Author: kannadanewsnow05

ಬೆಂಗಳೂರು : ವರ್ಗಾವಣೆಗಾಗಿ ತನ್ನ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಸಬ್ ಇನ್ಸ್ಪೆಕ್ಟರ್ ವಿರುದ್ಧ ಇದೀಗ FIR ದಾಖಲಾಗಿದೆ. ಹೌದು ಹೆಂಡತಿಗೆ ವರದಕ್ಷಿಣೆ ಕಿರುಕುಳ ನೀಡಿದ್ದು ಅಲ್ಲದೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ, ಧರ್ಮಸ್ಥಳ ಸಬ್ ಇನ್ಸ್ ಪೆಕ್ಟರ್ ಕಿಶೋರ್ ವಿರುದ್ಧ ಚಂದ್ರಲೇಔಟ್ ಠಾಣೆಯಲ್ಲಿ FIR ದಾಖಲಾಗಿದೆ. ಹಲ್ಲೆ ಮಾಡಿದ ಸಬ್ ಇನ್ಸ್ಪೆಕ್ಟರ್ ನನ್ನು ಕಿಶೋರ್ ಎಂದು ತಿಳಿದು ಬಂದಿದ್ದು ಪತ್ನಿ ವರ್ಷ ಮೇಲೆ ಕಿಶೋರ್ ವರದಕ್ಷಿಣೆ ಸಂಬಂಧ ಕಿರುಕುಳ ನೀಡುತ್ತಿದ್ದ. 2024ರಲ್ಲಿ ಮೂಡಿಗೆರೆ ಸಬ್ ಇನ್ಸ್ ಪೆಕ್ಟರ್ ʼರನ್ನು ವರ್ಷ ಮದುವೆಯಾಗಿದ್ದರು. ವರದಕ್ಷಿಣೆಗಾಗಿ 10 ಲಕ್ಷ ನಗದು,22 ಲಕ್ಷದ ಕ್ರೇಟಾ ಕಾರು,135 ಗ್ರಾಂ ಚಿನ್ನ ನೀಡಿದ್ರು. ಅಲ್ಲದೆ ವರ್ಷ ಪೋಷಕರು ಲಕ್ಷಾಂತರ ರೂ. ಖರ್ಚು ಮಾಡಿ ಚಿನ್ನ ಹಾಕಿ ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಇಷ್ಟಾದ್ರು ಮೂಡಿಗೆರೆಯಿಂದ ಟ್ರಾನ್ಸ್ ಫರ್ ಮಾಡಿಸೋಕೆ ಕಿಶೋರ್ 10 ಲಕ್ಷ ಕೇಳಿದ್ದರು. ಹಣ ತರದಿದ್ದಕ್ಕೆ ಹೆಂಡ್ತಿ ವರ್ಷಾಳಿಗೆ ಅವಾಚ್ಯವಾಗಿ ನಿಂದಿಸಿ ಗಂಡ,ಅತ್ತೆ ಮಾವ ಹಾಗೂ ಮೈದುನನಿಂದ ಹಲ್ಲೆ…

