Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯ ಬಿಜೆಪಿ ಪಾಳಯದಲ್ಲಿ ಬಹುದೊಡ್ಡ ಬೆಳವಣಿಗೆ ಆಗಿದ್ದು, ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳರನ್ನು ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿ ಆದೇಶಿಸಿದೆ. ಇದೇ ವಿಚಾರವಾಗಿ ಟ್ವೀಟ್ ಮೂಲಕ ಕಾಂಗ್ರೆಸ್ ಯತ್ನಾಳ್ ಉಚ್ಚಾಟನೆಯನ್ನು ವ್ಯಂಗ್ಯವಾಡಿದೆ. ಟ್ವೀಟ್ ನಲ್ಲಿ ಈಗ ‘ಸಂತೋಷ’ ವಾಯಿತೇ? ಆ ಜೀ ಈ ಜೀ ಗಳ ಮಾತುಕೇಳಿ ರಾಜಕೀಯ ಜೀವನ ಹಾಳು ಮಾಡಿಕೊಂಡ ಯತ್ನಾಳ್ ಎಂದು ಉಚ್ಚಾಟನೆ ಕುರಿತು ಕಾಂಗ್ರೆಸ್ ವ್ಯಂಗ್ಯವಾಡಿದೆ. ಭ್ರಷ್ಟ ಅಪ್ಪ ಮಕ್ಕಳ ಸೂಟ್ ಕೇಸ್ ರಾಜಕೀಯಕ್ಕೆ ಬಗ್ಗಿದ ಬಿಜೆಪಿ ಹೈಕಮಾಂಡ್, ನಾಗಪುರದ ಬಿಜೆಪಿಯನ್ನು ಸೋಲಿಸಿದ ಕರ್ನಾಟಕ ಬಿಜೆಪಿ, ಇಂದು ಇಲಿಯಾದ ಯತ್ನಾಳ್ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. https://twitter.com/INCKarnataka/status/1904889346333040896?t=GFb0l9JyufMeG47941-Jqw&s=19
ಬೆಂಗಳೂರು : ಸೈಬರ್ ಕ್ರೈಂ ಪ್ರಕರಣದ ತನಿಖೆ ಕೈಗೊಳ್ಳಲು ಇಬ್ಬರು ಪೊಲೀಸ್ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಮಧುಸೂದನ್ ಬಿ.ಎಸ್. ಎಂಬವರ ಕಂಪನಿಯ ವೆಬ್‌ಸೈಟ್ ಹ್ಯಾಕ್ ಮಾಡಿ, ಆರ್ಥಿಕ ನಷ್ಟವುಂಟು ಮಾಡಲಾಗಿತ್ತು. ಕೆಲಸದಿಂದ ತೆಗೆದು ಹಾಕಿದ ಸಿಟ್ಟಿಗೆ ಕಂಪನಿಯ ಮಾಜಿ ಉದ್ಯೋಗಿಯೊಬ್ಬನಿಂದ ಕೃತ್ಯ ನಡೆದಿದೆ ಎಂದು ಅನುಮಾನ ವ್ಯಕ್ತಪಡಿಸಿ, ಈಶಾನ್ಯ ವಿಭಾಗದ ಸಿಇಎನ್ ಠಾಣೆಗೆ ಮಧುಸೂಧನ್ ದೂರು ನೀಡಿದ್ದರು. ಆದರೆ ಅನುಮಾನಿತ ಆರೋಪಿಯನ್ನು ವಿಚಾರಣೆ ನಡೆಸಿ ಪ್ರಕರಣದ ತನಿಖೆ ಕೈಗೊಳ್ಳಲು ಪ್ರತಿಯಾಗಿ 4 ಲಕ್ಷ ರೂ. ಲಂಚಕ್ಕೆ ಆರೋಪಿಗಳು ಬೇಡಿಕೆಯಿಟ್ಟಿದ್ದಾರೆ ಎಂದು ಲೋಕಾಯುಕ್ತ ಪೊಲೀಸರಿಗೆ ಮಧುಸೂದನ್ ದೂರು ನೀಡಿದ್ದರು.ಇ ಹಿನ್ನೆಲೆ 2 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಬೆಂಗಳೂರು ಈಶಾನ್ಯ ವಿಭಾಗದ ಸಿಇಎನ್ ಠಾಣೆಯ ಎಸಿಪಿ ತನ್ವೀರ್ ಎಸ್. ಆರ್. ಹಾಗೂ ಎಎಸ್ಐ ಕೃಷ್ಣಮೂರ್ತಿ ಅವರನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ವಿಜಯಪುರ : ಸ್ವಪಕ್ಷದ ನಾಯಕರ ವಿರುದ್ಧವೇ ಇಲ್ಲಸಲ್ಲದ ಆರೋಪ ಮಾಡಿದ್ದು