Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದ್ದರ ಕುರಿತಾಗಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಕೋರ್ಟ್ ಆದೇಶ ನೀಡಿದರೆ ಶಾಸಕ ಯತ್ನಾಳ ಅವರನ್ನು ಬಂಧಿಸಲಾಗುತ್ತದೆ ಎಂದು ತಿಳಿಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, “ನಾವು ಕೋರ್ಟ್ಗೆ ಕೇಳಿಕೊಂಡಿದ್ದೇವೆ. ಅದು ನಾನ್ ಬೇಲೆಬಲ್ ವಾರಂಟ್ ಆಗಿದೆ. ಕೋರ್ಟ್ ಸೂಚನೆ ಕೊಟ್ಟರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಬಂಧನ ಪ್ರಕ್ರಿಯೆ ಸೇರಿ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು. ಇನ್ನು ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿಯವರು ವ್ಯಕ್ತಿಯೊಬ್ಬರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಎಸೆಗಿರುವ ಆರೋಪಕ್ಕೆ ಸಂಬಂಧ ಪಟ್ಟಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಈ ಒಂದು ಕೇಸ್ ಗೆ ಸಂಬಂಧಪಟ್ಟಂತೆ ಪ್ರಹ್ಲಾದ್ ಜೋಶಿ ಸಹೋದರನಿಗಾಗಿ ಹುಡುಕಾಟ ನಡೆಯುತ್ತಿದೆ…
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಮೈಸೂರಿನಲ್ಲಿರುವ ಮುಡಾ ಕಚೇರಿಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸುಮಾರು 20ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ಮಾಡಿದ್ದು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇದೆ ವೇಳೆ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಮೂಲ ದಾಖಲೆಗಳನ್ನು ಕೊಡಿ. ನಮಗೆ ನಕಲಿ ಪ್ರತಿಗಳು ಬೇಡ ಎಂದು ಇಡಿ ಅಧಿಕಾರಿಗಳು ಮುಡಾ ಕಾರ್ಯದರ್ಶಿ ಪ್ರಸನ್ನ ಕುಮಾರ್ ಅವರಿಗೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಒಂದು ಪ್ರಕಾರಣ ಗಂಭೀರವಾದಂತಹ ಸ್ವರೂಪವನ್ನು ಪಡೆದುಕೊಂಡಿದೆ ಎನ್ನಲಾಗುತ್ತಿದೆ. ನಮಗೆ ನಕಲು ಪ್ರತಿ ಬೇಡ ನಮಗೆ ಮೂಲ ದಾಖಲೆಗಳನ್ನು ತಕ್ಷಣ ಕೊಡಿ ಎಂದು ಅಧಿಕಾರಿಗಳು ಮುಡಾd ಕಾರ್ಯದರ್ಶಿಗೆ ತಿಳಿಸಿದ್ದಾರೆ.
ಚಿತ್ರದುರ್ಗ : ಯುವಕನೊಬ್ಬ ನನ್ನ ಪ್ರೀತಿಸು ಎಂದು ಕಾಟ ಕೊಡುತ್ತಿದ್ದ. ಇದರಿಂದ ಮನನೊಂದ ಯುವತಿಯೊಬ್ಬಳು ಕಾಲೇಜಿನ ಕಟ್ಟಡದ ಮೇಲಿನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ನಗರದ ಡಾನ್ ಬೋಸ್ಕೋ ಕಾಲೇಜಿನ ಕಟ್ಟಡದ ಮೇಲಿನಿಂದ ಕೆಳಗೆ ಬಿದ್ದು ಪ್ರೇಮಾ(18) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಚಳ್ಳಕೆರೆ ಮೂಲದ ಪ್ರೇಮಾ ಡಾನ್ ಬೋಸ್ಕೋ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇಂದು ಕಟ್ಟಡದ ಮೇಲಿನಿಂದ ಬಿದ್ದು