Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ನಾಲ್ಕು ರೂಪಾಯಿ ಏರಿಕೆ ಮಾಡಿ ಸಂಪುಟದಲ್ಲಿ ಅನುಮೋದನೆ ದೊರೆಯಿತು. ಇದರ ಬೆನ್ನಲ್ಲೆ ಇದೀಗ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ವಿದ್ಯುತ್ ದರ ಏರಿಕೆ ಮಾಡಿ ಇಂದು ಸಂಜೆ ಕೆಇಆರ್‌ಸಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೌದು ನಂದಿನಿ ಹಾಲಿನ ದರ ಏರಿಕೆ ಬೆನ್ನೆಲೆ ವಿದ್ಯುತ್ ತರ ಏರಿಕೆ ಶಾಕ್ ಎದುರಾಗಿದ್ದು, ಸಂಜೆ 4:30ಕ್ಕೆ ವಿದ್ಯುತ್ ದರ ಏರಿಕೆಯ ಬಗ್ಗೆ ಅಧಿಕೃತ ಘೋಷಣೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮೂರು ವರ್ಷಗಳ ವಿದ್ಯುತ್ ದರ ಇಂದೇ ಘೋಷಣೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಪ್ರತಿ ಯುನಿಟ್ ಗೆ 36 ಪೈಸೆ ಹೆಚ್ಚಿಸಿ ಕೆಇಆರ್‌ಸಿ ದರ ಘೋಷಿಸಲಿದೆ. ದರ ಏರಿಕೆಗೆ ಎಸ್ಕಾಂಗಳಿಂದ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಇಂದು ಅಧಿಕೃತವಾಗಿ ವಿದ್ಯುತ್ ದರ ಕೆಇಆರ್‌ಸಿ ಘೋಷಣೆ ಮಾಡಲಿದೆ ಏಪ್ರಿಲ್ 1ರಿಂದ…
ಬೆಂಗಳೂರು : ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಸಿಲುಕಿದಂತಹ ನಟಿ ರನ್ಯಾ ರಾವ್ ಜಾಮೀನು ಅರ್ಜಿ ಇದೀಗ ವಜಾಗೊಂಡಿದೆ. ಬೆಂಗಳೂರಿನ 64ನೇ ಸಿಸಿಎಚ್ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿ ಈ ಕುರಿತು ಆದೇಶ ಹೊರಡಿಸಿದೆ. ಹೌದು ದುಬೈ ನಿಂದ ಅಕ್ರಮವಾಗಿ ಸುಮಾರು 14 ಕೋಟಿಗೂ ಅಧಿಕ ಅಕ್ರಮ ಚಿನ ಸಾಗಾಣಿ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಪ್ರಕರಣ ಸಂಬಂಧ ಅವರು ಜಾಮಿನ್ ಕೋರಿ ಅರ್ಜಿ ಸಲ್ಲಿಸಿದರು. ಇದೀಗ ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯವು ರನ್ಯಾ ರಾವ್ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