ಅಲ್ಲದೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನೀಡಿರುವ ನೋಟಿಸ್ ಗೂ ಉತ್ತರಿಸದ ಹಿನ್ನೆಲೆಯಲ್ಲಿ ಇದೀಗ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿ ಆದೇಶಿಸಿದೆ. ಶಾಸಕ ಯತ್ನಾಳರನ್ನು ಹುಚ್ಚಾಟಿಸಿದ ಬೆನ್ನಲ್ಲೇ ಇದೀಗ ಅವರ ಬೆಂಬಲಿಗರ ರಾಜೀನಾಮೆ ಪರ್ವ ಆರಂಭವಾಗಿದ್ದು, ವಿಜಯಪುರ ಬಿಜೆಪಿ ನಗರ ಮೋರ್ಚಾ ಉಪಾಧ್ಯಕ್ಷ ರಾಜೀನಾಮೆ ನೀಡಿದ್ದಾರೆ. ಹೌದು ಬಿಜೆಪಿ ನಗರ ಓಬಿಸಿ ಮೋರ್ಚ ಉಪಾಧ್ಯಕ್ಷ ರಾಜೀನಾಮೆ ಸಲ್ಲಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಭೀಮು ಮಾಶಾಳ ಇದೀಗ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ನಗರ ಮಂಡಲ ಅಧ್ಯಕ್ಷ ಹೂಗಾರ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ವಾಟ್ಸಪ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದು, ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ಬೆಂಬಲಿಗರ ರಾಜೀನಾಮೆ ಪರ್ವ ಆರಂಭವಾಗಿದೆ. ಬಿಜೆಪಿ ವಿಜಯಪುರ ನಗರ ಓಬಿಸಿ ಮೂರ್ಛೆ ಉಪಾಧ್ಯಕ್ಷ ಭೀಮು ಮಾಶಾಳ ರಾಜೀನಾಮೆ ಸಲ್ಲಿಸಿದ್ದಾರೆ.
ಬೆಂಗಳೂರು : ಸ್ವಪಕ್ಷ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ್ದು ಅಲ್ಲದೆ, ಕಳೆದ ಫೆಬ್ರವರಿ 10ರಂದು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನೋಟಿಸ್ ಗೆ ಉತ್ತರಿಸದ ಹಿನ್ನೆಲೆಯಲ್ಲಿ ಇದೀಗ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ರನ್ನು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ. ಈ ವಿಚಾರವಾಗಿ ಶಾಸಕ ಯತ್ನಾಳ್ ಸತ್ಯವಂತರಿಗಿದು ಕಾಲವಲ್ಲ ದುಷ್ಟ ಜನರಿಗೆ ಸುಭಿಕ್ಷ ಕಾಲ ಎಂದು ಟ್ವೀಟ್ ಮಾಡಿದ್ದಾರೆ. ವಂಶಪಾರಂಪರ್ಯ ರಾಜಕೀಯ, ಭ್ರಷ್ಟಾಚಾರ, ಪಕ್ಷದೊಳಗಿನ ಸುಧಾರಣೆಗಳ ವಿರುದ್ಧ ಮಾತನಾಡಿದ್ದಕ್ಕಾಗಿ, ಏಕವ್ಯಕ್ತಿ ದಬ್ಬಾಳಿಕೆಯನ್ನು ತೆಗೆದುಹಾಕಿ ಮತ್ತು ಉತ್ತರ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ವಿನಂತಿಸಿದ್ದಕ್ಕಾಗಿ ಪಕ್ಷವು ನನ್ನನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಿದೆ.’ಸ್ಪೇಡ್ ಅನ್ನು ಕರೆಯುವುದು, ಸ್ಪೇಡ್ ಅನ್ನು ಕರೆಯುವುದು’ ಎಂಬುದಕ್ಕೆ ಪಕ್ಷವು ನನಗೆ ಪ್ರತಿಫಲ ನೀಡಿದೆ. ಕೆಲವು ಸ್ಥಾಪಿತ ಹಿತಾಸಕ್ತಿಗಳು ತಮ್ಮ ಕಾರ್ಯಸೂಚಿಯನ್ನು ಯಶಸ್ವಿಯಾಗಿ ಮುಂದುವರಿಸುವಲ್ಲಿ ತಮ್ಮ ಪಾತ್ರವನ್ನು ವಹಿಸಿವೆ. ನನ್ನನ್ನು ಅಮಾನತುಗೊಳಿಸುವ ನಿರ್ಧಾರವು ಭ್ರಷ್ಟಾಚಾರ, ಕುಟುಂಬ ರಾಜಕೀಯ, ಉತ್ತರ ಕರ್ನಾಟಕದ…
ಧಾರವಾಡ : ಹುಬ್ಬಳ್ಳಿಯಲ್ಲಿ ಕುಡಿಯುವ ನೀರು ಸಂಗ್ರಹಣೆಗೆ ಮೀಸಲಿಟ್ಟಿದ್ದ ಜಾಗದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿತ್ತು. ಆದರೆ ಈಗ ಕಾಂಗ್ರೆಸ್ ಕಚೇರಿ ನಿರ್ಮಿಸಲು ಅನುಮತಿ ನೀಡಿದ್ದ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ತಡೆ ನೀಡಿದೆ. ಹೌದು ಹುಬ್ಬಳ್ಳಿಯ ಕೇಶ್ವಾಪುರ ಸರ್ಕಲ್ ಬಳಿಯ 25ಗುಂಟೆಗಿಂತಲೂ ಅಧಿಕ ಜಾಗದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕುಡಿಯುವ ನೀರು ಸಂಗ್ರಹಣೆಗೆ ಮೀಸಲಿಟ್ಟಿತ್ತು. ಈ ಜಾಗದಲ್ಲಿ ಕಾಂಗ್ರೆಸ್ ಕಚೇರಿ ಸ್ಥಾಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಶೇಕಡಾ 5 ರಷ್ಟು ಹಣವನ್ನು ಪಾಲಿಕೆಗೆ ನೀಡಿ, 25ಗುಂಟೆಗಿಂತಲೂ ಅಧಿಕ ಭೂಮಿಯ ಹಕ್ಕುನ್ನು ಪಡೆಯಲು ಕ್ಯಾಬಿನೆಟ್ ತೀರ್ಮಾನ ಮಾಡಿತ್ತು. ಸಂಪುಟದ ಈ ನಿರ್ಧಾರಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರು.ಇದನ್ನು ಪ್ರಶ್ನಿಸಿ ಬಿಜೆಪಿ ಸದಸ್ಯರಾದ ಸಂತೋಷ ಚವ್ಹಾಣ್ ಹಾಗೂ ಬೀರಪ್ಪ ನ್ಯಾಯಾಲಯದ ಮೋರೆ ಹೋಗಿದ್ದರು. ವಾದ-ಪ್ರತಿವಾದ ಆಲಿಸಿದ ಕರ್ನಾಟಕ ಹೈಕೋರ್ಟ್ನ ಧಾರವಾಡ…
ಬೆಂಗಳೂರು : ಪದೇ ಪದೇ ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ಮಾಡುತ್ತಾ ಅಲ್ಲದೆ ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿ ನೋಟಿಸ್ ನೀಡಿದ್ದರು ಸಹ ಅದಕ್ಕೆ ಉತ್ತರ ನೀಡದ ಹಿನ್ನೆಲೆಯಲ್ಲಿ ಇದೀಗ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲರನ್ನು ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಆದೇಶಿಸಿದೆ. ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟ್ವೀಟ್ ಮಾಡಿ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ, ಶಾಸಕ ಯತ್ನಾಳ್ ವಿರುದ್ಧ ಕ್ರಮ ಅನಿವಾರ್ಯ ಎಂದು ತಿಳಿಸಿದ್ದಾರೆ. ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ. ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ @BasanagoudaBJP…