ಪ್ರೇಮಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪ್ರೇಮಾಗೆ ಯುವನೊಬ್ಬ ನನ್ನ ಪ್ರೀತಿಸು ಎಂದು ವಿಪರೀತ ಕಾಟ ಕೊಡುತ್ತಿದ್ದನಂತೆ. ಸದ್ಯ ಈ ಬಗ್ಗೆ ಚಿತ್ರದುರ್ಗದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿಯವರು ವ್ಯಕ್ತಿಯೊಬ್ಬರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಎಸಗಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಈ ಒಂದು ಕೇಸ್ ಗೆ ಸಂಬಂಧಪಟ್ಟಂತೆ ಪ್ರಹ್ಲಾದ್ ಜೋಶಿ ಸಹೋದರನಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ತರಹದ ಕೇಸ್ಗಳು ಬಂದಾಗ ಗಂಭೀರವಾಗಿಯೇ ತೆಗೆದುಕೊಳ್ಳಲಾಗುತ್ತದೆ. ಈಗಾಗಲೇ ಅವರಿಗಾಗಿ ಹುಡುಕಾಟ ನಡೆಯುತ್ತಿದೆ, ಅವರಿನ್ನೂ ಸಿಕ್ಕಿಲ್ಲ ಎಂದು ಅವರು ತಿಳಿಸಿದರು. ಪ್ರಕರಣ ಹಿನ್ನೆಲೆ? ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ಪಡೆದು ವಂಚಿಸಿದ ಆರೋಪದಡಿ ಇಲ್ಲಿನ ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಸಹೋದರಿ ವಿಜಯ ಲಕ್ಷ್ಮೀ ಜೋಶಿ ಸಹಿತ ಮೂವರ ವಿರುದ್ಧ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಸುನೀತಾ ಚವ್ಹಾಣ್ ಎಂಬುವರು ನೀಡಿದ ದೂರಿನನ್ವಯ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ,…
ಬೆಂಗಳೂರು : ಮೈಸೂರಿನ ಮುಡಾ ಕಚೇರಿಯ ಮೇಲೆ ED ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಸುಮಾರು 20 ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಈ ವಿಚಾರವಾಗಿ ಮಾಜಿ ಸಂಸದ ಡಿಕೆ ಸುರೇಶ್ ರವರು ಪ್ರತಿಕ್ರಿಯೆ ನೀಡಿದ್ದು ಇದೊಂದು ರಾಜಕೀಯ ಪ್ರೇರಿತ ದಾಳಿಯಾಗಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಒಂದು ದಾಳಿ ರಾಜಕೀಯ ಪ್ರೇರಿತವಾಗಿದೆ. ವಿರೋಧಪಕ್ಷಗಳ ಮೇಲೆ ಪ್ರಯೋಗ ಮಾಡುವುದು ಹೊಸದೇನಲ್ಲ. ಹತ್ತು ಹದಿನೈದು ದಿನದ ಹಿಂದೆ ಇಡಿ ಅಧಿಕಾರಿಗಳು ಕೇಸ್ ದಾಖಲಿಸಿದ್ದರು. ಸಾಮಾನ್ಯ. ಮುಡಾ ಕೇಸ್ನಲ್ಲಿ ಯಾವುದೇ ಹಣಕಾಸು ಮಹಿವಾಟು ನಡೆದಿಲ್ಲ. ಈ ಪ್ರಕರಣದಲ್ಲಿ ಏನೂ ಇಲ್ಲ ಅನ್ನೋದು ಅವರಿಗೆ ಗೊತ್ತಾಗುತ್ತದೆ ಎಂದು ತಿಳಿಸಿದರು. ಲೋಕಾಯುಕ್ತ ಪ್ರವೇಶಕ್ಕೆ ಅವಕಾಶವಿದೆ ಸತ್ಯಂ ಶಿವರಾ ಬರಬೇಕು ಹಾಗಾಗಿ ಇದೊಂದು ರಾಜಕೀಯ ಪ್ರೇರಿತ ಪ್ರಕರಣ ಯಾವುದೇ ಸತ್ಯಾಂಶ ಇಲ್ಲ ಈ ಕುರಿತು ಕೊನೆಗೆ ಅವರಿಗೂ ಅರ್ಥವಾಗುತ್ತದೆ ಎಂದು ಅವರು ತಿಳಿಸಿದರು. ಇಂದು ಮುಡಾ ಕಚೇರಿ ಮೇಲೆ ಸುಮಾರು 20 ಅಧಿಕಾರಿಗಳು ದಾಳಿ…
