Subscribe to Updates
Get the latest creative news from FooBar about art, design and business.
Author: kannadanewsnow05
ಪ್ರತಿದಿನ 30 ಸೆಕೆಂಡುಗಳ ಕಾಲ ಈ ಚಿತ್ರವನ್ನು ವೀಕ್ಷಿಸಿ. ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಈಡೇರದ ಆಸೆಗಳು ಈಡೇರುತ್ತವೆ.
ಈಡೇರದ ಬಯಕೆಗಳನ್ನು ಪೂರೈಸುವ ಶಕ್ತಿ ಚಕ್ರ ನಿಮ್ಮ ಕನಸುಗಳನ್ನು ನನಸಾಗಿಸಲು ನೀವು ಬಯಸಿದರೆ, ನಿಮಗೆ ಮೊದಲನೆಯದು ನಂಬಿಕೆ. ನಾವು ದೃಢಸಂಕಲ್ಪ ಮತ್ತು ಆತ್ಮವಿಶ್ವಾಸವನ್ನು ಹೊಂದಿದ್ದರೆ ಮಾತ್ರ ನಮ್ಮ ಆಸೆಗಳು ಈಡೇರುತ್ತವೆ. ಕನಸುಗಳು ನಿಜವಾಗುತ್ತವೆ. ಯಾವ ಮನುಷ್ಯನೂ ಆಸೆಯಿಲ್ಲದೆ ಬದುಕಲಾರ. ನಿಮ್ಮ ಮನಸ್ಸಿನಲ್ಲಿ ಖಂಡಿತವಾಗಿಯೂ ಅಪೂರ್ಣವಾದದ್ದು ಇದೆ. ಉದಾಹರಣೆಗೆ, ನಾವು ಒಳ್ಳೆಯ ಉದ್ಯೋಗ ಪಡೆಯಬೇಕು, ಕೈತುಂಬಾ ಹಣ ಸಂಪಾದಿಸಬೇಕು, ಸಮಾಜದಲ್ಲಿ ನಾಲ್ಕು ಜನ ಗೌರವಿಸುವ ಉನ್ನತ ಸ್ಥಾನದಲ್ಲಿ ಬದುಕಬೇಕು. ಆ ಆಸೆಯನ್ನು ಈಡೇರಿಸಿಕೊಳ್ಳಲು ಸತತ ಪ್ರಯತ್ನ ಮಾಡಬೇಕು. ನಾವು ನಮ್ಮ ಮನಸ್ಸನ್ನು ಕೇಂದ್ರೀಕರಿಸಬೇಕು ಮತ್ತು ಪ್ರಗತಿಯತ್ತ ಮಾತ್ರ ಗಮನಹರಿಸಬೇಕು. ಇತರ ಅನಗತ್ಯ ವಿಷಯಗಳತ್ತ ಗಮನ ಹರಿಸಬಾರದು. ಅದಕ್ಕೊಂದು ಪುಟ್ಟ ಕಸರತ್ತು ಈ ಶಕ್ತಿ ಸರ್ಕಾರ್ ಕಸರತ್ತು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ…
ನವದೆಹಲಿ : ಹಾರ್ಮುಜ್ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್ ಮಾಡಬೇಕು ಎಂದು ಇರಾನ್‌ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಡುವು ನೀಡಿದ್ದಾರೆ. ಹೌದು ಡೊನಾಲ್ಡ್ ಟ್ರಂಪ್ ಇರಾನ್‌ಗೆ 48 ಗಂಟೆಗಳ ಗಡುವು ನೀಡಿದ್ದಾರೆ, ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ, ಇರಾನ್‌ನ ವಿದ್ಯುತ್ ಸ್ಥಾವರ ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಅಮೆರಿಕ-ಇಸ್ರೇಲ್ ದಾಳಿಯ ನಂತರ ಇರಾನ್ ಜಲಸಂಧಿಯನ್ನು ಮುಚ್ಚಿತ್ತು. ಇದು ಜಾಗತಿಕ ತೈಲ ಪೂರೈಕೆ, ಬೆಲೆ ಏರಿಕೆಗೆ ಕಾರಣವಾಗಿದೆ. ವಿಶ್ವದ ತೈಲ ಸಾಗಣೆಯ ಪ್ರಮುಖ ಮಾರ್ಗವಾಗಿರುವ ಈ ಜಲಸಂಧಿ ನಿರ್ಬಂಧವು ಹಲವು ದೇಶಗಳ ಆತಂಕಕ್ಕೆ ಕಾರಣವಾಗಿದೆ. ಫೆಬ್ರವರಿ 28 ರಂದು ಟೆಹ್ರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ನಡೆಸಿದ ನಂತರ, ಇರಾನ್ ವಿರುದ್ಧ ದಾಳಿಯಲ್ಲಿ ಭಾಗಿಯಾಗಿರುವ ದೇಶಗಳಿಗೆ, ಹೆಚ್ಚಿನ ಹಡಗು ಸಂಚಾರಕ್ಕಾಗಿ ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿತ್ತು. ಇನ್ನು ಟ್ರಂಪ್ ಅವರ ಎಚ್ಚರಿಕೆಗೆ ಪ್ರತಿಕ್ರಿಯಿಸಿರುವ ಇರಾನ್ ಸೇನೆಯು, ಈ ಪ್ರದೇಶದಲ್ಲಿ ಅಮೆರಿಕಕ್ಕೆ ಸೇರಿದ ಎಲ್ಲಾ ಇಂಧನ, ತಂತ್ರಜ್ಞಾನ ಮತ್ತು ಉಪ್ಪುನೀರಿನ ನಿರ್ಮೂಲನ ಮೂಲಸೌಕರ್ಯಗಳನ್ನು ಟಾರ್ಗೆಟ್…
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ರಿಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಲಕನ ಸಾವಿಗೆ ಕಾರಣರಾದ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹುಬ್ಬಳ್ಳಿ ವಿದ್ಯಾನಗರ ಠಾಣೆ ಪೋಲಿಸರಿಂದ ನಾಗರಾಜ್ ಎನ್ನುವ ವ್ಯಕ್ತಿಯನ್ನು ಬಂಧಿಸಲಾಗಿದೆ. ಅಪ್ರಾಪ್ತ ಮಗನ ಕೈಯಲ್ಲಿ ಕಾರು ಕೊಟ್ಟು ಇದೀಗ ನಾಗರಾಜ್ ಜೈಲು ಸೇರಿದ್ದಾನೆ. ಕಾರು ಮಾಲಿಕ ನಾಗರಾಜ್ ರಾಯ್ಕರ್ ಸೇರಿ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆಕ್ಷನ್ ರಿಲ್ಸ್ ವೇಳೆ 15 ವರ್ಷದ ನಮಿಷ ಸಂಗಳದ ಮೃತಪಟ್ಟಿದ್ದ. ಆಡಿ ಕಾರು ಡಿಕ್ಕಿಯಾಗಿ ಸ್ಕೂಟಿಯಲ್ಲಿ ಇದ್ದ ನಮಿಷ ಮೃತಪಟ್ಟಿದ್ದ. ಹುಬ್ಬಳ್ಳಿ ನಗರದ ಶೇಜವಾಡಕರ್ ಪ್ಲಾಟ್ ನಲ್ಲಿ ಈ ಒಂದು ಘಟನೆ ನಡೆದಿತ್ತು. ಉತ್ತರ ಪ್ರದೇಶದಲ್ಲಿ ನಾಗರಾಜ ರಾಯ್ಕರ್ ಈ ಒಂದು ಕಾರು ಖರೀದಿಸಿದ್ದ. ವಶಕ್ಕೆ ಪಡೆದಿದ್ದ ಬಾಲಕನನ್ನು ಬಾಲ ಮಂದಿರಕ್ಕೆ ಪೊಲೀಸರು ಕಳುಹಿಸಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು.