ಬೆಂಗಳೂರು : ಸದಾ ಒಂದಿಲ್ಲೊಂದು ಮಾತನಾಡಿ ವಿವಾದ ಮೈಮೇಲೆ ಎಳೆದುಕೊಳ್ಳುವ ರಕ್ಷಕ್, ಇತ್ತೀಚೆಗೆ ರಿಯಾಲಿಟಿ ಶೋ ಒಂದರಲ್ಲಿ ಭಾಗವಹಿಸಿದ್ದಾಗ ಚಾಮುಂಡೇಶ್ವರಿ ತಾಯಿ ಬಗ್ಗೆ ಆಡಿದ್ದ ಮಾತೊಂದು ವಿವಾದಕ್ಕೆ ಕಾರಣವಾಗಿತ್ತು. ದೇವರ ಬಗ್ಗೆ ರಕ್ಷಕ್ ಆಡಿದ್ದ ಮಾತಿನ ಬಗ್ಗೆ ಚಾಮುಂಡೇಶ್ವರಿ ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ರಕ್ಷಿತ್, ಚಾಮುಂಡಿತಾಯಿ ಭಕ್ತರಿಗೆ ಕ್ಷಮೆ ಕೋರಿದ್ದಾರೆ. ಹೌದು ಭರ್ಜರಿ ಬ್ಯಾಚುಲರ್ಸ್ ಸೀಸನ್ 2ರ ಸ್ಪರ್ಧಿಯಾಗಿರುವ ರಕ್ಷಕ್, ಯುವತಿಯನ್ನು ಇಂಪ್ರೆಸ್ ಮಾಡಲು ಡೈಲಾಗ್ ಹೇಳುತ್ತಾ, ಚಾಮುಂಡಿತಾಯಿಯ ಬಗ್ಗೆ ಆಕ್ಷೇಪಾರ್ಹವಾಗಿ ಮಾತನಾಡಿದ್ದರು. ಚಾಮುಂಡಿದೇವಿ ಜೀನ್ಸ್ ಹಾಕಿ ಗೋವಾ ಟ್ರಿಪ್ಗೆ ಹೋದಂತಿದೆ ಎಂದೆಲ್ಲ ಮಾತನಾಡಿದ್ದರು. ಇದು ಹಿಂದೂಪರ ಸಂಘಟನೆಗಳು, ಚಾಮುಂಡೇಶ್ವರಿ ದೇವಾಲಯ ಭಕ್ತರನ್ನು ಕೆರಳಿಸಿತ್ತು. ರಕ್ಷಕ್, ಡೈಲಾಗ್ಗೆ ನೆಟ್ಟಿಗರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ಸಾಮಾಜಿಕ ಜಾಲತಾಣದ ಮೂಲಕ ಚಾಮುಂಡೇಶ್ವರಿ ಭಕ್ತರಿಗೆ ಕ್ಷಮೆ ಕೇಳಿದ್ದಾರೆ ರಕ್ಷಕ್, ನಾನು ನಿಮ್ಮ ರಕ್ಷಕ್ ಬುಲೆಟ್, ಇತ್ತೀಚಿಗೆ ಒಂದು ರಿಯಾಲಿಟಿ ಶೋನಲ್ಲಿ ನಾನು ಒಂದು ಹೆಸರಾಂತ ಚಿತ್ರದ ಡೈಲಾಗನ್ನು ಒಂದು ಸ್ಕಿಟ್ ನಲ್ಲಿ ಹೇಳಿದ್ದೆ,…
ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೆ ಇಬ್ಬರು ಬಲಿಯಾಗಿದ್ದು, ಬಿಎಂಟಿಸಿ ಬಸ್ ಡಿಕ್ಕಿಯಾಗಿ, ರ‍್ಯಾಪಿಡೋ ಬೈಕ್ ಚಾಲಕ ಹಾಗು ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜೀವನ್ ಭೀಮಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಎಂಟಿಸಿ ಬಸ್ ಡಿಕ್ಕಿಯಾಗಿ ಸಾವನ್ನಪ್ಪಿದ ದ್ವಿಚಕ್ರ ವಾಹನ ಸವಾರರ ಪೈಕಿ ಓರ್ವನ ಗುರುತು ಪತ್ತೆಯಾಗಿದೆ. ಮೃತನನ್ನು ಅಸ್ಸಾಂನ ತಪಾಸ್ ದಾಲಿ (35) ಎಂದು ಪೊಲೀಸರು ಗುರುತಿಸಿದ್ದಾರೆ. ಘಟನೆಯಲ್ಲಿ ಮತ್ತೋರ್ವ ಸವಾರನ ಮೊಬೈಲ್ ಫೋನ್ ಸಂಪೂರ್ಣ ಹಾನಿಯಾಗಿದ್ದು, ಗುರುತು ಸಿಕ್ಕಿಲ್ಲ ಎಂದು ತಿಳಿದುಬಂದಿದೆ. ಬಿಎಂಟಿಸಿ ಬಸ್ ಚಾಲಕ ಮಹೇಶ್ ಎಂಬಾತನನ್ನು ಜೀವನ್ ಭೀಮಾ ನಗರ ಸಂಚಾರ ಠಾಣೆ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸಿ.ವಿ.