Read More

ಬೆಂಗಳೂರು : ಜನೆವರಿ ಹಾಗು ಫೆಬ್ರವರಿ ಕಂತಿನ ಗೃಹಲಕ್ಷ್ಮಿ ಹಣಕ್ಕಾಗಿ ರಾಜ್ಯದ ಯಜಮಾನಿಯರು ಕಾಯುತ್ತಿದ್ದು, ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಯಜಮಾನಿಯರಿಗೆ ಸಿಹಿಸುದ್ದಿ ನೀಡಿದ್ದು, 17ನೇ ಕಂತಿನ 2 ತಿಂಗಳ ಒಟ್ಟು ಹಣ ಖಾತೆಗೆ ಜಮೆ ಆಗಲಿದೆ ಎಂದು ತಿಳಿಸಿದ್ದಾರೆ. ಯುಗಾದಿಗೆ ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆಯಾಗಲಿದೆ ಅಂತ ಮಹಿಳಾ ಫಲಾನುಭವಿಗಳು ಕಾಯುತ್ತಿದ್ದಾರೆ. ಆದ್ರೆ ಏಪ್ರಿಲ್ ಮೊದಲ ವಾರದಲ್ಲಿ ಹಣ ಮಹಿಳೆಯರಿಗೆ ತಲುಪುವ ನಿರೀಕ್ಷೆ ಇದೆ. ಗೃಹ ಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ತಡವಾದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕರು ಹಾಗೂ ರಾಜ್ಯದ ಮಹಿಳೆಯರು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು. ಈ ಬಗ್ಗೆ ಸ್ವತಃ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​​ ಸ್ಪಷ್ಟಪಡಿಸಿದ್ದಾರೆ. ಮಾರ್ಚ್ 31ರ ನಂತರ ಎರಡು ತಿಂಗಳ ಹಣವನ್ನು ಒಂದೇ ಸಲಕ್ಕೆ ಹಾಕುವುದಾಗಿ ಹೇಳಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಮಾತಿನಿಂದ ಮಹಿಳೆಯರು ಖುಷ್ ಆಗಿದ್ದಾರೆ.

Read More

ಬೆಂಗಳೂರು : ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ಲಾಂಗ್ ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಹಾಗೂ ರಜತ್ ಕಿಶನ್ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೌದು ನಿನ್ನೆ ಬಿಗ್ ಬಾಸ್ ಖ್ಯಾತಿಯ ರಜತ ಹಾಗೂ ವಿನಯ್ ಗೌಡನನ್ನು ಪೊಲೀಸರು ವಶಕ್ಕೆ ಪಡೆದು ಮಧ್ಯರಾತ್ರಿ ಮತ್ತೆ ಬಿಡುಗಡೆ ಮಾಡಿದ್ದರು. ಈ ವೇಳೆ ಅವರು, ರೀಲ್ಸ್ ಮಾಡಿದ್ದ ಲಾಂಗ್ ಬದಲಾಗಿ ಫೈಬರ್ ಮಚ್ಚು ಪೊಲೀಸರಿಗೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮತ್ತೆ ಬೆಂಗಳೂರಿನ ಬಸವೇಶ್ವರ ಠಾಣೆಗೆ ವಿಚಾರಣೆಗೆ ಹಾಜರಾದ ರಜತ್ ಹಾಗೂ ವಿನಯ್ ಗೌಡನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ ಬಳಿಕ ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳ ಮಹಜರು ಕರೆದುಕೊಂಡು ಹೋಗುವ ಮುನ್ನ ಪೊಲೀಸರು ರಜತ ಹಾಗೂ ವಿನಯ್ ಗೌಡನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಬಸವೇಶ್ವರನಗರ ಠಾಣೆ ಪೊಲೀಸರು ಇಬ್ಬರು ಬಿಗ್ ಬಾಸ್ ಮಾಜಿ ಸ್ಪರ್ಧಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಳಿಕ ಸ್ಥಳ ಮಹಜರುಗಾಗಿ…

Read More

ಬೆಂಗಳೂರು : ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳಿಗ್ಗೆ ಗೃಹ ಸಚಿವರನ್ನು ಹುಡುಕಿಕೊಂಡು ಹೋಗಿ ದೂರು ನೀಡುತ್ತೇನೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಗೃಹ ಸಚಿವ ಪರಮೇಶ್ವರ ಅವರನ್ನು ಭೇಟಿಯಾದ ಸಚಿವ ಕೆ.ಎನ್ ರಾಜಣ್ಣ ಹನಿಟ್ರ್ಯಾಪ್ ಕುರಿತಂತೆ ಸಂಜೆ ಜಿ.ಪರಮೇಶ್ವರ್ ಅವರಿಗೆ ದೂರು ನೀಡುತ್ತೇನೆ ಎಂದು ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಟಿ ಬೇಗೂರು ಬಳಿ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಸಹಕಾರ ಸಚಿವ ರಾಜಣ್ಣ ಭೇಟಿ ಮಾಡಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದಾಶಿವನಗರದ ಮನೆಗೆ ಸಂಜೆ 4:30ಕ್ಕೆ ಬರಲು ಸಚಿವರು ತಿಳಿಸಿದ್ದಾರೆ. ಸಚಿವರಿಗೆ ದೂರು ನೀಡಿದ ಬಳಿಕ ಮಾಧ್ಯಮಗಳಿಗೆ ದೂರಿನ ಪ್ರತಿಯನ್ನು ಕೊಡುತ್ತೇನೆ. ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಬಳಿಕ ನಾನು ಸ್ವಲ್ಪ ಬ್ಯುಸಿಯಾಗಿದ್ದೆ. ಬಿಡುವಿಲ್ಲದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಇನ್ನು ಇದೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳಿಗ್ಗೆ ಗೃಹ ಸಚಿವರನ್ನು ಹುಡುಕಿಕೊಂಡು ಹೋಗಿ ದೂರು ನೀಡುತ್ತೇನೆ…

