Author: kannadanewsnow05

ಕಲಬುರ್ಗಿ : ಕಲಬುರ್ಗಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಲಾರಿ ಹರಿದು ಸ್ಥಳದಲ್ಲೇ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮೊಗಲಾ ಗ್ರಾಮದ ನಿವಾಸಿ ಚಂದ್ರಪ್ಪ ಮಲಕಪ್ಪ(45) ಎಂದು ಗುರುತಿಸಲಾಗಿದೆ.ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಎದರುಗಡೆ ಇಂದು ಮಧ್ಯಾಹ್ನ ನಡೆದಿದೆ. ಚಂದ್ರಪ್ಪ, ಚಿತ್ತಾಪುರ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಳ್ಳಲು ಬರುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.ಸುದ್ದಿ ತಿಳಿಯುತ್ತಿದ್ದಂತೆ ಚಿತ್ತಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕಳೆದ ಒಂದು ತಿಂಗಳಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿ ನೋವಿನಿಂದ ಬಳಲುತ್ತಿದ್ದು, ಈ ಹಿನ್ನೆಲೆ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ಇಂದು ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ರೊಟಿನ್ ಚಕಪ್ ಗಾಗಿ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಮಂಡಿನೋವಿನಿಂದ ಬಳಲುತ್ತಿದ್ದ ಸಿಎಂ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ. ರೊಟಿನ್ ಚೆಕಪ್ ಗಾಗಿ ತೆರಳಿದ್ದು, ಕಳೆದ ಒಂದು ತಿಂಗಳಿನಿಂದ ಸಿಎಂ ಸಿದ್ದರಾಮಯ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಅನಾರೋಗ್ಯ ಕಾರಣದಿಂದ ಹೆಚ್ಚಾಗಿ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿದ್ದಲ್ಲೆ ಇದ್ದರು.

Read More

ಚಿತ್ರದುರ್ಗ : ಸಾಲಕ್ಕಾಗಿ ರೈತರು ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲನೆ ಮಾಡಿ ಮುಂದಿನ ಕ್ರಮ ಕೈಗೊಳ್ಳಲು ಡಿ.ಸಿ.ಸಿ. ಬ್ಯಾಂಕ್‌ನ ಮೇಲ್ವಿಚಾರಕ ರೈತರ ಬಳಿ 15 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ನಡೆದಿದೆ. ಲೋಕಾಯುಕ್ತ ಪೊಲೀಸರು ಬ್ಯಾಂಕ್ ಮೇಲೆ ದಾಳಿ ಮಾಡಿ ಹಣ ಪಡೆಯುತ್ತಿದ್ದ ಮೇಲ್ವಿಚಾರಕ ನವೀನ್ ಎಂಬಾತನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಮಾಡದಕೆರೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ. ಕುಮಾರ್ ಇವರು ರೈತರುಗಳು ಸಾಲಕ್ಕಾಗಿ ಕೋರಿ ಸಲ್ಲಿಸುವ ಅರ್ಜಿಗಳನ್ನು ಹೊಸದುರ್ಗ ಶಾಖೆಗೆ ಪರಿಶೀಲನೆಗಾಗಿ ನೀಡಿರುತ್ತಾರೆ. ಈ ಸಂದರ್ಭದಲ್ಲಿ ಮೇಲ್ವಿಚಾರಕ ನವೀನ್ ಅವರು 15 ಸಾವಿರ ರೂ.ಗಳ ಲಂಚದ ಹಣಕ್ಕಾಗಿ ಬೇಡಿಕೆಯಿಟ್ಟಿರುತ್ತಾರೆ. ನವೀನ್ ಲಂಚಕ್ಕೆ ಬೇಡಿಕೆ ಇಡುವ ವಿಡಿಯೋ ರೆಕಾರ್ಡ್ ಮಾಡಿ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿರುತ್ತಾರೆ.ದೂರಿನ ಮೇರೆಗೆ ಇಂದು ದಾಳಿ ಮಾಡಿದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ದಾಳಿ…