ರಾಮನ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಬಿಗ್ ಶಾಕ್ ನೀಡಿದ್ದು, ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ಮತ್ತೆ 4 ರೂಪಾಯಿ ಏರಿಕೆ ಮಾಡಿ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿದೆ. ಹೌದು ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಏರಿಕೆ ಮಾಡಿ ಇದೀಗ ಸಂಪುಟ ಸಭೆಯಲ್ಲಿ ಇದೀಗ ಅನುಮೋದನೆ ದೊರಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರ 4 ರೂ ಏರಿಕೆಗೆ ಅನುಮೋದನೆ ದೊರಕಿದೆ. ಈಗಾಗಲೇ ರಾಜ್ಯ ಸರ್ಕಾರ ಕೆಎಸ್ಆರ್ಟಿಸಿ ಮತ್ತು ಬೆಂಗಳೂರಿನಲ್ಲಿ ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡಿ ರಾಜ್ಯದ ಜನತೆಯ ಕೆಂಗಣ್ಣಿಗೆ ಗುರಿಯಾಗಿತ್ತು. ಇದೀಗ ಮತ್ತೆ ನಂದಿನಿ ಹಾಲಿನ ದರ 4 ರೂ ಏರಿಕೆ ಮಾಡಿ ಜಜನರಿಗೆ ಗಾಯದ ಮೇಲೆ ಬರೆ ಎಳೆದಿದೆ.
ವಿಜಯಪುರ : ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನೀಡಿದ್ದ ಶೋಕಾಸ್ ನೋಟಿಸ್ ಗೆ ಉತ್ತರಿಸಿಲ್ಲ ಹಾಗು ಸ್ವಪಕ್ಷದ ನಾಯಕರ ವಿರುದ್ಧವೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ನಿನ್ನೆ ಬಿಜೆಪಿ ರಾಷ್ಟೀಯ ಶಿಸ್ತು ಸಮಿತಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶಿಸಿದೆ. ಯತ್ನಾಳ್ ಪಕ್ಷದಿಂದ ಉಚ್ಚಾಟನೆ ಆದ ಬೆನ್ನಲ್ಲೇ ವಿಜಯಪುರ ನಗರದಲ್ಲಿ ರಾಜೀನಾಮೆ ಪರ್ವ ಆರಂಭವಾಗಿದ್ದು, ನಿನ್ನೆ ಬಿಜೆಪಿಯ ಹಲವು ಮುಖಂಡರು ವಿವಿಧ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.ಅತ್ತ ಅವರನ್ನು ಉಚ್ಚಾಟನೆ ಮಾಡುತ್ತಿದ್ದಂತೆ ಇತ್ತ ಯತ್ನಾಳ್ರನ್ನು ಬೆಂಬಲಿಸಿ ನಿನ್ನೆ ರಾಜೀನಾಮೆ ನೀಡಿದ್ದ ಪದಾಧಿಕಾರಿ ಇಂದು ಅಪಘಾತದಲ್ಲಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.ಬಿಜೆಪಿ ನಗರ ಎಸ್ಟಿ ಮೋರ್ಚಾದ ಕಾರ್ಯದರ್ಶಿ ಸಂತೋಷ್ ತಟಗಾರ ಮೃತ ಪದಾಧಿಕಾರಿ. ಸಂತೋಪ್ ತಟಗಾರ ಪ್ರಯಾಣಿಸುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ.
ಬೆಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ DRI ಅಧಿಕಾರಿಗಳು ಪ್ರಮುಖ ಆರೋಪಿಯಾಗಿರುವ ನಟಿ ರನ್ಯಾ ರಾವ್ ಹಾಗೂ ಆಕೆಯ ಸ್ನೇಹಿತ ತರುಣ್ ರಾಜುನನ್ನು ಅರೆಸ್ಟ್ ಮಾಡಿದ್ದರು. ಇದೀಗ ಮತ್ತೊಂದು ಆರೋಪಿಯನ್ನು ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಹೀಗಾಗಿ ಬಂಧಿತರ ಸಂಖ್ಯೆ 3ಕ್ಕೆ ಏರಿದೆ. ಆರೋಪಿಯನ್ನು ಬಂಧಿಸಿ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನ್ಯಾಯಾಲಯವು ಆರೋಪಿಯನ್ನು ಮಾರ್ಚ್ 29ರ ವರೆಗೆ ಡಿಆರ್‌ಐ ಕಸ್ಟಡಿಗೆ ನೀಡಿ ಆದೇಶಿಸಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡಿಕೊಂಡು ಬಂದಿದ್ದ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಹಾಗೂ ತರುಣ್ ರಾಜು ಅವರನ್ನು ಡಿಆರ್‌ಐ ಅಧಿಕಾರಿಗಳು ಈ ಹಿಂದೆ ಬಂಧಿಸಿದ್ದರು. ಮತ್ತೊಬ್ಬ ಆರೋಪಿಯನ್ನು ಬಂಧಿಸುವ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಲ್ಲಿಸಿದ ಬಿ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ತಕರಾರು ಅರ್ಜಿ ಸಲ್ಲಿಸಿದ್ದರು. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ತಕರಾರು ಅರ್ಜಿ ವಿಚಾರಣೆ ಅಂತ್ಯವಾಗಿದ್ದು ಏಪ್ರಿಲ್ 3ಕ್ಕೆ ಆದೇಶ ಕಾಯ್ದಿರಿಸಿ ಕೋರ್ಟ್ ಅದೇಶಿಸಿದೆ. ಹೌದು ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆ ಅಂತ್ಯವಾಗಿದೆ. ಏಪ್ರಿಲ್ 3ಕ್ಕೆ ತಕರಾರು ಅರ್ಜಿಯ ಆದೇಶವನ್ನು ಕಾಯ್ದಿರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಏಪ್ರಿಲ್ 3 ರಂದೇ ತೀರ್ಪು ಪ್ರಕಟಿಸಲಿದೆ.
ಬೆಳಗಾವಿ : ಕಳೆದ ವರ್ಷ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಕಂಬಕ್ಕೆ ಕಟ್ಟಿಹಾಕಿ ಬಟ್ಟೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಘಟನೆ ಇಡೀ ದೇಶದಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಬೆಳಗಾವಿಯಲ್ಲಿ ಮತ್ತೊಂದು ಘಟನೆ ನಡೆದಿದ್ದು ಅಳಿಯನೊಬ್ಬ ರಸ್ತೆಯಲ್ಲೇ ಅತ್ತೆಯ ಬಟ್ಟೆ ಹರಿದು, ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.