ಬಾಗಲಕೋಟೆ : ಏಪ್ರಿಲ್ 9 ರಂದು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಚುನಾವಣೆಗು ಮುನ್ನ ಜೆಡಿಎಸ್ ಗೆ ಬಿಗ್ ಶಾಕ್ ಎದುರಾಗಿದ್ದು ಡಾ. ದೇವರಾಜ್ ಪಾಟೀಲ್ ಜೆಡಿಎಸ್ ತೊರೆದು ಬಿಜೆಪಿ ಸೇರಲಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾತನಾಡಿದ ಅವರು ತನ್ನ ಬೆಂಬಲಿಗರ ಜೊತೆಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ. ಮೂಲ ಕಾಂಗ್ರೆಸ್ಸಿಗ ಆಗಿರುವ ಮಕ್ಕಳ ದೇವರಾಜ್ ಪಾಟೀಲ್ ಹಲವು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದೆ. 2013 ರಲ್ಲಿ ಟಿಕೆಟ್ ನೀಡುವುದಾಗಿ ಹೇಳಿ ಅನ್ಯಾಯ ಮಾಡಿದರು. 2018ರಲ್ಲೂ ಟಿಕೆಟ್ ಘೋಷಣೆ ಮಾಡಿದ್ದರು ಸಿದ್ದರಾಮಯ್ಯ ಸ್ಪರ್ಧಿಸಿದ್ದರಿಂದ ಕ್ಷೇತ್ರವನ್ನು ಬಿಟ್ಟು ಕೊಡಬೇಕಾಯಿತು. ಇನ್ನು 2023ರಲ್ಲಿ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡದೇ ಅನ್ಯಾಯ ಮಾಡಿದರು. ಕೊನೆಗೆ 2013ರ ಚುನಾವಣೆಯಲ್ಲಿ ಜೆಡಿಎಸ್ ಸೇರಿ ಸ್ಪರ್ಧೆ ಮಾಡಿದೆ. ಆದ್ದರಿಂದ ನನಗೆ ಗೌರವ ಸಿಗುವ ಪಕ್ಷ ಅಂತ ಬಿಜೆಪಿ ಸೇರುತ್ತಿದ್ದೇನೆ. ಬಾಗಲಕೋಟೆ ಬಿಜೆಪಿ ನಾಯಕರು ಸಮ್ಮುಖದಲ್ಲಿ ಪಕ್ಷ ಸೇರಲಿದ್ದೇನೆ ಎಂದು ಬಾಗಲಕೋಟೆಯಲ್ಲಿ ಡಾ. ದೇವರಾಜ್…
BREAKING : ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಮತ್ತೊಂದು ದೂರು : ಅತ್ಯಾಚಾರ ಆರೋಪ ಹಿನ್ನೆಲೆ ‘FIR’ ದಾಖಲು!
ದಕ್ಷಿಣಕನ್ನಡ : ಮೂಡಬಿದರೆ ಇನ್ಸ್ಪೆಕ್ಟರ್ ಸಂದೇಶನ ಮತ್ತೊಂದು ಕರ್ಮಕಾಂಡ ಬಯಲಾಗಿದ್ದು, ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೆಳತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ದೂರು ದಾಖಲಾಗಿದೆ. ಅತ್ಯಾಚಾರ ಆರೋಪದ ಅಡಿ ಪೊಲೀಸರು ಇದೀಗ ಸಂದೇಶ ವಿರುದ್ಧ FIR ದಾಖಲಾಗಿದ್ದು, ಸಂತ್ರಸ್ತೇ ಶಿಕ್ಷಕಿ ನೀಡಿದ ದೂರಿನ ಮೇರೆಗೆ fir ದಾಖಲಾಗಿದೆ. 2018 ರಿಂದ 2023ರ ವರೆಗೆ ಬೆದರಿಸಿ ಸಂದೇಶ ಅತ್ಯಾಚಾರ ಎಸೆಗಿದ್ದಾನೆ ಎಂದು ಸಂತ್ರಸ್ತ ಶಿಕ್ಷಕಿ ಆರೋಪಿಸಿದ್ದಾರೆ. ಶಿಕ್ಷಕಿ ಮನೆಗೆ ಹೋಗಿ ಅತ್ಯಾಚಾರ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆತನೇ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ.
