Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿಬಿಳಿಸುವಂತಹ ಘಟನೆ ಒಂದು ನಡೆದಿದ್ದು, ಮನೆಯ ಮುಂದೆ ಆಟವಾಡುತ್ತಿದ್ದ ಮೂವರು ಹೆಣ್ಣು ಮಕ್ಕಳು ದಿಢೀರ್ ನಾಪತ್ತೆಯಾಗಿದ್ದಾರೆ. ಈ ಒಂದು ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಮರಿಯಪ್ಪನಪಾಳ್ಯದಲ್ಲಿ ಸಂಜೆ 4 ಗಂಟೆಗೆ ನಡೆದಿದೆ. ಕಾಣೆಯಾದ ಮಕ್ಕಳನ್ನು ಹರ್ಷಿತ (3) ನಿಶ್ವಿಕ (6) ಹಾಗೂ ರಶ್ಮಿತಾ (10) ಎಂದು ನಾಪತ್ತೆಯಾದ ಮಕ್ಕಳು ಎಂದು ತಿಳಿದು ಬಂದಿದೆ. ಮನೆಯಿಂದ ಹೊರಗೆ ಬಂದು ಮಕ್ಕಳು ಆಟವಾಡುತ್ತಿದ್ದಾಗ ನಾಪತ್ತೆಯಾಗಿದ್ದಾರೆ. ಮೂರು ಮಕ್ಕಳ ಪೋಷಕರು ಎಷ್ಟೇ ಹುಡುಕಾಡಿದರು ಕೂಡ ಸಿಗದ ಹಿನ್ನೆಲೆಯಲ್ಲಿ ಜ್ಞಾನಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಮಕ್ಕಳ ಶೋಧ ಕಾರ್ಯ ಆರಂಭಿಸಿದ್ದಾರೆ.
ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಅಯೋಗ್ಯ ಎಂದು ಅವಹೇಳನಕಾರಿ ಪದ ಬಳಕೆ ಮಾಡಿದ್ದರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಚಕ್ರವರ್ತಿ ಸೂಲಿಬೆಲೆ ಅವರ ಪ್ರಕರಣಕ್ಕೆ ತಡೆ ನೀಡಿ ಆದೇಶ ಹೊರಡಿಸಿದೆ. ವಿಚಾರಣೆ ವೇಳೆ ಅರ್ಜಿದಾರ ಚಕ್ರವರ್ತಿ ಸೂಲಿಬೆಲೆ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್, ಈ ಪ್ರಕರಣ ಕಾನೂನಿನ ಸ್ಪಷ್ಟ ದುರ್ಬಳಕೆಯಾಗಿದೆ. ಹಾಗಾಗಿ, ತಡೆ ನೀಡಬೇಕು. ಅಲ್ಲದೆ, ಸದ್ಯ ಕರ್ನಾಟಕ ಹೈಕೋರ್ಟ್ ಅರ್ಧ ಪ್ರಕರಣವನ್ನು ಮುಕ್ತಾಯಗೊಳಿಸಿದ್ದು, ಇನ್ನರ್ಧ ವಿಚಾರಣೆ ಬಾಕಿ ಇದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಚಕ್ರವರ್ತಿ ಸೂಲಿಬೆಲೆ ಸಲ್ಲಿಸಿದ್ದ ಅರ್ಜಿಯು ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಪಂಕಜ್ ಮಿತ್ತಲ್ ಅವರಿದ್ದ ವಿಭಾಗೀಯ ಪೀಠದ ವಾದ ಮಂಡಿಸಲಾಯಿತು. ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಬಳಿಕ ನ್ಯಾಯಾಲಯ, ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿ ಪ್ರತಿವಾದಿಗಳಿಗೆ ನೋಟಿಸ್ ನೀಡಿ ವಿಚಾರಣೆ ಮುಂದೂಡಿತು. ಪ್ರಕರಣ ಹಿನ್ನೆಲೆ? ಕಳೆದ ಜನವರಿ ಎಂದು ರಾಯಚೂರಿನಲ್ಲಿ ನಮೋ ಭಾರತ್…