ರಾಮನಗರ : ಗುತ್ತಿಗೆದಾರರೊಬ್ಬರ ಬಳಿ 20 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ PDO ಅಧಿಕಾರಿಯೊಬ್ಬ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ. ಕನಕಪುರ ತಾಲೂಕಿನ ಸೋಮದಪ್ಪನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಮುನಿರಾಜು 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.ಗುತ್ತಿಗೆದಾರ ವೆಂಕಟಾಚಲಯ್ಯ ಎಂಬವರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಡಿದ ಕೆಲಸಕ್ಕೆ ಸಂಬಂಧಿಸಿದಂತೆ ಪಿಡಿಒ ಮುನಿರಾಜು 20 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಗುತ್ತಿಗೆದಾರ ರಾಮನಗರ ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ರಾಮನಗರ ಲೋಕಾಯುಕ್ತ ಪೊಲೀಸರು ಪಿಡಿಒ ಮುನಿರಾಜು ಅವರನ್ನು ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.ಪಿಡಿಒ ಮುನಿರಾಜುನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ನವದೆಹಲಿ : ರಾಜ್ಯ ರಾಜಕೀಯದಲ್ಲಿ ಬಹುದೊಡ್ಡ ಬೆಳವಣಿಗೆ ನಡೆದಿದ್ದು ಪದೇ ಪದೇ ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಇದೀಗ ಬಿಜೆಪಿಯ ಶಿಸ್ತು ಸಮಿತಿಯು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಆದೇಶ ಹೊರಡಿಸಿದೆ. ಹೌದು 6 ವರ್ಷಗಳ ಕಾಲ ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಮಾಡಿದ್ದು, ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿಯಿಂದ ಅವರನ್ನು ಉಚ್ಚಾಟಿಸಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಕಾರಣ ಏನೆಂದರೆ ಪದೇಪದೇ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಗಂಭೀರವಾದ ಆರೋಪಗಳನ್ನು ಮಾಡುತ್ತಲೇ ಬಂದಿದ್ದ ಯತ್ನಾಳ್ ಅವರಿಗೆ ಈಗಾಗಲೇ ಹಲವಾರು ಬಾರಿ ಶಿಸ್ತು ಸಮಿತಿಯು ನೋಟಿಸ್ ನೀಡಿತ್ತು. ಆದರೆ ಇದೀಗ ಕೇಂದ್ರೀಯ ಬಿಜೆಪಿ ಶಿಸ್ತು ಸಮಿತಿಯು ಪಕ್ಷದಿಂದ ಅವರನ್ನು 6 ವರ್ಷಗಳ ಕಾಲ ಉಚ್ಛಾಟಿಸಿ ಆದೇಶಿಸಿದೆ.
