Subscribe to Updates
Get the latest creative news from FooBar about art, design and business.
Author: kannadanewsnow05
ಚಿತ್ರದುರ್ಗ : ರೈತರ ಪಹಣಿ ಪ್ರತ್ಯೇಕ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಪಂಚಾಯತಿ ಗ್ರಾಮ ಲೆಕ್ಕಿಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ನಡೆದಿದೆ. ಹೌದು ಹಿರಿಯೂರು ಪಟ್ಟಣದಲ್ಲಿ ಗ್ರಾಮ ಲೆಕ್ಕೀಗ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲಗಲದ್ದಿ ಗ್ರಾಮ ಪಂಚಾಯಿತಿ ಗ್ರಾಮಲೆಕ್ಕಿಗ ನಾಗಪ್ಪ ಲಮಾಣಿ ರೇಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾನೆ ಎಂದು ತಿಳಿದುಬಂದಿದೆ. ಪಹಣಿ ಪ್ರತ್ಯೇಕ ಮಾಡಿಕೊಡಲು ಹಲಗಲದ್ದಿ ಗ್ರಾಮದ ತಿಪ್ಪೇಸ್ವಾಮಿ ಬಳಿ 9 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾನೆ. ಹಿರಿಯೂರು ತಾಲೂಕು ಕಚೇರಿ ಆವರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಲೋಕಾಯುಕ್ತ ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿದೆ.
ಧಾರವಾಡ : ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ಗಲಭೆ ನಡೆದಂತಹ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಉತ್ತರ ಪ್ರದೇಶದ ಮಾದರಿಯಲ್ಲಿ ಗಲಭೆ, ಗಲಾಟೆ ನಡೆಯದಂತೆ ಸೂಕ್ತವಾದಂತ ಬಂದೋಬಸ್ತ್ ಮಾಡಿ ಎಂದು ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈದ್ಗ ಮೈದಾನದಲ್ಲಿ ಗಣಪತಿ ಇಡಲು ಅವಕಾಶ ಕೊಟ್ಟರು.ಅದಕ್ಕೆ ಅವರಿಗೆ ಎಷ್ಟು ಗೌರವ ಸಿಕ್ಕಿತ್ತು ನೋಡಿ. ಸಮಾಜದಲ್ಲಿ ಕೆಲವರು ಬೆಂಕಿ ಹಚ್ಚುವವರು ಇರುತ್ತಾರೆ. ಗಲಾಟೆ ಮಾಡುವ ಉದ್ದೇಶವನ್ನೇ ಇಟ್ಟುಕೊಂಡಿದ್ದಾರೆ ಎಲ್ಲರೂ ಹೊಂದಿಕೊಂಡು ಹೋಗುವ ಕೆಲಸ ಮಾಡಬೇಕು ಎಂದು ತಿಳಿಸಿದರು. ಆದ್ದರಿಂದ ಉತ್ತರ ಪ್ರದೇಶದಂತೆ ಬಂದೋಬಸ್ತ್ ಮಾಡಿ.ಗಲಾಟೆ ಮಾಡಿದವರಿಗೆ ಶಿಕ್ಷೆ ಆಗುತ್ತದೆ ಎಂಬ ಗ್ಯಾರಂಟಿಯೇ ಇಲ್ಲ. 4-5 ದಿನ ಜೈಲಿನಲ್ಲಿದ್ದು ಹೊರ ಬರುತ್ತಾರೆ. ಇದು ತಪ್ಪಬೇಕು ಈ ಸಂಬಂಧ ನಾನು ಮುಖ್ಯಮಂತ್ರಿ ಅವರಿಗೆ ಪತ್ರ ಬರೆಯುತ್ತೇನೆ ಎಂದು ಧಾರವಾಡದಲ್ಲಿ ಸಭಾಪತಿ ಬಸವರಾಜ್ ಹೊರಟಿ ಹೇಳಿಕೆ ನೀಡಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಮೆಟ್ರೋ ನಿಲ್ದಾಣದಲ್ಲಿ ಸುರಕ್ಷಾತೆಗಾಗಿ ಎಷ್ಟೇ ಕಠಿಣವಾದಂತ ಕ್ರಮದ ಕೈಕೊಂಡರು ಸಹ ಆಗಾಗ ಅನಾಹುತಗಳು ಸಂಭವಿಸುತ್ತಲೆ ಇರುತ್ತವೆ. ಇದೀಗ ಬೆಂಗಳೂರಿನಲ್ಲಿ ಮೆಟ್ರೋ ಟ್ರ್ಯಾಕಿನ ಮೇಲೆ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹೌದು ಮೆಟ್ರೋ ಟ್ರ್ಯಾಕ್ ಮೇಲೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಮೆಟ್ರೋ ಟ್ರೈನ್ ಬರುತ್ತಿದ್ದಂತೆ ವ್ಯಕ್ತಿ ಟ್ರ್ಯಾಕ್ಗೆ ಹಾರಿದ್ದಾನೆ. ರೈಲು ಕ್ರಮಿಸಿದ್ದರು ಸಹ ಪ್ರಾಣಾಪಾಯದಿಂದ ವ್ಯಕ್ತಿ ಪಾರಾಗಿದ್ದಾನೆ 10 ಮೀಟರ್ ರೈಲು ಕ್ರಮಿಸಿದರು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ರೈಲು ಸಂಚಾರ ಬಂದ್ ಮಾಡಿ ವ್ಯಕ್ತಿನ ರಕ್ಷಿಸಿದ್ದಾರೆ. ಏಕಾಏಕಿ ಟ್ರ್ಯಾಕಿಗೆ ಹಾರಿದ ವ್ಯಕ್ತಿಯನ್ನು ಮೆಟ್ರೋ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.ಅದೃಷ್ಟವಶಾತ್ ಯಾವುದೇ ರೀತಿಯಾದಂತಹ ಪ್ರಾಣ ಅಪಾಯ ಸಂಭವಿಸಿಲ್ಲ. ಆತ್ಮಹತ್ಯೆಗೆ ಇನ್ನೂ ನಿಖರವಾದಂತಹ ಕಾರಣ ತಿಳಿದು ಬಂದಿಲ್ಲ. ಘಟನೆ ಕುರಿತಂತೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
BREAKING : ‘BPL’ ಕಾರ್ಡ್ ದಾರರಿಗೆ ಸಿಹಿಸುದ್ದಿ : ಇನ್ನುಮುಂದೆ ಹಣದ ಬದಲು ಅಕ್ಕಿ ವಿತರಣೆ : ಸಚಿವ ಕೆ.ಎಚ್ ಮುನಿಯಪ್ಪ
ಕಲಬುರ್ಗಿ : ಅನ್ನಭಾಗ್ಯ ಯೋಜನೆ ಅಡಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಇಷ್ಟು ದಿನ ರಾಜ್ಯ ಸರ್ಕಾರ 5 ಕೆ.ಜಿ ಅಕ್ಕಿ ಹಾಗೂ ಇನ್ನೂ 5 ಕೆಜಿ ಅಕ್ಕಿಯ ಬದಲು ಡಿಬಿಟಿ ಮೂಲಕ ಮನೆಯಲ್ಲಿ ಎಷ್ಟು ಸದಸ್ಯರು ಇರುತ್ತಾರೆ ಅಷ್ಟು ಮೊತ್ತದ ಹಣ ಸಂದಾಯ ಮಾಡುತ್ತಿತ್ತು. ಆದರೆ ಇದೀಗ ಕೇಂದ್ರ ಸರ್ಕಾರಕ್ಕೆ ನೀಡಲು ಒಪ್ಪಿಗೆ ಸೂಚಿಸಿದ್ದರಿಂದ ಇನ್ನು ಮುಂದೆ ಹಣದ ಬದಲಾಗಿ ಅಕ್ಕಿ ನೀಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು. ಕಲ್ಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯಕ್ಕೆ ಆಯ್ಕೆಕೊಡಲು ಇದೀಗ ಮುಂದಾಗಿದೆ. ಬಿಪಿಎಲ್ ಫಲಾನುಭವಿಗಳಿಗೆ ಆದಷ್ಟು ಬೇಗ ಅಕ್ಕಿ ನೀಡುತ್ತೇವೆ. ಇಷ್ಟು ದಿನ ಡಿಬಿಟಿ ಮೂಲಕ ಹಣ ಹಾಕಲಾಗುತ್ತಿತ್ತು. ಇದೀಗ ಹಣ ಹಾಕುವ ಬದಲು ಜನರಿಗೆ ಅಕ್ಕಿ ಕೊಡುತ್ತೇವೆ ಎಂದರು. ಬಡತನ ಗಿಂತ ಕೆಳಗಿರುವವರಿಗೆ ಮಾತ್ರ BPL ಕಾರ್ಡ್ ಮುಂದುವರಿಸುತ್ತೇವೆ. ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲು ಸೂಚಿಸಲಾಗಿದೆ. ಇನ್ನು ಹೊಸ ಬಿಪಿಎಲ್ ಕಾರ್ಡ್ ಗಾಗಿ ಸಾಕಷ್ಟು…