ಬಾಗಲಕೋಟೆ : ಬಾಗಲಕೋಟೆ ಉಪಚುನಾವಣೆ ರಂಗೆರಿದ್ದು, ಇದೀಗ ನೀತಿ ಸಂಹಿತೆ ಉಲ್ಲಂಘನೆ ಮಾಡಿ, ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32 ಲಕ್ಷ ಹಣವನ್ನು ವಶಕ್ಕೆ ಪಡೆಯಲಾಗಿದೆ. ನೀತಿ ಸಂಹಿತೆ ಉಲ್ಲಂಘಿಸಿ ಕಾರಿನಲ್ಲಿ ದಾಖಲೆಯಿಲ್ಲದೆ ಹಣ ಸಾಗಿಸುತ್ತಿದ್ದರು. ಈ ವೇಳೆ ಸಿಬ್ಬಂದಿಗಳು 32,50,000 ಸಿಬ್ಬಂದಿಗಳು ಜಪ್ತಿ ಮಾಡಿಕೊಂಡಿದ್ದಾರೆ. ಹೊನ್ನಕಟ್ಟಿ ಚೆಕ್ಪೋಸ್ಟ್ ನಲ್ಲಿ ಹಣವನ್ನು ವಶಕ್ಕೆ ಪಡೆದುಕೊಂಡಿದ್ದು, ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ ದಾಖಲೆ ಇಲ್ಲದೆ ಹಣ ಸಾಗಿಸುತಿರುವುದು ಪತ್ತೆಯಾಗಿದೆ. KA-32, P-3991 ನಂಬರ್ ಕಾರ್ ನಲ್ಲಿ ಹಣ ಸಾಗಟ ಮಾಡುತ್ತಿದ್ದರು. ದಾಖಲೆ ಇಲ್ಲದೆ ಹಾಗೂ ಸೂಕ್ತವಾದ ಕಾರಣ ನೀಡದೆ ಹಿನ್ನಲೆ ಇದೀಗ ಹಣ ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಇಂದು ಮುಂಜಾನೆ ಈ ಒಂದು ಘಟನೆ ನಡೆದಿದೆ. ಮಾರಕಾಸ್ತ್ರಗಳಿಂದ ತಲೆಯ ಮೇಲೆ ಹಲ್ಲೆ ನಡೆಸಿ ಕಿರಣ್ (25) ಎನ್ನುವ ಯುವಕನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆಯಾದ ಕಿರಣ್ ಅಪರಾಧ ಪ್ರಕರಣಗಳ ಹಿನ್ನೆಲೆ ಹೊಂದಿದ್ದ ಎನ್ನಲಾಗಿದೆ. ಇಂದು ಮುಂಜಾನೆ ಕಿರಣನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ರಾಮಮೂರ್ತಿ ನಗರದ ಟಿಸಿ ಪಾಳ್ಯ ಮುಖ್ಯ ರಸ್ತೆಯಲ್ಲಿ ಈ ಒಂದು ಕೊಲೆ ನಡೆದಿದೆ.ಘಟನಾ ಸ್ಥಳಕ್ಕೆ ರಾಮಮೂರ್ತಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದು, ಪ್ರತ್ಯೇಕ ಅಪಘಾತದಲ್ಲಿ 6 ಜನ ಸಾವನಪ್ಪಿದ್ದಾರೆ. ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸಾವನಪ್ಪಿದ್ದಾರೆ. ಹೈವೇ ಯಿಂದ ಸರ್ವಿಸ್ ರಸ್ತೆಗೆ ಬರುತ್ತಿದ್ದ ಟಿಟಿ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಟಿಟಿ ವಾಹನದಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಬಳಿ ನಡೆದಿದೆ. ಮಧ್ಯರಾತ್ರಿ ಒಂದು ಭೀಕರ ಅಪಘಾತ ಸಂಭವಿಸಿದ್ದು ಹೈವೇಯಿಂದ ಸರ್ವಿಸ್ ರಸ್ತೆಗೆ ಬರುತ್ತಿದ್ದ ಟಿಟಿ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಟಿಟಿ ವಾಹನದಲ್ಲಿ ಇದ್ದಂತಹವರು ಮಹಿಳೆಯರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಮೃತರನ್ನು ಜಯಮ್ಮ (60) ಯಶೋದಮ್ಮ (60) ಹಾಗೂ ಗಂಗಾ (38) ಎಂದು ತಿಳಿದು ಬಂದಿದೆ. ಇನ್ನು ಅಪಘಾತದಲ್ಲಿ ಗಾಯಗೊಂಡ ಟಿಟಿ ವಾಹನ ಚಾಲಕ ಮತ್ತು ಉಳಿದ ಎಂಟು ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಮೃತರು ತುಮಕೂರು ಜಿಲ್ಲೆಯ ತಿಪಟೂರಿನ ನಿವಾಸಿಗಳು ಎಂದು ತಿಳಿದುಬಂದಿದೆ…