ಬಳ್ಳಾರಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರಿಗೆ ಬೆನ್ನಿನಲ್ಲಿ ಊತ ಹಾಗೂ ವಿಪರೀತ ನೋವು ಕಾಣಿಸಿಕೊಂಡಿದೆ. ಇದೀಗ ವಿಮ್ಸ್ ಆಸ್ಪತ್ರೆಯ ವೈದ್ಯರು ನಟ ದರ್ಶನ್ ಅವರಿಗೆ ಫಿಜಿಯೋ ಥೆರಪಿ, ಚಿಕಿತ್ಸೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದರ್ಶನ್ ಅವರ ಅಭಿಮಾನಿಗಳಿಗೆ ಫುಲ್ ಖುಷಿಯಾಗಿದೆ. ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ಬೆನ್ನಿನ ಹಿಂಭಾಗ ಊತ ಹಾಗೂ ವಿಪರೀತವಾದಂತ ನೋವು ಕಾಡುತ್ತಿತ್ತು.ಈ ಹಿನ್ನೆಲೆಯಲ್ಲಿ ಹಲವಾರು ಬಾರಿ ವೈದ್ಯರು ಹಾಗೂ ಜೈಲಿನ ಮೇಲಾಧಿಕಾರಿಗಳು ದರ್ಶನ್ ಅವರಿಗೆ ಚಿಕಿತ್ಸೆ ತೆಗೆದುಕೊಳ್ಳಿ ಎಂದು ಸೂಚಿಸಿದ್ದರೂ ಕೂಡ ಇಲ್ಲ ಬೆಂಗಳೂರಿಗೆ ಹೋಗಿ ಚಿಕಿತ್ಸೆ ಪಡೆಯುತ್ತೇನೆ ಎಂದು ಹಠ ಮಾಡಿದ್ದರು. ಇದೀಗ ಅವರ ಪತ್ನಿ ವಿಜಯಲಕ್ಷ್ಮಿ ಅವರು ಜೈಲಿಗೆ ಭೇಟಿ ನೀಡಿದ್ದ ವೇಳೆ ಅವರ ಮಾತಿಗೆ ಸ್ಪಂದಿಸಿ ಚಿಕಿತ್ಸೆಗೆ ಒಪ್ಪಿದ್ದಾರೆ. ಹೌದು ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ನಿನ್ನೆ ಜೈಲಿಗೆ ಭೇಟಿ ನೀಡಿದ್ದಾಗ, ಚಿಕಿತ್ಸೆ ಪಡೆದುಕೊಳ್ಳಿ ಎಂದು ಕಣ್ಣೀರು ಹಾಕಿದ್ದರು.…
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನ ಮುಡಾ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ನೀಡಿದ್ದ 14 ನಿವೇಶನಗಳ ಕೂಡ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇದೀಗ ಇಡಿ ಅಧಿಕಾರಿಗಳ ಈ ಒಂದು ವಿಚಾರಣೆಗೆ ಸ್ವತಹ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೇ ಬೆಚ್ಚಿಬಿದ್ದಿದ್ದಾರೆ. ಹೌದು ನಿನ್ನೆ ಮುಡಾ ಕಚೇರಿಯ ಮೇಲೆ ದಾಳಿ ಮಾಡಿದ ಹಿಡಿ ಅಧಿಕಾರಿಗಳು ಇಂದು ಕೂಡ ತನಿಖೆಯನ್ನು ಮುಂದುವರಿಸಿದ್ದಾರೆ. ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಇಡಿ ಅಧಿಕಾರಿಗಳ ತನಿಖಾ ಪ್ರಕ್ರಿಯೆಯನ್ನು ಕಂಡು ಸ್ವತಃ ಮುಡಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬೆಚ್ಚಿಬಿದ್ದಿದ್ದಾರೆ. ಅಧಿಕಾರಿಗಳ ಮೊಬೈಲ್ ಪರಿಶೀಲನೆ! ಇಡಿ ಅಧಿಕಾರಿಗಳು ಮುಡಾ ಕಚೇರಿಯಲ್ಲಿ ಕಡತಗಳು ಮತ್ತು ದಾಖಲೆಗಳನ್ನು ಪರಿಶೀಲನೆ ಮಾಡುವುದರ ಜೊತೆಗೆ ಕಚೇರಿಯ ಎಲ್ಲಾ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಮೊಬೈಲ್ ಗಳನ್ನು ಸಹ ಪರಿಶೀಲನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಮುಡಾದಲ್ಲಿ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಯಾಗಿರುವ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು…
ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ವೋಟರ್ ಐಡಿ ಹಗರಣ ಪ್ರಕರಣ ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಎಂಎಲ್ಸಿ ತುಳಸಿ ಮುನಿರಾಜು ಗೌಡ ಹೇಳಿಕೆ ನೀಡಿದ್ದಾರೆ. ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ತನಿಖೆಗೆ ಐಪಿಎಸ್ ಅಧಿಕಾರಿ ನೇಮಿಸಬೇಕು ಎಂದು ಹೈಕೋರ್ಟ್ ಸೂಚಿಸಿತ್ತು. ಜಾಲಹಳ್ಳಿ ಠಾಣೆಯ ಪೊಲೀಸರು ಪ್ರಕರಣದ ತನಿಖೆಯ ದಿಕ್ಕನ್ನು ತಪ್ಪಿಸುತ್ತಿದ್ದಾರೆ. ಇದರ ಹಿಂದೆ ಆರ್ ಆರ್ ನಗರ ಶಾಸಕ ಮುನಿರತ್ನ ಹಾಗೂ ಅವರ ಪಟಾಲಂ ಇದೆ. ಪ್ರಕರಣದ ಪ್ರತ್ಯಕ್ಷ ಸಾಕ್ಷಿಗಳಿಗೆ ಶಾಸಕರು, ಬೆದರಿಕೆ ಹಾಕುತ್ತಿದ್ದಾರೆ. ನಾನು ಸಾಕ್ಷಿ ಹೇಳಲು ಹೋದರು ಪೊಲೀಸರು ದಾಖಲಿಸಿಕೊಂಡಿಲ್ಲ. ಬಿಜೆಪಿಯಲ್ಲಿದ್ದರು 6 ವರ್ಷದಿಂದ ನಿರಂತರವಾಗಿ ಹೋರಾಡುತ್ತಿದ್ದೇನೆ. ರಾಜ್ಯ ಪಾಲರು ನ್ಯಾಯಾಧೀಶರಿಗೆ ಪ್ರಕರಣ ಸಂಬಂಧ ದೂರ ಕೊಡುತ್ತೇನೆ. ಪ್ರಕರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ ತುಳಸಿ, ಮುನಿರಾಜು ದೂರು ನೀಡಿದ್ದಾರೆ. ಮೂರ್ನಾಲ್ಕು ವರ್ಷದಿಂದ ಪ್ರಕರಣದ ತನಿಖೆ ನಡೆಸದೆ ವಿಳಂಬ…
ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೂರು ಕೇಸ್ ಗಳ ಕುರಿತಾಗಿ ಇದೇ ಅಕ್ಟೋಬರ್ 21ರಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಲಿದೆ ಎಂದು ತಿಳಿದುಬಂದಿದೆ. ಪ್ರಜ್ವಲ್ ರೇವಣ್ಣ ಅವರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ಸಂಬಂಧ ಅಕ್ಟೋಬರ್ 21ರಂದು ಹೈಕೋರ್ಟ್ ಆದೇಶ ಪ್ರಕಟಿಸಲಿದೆ. ಅಲ್ಲದೆ ಇದೆ ವೇಳೆ ಪ್ರಜ್ವಲ್ ರೇವಣ್ಣ ವಿರುದ್ಧದ ಮೂರು ಅತ್ಯಾಚಾರ ಕೇಸ್ ಸಂಬಂಧ ಆದೇಶ ಪ್ರಕಟಿಸಲಿದೆ. ಹೈಕೋರ್ಟ್ ನ ನ್ಯಾಯಾಧೀಶರಾದ ಎಂ.ನಾಗ ಪ್ರಸನ್ನ ಅವರಿರುವ ಏಕ ಸದಸ್ಯ ಪೀಠ ಈ ಆದೇಶ ಪ್ರಕಟಿಸಲಿದೆ. ಕಳೆದ 120 ದಿನಗಳಿಂದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಂಧನದಲ್ಲಿ ಇದ್ದಾರೆ.