Read More

ಬೆಂಗಳೂರು : ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ಬೆಂಗಳೂರಿನ ಸದಾಶಿವ ನಗರದಲ್ಲಿರೋ ಗೃಹ ಸಚಿವ ಜಿ.ಪರಮೇಶ್ವರ್ ಅವರ ನಿವಾಸಕ್ಕೆ ಕೆ.ಎನ್ ರಾಜಣ್ಣ ಭೇಟಿ ನೀಡಿ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಮನವಿ ಮಾಡಿದರು. ಬಳಿಕ ಜಿ.ಪರಮೇಶ್ವರ್ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಹೌದು ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿಂತೆ ಸಚಿವ ಕೆ.ಎನ್ ರಾಜಣ್ಣ ಮನವಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಭೇಟಿಯಾಗಿರುವ ಜಿ ಪರಮೇಶ್ವರ್, ಹನಿ ಟ್ರ್ಯಾಪ್ ಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಸಚಿವ ಕೆ.ಎನ್ ರಾಜಣ್ಣ ಜಿ ಪರಮೇಶ್ವರ್ ಅವರಿಗೆ ತನಿಖೆ ನಡೆಸುವಂತೆ ಮನವಿ ಸಲ್ಲಿಸಿದ್ದಾರೆ. ಹಾಗಾಗಿ ಪರಮೇಶ್ವರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಪರಮೇಶ್ವರ ಭೇಟಿ ಇದೀಗ ಕುತೂಹಲ ಕೆರಳಿಸಿದೆ ಎನ್ನಲಾಗುತ್ತಿದೆ.

Read More

ಬೆಂಗಳೂರು : ಹನಿಟ್ರ್ಯಾಪ್‌‌ಗೆ ಯತ್ನಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದರು.ಈ ವೇಳೆ ನಾನು ರಾಜಣ್ಣ ದೂರು ಸ್ವೀಕರಿಸಲು ಆಗಲ್ಲ ಅವರು ಸಂಬಂಧಪಟ್ಟ ಪೊಲೀಸ್ ಠಾಣೆಗೆ ದೂರು ನೀಡಬೇಕು ಎಂದು ತಿಳಿಸಿದರು. ಸದಾಶಿವನಗರದ ಗೃಹಕಚೇರಿಯಲ್ಲಿ ಮಂಗಳವಾರ ಸಂಜೆ ಭೇಟಿ ಮಾಡಿ ಮನವಿ ನೀಡಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು, ಹನಿಟ್ರ್ಯಾಪ್‌ಗೆ ಯತ್ನ ಆಗಿದೆ ಎಂಬ ವಿಷಯ ಸದನದಲ್ಲಿ ಚರ್ಚೆಗೆ ಬಂದಾಗ, ನನ್ನ ಮೇಲೆ‌ ಪ್ರಯತ್ನ ಆಗಿದೆ ಎಂದು ಸಚಿವ ಕೆ.ಎನ್.ರಾಜಣ್ಣ ಅವರು ಹೇಳಿದ್ದರು. ಗೃಹ ಸಚಿವರಿಗೆ ಮನವಿ ಕೊಡುತ್ತೇನೆ, ಕ್ರಮ ತೆಗೆದುಕೊಳ್ಳಬೇಕು ಎಂದಿದ್ದರು. ಈ ದಿನ ಮನವಿ ನೀಡಿದ್ದಾರೆ. ಮನವಿ ಸ್ವೀಕರಿಸಿದ್ದು, ಮುಂದೆ ಏನು ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಸಿಎಂ ಅವರೊಂದಿಗೆ ಚರ್ಚಿಸುತ್ತೇನೆ. ಯಾವ ಹಂತದಲ್ಲಿ, ಯಾರಿಂದ ತನಿಖೆಯಾಗಬೇಕು ಎಂಬುದನ್ನು ಸಿಎಂ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು…

