Subscribe to Updates
Get the latest creative news from FooBar about art, design and business.
Author: kannadanewsnow05
ಹೊಸಪೇಟೆ : ಹಂಪಿ ಉತ್ಸವ ಉದ್ಘಾಟನಾ ಸಮಾರಂಭದ ವೇದಿಕೆ ಬಳಿ ನಿನ್ನೆ ರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪಟಾಕಿಯಿಂದ ಬೆಂಕಿ ಹೊತ್ತಿಕೊಂಡಿದ್ದು, ಯಾರಿಗೂ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಸಿಎಂ ಸಿದ್ದರಾಮಯ್ಯ ಅವರಿದ್ದ ಮುಖ್ಯ ವೇದಿಕೆಯ ಎದುರೇ ಬೆಂಕಿ ಹೊತ್ತಿಕೊಂಡಿದೆ. ಸಿಎಂ ಸಿದ್ದರಾಮಯ್ಯ ಪೂಜೆ ಸಲ್ಲಿಸುವ ವೇಳೆಯೇ ಕ್ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಥಳದಲ್ಲೇ ಇದ್ದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದು, ಉತ್ಸವದಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಬಂದ ಸಮಯದಲ್ಲಿ ಪಟಾಕಿ ಸಿಡಿಸಲಾಗಿದೆ. ಈ ವೇಳೆ ಬೆಂಕಿ ಕಿಡಿಗಳು ಹುಲ್ಲು ಹಾಗೂ ಸಮೀಪದ ವಸ್ತುಗಳಿಗೆ ತಗುಲಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ವೇದಿಕೆಯ ಸಮೀಪವೇ ಬೆಂಕಿ ಮತ್ತು ದಟ್ಟ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ನೆರೆದಿದ್ದ ಸಾವಿರಾರು ಪ್ರೇಕ್ಷಕರು ಹಾಗೂ ಗಣ್ಯರು ಆತಂಕಗೊಂಡಿದ್ದಾರೆ. ಆದರೆ, ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಸಕಾಲಕ್ಕೆ ಸಿಬ್ಬಂದಿ ಎಚ್ಚೆತ್ತಿದ್ದರಿಂದ ಸಂಭವಿಸಬಹುದಾದ ದೊಡ್ಡ…
ಬೆಂಗಳೂರು : ನ್ಯಾಯಾಲಯದ ಸೂಚನೆ ಹಿನ್ನೆಲೆಯಲ್ಲಿ ಹೃದಯ ಸಮಸ್ಯೆ ಕಾಣಿಸಿಕೊಂಡ ಸಂಬಂಧ ಭಾರತಿ ನಗರದ ರೌಡಿ ಶಿವಪ್ರಕಾಶ್ ಆಲಿಯಾಸ್ ಬಿಕ್ಷು ಶಿವ ಕೊಲೆ ಪ್ರಕರಣದ ಆರೋಪಿ, ಕೆ. ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಬೈರತಿ ಬಸವರಾಜು ಅವರನ್ನು ಶುಕ್ರವಾರ ನಗರದ ಜಯದೇವ ಹೃದ್ರೋಗ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಗುರುವಾರ ಸಂಜೆ ಬಂಧನಕ್ಕೊಳಗಾಗಿದ್ದ ಬೈರತಿ ಬಸವರಾಜುರನ್ನು ಸಿಐಡಿ ಅಧಿಕಾರಿಗಳು, ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಬಳಿಕ ಜನಪ್ರ ತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ಹಾಜರುಪಡಿಸಿದರು. ಆಗೆ ಬೌರಿಂಗ್ ಆಸ್ಪತ್ರೆ ವೈದ್ಯರ ವರದಿಯಲ್ಲಿ ಇಸಿಜಿಯಲ್ಲಿ ವ್ಯತ್ಯಾಸ ಉಲ್ಲೇಖವಾ ಗಿತ್ತು. ಈ ಸಂಗತಿಯನ್ನು ನ್ಯಾಯಾ ಲಯದ ಗಮನಕ್ಕೆ ತಂದು ಹೆಚ್ಚಿನ ಚಿಕಿತ್ಸೆಗೆ ಶಾಸಕರ ಪರ ವಕೀಲರು ಮನವಿ ಮಾಡಿದರು. ಈ ಮನವಿ ಪುರಸ್ಕರಿಸಿದ ನ್ಯಾಯಾಲಯ, ಆರೋಪಿ ಬಸವರಾಜು ಅವರಿಗೆ ಹೆಚ್ಚಿನ ಚಿಕಿತ್ಸೆ ಕೊಡಿಸಿ ಶನಿವಾರ ಗೃಹ ಕಚೇರಿಯಲ್ಲಿ ಹಾಜರುಪಡಿಸುವಂತೆ ಸಿಐಡಿ ಅಧಿಕಾರಿಗಳಿಗೆ ಸೂಚಿಸಿತು. ಅಂತೆಯೇ ರಾತ್ರಿ 7 ಗಂಟೆಗೆ ಸುಮಾರಿಗೆ ಜಯನಗ…
ಹಾವೇರಿ : ಹಾವೇರಿ ಜಿಲ್ಲೆಯ ಬ್ಯಾಡಗಿ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜ್ ಶಿವಣ್ಣನವರಿಗೆ ಲಘು ಹೃದಯಾಘಾತ ಆಗಿದೆ. ತಕ್ಷಣವೇ ಶಾಸಕ ಬಸವರಾಜ್ ಶಿವಣ್ಣ ಅವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಶಾಸಕರ ಆರೋಗ್ಯ ಸ್ಥಿರವಾಗಿರೋ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಿನ್ನೆ ಹಾವೇರಿಯಲ್ಲಿ ನಡೆದ ಕಾಂಗ್ರೆಸ್ ಸಾಧನ ಸಮಾವೇಶದಲ್ಲಿ ಭಾಗವಹಿಸಲು ಸಚಿವ ಶಿವಾನಂದ ಪಾಟೀಲ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಹಾಜರಾಗಿದ್ದರು. ಈ ಕಾರ್ಯಕ್ರಮದ ತಯಾರಿ ಹಾಗೂ ಭಾಗವಹಿಸುವ ಕಾರ್ಯದಲ್ಲಿ ಶಾಸಕ ಬಸವರಾಜ್ ಶಿವಣ್ಣ ಅವರು ದಿನಪೂರ್ತಿ ಬ್ಯುಸಿಯಾಗಿದ್ದರು. ಬೆಳಗ್ಗೆಯಿಂದಲೇ ಸ್ವಲ್ಪ ಸುಸ್ತು ಕಾಣಿಸಿಕೊಂಡಿದ್ದರೂ, ಕಾರ್ಯಕ್ರಮದ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು ಎನ್ನಲಾಗಿದೆ. ಮಧ್ಯಾಹ್ನದ ಹೊತ್ತಿಗೆ ಅಸ್ವಸ್ಥತೆ ಹೆಚ್ಚಾಗುತ್ತಿದ್ದಂತೆ ಕುಟುಂಬಸ್ಥರು ಹಾಗೂ ಪಕ್ಷದ ಕಾರ್ಯಕರ್ತರು ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಿದರು. ಪ್ರಾಥಮಿಕ ತಪಾಸಣೆಯಲ್ಲಿ ಹೃದಯ ಸಂಬಂಧಿತ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಹಾವೇರಿಯಿಂದ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.ಈ ವೇಳೆ 2 ಬ್ಲಾಕ್ ಕಂಡುಬಂದಿದ್ದು, 2 ಕಡೆ ಸ್ಟಂಟ್ ಅಳವಡಿಸಲಾಗಿದೆ…