ಬೆಂಗಳೂರು : ರಾಜ್ಯದ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳಲ್ಲಿ ಉಪಚುನಾವಣೆಗೆ ಸಂಬಂಧಪಟ್ಟಂತೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ ಆದರೆ ಕಾಂಗ್ರೆಸ್ ಮತ್ತು ಬಿಜೆಪಿ ಜೆಡಿಎಸ್ ಮೈತ್ರಿಯಲ್ಲಿ ಇನ್ನೂ ಕೂಡ ಅಭ್ಯರ್ಥಿ ಆಯ್ಕೆ ಕುರಿತಂತೆ ಗೊಂದಲ ಬಗೆಹರಿದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ಚನ್ನಪಟ್ಟಣ, ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ಶಿಗ್ಗಾವಿ ಮತ್ತು ಇ.ತುಕಾರಾಂ ರಾಜೀನಾಮೆಯಿಂದ ಸಂಡೂರು ವಿಧಾನಸಭಾ ಕ್ಷೇತ್ರ ತೆರವಾಗಿತ್ತು. ಈ ಹಿನ್ನೆಲೆಯಲ್ಲಿ ಉಪಚುನಾವಣೆ ನಿಗದಿ ಆಗಿದೆ. ಶುಕ್ರವಾರ ಅಧಿಸೂಚನೆ ಪ್ರಕಟವಾಗಲಿದ್ದು, ಇದೇ ತಿಂಗಳು 25ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. 28ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. 30ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ನ.13ರಂದು ಮತದಾನ ನಡೆಯಲಿದ್ದು, ನ.23ರಂದು ಮತ ಎಣಿಕೆ ಜರುಗಲಿದೆ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಇಡಿ ಅಧಿಕಾರಿಗಳು ಮೈಸೂರಿನಲ್ಲಿರುವ ಮುಡಾ ಕಚೇರಿಯ ಮೇಲೆ ದಾಳಿ ನಡೆಸಿದೆ. ಸುಮಾರು 20 ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅದಲ್ಲದೆ ಭೂ ಮಾಲೀಕ ಹಾಗೂ ಪ್ರಕರಣದ A4 ಆಗಿರುವಂತ ದೇವರಾಜು ಮನೆಯ ಮೇಲು ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹೌದು ಭೂಮಾಲಿಕ ಹಾಗೂ ಮುಡಾ ಪ್ರಕರಣದ A4 ಆರೋಪಿಯಾಗಿರುವ ದೇವರಾಜು ಮನೆಯ ಮೇಲು ಇಡಿ ರೆಡ್ ಆಗಿದೆ. ಬೆಂಗಳೂರಿನ ಕೆಂಗೇರಿ ನಿವಾಸದಲ್ಲಿ ದೇವರಾಜುಮನೆಯ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಸ್ನೇಹಮಯಿ ಕೃಷ್ಣ ಎನ್ನುವವರು ಸಿಎಂ ಸಿದ್ದರಾಮಯ್ಯ ರುಧ್ರ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿರುವ ಮುಡಾ ಕಚೇರಿ ಮೇಲೆ 20 ಹಿಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ ಅಲ್ಲದೆ ಪ್ರಕರಣದ A4 ಆರೋಪಿ ಹಾಗೂ ಭೂ ಮಾಲೀಕರಾದಂತ ದೇವರಾಜು ಮನೆಯ ಮೇಲು ಈಡೇ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಂತ ಅಕ್ರಮ ಆರೋಪ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸುಮಾರು 20 ಮಂದಿ ಇಡಿ ಅಧಿಕಾರಿಗಳಿಂದ ಮುಡಾ ಕಚೇರಿಯ ಮೇಲೆ ದಾಳಿ ನಡೆದಿದೆ.ಈ ವೇಳೆ ಹಲವು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರು ಈ ಮೊದಲು ಲೋಕಾಯುಕ್ತಕ್ಕೆ ದೂರ ನೀಡಿದ್ದರು. ಬಳಿಕ ಅವರು ನನಗೆ ಲೋಕಾಯುಕ್ತ ಅಧಿಕಾರಿಗಳ ಮೇಲೆ ನಂಬಿಕೆ ಇಲ್ಲ ಎಂದು ಜಾರಿ ನಿರ್ದೇಶನಾಲಯಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದರು. ಈ ಒಂದು ದೂರು ಹಿನ್ನೆಲೆಯಲ್ಲಿ ಇಂದು ಇಡಿ ಅಧಿಕಾರಿಗಳು ಮೈಸೂರಿನ ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮುಡಾದಲ್ಲಿ ಕೋಟ್ಯಾಂತರ ಬೆಲೆಬಾಳುವ ಅಕ್ರಮ ನಿವೇಶನ ಹಂಚಿಕೆ ಆರೋಪದ ಅಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು. ಅಲ್ಲದೆ 50:50 ಅನುಪಾತದಲ್ಲಿ ಬದಲಿ ನಿವೇಶನ ಪಡೆದುಕೊಳ್ಳುವ ಅದರಬದಲ್ಲಿ 5000 ಕೋಟಿಗೂ…