ಬೆಂಗಳೂರು : ಸದ್ಯ ಮುಡಾ ಅಕರಣಕ್ಕೆ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು ಮೈಸೂರಿನ ಮುಡಾ ಕಚೇರಿಯಲ್ಲಿ ಠಿಕಾಣಿ ಹೂಡಿದ್ದು, ಎಲ್ಲಾ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಇದರ ಮಧ್ಯ ಈಡೇ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರನ್ನು ಕೂಡ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ನಿನ್ನೆ ಮುಡಾ ಕಚೇರಿಯ ಮೇಲೆ ದಾಳಿ ಮಾಡಿದ ಇಡಿ ಅಧಿಕಾರಿಗಳು 14 ಸೈಟ್ ಗಳ ಸಂಬಂಧ ಇಂಚಿಂಚು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಹಲವು ಕಡತಗಳನ್ನು ಕೂಡ ಈಡೇ ಅಧಿಕಾರಿಗಳು ಇದೆ ವೇಳೆ ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಇಡಿ ಅಧಿಕಾರಿಗಳಿಗೆ ಮುಡಾ ಕಾರ್ಯದರ್ಶಿ ಪ್ರಸನ್ನ ಕುಮಾರ್ ಸಹಕಾರ ನೀಡಿದ್ದಾರೆ.
ಬೆಳಗಾವಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ರಾಜಿನಾಮೆ ನೀಡಲೇಬೇಕು ಎಂದು ವಿಪಕ್ಷಗಳು ಪಟ್ಟು ಹಿಡಿದಿವೆ. ಈ ಕುರಿತಂತೆ ಸಚಿವ ಸತೀಶ್ ಜಾರಕಿಹೊಳಿಯವರು ಲೋಕಾಯುಕ್ತ, ಇಡಿ ಅಷ್ಟೇ ಅಲ್ಲ ಸಿಬಿಐ ತನಿಖೆ ಆದರೂ ಕೂಡ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಬರಲ್ಲ ಎಂದು ಸ್ಪಷ್ಟಪಡಿಸಿದರು. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಕಚೇರಿ ಹಾಗೂ ಅದಕ್ಕೆ ಸಂಬಂಧಿಸಿದ ಜಾಗಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಇಡಿ ಇಡಿ ದಾಳಿಗೂ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೂ ಏನೂ ಸಂಬಂಧವಿಲ್ಲ.ಇಡಿ ದಾಳಿಗೂ ಸಿಎಂ ಸಿದ್ದರಾಮಯ್ಯ ಅವರಿಗೂ ಯಾವುದೇ ಸಂಬಂಧವಿಲ್ಲ. ಇಡಿ ಅಧಿಕಾರಿಗಳು ಸಿಎಂ ನಿವಾಸದ ಮೇಲೆ ದಾಳಿ ನಡೆಸಿಲ್ಲ ಎಂದರು. ಇನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ದಾಖಲೆ ನಾಶ ಮಾಡಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿ, ಎಚ್.ಡಿ.ಕುಮಾರಸ್ವಾಮಿ ಹೇಳಿರುವುದು ಸಾಬೀತಾಗಲಿ. ಹಾಗೇನಾದರೂ ನಡೆದಿದ್ದರೆ, ಅದು ತನಿಖೆಯಿಂದ ಹೊರಬರುತ್ತೆ. ಇಡಿ ಅಧಿಕಾರಿಗಳ…