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಘೋರ ದುರಂತ ಒಂದು ನಡೆದಿದ್ದು, ವೃದ್ಧೆ ಒಬ್ಬರು ಕ್ಯಾನ್ಸರ್ ಇಂದ ಬಳಲುತ್ತಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದು, ತಾವು ಇದ್ದ ಅಪಾರ್ಟ್ಮೆಂಟ್ ನ 16ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ಇಂದ ಜಿಗಿದು ವೃದ್ಧೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಟ್ಟಡದ 16ನೇ ಮಹಡಿಯಿಂದ ಜಿಗಿದು ಜಯಲಕ್ಷ್ಮಮ್ಮ (68) ಆತ್ಮಹತ್ಯೆ ಮಾಡಿಕೊಂಡಿರುವ ವೃದ್ದೆ ಎಂದು ತಿಳಿದುಬಂದಿದೆ.ಕೆಲವು ವರ್ಷಗಳಿಂದ ಜಯಲಕ್ಷ್ಮಮ್ಮ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಪುತ್ರ, ಸೊಸೆ ಕೆಲಸಕ್ಕೆ ಹೋದ ವೇಳೆ ವೃದ್ಧಿಯ ಜಯಲಕ್ಷ್ಮಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಘಟನೆ ಕುರಿತಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಸದ್ಯ ಕನ್ನಡ ಚಿತ್ರರಂಗದಲ್ಲಿ ಮೀಟೂ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ, ಹಲವು ಬಾರಿ ಚರ್ಚೆಗಳು ನಡೆಯುತ್ತಿದ್ದು, ಕೇರಳ ಚಿತ್ರರಂಗದ ಹೇಮಾ ಸಮಿತಿ ಮಾದರಿಯಲ್ಲಿ ಕನ್ನಡ ಚಿತ್ರರಂಗದಲ್ಲೂ ಕೂಡ ಒಂದು ಸಮಿತಿ ರಚನೆ ಮಾಡುವಂತೆ ಕೆಲ ನಟ ನಟಿಯರು ಆಗ್ರಹಿಸಿದ್ದರು.ಇದರ ಬೆನ್ನಲ್ಲೇ ನಟ ಹಾಗೂ ನಿರ್ದೇಶಕ ಉಪೇಂದ್ರ ಅವರು ಕೂಡ ಚಿತ್ರರಂಗದಲ್ಲಿ ಗಂಡಸರಿಗೂ ಕೂಡ ಶೋಷಣೆ ಆಗಿದೆ ಎಂದು ಸ್ಪೋಟಕ ಹೇಳಿಕೆ ನೀಡಿದರು. ಮಾಧ್ಯಮದ ಸಂದರ್ಶನ ಒಂದರಲ್ಲಿ ಮಾತನಾಡಿದ ಅವರು, ಗಂಡಸರಿಗೂ ಕೂಡ ಶೋಷಣೆ ಆಗಿದೆ.ಒಂದು ವೇಳೆ ನಾನು ಹುಡುಗಿಯಾಗಿದ್ದರೆ ಗೊತ್ತಾಗಿರುವುದೇನೋ. ಇದಕ್ಕೆಲ್ಲ ಒಂದು ವೇದಿಕೆ ರೆಡಿ ಆಗಬೇಕು. ಅದು ಒಳ್ಳೆಯದು ಚಿತ್ರರಂಗದಲ್ಲಿ ಕೆಲವು ಸಣ್ಣ ಪುಟ್ಟ ಘಟನೆಗಳು ನಡೆಯುತ್ತವೆ ಎಂದರು. ನಮಗೂ ಶೋಷಣೆ ಆಗಿದೆ. ಕೆಲವರಿಗೆ ಚಿತ್ರರಂಗದಲ್ಲಿ ಸಣ್ಣಪುಟ್ಟ ಶೋಷಣೆ ಆಗಿದೆ. ಎಲ್ಲಾ ಸಿನೆಮಾ ಇಂಡಸ್ಟ್ರಿಯಲ್ಲೂ ಅದು ಇದ್ದಿದ್ದೆ. ಇದಕ್ಕೆ ಒಂದು ವೇದಿಕೆ ರೆಡಿ ಆಗಬೇಕು. ಇಂತಹ ವಿಷಯ ಬಂದಾಗ ಧ್ವನಿ ಎತ್ತಲು ದಾರಿಗಳು ಇರುವುದಿಲ್ಲ. ದಾರಿಗಳೇ ಇಲ್ಲದೆ ಇದ್ದಾಗ…