ರಾಮನಗರ : ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಈ ಹಿನ್ನೆಲೆಯಲ್ಲಿ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಅಲ್ಲದೆ ಅದರಲ್ಲೂ ಪ್ರಮುಖವಾಗಿ ಚೆನ್ನಪಟ್ಟಣ ಕ್ಷೇತ್ರ ಅತ್ಯಂತ ಪ್ರಾಮುಖ್ಯತೆ ಪಡೆದುಕೊಂಡಿದ್ದು ಈ ಒಂದು ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆ ವಿಚಾರವಾಗಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ನಡುವೆ ತೀವ್ರ ಹಗ್ಗ ಜಗ್ಗಾಟ ನಡೆದಿತ್ತು. ಇದೇ ವಿಚಾರವಾಗಿ ಇದೀಗ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಉಪಚುನಾವಣೆಯ ಅಭ್ಯರ್ಥಿ ಆಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಹೀಗಾಗಿ ಬಿಜೆಪಿಯ ಮಾಜಿ ಶಾಸಕ ಸಿಪಿ ಯೋಗೇಶ್ವರ್ ಅವರನ್ನು ಒಲಿಸಲು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾತುಕತೆ ನಡೆಸಲಿದ್ದಾರೆ. ಇನ್ನೊಂದು ಕಡೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಪುತ್ರ ನಿಗೆ ಟಿಕೆಟ್ ಕೊಡಿಸುವ ವಿಚಾರವಾಗಿ ಬಿಎಸ್ ಯಡಿಯೂರಪ್ಪ ಅವರ ಜೊತೆ ಚರ್ಚಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ನಲ್ಲೇ…
ನವದೆಹಲಿ : ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಕರ್ನಾಟಕ ಹೈ ಕೋರ್ಟ್ ನೀಡಿದಂತಹ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಲು ನಿರಾಕರಿಸಿದೆ. ಹೌದು ಲೈಂಗಿಕ ದೌರ್ಜನಕ್ಕೆ ಒಳಗಾದ ಮಹಿಳೆಯನ್ನು ಕಿಡ್ಯಾಪ್ ಮಾಡಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ ನಿರೀಕ್ಷಣಾ ಜಾಮೀನು ಆದೇಶವನ್ನು ಪ್ರಶ್ನಿಸಿ ಎಸ್ಐಟಿ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನಲ್ಲಿ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದು ಜಾಮೀನು ರದ್ದು ಮಾಡಲು ನಿರಾಕರಿಸಿದೆ. ಆ ಮೂಲಕ ಭವಾನಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ. ಎಸ್ಐಟಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ. ರಾಜಕೀಯ ಕುಟುಂಬ ಕಾರಣಕ್ಕೆ ಜಾಮೀನು ನಿರಾಕರಣೆ ಸಾಧ್ಯವಿಲ್ಲ.ಕೆಲ ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು. ಈ…














