು ಶಾಸಕ ಶಿವಲಿಂಗೇಗೌಡ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದಾರೆ. ಹೌದು ಸಾಮಾಜಿಕ ಜಾಲತಾಣದಲ್ಲಿ ನಕಲಿ ಆಡಿಯೊ ಹರಿ ಬಿಡುವ ಮೂಲಕ ತಮ್ಮ ಗೌರವಕ್ಕೆ ಚ್ಯುತಿ ಉಂಟು ಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ವಿಧಾನಸೌಧ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಚುನಾವಣೆ ನಡೆದು ಆರು ತಿಂಗಳು ಆಗಿದೆ. ಯಾವ ಉದ್ದೇಶದಿಂದ ನಕಲಿ ಆಡಿಯೊ ಜಾಲತಾಣದಲ್ಲಿ ಹರಿಬಿಡಲಾಗಿದೆ? ಯಾರು ಈ ಕೆಲಸ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ನಾನು ಮಾತನಾಡಿರುವುದೇ ಒಂದು. ಅದಕ್ಕೆ ಸಂಬಂಧವಿಲ್ಲದ ಮತ್ತೊಂದು ಆಡಿಯೊವನ್ನು ಸೇರಿಸಲಾಗಿದೆ. ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದೇನೆ ಎಂದಿದ್ದಾರೆ.

Read More

ಬೆಂಗಳೂರು : ಅಕ್ರಮ ಪಡಿತರ ಚೀಟಿಗಳನ್ನು ಗುರುತಿಸಿ ರದ್ದು ಮಾಡುವ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ದಿಟ್ಟ ಕ್ರಮ ಕೈಗೊಂಡಿದ್ದು, ರಾಜ್ಯದಲ್ಲಿ 13,87,639 ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಇಂದು ವಿಕಾಸಸೌಧದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 13,87,639 ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ ಆರು ತಿಂಗಳಿನಿಂದ ಪಡಿತರ ಪಡೆಯದ 2,75,667, ಆದಾಯ ತೆರಿಗೆ ಪಾವತಿ ಮಾಡುವ 98,485, ಆದಾಯ ಮಿತಿ ಹೆಚ್ಚಿರುವ 10,09,478 ಪಡಿತರ ಚೀಟಿಗಳು ಸೇರಿವೆ ಎಂದರು. 2023-24ನೆ ಸಾಲಿನಲ್ಲಿ ಹೊಸ ಪಡಿತರ ಚೀಟಿ ಕೋರಿ 2,95,986 ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಈ ಪೈಕಿ 2,30,549 ಅರ್ಹ ಅರ್ಜಿಗಳಿದ್ದವು. 1,48,533 ಹೊಸ ಪಡಿತರ ಚೀಟಿಗಳನ್ನು ವಿತರಣೆ ಮಾಡಿದ್ದೇವೆ. 65,437 ಅರ್ಜಿಗಳನ್ನು ತಿರಸ್ಕರಿಸಿದ್ದೇವೆ. 82,016 ವಿತರಣೆಗೆ ಬಾಕಿಯಿವೆ.…