Read More

ಬೆಂಗಳೂರು : ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಹಕಾರ ಸಚಿವ ಕೆ ಎನ್ ರಾಜಣ್ಣ ಬೆಂಗಳೂರಿನ ಸದಾಶಿವನಗರದಲ್ಲಿರುವ ಗೃಹ ಸಚಿವ ಜಿ ಪರಮೇಶ್ವರ್ ಅವರ ಮನೆಗೆ ಭೇಟಿ ನೀಡಿ ದೂರು ನೀಡಿದ್ದಾರೆ. ಬಳಿಕ ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ಕೆ.ಎನ್ ರಾಜಣ್ಣ ಜಂಟಿ ಸುದ್ದಿಗೋಷ್ಠಿ ನಡೆಸಿ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಕಾನೂನು ತಜ್ಞರ ಜೊತೆ ಚರ್ಚಿಸಿ ತೀರ್ಮಾನಿಸಲಾಗುತ್ತದೆ ಎಂದು ಪರಮೇಶ್ವರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉನ್ನತ ಮಟ್ಟದ ತನಿಖೆ ಮಾಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಾನು ಹೇಳಿದ್ದೆ. ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದ ಬಳಿಕ ಕೆ.ಎನ್ ರಾಜಣ್ಣ ಬ್ಯುಸಿಯಾಗಿದ್ದರು. ಈಗ ಬಂದು ಹನಿಟ್ರ್ಯಾಪ್ ಯತ್ನ ಕೇಸ್ ಸಂಬಂಧ ಮನವಿ ಸಲ್ಲಿಸಿದ್ದಾರೆ. ಸಿಎಂ ಜೊತೆಗೆ ಚರ್ಚಿಸಿ ಏನು ಕ್ರಮ ಕೈಗೊಳ್ಳಬೇಕೆಂದು ನಿರ್ಧರಿಸುತ್ತೇವೆ ಎಂದು ಪರಮೇಶ್ವರ್ ತಿಳಿಸಿದರು. ಪ್ರಕರಣ ಸಂಬಂಧ ನನಗೆ ದೂರು ಕೊಡಲು ಆಗಲ್ಲ. ರಾಜಣ್ಣ ಕೇವಲ ಮನವಿ ಮಾತ್ರ ಸಲ್ಲಿಸಿದ್ದಾರೆ. ಯಾವುದೇ ದೂರನ್ನು ಆಗಲಿ ಪೊಲೀಸರಿಗೆ ನೀಡಬೇಕು.…

Read More

ಮೈಸೂರು : ಸದ್ಯ ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ವಿಚಾರ ಭಾರಿ ಸದ್ದು ಮಾಡುತ್ತಿದ್ದು, ಇದರ ಬೆನ್ನಲ್ಲೆ ವಿಪಕ್ಷ ನಾಯಕ ಆರ್ ಅಶೋಕ್ ನನ್ನ ಮೊಬೈಲ್ ಸೇರಿದಂತೆ ವಿಪಕ್ಷದ ಎಲ್ಲಾ ನಾಯಕರ ಫೋನ್ ಕದ್ದಾಲಿಕೆ ನಡೆಯುತ್ತಿದೆ ಎಂದು ಮತ್ತೊಂದು ಗಂಭೀರ ಆರೋಪ ಮಾಡಿದ್ದರು. ಇದೀಗ ಮೈಸೂರಿನಲ್ಲಿ ಕಾಂಗ್ರೆಸ್ ವಕ್ತಾರ ಎಂಬ ಲಕ್ಷ್ಮಣ್ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದು ಬಿಜೆಪಿ ಶಾಸಕ ಮುನಿರತ್ನ 30 ಮಾಜಿ ಸಚಿವರಿಗೆ ಎಚ್ಐವಿ ಇಂಜೆಕ್ಷನ್ ಕೊಡಿಸಿದ್ದಾನೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕ ಆರ್. ಅಶೋಕಗೆ ಮುನಿರತ್ನ ನೂರಕ್ಕೆ ನೂರರಷ್ಟು ಎಚ್ಐವಿ ಇಂಜೆಕ್ಷನ್ ನೀಡಿದ್ದಾನೆ. ಎಚ್ಐವಿ ಇಂಜೆಕ್ಷನ್ ನೀಡಿರುವುದರಿಂದ ಆರ್.ಅಶೋಕ್ ಬಣ್ಣ ಬದಲಾಗಿದೆ. ಆರ್ ಅಶೋಕ್ ತುಟಿ ಮೊದಲಿನಂತೆ ಇಲ್ಲ. ಕೈ ಬಣ್ಣ ಸಹ ಬದಲಾಗಿದೆ. ವಿಪಕ್ಷ ನಾಯಕ ಆರ್ ಅಶೋಕ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು. ಅಲ್ಲದೇ ಬಿಜೆಪಿ ಶಾಸಕ ಮುನಿರತ್ನ ಬಳಿ ಸುಮಾರು 200 ಜನರ ಸಿಡಿ ಇದೆ 30…