ಬೆಂಗಳೂರು : ಕದ್ದ ಆಸ್ತಿಯನ್ನು ಹೊಂದಿರುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯು ಪೊಲೀಸರು ಕೇಳಿದಾಗ ಅದನ್ನು ಹಸ್ತಾಂತರ ಮಾಡಲು ವಿಳಂಬಗೊಳಿಸುವ ಅಥವಾ ನಿರಾಕರಿಸುವ ಯಾವುದೇ ಕಾನೂನುಬದ್ಧ ಹಕ್ಕನ್ನು ಹೊಂದಿರುವುದಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಅಲ್ಲದೆ, ಕದ್ದ ಆಸ್ತಿ ವಿಷಯದಲ್ಲಿ ಅದು ಚಿನ್ನದ ಸಾಲ ಕಂಪನಿಯಾಗಿದ್ದರೂ ಸಹ ಕದ್ದ ಆಸ್ತಿಯನ್ನು ಹೊಂದುವುದು ರಕ್ಷಾ ಕವಚವಾಗಿ ಬದಲಾಗುವುದಿಲ್ಲ. ಅಲ್ಲದೇ, ಬಡ್ಡಿ ಮತ್ತು ಭದ್ರತೆಯ ಕಾರಣ ನೀಡಿ ಕದ್ದ ವಸ್ತುಗಳನ್ನು ತನ್ನ ಬಳಿಯೇ ಇಟ್ಟುಕೊಳ್ಳುವುದಕ್ಕೆ ಅವಕಾಶವಿಲ್ಲ ಎಂದು ಆದೇಶಿಸಿದೆ. ಕೆಂಗೇರಿಯ ಕರೂರು ವೈಶ್ಯ ಬ್ಯಾಂಕ್ ಶಾಖೆಯಿಂದ ಕದ್ದ ಒಡವೆಗಳನ್ನು ಅಡವಿಟ್ಟುಕೊಂಡು ಸಾಲ ಮಂಜೂರು ಮಾಡಿದ್ದ ಆರೋಪದಲ್ಲಿ ಕದ್ದ ಒಡವೆಗಳನ್ನು ಒಪ್ಪಿಸುವಂತೆ ಕೆಂಗೇರಿ ಪೊಲೀಸರು ನೀಡಿದ್ದ ನೋಟಿಸ್ ಪ್ರಶ್ನಿಸಿ ಐಐಎಫ್ಎಲ್ ಫೈನಾನ್ಸ್ ಕಂಪನಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ. ಹಣಕಾಸುದಾರರ ಯಾವುದೇ ಭದ್ರತಾ ಹಿತಾಸಕ್ತಿ ಒಪ್ಪಂದದ ಪ್ರಕಾರ ಮಾನ್ಯವಾಗಿದ್ದರೂ ಸಹ ಕದ್ದ ಆಸ್ತಿಯ ನಿಜವಾದ ಮಾಲೀಕರ…
ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಇಂದು ಬೆಂಗಳೂರಿನ 42ನೇ ACJM ಕೋರ್ಟಿಗೆ ಹಾಜರುಪಡಿಸಿದರು. ವಿಚಾರಣೆ ಬಳಿಕ ಬೈರತಿ ಬಸವರಾಜ್ ಗೆ ಆಸ್ಪತ್ರೆ ಚಿಕಿತ್ಸೆಗೊಳಿಸುವಂತೆ ಸಿಐಡಿ ಗೆ ಕೋರ್ಟ್ ಸೂಚಿಸಿತು. ವಿಚಾರಣೆಯ ವೇಳೆ ಸಿಐಡಿ ಪೋಲೀಸರು ಭೈರತಿ ಬಸವರಾಜ್ ಅವರನ್ನು 14 ದಿನ ಕಸ್ಟಡಿಗೆ ನೀಡಬೇಕು ಎಂದು ಮನವಿ ಮಾಡಿದರು. ರಿಮ್ಯಾಂಡ್ ಅಪ್ಲಿಕೇಶನ್ ಅನ್ನು ಸಿಐಡಿ ಅಧಿಕಾರಿಗಳು ಸಲ್ಲಿಕೆ ಮಾಡಿದರು ಈ ವೇಳೆದಂತೆ ಮನವಿ ಮಾಡಿದರು. ಆದರೆ ಕೋರ್ಟ್ ಜಡ್ಜ್ ವಿಚಾರಣೆ ಬಳಿಕ ಬೈರತಿ ಬಸವರಾಜ್ ಅವರಿಗೆ ಆಸ್ಪತ್ರೆಯಲ್ಲಿ ಇಂದು ಚಿಕಿತ್ಸೆ ಕೊಡಿಸಿ ನಾಳೆ ನ್ಯಾಯಾಧೀಶರ ಮನೆಯಲ್ಲಿ ಹಾಜರುಪಡಿಸುವಂತೆ ಸಿಐಡಿ ಗೆ ಕೋರ್ಟ್ ಸೂಚನೆ ನೀಡಿದೆ. ಇದಕ್ಕೂ ಮುನ್ನ ಇದೇ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಲಯಾಳಿ ಅಜಿತ್ ನನ್ನು ಏಳು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿತ್ತು.
ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದಲ್ಲಿ ಇದೀಗ ಶಿಲಾಯುಗ ಕಾಲದ ಮತ್ತೊಂದು ಅಸ್ತಿಪಂಜರ ಪತ್ತೆಯಾಗಿದೆ. ಗ್ರಾಮದ ಗೌಡರ ಮೂಲೆ ಪ್ರದೇಶದಲ್ಲಿ ಮೂರನೇ ಅಸ್ತಿಪಂಜರ ಪತ್ತೆಯಾಗಿದೆ. ಮಡಿಕೆ ಹೊರ ತೆಗೆಯುವ ವೇಳೆ ಮೂರನೇ ಅಸ್ತಿಪಂಜರ ಪತ್ತೆಯಾಗಿದೆ. ಸಂಶೋಧಕರು ಉತ್ಖನ ಕಾರ್ಯವನ್ನು ಸ್ಥಗಿತಗೊಳಿಸಿದ್ದು, ಫೆಬ್ರವರಿ 12ರ ವರೆಗೆ ಮಾತ್ರ ಉತ್ಖನಕ್ಕೆ ಅನುಮತಿ ನೀಡಲಾಗಿತ್ತು. ಸದ್ಯ ಉತ್ಖನನ ಸ್ಥಳಕ್ಕೆ ಬಳ್ಳಾರಿಯ ಎಸ್ ಪಿ ಸುಮನ್ ಫನೇಕರ್ ಭೇಟಿ ನೀಡಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಕೂಡ ಬಳ್ಳಾರಿಯಲ್ಲಿ ಸಂಶೋಧಕರು ಉತ್ಖನನ ಮಾಡುವಾಗ ಶಿಲಾಯುಗದ ಮಾನವನ ಅಸ್ತಿಪಂಜರಗಳು ಪತ್ತೆಯಾಗಿದ್ದವು.ಇದೀಗ ಮೂರನೇ ಮಾನವನ ಅಸ್ತಿ ಪಂಜರ ಪತ್ತೆಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ.
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದ ಮತ್ತೋರ್ವ ಆರೋಪ A20 ಮಲಯಾಳಿ ಅಜಿತ್ ನನ್ನು ಫೆಬ್ರವರಿ 19 ರವರೆಗೆ CID ಕಸ್ಟಡಿಗೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಹೌದು ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ A20 ಆರೋಪಿ ಆಗಿರುವ ಅಜಿತ್ ಅಲಿಯಾಸ್ ಮಲಿಯಾಳಿ ಅಜಿತ್ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರ ಕ್ಷೇತ್ರದಲ್ಲಿ ರಿಯಲ್ ಎಸ್ಟೇಟ್ ಹಾಗೂ ಫೈನಾನ್ಸ್ ಇಟ್ಟುಕೊಂಡಿದ್ದ. ಭೈರತಿ ಬಸವರಾಜ್ ಪ್ರಕರಣದ ಎಲ್ಲರಿಗೂ ಫೈನಾನ್ಸಿಯರ್ ಆಗಿದ್ದ. ಅಜಿತ್ ಈ ಪ್ರಕರಣದಲ್ಲಿ ಜಾಗದ ಮೇಲೆ ಬಿಕ್ಲು ಶಿವ ಮತ್ತು ಜಗ್ಗ ನಡುವೆ ಗಲಾಟೆ ಆಗುತ್ತಿತ್ತು. ಫೈನಾನ್ಸ್ ಮಾಡಿ ಆ ಜಾಗವನ್ನು ಪಡೆದುಕೊಳ್ಳಬೇಕು ಅಂತ ಪ್ಲಾನ್ ಮಾಡಿದ್ದು ಈ ಮಲಿಯಾಳಿ ಅಜಿತ್. ಈತನನ್ನು ಅರೆಸ್ಟ್ ಮಾಡಲು ಪೊಲೀಸರು ಹರಸಾಹಸ ಪಟ್ಟಿದ್ದರು. ಏಕೆಂದರೆ ಈತನೊಬ್ಬ ವಕೀಲ ಕೂಡ ಆಗಿದ್ದ. ಇದೀಗ ಇಂದು ಅರೆಸ್ಟ್ ಮಾಡಿ ಬೌರಿಂಗ್ ಆಸ್ಪತ್ರೆಗೆ ಕರೆತಂದು ಮೆಡಿಕಲ್…