Read More

ಚಿತ್ರದುರ್ಗ : ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ನಿರಂತರ ಮಳೆಯಿಂದ ಮನೆ ಗೋಡೆ ಕುಸಿದು ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಬ್ಯಾಡರಹಳ್ಳಿ ತಾಲೂಕಿನಲ್ಲಿ ನಡೆದಿದೆ. ಬ್ಯಾಡರಹಳ್ಳಿ ನಿವಾಸಿ ಮೀನಾಕ್ಷಮ್ಮ (63) ಮೃತಪಟ್ಟ ವೃದ್ಧೆ ಎಂದು ತಿಳಿದುಬಂದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಈ ಒಂದು ಅವಘಡ ನಡೆದಿದೆ. ಮನೆ ಗೋಡೆ ಕುಸಿದು ಮೀನಾಕ್ಷಮ್ಮ ಗಾಯಗೊಂಡಿದ್ದರು. ಕೂಡಲೇ ಅವರನ್ನ ಹಿರಿಯೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೀನಾಕ್ಷಮ್ಮ ಸಾವನಪ್ಪಿದ್ದಾರೆ ಎನ್ನಲಾಗಿದೆ. ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಇದೇ ಅಕ್ಟೋಬರ್ 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಈ ಒಂದು ಕಂಬಳಕ್ಕೆ ಅನುಮತಿ ನೀಡಬಾರದು ಎಂದು ಹೈಕೋರ್ಟಿಗೆ ಪೆಟಾ (People for the Ethical Treatment of Animals) ಅರ್ಜಿ ಸಲ್ಲಿಸಿದೆ ಎಂದು ತಿಳಿದುಬಂದಿದೆ. ಇಂದು ಪೆಟಾ ಪರವಾಗಿ ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ, ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುವಂತೆ ಕೋರಿದರು. ಈ ವೇಳೆ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್‌ ಅವರಿದ್ದ ವಿಭಾಗೀಯ ಪೀಠವು ಕೊನೆಯ ಹಂತದಲ್ಲಿ ಅರ್ಜಿ ವಿಚಾರಣೆಗೆ ಕೋರುತ್ತಿರುವುದೇಕೆ, ಇಷ್ಟು ವಿಳಂಬವೇಕೆ ಎಂದು ಪ್ರಶ್ನಿಸಿತು. ಇದಕ್ಕೆ ಅರ್ಜಿದಾರರ ಪರ ವಕೀಲರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಜುಲೈನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಅದಕ್ಕೆ ಇನ್ನು ವಿಚಾರಣೆ ನಿಗದಿಪಡಿಸಿಲ್ಲ.ಇದಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಹಲವಾರು ಕೋಣಗಳನ್ನು ಬೆಂಗಳೂರಿಗೆ ದೊಡ್ಡ ವಾಹನಗಳಲ್ಲಿ ಸಾಗಿಸಲಾಗುತ್ತಿದೆ ಎಂದರು. ಬಳಿಕ ಪೀಠ ಅರ್ಜಿ ವಿಚಾರಣೆಯನ್ನು ಮಂಗಳವಾರಕ್ಕೆ ನಿಗದಿಗೊಳಿಸಿತು.