Read More

ಬೆಂಗಳೂರು : ರಾಜ್ಯದ ಸಹಕಾರ ಸಚಿವ ಏನ್ ರಾಜಣ್ಣ ಅವರ ಮೇಲೆ ಹನಿ ಟ್ರ್ಯಾಕ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರನ್ನು ಸಹಕಾರ ಸಚಿವ ರಾಜಣ್ಣ ಅವರು ಭೇಟಿಯಾಗಿ ಕೆಲಕಾಲ ಈ ಕುರಿತು ಚರ್ಚಿಸಿದರು. ಟಿ ಬೇಗೂರಿನಲ್ಲಿ ಜಿ ಪರಮೇಶ್ವರ್ ಅವರನ್ನು ಸಚಿವ ಕೆ ಎನ್ ರಾಜಣ್ಣ ಭೇಟಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಟಿ.ಬೆಗೂರು ಗ್ರಾಮದಲ್ಲಿ ಜಿ ಪರಮೇಶ್ವರ್ ಅವರನ್ನು ರಾಜಣ್ಣ ಭೇಟಿಯಾದರು ಬಳಿಕ ಪರಮೇಶ್ವರ್ ಜೊತೆಗೆ ಸಚಿವ ರಾಜಣ್ಣ ಕೆಲಕಾಲ ಚರ್ಚೆ ಮಾಡಿದರು. ಇನ್ನು ಇದೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳಿಗ್ಗೆ ಗೃಹ ಸಚಿವರನ್ನು ಹುಡುಕಿಕೊಂಡು ಹೋಗಿ ದೂರು ನೀಡುತ್ತೇನೆ ಎಂದಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಗೃಹ ಸಚಿವ ಪರಮೇಶ್ವರ ಅವರನ್ನು ಭೇಟಿಯಾದ ಸಚಿವ ಕೆ.ಎನ್ ರಾಜಣ್ಣ ಹನಿಟ್ರ್ಯಾಪ್ ಕುರಿತಂತೆ ಪತ್ರದ ಮುಖಾಂತರ ಲಿಖಿತ ರೂಪದಲ್ಲಿ ಹುಡುಕಿಕೊಂಡು ಹೋಗಿ ದೂರು ನೀಡುತ್ತೇನೆ ಎಂದಿದ್ದರು. ಹಾಗಾಗಿ ಇದೀಗ ದೂರು ನೀಡುವ ಸಾಧ್ಯತೆ ಇದೆ ಎಂದು…