ನವದೆಹಲಿ: ಮೊಬೈಲ್‌ಫೋನ್‌ನಲ್ಲಿ ಚಿತ್ರೀಕರಿಸಿದ ವೀಡಿಯೊಗಳನ್ನು ಜನರು ಅಥವಾ ಪೊಲೀಸರು ತಕ್ಷಣ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡುವ ಪ್ರವೃತ್ತಿ ಬಗ್ಗೆ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಇಂಥ ಚಟುವಟಿಕೆಗಳು ನ್ಯಾಯಯುತ ವಿಚಾರಣೆಗೆ ಗಂಭೀರ ಬೆದರಿಕೆ ಉಂಟುಮಾಡುತ್ತವೆ ಎಂದು ಹೇಳಿದೆ. ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ಆರೋಪಿಗಳ ವಿಡಿಯೋ-ಫೋಟೋಗಳನ್ನು ಅಪ್‌ಲೋಡ್ ಮಾಡುವುದು ಜನರ ಮನಸ್ಸಿನಲ್ಲಿ ಕೆಟ್ಟ ಭಾವನೆಗಳನ್ನು ಸೃಷ್ಟಿಸಿದಂತಾಗುತ್ತದೆ ಎಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಸಿಜೆಐ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜೋಯ್ಯಲ್ಯ ಬಾಗಿ ಮತ್ತು ವಿಪುಲ್ ಎಂ. ಪಾಂಚೋಲಿ ಅವರ ಪೀಠ ನಡೆಸಿತು. ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಹೊಂದಿರುವ ಪ್ರತಿ ವ್ಯಕ್ತಿ ಮಾಧ್ಯಮದವರಾಗಿದ್ದಾರೆ. ಆರೋಪಿಗಳಿಗೆ ಕೈಕೋಳ ತೊಡಿಸುವುದು, ಮೆರವಣಿಗೆ ಮಾಡುವುದು, ಬಲವಂತವಾಗಿ ಮೊಣಕಾಲು ಊರಿ ಕೂರಿಸುವ ಚಿತ್ರಗಳನ್ನು ಪೊಲೀಸರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡುತ್ತಿರುವ ಇತ್ತೀಚಿನ ಪ್ರವೃತ್ತಿ ವ್ಯಕ್ತಿಯ ವೈಯಕ್ತಿಕ ಘನತೆಗೆ ಧಕ್ಕೆ ತರುವ ಜತೆಗೆ, ಸಾರ್ವಜನಿಕ ಪಕ್ಷಪಾತಕ್ಕೆ ಕಾರಣವಾಗುತ್ತದೆ ಎಂದು ವಕೀಲರು ವಾದಿಸಿದರು. ಪೊಲೀಸ್ ಇಲಾಖೆ ಮಾಧ್ಯಮಗಳಿಗೆ ನೀಡುವ ಮಾಹಿತಿ ಜವಾಬ್ದಾರಿಯುತ…
ಬೆಂಗಳೂರು : ರಾಜ್ಯದಲ್ಲಿ ವರಾಯ ಅಟ್ಟಹಾಸ ಮೆರೆದಿದ್ದು, ಪ್ರತ್ಯೇಕ ಅಪಘಾತದಲ್ಲಿ 6 ಜನ ಸಾವನಪ್ಪಿದ್ದಾರೆ. ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸಾವನಪ್ಪಿದ್ದಾರೆ. ಹೈವೇ ಯಿಂದ ಸರ್ವಿಸ್ ರಸ್ತೆಗೆ ಬರುತ್ತಿದ್ದ ಟಿಟಿ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಟಿಟಿ ವಾಹನದಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಬಳಿ ನಡೆದಿದೆ. ಮಧ್ಯರಾತ್ರಿ ಒಂದು ಭೀಕರ ಅಪಘಾತ ಸಂಭವಿಸಿದ್ದು ಹೈವೇಯಿಂದ ಸರ್ವಿಸ್ ರಸ್ತೆಗೆ ಬರುತ್ತಿದ್ದ ಟಿಟಿ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಟಿಟಿ ವಾಹನದಲ್ಲಿ ಇದ್ದಂತಹವರು ಮಹಿಳೆಯರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಮೃತರನ್ನು ಜಯಮ್ಮ (60) ಯಶೋದಮ್ಮ (60) ಹಾಗೂ ಗಂಗಾ (38) ಎಂದು ತಿಳಿದು ಬಂದಿದೆ. ಇನ್ನು ಅಪಘಾತದಲ್ಲಿ ಗಾಯಗೊಂಡ ಟಿಟಿ ವಾಹನ ಚಾಲಕ ಮತ್ತು ಉಳಿದ 8 ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಮತ್ತೊಂದು ಘಟನೆಯಲ್ಲಿ ಕ್ಯಾಂಟರ್ ಗೆ ಗೂಡ್ಸ್ ಡಿಕ್ಕಿಯಾಗಿ ಮೂರು ಸಾವನಪ್ಪಿದ್ದಾರೆ. ಬೆಂಗಳೂರಿನ ಮೆಡಹಳ್ಳಿ ಬಳಿ…