Read More

ಬೆಂಗಳೂರು : ನಮ್ಮ ಸರ್ಕಾರ ಎಲ್ಲಾ ಸಮಾಜ ಹಾಗೂ ಎಲ್ಲಾ ಸಮುದಾಯದ ಪರ ನಿಲ್ಲುತ್ತದೆ. ಜನರಿಗೆ ಅನುಕೂಲವಾಗಲಿ ಎಂದು ಗ್ಯಾರಂಟಿ ಯೋಜನೆ ತಂದಿದೆ. ಚುನಾವಣೆಯ ವೇಳೆ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ನಾವು ರಾಜಕಾರಣ ಮಾಡುತ್ತಿರುವುದು ಭಾವನೆಯ ಮೇಲೆ ಅಲ್ಲ ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಟೌನ್ ಹಾಲ್ ನಲ್ಲಿ ಅರ್ಚಕರ ಬೃಹತ್ ಸಮಾವೇಶ ನಡೆಯುತ್ತಿದ್ದು ಈ ಒಂದು ಸಮಾವೇಶದಲ್ಲಿ ಮಾತನಾಡಿದ ಅವರು ಗೃಹ ಸಚಿವ ಜಿ ಪರಮೇಶ್ವರ್ ಅವರು ಗಣಪತಿಯನ್ನು ನೆನಪಿಸಿಕೊಂಡಿದ್ದಾರೆ. ಜೋರು ಮಳೆ ಬರುತ್ತಿದ್ದರು ಕೂಡ ಚಳ್ಳಕೆರೆಯಿಂದ ಓಡೋಡಿ ಬಂದೆ.ಈ ದೇಶಕ್ಕೆ ಆಸ್ತಿ ಅಂದರೆ ನಮ್ಮ ಸಂಸ್ಕೃತಿ. ದೇವರಿಗೆ ಪೂಜೆ ಸಲ್ಲಿಸುವ ಭಾಗ್ಯ ಅರ್ಚಕರಿಗೆ ಕೊಟ್ಟಿದ್ದಾನೆ ಎಂದು ಅರ್ಚಕರ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ನಾವು ಕಲ್ಲಿನಲ್ಲೇ ದೇವರನ್ನು ಕಾಣುತ್ತೇವೆ. ಪೂಜಿಸಲು ಜಾತಿ ಬೇಕಾಗಿಲ್ಲ. ಧರ್ಮದಲ್ಲಿ ಯಾರನ್ನು ಟೀಕಿಸಬಾರದು ಎಂದು ಹೇಳುತ್ತಾರೆ. ಮುಜರಾಯಿ ಇಲಾಖೆಯ ಸಚಿವರು ಅನೇಕ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಭೀಕರ ಅಪಘಾತ ಸಂಭವಿಸಿದ್ದು, ಸಂಬಂಧಿಕರ ಮದುವೆಗೆಂದು ತೆರಳುತ್ತಿದ್ದ ದಂಪತಿಗಳ ಬೈಕ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಪತ್ನಿ ಸಾವನ್ನಪ್ಪಿದ್ದು ಅದೃಷ್ಟವಶಾತ್ ಪತಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರ ಬಳಿ ನಡೆದಿದೆ. ಟಿವಿಎಸ್ ಪ್ಯಾಲೇಸ್ ನಲ್ಲಿ ಸಂಬಂಧಿಕರ ಸಮಾರಂಭಕ್ಕೆ ದಂಪತಿಗಳು ನಾಗವಾರದಿಂದ ಬೈಕ್ ನಲ್ಲಿ ಮುನಿರಾಜು ಹಾಗೂ ಪತ್ನಿ ಮಲ್ಲಿಕಾ ದಂಪತಿಗಳು ಆಗಮಿಸಿದ್ದರು. ಈ ವೇಳೆ ಬೈಕ್ ಗೆ ಹಿಂದಿನಿಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ನಿಂದ ಕೆಳಗೆ ಬಿದ್ದು ಚಕ್ರಕ್ಕೆ ಸಿಲುಕಿ ಮಲ್ಲಿಕಾ (56) ಸಾವನ್ನಪ್ಪಿದ್ದಾರೆ.ವೈದೇಹಿ ಆಸ್ಪತ್ರೆಗೆ ಮಲ್ಲಿಕಾ ಶವವನ್ನು ಪೊಲೀಸರು ಸ್ಥಳಾಂತರಿಸಿದ್ದಾರೆ. ಘಟನೆ ಕುರಿತಂತೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಲಬುರ್ಗಿ : ಡಿಸಿಎಂ ಡಿ.ಕೆ. ಶಿವಕುಮಾರ್ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನನಗಿಂತ ಮೊದಲೇ ಸುಪ್ರೀಂ ಕೋರ್ಟ್ ಗೆ ಹೋಗಬೇಕಿತ್ತು, ತಡ ಮಾಡಿದ್ದಾರೆ. ಮುಖ್ಯವಾಗಿ ನನಗೆ ಸುಪ್ರೀಂ ಕೋರ್ಟ್ ನಲ್ಲಿ ಟಾಪ್ ವಕೀಲರು ಸಿಗದಂತೆ ಮಾಡಿದ್ದು, ಟಾಪ್ 17 ವಕೀಲರನ್ನು ಡಿಕೆ ಶಿವಕುಮಾರ್ ಎಂಗೇಜ್ ಮಾಡಿ ಬಿಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು. ಇಂದು ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಬಿಐ ತಡ ಮಾಡಿದರೂ ನಾನು ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿ ಹೋರಾಡುತ್ತಿದ್ದು, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣ ಗೆದ್ದೇ ಗೆಲ್ಲುತ್ತೇನೆ ಎಂದು ಅವರು ತಿಳಿಸಿದರು.ಇನ್ನು ನೊಣವಿನಕೆರೆಯ ಸ್ವಾಮೀಜಿಗಳು ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡುತ್ತೇನೆ ಎಂಬ ಹೇಳಿಕೆಗೆ ಸ್ವಾಮಿಗಳು ದಕ್ಷಿಣೆ ಹೆಚ್ಚು ಕೊಟ್ಟವರ ಪರ ಹೇಳಿಕೆ ನೀಡುತ್ತಾರೆ ಎಂದು ಟಾಂಗ್ ನೀಡಿದರು. ಈ ಹಿಂದೆ ಕೆಲವು ಸಾಹಿತಿಗಳು ಪ್ರಶಸ್ತಿ ವಾಪಸ್ಸು ಕೊಡೋದು ಶುರುವಾಗಿತ್ತು. ಅದೇ ತೆರನಾಗಿ ಸಿಎಂ ಪತ್ನಿ ಹಾಗೂ ಎಐಸಿಸಿ…