Read More

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ಭಾರಿ ಸದ್ದು ಮಾಡುತ್ತಿದ್ದು, ಗ್ರಹ ಸಚಿವರು ಎಲ್ಲೇ ಇದ್ದರೂ ಭೇಟಿಯಾಗಿ ದೂರು ನೀಡುತ್ತೇನೆ ಎಂದು ಹೇಳಿದ ಸಹಕಾರ ಸಚಿವ ಕೇಂದ್ರ ಇದೀಗ ಬೆಂಗಳೂರಿನ ಸದಾಶಿವನಗರದಲ್ಲಿರುವ ಗ್ರಹ ಸಚಿವ ಜಿ ಪರಮೇಶ್ವರ್ ಅವರ ನಿವಾಸಕ್ಕೆ ಹನಿ ಡ್ರಾಪ್ ಕುರಿತು ದೂರ ನೀಡಲು ಸಚಿವ ಕೆ ಎನ್ ರಾಜಣ್ಣ ದಾಖಲೆಗಳ ಸಮೇತ ಆಗಮಿಸಿದ್ದಾರೆ. ಇಂದು ಬೆಳಿಗ್ಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಟಿ ಬೇಗೂರು ಗ್ರಾಮದಲ್ಲಿ ಕೆ.ಎನ್ ರಾಜಣ್ಣ ಗೃಹ ಸಚಿವರನ್ನು ಭೇಟಿಯಾದರು. ಹನಿಟ್ರ್ಯಾಪ್ ಕುರಿತು ದೂರನ್ನು ನೀಡಲು ಅವರನ್ನು ಭೇಟಿಯಾದಾಗ ಗೃಹ ಸಚಿವರು ರಾಜಣ್ಣ ಅವರಿಗೆ ಸಾಯಂಕಾಲ ಸದಾಶಿವನಗರ ನಿವಾಸಕ್ಕೆ ಬನ್ನಿ ಎಂದು ತಿಳಿಸಿದ್ದರು. ಇದೀಗ ಕೆ.ಎನ್ ರಾಜಣ್ಣ ದಾಖಲೆಗಳ ಸಮೇತ ಗೃಹ ಸಚಿವರ ನಿವಾಸಕ್ಕೆ ಆಗಮಿಸಿದ್ದಾರೆ. ಒಂದು ವೇಳೆ ಕೆ. ಎನ್ ರಾಜಣ್ಣ ಗೃಹ ಸಚಿವರಿಗೆ ದೂರು ನೀಡಿದರೆ, ಕೂಡಲೇ ಗದಸುವರು ಈ ಕುರಿತು ಉನ್ನತ ಮಠದ ತನಿಖೆಗೆ ಆದೇಶಿಸುವ ಸಾಧ್ಯತೆ ಇದೆ ಈಗಾಗಲೇ…