ಅಳಿಯ ಭೈರು ಮೇತ್ರಿ ಹಾಗೂ ಕುಟುಂಬಸ್ಥರು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಹೌದು ಪಾಪಿ ಅಳಿಯನೊಬ್ಬ ಕ್ಷುಲ್ಲಕ ಕಾರಣಕ್ಕೆ ಅತ್ತೆಯ ಬಟ್ಟೆ ಹರಿದು, ಬೆತ್ತಲೆಗೊಳಿಸಿ ರಸ್ತೆಯಲ್ಲಢ ಸಾರ್ವಜನಿಕವಾಗಿ ಹಲ್ಲೆಗೈದ ಘಟನೆ ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ನಡೆದಿದೆ. 12 ದಿನಗಳ ಹಿಂದೆಯಷ್ಟೇ ಮಹಿಳೆಯ ಮಗಳಿಗೆ ಹೆರಿಗೆಯಾಗಿತ್ತು. ಆದರೆ ಪತ್ನಿಯನ್ನು ಮನೆಗೆ ಕಳುಹಿಸಿಕೊಡುವಂತೆ ಪತಿ ಒತ್ತಾಯಿಸಿದ್ದಾನೆ. ಈ ವೇಳೆ ಅತ್ತೆ, 4 ತಿಂಗಳ ಬಳಿಕ ಕಳುಹಿಸ್ತೇವೆ ಎಂದು ಹೇಳಿದ್ದಾರೆ. ಹಲ್ಲೆಗೊಳಗಾದ ಮಹಿಳೆ ಹರಿದ ನೈಟಿಯಲ್ಲೇ ಮಹಿಳೆ ಕಮಿಷನರ್ ಕಚೇರಿಗೆ ತೆರಳಿ ದೂರು ನೀಡಿದ್ದಾರೆ. ದೂರಿನಲ್ಲಿ, ನನ್ನ ಅಳಿಯ ಹಾಗೂ ಆತನ ಕುಟುಂಬಸ್ಥರು ನನ್ನ…
ನವದೆಹಲಿ : ದೇಶಾದ್ಯಂತ ಹಲವಾರು ಬಳಕೆದಾರರಿಗೆ ಅಪ್ಲಿಕೇಶನ್‌ಗಳಾದ್ಯಂತ ಏಕೀಕೃತ ಪಾವತಿ ಇಂಟರ್ಫೇಸ್ (UPI) ಸೇವೆಗಳು ಸ್ಥಗಿತಗೊಂಡಿವೆ. ಡೌನ್‌ಡೆಕ್ಟರ್ ಪ್ರಕಾರ, ಸಂಜೆ 7:50 ರ ಹೊತ್ತಿಗೆ UPI ಸ್ನ್ಯಾಗ್‌ಗೆ ಸಂಬಂಧಿಸಿದಂತೆ 2,750 ದೂರುಗಳು ಬಂದಿವೆ. ವೆಬ್‌ಸೈಟ್ ಪ್ರಕಾರ Google Pay ಬಳಕೆದಾರರಿಂದ 296 ದೂರುಗಳು ಬಂದಿವೆ.ಅದೇ ರೀತಿ, Paytm ಅಪ್ಲಿಕೇಶನ್‌ಗೆ ಸಂಬಂಧಿಸಿದಂತೆ 119 ದೂರುಗಳು ಬಂದಿದ್ದರೆ, 376 ಬಳಕೆದಾರರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ಲಾಟ್‌ಫಾರ್ಮ್‌ನಲ್ಲಿನ ಸ್ಥಗಿತದ ಬಗ್ಗೆ ದೂರು ನೀಡಿದ್ದಾರೆ. ಹೆಚ್ಚಿನ SBI ಬಳಕೆದಾರರು ಹಣ ವರ್ಗಾವಣೆ ಮತ್ತು ಆನ್‌ಲೈನ್ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರುವ ಬಗ್ಗೆ ದೂರು ನೀಡಿದ್ದಾರೆ. “ನನ್ನ ಜೀವನದಲ್ಲಿ ಮೊದಲ ಬಾರಿಗೆ ನಾನು UPI ಡೌನ್‌ಟೈಮ್ ಅನ್ನು ಅನುಭವಿಸಿದ್ದೇನೆ. ಬ್ಯಾಂಕ್‌ಗಳು ಅಥವಾ ಗೇಟ್‌ವೇಗಳಲ್ಲ, ಆದರೆ @UPI_NPCI ಸ್ವತಃ btw, ಅಪ್‌ಟೈಮ್ ಫೆಬ್ರವರಿಯಲ್ಲಿ 100% ಆಗಿತ್ತು” ಎಂದು X ಬಳಕೆದಾರರು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು X ನಲ್ಲಿ ಪೋಸ್ಟ್ ಮಾಡಿದ್ದಾರೆ, “ಇದು…