Read More

ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯ ಪೈಕಿ ಚನ್ನಪಟ್ಟಣ ಕ್ಷೇತ್ರ ತೀವ್ರ ಕುತೂಹಲ ಮೂಡಿಸಿದೆ. ಇದುವರೆಗೂ ಕೂಡ ಮೈತ್ರಿ ಪಕ್ಷವಾಗಲಿ ಹಾಗೂ ಕಾಂಗ್ರೆಸ್ಸಾಗಲಿ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಿಲ್ಲ. ಅಲ್ಲದೆ ಬಿಜೆಪಿಯ ಸಿಪಿ ಯೋಗೇಶ್ವರ್ ಅವರು ಇಂದು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಳಿಕ ಬೆಂಗಳೂರಿನ ಪದ್ಮನಾಭ ನಗರದಲ್ಲಿ ದೇವೇಗೌಡರ ನಿವಾಸದಲ್ಲಿ ದಿಢೀರ್ ಸಭೆ ನಡೆಸಲಾಯಿತು. ಸಭೆಯ ಬಳಿಕ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಚನ್ನಪಟ್ಟಣ ಬೈ ಎಲೆಕ್ಷನ್ ನಲ್ಲಿ ನಾನು ಸ್ಪರ್ಧಿಸುತ್ತೇನೆ ಅಂತ ಹೇಳಿಲ್ಲ. ಸಾಧಕ ಭಾದಕ ನೋಡಿಕೊಂಡು ನಾವು ತೀರ್ಮಾನ ತೆಗೆದುಕೊಳ್ಳುತ್ತೇವೆ.ಯಾವುದೇ ರೀತಿಯ ತೀರ್ಮಾನ ತೆಗೆದುಕೊಳ್ಳಲು ಎಚ್ ಡಿ ಕುಮಾರಸ್ವಾಮಿಗೆ ಹೇಳಿದ್ದಾರೆ. ದೆಹಲಿಯ ಬಿಜೆಪಿ ನಾಯಕರು ಕುಮಾರಸ್ವಾಮಿಯವರಿಗೆ ಹೇಳಿದ್ದಾರೆ. ಮೈತ್ರಿಗೆ ಭಂಗವಾಗಬಾರದು ಅಂತ ನಾವು ಸುಮ್ಮನಿದ್ದೇವೆ ಎಂದರು. ನಮಗೆ ಸ್ವಾತಂತ್ರ್ಯ ಇದ್ದಾಗಿಯೂ ನಾವು ಅಭ್ಯರ್ಥಿ ಘೋಷಣೆ ಮಾಡಿಲ್ಲ. ರಾಷ್ಟ್ರೀಯ ನಾಯಕರಿಗೆ ಗೌರವ ಕೊಡಲು ನಾವು ಅಭ್ಯರ್ಥಿ ಘೋಷಣೆ ಮಾಡಿಲ್ಲ. ಒಬ್ಬ ವ್ಯಕ್ತಿಯ ನಡವಳಿಕೆ…