ವಿಜಯನಗರ : ಇತ್ತೀಚಿಗೆ ಬೀದಿ ನಾಯಿಗಳ ಕಾಟ ಹಾಗೂ ಹುಚ್ಚು ನಾಯಿಗಳ ದಾಳಿಯಿಂದ ತಮ್ಮ ಮಕ್ಕಳನ್ನು ರಕ್ಷಿಸುವುದೇ ಪೋಷಕರಿಗೆ ದೊಡ್ಡ ತಲೆ ನೋವಾಗಿದೆ. ಇದೀಗ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಧರ್ಮಸಾಗರ ಗ್ರಾಮದಲ್ಲಿ ನಾಲ್ವರು ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ ಮಾಡಿ ಕಚ್ಚಿ ಗಾಯಗೋಳಿಸಿರುವ ಘಟನೆ ನಡೆದಿದೆ. ಹೌದು ಹೊಸಪೇಟೆಯಲ್ಲಿ ನಾಲ್ವರು ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ ಮಾಡಿದೆ. ಹೊಸಪೇಟೆಯ ಧರ್ಮಸಾಗರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಮನೆಯ ಅಂಗಳದಲ್ಲಿ ಆಟ ಆಡುತ್ತಿದ್ದ ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ ಮಾಡಿದೆ. ಏಕಾಏಕಿ ದಾಳಿ ಮಾಡಿದ್ದರಿಂದ ಮಕ್ಕಳಿಗೆ ಗಂಭೀರವಾದ ಗಾಯಗಳಾಗಿದ್ದು, ಅದರಲ್ಲಿ 3 ವರ್ಷದ ಜನನಿ ಎಂಬ ಮಗುವಿಗೆ ಮುಖ, ಗಂಟಲಿಗೆ ಕಚ್ಚಿ ನಾಯಿ ಗಾಯಗೊಳಿಸಿದೆ.
ಬೆಂಗಳೂರು : ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೆ ಒಳಗಾಗಿ ಮೂರು ತಿಂಗಳು ಕಳೆದಿದೆ. ಈವರೆಗೆ ಅವರ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿಲ್ಲ. ಒಂದೊಮ್ಮೆ ಅರ್ಜಿ ಸಲ್ಲಿಕೆ ಆದರೂ ಜಾಮೀನು ಸಿಗೋದು ಅಷ್ಟು ಸುಲಭದಲ್ಲಿ ಇಲ್ಲ ಎಂಬ ಅಭಿಪ್ರಾಯ ಇದೆ. ಇದಕ್ಕೆ ಕಾರಣ ಅವರು ಮಾಡಿಕೊಳ್ಳುತ್ತಿರುವ ಎಡವಟ್ಟುಗಳು. ದರ್ಶನ್ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಪೊಲೀಸರಿಗೆ ದಿನಕ್ಕೊಂದು ಅಸ್ತ್ರ ಸಿಗುತ್ತಿದೆ. ಈ ಸಮಸ್ಯೆಗಳನ್ನು ಸ್ವತಃ ದರ್ಶನ್ ಅವರೇ ಸೃಷ್ಟಿಸಿಕೊಳ್ಳುತ್ತಿದ್ದಾರೆ. ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಗೆ ಆತನ ಪರ ವಕೀಲರು ಪತ್ರ ಬರೆದಿದ್ದು, ಯಾವುದೇ ರೀತಿಯಾದಂತಹ ಕಿರಿಕ್ ಮಾಡಿಕೊಳ್ಳಬೇಡಿ.ಪದೇಪದೇ ಕಿರಿಕ್ ಮಾಡಿಕೊಂಡರೆ ಜಾಮೀನಿಗೆ ತೊಂದರೆ ಆಗುತ್ತದೆ ಎಂದು ಜೈಲಿನಲ್ಲಿರುವ ನಟ ದರ್ಶನ್ಗೆ ವಕೀಲರು ಪತ್ರ ಬರೆದು ನೀತಿಪಾಠ ಹೇಳಿದ್ದಾರೆ. ಹೌದು ದರ್ಶನ್ ಇತ್ತೀಚಿಗೆ ಜೈಲು ಸೇರಿದರೂ ಒಂದಾದಮೇಲೆ ಒಂದರಂತೆ ವಿವಾದಗಳನ್ನು ಮಾಡಿಕೊಳ್ಳುತ್ತಲೇ ಇದ್ದಾರೆ. ಅವರು ಕೇಂದ್ರ ಕಾರಾಗೃಹದಲ್ಲಿ…