ಉಡುಪಿ : ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಗಂಭೀರವಾದ ಆರೋಪ ಮಾಡಿದ್ದು, ಇದರಲ್ಲಿ ನೇರವಾಗಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಾಗೂ ಸಚಿವ ಭೈರತಿ ಸುರೇಶ್ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು. ಇವರ ಹಸ್ತಕ್ಷೇಪದಿಂದ, ಜಿಲ್ಲೆಯ ಶಾಸಕರು, ಉಸ್ತುವಾರಿ ಸಚಿವರು, ಜಿಲ್ಲಾ ಮುಖಂಡರು ಸೇರಿದಂತೆ ಎಲ್ಲರೂ ರೋಸಿ ಹೋಗಿದ್ದಾರೆ. ಸಿಎಂ ಸಿದ್ದರಾಮಯ್ಯನವರು ರಾಜ್ಯದ ದೀರ್ಘಾವಧಿಯ ಸಿಎಂ ನಿಜ. ಆದರೆ ಅತಿ ಭ್ರಷ್ಟ ಮುಖ್ಯಮಂತ್ರಿ ಆಗಿ ನಿವೃತ್ತರಾಗುತ್ತಾರೆ. ಕಡು ಭ್ರಷ್ಟ ಎಂಬ ಹೆಸರು ತಂದುಕೊಳ್ಳಬೇಡಿ. ಪಕ್ಷದಲ್ಲಿ ಇದು ಸಿದ್ದರಾಮಯ್ಯವ ಅವರ ಕೊನೆಯ ಬಜೆಟ್ ಅಂತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ವೀಕ್ ಆಗಿದೆ ಎಂದು ಉಡುಪಿಯಲ್ಲಿ ಶಾಸಕ ಬಸನಗೌಡ ಪಾಟೀಲ ಹೇಳಿಕೆ ನೀಡಿದರು.
ಚಾಮರಾಜನಗರ : ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ 4ನೇ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಮೈಸೂರಿನಿಂದ ಕೆಎಸ್ಆರ್ಟಿಸಿ ಬಸ್ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುತ್ತಿತ್ತು. ಈ ವೇಳೆ ಎದುರಿಗೆ ಬಂದ ಖಾಸಗಿ ಬಸ್ ಬೆಟ್ಟದ 4ನೇ ತಿರುವಿನಲ್ಲಿ ಪರಸ್ಪರ ಮುಖಾಮುಖಿ ಡಿಕ್ಕಿ ಹೊಡೆದಿವೆ. ಈ ಒಂದು ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದಾವಣಗೆರೆ : ರಾಜ್ಯದ SC, ST ಯವರಿಗೆ ನಿವೇಶನ ಕೊಡುವ ಸ್ಕೀಮ್ಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಎಲ್ಲೆಲ್ಲಿ ಸರ್ಕಾರಿ ಜಾಗಗಳಿವೆ ಅವುಗಳನ್ನು ಗುರುತಿಸಿ ಅಭಿವೃದ್ಧಿ ಮಾಡಿ, ಸೈಟ್ ಕೊಡುವ ಕೆಲಸ ಮಾಡುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೋಳಿ ತಿಳಿಸಿದರು. ದಾವಣಗೆರೆಯಲ್ಲಿ ಮಾತನಾಡಿದ ಅವರು, ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಲಿದ್ದಾರೆ. ಈ ಬಾರಿ ಒಳ್ಳೆಯ ಬಜೆಟ್ ನಿರೀಕ್ಷೆ ಮಾಡಿದ್ದೇವೆ. ನಿಂದ ಇಡೀ ರಾಜ್ಯಕ್ಕೆ ಒಳ್ಳೆಯದಾಗಲಿದೆ. ಸಾಮಾನ್ಯವಾಗಿ ಬಜೆಟ್ನಲ್ಲಿ 10 ರಿಂದ 20 ಸಾವಿರ ಕೋಟಿಯಷ್ಟು ಪ್ರತಿ ವರ್ಷ ಹೆಚ್ಚಾಗುತ್ತದೆ. ಇದು ರಾಜ್ಯದ ಅಭಿವೃದ್ಧಿಗೆ ನೆರವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದರು.