Read More

ಬೆಂಗಳೂರು : ರಾಜ್ಯದ ಜನರಿಗೆ ಸರ್ಕಾರ ಮತ್ತೊಂದು ಶಾಕ್ ನೀಡಿದ್ದು ಈಗಾಗಲೇ ಮೆಟ್ರೋ ಕೆಎಸ್ಆರ್ಟಿಸಿ ಟಿಕೆಟ್ ದರ ಏರಿಕೆ ಮಾಡಿದ ಬೆನ್ನಲ್ಲೆ ರಾಜ್ಯದ 8 ಜಿಲ್ಲೆಗಳಲ್ಲಿ ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆಯನ್ನು ಬೆಸ್ಕಾಂ ಕಡ್ಡಾಯಗೊಳಿಸಿದೆ. ಇದೇ ವಿಚಾರವಾಗಿ ಬಿಜೆಪಿಯ ಮಾಜಿ ಸಚಿವ ಡಾ. ಅಶ್ವಥ್ ನಾರಾಯಣ್ ಇದರಲ್ಲಿ ಒಟ್ಟು 15,000 ಕೋಟಿ ಸ್ಕ್ಯಾಮ್ ನಡೆದಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಹೌದು ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯಗೊಳಿಸಿದ ಬೆಸ್ಕಾಂ, ಫೆಬ್ರವರಿ 15 ರಿಂದ ಅನ್ವಯ ಆಗುವಂತೆ ಆದೇಶ ಕೂಡ ಹೊರಡಿಸಿದೆ. ರಾಜ್ಯದ ಒಟ್ಟು 8 ಜಿಲ್ಲೆಗಳಲ್ಲಿ ಸ್ಮಾರ್ಟ್ ಮೀಟರ್ ಬಳಕೆ ಕಡ್ಡಾಯವಾಗಿದೆ ಕಡ್ಡಾಯವಾಗಿದೆ. ಈಗಾಗಲೇ ಮೆಟ್ರೋ ಮತ್ತು ಕೆಎಸ್ಆರ್ಟಿಸಿ ಬಸ್ ಟಿಕೆಟ್ ಪ್ರಯಾಣ ದರ ಏರಿಕೆ ಮಾಡಿದ ಬೆನ್ನೆಲು ಸರ್ಕಾರ ಗ್ರಾಹಕರ ಜೇಬಿಗೆ ಮತ್ತಷ್ಟು ಕತ್ತರಿ ಹಾಕಿದೆ. ಇದು 15000 ಕೋಟಿಗೂ ಹೆಚ್ಚು ಸ್ಕ್ಯಾಮ್ ಆಗಿದೆ ಎಂದು ಬಿಜೆಪಿ ಶಾಸಕ ಡಾ. ಅಶ್ವತ್ ನಾರಾಯಣ್ ಗಂಭೀರವಾದ ಆರೋಪ ಮಾಡಿದ್ದಾರೆ. ಜನರ ಜೆಬಿನಿಂದಲೇ…

Read More

ಬೆಂಗಳೂರು : ಇನ್ಸ್ಟಾಗ್ರಾಮ್ ನಲ್ಲಿ 18 ಸೆಕೆಂಡ್ ಗಳ ಕಾಲ ಕೈಯಲ್ಲಿ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಸಿದಂತೆ ಇದೀಗ ಬಿಗ್ ಬಾಸ್ ಖ್ಯಾತಿಯ ರಜತ್ ಮತ್ತು ವಿನಯ್, ಕಾಟೇರ ಸಿನಿಮಾದ ಮಚ್ಚು ಹಿಡಿದು ರೀಲ್ಸ್ ಮಾಡಿ ವಿವಾದಕ್ಕೆ ಸಿಲುಕಿದ್ದರು. ಪೊಲೀಸರಿಗೆ ನಕಲಿ ಮಚ್ಚು ಒಪ್ಪಿಸಿದ್ದರಿಂದ ಸಾಕ್ಷ್ಯ ನಾಶದ ಕೇಸ್ ದಾಖಲಾಗುವ ಬಂಧನವಾಗುವ ಭೀತಿಯಿಂದ ಪರಾರಿ ಆಗಿದ್ದಾರೆ ಎನ್ನಲಾಗಿದೆ. ಮಚ್ಚು ಹಿಡಿದು ಸಾರ್ವಜನಿಕರ ಸ್ಥಳದಲ್ಲಿ ರೀಲ್ಸ್ ಮಾಡಿದ್ದ ಕೇಸಿನಲ್ಲಿ ಪೊಲೀಸರು ಬಂಧಿಸಿ ಮಚ್ಚು ತಂದು ಒಪ್ಪಿಸುವಂತೆ ತಾಕೀತು ಮಾಡಿದ್ದರು. ಇದರ ಬೆನ್ನಲ್ಲಿಯೇ ರಾತ್ರೋ ರಾತ್ರಿ ರಜತ್ ಕಡೆಯವರು ನಕಲಿ ಫೈಬರ್ ಮಚ್ಚನ್ನು ಪೊಲೀಸರಿಗೆ ತಂದುಕೊಟ್ಟು ಪೊಲೀಸ್ ಠಾಣೆಯಿಂದ ಬಿಡುಗಡೆ ಆಗಿದ್ದರು. ಆದರೆ, ರೀಲ್ಸ್ ಮಾಡಿದ್ದ ಆಯುಧವನ್ನು ಬದಲಿಸಿ ತಂದಿದ್ದಾರೆ ಎಂಬುದು ತಿಳಿದುಬಂದಲ್ಲಿ ಸಾಕ್ಷ್ಯ ನಾಶದ ಕೇಸ್ ದಾಖಲಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ.ಮಾರಕಾಸ್ತ್ರ ಹಿಡಿದು ಸಾರ್ವಜನಿಕ ಸ್ಥಳದಲ್ಲಿ ಪ್ರದರ್ಶನ ಮಾಡುತ್ತಾ ರೀಲ್ಸ್ ಮಾಡಿದ ಪ್ರಕರಣದಲ್ಲಿ ಬಂಧನವಾದ ಬೆನ್ನಲ್ಲಿಯೇ…