ನವದೆಹಲಿ : ಡಿಕೆ ಶಿವಕುಮಾರ್ ಜೊತೆ ಸೇರಿ ಕಾಂಗ್ರೆಸ್ ಸರ್ಕಾರ ಉಳಿಸುವ ಯತ್ನದಲ್ಲಿ ಬಿ ವೈ ವಿಜಯೇಂದ್ರ ತೊಡಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರವಾದ ಆರೋಪ ಮಾಡಿದರು. ದೆಹಲಿಯಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ, ಸದನದಲ್ಲಿ ಹನಿಟ್ರ್ಯಾಪ್ ವಿಚಾರ ಮಾತನಾಡದಿರಲು ಕಾರಣ ಬಿವೈ ವಿಜಯೇಂದ್ರ. ಕಾಂಗ್ರೆಸ್ ಸರ್ಕಾರ ಉಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ವಿಜೇಂದ್ರ ಮನೆಯಲ್ಲಿ ಭಿನ್ನರ ಸಭೆ ಮಾಡಿದ್ದಾರೆ. ಅವರ ಮನೆಯಲ್ಲಿ ಸಭೆ ನಡೆಸಿದ್ದಾರೆ ಹಾಗಾಗಿ ಬಿವೈ ವಿಜಯೇಂದ್ರಗು ನೋಟಿಸ್ ಕೊಡಬೇಕು ಎಂದು ಶಾಸಕ ಯತ್ನಾಳ್ ವಿಜಯೇಂದ್ರ ವಿರುದ್ಧ ಸರಣಿ ಆರೋಪ ಮಾಡಿದ್ದಾರೆ. ಬಿಜೆಪಿ ಶಿಸ್ತು ಸಮಿತಿ ನನಗೆ ಉತ್ತರ ನೀಡುವಂತೆ ನೋಟಿಸ್ ನೀಡಿದಾಗ, ಆ ಒಂದು ನೋಟಿಸ್ ಗೆ ನಾನು ಉತ್ತರ ನೀಡುವ ಸಮಯದಲ್ಲಿ ಹೇಳಿದ್ದೆ. ಬಿವೈ ವಿಜಯೇಂದ್ರಗೂ ಸಹ ನೋಟಿಸ್ ನೀಡಬೇಕು ಎಂದು ಹೇಳಿದ್ದೆ. ನನಗಷ್ಟೇ ನೋಟಿಸ್ ಕೊಟ್ಟು ಅವರು ಸಾಚ ಅಂತ ಆಗಲ್ವಾ? ವಿಜೇತರಿಗೆ ನೋಟಿಸ್ ಕೊಡುತ್ತಿದ್ದರೆ…
ಬೆಂಗಳೂರು : ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಹಾಗೂ ವಿನಯ್ ಗೌಡ ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ಬಸವೇಶ್ವರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು, ರಜತ್ ಮತ್ತು ವಿನಯ್ ಗೌಡನನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಅದೇಶಿಸಿದ್ದಾರೆ. ವಿಚಾರಣೆ ಆರಂಭವಾದಗ ರಜತ್ ಮತ್ತು ವಿನಯ್ ಗೌಡ ಪರವಾಗಿ ವಕೀಲ ಪ್ರಕಾಶ್ ವಾದ ಮಂಡಿಸಿದರು. ಆರೋಪಿಗಳ ವಿರುದ್ಧ ಸುಮೊಟೊ ಕೇಸ್ ದಾಖಲು ಮಾಡಿದ್ದಾರೆ. ರೀಲ್ಸ್ ನಲ್ಲಿ ಮಾರಕಾಸ್ತ್ರ ಹಿಡಿದಿದ್ದಾರೆ ಎಂದು 1 ಕೇಸ್ ದಾಖಲಾಗಿದೆ. ಈ ಸೆಕ್ಷನ್ ನಲ್ಲಿ 3 ವರ್ಷದಿಂದ 7 ವರ್ಷಗಳವರೆಗೆ ಶಿಕ್ಷೆ ಇದೆ. ಇದು ಜಾಮೀನು ನೀಡುವಂತಹ ಪ್ರಕರಣವಾಗಿದೆ ಎಂದು ಆರೋಪಿಗಳಾದ ರಜತ್ ಮತ್ತು ವಿನಯ್ ಗೌಡ ಪರವಾಗಿ ವಕೀಲ ಪ್ರಕಾಶ್ ಅವರು ವಾದ ಮಂಡಿಸಿದರು. ಬಂಧನಕ್ಕೂ ಮುನ್ನ ಅಕ್ಷಯ್ ಸ್ಟುಡಿಯೋದಲ್ಲಿ ಮಹಜರು…