Read More

ಬೆಂಗಳೂರು : ಉಡುಪಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿ ಬೆಳೆಯುತ್ತಿದ್ದ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ರದ್ದು ಕೋರಿ ಶಿಲ್ಪಿ ಕೃಷ್ಣ ನಾಯಕ್ ಸಲ್ಲಿಸಿದ್ದ ಅರ್ಜಿಯನ್ನು ಇದಿಗ ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಮೆ ನಿರ್ಮಾಣದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಎಫ್ಐಆರ್ ದಾಖಲಿಸಲಾಗಿತ್ತು. ಕೃಷ್ಣಶೆಟ್ಟಿ ಎಂಬುವವರು ಕಾರ್ಕಳ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನರಿದ್ದ ಹೈಕೋರ್ಟ್ ಪೀಠವು ಎಫ್ಐರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಕಳೆದ ಬಿಜೆಪಿ ಸರಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿದ್ದ ಕಾರ್ಕಳ ಶಾಸಕ‌ ಸುನೀಲ್ ಕುಮಾರ್ ನೇತೃತ್ವದಲ್ಲಿ ಉಮ್ಮಿಕಲ್ ಬೆಟ್ಟದ ಮೇಲೆ ಪರಶುರಾಮನ ಥೀಂ ಪಾರ್ಕ್ ನಿರ್ಮಾಣವಾಗಿತ್ತು. ಚುನಾವಣಾ ಪೂರ್ವದಲ್ಲಿ ಅಂದಿನ ಮುಖ್ಯ ಮಂತ್ರಿ ಬಸವರಾಜ‌ ಬೊಮ್ಮಾಯಿ ನೂತನ ಥೀಂ ಪಾರ್ಕ್ ಮತ್ತು ಪರಶುರಾಮನ‌ ಭವ್ಯ ಮೂರ್ತಿ ಲೋಕಾರ್ಪಣೆ ಮಾಡಿದ್ದರು.…

Read More

ಬೆಂಗಳೂರು : ಇಂದು ಬಿಜೆಪಿಯ ಸಿಪಿ ಯೋಗೇಶ್ವರ್ ಅವರು ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಗೆ ಆಗಮಿಸಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ನೇತೃತ್ವದಲ್ಲಿ ದಿಢೀರ್ ಸಭೆ ನಡೆಯುತ್ತಿದೆ. ಹೌದು ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಸಿಪಿ ಯೋಗೇಶ್ವರ್ ಅವರು ತಮ್ಮ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೆ ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ದಿಢೀರ್ ಸಭೆ ನಡೆಯುತ್ತಿದೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಜೆಡಿಎಸ್ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಜೆಡಿಎಸ್ನಿಂದ ಸ್ಪರ್ಧೆಗೆ ನೀಡಿದ ಆಹ್ವಾನವನ್ನು ಸಿಪಿ ಯೋಗೇಶ್ವರ್ ತಿರಸ್ಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ನಿವಾಸದಲ್ಲಿ ದಿಢೀರ್ ಸಭೆ ನಡೆಯುತ್ತಿದೆ. ಹೆಚ್‍ಡಿ ಕುಮಾರಸ್ವಾಮಿ ಚನ್ನಪಟ್ಟಣ ಬೈ ಎಲೆಕ್ಷನ್ ಪ್ರತಿಷ್ಠೆಯಾಗಿ ಪರಿಗಣಿಸಿದ್ದಾರೆ. ಹಾಗಾಗಿ ಎಚ್ ಡಿ ದೇವೇಗೌಡ ನೇತೃತ್ವ…

Read More