Read More

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುವ ಸಂದರ್ಭದಲ್ಲಿಯೇ ರಾಜ್ಯದಲ್ಲಿ ಬೆಚ್ಚಿಬಿಳಿಸುವ ಘಟನೆ ನಡೆದಿದ್ದು, ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ನಕಲಿ ಅಂಕಪಟ್ಟಿ ಗಳನ್ನು ನೀಡುತ್ತಿದ್ದ ಮೂವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಅರೆಸ್ಟ್ ಮಾಡಿದ್ದಾರೆ. ಹೌದು ಬೆಂಗಳೂರು ಧಾರವಾಡ ಬೆಳಗಾವಿ ಸೇರಿದಂತೆ ಬಂಧಿತ ಆರೋಪಿಗಳು ಸ್ಟಡಿ ಸೆಂಟರ್ ಗಳನ್ನು ತೆರೆದು 5 10 ಸಾವಿರ ರೂಗಳಿಗೆ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ನಕಲಿ ಅಂಕಪಟ್ಟಿಗಳನ್ನು ವಿತರಣೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಆರೋಪಿಗಳು ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಸ್ಟೆಡಿ ಸೆಂಟರ್​ಗಳನ್ನು ತೆರೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು. ಅಲ್ಲದೇ, ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂದು ಸಂಸ್ಥೆ ಹುಟ್ಟುಹಾಕಿದ್ದರು. ಆರೋಪಿಗಳು ಬೆಂಗಳೂರು, ಬೆಳಗಾವಿ, ಧಾರವಾಡದಲ್ಲಿಂದ್ದುಕೊಂಡು ಈ ಅಕ್ರಮ ದಂಧೆ ನಡೆಸುತ್ತಿದ್ದರು. ಸ್ಟೆಡಿ ಸೆಂಟರ್​ನಲ್ಲಿ ಕರೆಸ್ಪಾಂಡಿಂಗ್ ವ್ಯಾಸಂಗ ಮಾಡುವರನ್ನು ದಾಖಲಿಸಿಕೊಳ್ಳುತ್ತಿದ್ದರು. ನಂತರ ಕಲವೇ ದಿನಗಳದಲ್ಲಿ ಇವರಿಗೆ ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಹೆಸರಿನಲ್ಲಿ…