ಬೆಂಗಳೂರು : ಈ ಬಾರಿ ದೀಪಾವಳಿ ಹಬ್ಬದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದೆ. ಈ ಕುರಿತು ಸುಪ್ರೀಂಕೋರ್ಟ್ ನಿರ್ದೇಶನ ಕೂಡ ಇದೆ ಎಂದು ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬಹುದು. ಅದು ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶವಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ನಿಂದ ನಿರ್ದೇಶನವಿದೆ ಎಂದು ಹೇಳಿದರು. ಕತ್ತಲೆಯಿಂದ ಬೆಳಕಿನತ್ತ ಹೋಗುವಾಗ ಪರಿಸರ ಮಾಲಿನ್ಯ ಬೇಡ. ರಾಸಾಯನಿಕವಲ್ಲದ ಹರಿಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಈ ಬಗ್ಗೆ ಪಟಾಕಿ ಮಾರಾಟಗಾರರಿಂದಲೂ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಹೇಳಿದರು. ಪಟಾಕಿ ಸಿಡಿಸುವುದರಿಂದ ಅಪಾಯಗಳು ಸಂಭವಿಸುತ್ತವೆ. ಕೆಲವೆಡೆ ಜೀವಹಾನಿಯಾಗಿದೆ. ಮಕ್ಕಳು ಕಣ್ಣು ಕೂಡ ಕಳೆದುಕೊಂಡಿದ್ದಾರೆ. ಪಟಾಕಿ ಸಿಡಿಸುವುದರಿಂದ ದೊಡ್ಡ ಪ್ರಮಾಣದಲ್ಲಿ ಪರಿಸರ ಹಾನಿಯಾಗುತ್ತದೆ ಎಂದರು.
ಹುಬ್ಬಳ್ಳಿ : ಲೋಕಸಭೆ ಚುನಾವಣೆಯ ಟಿಕೆಟ್ ಕೊಡಿಸುವುದಾಗಿ ಕೇಂದ್ರ ಸಚಿವ ಪ್ರಹದ ಜೋಶಿ ಅವರ ಸಹೋದರ ಗೋಪಾಲ ಜೋಶಿ ಕೋಟ್ಯಾಂತರ ರೂಪಾಯಿ ಹಣ ಪಡೆದು ವಂಚನೆ ಎಸಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವೇಶ್ವರ ಠಾಣೆ ಪೊಲೀಸರು ಬಂಧಿಸಿದ್ದರು. ಇದೀಗ ಅವರನ್ನು ಹುಬ್ಬಳ್ಳಿಗೆ ಕರೆತಂದು ಅವರ ನಿವಾಸದಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾರೆ. ಹೌದು ಹುಬ್ಬಳ್ಳಿಯ ಇಂದಿರಾ ಕಾಲೋನಿಯಲ್ಲಿರುವ ಗೋಪಾಲ ಜೋಶಿ ನಿವಾಸಕ್ಕೆ ಪೊಲೀಸರು ತೆರಳಿ, ಪಂಚನಾಮೆ ನಡೆಸುತ್ತಿದ್ದಾರೆ. ಎಸಿಪಿ ಚಂದನ್ ರೊಂದಿಗೆ ಅಶೋಕನಗರ ಪೊಲೀಸರು ತಂಡ ಆಗಮಿಸಿದೆ. ಇದೆ ವೇಳೆ ದೂರುದಾರ ಗೋಪಾಲ ಜೋಶಿ ಮನೆಗೆ ಸುನಿತಾ ಚೌಹಾನ್ ನನ್ನು ಪೊಲೀಸರು ಕರೆತಂದಿದ್ದಾರೆ.ಸದ್ಯ ಗೋಪಾಲ್ ಮನೆಯಲ್ಲಿ ಹಣ ಎಣಿಕೆ ಕಾರ್ಯ ನಡೆಯುತ್ತಿದ್ದು ಪೊಲೀಸರು ದುಡ್ಡು ಎಣಿಸುತ್ತಿದ್ದಾರೆ. ಬೆಂಗಳೂರು ತಂಡದ ಪೊಲೀಸರಿಂದ ಹಣ ಎಣಿಕೆ ಆಗುತ್ತಿದೆ. ಇದೇ ವೇಳೆ ಸುನಿತಾ ಚೌಹಾನ್ ಅವರು ಇದರಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಯಾವುದೇ ಪಾತ್ರ ಇಲ್ಲ. ಅವರ ಹೆಸರು ಹೇಳಿಕೊಂಡು ಗೋಪಾಲ್ ನನ್ನ…