Read More

ಬೆಂಗಳೂರು : ದುಬೈನಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯದಲ್ಲಿ ಆರೋಪಿ ನಟಿ ರನ್ಯಾರಾವ್ ಅವರು ಸಲ್ಲಿಸಿದ ಜಾಮೀನು ಅರ್ಜಿ ಕುರಿತು ಇಂದು ವಿಚಾರಣೆ ನಡೆಯಿತು.ವಿಚಾರಣೆ ಬಳಿಕ ಜಡ್ಜ್ ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿ, ಮಾರ್ಚ್ 27 ರಂದು ತೀರ್ಪು ಪ್ರಕಟಿಸಲಾಗುತ್ತೆ ಎಂದು ತಿಳಿಸಿದರು. ವಿಚಾರಣೆ ಆರಂಭದಲ್ಲಿ DRI ಪರ ವಕೀಲ ಮಧು ರಾವ್ ಅವರು ವಾದ ಆರಂಭಿಸಿದರು. ಯಾವುದು ಕಾಗ್ನಿಸಬಲ್ ಯಾವುದು ನಾನ್ ಕಾಗ್ನಿಸಬಲ್ ಎಂದು ಕಸ್ಟಮ್ಸ್ ಕಾಯ್ದೆ 135 ರಲ್ಲಿ ಬಹಳ ಸ್ಪಷ್ಟವಾಗಿ ವಿವರಿಸಲಾಗಿದೆ. ಇದು ಕಾಗ್ನಿಸಬಲ್ ಅಪರಾಧವಾಗಿದೆ ಹಾಗೂ ಜಾಮೀನು ರಹಿತವಾಗಿದೆ. ನಟಿ ರನ್ಯಾ ಚಿನ್ನದ ಜೊತೆಗೆ ದುಬೈನಿಂದ ಆಗಮಿಸಿದ್ದಾರೆ.ಬೆಂಗಳೂರು ಏರ್ಪೋರ್ಟ್ಗೆ ಸಂಜೆ 6:30ಕ್ಕೆ ಲ್ಯಾಂಡ್ ಆಗಿದ್ದಾರೆ. ಈ ವೇಳೆ ಪ್ರೋಟೋಕಾಲ್ ಅಧಿಕಾರಿ ಅಲ್ಲಿಗೆ ಹೋಗಿದ್ದಾರೆ. ಅಂದರೆ ರಮ್ಯಾ ರಾನ್ ಗ್ರೀನ್ ಚಾನಲ್ ಮೂಲಕ ಬರುತ್ತಿದ್ದಾರೆ ಎಂದು ಅರ್ಥ ಎಂದು ವಾದಿಸಿದರು. ಕಸ್ಟಮ್ಸ್ ಏರಿಯಾ, ಇಮ್ಮಿಗ್ರೇಶನ್ ಏರಿಯಾ ಎಲ್ಲಾ ಆದಮೇಲೆ DRI…

Read More

ಬೆಂಗಳೂರು : ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ಲಾಂಗ್ ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಹಾಗೂ ರಜತ್ ಕಿಶನ್ ಇಬ್ಬರನ್ನು ವಶಕ್ಕೆ ಪಡೆದ ಬೆಂಗಳೂರಿನ ಬಸವೇಶ್ವರನಗರ ಠಾಣೆ ಪೋಲಿಸರು ಅವರನ್ನು ಸ್ಥಳ ಮಹಜರಿಗಾಗಿ ಕರೆದುಕೊಂಡು ಹೋಗಿದ್ದಾರೆ. ಹೌದು ನಿನ್ನೆ ಬಿಗ್ ಬಾಸ್ ಖ್ಯಾತಿಯ ರಜತ ಹಾಗೂ ವಿನಯ್ ಗೌಡನನ್ನು ಇದೆ ಪ್ರಕರಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದರು. ಮಧ್ಯರಾತ್ರಿ ಮತ್ತೆ ಬಿಡುಗಡೆ ಮಾಡಿದ್ದರು. ಈ ವೇಳೆ ಅವರು, ರೀಲ್ಸ್ ಮಾಡಿದ್ದ ಲಾಂಗ್ ಬದಲಾಗಿ ಫೈಬರ್ ಮಚ್ಚು ಪೊಲೀಸರಿಗೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮತ್ತೆ ಬೆಂಗಳೂರಿನ ಬಸವೇಶ್ವರ ಠಾಣೆಗೆ ವಿಚಾರಣೆಗೆ ಹಾಜರಾದ ರಜತ್ ಹಾಗೂ ವಿನಯ್ ಗೌಡನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ ಬಳಿಕ ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಸ್ಥಳ ಮಹಜರು ಕರೆದುಕೊಂಡು ಹೋಗುವ ಮುನ್ನ ಬೆಂಗಳೂರಿನ ಬಸವೇಶ್ವರನಗರ ಠಾಣೆ ಪೊಲೀಸರು ಇಬ್ಬರು ಬಿಗ್ ಬಾಸ್ ಮಾಜಿ ಸ್ಪರ್ಧಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ನಂತರ ನಾಗರಬಾವಿಯ ಅಕ್ಷಯ…

Read More