Read More

ಕಲಬುರ್ಗಿ : ಕಲಬುರ್ಗಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಭೀಮಾ ನದಿಯಲ್ಲಿ ಈಜಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಹರವಾಳ ಗ್ರಾಮದಲ್ಲಿ ನಡೆದಿದೆ. ಮಾರ್ಚ್ 21ರಂದು ಎಸ್‌ಎಸ್‌ಎಲ್‌ಸಿ ಇಂಗ್ಲಿಷ್ ಭಾಷೆಯ ಪರೀಕ್ಷೆ ಬರೆದು ಸೋಮವಾರದವರೆಗೆ ರಜೆ ಇದ್ದ ಕಾರಣ ಸ್ವಗ್ರಾಮಕ್ಕೆ ಬಂದಿದ್ದ.ಭಾನುವಾರ ಸ್ನೇಹಿತರ ಜೊತೆ ಈಜಲು ಗ್ರಾಮದ ಸಮೀಪದ ಭೀಮಾ ನದಿಗೆ ತೆರಳಿದ್ದ. ಈಜು ಬಾರದೆ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯ ಸಹಾಯದಿಂದ ಸೋಮವಾರ ಸಂಜೆ ನದಿಯಿಂದ ಮೃತದೇಹ ಹೊರ ತೆಗೆಯಲಾಯಿತು. ಸ್ಥಳಕ್ಕೆ ಪಿಎಸ್‌ಐ ಚಿದಾನಂದ ಸವದಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. ಅದರಲ್ಲೂ ಪ್ರತಿ ದಿನಕ್ಕೆ 10 ಪೋಕ್ಸೋ ಪ್ರಕರಣಗಳು ದಾಖಲಾಗುತ್ತಿರುವುದು ಕಳವಳಕಾರಿಯಾಗಿದೆ. ಇದೀಗ ಪೊಲೀಸ್ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಅದರಲ್ಲೂ ಹೆಣ್ಣು ಮಕ್ಕಳ ಮೇಲೆ ಪ್ರತಿ ದಿನ 10 ಪೋಕ್ಸೋ ಪ್ರಕರಣಗಳು ದಾಖಲಾಗುತ್ತಿವೆ ಎನ್ನುವ ಆತಂಕಕಾರಿ ಅಂಶ ಬಯಲಾಗಿದೆ. ಹೌದು ಕರ್ನಾಟಕದಲ್ಲಿ ಮಕ್ಕಳ ವಿರುದ್ಧದ ಅಪರಾಧಗಳು ಕಳವಳಕಾರಿಯಾಗಿ ಹೆಚ್ಚುತ್ತಿರುವುದು ತಿಳಿದುಬಂದಿದೆ. ಪೋಕ್ಸೋ ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಕಡಿಮೆ ಇರುವುದು ಕೂಡ ಪ್ರಕರಣಗಳ ಸಂಖ್ಯೆ ಹೆಚ್ಚಾಗಲು ಕಾರಣ ಎನ್ನಲಾಗುತ್ತಿದೆ. ಬಾಲ್ಯವಿವಾಹ ಮತ್ತು ಬಾಲಕಾರ್ಮಿಕ ಪ್ರಕರಣಗಳಲ್ಲೂ ಏರಿಕೆಯಾಗಿದೆ. 2024 ರಲ್ಲಿ, ಮಕ್ಕಳ ವಿರುದ್ಧದ ಅಪರಾಧ ಪ್ರಕರಣಗಳು 8,233 ದಾಖಲಾಗಿದ್ದವು ಎಂದು ಪೊಲೀಸ್ ಇಲಾಖೆ ಅಂಕಿಅಂಶಗಳಿಂದ ತಿಳಿದುಬಂದಿದೆ. ಇದು 2023ರಲ್ಲಿ ದಾಖಲಾಗಿದ್ದ ಪ್ರಕರಣಗಳಿಗೆ ಹೋಲಿಸಿದರೆ ಹೆಚ್ಚಾಗಿತ್ತು. 2023 ರಲ್ಲಿ 7,854 ಪ್ರಕರಣಗಳು ದಾಖಲಾಗಿದ್ದವು. ಒಟ್ಟಾರೆಯಾಗಿ ಕಳೆದ ನಾಲ್ಕು ವರ್ಷಗಳಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆಯಲ್ಲಿ ಶೇ 38.89 ರಷ್ಟು ಏರಿಕೆಯಾಗಿದೆ.…

Read More