ಬೆಂಗಳೂರು : ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಬಾಕಿ ಉಳಿದ ಎರಡು ತಿಂಗಳ ಹಣ ಒಟ್ಟಿಗೆ ಖಾತೆಗೆ ಜಮೆಯಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಇನ್ನು ಯೋಜನೆ ಸ್ಥಗಿತವಾಗುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಂದಿಗೂ ಬಂದ್ ಆಗುವುದಿಲ್ಲ. 2 ತಿಂಗಳ ಬಾಕಿ ಹಣವನ್ನು ಶೀಘ್ರ ಒಮ್ಮೆಗೆ ಖಾತೆ ಜಮೆ ಮಾಡಲಾಗುವುದು. ಗೃಹಲಕ್ಷ್ಮಿ ಹಣ ನಿತ್ಯ, ಸತ್ಯ, ನಿರಂತರ. ಕಳೆರಡು ತಿಂಗಳಿಂದ ಬರದಿರುವ ಹಣ ಒಂದೇ ಬಾರಿ ಅಕೌಂಟ್‌ಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಮುಂದಿನ ತಿಂಗಳಿಂದ ಅಂಗನವಾಡಿಗಳಲ್ಲಿ ‘ಗಟ್ಟಿಬೆಲ್ಲ’ ವಿತರಣೆ ಪಾಲಕರು ನಿರಾಕರಿಸಿದ ಕಾರಣ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುವುದು ಎಂದು ಸಚಿವರು ಹೇಳಿದರು. ಒಂದೂವರೆ ವರ್ಷದ ಹಿಂದಿನಿಂದಲೇ ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲ…
ಬೆಂಗಳೂರು : ಗುತ್ತಿಗೆದಾರನಿಗೆ ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಆರೋಪದ ಅಡಿ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಇದೀಗ ಪೊಲೀಸರ ಕಸ್ಟಡಿಯಲ್ಲಿದ್ದು, ಇಂದು ಅವರಿಗೆ ದಿಡೀರನೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಆಡಿಯೋ ವೈರಲ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದ ಮುನಿರತ್ನಗೆ, ಕೆಲ ಗಂಟೆಗಳ ಹಿಂದೆಯೇ ಪೊಲೀಸರು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಚೆಕಪ್ ಮಾಡಿಸಿದ್ದರು.ಈ ವೇಳೆ ಅವರಿಗೆ ಅನಾರೋಗ್ಯವೆಂದು ಪೊಲೀಸರಿಗೆ ಆಸ್ಪತ್ರೆಯ ವೈದ್ಯರು ವರದಿ ನೀಡಿದ್ದರು. ಆಡಿಯೋ ವೈರಲ್ ಆದ ಬೆನ್ನಲ್ಲೇ ಮುನಿರತ್ನರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಬಳಿಕ ಜಡ್ಜ್ ಮುಂದೆ ಹಾಜರು ಪಡಿಸಿದ್ದಾಗ, ತಮಗೆ ಹೃದಯ ಸಂಬಂಧಿ, ಹರ್ನಿಯಾ, ಡಯಾಬಿಟಿಸ್ ಸಮಸ್ಯೆ ಇದೆ ಎಂದು ಹೇಳಿದ್ದರು. ಅದರಂತೆಯೇ ವೈದ್ಯಕೀಯ ತಪಾಸಣೆ ಮಾಡಿದ ಬಳಿಕ ಮುನಿರತ್ನಗೆ ಅನಾರೋಗ್ಯವಿದೆ ಎಂದು ವೈದ್ಯರು ರಿಪೋರ್ಟ್ ಕೊಟ್ಟಿದ್ದರು. ಇದರ ಬೆನ್ನಲ್ಲೇ ಗುತ್ತಿಗೆದಾರ ಚಲುವರಾಜು ಇಂದು ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದು, ನಾಳೆ…